Tag: ವೃದ್ದೆ

  • ಕಡು ಬಡವರ ಮೇಲೆ ಗ್ರಾಮ ಪಂಚಾಯ್ತಿ ಸದಸ್ಯನ ಮಗನ ದೌರ್ಜನ್ಯ

    ಕಡು ಬಡವರ ಮೇಲೆ ಗ್ರಾಮ ಪಂಚಾಯ್ತಿ ಸದಸ್ಯನ ಮಗನ ದೌರ್ಜನ್ಯ

    ಮೈಸೂರು: ಕಡು ಬಡವರ ಕುಟುಂಬದ ಮೇಲೆ ಗ್ರಾಮ ಪಂಚಾಯ್ತಿ ಸದಸ್ಯನ ಮಗನು ದೌರ್ಜನ್ಯವೆಸಗಿ ವೃದ್ಧೆಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಕೆ.ಆರ್ ನಗರ ತಾಲೂಕಿನ ಹೊಸೂರು ಕಲ್ಲಹಳ್ಳಿಯಲ್ಲಿ ನಡೆದಿದೆ.

    ಜಯಮ್ಮ (60) ಕೊಲೆಯಾದ ವೃದ್ಧೆ. ಗ್ರಾಮ ಪಂಚಾಯತಿ ಸದಸ್ಯ ಮಹಾಲಿಂಗನ ಪುತ್ರ ವಿಶ್ವಕುಮಾರ್ ಮೇಲೆ ಕೊಲೆಗೈದ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ: ಮುಸ್ಲಿಮರ ಎಲ್ಲಾ ಚಿಹ್ನೆಗಳನ್ನು ನಾಶ ಮಾಡ್ತಿದೆ ಬಿಜೆಪಿ: ಹಿಜಬ್‌ ಕುರಿತು ಮುಫ್ತಿ ಪ್ರತಿಕ್ರಿಯೆ

    ಮಳೆಯಿಂದಾಗಿ ಜಯಮ್ಮನ ಮನೆ ಕುಸಿದಿತ್ತು. ವಾಸಕ್ಕೆ ಜಾಗವಿಲ್ಲದ ಕಾರಣ ಅವರ ಕುಟುಂಬವು ಸಮುದಾಯ ಭವನಕ್ಕೆ ಶೀಫ್ಟ್ ಆಗಿದ್ದರು. ಈ ವೇಳೆ ಆರೋಪಿಯು ಸಮುದಾಯ ಭವನ ಖಾಲಿ ಮಾಡುವಂತೆ ಧಮ್ಕಿ ಹಾಕಿದ್ದಲ್ಲದೇ ಏಕಾಏಕಿ ಅವರ ಮನೆಗೆ ನುಗ್ಗಿ ಗಲಾಟೆ ಮಾಡಿದ ಅವನು ವೃದ್ಧೆಯ ತಲೆಯನ್ನು ಗೋಡೆಗೆ ಗುದ್ದಿದ್ದಾನೆ ಎಂಬ ಆರೋಪ ಬಂದಿದೆ. ಇದನ್ನೂ ಓದಿ: ಹೆಲ್ಮೆಟ್ ಹಾಕಿದ್ರೆ ಸೇಫ್ಟಿ ಅಲ್ವಾ ಅದ್ಕೆ ಹಿಜಬ್ ಹಾಕಿದ್ರೆ ಸೇಫ್ಟಿ ಅಂದಿದ್ದು: ಜಮೀರ್ ಸಮರ್ಥನೆ

    ಗಾಯಗೊಂಡಿದ್ದ ಜಯಮ್ಮ ಚಿಕಿತ್ಸೆ ಫಲಿಸದೆ ಮೈಸೂರಿನ ಕೆಆರ್ ಆಸ್ಪತ್ರೆಯಲ್ಲಿ ಸಾವನ್ನಪಿದ್ದಾರೆ. ಘಟನೆ ಕುರಿತು ಕೆ.ಆರ್ ನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ರಸ್ತೆ ಬದಿ ಹಸು ಮೇಯಿಸುತ್ತಿದ್ದ ವೃದ್ಧೆಯ ಚಿನ್ನದ ಸರ ಕಸಿದು ಸರಗಳ್ಳ ಪರಾರಿ

    ರಸ್ತೆ ಬದಿ ಹಸು ಮೇಯಿಸುತ್ತಿದ್ದ ವೃದ್ಧೆಯ ಚಿನ್ನದ ಸರ ಕಸಿದು ಸರಗಳ್ಳ ಪರಾರಿ

    ಚಿಕ್ಕಬಳ್ಳಾಪುರ: ರಸ್ತೆ ಬದಿ ದನ ಮೇಯಿಸುತ್ತಿದ್ದ ವೃದ್ಧೆಯ ಬಳಿ ಮಾತಿಗಿಳಿದ ಬೈಕ್ ಸವಾರ ಚಿನ್ನದ ಸರ ಕಳವು ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದಲ್ಲಿ ನಡೆದಿದೆ.

    ಅರೆಹಳ್ಳಿ ಗುಡ್ಡದಹಳ್ಳಿಯ ವೃದ್ದೆ ಗೌರಮ್ಮ ಸರ ಕಳೆದುಕೊಂಡ ವೃದ್ಧೆ. ನಗರದ ಸ್ಕೌಟ್ ಕ್ಯಾಂಪ್ ರಸ್ತೆಯಲ್ಲಿ ಎಂದಿನಂತೆ ಹಸು ಮೇಯಿಸುತ್ತಿದ್ದ ಗೌರಮ್ಮ ಬಳಿ ಬೈಕ್ ನಿಲ್ಲಿಸಿ, ಅಜ್ಜಿ ನಮ್ಮ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನ ಆಗಿದೆ. ಇಲ್ಲಿಂದ ಬೈಕ್‍ನಲ್ಲಿ ಯಾರಾದ್ರೂ ಹೋದ್ರಾ ಅಂತ ಮಾತಿಗಿಳಿದಿರೋ ಕಳ್ಳ ಅಜ್ಜಿಯ ಕುತ್ತಿಗೆಗೆ ಕೈ ಹಾಕಿ ಸರ ಕಸಿದುಕೊಂಡು ಪರಾರಿಯಾಗಿದ್ದಾನೆ. ಇದನ್ನೂ ಓದಿ: ಅನೈತಿಕ ಸಂಬಂಧ- ಕುಟುಂಬಸ್ಥರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಕಾನ್‍ಸ್ಟೇಬಲ್

    ಘಟನೆ ನಂತರ ಅಘಾತಗೊಂಡ ಅಜ್ಜಿ ಮನೆಗೆ ಹೋಗಿ ವಿಷಯ ತಿಳಿಸಿದ್ದಾರೆ. ತದನಂತರ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಿಸಿಟಿವಿ ದೃಶ್ಯಗಳ ಪರಿಶೀಲನೆ ನಡೆಸಿ ಸರಗಳ್ಳನಿಗಾಗಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಹುಟುಕಾಟ ನಡೆಸಿದ್ದಾರೆ. ಇದನ್ನೂ ಓದಿ: ಪಿಎಚ್‍ಡಿ ವ್ಯಾಸಂಗ ಬೇಡ ಎಂದ ಪಾಲಕರು- ಯುವತಿ ಆತ್ಮಹತ್ಯೆ

  • ಮನೆಯ ಮೇಲ್ಛಾವಣಿ ಕುಸಿದು ವಯೋವೃದ್ಧೆ ಸಾವು

    ಮನೆಯ ಮೇಲ್ಛಾವಣಿ ಕುಸಿದು ವಯೋವೃದ್ಧೆ ಸಾವು

    ಹಾವೇರಿ: ತವರಿಗೆ ಬಂದಿದ್ದ ವೃದ್ಧೆ ಮೇಲೆ ಮಣ್ಣಿನ ಮನೆಯ ಮೇಲ್ಛಾವಣಿ ಕುಸಿದು ಮೃತಪಟ್ಟ ಘಟನೆ ಹಾವೇರಿ ತಾಲೂಕಿನ ನೆಗಳೂರ ಗ್ರಾಮದಲ್ಲಿ ನಡೆದಿದೆ.

    ಮರೋಳ ಗ್ರಾಮದ ಶಿವಗಂಗಮ್ಮ ಸುಟಮನಿ (70) ಮೃತ ದುರ್ದೈವಿ. ಈಕೆ ಕಳೆದ 20 ದಿನಗಳ ಹಿಂದೆ ನೆಗಳೂರ ಗ್ರಾಮದ ಬಸವರಾಜ ಕಡಕೋಳ ಎಂಬವರ ಮನೆಗೆ ಬಂದಿದ್ದರು. ಹೀಗೆ ತವರಿಗೆ ಬಂದಿದ್ದ ವೃದ್ಧೆ ಇದೀಗ ಮನೆಯ ಮೇಲ್ಛಾವಣಿ ಬಿದ್ದು ಸಾವನ್ನಪ್ಪಿದ್ದಾರೆ.

    ಶಿವಗಂಗಮ್ಮ ಅಜ್ಜಿ ತವರು ಮನೆಗೆ ಬಂದಿದ್ದರು. ಈ ವೇಳೆ ಮನೆಯ ಕಟ್ಟೆಯ ಮೇಲೆ ಕುಳಿತಾಗ ಮನೆಯ ಮೇಲ್ಛಾವಣಿ ಕುಸಿದು ಈ ದುರ್ಘಟನೆ ಸಂಭವಿಸಿದೆ. ವೃದ್ಧೆಯನ್ನು ಮೊದಲು ಗುತ್ತಲದ ಆಸ್ಪತ್ರೆಗೆ ಕರೆದೊಯ್ದು ಅಲ್ಲಿ ಪ್ರಥಮ ಚಿಕಿತ್ಸೆ ನೀಡಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ರಾಣೇಬೆನ್ನೂರಿನ ನಂದಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

    ಆದರೆ ಇದೀಗ ಚಿಕಿತ್ಸೆ ಫಲಿಸದೆ ಅಜ್ಜಿ ಮೃತಪಟ್ಟಿದ್ದಾರೆ. ಗುತ್ತಲ ಪೆÇಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

  • ಆತ್ಮಹತ್ಯೆಗೆ ಯತ್ನಿಸಿದ ವೃದ್ಧೆಯನ್ನು ರಕ್ಷಿಸಿದ ಪೊಲೀಸ್ ಪೇದೆ

    ಆತ್ಮಹತ್ಯೆಗೆ ಯತ್ನಿಸಿದ ವೃದ್ಧೆಯನ್ನು ರಕ್ಷಿಸಿದ ಪೊಲೀಸ್ ಪೇದೆ

    ಕಲಬುರಗಿ: ಭೀಮಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ವೃದ್ಧೆಯನ್ನು ಪೊಲೀಸ್ ಪೇದೆಯೊಬ್ಬರು ರಕ್ಷಿಸಿದ ಘಟನೆ ಕಲಬುರಗಿಯಲ್ಲಿ ನಡೆದಿದೆ.

    ನೀರಿಗೆ ಬಿದ್ದ ವೃದ್ಧೆಯನ್ನು ಗುರುಬಾಯಿ(60) ಎಂದು ಗುರುತಿಸಲಾಗಿದೆ. ಇವರು ಆಳಂದ ಮೂಲದವರಾಗಿದ್ದಾರೆ. ವೃದ್ಧೆಯನ್ನು ರಕ್ಷಿಸಿದ ಪೊಲೀಸ್ ಪೇದೆ ಅನಿಲ್‍ಕುಮಾರ ಆಗಿದ್ದಾರೆ. ಇವರು ಕಲಬುರಗಿ ಜಿಲ್ಲೆ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

    ರಾತ್ರಿ ವೇಳೆಯಲ್ಲಿ ವೃದ್ಧೆ ಕಟ್ಟಿಸಂಗಾವಿ ಬಳಿಯ ಭೀಮಾ ಬ್ರೀಡ್ಜ್‍ನ ಮೇಲಿನಿಂದ ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ಹಾರಿದ್ದಾರೆ. ಆದರೆ ಅದೃಷ್ಟವಶಾತ್ ಅಂಚಿನಲ್ಲಿ ಹಾಕಿದ್ದ ಕಬ್ಬಿಣದ ರಾಡಿಗೆ ವೃದ್ದೆ ಜೋತು ಬಿದ್ದಿದ್ದಾರೆ. ಅದೇ ವೇಳೆ ಭೀಮಾ ಬ್ರಿಡ್ಜ್ ಮೇಲೆ ಗಸ್ತಿನಲ್ಲಿದ್ದ ಪೇದೆ ಅನಿಲ್‍ಕುಮಾರ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವೃದ್ಧೆಯನ್ನು ನೋಡಿ ತಕ್ಷಣ ರಕ್ಷಣೆಗೆ ಮುಂದಾಗಿ ಕಾಪಾಡಿದ್ದಾರೆ.

    ಹೊಸ ವರ್ಷದ ದಿನದಂದು ಈ ಘಟನೆ ನಡೆದಿದೆ. ಪೊಲೀಸ್ ಪೇದೆ ಅನಿಲ್‍ಕುಮಾರ್ ಅವರು ವೃದ್ಧೆಯನ್ನು ರಕ್ಷಣೆ ಮಾಡಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

  • ಊಟ, ನೀರು ಇಲ್ಲದೇ ಮುಳ್ಳಿನ ಪೊದೆಯಲ್ಲಿ ಬಿದ್ದು ನರಳಾಡುತ್ತಿದ್ದ ವೃದ್ಧೆಯನ್ನು ರಕ್ಷಿಸಿದ ಗದಗ ಪೊಲೀಸ್ರು

    ಊಟ, ನೀರು ಇಲ್ಲದೇ ಮುಳ್ಳಿನ ಪೊದೆಯಲ್ಲಿ ಬಿದ್ದು ನರಳಾಡುತ್ತಿದ್ದ ವೃದ್ಧೆಯನ್ನು ರಕ್ಷಿಸಿದ ಗದಗ ಪೊಲೀಸ್ರು

    ಗದಗ: ಊಟ, ನೀರು ಇಲ್ಲದೇ ಮುಳ್ಳಿನ ಕಂಠಿಯ ಪೊದೆಯಲ್ಲಿ ಬಿದ್ದು ನರಳಾಡುತ್ತಿದ್ದ ವೃದ್ಧೆಯನ್ನು ಪೊಲೀಸರು ಆಸ್ಪತ್ರೆಗೆ ಸೇರಿಸುವ ಮೂಲಕ ಮಾನವೀಯತೆ ಮೆರೆದಿರುವ ಘಟನೆ ನಗರದ ಬೆಟಗೇರಿಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

    ನಗರದ ಸೆಟ್ಲಮೆಂಟ್ ಬಸ್ ನಿಲ್ದಾಣದ ಬಳಿ ಮಂಗಳವಾರ ರಾತ್ರಿ ಮುಳ್ಳಿನ ಗಿಡದ ಮಧ್ಯದಲ್ಲಿ ವೃದ್ಧೆಯೊಬ್ಬರು ಬಿದ್ದು ನರಳಾಡುತ್ತಿದ್ದ ಸ್ಥಿತಿಯನ್ನು ನೋಡಿದ ಸ್ಥಳೀಯರು ಬೆಟಗೇರಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಬಂದ ಬೆಟಗೇರಿ ಠಾಣೆಯ ಪಿಎಸ್‍ಐ ಮಲ್ಲಪ್ಪ ಮಡ್ಡಿ ಹಾಗೂ ಸಿಬ್ಬಂದಿ ಕೂಡಲೇ ಆಂಬುಲೆನ್ಸ್ ವ್ಯವಸ್ಥೆ ಮಾಡಿ ವೃದ್ಧೆಯನ್ನು ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

    ಸಮಸ್ಯೆಗೆ ಕೂಡಲೇ ಸ್ಪಂದಿಸಿದ ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಅಸ್ವಸ್ಥ ವೃದ್ಧೆ ಮಾತನಾಡುವ ಸ್ಥಿತಿಯಲ್ಲಿಯೂ ಸಹ ಇಲ್ಲದ ಕಾರಣ ಅವರ ಕುರಿತು ಮಾಹಿತಿ ಲಭ್ಯವಾಗಿಲ್ಲ. ಸದ್ಯ ಅವರನ್ನು ಗದಗ್ ನ ಜಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗದಗನ ಬೆಟಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.