Tag: ವೃಕ್ಷ ಮಾತೆ

  • ಸೊಂಟದ ನೋವು ಬಿಟ್ರೆ ಬೇರೆ ಏನೂ ಸಮಸ್ಯೆ ಆಗಿಲ್ಲ: ವೃಕ್ಷ ಮಾತೆಯ ಹೆಲ್ತ್ ಅಪ್ಡೇಟ್

    ಸೊಂಟದ ನೋವು ಬಿಟ್ರೆ ಬೇರೆ ಏನೂ ಸಮಸ್ಯೆ ಆಗಿಲ್ಲ: ವೃಕ್ಷ ಮಾತೆಯ ಹೆಲ್ತ್ ಅಪ್ಡೇಟ್

    ಬೆಂಗಳೂರು: ಸೊಂಟದ ನೋವು ಬಿಟ್ರೆ ಬೇರೆ ಏನೂ ಸಮಸ್ಯೆ ಆಗಿಲ್ಲ ಎಂದು ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ (Saalu Marada Thimmakka Health) ಅವರ ಮಗ ಉಮೇಶ್ ಹೇಳಿದ್ದಾರೆ.

    ಆರೋಗ್ಯದ ಬಗ್ಗೆ ಅಪ್ಡೇಟ್ ಕೊಟ್ಟ ಅವರು, ಭಾನುವಾರ ಸಂಜೆ ಮನೆಯಲ್ಲಿ ಆಯತಪ್ಪಿ ಬಿದ್ದರು. ಕೂಡಲೇ ಅವರನ್ನ ಆಸ್ಪತ್ರೆಗೆ ಸೇರಿದೆವು. ಈಗ ಐಸಿಯುವಿನಲ್ಲಿ ಚಿಕಿತ್ಸೆ ನೀಡ್ತಿದ್ದಾರೆ. ಸೊಂಟದ ಮೂಳೆಗೆ ಪೆಟ್ಟಾಗಿದೆ. ಈ ಹಿಂದೆಯೂ ಹಿಪ್‍ಜಾಯಿಂಟ್‍ಗೆ ಪೆಟ್ಟಾಗಿತ್ತು ಎಂದರು.

    ಸದ್ಯ ವೈದ್ಯರ ನಿಗಾದಲ್ಲಿದ್ದಾರೆ. ಡಾ. ಸಂದೀಪ್ ಅವರ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗ್ತಿದೆ. 112 ವರ್ಷವಾಗಿರೋದ್ರಿಂದ ಹೆಚ್ಚಾಗಿ ನೋವಿದೆ. ನಮಗೆ ಸಣ್ಣ ಪುಟ್ಟ ಗಾಯವಾದ್ರೆ ತಡಿಯೋಕೆ ಆಗೋಲ್ಲ. ಅವರಿಗೆ ವಯಸ್ಸು ಅಷ್ಟಾಗಿದೆ, ನೋವು ಜಾಸ್ತಿನೇ ಆಗಿದೆ. ಸೋಂಟದ ನೋವು ಬಿಟ್ರೇ ಬೇರೆ ಏನೂ ಸಮಸ್ಯೆ ಆಗಿಲ್ಲ ಎಂದು ಅವರು ಹೇಳಿದರು. ಇದನ್ನೂ ಓದಿ: ನಮ್ಮ ಸಿಂಹ ರಾಹುಲ್‌ ಗಾಂಧಿ ಗೆದ್ದಿದ್ದಾರೆ – ಸಂಸತ್‌ ಸದಸ್ಯತ್ವ ಅನರ್ಹತೆ ವಾಪಸ್‌ ಬೆನ್ನಲ್ಲೇ ಸಿಹಿ ಹಂಚಿ INDIA ಒಕ್ಕೂಟ ಸಂಭ್ರಮ

    ಕಳೆದ ಬಾರಿ ಕೂಡ ಕಾಲು ಜಾರಿ ಬೆನ್ನು ಸೊಂಟಕ್ಕೆ ನೋವಾಗಿತ್ತು. ಭಾನುವಾರ ಕೂಡ ಮುಖ ತೊಳೆಯಲು ಬಾತ್ ರೂಂಗೆ ಹೋಗಿದ್ದ ಸಂದರ್ಭದಲ್ಲಿ ಕಾಲು ಜಾರಿ ಬಿದ್ದ ಕಾರಣ ಸೊಂಟಕ್ಕೆ ಏಟು ಬಿದ್ದಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಹಿಳೆಯರ ಶಬರಿಮಲೆ ದೇಗುಲ ಪ್ರವೇಶಕ್ಕೆ ಸಾಲುಮರದ ತಿಮ್ಮಕ್ಕ ಖಂಡನೆ

    ಮಹಿಳೆಯರ ಶಬರಿಮಲೆ ದೇಗುಲ ಪ್ರವೇಶಕ್ಕೆ ಸಾಲುಮರದ ತಿಮ್ಮಕ್ಕ ಖಂಡನೆ

    ಹಾಸನ: ಶಬರಿಮಲೆಯಲ್ಲಿ ಅಯ್ಯಪ್ಪ ದೇವಾಲಯಕ್ಕೆ ಮಹಿಳೆಯರ ಪ್ರವೇಶ ಮಾಡಿರುವುದು ಸರಿಯಿಲ್ಲ ಅಂತ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಹೇಳಿದ್ದಾರೆ.

    ಸೂತಕವಾಗುವ ಹೆಂಗಸರು ಶಬರಿಮಲೆ ದೇವಸ್ಥಾನಕ್ಕೆ ಹೋಗಬಾರದೆಂದು ಅನೇಕ ವರ್ಷಗಳಿಂದ ಬಂದತಂತಹ ಸಂಪ್ರದಾಯವಾಗಿದೆ. ನನ್ನಷ್ಟು ವಯಸ್ಸಾದ ಮೇಲೆ ಅಲ್ಲಿಗೆ ಹೋಗಿ ದೇವರ ದರ್ಶನ ಪಡೆಯಬಹುದು. ನಾನು ವಯಸ್ಸಾದ ಮೇಲೆ ಹೋಗಿದ್ದೇನೆ. ನನ್ನನ್ನು ದೊಡ್ಡ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿದ್ದರು. ಈವಾಗ ಇಬ್ಬರು ಮಾನ-ಮರ್ಯಾದೆ ಇಲ್ಲದೇ ದೇವರ ದರ್ಶನ ಪಡೆಯಲು ಹೋಗಿದ್ದಾರೆ. ಆದ್ರೆ ಮುಟ್ಟಾಗುವ ಮಹಿಳೆಯರು ದೇವಸ್ಥಾನಕ್ಕೆ ಹೋಗಬಾರದು ಅಂತ ಅವರು ಒತ್ತಾಯಿಸಿದ್ರು.

    ಶಬರಿಮಲೆ ದೇವಸ್ಥಾನಕ್ಕೆ ಬಿಂದು ಹಾಗೂ ಕನಕದುರ್ಗ ಎಂಬಿಬ್ಬರು ಮಹಿಳೆಯರು ದೇವಾಲಯದೊಳಕ್ಕೆ ಪ್ರವೇಶ ಮಾಡಿದ್ದರು. ಬಿಂದು ಮತ್ತು ಕನಕ ಮಧ್ಯರಾತ್ರಿ ಬೆಟ್ಟವನ್ನು ಹತ್ತಿ ಇಂದು ಬೆಳಗ್ಗೆ 3.45ಕ್ಕೆ ದೇವಾಲಯವನ್ನು ಪ್ರವೇಶಿಸಿದ್ದರು. ಈ ಸಮಯದಲ್ಲಿ ಭಕ್ತರ ಸಂಖ್ಯೆ ಕಡಿಮೆ ಇತ್ತು ಮತ್ತು ಯಾವುದೇ ಮಾಧ್ಯಮಗಳು ಸಹ ಇರಲಿಲ್ಲ.

    ಮಹಿಳೆಯರ ಪ್ರವೇಶವನ್ನು ಖಚಿತಪಡಿಸಿದ ಕೇರಳ ಸಿಎಂ ಪಿಣಾರಯ್ ವಿಜಯನ್, ಇಬ್ಬರು ಮಹಿಳೆಯರು ಪೊಲೀಸ್ ಭದ್ರತೆಯಲ್ಲಿ ಶಬರಿಮಲೆ ಪ್ರವೇಶಿಸಿದ್ದಾರೆ. ಅವರಿಗೆ ರಕ್ಷಣೆ ನೀಡಿದ್ದಕ್ಕೆ ನಮಗೆ ಹೆಮ್ಮೆಯಿದೆ ಎಂದು ಅವರು ತಿಳಿಸಿದ್ದರು. 44 ವರ್ಷ ಬಿಂದು ಕಾಲೇಜು ಉಪನ್ಯಾಸಕಿ ಮತ್ತು ಸಿಪಿಐ(ಎಂ) ಕಾರ್ಯಕರ್ತೆಯಾಗಿದ್ದು, 42 ವರ್ಷದ ಕನಕದುರ್ಗ ನಾಗರಿಕ ಸರಬರಾಜು ಇಲಾಖೆಯಲ್ಲಿ ಉದ್ಯೋಗದಲ್ಲಿದ್ದಾರೆ.

    ಅಯ್ಯಪ್ಪ ದೇವಾಲಯ ಪ್ರವೇಶಕ್ಕೆ 10 ವರ್ಷದಿಂದ ಮೇಲ್ಪಟ್ಟು 50 ವರ್ಷದ ಒಳಗಿನ ಮಹಿಳೆಯರಿಗೆ ನಿರ್ಬಂಧ ವಿಧಿಸಲಾಗಿತ್ತು. ಆದರೆ ಸುಪ್ರೀಂ ಕೋರ್ಟ್ ಈ ನಿರ್ಬಂಧವನ್ನು ತೆರವುಗೊಳಿಸಿ ಎಲ್ಲ ವಯಸ್ಸಿನ ಮಹಿಳೆಯರು ದೇವಾಲಯವನ್ನು ಪ್ರವೇಶಿಸಬಹುದು ಎನ್ನುವ ಐತಿಹಾಸಿಕಾ ತೀರ್ಪನ್ನು ಪ್ರಕಟಿಸಿತ್ತು. ಆದ್ರೆ ಇದೀಗ ಇಬ್ಬರು ಮಹಿಳೆಯರು ದೇವಾಲಯವನ್ನು ಪ್ರವೇಶಿಸಿದ್ದು, ಮಕರ ಸಂಕ್ರಮಣಕ್ಕೆ 14 ದಿನಗಳು ಇರುವಾಗಲೇ ಇದೀಗ ಮತ್ತೆ ಭಾರೀ ಚರ್ಚೆಗೀಡಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv