Tag: ವೀರ ಸಾವರ್ಕರ್

  • ನಾನು ಗಾಂಧಿವಾದಿಯಲ್ಲ, ಉಪವಾಸ ಸತ್ಯಾಗ್ರಹದಿಂದ ಸ್ವಾತಂತ್ರ್ಯ ಸಿಕ್ಕಿಲ್ಲ: ಕಂಗನಾ ಮತ್ತೆ ವಿವಾದ

    ನಾನು ಗಾಂಧಿವಾದಿಯಲ್ಲ, ಉಪವಾಸ ಸತ್ಯಾಗ್ರಹದಿಂದ ಸ್ವಾತಂತ್ರ್ಯ ಸಿಕ್ಕಿಲ್ಲ: ಕಂಗನಾ ಮತ್ತೆ ವಿವಾದ

    ನಿನ್ನೆಯಷ್ಟೇ ಪ್ರಧಾನಿ ನರೇಂದ್ರ ಮೋದಿ (Narendra Modi) ರಾಷ್ಟ್ರಪತಿ ಭವನದಿಂದ ಇಂಡಿಯಾ ಗೇಟ್ ವರೆಗೆ ಹೊಸದಾಗಿ ನಾಮಕರಣಗೊಂಡ ಕರ್ತವ್ಯ ಪಥವನ್ನು ಉದ್ಘಾಟಿಸಿದ್ದಾರೆ. ಈ ಸಂದರ್ಭದಲ್ಲಿ ಬಾಲಿವುಡ್ ನಟಿ ಕಂಗನಾ ರಣಾವತ್  (Kangana Ranaut) ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಉದ್ಘಾಟನಾ ಕಾರ್ಯಕ್ರಮದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಕಂಗನಾ, ‘ನಾನು ಗಾಂಧಿವಾದಿಯಲ್ಲ, ನೇತಾವಾದಿ’ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದರು. ಅಲ್ಲದೇ, ಕೇವಲ ಉಪವಾಸ ಸತ್ಯಾಗ್ರಹದಿಂದ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿಲ್ಲ ಎಂದು ಪರೋಕ್ಷವಾಗಿ ಮಹಾತ್ಮ ಗಾಂಧೀಜಿ ಅವರನ್ನು ಟೀಕಿಸಿದರು. ಗಾಂಧೀಜಿ (Gandhiji) ಬಗ್ಗೆ ಕಂಗನಾ ಆಡಿದ ಈ ಮಾತು ಗಾಂಧಿವಾದಿಗಳನ್ನು ಕೆರಳಿಸಿದೆ.

    ಮಾಧ್ಯಮಗಳ ಜೊತೆ ಮುಂದುವರೆದು ಮಾತನಾಡಿದ ಕಂಗನಾ, ‘ಸ್ವಾತಂತ್ರ್ಯ ಹೋರಾಟದಲ್ಲಿ ವೀರ ಸಾವರ್ಕರ್ (Veer Savarkar) ಹಾಗೂ ಸುಭಾಷ್ ಚಂದ್ರ ಬೋಸ್ (Subhash Chandra Bose) ರಂತಹ ವೀರ ಹೋರಾಟಗಾರರನ್ನು ಕಡೆಗಣಿಸಲಾಗಿದೆ. ಇವರು ಸ್ವಾತಂತ್ರ್ಯಕ್ಕೆ ಹೋರಾಟ ಮಾಡಿದವರು, ಅಧಿಕಾರಕ್ಕಾಗಿ ಅಲ್ಲ ಎಂದು ಮಾತನಾಡಿದರು. 2ನೇ ವಿಶ್ವ ಯುದ್ಧದಲ್ಲಿ ಭಾಗವಹಿಸಿ ದೇಶವನ್ನು ಹೀನಾಯ ಸ್ಥಿತಿಯಿಂದ ಮೇಲೆತ್ತಲು ನೇತಾಜಿ ತುಂಬಾ ಶ್ರಮ ಪಟ್ಟರು. ಅಂಥವರನ್ನು ನಾವು ನೆನೆಯಬೇಕು ಅಂದರು ಕಂಗನಾ. ಇದನ್ನೂ ಓದಿ:‘ಯಶೋದಾ’ ಟೀಸರ್ನಲ್ಲಿ ಸಮಂತಾ ಮತ್ತೊಂದು ಮುಖ ಅನಾವರಣ

    ಕರ್ತವ್ಯ ಪಥ ಬದಲಾವಣೆ ಕುರಿತು ಕಂಗನಾ ಮಾತನಾಡಿ, ರಾಜಪಥ (Rajpatha) ಅಂತ ಹೆಸರು ಕೇಳಿದಾಗೆಲ್ಲ ಏನೋ ಕಸಿವಿಸಿ ಆಗೋದು. ರಾಜಪಥ ಪದವೇ ಮಾದರಿ ಆದುದಲ್ಲ. ಹಾಗಾಗಿ ಕರ್ತವ್ಯದ ಪಥ ಹೆಸರು ಇಟ್ಟಿರುವುದು ಖುಷಿಯಾಗಿದೆ ಮತ್ತು ಹೆಮ್ಮೆ ತಂದಿದೆ ಅಂದರು. ಈ ರೀತಿಯಲ್ಲಿ ನಾನು ನೇರವಾಗಿ ಮಾತನಾಡಿ, ಕೆಲವರ ಕಂಗಣ್ಣಿಗೆ ಗುರಿಯಾಗಿರುವೆ. ಸತ್ಯ ನುಡಿದಾಗ ಇದೆಲ್ಲ ಸಹಜ. ನಾನು ಸತ್ಯ ನುಡಿಯುತ್ತಲೇ ಇರುವೆ ಅಂದರು.

    Live Tv
    [brid partner=56869869 player=32851 video=960834 autoplay=true]

  • ಮಠ-ಮಂದಿರಗಳಿಗೆ ಹಣ ಕೊಡುವುದನ್ನು ನಿಲ್ಲಿಸಿ: ಪ್ರಮೋದ್ ಮುತಾಲಿಕ್

    ಮಠ-ಮಂದಿರಗಳಿಗೆ ಹಣ ಕೊಡುವುದನ್ನು ನಿಲ್ಲಿಸಿ: ಪ್ರಮೋದ್ ಮುತಾಲಿಕ್

    ಧಾರವಾಡ: ಮಠ-ಮಂದಿರಗಳಿಗೆ ದುಡ್ಡು ಕೊಡುವುದನ್ನು ನಿಲ್ಲಿಸಿ, ಹಿಂದೂ ಸಂಘಟನೆಗಳಿಗೆ ಕೊಡಿ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್ ಮನವಿ ಮಾಡಿದರು.

    ಸಾವರ್ಕರ್ ಕುರಿತ ಪುಸ್ತಕ ಬಿಡುಗಡೆಯಲ್ಲಿ ಮಾತನಾಡಿದ ಅವರು, ಮಠ ಮಂದಿರ ಬಿಟ್ಟು ಹಿಂದೂ ಸಂಘಟನೆಗಳಿಗೆ ಹಣ ಕೊಡಿ. ಹಿಂದೂ ಸಂಘಟನೆಗಳಿಗೆ ಬಲ ಕೊಡಿ. ಆಗ ನಿಮಗೆ ನಾವು ಹಿಂದೂ ರಾಷ್ಟ್ರ ಮಾಡಿ ತೋರಿಸುತ್ತೇವೆ ಎಂದು ಹೇಳಿದರು.

    ಇದೇ ವೇಳೆ ಸರ್ಕಾರದ ವಿರುದ್ಧ ಕಿಡಿಕಾರಿದ ಅವರು, ಗೋ ಮಾತೆ, ಮಾತೆ ಎಂದು ಹೇಳುತ್ತಿದ್ದರು. ಅದಕ್ಕಾಗಿ ಗೋ ಹತ್ಯೆ ಕಾನೂನು ತಂದಿದ್ದಾರೆ. ಆದರೂ ಗೋಹತ್ಯೆ ನಡೆಯುತ್ತಿದೆ. ಆದರೆ ಒಂದೂ ಗೋಹತ್ಯೆ ಆಗದಂತೆ ಮಾಡುವ ಶಕ್ತಿ ಹಿಂದೂ ಸಂಘಟನೆಗಳಿಗಿದೆ. ಆದ್ದರಿಂದ ಹಿಂದೂ ಸಂಘಟನೆಗಳಿಗೆ ಸಮಾಜ ಬಲ ಕೊಡಬೇಕು ಎಂದು ತಿಳಿಸಿದರು.

    ಅಂದು ಹಿಂದುತ್ವದ ಹೋರಾಟಗಳು ಯಶಸ್ವಿಯಾಗಿದ್ದವು. ಇಂದು ಅದು ಆಗುತ್ತಿಲ್ಲ. ಅವತ್ತು ಶುದ್ಧ, ಚಾರಿತ್ರ್ಯ, ತ್ಯಾಗ, ಬಲಿದಾನದ ನಾಯಕರಿದ್ದರು. ಅದರ ಪರಿಣಾಮದಿಂದ ದುಷ್ಟ ಶಕ್ತಿಗಳ ನಾಶವಾಯಿತು. ಹಿಂದವೀ ಸಮಾಜ ನಿರ್ಮಾಣ ಆಗಿತ್ತು. ಅದಕ್ಕೆ ಛತ್ರಪತಿ ಶಿವಾಜಿ ಮಹಾರಾಜರೇ ಉದಾಹರಣೆಯಾಗಿದ್ದಾರೆ. ಆದರೆ ಇವತ್ತಿನ ನಾಯಕರು ಯಾರು ಎಂದು ಪ್ರಶ್ನಿಸಿದ ಅವರು, ನೀಚ, ನಿರ್ಲಜ್ಜ, ಲೂಟಿಕೋರರಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಗಣೇಶ ಮೂರ್ತಿಯೊಂದಿಗೆ ಸಾವರ್ಕರ್ ಫೋಟೋವನ್ನೂ ಇಡ್ತೀವಿ – ಚಕ್ರವರ್ತಿ ಸೂಲಿಬೆಲೆ

    ಇಂದಿನ ನಾಯಕರು ಈ ದೇಶವನ್ನು ಬರ್ಬಾದ್ ಮಾಡುತ್ತಿದ್ದಾರೆ. ಈ ದೇಶವನ್ನು ಹಾಳು ಮಾಡುತ್ತಿದ್ದಾರೆ. ಅವರು ಇವರು ಅಲ್ಲ, ಎಲ್ಲರೂ ಅವರೇ ಆಗಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ನಾವು ಯೋಚನೆ ಮಾಡಬೇಕಿದೆ. ಇವತ್ತು ನಾವು ಯಾವ ರೀತಿ ನಾಯಕರು ಬೇಕು ಅಂತಾ ವಿಚಾರ ಮಾಡಬೇಕಿದೆ. ಶಿವಾಜಿಯಂತಹ ನಾಯಕರು ಬೇಕೋ?, ಅಥವಾ ಲೂಟಿಕೋರರು ಬೇಕೋ? ಅಂತಾ ನಿಶ್ಚಯ ಮಾಡಬೇಕಿದೆ. ಎಲ್ಲರಲ್ಲೂ ಇವತ್ತು ವೇದನೆ ಇದೆ. ಎಲ್ಲೋ ತಪ್ಪುತ್ತಿದ್ದೇವೆ ಎನ್ನುವ ವೇದನೆ ಇದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ವಿದ್ಯುತ್ ಶಾಕ್‍ನಿಂದ ದಂಪತಿ ಸಾವು- ಪತ್ನಿ ಉಳಿಸಲು ಹೋಗಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದುರ್ಮರಣ

    Live Tv
    [brid partner=56869869 player=32851 video=960834 autoplay=true]

  • ಸಾವರ್ಕರ್ ಅಧ್ಯಯನ ಪೀಠ ಸ್ಥಾಪನೆಗೆ ಮುಂದಾದ ತುಮಕೂರು ವಿವಿ

    ಸಾವರ್ಕರ್ ಅಧ್ಯಯನ ಪೀಠ ಸ್ಥಾಪನೆಗೆ ಮುಂದಾದ ತುಮಕೂರು ವಿವಿ

    ತುಮಕೂರು: ವೀರ ಸಾವರ್ಕರ್ ಅಧ್ಯಯನ ಪೀಠ ಸ್ಥಾಪನೆಗೆ ತುಮಕೂರು ವಿಶ್ವ ವಿದ್ಯಾಲಯ ಒಪ್ಪಿಗೆ ಸೂಚಿಸಿದೆ.

    ಪ್ರಸಕ್ತ ಸಾಲಿನ 6ನೇ ಸಿಂಡಿಕೇಟ್ ಸಭೆಯಲ್ಲಿ ಸಾವರ್ಕರ್ ಅಧ್ಯಯನ ಪೀಠಕ್ಕೆ ಒಪ್ಪಿಗೆ ನೀಡಲಾಗಿದ್ದು, ಆಂತರಿಕ ನಿಧಿ ಬಳಸಿಕೊಳ್ಳಲು ಸರ್ವಾನುಮತದಿಂದ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಶುಕ್ರವಾರ ನಡೆದ ಸಭೆಯಲ್ಲಿ ವಿವಿ ಸಿಂಡಿಕೇಟ್ ಸದಸ್ಯ ವಿನಯ್ ಸಭೆಯ ಅಜೆಂಡಾದಲ್ಲಿ ಸಾವರ್ಕರ್ ಪೀಠ ಸ್ಥಾಪನೆಯ ವಿಷಯದ ಬಗ್ಗೆ ಪ್ರಸ್ತಾಪಿಸಿದ್ದರು. ಇದಕ್ಕೆ ಎಲ್ಲರೂ ಒಪ್ಪಿಗೆ ಸೂಚಿಸಿದ್ದಾರೆ.

    ಈ ವೇಳೆ ಸಾವರ್ಕರ್ ಪೀಠ ಸ್ಥಾಪನೆಗೆ ಸದಸ್ಯ ವಿನಯ್ 1 ಲಕ್ಷ ರೂ. ಮೂಲ ಠೇವಣಿಯನ್ನು ಇಟ್ಟಿದ್ದಾರೆ. ಸಾವರ್ಕರ್ ಪೀಠ ಸ್ಥಾಪನೆಗೆ ಅಗತ್ಯ ಇರುವ ಕರಡು ಪರಿನಿಯಮ ಸಿದ್ಧಗೊಂಡಿದ್ದು, ಪೀಠ ಕಾರ್ಯಾರಂಭಕ್ಕೆ ಬೇಕಾಗಿರುವ 25 ಲಕ್ಷ ರೂ. ದಾನಿಗಳಿಂದ ಸಂಗ್ರಹಿಸಲು ನಿರ್ಧಾರ ಮಾಡಿದ್ದಾರೆ. ಇದನ್ನೂ ಓದಿ: 8ನೇ ತರಗತಿ ಪಠ್ಯದಲ್ಲಿ ಸಾವರ್ಕರ್‌ ಪಾಠ

    ಈ ಬಗ್ಗೆ ಸಿಂಡಿಕೇಟ್ ಸದಸ್ಯ ವಿನಯ್ ಮಾತನಾಡಿ, ನಿನ್ನೆ ನಡೆದ ಸಿಂಡಿಕೇಟ್ ಸಭೆಯಲ್ಲಿ ಸಾವರ್ಕರ್ ಅಧ್ಯಯನ ಪೀಠ ಸ್ಥಾಪನೆಗೆ ನಿರ್ಧರಿಸಲಾಗಿದೆ. ನಾನು ಅದರ ಪ್ರಸ್ತಾವನೆಯನ್ನು ಸಭೆ ಮುಂದಿಟ್ಟಿದ್ದೆ. ಸರ್ವಾನುಮತದಿಂದ ಅನುಮೋದನೆಗೊಂಡಿದೆ. ಆರಂಭಿಕವಾಗಿ ನಾನು 1 ಲಕ್ಷ ರೂ. ಠೇವಣಿ ಇಟ್ಟಿದ್ದೇನೆ. ಮುಂದಿನದ ದಿನದಲ್ಲಿ ಎಲ್ಲವೂ ಅನುಷ್ಠಾನ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಪಠ್ಯ, ಪುಸ್ತಕ ಪರಿಷ್ಕರಣೆಗೆ ಮುಂದುವರಿದ ವಿರೋಧ- ತಮ್ಮ ಕವಿತೆಯನ್ನು ಬಳಸಬೇಡಿ: ರೂಪಾ ಹಾಸನ

    Live Tv
    [brid partner=56869869 player=32851 video=960834 autoplay=true]

  • ದೇವರ ಜೊತೆ ನಾಸ್ತಿಕನಾಗಿರೋ ಸಾವರ್ಕರ್ ಫೋಟೋ ಇಡೋದು ಹಾಸ್ಯಸ್ಪದ: ಬಿ.ಕೆ ಹರಿಪ್ರಸಾದ್

    ದೇವರ ಜೊತೆ ನಾಸ್ತಿಕನಾಗಿರೋ ಸಾವರ್ಕರ್ ಫೋಟೋ ಇಡೋದು ಹಾಸ್ಯಸ್ಪದ: ಬಿ.ಕೆ ಹರಿಪ್ರಸಾದ್

    ಚಾಮರಾಜನಗರ: ವೀರಸಾವರ್ಕರ್ ಒಬ್ಬ ನಾಸ್ತಿಕ. ದೇವರ ಮೂರ್ತಿ ಜೊತೆ ನಾಸ್ತಿಕನ ಫೋಟೋ ಇಡೋದು ಹಾಸ್ಯಾಸ್ಪದ ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿ ಪ್ರಸಾದ್ ಟೀಕಿಸಿದ್ದಾರೆ.

    ಗಣೇಶೋತ್ಸವ ದಲ್ಲಿ ವೀರಸಾವರ್ಕರ್ ಫೋಟೋ ಇಡುವ ವಿಚಾರದ ಬಗ್ಗೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯಲ್ಲಿ ಪ್ರತಿಕ್ರಿಯಿಸಿದ ಅವರು, ಸಾವರ್ಕರ್ ಆತ್ಮಚರಿತ್ರೆ ಓದದೆ ಇರುವವರು ಕೇವಲ ರಾಜಕೀಯ ಹಿತಾಸಕ್ತಿಗೋಸ್ಕರ ಆತನ ಫೋಟೋ ಇಡೋದು ಹಾಸ್ಯಾಸ್ಪವಾಗಿದೆ ಎಂದು ಹೇಳಿದ್ದಾರೆ.

    ವೀರಸಾವರ್ಕರ್ ಗೆ ದೇವರ ಬಗ್ಗೆ ನಂಬಿಕೆ ಇರಲಿಲ್ಲ. ದೇವರು ದಿಂಡರ ಬಗ್ಗೆ ನಂಬಿಕೆ ಇಲ್ಲದ ವೀರಸಾವರ್ಕರ್ ಈ ದೇಶವನ್ನು ಹಾಳು ಮಾಡಿ ಬಿಟ್ಟರು ಎಂದರು.

    Live Tv
    [brid partner=56869869 player=32851 video=960834 autoplay=true]

  • ಕಾಂಗ್ರೆಸ್ ಕೃತ್ಯಕ್ಕೆ ನಾನು ಪ್ರತಿಕ್ರಿಯಿಸುವುದಿಲ್ಲ: ಸೂಲಿಬೆಲೆ

    ಕಾಂಗ್ರೆಸ್ ಕೃತ್ಯಕ್ಕೆ ನಾನು ಪ್ರತಿಕ್ರಿಯಿಸುವುದಿಲ್ಲ: ಸೂಲಿಬೆಲೆ

    ಧಾರವಾಡ: ಕಾಂಗ್ರೆಸ್ ಕಾರ್ಯಕರ್ತರು ವೀರ ಸಾವರ್ಕರ್ ಅವರ ಭಾವಚಿತ್ರ ಸುಟ್ಟ ಪ್ರಕರಣಕ್ಕೆ ನಾನು ಪ್ರತಿಕ್ರಿಯೆ ಕೊಡುವುದಿಲ್ಲ. ಕಾಂಗ್ರೆಸ್‍ನವರ ಈ ವರ್ತನೆ ಹೊಸದೇನಲ್ಲ ಎಂದು ಯುವ ಬ್ರಿಗೇಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.

    ಧಾರವಾಡದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸಾವರ್ಕರ್ ಮತ್ತು ರಾಷ್ಟ್ರಭಕ್ತರನ್ನು ಅವಮಾನಿಸುವ ಪ್ರಕ್ರಿಯೆ ಕಾಂಗ್ರೆಸ್‍ನಲ್ಲಿ ಯಾವಾಗಲೂ ಇದೆ. ದುರದೃಷ್ಟ ಎಂದರೆ ನಾವು ಧಾರವಾಡಕ್ಕೆ ಬಂದಾಗಲೇ ಹೀಗೆ ಆಗಿದೆ. ಧಾರವಾಡ ತಿಲಕರು ಬಂದು ಹೋದ ಜಾಗ. ಆಲೂರು ವೆಂಕಟರಾಯರು ತಿಲಕ್ ಅವರ ಭಾಷಣವನ್ನು ಕನ್ನಡಕ್ಕೆ ಅನುವಾದಿಸಿದ ಜಾಗ. ಕರ್ನಾಟಕದ ಏಕೀಕರಣ ಚಿಂತನೆಯ ಬೀಜ ಹಾಕಿದ ಜಾಗ. ಈ ಇತಿಹಾಸಕ್ಕೆ ದೊಡ್ಡ ಗೌರವ ಕೊಟ್ಟು ಧಾರವಾಡಕ್ಕೆ ಬಂದಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ಮುಂಬೈ ಪೊಲೀಸರಿಗೆ ಮತ್ತೆ ದಾಳಿ ಬೆದರಿಕೆ – ಆತಂಕ ಸೃಷ್ಟಿಸಿದ ಪಾಕ್ ಸಂದೇಶ

    ಕಾಂಗ್ರೆಸ್‍ನವರು ಇಂತಹ ಇತಿಹಾಸವನ್ನು ತುಚ್ಛವಾಗಿ ತೋರಿಸುತ್ತಿದ್ದಾರೆ. ಇತಿಹಾಸ ಪುರುಷರನ್ನು ಅವಮಾನಿಸುತ್ತಿದ್ದಾರೆ. ಇದು ಖಂಡನೀಯ. ಇದು ಕಾಂಗ್ರೆಸ್‍ಗೆ ಒಳ್ಳೆಯದಲ್ಲ. ನಾವು ಸ್ವಾತಂತ್ರ್ಯ ಅಮೃತ ಮಹೋತ್ಸವದಲ್ಲಿದ್ದೇವೆ. ಇಂತಹ ಸಮಯದಲ್ಲಿ ಸಾವರ್ಕರ್‌ಗೆ ಅವಮಾನ ಮಾಡುತ್ತಿದ್ದಾರೆ. ಕಾಂಗ್ರೆಸ್‍ನ ಹಿರಿಯರು ತಿದ್ದಿ ಬುದ್ದಿ ಹೇಳಬೇಕಾದ ಅಗತ್ಯವಿದೆ. ಸಿದ್ದರಾಮಯ್ಯನವರ ಮೇಲೆ ಮೊಟ್ಟೆ ಎಸೆದಿದ್ದನ್ನು ನಾವೂ ಸಮರ್ಥಿಸಿಕೊಳ್ಳುವುದಿಲ್ಲ. ಆದರೆ, ಸಾವರ್ಕರ್ ಅವರ ಭಾವಚಿತ್ರದ ಮೇಲೆ ಮೊಟ್ಟೆ ಒಡೆದಾಗ ಸಿದ್ದರಾಮಯ್ಯ ಮೌನವಾಗಿದ್ದಾರೆ. ಇದು ಬಹಳ ದುರದೃಷ್ಟಕರ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಮೊಟ್ಟೆ ಎಸೆದ ಪ್ರಕರಣ : ಸಂಪತ್ ಯಾರು ಅಂತ ನಮಗೆ ಗೊತ್ತಿಲ್ಲ: ಕೆ.ಜಿ. ಬೋಪಯ್ಯ

    Live Tv
    [brid partner=56869869 player=32851 video=960834 autoplay=true]

  • ಸಾವರ್ಕರ್ ವಿರೋಧಿಗಳಿಗೆ ಅವರ ಜೀವನದ ಪುಸ್ತಕ ನೀಡುತ್ತೇನೆ ಓದಿ ಮಾತಾಡಿ: ಸುಧಾಕರ್

    ಸಾವರ್ಕರ್ ವಿರೋಧಿಗಳಿಗೆ ಅವರ ಜೀವನದ ಪುಸ್ತಕ ನೀಡುತ್ತೇನೆ ಓದಿ ಮಾತಾಡಿ: ಸುಧಾಕರ್

    ಚಿಕ್ಕಬಳ್ಳಾಪುರ: ವೀರ ಸಾವರ್ಕರ್ ಅವರು ಸ್ವಾತಂತ್ರಕ್ಕಾಗಿ ಆದರ್ಶದ ಹೋರಾಟ ಮಾಡಿದ್ದಾರೆ ಎಂಬುವುದರಲ್ಲಿ ಯಾವುದೇ ಸಂದೇಹ ಇಲ್ಲ. ಇದರಲ್ಲಿ ಭಿನ್ನಾಭಿಪ್ರಾಯ ಇದ್ದರೆ, ಅಂತಹವರು ಸ್ವಾತಂತ್ರ್ಯದ ಇತಿಹಾಸ ತಿಳಿದಿರಲು ಸಾಧ್ಯವಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಚಿಕ್ಕಬಳ್ಳಾಪುರ ತಾಲೂಕಿನ ಅಡ್ಡಗಲ್ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ವಾತಂತ್ರದ ಇತಿಹಾಸ ಮತ್ತು ಸಾವರ್ಕರ್ ಅವರ ಬಗ್ಗೆ ತಿಳಿಯುವ ಆಸಕ್ತಿ ಇದ್ದರೆ, ಅಂತಹವರಿಗೆ ನನ್ನ ಪ್ರಾಯೋಜಕತ್ವದಲ್ಲಿ ಸಾವರ್ಕರ್ ಅವರ ಬದುಕಿನ ಕುರಿತು ಇರುವ ಪುಸ್ತಕಗಳನ್ನು ಕಳುಹಿಸುತ್ತೇನೆ. ಅವುಗಳನ್ನು ಓದಿದ ನಂತರ ಮಾತನಾಡಲಿ, ಅಜ್ಞಾನದಿಂದ ಮಾತನಾಡುವುದು ಬೇಡ ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪತ್ನಿ ಜೊತೆಗೆ ದೇವಾಲಯಕ್ಕೆ ರಿಷಿ ಸುನಕ್ ಭೇಟಿ

    ಅಜ್ಞಾನದಿಂದ ಮಾತನಾಡುವುದರಿಂದ ಇತಿಹಾಸ ಮತ್ತು ಸ್ವಾತಂತ್ರ್ಯ ಹೋರಾಟಗಾರರ ಬದುಕನ್ನು ಕಡಿಮೆ ಮಾಡುವುದು ಆಗಬಾರದು. ಇತಿಹಾಸ ಸಂಪೂರ್ಣ ಅರಿತು ಮಾತನಾಡುವ ಕೆಲಸವಾಗಬೇಕು ಎಂದಿದ್ದಾರೆ. ಇದನ್ನೂ ಓದಿ: ನಿಮ್ಮನ್ನು ಮುಗಿಸಲಾಗುವುದು- ಎನ್‍ಸಿಬಿ ಮಾಜಿ ಅಧಿಕಾರಿ ಸಮೀರ್ ವಾಂಖೆಡೆಗೆ ಜೀವ ಬೆದರಿಕೆ

    ಇದೇ ವೇಳೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಸಚಿವರು, ಮೊಟ್ಟೆ ಎಸೆದಿರುವುದು ಸರಿಯಲ್ಲ. ಪ್ರಜಾಪ್ರಭುತ್ವದಲ್ಲಿ ಭಿನ್ನಾಭಿಪ್ರಾಯ ವ್ಯಕ್ತಪಡಿಸಲು ಸೂಕ್ತ ವೇದಿಕೆ ಇದೆ. ಹೋರಾಟಕ್ಕೂ ಅವಕಾಶ ಇದೆ, ಸಂವಿಧಾನವೂ ಕಲ್ಪಿಸಿದೆ, ಪ್ರಜಾಪ್ರಭುತ್ವ ನೀತಿಯೂ ಅದೇ ಆಗಿದೆ. ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರ ಮೇಲೆ ನಡೆದ ಈ ಘಟನೆಯನ್ನು ಖಂಡಿಸುತ್ತೇನೆ. ಇದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೂ ಕೂಡ ಖಂಡಿಸಿದ್ದಾರೆ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಶಿವಮೊಗ್ಗದಲ್ಲಿ ಪರಿಸ್ಥಿತಿ ಉದ್ವಿಗ್ನ – ಯುವಕನಿಗೆ ಚಾಕು ಇರಿತ

    ಶಿವಮೊಗ್ಗದಲ್ಲಿ ಪರಿಸ್ಥಿತಿ ಉದ್ವಿಗ್ನ – ಯುವಕನಿಗೆ ಚಾಕು ಇರಿತ

    ಶಿವಮೊಗ್ಗ: ವೀರ ಸಾವರ್ಕರ್ ಭಾವಚಿತ್ರ ಇಡುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಕಿತ್ತಾಟ ಉದ್ವಿಘ್ನಗೊಂಡಿದ್ದು, ಯುವಕನೋರ್ವನಿಗೆ ದುಷ್ಕರ್ಮಿಗಳು ಚಾಕು ಇರಿದಿದ್ದಾರೆ.

    ಪ್ರೇಮ್ ಸಿಂಗ್ (26) ಚಾಕು ಇರಿದ ಘಟನೆ ಶಿವಮೊಗ್ಗದ ಗಾಂಧಿ ಬಜಾರಿನಲ್ಲಿ ನಡೆದಿದೆ. ಬೈಕ್‍ನಲ್ಲಿ ಬಂದ ದುಷ್ಕರ್ಮಿಗಳು ಮನೆ ಮುಂದೆ ನಿಂತಿದ್ದ ಪ್ರೇಮ್ ಸಿಂಗ್ ಮೇಲೆ ದಾಳಿ ನಡೆಸಿ ಚಾಕು ಇರಿದಿದ್ದಾರೆ. ಚಾಕು ಇರಿತಕ್ಕೊಳಗಾದ ಯುವಕ ಪ್ರೇಮ್ ಸಿಂಗ್‍ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವಕನ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆಯನ್ನು ನಿಯಂತ್ರಿಸಲು ಪೊಲೀಸರು ಇಂದು ಮತ್ತು ನಾಳೆ ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಹೇರಿದ್ದಾರೆ.

    ಘಟನೆಯೇನು?: ಶಿವಮೊಗ್ಗದ ಅಮೀರ್ ಅಹಮದ್ ವೃತ್ತದಲ್ಲಿ ಎರಡು ಕೋಮಿನ ನಡುವೆ ಜಟಾಪಟಿ ನಡೆದಿದೆ. ಒಂದು ಗುಂಪು ಸಾವರ್ಕರ್ ಫೋಟೋ ತೆಗೆದು ಟಿಪ್ಪು ಫೋಟೋ ಇಡಲು ಹೊರಟಿತ್ತು. ಈ ವೇಳೆ ಎರಡು ಕೋಮಿನ ನಡುವೆ ಜಟಾಪಟಿ ನಡೆದಿದೆ. ಈ ವೇಳೆ ಸಾವರ್ಕರ್ ಫೋಟೊವನ್ನು ಬೀಳಿಸುವುರ ಜೊತೆಗೆ ಅಲ್ಲೇ ಪಕ್ಕದಲ್ಲಿದ್ದ ರಾಷ್ಟ್ರಧ್ವಜವನ್ನು ನೆಲಕ್ಕೆ ಬೀಳಿಸುವುದರ ಮೂಲಕ ರಾಷ್ಟ್ರಧ್ವಜಕ್ಕೂ ಅವಮಾನವನ್ನು ಮಾಡಿದ್ದರು. ಇದನ್ನೂ ಓದಿ: ಸಾವರ್ಕರ್ ಫೋಟೋ ವಿವಾದ – ಎರಡು ಗುಂಪುಗಳ ಮಧ್ಯೆ ಘರ್ಷಣೆ, ಶಿವಮೊಗ್ಗದಲ್ಲಿ ನಿಷೇಧಾಜ್ಞೆ

    ಸ್ಥಳದಲ್ಲಿ ಕ್ಷಣ ಕ್ಷಣಕ್ಕೂ ಬೀಗುವಿನ ವಾತಾವರಣ ಉಂಟಾಗುತ್ತಿದ್ದಂತೆ, ವ್ಯಾಪಾರಿಗಳು ಸ್ವಯಂ ಆಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿದ್ದಾರೆ. ಘಟನೆ ಸಂಬಂಧಿಸಿ ಎರಡು ಕೋಮಿನವರಿಗೆ ಶಾಂತವಾಗಿರಲು ಪೊಲೀಸರು ಸೂಚನೆ ನೀಡಿದ್ದಾರೆ. ಈ ವೇಳೆ ಒಂದು ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮತ್ತೊಂದು ಕೋಮಿನ ಗುಂಪು ಪ್ರತಿಭಟನೆ ನಡೆಯುವ ಸ್ಥಳಕ್ಕೆ ನುಗ್ಗಲು ಯತ್ನಿಸಿದೆ. ಈ ವೇಳೆ ಪೊಲೀಸರು ಅವರನ್ನು ತಡೆದಿದ್ದಾರೆ. ಎರಡು ಗುಂಪುಗಳ ಸದಸ್ಯರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಸದ್ಯಕ್ಕೆ ಕೆಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ತೈಲ ಬೆಲೆ ಏರಿಕೆಯಿಂದ ಸೌದಿ ಅರಾಮ್ಕೋಗೆ ಭಾರೀ ಲಾಭ

    Live Tv
    [brid partner=56869869 player=32851 video=960834 autoplay=true]

  • ಸಾವರ್ಕರ್ ಫೋಟೋ ವಿವಾದ – ಎರಡು ಗುಂಪುಗಳ ಮಧ್ಯೆ ಘರ್ಷಣೆ, ಶಿವಮೊಗ್ಗದಲ್ಲಿ ನಿಷೇಧಾಜ್ಞೆ

    ಸಾವರ್ಕರ್ ಫೋಟೋ ವಿವಾದ – ಎರಡು ಗುಂಪುಗಳ ಮಧ್ಯೆ ಘರ್ಷಣೆ, ಶಿವಮೊಗ್ಗದಲ್ಲಿ ನಿಷೇಧಾಜ್ಞೆ

    ಶಿವಮೊಗ್ಗ: ನಗರವು ಮತ್ತೆ ಉದ್ವಿಗ್ನಗೊಂಡಿದ್ದು, ವೀರ ಸಾವರ್ಕರ್ ಭಾವಚಿತ್ರ ಇಡುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಕಿತ್ತಾಟ ನಡೆದಿದೆ.

    ಶಿವಮೊಗ್ಗದ ಅಮೀರ್ ಅಹಮದ್ ವೃತ್ತದಲ್ಲಿ ಎರಡು ಕೋಮಿನ ನಡುವೆ ಜಟಾಪಟಿ ನಡೆದಿದೆ. ಒಂದು ಗುಂಪು ಸಾವರ್ಕರ್ ಫೋಟೋ ತೆಗೆದು ಟಿಪ್ಪು ಫೋಟೋ ಇಡಲು ಹೊರಟಿತ್ತು. ಈ ವೇಳೆ ಎರಡು ಕೋಮಿನ ನಡುವೆ ಜಟಾಪಟಿ ನಡೆದಿದೆ. ಈ ವೇಳೆ ಸಾವರ್ಕರ್ ಫೋಟೊವನ್ನು ಬೀಳಿಸುವುರ ಜೊತೆಗೆ ಅಲ್ಲೇ ಪಕ್ಕದಲ್ಲಿದ್ದ ರಾಷ್ಟ್ರಧ್ವಜವನ್ನು ನೆಲಕ್ಕೆ ಬಿಳಿಸುವುದರ ಮೂಲಕ ರಾಷ್ಟ್ರಧ್ವಜಕ್ಕೂ ಅವಮಾನವನ್ನು ಮಾಡಿದ್ದಾರೆ.

    ಸ್ಥಳದಲ್ಲಿ ಬೀಗುವಿನ ವಾತಾವರಣ ಉಂಟಾಗುತ್ತಿದ್ದಂತೆ, ವ್ಯಾಪಾರಿಗಳು ಸ್ವಯಂ ಆಗಿ ಅಂಗಡಿಗಳನ್ನು ಮುಚ್ಚಿದ್ದಾರೆ. ಘಟನೆ ಸಂಬಂಧಿಸಿ ಎರಡು ಕೋಮಿನವರಿಗೆ ಶಾಂತವಾಗಿರಲು ಪೊಲೀಸರು ಸೂಚನೆ ನೀಡಿದ್ದಾರೆ. ಈ ವೇಳೆ ಒಂದು ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮತ್ತೊಂದು ಕೋಮಿನ ಗುಂಪು ಪ್ರತಿಭಟನೆ ನಡೆಯುವ ಸ್ಥಳಕ್ಕೆ ನುಗ್ಗಲು ಯತ್ನಿಸಿದೆ. ಈ ವೇಳೆ ಪೊಲೀಸರು ಅವರನ್ನು ತಡೆದಿದ್ದಾರೆ. ಎರಡು ಗುಂಪುಗಳ ಸದಸ್ಯರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಇದನ್ನೂ ಓದಿ: ಹರ್ ಘರ್ ತಿರಂಗ ಅಭಿಯಾನವು ಯಶಸ್ಸನ್ನು ಪಡೆದಿದೆ: ರಾಜ್ಯಪಾಲ

    ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿಪ್ರಸಾದ್ ಭೇಟಿ ನೀಡಿ, ಹಲವರನ್ನು ವಶಕ್ಕೆ ಪಡೆದರು. ಈ ವೇಳೆ ಪೊಲೀಸರು ವಶಕ್ಕೆ ಪಡೆದಿರುವವರನ್ನು ಬಿಡುಗಡೆ ಮಾಡುವಂತೆ ಹಿಂದುಪರ ಸಂಘಟನೆ ಕಾರ್ಯಕರ್ತರ ಪ್ರತಿಭಟನೆ ನಡೆಸಿದರು. 2 ಕೋಮಿನ ನಡುವೆ ಉಂಟಾದ ಗಲಾಟೆ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ 2 ದಿನ ನಿಷೇಧಾಜ್ಞೆ ಜಾರಿಯಾಗಿದೆ. ಇದನ್ನೂ ಓದಿ: ಮೊದಲ ಬಾರಿಗೆ ಮೇಡ್ ಇನ್ ಇಂಡಿಯಾ ಫಿರಂಗಿಯಿಂದ ರಾಷ್ಟ್ರಧ್ವಜಕ್ಕೆ ಸೆಲ್ಯೂಟ್ – ಹೊವಿಟ್ಜರ್ ವಿಶೇಷತೆ ಏನು?

    Live Tv
    [brid partner=56869869 player=32851 video=960834 autoplay=true]

  • ಶಿವಮೊಗ್ಗದಲ್ಲಿ ವೀರ ಸಾವರ್ಕರ್ ಫೋಟೋ ವಿವಾದ – ಪಾಲಿಕೆ ಕಾರ್ಯಕ್ಕೆ SDPI ವಿರೋಧ

    ಶಿವಮೊಗ್ಗದಲ್ಲಿ ವೀರ ಸಾವರ್ಕರ್ ಫೋಟೋ ವಿವಾದ – ಪಾಲಿಕೆ ಕಾರ್ಯಕ್ಕೆ SDPI ವಿರೋಧ

    ಶಿವಮೊಗ್ಗ: 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ರಾಷ್ಟ್ರದೆಲ್ಲೆಡೆ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಆದರೆ ಅಮೃತ ಮಹೋತ್ಸವದ ಅಂಗವಾಗಿ ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರರ ಛಾಯಾಚಿತ್ರ ಪ್ರದರ್ಶನ ಏರ್ಪಡಿಸಲಾಗಿತ್ತು. ಇದೀಗ ಛಾಯಾಚಿತ್ರ ಪ್ರದರ್ಶನ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.

    ಶಿವಮೊಗ್ಗದ ಶಿವಪ್ಪನಾಯಕ ಮಾಲ್‍ನಲ್ಲಿ ಗೊಂದಲ ಏರ್ಪಟ್ಟಿತ್ತು. ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ನಗರದ ಶಿವಪ್ಪನಾಯಕ ಮಾರುಕಟ್ಟೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರರಾದ ಮಹಾತ್ಮ ಗಾಂಧೀಜಿ, ಜವಹರಲಾಲ್ ನೆಹರು, ಭಗತ್ ಸಿಂಗ್, ಸರ್ದಾರ್ ವಲ್ಲಭಬಾಯ್ ಪಟೇಲ್, ಚಂದ್ರಶೇಖರ್ ಆಜಾದ್, ಅಂಬೇಡ್ಕರ್, ಸುಭಾಷ್ ಚಂದ್ರಬೋಸ್, ವೀರ ಸಾವರ್ಕರ್ ಭಾವಚಿತ್ರ ಪ್ರದರ್ಶನ ಏರ್ಪಡಿಸಲಾಗಿತ್ತು.

    ಮಾಲ್‍ನಲ್ಲಿ ಛಾಯಾಚಿತ್ರ ಪ್ರದರ್ಶನ ಗಮನಿಸಿದ ಎಸ್‍ಡಿಪಿಐ ಕಾರ್ಯಕರ್ತರು ರೊಚ್ಚಿಗೆದ್ದು, ಫೋಟೋ ತೆಗೆಯುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಅಲ್ಲದೇ ಮುಸ್ಲಿಂ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರವನ್ನು ಹಾಕುವಂತೆ ಆಗ್ರಹಿಸಿದರು. ಘಟನೆ ತಿಳಿದು ಸ್ಥಳಕ್ಕೆ ಆಗಮಿಸಿದ ಬಿಜೆಪಿ ಕಾರ್ಯಕರ್ತರು ಎಸ್‍ಡಿಪಿಐ ಕಾರ್ಯಕರ್ತರ ವಿರುದ್ದ ಪ್ರತಿಭಟನೆ ನಡೆಸಿದರು. ಸ್ವಾತಂತ್ರ್ಯ ಹೋರಾಟಗಾರರಿಗೆ ಎಸ್‍ಡಿಪಿಐ ಕಾರ್ಯಕರ್ತರು ಅವಮಾನ ಮಾಡಿದ್ದಾರೆ. ಕ್ರಮ ಕೈಗೊಳ್ಳುವಂತೆ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಕಾಲ್ನಡಿಗೆಯ ಟಿಪ್ಪು ಫ್ಲೆಕ್ಸ್ ಧ್ವಂಸ- ಪುನೀತ್ ಕೆರೆಹಳ್ಳಿ, ಬೆಂಬಲಿಗರಿಂದ ಕೃತ್ಯ

    ಘಟನೆ ಬಳಿಕ ಎಚ್ಚೆತ್ತ ಮಾಲ್ ಸಿಬ್ಬಂದಿ ವೀರ ಸಾವರ್ಕರ್ ಭಾವಚಿತ್ರ ಮತ್ತೆ ಹಾಕುವುದರ ಜೊತೆಗೆ ಅಬ್ದುಲ್ ಕಲಾಂ ಅವರ ಭಾವಚಿತ್ರವನ್ನು ಅಳವಡಿಸಿದರು. ಅಲ್ಲದೇ ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿಯಲ್ಲಿ ಕೆಲವು ಮುಸ್ಲಿಂ ಯುವಕರ ವಿರುದ್ದ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಒಟ್ಟಿನಲ್ಲಿ ಭಾವಚಿತ್ರದ ಗೊಂದಲ ಕೆಲಕಾಲ ಅಮೃತ ಮಹೋತ್ಸವದ ಸಂಭ್ರಮಕ್ಕೆ ಅಡ್ಡಿಯಾಯಿತು.

    Live Tv
    [brid partner=56869869 player=32851 video=960834 autoplay=true]

  • ‘ವೀರ ಸಾವರ್ಕರ್’ ಸಿನಿಮಾ ಮಾಡಿದರೆ ಕೊಲ್ಲುವುದಾಗಿ ನಿರ್ಮಾಪಕನಿಗೆ ಬೆದರಿಕೆ

    ‘ವೀರ ಸಾವರ್ಕರ್’ ಸಿನಿಮಾ ಮಾಡಿದರೆ ಕೊಲ್ಲುವುದಾಗಿ ನಿರ್ಮಾಪಕನಿಗೆ ಬೆದರಿಕೆ

    ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಕುರಿತಾಗಿ ಬಾಲಿವುಡ್ ನಲ್ಲಿ ಸಿನಿಮಾವೊಂದು ಮೂಡಿ ಬರುತ್ತಿದ್ದು, ಈಗಾಗಲೇ ಸಿನಿಮಾದ ಫಸ್ಟ್ ಲುಕ್ ಕೂಡ ರಿಲೀಸ್ ಆಗಿದೆ. ಈ ಸಿನಿಮಾವನ್ನು ಸಂದೀಪ್ ಸಿಂಗ್ ನಿರ್ಮಾಣ ಮಾಡುತ್ತಿದ್ದು, ಅದ್ಧೂರಿಯಾಗಿಯೇ ತಯಾರಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿತ್ತು. ಈ ನಡುವೆ ವೀರ ಸಾವರ್ಕರ್ ಸಿನಿಮಾ ಮಾಡಿದರೆ, ಕೊಲ್ಲುವುದಾಗಿ ನಿರ್ಮಾಪಕರಿಗೆ ಬೆದರಿಕೆ ಹಾಕಿದ್ದಾರಂತೆ. ಈ ಕುರಿತು ಅವರು ಅಂಬೋಲಿ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ.

    ಈಗಾಗಲೇ ಸಿನಿಮಾದ ಸಿದ್ಧತೆ ನಡೆಸಿದ್ದೇವೆ. ನಾಯಕರ ಆಯ್ಕೆಯಾಗಿದೆ. ವೀರ ಸಾವರ್ಕರ್ ಹುಟ್ಟು ಹಬ್ಬದ ದಿನದಂದು ಫಸ್ಟ್ ಲುಕ್ ಕೂಡ ರಿಲೀಸ್ ಮಾಡಲಾಗಿದೆ. ಇನ್ನೇನು ಶೂಟಿಂಗ್ ಗೆ ಹೊರಡುವ ಸಂದರ್ಭದಲ್ಲಿ ಕಿಡಿಗೇಡಿಗಳು ಸಾಮಾಜಿಕ ಜಾಲತಾಣದ ಮೂಲಕ ಕೊಲೆ ಬೆದರಿಕೆ ಹಾಕಲಾಗಿದೆ. ಹಾಗಾಗಿ ತಮಗೆ ರಕ್ಷಣೆ ಬೇಕೆಂದು ಸಂದೀಪ್ ಸಿಂಗ್ ದೂರಿನಲ್ಲಿ ದಾಖಲಿಸಿದ್ದಾರೆ. ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ತಗೆದುಕೊಂಡಿದ್ದಾರಂತೆ.  ಇದನ್ನೂ ಓದಿ:ಹೆರಿಗೆಯ ವಿಡಿಯೋ ಹಂಚಿಕೊಂಡ ಸಂಜನಾ ಗಲ್ರಾನಿ

    ಸಂದೀಪ್ ಸಿಂಗ್ ಅವರ ಫೇಸ್ ಬುಕ್ ನಲ್ಲಿ ಸಿಧು ಮೂಸೆ ವಾಲ ಹತ್ಯೆಯನ್ನು ನೆನಪಿಸಿಕೊಳ್ಳಿ. ಅದೇ ರೀತಿಯಲ್ಲೇ ನಿನ್ನನ್ನೂ ಕೊಲೆ ಮಾಡಲಾಗುವುದು. ಸ್ವಲ್ಪ ದಿನ ಕಾಯಿರಿ ಎಂದು ಸಂದೇಶವನ್ನು ಪೋಸ್ಟ್ ಮಾಡಿದ್ದಾರಂತೆ. ಇದು ಫೇಸ್ ಬುಕ್ ಮಸೇಜ್ ಮೂಲಕ ಬಂದ ಕೊಲೆ ಬೆದರಿಕೆ ಎಂದು ಸಿಂಗ್ ತಿಳಿಸಿದ್ದಾರೆ. ಈ ಪ್ರಕರಣವನ್ನೂ ಗಂಭೀರವಾಗಿ ಪೊಲೀಸ್ ಇಲಾಖೆ ತಗೆದುಕೊಂಡಿದ್ದು, ಈ ಸಂದೇಶವನ್ನು ಕಳುಹಿಸಿದ ವ್ಯಕ್ತಿಗಾಗಿ ಬಲೆ ಬೀಸಿದ್ದಾರಂತೆ.

    Live Tv
    [brid partner=56869869 player=32851 video=960834 autoplay=true]