Tag: ವೀರ ಕಂಬಳ’

  • ಫಸ್ಟ್ ಟೈಮ್ ತುಳು ಹಾಡಿಗೆ ದನಿಯಾದ ಗಾಯಕಿ ಮಂಗ್ಲಿ

    ಫಸ್ಟ್ ಟೈಮ್ ತುಳು ಹಾಡಿಗೆ ದನಿಯಾದ ಗಾಯಕಿ ಮಂಗ್ಲಿ

    ‘ಕಣ್ಣೀ ಅದಿರಿಂದಿ’ ಎಂದು ಕನ್ನಡಿಗರ ಹೃದಯಕ್ಕೆ ಬಾಣ ಬಿಟ್ಟಿದ್ದ ತೆಲುಗಿನ ಖ್ಯಾತ ಗಾಯಕಿ ಮಂಗ್ಲಿ, ಈಗ ಕನ್ನಡದ ಗಾಯಕಿಯೇ ಆಗಿ ಬಿಟ್ಟಿದ್ದಾರೆ. ಅವರ ಹಾಡು (Song) ಕೇಳಿದ್ರೆ ಸಾಕು ಇದು ಮಂಗ್ಲಿ ಹಾಡಿರೋ ಹಾಡು ಅಂತ ಗುರುತಿಸ್ತಾರೆ ಕನ್ನಡಿಗರು. ಇದೀಗ ಮಂಗ್ಲಿ (Mangli) ಇದೇ ಮೊದಲ ಬಾರಿ ತುಳು ಸಿನಿಮಾವೊಂದರ ಹಾಡಿಗೆ ಧ್ವನಿಯಾಗಿದ್ದಾರೆ. ತೆಲುಗು ಮತ್ತು ಕನ್ನಡದಲ್ಲಿ ತನ್ನದೇ ವಿಭಿನ್ನ ಕಂಠದ ಮೂಲಕ ಕೋಟ್ಯಂತರ ಅಭಿಮಾನಿಗಳ ಹೃದಯಗೆದ್ದ ಗಾಯಕಿ, ಇದೇ ಮೊದಲ ಬಾರಿ ತುಳು ಜನತೆಯ ಮನಗೆಲ್ಲಲು ಸಜ್ಜಾಗಿದ್ದಾರೆ.

    ಎ.ಆರ್ ಪ್ರೊಡಕ್ಷನ್ಸ್ ಬ್ಯಾನರ್‌ನಡಿ ಅರುಣ್ ರೈ ತೋಡಾರ್ ನಿರ್ಮಾಣ, ಎಸ್.ವಿ.ಬಾಬು ರಾಜೇಂದ್ರ ಸಿಂಗ್ (Rajendra Singh Babu) ನಿರ್ದೇಶನದ ‘ಬಿರ್ದ್‌ದ ಕಂಬಳ’ ಮತ್ತು ‘ಕನ್ನಡದ ವೀರ ಕಂಬಳ’ (Veera Kambala) ಸಿನಿಮಾಕ್ಕೆ ಹಾಡಿದ್ದಾರೆ. ತುಳು (Tulu) ಮತ್ತು ಕನ್ನಡ ಎರಡೂ ಭಾಷೆಯಲ್ಲೂ ಹಾಡು ಹಾಡಿರುವುದು ವಿಶೇಷ. ತುಳುವಿನ ಕೆ.ಕೆ.ಪೇಜಾವರ, ಕನ್ನಡದ ರಘು ಶಾಸ್ತ್ರಿ ಅವರ ಸಾಹಿತ್ಯಕ್ಕೆ ಕದ್ರಿ ಮಣಿಕಾಂತ್ (Manikanth Kadri) ಸಂಗೀತ ನೀಡಿದ್ದಾರೆ.

    ಕನ್ನಡದಲ್ಲಿ ರಾಬರ್ಟ್ ಸಿನಿಮಾದ ಕಣ್ಣೆ ಅದರಂದಿ ಹಾಡಿನ ಮೂಲಕ ಸ್ಯಾಂಡಲ್‌ವುಡ್ ಪ್ರವೇಶ ಮಾಡಿದ ಮಂಗ್ಲಿ, ಬಳಿಕ ಜೋಗಿ ಪ್ರೇಮ್ ನಿರ್ದೇಶನದ ಏಕ್ ಲವ್ ಯಾ ಚಿತ್ರದ ಎಣ್ಣೆಗೂ ಹೆಣ್ಣಿಗೂ ಗೀತೆಗೂ ದನಿಯಾದರು. ನಂತರ ಪುಷ್ಪಾ ಸಿನಿಮಾದ ಕನ್ನಡದ ಡಬ್ಬಿಂಗ್ ಸಿನಿಮಾದಲ್ಲಿ ಐಟಂ ಸಾಂಗ್‌ಗೂ ಮಂಗ್ಲಿ ಹಾಡಿದ್ದರು. ಅಷ್ಟೂ ಹಾಡುಗಳು ಸೂಪರ್‌ಹಿಟ್ ಆಗಿರುವುದೇ ವಿಶೇಷ.’

    ತುಳುನಾಡಿನ ಹೆಮ್ಮೆಯ ಜಾನಪದ ಕ್ರೀಡೆ ಕಂಬಳದ ಕುರಿತು ತುಳು ಮತ್ತು ಕನ್ನಡದಲ್ಲಿ ಚಿತ್ರ ನಿರ್ಮಾಣವಾಗಿದೆ. ಈ ಚಿತ್ರ ಸಂಪೂರ್ಣ ಕರಾವಳಿಯ ಜಾನಪದ ಕಲೆ ಕಂಬಳದ ಕುರಿತಾಗಿರದ್ದು, ಚಿತ್ರೀಕರಣದ ವೇಳೆ ಸುಮಾರು 20 ಜೊತೆ ಕೋಣ ಹಾಗೂ 500ಕ್ಕೂ ಹೆಚ್ಚಿನ ಕಲಾವಿದರೊಂದಿಗೆ ಚಿತ್ರೀಕರಣ ನಡೆದಿದೆ. ಇದನ್ನೂ ಓದಿ: ‘ಮಠ’ ಚಿತ್ರ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಬಂಧನ

    ತುಳುನಾಡಿನ ಹಲವಾರು ಪ್ರಸಿದ್ಧ ರಂಗಭೂಮಿ ಕಲಾವಿದರ ಜೊತೆಯಲ್ಲಿ ಖ್ಯಾತ ನಟರಾದ ಪ್ರಕಾಶ್ ರಾಜ್, ರವಿಶಂಕರ್ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ, ಕೋಣಗಳನ್ನು ಓಡಿಸುವುದರಲ್ಲಿ ಪ್ರಸಿದ್ಧರಾದ ಶ್ರೀನಿವಾಸ ಗೌಡ ಹಾಗೂ ಕಾಂತಾರ ಚಿತ್ರದ ಗುರುವಖ್ಯಾತಿಯ  ಸ್ವರಾಜ್ ಶೆಟ್ಟಿ ಕಂಬಳ ಓಡಿಸುವವರ ಪಾತ್ರದಲ್ಲಿ ಕಾಣಿಸಿಕೊಂಡರೆ, ನಟ ಆದಿತ್ಯ ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ. ನವೀನ್ ಡಿ  ಪಡಿಲ್, ಬೋಜರಾಜ ವಾಮಂಜೂರು, ಉಷಾ ಭಂಡಾರಿ, ರಾಧಿಕಾ ನಾರಾಯಣ, ಗೋಪಿನಾಥ್ ಭಟ್,   ಚಿತ್ರಕಥೆ- ಸಂಭಾಷಣೆ ವಿಜಯ ಕುಮಾರ್ ಕೊಡಿಯಾಲ್ ಬೈಲ್, ಸಂಕಲನ ಶ್ರೀನಿವಾಸ್ ಬಾಬು, ಛಾಯಾಗ್ರಹಣ ಆರ್ ಗಿರಿ, ಸಾಹಸ ಡಿಫರೆಂಟ್ ಡ್ಯಾನಿ, ಮಾಸ್ ಮಾದ. ರಾಜೇಶ್ ಕುಡ್ಲ ಕಾರ್ಯಾಕಾರಿ ನಿರ್ಮಾಪಕರು, ನೃತ್ಯ ಮದನ್ ಹರಿಣಿ, ಕಲೆ ಚಂದ್ರಶೇಖರ್ ಸುವರ್ಣ. ಈಗಾಗಲೇ ಚಿತ್ರೀಕರಣ ಕೊನೇ ಹಂತದಲ್ಲಿದ್ದು, ಶೀಘ್ರದಲ್ಲಿ ಬಿಡುಗಡೆಯಾಗಲಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ವೀರ ಕಂಬಳ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

    ‘ವೀರ ಕಂಬಳ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

    ರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ (Virendra Heggade) ಅವರು ಸಿನಿಮಾವೊಂದಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಕನ್ನಡದ ಹಿರಿಯ ನಿರ್ದೇಶಕ ಎಸ್.ವಿ.ರಾಜೇಂದ್ರ ಸಿಂಗ್ ಬಾಬು (Rajendra Singh Babu) ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ವೀರ ಕಂಬಳ’ (Veera Kambala) ಸಿನಿಮಾದಲ್ಲಿ ಅವರು ಅತಿಥಿ ಪಾತ್ರವನ್ನು ಮಾಡುತ್ತಿದ್ದಾರೆ. ಈ ಸಿನಿಮಾ ಕನ್ನಡ, ತುಳು ಸೇರಿದಂತೆ ಹಲವು ಭಾಷೆಗಳಲ್ಲಿ ಮೂಡಿ ಬರಲಿರುವುದು ವಿಶೇಷ. ಸಂಪೂರ್ಣವಾಗಿ ಕಂಬಳ ಕ್ರೀಡೆಯನ್ನು ಹಿನ್ನೆಲೆಯಾಗಿಟ್ಟುಕೊಂಡು ಮೂಡಿ ಬರುತ್ತಿರುವ ಸಿನಿಮಾ ಇದಾಗಿದೆ.

    ಈ ಚಿತ್ರದಲ್ಲಿ ಹಲವು ವಿಶೇಷತೆಗಳಿವೆ. ಕಂಬಳ ಕೋಣ ಓಡಿಸುವುದರಲ್ಲೇ ಪರಿಣಿತಿ ಹೊಂದಿರುವ ಶ್ರೀನಿವಾಸ್ ಗೌಡ ಕೂಡ ಈ ಸಿನಿಮಾದಲ್ಲಿ ಪಾತ್ರ ಮಾಡಿದ್ದಾರೆ. ಇವರೊಂದಿಗೆ ಕಲಾವಿದ ಸ್ವರಾಜ್ ಶೆಟ್ಟಿ ಕೂಡ ಕಂಬಳದ ಕೋಣ ಓಡಿಸುವ ದೃಶ್ಯದಲ್ಲಿ ಕಾಣಿಸಿಕೊಳ್ಳುತ್ತಿರುವುದು ಮತ್ತೊಂದು ವಿಶೇಷ. ಪ್ರಕಾಶ್ (Prakash Rai), ರವಿಶಂಕರ್, ರಾಧಿಕಾ ಚೇತನ್, ನವೀನ್ ಪಡೀಲ್ ಸೇರಿದಂತೆ ಸಾಕಷ್ಟು ಕಲಾವಿದರು ಈ ಚಿತ್ರದ ತಾರಾಗಣದಲ್ಲಿ ಇದ್ದಾರೆ. ಇದನ್ನೂ ಓದಿ: ನಾನಿಲ್ಲಿ ಗೆದ್ದಿರುವಂಥದ್ದು ನಿಮ್ಮಿಂದ, ನೀವು ನನ್ನನ್ನು ಗೆಲ್ಲಿಸಿದ್ದೀರಿ: ರೂಪೇಶ್ ಶೆಟ್ಟಿ

    ಮಣಿಕಾಂತ್ ಕದ್ರಿ ಸಂಗೀತ ಸಂಯೋಜನೆಯಲ್ಲಿ ಹಾಡುಗಳು ಮೂಡಿ ಬರಲಿದ್ದು, ವೀರ ಕಂಬಳ ಸಿನಿಮಾದ ಕೊನೆಯ ಹಂತದ ಚಿತ್ರೀಕರಣ ಈಗ ನಡೆಯುತ್ತಿದೆ. ಈ ಭಾಗದ ಚಿತ್ರೀಕರಣದಲ್ಲಿ ವೀರೇಂದ್ರ ಹೆಗ್ಗಡೆ ಅವರು ಪಾಲ್ಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಅವರಿಗೆ ಮೇಕಪ್ ಹಚ್ಚುತ್ತಿರುವ ಫೋಟೋಗಳನ್ನು ಹಲವರು ಹಂಚಿಕೊಂಡಿದ್ದಾರೆ. ಆದರೆ, ಯಾವ ರೀತಿಯ ಪಾತ್ರದಲ್ಲಿ ಅವರು ನಟಿಸುತ್ತಿದ್ದಾರೆ ಎನ್ನುವುದು ಸಸ್ಪೆನ್ಸ್.

    Live Tv
    [brid partner=56869869 player=32851 video=960834 autoplay=true]

  • ಗ್ಯಾಂಗ್‌ಸ್ಟರ್ ಆದಿತ್ಯಗೆ ರಾಜೇಂದ್ರ ಸಿಂಗ್ ಬಾಬು ಆ್ಯಕ್ಷನ್ ಕಟ್

    ಗ್ಯಾಂಗ್‌ಸ್ಟರ್ ಆದಿತ್ಯಗೆ ರಾಜೇಂದ್ರ ಸಿಂಗ್ ಬಾಬು ಆ್ಯಕ್ಷನ್ ಕಟ್

    ಸ್ಯಾಂಡಲ್‌ವುಡ್‌ನಲ್ಲಿ ಡೆಡ್ಲಿ, ವಿಲನ್, ಎದೆಗಾರಿಕೆ ಸಿನಿಮಾಗಳ ಮೂಲಕ ಗಮನ ಸೆಳೆದ ನಟ ಆದಿತ್ಯ ಈಗ ಗ್ಯಾಂಗ್‌ಸ್ಟರ್ ಆಗಿ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ. ಈ ಹೊಸ ಸಿನಿಮಾಗೆ ರಾಜೇಂದ್ರ ಸಿಂಗ್ ಬಾಬು ನಿರ್ದೇಶನ ಮಾಡಿದ್ದಾರೆ.

    ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಚಿತ್ರ ನಿರ್ದೇಶನ ಮಾಡುವುದರ ಮೂಲಕ ಸೈ ಎನಿಸಿಕೊಂಡಿರೋ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಪುತ್ರ ಆದಿತ್ಯಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಈಗಾಗಲೇ ವಿಭಿನ್ನ ಪಾತ್ರಗಳ ಮೂಲಕ ಮೋಡಿ ಮಾಡಿರೋ ಆದಿತ್ಯ ಕರಾವಳಿ ಭಾಗದ ಜನಪ್ರಿಯ ಕಂಬಳದ ಕಥೆ ಹೇಳಲು ಹೊರಟಿದ್ದಾರೆ.

    ರಾಜೇಂದ್ರ ಸಿಂಗ್ ಬಾಬು ಮತ್ತು ಆದಿತ್ಯ ಡೆಡ್ಲಿ ಕಾಂಬಿನೇಷನ್‌ನಲ್ಲಿ `ವೀರ ಕಂಬಳ’ ಚಿತ್ರ ಮೂಡಿ ಬಂದಿದೆ. ಗ್ಯಾಂಗ್‌ಸ್ಟರ್ ಪಾತ್ರಕ್ಕೆ ನಟ ಆದಿತ್ಯ ಜೀವತುಂಬಿದ್ದಾರೆ. ತುಳು ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿರೋ ಕಂಬಳ ಜನಾಂಗವನ್ನು ಬೆಂಬಲಿಸುವ ವ್ಯಕ್ತಿಯಾಗಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ `ವೀರ ಕಂಬಳ’ ಚಿತ್ರದ ಬಹುತೇಕ ಚಿತ್ರೀಕರಣ ಮಂಗಳೂರಿನಲ್ಲಿ ನಡೆದಿದೆ. ಜತೆಗೆ ನಟ ಆದಿತ್ಯ ಅವರ ಚಿತ್ರದ ಫಸ್ಟ್ ಲುಕ್‌ನ್ನು ಮೇ ಮೊದಲ ವಾರದಲ್ಲಿ ಬಿಡುಗಡೆ ಮಾಡಲಿದೆ ಚಿತ್ರತಂಡ. ಇದನ್ನೂ ಓದಿ: ಪುನೀತ್‌ಗೆ ಅವಮಾನ: ತಿರುಪತಿ ತಿರುಮಲ ದೇವಸ್ಥಾನಕ್ಕೆ ಅಭಿಮಾನಿಗಳು ಮುತ್ತಿಗೆ

    ʻವೀರ ಕಂಬಳʼ ಚಿತ್ರದಲ್ಲಿ ಲವ್‌ಸ್ಟೋರಿ ಜತೆ ಆ್ಯಕ್ಷನ್ ಕಥಾಹಂದರವಿರುವ ವಿಭಿನ್ನ ಚಿತ್ರವಾಗಿದ್ದು, ಸದ್ಯದಲ್ಲೇ ತೆರೆಗೆ ಬರಲಿದೆ. ಇನ್ನು ಗ್ಯಾಂಗ್‌ಸ್ಟರ್ ಪಾತ್ರಕ್ಕೂ ಕಂಬಳದ ಎನು ಸಂಬಂಧ ಅಂತಾ ಅಭಿಮಾನಿಗಳಲ್ಲಿ ಕುತೂಹಲ ಕೆರಳಿಸಿದೆ. ನಟ ಆದಿತ್ಯ ಅವರ ರೆಬೆಲ್ ಅವತಾರ ನೋಡಲು ಅಭಿಮಾನಿಗಳು ಕಾಯ್ತಿದ್ದಾರೆ.