Tag: ವೃದ್ಧ

  • Kolar | ಮತದಾನದ ವೇಳೆ ಹೃದಯಾಘಾತ – ವೃದ್ಧ ಸಾವು

    Kolar | ಮತದಾನದ ವೇಳೆ ಹೃದಯಾಘಾತ – ವೃದ್ಧ ಸಾವು

    ಕೋಲಾರ: ಮತದಾನದ (Voting) ವೇಳೆ ಹೃದಯಾಘಾತಕ್ಕೊಳಗಾಗಿ (Heart Attack) ವೃದ್ಧ ಸಾವನ್ನಪ್ಪಿದ ಘಟನೆ ಕೋಲಾರದಲ್ಲಿ (Kolar) ನಡೆದಿದೆ.

    ಬಂಗಾರಪೇಟೆ ಟಿಎಪಿಸಿಎಂಎಸ್ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆ ವೇಳೆ ಘಟನೆ ನಡೆದಿದೆ. ಬಂಗಾರಪೇಟೆ ತಾಲೂಕಿನ ಕಣಿಂಬೆಲೆ ಹೂಗಳ ಸೀನಪ್ಪ (86) ಹೃದಯಾಘಾತದಿಂದ ಮೃತಪಟ್ಟ ವೃದ್ಧ. ಬಿ ವರ್ಗದ 8ರ ಪೈಕಿ ಎರಡು ಮತದಾನ ಮಾಡಿದ್ದ ಸೀನಪ್ಪ, ಇನ್ನೂ 6 ಮತ ಮಾಡಲು ಪಕ್ಕದ ಮತಗಟ್ಟೆಗೆ ತೆರಳಿದ್ದ ವೇಳೆ ಮತಗಟ್ಟೆ ಬಳಿಯೇ ಹೃದಯಾಘಾತವಾಗಿದೆ. ಇದನ್ನೂ ಓದಿ: ಸರ್ಕಾರಿ ಸ್ಥಳಗಳು, ಮುಜರಾಯಿ ದೇವಸ್ಥಾನಗಳಲ್ಲಿ ಆರ್‌ಎಸ್‌ಎಸ್‌ ಎಲ್ಲಾ ಚಟುವಟಿಕೆ ಬ್ಯಾನ್‌?

    ಕೋಲಾರ ಜಿಲ್ಲೆಯ ಬಂಗಾರಪೇಟೆ ಪಟ್ಟಣದ ಮಾದರಿ ಕನ್ನಡ ಶಾಲೆಯಲ್ಲಿ ಮತದಾನ ಮಾಡುತ್ತಿದ್ದ ವೇಳೆ ಹೃದಯಾಘಾತಕ್ಕೊಳಗಾಗಿ ಸೀನಪ್ಪ ಮೃತಪಟ್ಟಿದ್ದಾರೆ. ಸೀನಪ್ಪ ಸಿಪಿಐ ಅಂಜನಪ್ಪ ಸೇರಿ ಮೂವರು ಮಕ್ಕಳನ್ನ ಅಗಲಿದ್ದಾರೆ. ಇದನ್ನೂ ಓದಿ: ಆಪರೇಷನ್‌ ಬ್ಲೂ ಸ್ಟಾರ್‌ ತಪ್ಪು, ಅದಕ್ಕೆ ಇಂದಿರಾ ಗಾಂಧಿ ಪ್ರಾಣವನ್ನೇ ಪಣಕ್ಕಿಟ್ಟರು: ಪಿ.ಚಿದಂಬರಂ

  • 35ರ ಮಹಿಳೆ ಮದುವೆಯಾದ 75ರ ವೃದ್ಧ – ರಾತ್ರಿ ಒಟ್ಟಿಗೆ ಸಮಯ ಕಳೆದ್ರು; ಮರುದಿನವೇ ವೃದ್ಧ ಸಾವು

    35ರ ಮಹಿಳೆ ಮದುವೆಯಾದ 75ರ ವೃದ್ಧ – ರಾತ್ರಿ ಒಟ್ಟಿಗೆ ಸಮಯ ಕಳೆದ್ರು; ಮರುದಿನವೇ ವೃದ್ಧ ಸಾವು

    ಲಕ್ನೋ: ಉತ್ತರ ಪ್ರದೇಶದ (Uttar Pradesh) ಕುಚ್‌ಮುಚ್‌ ಗ್ರಾಮದಲ್ಲಿ 75ರ ವೃದ್ಧನೊಬ್ಬ 35 ವರ್ಷದ ಮಹಿಳೆಯನ್ನು ಮದುವೆಯಾಗಿ, ಮಾರನೆ ದಿನವೇ ಮೃತಪಟ್ಟಿರುವ ಘಟನೆ ನಡೆದಿದೆ.

    ಜೌನ್‌ಪುರ ಜಿಲ್ಲೆಯ ಕುಚ್‌ಮುಚ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಆ ವ್ಯಕ್ತಿ ವರ್ಷದ ಹಿಂದಷ್ಟೇ ತನ್ನ ಮೊದಲ ಪತ್ನಿಯನ್ನು ಕಳೆದುಕೊಂಡಿದ್ದ. ಅಂದಿನಿಂದ ಒಂಟಿಯಾಗಿದ್ದ. ವೃದ್ಧನಿಗೆ ಮಕ್ಕಳಿರಲಿಲ್ಲ. ಜೊತೆಗೆ ಯಾರಾದರು ಇರಬೇಕೆಂಬ ಆಶಯದೊಂದಿಗೆ ತನಿಗಿಂತ ಅರ್ಧ ವಯಸ್ಸಿನ ಕಿರಿಯವಳನ್ನು ವಿವಾಹವಾಗಿದ್ದ. ಆದರೆ, ಮದುವೆಯಾದ ಮಾರನೇ ದಿನವೇ ವೃದ್ಧಿ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಫಿಲಿಪಿನ್ಸ್‌ನಲ್ಲಿ ಪ್ರಬಲ ಭೂಕಂಪ – 31 ಮಂದಿ ಸಾವು

    ಮೊದಲ ಪತ್ನಿ ತೀರಿಕೊಂಡ ಮೇಲೆ ಮತ್ತೊಂದು ಮದುವೆಯಾಗುವಂತೆ ಕುಟುಂಬಸ್ಥರು ಸಲಹೆ ನೀಡಿದ್ದರು. ಅದರಂತೆ ಜಲಾಲ್ಪುರ ಪ್ರದೇಶದ ನಿವಾಸಿ 35 ವರ್ಷದ ಮನ್ಭವತಿ ಅವರನ್ನು ವಿವಾಹವಾದರು. ಸ್ಥಳೀಯ ದೇವಾಲಯದಲ್ಲಿ ಸಾಂಪ್ರದಾಯಿಕವಾಗಿ ಜೋಡಿ ಮದುವೆಯಾದರು.

    ಮದುವೆ ಬಳಿಕ ಮನ್ಭವತಿ, ನನ್ನ ಪತಿಯನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆ. ಮನೆಯ ಜವಾಬ್ದಾರಿಯನ್ನು ನಾನೇ ವಹಿಸಿಕೊಳ್ಳುತ್ತೇನೆ ಎಂದು ಹೇಳಿದ್ದರು. ಮದುವೆಯ ಮೊದಲ ರಾತ್ರಿ ಇಬ್ಬರೂ ಒಟ್ಟಿಗೆ ಸಮಯ ಕಳೆದಿದ್ದರು. ಇದನ್ನೂ ಓದಿ: AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು

    ಆದರೆ, ಬೆಳಗ್ಗೆ ಹೊತ್ತಿಗೆ ಸಂಗ್ರರಾಮ್ ಅವರ ಆರೋಗ್ಯ ಹದಗೆಟ್ಟಿತು. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಷ್ಟರಲ್ಲಾಗಲೇ ವೃದ್ಧ ಮೃತಪಟ್ಟಿದ್ದರು. ಈ ಹಠಾತ್ ಸಾವು ಗ್ರಾಮದಲ್ಲಿ ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ.

    ದೆಹಲಿಯಲ್ಲಿ ವಾಸಿಸುವ ಸೋದರಳಿಯರು ಸೇರಿದಂತೆ ಮೃತರ ಸಂಬಂಧಿಕರು, ತಾವು ಬರುವವರೆಗೂ ಅಂತ್ಯಕ್ರಿಯೆ ವಿಧಿಗಳನ್ನು ನಡೆಸದಂತೆ ಸೂಚಿಸಿದ್ದಾರೆ.

  • ರಾಜ್ಯದಲ್ಲಿ ಇಲಿ ಜ್ವರಕ್ಕೆ ಮೊದಲ ಬಲಿ – ಡೆಂಗ್ಯೂ ನಡುವೆ ಹೆಚ್ಚಾಯ್ತು ಟೆನ್ಷನ್!

    ರಾಜ್ಯದಲ್ಲಿ ಇಲಿ ಜ್ವರಕ್ಕೆ ಮೊದಲ ಬಲಿ – ಡೆಂಗ್ಯೂ ನಡುವೆ ಹೆಚ್ಚಾಯ್ತು ಟೆನ್ಷನ್!

    ಹಾವೇರಿ: ಸದ್ಯ ಡೆಡ್ಲಿ ಡೆಂಗ್ಯೂ (Dengue) ಪ್ರಕರಣ ದಿನೇ ದಿನೇ ಹೆಚ್ಚಾಗುತ್ತಿದೆ. ಈ ಹೊತ್ತಿನಲ್ಲೇ ಇಲಿ ಜ್ವರದಿಂದ (Rat Fever) ಹಾವೇರಿಯ (Haveri) ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ. ಇದು ಇಲಿಜ್ವರಕ್ಕೆ ರಾಜ್ಯದಲ್ಲಿ ಸಂಭವಿಸಿದ ಮೊದಲ ಬಲಿಯಾಗಿದೆ.

    ಹಾವೇರಿ ಜಿಲ್ಲೆಯ ಹಾನಗಲ್ (Hangal) ತಾಲೂಕಿನ ಅರಳೇಶ್ವರ ಗ್ರಾಮದ ವೃದ್ಧ ಉಮೇಶ್ (72) ಇಲಿಜ್ವರದಿಂದ ಸಾವನ್ನಪ್ಪಿದ್ದಾರೆ. 15 ದಿನಗಳಿಂದ ಹಾವೇರಿ, ಮಂಗಳೂರು ಸೇರಿ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಂಗಳೂರಿನಲ್ಲಿ ರಕ್ತ ಪರೀಕ್ಷೆ ಬಳಿಕ ಇಲಿ ಜ್ವರ ಇರುವುದು ಪತ್ತೆಯಾಗಿದೆ. ಇದನ್ನೂ ಓದಿ: 20 ವರ್ಷದಲ್ಲಿ ನಾನು ಎಂದೂ ಮದ್ಯ ಹಂಚಿ ರಾಜಕಾರಣ ಮಾಡಿಲ್ಲ: ಡಾ.ಕೆ.ಸುಧಾಕರ್

    ವೃದ್ಧ ಕಿಡ್ನಿ ವೈಫಲ್ಯದೊಂದಿಗೆ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ 2 ದಿನ ಚಿಕಿತ್ಸೆ ಪಡೆದ ನಂತರ ವೃದ್ಧ ಮೃತಪಟ್ಟಿದ್ದಾರೆ. ಇದರಿಂದ ಹಾವೇರಿ ಜಿಲ್ಲೆ ಜನರಲ್ಲಿ ಆತಂಕ ಮನೆಮಾಡಿದೆ. ಇದನ್ನೂ ಓದಿ: ಅಸ್ಸಾಂನಲ್ಲಿ ಭೀಕರ ಪ್ರವಾಹ – ಕಾಜಿರಂಗ ಪಾರ್ಕ್‍ನಲ್ಲಿ 131 ವನ್ಯಜೀವಿಗಳು ಸಾವು

    12 ವರ್ಷದ ಬಾಲಕನಲ್ಲಿ ಮೊದಲ ಕೇಸ್ ಪತ್ತೆ:
    ಕಳೆದ ಒಂದು ದಿನದ ಹಿಂದೆಯಷ್ಟೇ ಹಾವೇರಿಯಲ್ಲಿ ಇಲಿ ಜ್ವರ ಪತ್ತೆಯಾಗಿತ್ತು. ಹಾವೇರಿ ಜಿಲ್ಲೆಯ 12 ವರ್ಷದ ಬಾಲಕನಲ್ಲಿ ಇಲಿ ಜ್ವರ ಕಾಣಿಸಿಕೊಂಡಿತ್ತು. ಬಾಲಕನಿಗೆ ಕಳೆದ ಒಂದು ವಾರದಿಂದ ನಿರಂತರವಾಗಿ ಜ್ವರ ಕಾಣಿಸಿಕೊಂಡ ಹಿನ್ನಲೆ ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಬಾಲಕನಿಗೆ ಜಾಂಡೀಸ್ ಕಾಣಿಸಿಕೊಂಡಿತ್ತು. ಬಳಿಕ ರೋಗ ಗುಣಮುಖಗೊಂಡ ಹಿನ್ನೆಲೆ ಚಿಕಿತ್ಸೆ ಪಡೆದು ಊರಿಗೆ ತೆರಳಿದ್ದ. ಮತ್ತೆ ಬಾಲಕನಿಗೆ ಜ್ವರ ಕಾಣಿಸಿಕೊಂಡ ಹಿನ್ನಲೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಇಲಿ ಜ್ವರ ಇರುವುದು ಪತ್ತೆಯಾಗಿತ್ತು. ಇದನ್ನೂ ಓದಿ: ರಾಹುಲ್‌ ಗಾಂಧಿಗೆ ಸಂಸತ್ತಿನೊಳಗೇ ಹೋಗಿ ಕೆನ್ನೆಗೆ ಬಾರಿಸಬೇಕು: ಭರತ್‌ ಶೆಟ್ಟಿ ಕೆಂಡಾಮಂಡಲ

  • 89 ವರ್ಷ ವಯಸ್ಸಿನ ಅಜ್ಜನಿಗೆ ಡಾಕ್ಟರೇಟ್

    89 ವರ್ಷ ವಯಸ್ಸಿನ ಅಜ್ಜನಿಗೆ ಡಾಕ್ಟರೇಟ್

    ಧಾರವಾಡ: ಸಾಧಿಸುವ ಛಲವೊಂದಿದ್ದರೆ ಏನನ್ನಾದರೂ ಸಾಧಿಸಬಹುದು. ಸಾಧನೆಗೆ ವಯಸ್ಸು ಅಡ್ಡಿಯಾಗುವುದಿಲ್ಲ ಎಂಬುದನ್ನು ಧಾರವಾಡದ (Dharwad) ಹಿರಿಯ ಅಜ್ಜರೊಬ್ಬರು ಸಾಬೀತು ಪಡಿಸಿದ್ದಾರೆ.

    ಜಯನಗರದಲ್ಲಿರುವ ಮಾರ್ಕಂಡೇಯ ದೊಡಮನಿ (Dodamani Markandeya) ಎಂಬವರು ತಮ್ಮ 89ನೇ ವಯಸ್ಸಿನಲ್ಲಿ ಪಿಹೆಚ್‌ಡಿ (PHD) ಮುಗಿಸಿ ಇದೀಗ ಡಾಕ್ಟರೇಟ್ (Doctorate) ಪದವಿ ಪಡೆದುಕೊಂಡಿದ್ದಾರೆ. ಕರ್ನಾಟಕ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಪೀಠದಲ್ಲಿ ನೂರಾರು ಜನ ಶಿವಶರಣರ ಬಗ್ಗೆ ಅಧ್ಯಯನ ಮಾಡಿ ಪಿಎಚ್‌ಡಿ ಮಾಡಿದ್ದಾರೆ. ಇದನ್ನೂ ಓದಿ: ಅಯೋಧ್ಯೆಗೆ ಬೆಂಗಳೂರಿನಿಂದ ಹೊರಟಿತು ವಿಶೇಷ ರೈಲು

    ರಾಜ್ಯದ ಶೈಕ್ಷಣಿಕ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಈ ಇಳಿ ವಯಸ್ಸಿನ ವೃದ್ಧರೊಬ್ಬರು ಪಿಎಚ್‌ಡಿ ಪದವಿಯನ್ನ ಪಡೆದುಕೊಂಡಿರುವುದು. ಡೋಹರ ಕಕ್ಕಯ್ಯನವರು ಬರೆದ ಕೇವಲ 6 ವಚನಗಳನ್ನು ಮುಂದಿಟ್ಟುಕೊಂಡು 150 ಪುಟಗಳುಳ್ಳ “ಶಿವಶರಹಣ ಡೋಹರ ಕಕ್ಕಯ್ಯ” ಒಂದು ಅಧ್ಯಯನ ಎಂಬ ಮಹಾ ಪ್ರಬಂಧವನ್ನು ಅವರು ಬರೆದಿದ್ದು, ಸತತ 18 ವರ್ಷಗಳಿಂದ ಕಕ್ಕಯ್ಯನವರ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಇದನ್ನೂ ಓದಿ: ರಾಜಸ್ಥಾನದಿಂದ ಸೋನಿಯಾ ಗಾಂಧಿ ರಾಜ್ಯಸಭೆಗೆ ಸ್ಪರ್ಧೆ

    ಈ ಅವಧಿಯಲ್ಲಿ ಅವರ ಗೈಡ್ ನಿಧನರಾದ ಹಿನ್ನೆಲೆ ಪ್ರಬಂಧ ಸಿದ್ಧಪಡಿಸಲು ವಿಳಂಬವಾಯಿತು. ಆ ನಂತರ ಡಾ.ನಿಂಗಪ್ಪ ಅವರು ಮಾರ್ಗದರ್ಶನ ಮಾಡಿದ್ದಾರೆ. ಕಾದ್ರೊಳ್ಳಿ, ಕಕ್ಕೇರಿ ಸೇರಿದಂತೆ ಇತರ ಕಡೆಗಳಲ್ಲಿ ಸಂಚರಿಸಿ ಕಕ್ಕಯ್ಯನವರ ಬಗ್ಗೆ ಅಧ್ಯಯನ ಮಾಡಿ ಮಹಾಪ್ರಬಂಧವನ್ನು ಅವರು ಸಿದ್ಧಪಡಿಸಿದ್ದಾರೆ. ಇದನ್ನೂ ಓದಿ: ಮಗನನ್ನು ಕೊಂದ ಸುಚನಾ ಸೇಠ್‌ಗೆ ಯಾವುದೇ ಮಾನಸಿಕ ಖಿನ್ನತೆ ಇಲ್ಲ

    ಡೋಹರ ಸಮುದಾಯದ ಚರಿತ್ರೆ, ಬಸವಣ್ಣನವರ ವಚನಗಳಲ್ಲಿ ಕಕ್ಕಯ್ಯನವರನ್ನು ಸ್ಮರಿಸಿಕೊಂಡಿರುವುದು, ಧಾರವಾಡ ಸಮೀಪದಲ್ಲೇ ಕಕ್ಕಯ್ಯ ಪ್ರಾಣ ಬಿಟ್ಟಿರುವುದು, ಗುಜರಾತ್, ಕಾಶ್ಮೀರ ಮತ್ತು ತಮಿಳುನಾಡು ಮೂಲದಿಂದ ಕಲ್ಯಾಣಕ್ಕೆ ಬಂದ ಶಿವಶರಣರ ನಂಟು ಇವೆಲ್ಲದರ ಮೇಲೆ ಮಾರ್ಕಂಡೇಯ ಸಮಗ್ರ ಬೆಳಕು ಚೆಲ್ಲಿದ್ದಾರೆ. ಇದನ್ನೂ ಓದಿ: ಮಾಜಿ ಸಚಿವ ಗೋಪಾಲಯ್ಯಗೆ ಕೊಲೆ ಬೆದರಿಕೆ – ಮಾಜಿ ಕಾರ್ಪೊರೇಟರ್ ಪದ್ಮರಾಜ್ ವಿರುದ್ಧ ಎಫ್‌ಐಆರ್

  • ಅತ್ಯಾಚಾರ ಎಸಗಿ ಅಪ್ರಾಪ್ತೆಯನ್ನು 2 ತಿಂಗಳ ಗರ್ಭಿಣಿ ಮಾಡಿದ 73 ವರ್ಷದ ವೃದ್ಧ!

    ಅತ್ಯಾಚಾರ ಎಸಗಿ ಅಪ್ರಾಪ್ತೆಯನ್ನು 2 ತಿಂಗಳ ಗರ್ಭಿಣಿ ಮಾಡಿದ 73 ವರ್ಷದ ವೃದ್ಧ!

    ಹಾಸನ: 73 ವರ್ಷದ ವೃದ್ಧನೊಬ್ಬ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ ಘಟನೆಯೊಂದು ಹಾಸನ (Hasan) ಜಿಲ್ಲೆಯ ಸಕಲೇಶಪುರ (Sakleshura) ತಾಲೂಕಿನಲ್ಲಿ ನಡೆದಿದೆ.

    ಮೀಸೆ ಮಂಜಯ್ಯ ಅತ್ಯಾಚಾರ ಮಾಡಿದ ಕೀಚಕನಾಗಿದ್ದು, ಈತ ಏಕಾಂಗಿ ಸಾಮಾಜಿಕ ಹೋರಾಟಗಾರ. ಈತ 13 ವರ್ಷದವಳ ಮೇಲೆ ಅತ್ಯಾಚಾರ ಎಸಗಿದ ಪರಿಣಾಮ ಇದೀಗ ಆಕೆ 2 ತಿಂಗಳ ಗರ್ಭಿಣಿಯಾಗಿದ್ದಾಳೆ (Pregnant).

    ಸದ್ಯ ಅಪ್ರಾಪ್ತ ಮಗಳಿಗಾದ ಅನ್ಯಾಯ ಕಂಡು ತಾಯಿ ವಿಷ ಸೇವಿಸಿದ್ದು, ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ಮೀಸೆ ಮಂಜಯ್ಯನನ್ನು ವಶಕ್ಕೆ ಪಡೆದ ಪೊಲೀಸರು, ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಾರೆ. ಇನ್ನು ಅಪ್ರಾಪ್ತೆಗೂ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿ ಪೊಲೀಸರು ಆಕೆಯನ್ನು ಬಾಲಮಂದಿರದ ವಶಕ್ಕೆ ನೀಡಿದ್ದಾರೆ.

    ಆರೋಪಿಯು ವಿಧವಾ ವೇತನ, ಪಿಂಚಣಿ ಹಣ ಕೊಡಿಸುವುದಾಗಿ ಹೇಳಿ ಹಲವು ಮಹಿಳೆಯರನ್ನು ಎಮೋಷನಲ್ ಬ್ಲಾಕ್‍ಮೇಲ್ ಮಾಡುತ್ತಿದ್ದ ಪ್ರಕರಣವೂ ಇದರ ಜೊತೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಯುವಕನಿಗೆ ಚಾಕುವಿನಿಂದ ಇರಿದು ಕೊಲೆ

    ಒಟ್ಟಿನಲ್ಲಿ ಘಟನೆ ಸಂಬಂಧ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅನಾರೋಗ್ಯದಿಂದ ಮೃತಪಟ್ಟರೂ ಬಾರದ ವಿದೇಶದಲ್ಲಿರೋ ಮಕ್ಕಳು – ಅಂತ್ಯಕ್ರಿಯೆ ಮಾಡಿ ಮಾನವೀಯತೆ ಮೆರೆದ ಪೊಲೀಸರು

    ಅನಾರೋಗ್ಯದಿಂದ ಮೃತಪಟ್ಟರೂ ಬಾರದ ವಿದೇಶದಲ್ಲಿರೋ ಮಕ್ಕಳು – ಅಂತ್ಯಕ್ರಿಯೆ ಮಾಡಿ ಮಾನವೀಯತೆ ಮೆರೆದ ಪೊಲೀಸರು

    ಚಿಕ್ಕೋಡಿ: ತಂದೆ ಅನಾರೋಗ್ಯದಿಂದ ಮೃತಪಟ್ಟರೂ ವಿದೇಶದಲ್ಲಿ ನೆಲೆಸಿರುವ ಮಕ್ಕಳು ಅಂತ್ಯಕ್ರಿಯೆಗೆ ಬಾರದೆ ಕೊನೆಗೆ ಪೊಲೀಸರೇ ವೃದ್ಧನ ಅಂತ್ಯಕ್ರಿಯೆ ನೆರವೇರಿಸಿ ಮಾನವೀಯತೆ ಮರೆದಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಚಿಕ್ಕೋಡಿ (Chikkodi) ತಾಲೂಕಿನ ನಾಗರಮುನ್ನೋಳಿ (Nagaramunnoli) ಗ್ರಾಮದಲ್ಲಿ ನಡೆದಿದೆ.

    ಮಹಾರಾಷ್ಟ್ರದ ಪುಣೆ ಮೂಲದ ಮೂಲಚಂದ್ರ ಶರ್ಮಾ (72) ಮೃತ ವೃದ್ಧ. ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ ಮೂಲಚಂದ್ರ ಶರ್ಮಾರನ್ನು ವ್ಯಕ್ತಿಯೊಬ್ಬರು ನಾಗರಮುನ್ನೋಳಿ ಕುಂಬಾರ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕೆರೆತಂದಿದ್ದರು. ಆಸ್ಪತ್ರೆಯ ಹತ್ತಿರದಲ್ಲಿದ್ದ ಶಿವನೇರಿ ಲಾಡ್ಜ್‌ನಲ್ಲಿ ವೃದ್ಧನನ್ನು ಇರಿಸಿ, ಗುತ್ತಿಗೆ ಆಧಾರದಲ್ಲಿ ಮೂಲಚಂದ್ರ ಶರ್ಮಾರನ್ನು ಆರೈಕೆ ಮಾಡುತ್ತಿದ್ದರು. ತನ್ನ ಗುತ್ತಿಗೆ ವಾಯಿದೆ ಮುಗಿದ ಬಳಿಕ ವ್ಯಕ್ತಿ ವೃದ್ಧನನ್ನು ಲಾಡ್ಜ್‌ನಲ್ಲಿಯೇ ಬಿಟ್ಟು ತೆರಳಿದ್ದ.

    ಬಳಿಕ ಲಾಡ್ಜ್ ಮ್ಯಾನೇಜರ್ ವೃದ್ಧನ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಬಂದು ವೃದ್ಧನನ್ನು ವಿಚಾರಿಸಿದಾಗ ತಾನು ನಿವೃತ್ತ ಬ್ಯಾಂಕ್ ಮ್ಯಾನೆಜರ್, ತನ್ನ ಮಗ ದಕ್ಷಿಣ ಆಫ್ರಿಕಾ ಹಾಗೂ ಮಗಳು ಕೆನಡಾದಲ್ಲಿ ಉತ್ತಮ ಹುದ್ದೆಯಲ್ಲಿದ್ದಾರೆ ಎಂದು ಮೂಲಚಂದ್ರ ಶರ್ಮಾ ತಿಳಿಸಿದ್ದಾರೆ. ಬಳಿಕ ವಿದೇಶದಲ್ಲಿರುವ ವೃದ್ಧನ ಮಕ್ಕಳ ಫೋನ್ ನಂಬರ್ ಪಡೆದು ಪೊಲೀಸರು ನಿರಂತರವಾಗಿ ಸಂಪರ್ಕಕ್ಕೆ ಪ್ರಯತ್ನಿಸಿದ್ದಾರೆ. ಆದರೆ ಪೊಲೀಸರ ಕರೆಗೆ ಅವರಿಬ್ಬರೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದನ್ನೂ ಓದಿ: ಪಾಲಿಕೆ ಸದಸ್ಯನಿಂದ ಸ್ನೇಹಿತನಿಗೆ ಜೀವ ಬೆದರಿಕೆ – ಆತ್ಮಹತ್ಯೆಗೆ ಯತ್ನ

    ಬಳಿಕ ಮೂಲಚಂದ್ರ ಶರ್ಮಾರನ್ನು ಪೊಲೀಸರು ಚಿಕ್ಕೋಡಿ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದರು. ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿತ್ತು. 2 ದಿನಗಳ ಹಿಂದೆ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೂಲಚಂದ್ರ ಶರ್ಮಾ ಸಾವನ್ನಪ್ಪಿದ್ದಾರೆ. ಈ ವಿಷಯ ತಿಳಿಸಲು ವಿದೇಶದಲ್ಲಿರುವ ಅವರ ಮಗಳಿಗೆ ಕರೆ ಮಾಡಿದಾಗ ನಮಗೂ ಅವರಿಗೂ ಸಂಬಂಧ ಇಲ್ಲ ಎಂದು ಹೇಳಿ ಕರೆಯನ್ನು ಕಟ್ ಮಾಡಿದ್ದಾರೆ.

    ಇದಾದ ಬಳಿಕ ಮರಣೋತ್ತರ ಪರೀಕ್ಷೆ ಮಾಡಿ ಚಿಕ್ಕೋಡಿ ಪೊಲೀಸರೇ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಚಿಕ್ಕೋಡಿ ಪಿಎಸ್‌ಐ ಬಸಗೌಡ ನೇರ್ಲಿ, ನಾಗರಮುನ್ನೋಳಿ ಗ್ರಾ.ಪಂ. ಸಿಬ್ಬಂದಿ ಸಮ್ಮುಖದಲ್ಲಿ ಅಂತ್ಯಕ್ರಿಯೆ ನಡೆದಿದೆ. ಪೊಲೀಸರ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಅಂತ್ಯಕ್ರಿಯೆ ಬಾರದ ಮಕ್ಕಳಿಗೆ ಹಿಡಿಶಾಪ ಹಾಕಿದ್ದಾರೆ. ಇದನ್ನೂ ಓದಿ: ಪಲಾವ್‍ನಲ್ಲಿ ವಿಷ ಬೆರೆಸಿ ತಂದೆ-ತಾಯಿಯ ಕೊಲೆಗೈದ ಪಾಪಿ ಪುತ್ರ!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಾಯಿ ಬೊಗಳಿದ್ದಕ್ಕೆ ವೃದ್ಧನಿಗೆ ಚಾಕು ಇರಿತ – ಆರೋಪಿ ಬಂಧನ

    ನಾಯಿ ಬೊಗಳಿದ್ದಕ್ಕೆ ವೃದ್ಧನಿಗೆ ಚಾಕು ಇರಿತ – ಆರೋಪಿ ಬಂಧನ

    ಬೆಂಗಳೂರು: ನಾಯಿಯೊಂದು (Dog) ಬೊಗಳಿದ್ದಕ್ಕೆ ಅದನ್ನು ವೃದ್ಧನೊಬ್ಬ (Old Man) ಛೂ ಬಿಟ್ಟಿದ್ದಾನೆ ಎಂಬ ಶಂಕೆಯಿಂದ ವ್ಯಕ್ತಿಯೊಬ್ಬ ಚಾಕು ಇರಿದಿರುವ ಘಟನೆ ಮಲ್ಲೇಶ್ವರಂನಲ್ಲಿ (Malleshwara) ನಡೆದಿದೆ.

    ಆರೋಪಿ ರಾಜು ವೃದ್ಧ ಬಾಲಸುಬ್ರಹ್ಮಣ್ಯ ಎಂಬವರಿಗೆ ಚಾಕು ಇರಿದಿದ್ದಾನೆ. ರಾಜು ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ನಾಯಿಯೊಂದು ಬೊಗಳಿತ್ತು. ಈ ನಾಯಿಯನ್ನು ವೃದ್ಧನೇ ಬಿಟ್ಟಿದ್ದಾನೆಂದು ಕೋಪಗೊಂಡ ರಾಜು ಚಾಕು ಇರಿದಿದ್ದಾನೆ. ಇದನ್ನೂ ಓದಿ: ಪಲಾವ್‍ನಲ್ಲಿ ವಿಷ ಬೆರೆಸಿ ತಂದೆ-ತಾಯಿಯ ಕೊಲೆಗೈದ ಪಾಪಿ ಪುತ್ರ!

    ಘಟನೆ ಬಗ್ಗೆ ಮಲ್ಲೇಶ್ವರಂ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದು, ವೃದ್ಧನಿಗೆ ಚಾಕು ಇರಿದ ಆರೋಪಿ ರಾಜುನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಮುಸ್ಲಿಂ ಕುಟುಂಬದ ಯಜಮಾನನ ಕನಸಲ್ಲಿ ದೇವಿ- ದರ್ಗಾ ಪಕ್ಕದಲ್ಲೇ ದೇಗುಲ ನಿರ್ಮಿಸಿ, ಪೂಜೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮದುವೆಯಾಗೋದಾಗಿ ನಂಬಿಸಿ ಮೋಸ ಮಾಡಿದ್ದಾನೆ: 72ರ ಅಜ್ಜನ ವಿರುದ್ಧ 63ರ ಅಜ್ಜಿ ದೂರು

    ಮದುವೆಯಾಗೋದಾಗಿ ನಂಬಿಸಿ ಮೋಸ ಮಾಡಿದ್ದಾನೆ: 72ರ ಅಜ್ಜನ ವಿರುದ್ಧ 63ರ ಅಜ್ಜಿ ದೂರು

    ಬೆಂಗಳೂರು: ಮದುವೆ ಆಗೋದಾಗಿ ನಂಬಿಸಿ 72 ವರ್ಷದ ವೃದ್ಧ (Old Man) ಮೋಸ (Cheat) ಮಾಡಿದ್ದಾನೆ ಎಂದು 63 ವರ್ಷದ ವೃದ್ಧೆ (Old Woman) ಪೊಲೀಸ್ ಠಾಣೆಗೆ ದೂರು ನೀಡಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ.

    ದಯಾಮಣಿ (63) ಎಂಬ ವೃದ್ಧೆ ಲೋಕನಾಥ್ (72) ಎಂಬ ವೃದ್ಧನ ವಿರುದ್ಧ ಬೆಂಗಳೂರಿನ ಪೂರ್ವ ವಿಭಾಗ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ಹಲಸೂರು ನಿವಾಸಿಯಾದ ದಯಾಮಣಿಗೆ ಮದುವೆ ಆಗಿ ಗಂಡ ಮರಣ ಹೊಂದಿದ್ದರು. ಲೋಕನಾಥ್ ಪತ್ನಿ ಕೂಡ ಮರಣ ಹೊಂದಿದ್ದು, ಮಗನಿಗೆ ಮದುವೆ ಮಾಡಿಸುವ ಸಲುವಾಗಿ ಹೆಣ್ಣು ನೋಡುತ್ತಿದ್ದರು. ಈ ವೇಳೆ ದಯಾಮಣಿ ಹೆಣ್ಣು ತೋರಿಸುವುದಾಗಿ ಲೋಕನಾಥ್‌ಗೆ ಪರಿಚಯವಾಗಿದ್ದು, ಪರಿಚಯ ಪ್ರೀತಿಗೆ (Love) ತಿರುಗಿ ಮದುವೆ ಆಗುವ ನಿರ್ಧಾರಕ್ಕೆ ಬಂದಿದ್ದರು. ಇದನ್ನೂ ಓದಿ: ಸಾವಿನಲ್ಲೂ ಒಂದಾದ ಸ್ನೇಹಿತರು

    ಇದೇ ಖುಷಿಯಲ್ಲಿ ಇಬ್ಬರೂ ಕರ್ನಾಟಕದ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಟ್ರಿಪ್ ಕೂಡ ಹೋಗಿದ್ದರು. ಆದರೆ ಇತ್ತೀಚಿಗೆ ಲೋಕನಾಥ್, ದಯಾಮಣಿಯನ್ನು ದೂರ ಮಾಡಲು ಶುರು ಮಾಡಿದ್ದರು. ಇದರಿಂದ ನೊಂದ ದಯಾಮಣಿ ಲೋಕನಾಥ್‌ಗೆ ಫೋನ್ ಮಾಡಿ ಕೇಳಿದ ವೇಳೆ ಮದುವೆ ಆಗೋಕೆ ಆಗಲ್ಲ. ಅದೇನ್ ಮಾಡ್ಕೋತಿಯಾ ಮಾಡ್ಕೋ ಎಂದು ಹೇಳಿ ಫೋನ್ ಕಟ್ ಮಾಡಿದ್ದಾನೆ. ಇದರಿಂದ ಬೇಸತ್ತ ದಯಾಮಣಿ ನನಗೆ ನ್ಯಾಯ ಕೊಡಿಸಿ ಎಂದು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ಅಮೆರಿಕದಲ್ಲಿ ದಾವಣಗೆರೆ ದಂಪತಿ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್- ಪತ್ನಿ, ಮಗುವಿಗೆ ಗುಂಡು ಹಾರಿಸಿ ತಾನು ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವೃದ್ಧೆಯನ್ನು ಛತ್ರಿಯಿಂದ ಹೊಡೆದು ಕೊಂದ ವೃದ್ಧ!

    ವೃದ್ಧೆಯನ್ನು ಛತ್ರಿಯಿಂದ ಹೊಡೆದು ಕೊಂದ ವೃದ್ಧ!

    ಜೈಪುರ: ರಾಜಸ್ಥಾನದ ಉದಯಪುರದಲ್ಲಿ (Rajasthan’s Udaipur) 60 ವರ್ಷದ ವ್ಯಕ್ತಿಯೊಬ್ಬ 85 ವರ್ಷದ ವೃದ್ಧೆಯ ಮೇಲೆ ಛತ್ರಿಯಿಂದ ಮನಬಂದಂತೆ ಹಲ್ಲೆಗೈದು ಹತ್ಯೆ ಮಾಡಿರುವ ಆಘಾತಕಾರಿ ವೀಡಿಯೋವೊಂದು ವೈರಲ್ ಆಗಿದೆ.

    ಮೃತ ವೃದ್ಧೆಯನ್ನು ಕಲ್ಕಿ ಬಾಯಿ ಗಮೆತಿ ಎಂದು ಗುರುತಿಸಲಾಗಿದೆ. ವೃದ್ಧನು ವೃದ್ಧೆಯ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ಅಲ್ಲಿಯೇ ಇದ್ದ ಜನ ತಮ್ಮ ಮೊಬೈಲ್‍ನಲ್ಲಿ ಸೆರೆಹಿಡಿದಿದ್ದಾರೆ. ಇದೀಗ ಈ ವೀಡಿಯೋ ವೈರಲ್ (Viral Video) ಆಗುತ್ತಿದೆ. ಇಬ್ಬರು ಅಪ್ರಾಪ್ತರು ವೀಡಿಯೋ ಮಾಡಿವುದರಲ್ಲಿ ಬ್ಯುಸಿಯಗಿದ್ದರೇ ಹೊರತು ವೃದ್ಧೆಯನ್ನು ಉಳಿಸಲು ಪ್ರಯತ್ನ ಮಾಡಲಿಲ್ಲ. ಈ ಹಿನ್ನೆಲೆಯಲ್ಲಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

    ಕುಡಿದ ಮತ್ತಿನಲ್ಲಿ ವೃದ್ಧ ಆರೋಪಿ ಪ್ರತಾಪ್ ಸಿಂಹ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ವೃದ್ಧೆಯ ಮೇಲೆ ಹಲ್ಲೆ ಮಾಡುವಾಗ ತಡೆಯಲು ಓರ್ವ ವ್ಯಕ್ತಿ ಯತ್ನಿಸಿದ್ದಾರೆ. ಆದರೆ ಸಿಂಗ್ ವ್ಯಕ್ತಿಯ ಮಾತನ್ನು ಕೇಳಿಸಿಕೊಳ್ಳದೇ ಛತ್ರಿಯಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾನೆ. ಇದನ್ನೂ ಓದಿ: ವಿರೋಧದ ನಡುವೆ ಅಂತರ್ಜಾತಿ ವಿವಾಹ- ಠಾಣೆ ಮೆಟ್ಟಿಲೇರಿದ ಜೋಡಿ

    ವೀಡಿಯೋದಲ್ಲೇನಿದೆ..?: ಕಂಠಪೂರ್ತಿ ಕುಡಿದಿದ್ದ ಆರೋಪಿಯು ಮಹಿಳೆ ಪಕ್ಕದಲ್ಲಿ ಕುಳಿತುಕೊಂಡು ತಾನು ಶಿವನ ಅನುಯಾಯಿಯಾಗಿದ್ದು, ಅವನು ನನ್ನನ್ನು ನಿನ್ನ ಬಳಿ ಕಳುಹಿಸಿದ್ದಾನೆ ಎಂದು ಹೇಳುವುದನ್ನು ಕಾಣಬಹುದಾಗಿದೆ. ಅಲ್ಲದೆ ನೀನು ಮಹಾರಾಣಿ ಎಂದು ಹೇಳುತ್ತಾನೆ. ಬಳಿಕ ಇದ್ದಕ್ಕಿದ್ದಂತೆ ಆಕೆಯ ಎದೆಯ ಮೇಲೆ ಛತ್ರಿಯಂದ ಹೊಡೆಯುತ್ತಾನೆ. ಈ ವೇಳೆ ವೃದ್ಧೆ ನೆಲದ ಮೇಲೆ ಬೀಳುತ್ತಾಳೆ. ಆಗ ಆರೋಪಿ ಆಕೆಯ ಕೂದಲನ್ನು ಹಿಡಿದು ಎಳೆದುಕೊಂಡು ಹೋಗುತ್ತಾನೆ.

    ದೂರದ, ಗುಡ್ಡಗಾಡು, ಬುಡಕಟ್ಟು ಪ್ರಾಬಲ್ಯದ ಪ್ರದೇಶವಾದ ಉದಯಪುರದ ಗೋಗುಂಡಾ ತಹಸಿಲ್‍ನಲ್ಲಿ ಈ ಪ್ರಕರಣ ನಡೆದಿದೆ. ವೃದ್ಧೆ ಒಬ್ಬರ ಮನೆಗೆ ಹೋಗುತ್ತಿದ್ದರು. ಆಗ ಪ್ರತಾಪ್ ಸಿಂಹ ಆಕೆಯನ್ನು ಭೇಟಿಯಾಗಿದ್ದಾನೆ. ಘಟನೆಯ ಸಂದರ್ಭದಲ್ಲಿ ಮತ್ತೊಬ್ಬ ವ್ಯಕ್ತಿ ಸ್ಥಳದಲ್ಲಿದ್ದರು ಎಂದು ಉದಯಪುರ ಪೊಲೀಸ್ ವರಿಷ್ಠಾಧಿಕಾರಿ ಭುವನ್ ಭೂಷಣ್ ತಿಳಿಸಿದ್ದಾರೆ.

    ಮಾಟಗಾತಿ ಎಂಬ ಶಂಕೆಯಿಂದ ಪ್ರತಾಪ್ ಸಿಂಹ ಆಕೆಯನ್ನು ಕೊಂದಿದ್ದಾನೆ ಎಂಬ ವದಂತಿ ಹಬ್ಬಿದ್ದು, ಆದರೆ ಇದನ್ನು ಪೊಲೀಸರು ತಳ್ಳಿಹಾಕಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 81ರ ಇಳಿ ವಯಸ್ಸಿನಲ್ಲೂ ಇಂಗ್ಲಿಷ್ ಎಂಎ ಪರೀಕ್ಷೆ ಬರೆದು ಯುವಕರಿಗೆ ಸ್ಫೂರ್ತಿಯಾದ ವೃದ್ಧ

    81ರ ಇಳಿ ವಯಸ್ಸಿನಲ್ಲೂ ಇಂಗ್ಲಿಷ್ ಎಂಎ ಪರೀಕ್ಷೆ ಬರೆದು ಯುವಕರಿಗೆ ಸ್ಫೂರ್ತಿಯಾದ ವೃದ್ಧ

    ವಿಜಯಪುರ: ಕಲಿಕೆಗೆ ವಯಸ್ಸು ಎಂಬುವುದಿಲ್ಲ. ದೇಹಕ್ಕೆ ವಯಸ್ಸಾಗಬಹುದೇ ಹೊರತು ಕಲಿಕಾಸಕ್ತಿಗೆ ಇಲ್ಲ ಎಂಬುದನ್ನು ವಿಜಯಪುರದ (Vijayapura) 81 ವರ್ಷದ ಹಿರಿಯ ನಾಗರಿಕರೊಬ್ಬರು ಪರೀಕ್ಷೆ ಬರೆಯುವ ಮೂಲಕ ತೋರಿಸಿ ಕೊಟ್ಟಿದ್ದಾರೆ.

    ನಗರದ ಪ್ರತಿಷ್ಠಿತ ಬಿಎಲ್‌ಡಿಇ (BLDE) ಸಂಸ್ಥೆಯ ನರ್ಸಿಂಗ್ ಕಾಲೇಜಿನಲ್ಲಿ ನಡೆಯುತ್ತಿರುವ ಇಗ್ನೋ (ಇಂದಿರಾ ಗಾಂಧಿ ಮುಕ್ತ ವಿಶ್ವವಿದ್ಯಾಲಯ) ಪರೀಕ್ಷೆಯಲ್ಲಿ ಎಂಎ ಇಂಗ್ಲಿಷ್ (MA English) ಅಂತಿಮ ವರ್ಷದ ಪರೀಕ್ಷೆ ಬರೆಯುವ ಮೂಲಕ ನಿಂಗಯ್ಯ ಒಡೆಯರ ಎಲ್ಲರ ಗಮನ ಸೆಳೆದಿದ್ದಾರೆ. ನಿಂಗಯ್ಯ ಒಡೆಯರ ಅವರ 5ನೇ ಸ್ನಾತಕೋತ್ತರ ಪರೀಕ್ಷೆ ಇದಾಗಿದ್ದು, ಅವರಲ್ಲಿ ಓದಿನ ಬಗ್ಗೆ ಇರುವ ಹಂಬಲ ಮತ್ತು ಇಚ್ಛಾಶಕ್ತಿ, ವಿದ್ಯಾಭ್ಯಾಸವನ್ನು ಅರ್ಧಕ್ಕೆ ಮೊಟಕುಗೊಳಿಸುವವರಿಗೆ ಮಾದರಿಯಾಗಿದೆ. ಇದನ್ನೂ ಓದಿ: ಕರೆಂಟ್ ಬಿಲ್ ಏರಿಕೆಯ ಬೆನ್ನಲ್ಲೇ ಸದ್ದಿಲ್ಲದೆ ಮದ್ಯ ಬೆಲೆ ಏರಿಕೆ ಮಾಡಿದ ಅಬಕಾರಿ ಇಲಾಖೆ

    ಬಾಗಲಕೋಟೆ (Bagalkote) ಜಿಲ್ಲೆಯ ಇಳಕಲ್ (Ilkal) ತಾಲೂಕಿನ ಗುಡೂರು ಬಳಿಯ ಎಸ್‌ಸಿ ಹಳ್ಳಿಯವರಾಗಿರುವ ನಿಂಗಯ್ಯ ಒಡೆಯರ ಅವರಿಗೆ ಇಬ್ಬರು ಗಂಡು ಮತ್ತು ಓರ್ವ ಹೆಣ್ಣು ಮಗಳಿದ್ದಾಳೆ. ಅಲ್ಲದೇ ಐದು ಜನ ಮೊಮ್ಮಕ್ಕಳಿದ್ದಾರೆ. ಆದರೆ ಇವರ ವಿದ್ಯಾರ್ಜನೆಗೆ ಯಾವುದೂ ಅಡ್ಡಿಯಾಗಿಲ್ಲ. ಇವರ ಮಗಳು ಕೂಡ ಪಿಎಚ್‌ಡಿ (PhD) ಪದವಿ ಪಡೆದಿದ್ದಾರೆ. ಇನ್ನು ಗಂಡು ಮಕ್ಕಳು ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಇದನ್ನೂ ಓದಿ: ಒಡಿಶಾ ರೈಲು ಅಪಘಾತದಲ್ಲಿ ಬದುಕುಳಿದ ಯಾತ್ರಿಕ ಹೃದಯಾಘಾತದಿಂದ ಸಾವು

    ಸರ್ಕಾರಿ ನೌಕರಿಯಲ್ಲಿದ್ದ ಇವರು ಸೇವಾ ನಿವೃತ್ತಿಯ ನಂತರ ಮತ್ತಷ್ಟು ಕಲಿಯಬೇಕು ಎಂಬ ಹಂಬಲದಿಂದ ಈಗಾಗಲೇ ಕನ್ನಡ, ಹಿಂದಿ ಮತ್ತು ಇಂಗ್ಲಿಷ್ ವಿಷಯಗಳಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅಲ್ಲದೇ ಇಗ್ನೋದಿಂದ (IGNOU) ಸಮಾಜಶಾಸ್ತ್ರ ಸ್ನಾತಕೋತ್ತರ ಪದವಿಯನ್ನೂ ಇವರು ಪಡೆದಿದ್ದಾರೆ. ಆದರೂ ಇವರಿಗೆ ಓದುವ ಮತ್ತು ಪರೀಕ್ಷೆ ಬರೆಯುವ ಹವ್ಯಾಸ ಮಾತ್ರ ಕಡಿಮೆಯಾಗದಿರುವುದು ಗಮನಾರ್ಹವಾಗಿದೆ. ಇದನ್ನೂ ಓದಿ: ಇಲಿ ಕೊಲ್ಲಲೆಂದು ವಿಷ ಸವರಿ ಇಟ್ಟ ಹಣ್ಣು ತಿಂದು ಯುವತಿ ಸಾವು!

    ತಮ್ಮ ಈ ಸಾಧನೆಗೆ ತಮ್ಮ ಧರ್ಮ ಪತ್ನಿ ಕಾರಣ ಎಂದು ಸಂತಸದಿಂದ ಹೇಳುವ ನಿಂಗಯ್ಯ ಒಡೆಯರ, 81ರ ಇಳಿ ವಯಸ್ಸಿನಲ್ಲಿಯೂ ಯೋಗಪಟುವಾಗಿದ್ದಾರೆ. ವಿಶಿಷ್ಠವಾದ ಸಾಹಸಗಳನ್ನ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಇದೀಗ ನಡೆಯುತ್ತಿರುವ ಸ್ನಾತಕೋತ್ತರ ಪರೀಕ್ಷೆಯಲ್ಲಿ ನಿಂಗಯ್ಯ ಒಡೆಯರ ಎಲ್ಲರ ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದು, ಪರೀಕ್ಷೆಗೆ ಹಾಜರಾಗುತ್ತಿರುವ ಇತರ ಅಭ್ಯರ್ಥಿಗಳಿಗೆ ಸ್ಪೂರ್ತಿಯಾಗಿದ್ದಾರೆ ಎಂದು ಇಗ್ನೋ ಅಧ್ಯಯನ ಕೇಂದ್ರದ ಸಂಯೋಜಕ ಡಾ. ನಿಂಗನಗೌಡ ಪಾಟೀಲ್ ಹೇಳಿದ್ದಾರೆ. ಇದನ್ನೂ ಓದಿ: ಕರಾವಳಿಯಿಂದ 640 ಕಿ.ಮೀ ದೂರದಲ್ಲಿರೋ ಬಿಪರ್ಜೋಯ್ ಚಂಡಮಾರುತ – ಕರ್ನಾಟಕ ಸೇರಿ 3 ರಾಜ್ಯಗಳಿಗೆ ಅಲರ್ಟ್

    ನಿಂಗಯ್ಯ ಒಡೆಯರ ಅವರ ಈ ಹುಮ್ಮಸ್ಸಿನ ಬಗ್ಗೆ ಇಗ್ನೋ ಪ್ರಾಂತ ನಿರ್ದೇಶಕ ಡಾ.ಎ.ವರದರಾಜನ್, ಸಹಾಯಕ ನಿರ್ದೇಶಕ ಡಾ.ಬಿ.ಎನ್.ದೇವೇಂದ್ರ, ಬಿ.ಎಲ್.ಡಿ.ಇ ನರ್ಸಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ಶಾಲ್ಮೊನ್ ಚೋಪಡೆ, ಇಗ್ನೋ ಸಹ ಸಂಯೋಜಕ ಡಾ. ಸತೀಶ್ ನಡಗಡ್ಡಿ ಸಂತಸ ವ್ಯಕ್ತಪಡಿಸಿದ್ದು, ಅಭಿನಂದನೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಬಳ್ಳಾರಿಯಲ್ಲಿ ಆರಂಭವಾಯ್ತಾ ದ್ವೇಷ ರಾಜಕಾರಣ?- ಪರೋಕ್ಷವಾಗಿ ಶ್ರೀರಾಮುಲುಗೆ ಎಚ್ಚರಿಕೆ ಕೊಟ್ಟ ಸಚಿವ ನಾಗೇಂದ್ರ