ಬೆಂಗಳೂರು: ವೃದ್ಧಾಶ್ರಮಕ್ಕೆ (Old Age Home) ಸೇರಿಸಿದ್ದಕ್ಕೆ ಮನನೊಂದು ವೃದ್ಧ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ (Bengaluru) ಜೆಪಿ ನಗರದಲ್ಲಿ (JP Nagar) ನಡೆದಿದೆ.
ನಗರದ ಎಂಟನೇ ಹಂತದ ವೃದ್ಧಾಶ್ರಮದಲ್ಲಿ ಘಟನೆ ನಡೆದಿದೆ. ಕೃಷ್ಣಮೂರ್ತಿ (81), ರಾಧ (74) ಆತ್ಮಹತ್ಯೆಗೆ ಶರಣಾದ ದಂಪತಿ. ಮನೆಯಲ್ಲಿ ಸೊಸೆ ಮಾಡಿದ ಅಡುಗೆ ಚೆನ್ನಾಗಿರಲ್ಲ ಎಂಬ ವಿಚಾರಕ್ಕೆ ಗಲಾಟೆ ನಡೆಯುತ್ತಿತ್ತು. ಈ ಹಿನ್ನೆಲೆ ವಯಸ್ಸಾದ ತಂದೆ ತಾಯಿಯನ್ನು ಮಗ ಕಳೆದ ತಿಂಗಳು ವೃದ್ಧಾಶ್ರಮಕ್ಕೆ ಸೇರಿಸಿದ್ದ. ಇದರಿಂದ ನೊಂದ ವೃದ್ಧ ದಂಪತಿ ಸೋಮವಾರ ರಾತ್ರಿ ವೃದ್ಧಾಶ್ರಮದಲ್ಲಿ ನೇಣಿಗೆ ಶರಣಾಗಿದ್ದಾರೆ. ಇದನ್ನೂ ಓದಿ: ಮಾವು ಬೆಳೆಗೆ ಬೆಂಬಲ ಬೆಲೆ ಕೊಡಿಸಿದ್ದು ಕುಮಾರಣ್ಣ, ಡಿಕೆ ಬ್ರದರ್ಸ್ ಏನ್ಮಾಡ್ತಿದ್ದಾರೆ: ನಿಖಿಲ್ ಕಿಡಿ
ರಾಯಚೂರು: ಕಳೆದ ನಾಲ್ಕು ತಿಂಗಳಿಂದ ಸಂಧ್ಯಾ ಸುರಕ್ಷಾ ಯೋಜನೆಯ ಪಿಂಚಣಿ (Pension) ಹಣ ಬಾರದೆ ಜಿಲ್ಲೆಯ ವೃದ್ಧ ದಂಪತಿ ಪರದಾಟ ನಡೆಸಿದ್ದಾರೆ.
ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪಟ್ಟಣ ನಿವಾಸಿಗಳಾದ 75 ವರ್ಷದ ಬಸಮ್ಮ ಕರಿಯಪ್ಪ ಅವರಿಗೆ ಪಿಂಚಣಿ ಸಮಸ್ಯೆ ಎದುರಾಗಿದ್ದು, ನಾಲ್ಕು ತಿಂಗಳಿಂದ ಕಚೇರಿಯಿಂದ ಕಚೇರಿಗೆ ಅಲೆದಾಡುತ್ತಿದ್ದಾರೆ. ಇಳಿವಯಸ್ಸಿನ ದಂಪತಿ ತಮ್ಮ ಔಷಧಿ ಖರ್ಚಿಗೂ ಹಣವಿಲ್ಲದೆ ಪರದಾಡುತ್ತಿದ್ದಾರೆ.ಇದನ್ನೂ ಓದಿ: BBK 11: ಕೊಟ್ಟ ಮಾತಿನಂತೆ ಹನುಮಂತನಿಗೆ ಗಿಫ್ಟ್ ಕಳುಹಿಸಿದ ಕಿಚ್ಚ
ಆಧಾರ್ ಕಾರ್ಡ್ (Aadhar Card) ಹಾಗೂ ತಾಂತ್ರಿಕ ಸಮಸ್ಯೆ ಕಾರಣಕ್ಕೆ ನಾಲ್ಕು ತಿಂಗಳಿಂದ ವೃದ್ಧೆ ಬಸಮ್ಮ ಅವರಿಗೆ ಪಿಂಚಣಿ ಹಣ ಬಂದಿಲ್ಲ. ಹೀಗಾಗಿ ಜಿಲ್ಲಾಧಿಕಾರಿ ಕಚೇರಿಗೆ ಬಂದು ತಮ್ಮ ಅಳಲು ತೋಡಿಕೊಂಡಿದ್ದಾರೆ. ಕವಿತಾಳ ಪಟ್ಟಣ ಪಂಚಾಯಿತಿಯಲ್ಲಿ ಸರಿಯಾದ ಪ್ರತಿಕ್ರಿಯೆ ಸಿಗದೇ ಜಿಲ್ಲಾಧಿಕಾರಿ ಕಚೇರಿಗೆ ಬಂದು ದೂರು ನೀಡಿದ್ದಾರೆ. ಸಂಧ್ಯಾ ಸುರಕ್ಷಾ ಪಿಂಚಣಿ ಯೋಜನೆಯಡಿ ಪ್ರತಿ ತಿಂಗಳು ಬರುವ 1,200 ರೂ. ಕೊಡಿಸುವಂತೆ ಮನವಿ ಮಾಡಿದ್ದಾರೆ.
ಒಂದೇ ಪಟ್ಟಣದ ಒಂದೇ ಹೆಸರಿನ ಇನ್ನೋರ್ವ ವೃದ್ಧೆಗೆ ಇವರ ಪಿಂಚಣಿ ಹಣ ಹೋಗುತ್ತಿರುವುದಾಗಿ ಆರೋಪಿಸಿದ್ದಾರೆ. ಅದೇ ಪಟ್ಟಣದ ಬಸಮ್ಮ ಕರಿಯಪ್ಪ ಎಂಬ ಹೆಸರಿರುವ ಇನ್ನೋರ್ವ ವೃದ್ಧೆಯ ಖಾತೆಗೆ ಇವರ ಆಧಾರ್ ಕಾರ್ಡ್ ಲಿಂಕಾಗಿದೆ. ಹಾಗಾಗಿ ಹಣ ಬರುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ. ಕಂಪ್ಯೂಟರ್ ಆಪರೇಟರ್ ಯಡವಟ್ಟಿನಿಂದ ಕಚೇರಿಯಿಂದ ಕಚೇರಿಗೆ ಅಲೆದಾಡುತ್ತಿದ್ದು ಔಷಧಿ, ಮನೆ ಖರ್ಚಿಗೆ ಹಣವಿಲ್ಲದೆ ಪರದಾಡುತ್ತಿದ್ದಾರೆ. ಪಿಂಚಣಿ ಹಣ ಖಾತೆಗೆ ಕೂಡಲೇ ಜಮಾ ಮಾಡುವಂತೆ ಆಗ್ರಹಿಸಿದ್ದಾರೆ.ಇದನ್ನೂ ಓದಿ: ಬಳ್ಳಾರಿ| ಶಾಲೆಯ ಪಕ್ಕದ ಹಳ್ಳದಲ್ಲಿದ್ದ ಎರಡು ಮೊಸಳೆ ಸೆರೆ
ಮೂರು ಅಂತಸ್ತಿನ ಕಟ್ಟಡದಲ್ಲಿ ಮಗ ಮೊದಲ ಮಹಡಿಯಲ್ಲಿ ವಾಸವಿದ್ದು ಎರಡು ಮಹಡಿಯಲ್ಲಿರೋ ಮನೆಗಳು ಬಾಡಿಗೆ ಕೊಡಲಾಗಿದ್ದು, ಟೆರೇಸ್ ಮೇಲೆ ಸಣ್ಣ ಮನೆಯಲ್ಲಿ ವೃದ್ಧದಂಪತಿ ವಾಸವಾಗಿರುತ್ತಾರೆ. ಬುಧವಾರ ರಾತ್ರಿ ವೃದ್ಧದಂಪತಿ ಬಟ್ಟೆಗಳಿಂದ ಮನೆಯಲ್ಲಿರೋ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಂಪತಿ ಮಗ ಅಶೋಕ್ ಮುಂಜಾನೆ 5.30 ಸುಮಾರಿಗೆ ಹೋಗಿ ಬಾಗಿಲು ಬಡಿದಾಗ ಬಾಗಿಲು ತಂದೆ ತಾಯಿ ತೆಗೆದಿಲ್ಲ. ಅನುಮಾನ ಬಂದು ಬಾಗಿಲು ಮುರಿದು ಒಳಗಡೆ ನೋಡಿದಾಗ ತಂದೆ- ತಾಯಿ ಇಬ್ಬರೂ ನೇಣು ಹಾಕಿಕೊಂಡಿರೋ ವಿಚಾರ ಬೆಳಕಿಗೆ ಬಂದಿದೆ.
ಸದ್ಯ ಘಟನೆ ಬಗ್ಗೆ ದಂಪತಿ ಮಗ ಅಶೋಕ್ ಅವರಿಂದ ಪೊಲೀಸರು ಹೇಳಿಕೆ ಪಡೆದಿದ್ದು, ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ದಂಪತಿ ಆತ್ಮಹತ್ಯೆ ವಿಚಾರದಲ್ಲಿ ಒಂದಷ್ಟು ಅನುಮಾನ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಆಸ್ತಿ ವಿಚಾರಕ್ಕೆ ವೃದ್ಧದಂಪತಿ ಹಾಗೂ ಮಗನ ನಡುವೆ ಏನಾದರೂ ವೈಷಮ್ಯ ಇತ್ತಾ ಅನ್ನೋದರ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ.
ಬೆಂಗಳೂರು: ರಾಡ್‌ನಿಂದ (Rod) ಹೊಡೆದು ಮನೆಯಲ್ಲಿದ್ದ ವೃದ್ಧ ದಂಪತಿಯನ್ನು (Old Couple) ಬರ್ಬರವಾಗಿ ಹತ್ಯೆಗೈದ ಘಟನೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆಯಲ್ಲಿ (Sulibele) ನಡೆದಿದೆ.
ರಾಮಕೃಷ್ಣಪ್ಪ (70) ಹಾಗೂ ಮುನಿರಾಮಕ್ಕ (65) ಕೊಲೆಯಾದ ದಂಪತಿ. ಇನ್ನು ಆಸ್ತಿ (Property) ವಿಚಾರವಾಗಿ ಮಗ ತಂದೆ ತಾಯಿಗೆ ರಾಡ್‌ನಿಂದ ಹೊಡೆದು ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಮಗ ನರಸಿಂಹನನ್ನು ಸೂಲಿಬೆಲೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮದುವೆಯಾದಗಲಿನಿಂದಲೂ ನರಸಿಂಹ ತಂದೆ ತಾಯಿಯನ್ನು ಬಿಟ್ಟು ಪ್ರತ್ಯೇಕವಾಗಿ ವಾಸವಾಗಿದ್ದು, ಒಬ್ಬನೇ ಮಗನಾದರೂ ತಂದೆ ತಾಯಿಯನ್ನು ಹೊರಗಿಟ್ಟಿದ್ದ. ಇದನ್ನೂ ಓದಿ: ಬೆಳಗಾವಿ ಅಧಿವೇಶನದ ಬಳಿ ಪ್ರತಿಭಟನೆಗೆ ತೆರಳುತ್ತಿದ್ದ ಬಸ್ ಅಪಘಾತ – 17 ಮಂದಿಗೆ ಗಾಯ
ವೃದ್ಧ ದಂಪತಿಗೆ ಒಟ್ಟು 5 ಜನ ಮಕ್ಕಳಿದ್ದು, ಈ ಪೈಕಿ ನಾಲ್ಕು ಮಂದಿ ಹೆಣ್ಣುಮಕ್ಕಳು ಹಾಗೂ ಒಬ್ಬ ಗಂಡು ಮಗ. ಮದುವೆಯಾದಗಿನಿಂದ ನರಸಿಂಹಮೂರ್ತಿ ಬೇರೆ ಇದ್ದು, ತನ್ನ ಎಲ್ಲಾ ಮಕ್ಕಳನ್ನು ಸಾಕಿ ವೃದ್ಧ ದಂಪತಿ ಮದುವೆ ಮಾಡಿಕೊಟ್ಟಿದ್ದರು. ಹೆಣ್ಣು ಮಕ್ಕಳಿಗೆಲ್ಲಾ ಮದುವೆ ಮಾಡಿಕೊಡಲಾಗಿದೆ, ಇನ್ನು ಯಾವುದೇ ಆಸ್ತಿಯನ್ನು ಭಾಗ ಮಾಡುವಂತಿಲ್ಲ ಎಂದು ನರಸಿಂಹಮೂರ್ತಿ ಹೇಳುತ್ತಿದ್ದ. ಅಲ್ಲದೇ ಆಸ್ತಿ ವಿಚಾರವಾಗಿ ಹಲವು ವರ್ಷಗಳಿಂದ ತಂದೆ ತಾಯಿಗೆ ಹಿಂಸೆ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ತನ್ನ ಹೆಣ್ಣು ಮಕ್ಕಳಿಗೆ ಆಸ್ತಿ ಭಾಗ ನೀಡಬೇಕು ಎಂದು ವೃದ್ಧ ದಂಪತಿ ಹೇಳುತ್ತಿದ್ದು, ಇದೇ ವಿಚಾರವಾಗಿ ಕಳೆದ ಶನಿವಾರ ಸಂಜೆ ನರಸಿಂಹಮೂರ್ತಿ ತಂದೆ ತಾಯಿ ವಾಸವಿದ್ದ ಮನೆಗೆ ಹೋಗಿದ್ದ. ಈ ವೇಳೆ ಜಗಳ ಮಾಡಿ ರಾಮಕೃಷ್ಣಪ್ಪನಿಗೆ ರಾಡ್‌ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದು, ನಂತರ ತಾಯಿಯನ್ನು ದಾರುಣವಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಪ್ರೀತಿಸುತ್ತಿದ್ದ ಯುವತಿಯೊಂದಿಗೆ ಯುವಕ ಪರಾರಿಯಾಗಿದ್ದಕ್ಕೆ ತಾಯಿಯ ವಿವಸ್ತ್ರಗೊಳಿಸಿ ಹಲ್ಲೆ
ಕೊಲೆ ಮಾಡಿ ತಲೆ ಮರೆಸಿಕೊಳ್ಳದೆ ತನಗೆ ಏನು ತಿಳಿಯದ ಹಾಗೆ ನರಸಿಂಹಮೂರ್ತಿ ಮನೆಯಲ್ಲಿಯೇ ಇದ್ದ ಎನ್ನಲಾಗಿದೆ. ಪ್ರತಿ ದಿನ ತನ್ನ ಹೆಣ್ಣುಮಕ್ಕಳಿಗೆ ವೃದ್ಧ ದಂಪತಿ ಕರೆ ಮಾಡುತ್ತಿದ್ದರು. ಆದರೆ ಶನಿವಾರದಿಂದ ಕರೆ ಮಾಡಿರಲಿಲ್ಲ. ಹೀಗಾಗಿ ಹೆಣ್ಣುಮಕ್ಕಳು ಅನುಮಾನಗೊಂಡಿದ್ದು, ಕೊನೆಯ ಮಗಳು ಶಾಕುಂತಲ ಮನೆಯ ಬಳಿ ಬಂದು ನೋಡಿದ್ದಾರೆ. ಈ ವೇಳೆ ಮನೆ ಬಾಗಿಲಿಗೆ ಬೀಗ ಹಾಕಲಾಗಿತ್ತು. ತಕ್ಷಣ ಶಾಕುಂತಲ ತನ್ನ ತಂದೆ ತಾಯಿಗೆ ಕರೆ ಮಾಡಿದ್ದು, ಇಬ್ಬರ ನಂಬರ್ ಕೂಡಾ ಸ್ವಿಚ್‌ಆಫ್ ಆಗಿತ್ತು. ಈ ಹಿನ್ನೆಲೆ ಶಾಕುಂತಲ ಆತಂಕಗೊಂಡು ಸೂಲಿಬೆಲೆಯಲ್ಲಿ ಇರುವ ತನ್ನ ಅಕ್ಕನ ಮನೆಗೆ ಹೋಗಿ ಮರಳಿ ತಂದೆ ತಾಯಿಯ ಮನೆಯ ಬಳಿ ಬಂದಿದ್ದರು. ಇದನ್ನೂ ಓದಿ: ಸ್ತ್ರೀಯರ ಮೇಲೆ ಆ್ಯಸಿಡ್ ದಾಳಿ – ದೇಶದಲ್ಲೇ ಬೆಂಗಳೂರು ನಂಬರ್ 1
ಈ ವೇಳೆ ಮನೆಯ ಹೊರಗಿನ ಬಾತ್ ರೂಂ ಬೀಗ ಯಾರೋ ತೆರೆದಿರುವುದು ಗಮನಿಸಿದ ಅವರು, ತಕ್ಷಣ ಮನೆಯ ಬಾಗಿಲನ್ನು ಒಡೆದು ಒಳಗೆ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಬಾಗಿಲ ಬಳಿಯೇ ತಂದೆಯ ಮೃತ ದೇಹ ಮತ್ತು ಅಡುಗೆ ಮನೆಯ ಬಳಿ ತಾಯಿಯ ಮೃತ ದೇಹ ನೋಡಿ ಶಾಕುಂತಲ ಶಾಕ್ ಆಗಿದ್ದು, ಸದ್ಯ ಆರೋಪಿ ನರಸಿಂಹಮೂರ್ತಿಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ (Hoskote) ತಾಲೂಕಿನ ಸೂಲಿಬೆಲೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಇದನ್ನೂ ಓದಿ: ಮಂಡ್ಯ ಬಸ್ ಹತ್ತುವಾಗ ಹಿಂಬದಿ ಚಕ್ರಕ್ಕೆ ಸಿಲುಕಿ ಮಹಿಳೆ ಸ್ಥಳದಲ್ಲೇ ಸಾವು
ಲಕ್ನೋ: ದರೋಡೆ (Robbery) ಮಾತ್ರವಲ್ಲದೇ ವೃದ್ಧ ದಂಪತಿಯ ಕೊಲೆ (Murder) ಪ್ರಕರಣದ ಮಾಸ್ಟರ್ ಮೈಂಡ್ 12 ವರ್ಷದ ಬಾಲಕ (Boy) ಸೇರಿದಂತೆ ಇನ್ನಿಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಗಾಜಿಯಾಬಾದ್‌ನಲ್ಲಿ (Ghaziabad) ನಡೆದಿದೆ.
12 ವರ್ಷದ ಬಾಲಕನೊಬ್ಬ ವೃದ್ಧ ದಂಪತಿ ಕೊಲೆಯ ಮಾಸ್ಟರ್ ಮೈಂಡ್ ಆಗಿದ್ದು, ಆತನೊಂದಿಗೆ ಇನ್ನಿಬ್ಬರನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ವರದಿಗಳ ಪ್ರಕಾರ ನವೆಂಬರ್ 22 ರಂದು ವೃದ್ಧ ದಂಪತಿಯಾದ ಇಬ್ರಾಹಿಂ ಹಾಗೂ ಪತ್ನಿ ಹಜ್ರಾ ಶವಗಳು ತಮ್ಮ ಮನೆಯಲ್ಲಿ ಪತ್ತೆಯಾಗಿತ್ತು. ಇಬ್ಬರ ಕುತ್ತಿಗೆಗೆ ಬಟ್ಟೆ ಬಿಗಿದು ಕೊಂದಿರುವುದು ಕಂಡುಬಂದಿತ್ತು. ಇದನ್ನೂ ಓದಿ: ಬಲವಂತದ ಮತಾಂತರ ಆರೋಪ – ಕ್ರಿಸ್ಮಸ್ ಆಚರಣೆ ವೇಳೆ ಗುಂಪು ದಾಳಿ
ವರದಿಗಳ ಪ್ರಕಾರ ಬಾಲಕ ವೃದ್ಧ ದಂಪತಿಗೆ ಪರಿಚಿತನಾಗಿದ್ದ. ಬಾಲಕ ಇಬ್ರಾಹಿಂ ಅವರ ಬಳಿ ಹೆಚ್ಚು ಹಣವಿದೆ ಎಂದು ಭಾವಿಸಿ, ತನ್ನೊಂದಿಗೆ ಇನ್ನೂ ಮೂವರನ್ನು ಒಟ್ಟುಗೂಡಿಸಿ ಅವರ ಮನೆಯನ್ನು ಲೂಟಿಗೆ ಯತ್ನಿಸಿದ್ದ. ಆದರೆ ದರೋಡೆ ವೇಳೆ ದಂಪತಿಯ ಕೊಲೆ ನಡೆದಿದೆ.
ಇದೀಗ ಪೊಲೀಸರು ಕೊಲೆ ಮಾಸ್ಟರ್ ಮೈಂಡ್ ಬಾಲಕನೊಂದಿಗೆ ಇನ್ನಿಬ್ಬರು ಆರೋಪಿಗಳಾದ ಮಂಜೇಶ್ ಹಾಗೂ ಶಿವಂನನ್ನು ಬಂಧಿಸಿದ್ದಾರೆ. 4ನೇ ಆರೋಪಿ ಸಂದೀಪ್ ನಾಪತ್ತೆಯಾಗಿದ್ದು, ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಆರೋಪಿಗಳಿಂದ 12 ಸಾವಿರ ರೂ. ನಗದು, 1 ಮೊಬೈಲ್ ಫೋನ್ ಹಾಗೂ ಚಿನ್ನದ ಸರವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಗಾಜಿಯಾಬಾದ್ ಇರಿಯ ಪೊಲೀಸ್ ಇರಾಜ್ ರಾಜಾ ತಿಳಿಸಿದ್ದಾರೆ. ಇದನ್ನೂ ಓದಿ: ಶೂಟಿಂಗ್ ಸೆಟ್‌ನಲ್ಲಿ ತುನೀಶಾ ಆತ್ಮಹತ್ಯೆ – ಸಹ ನಟ ಶೀಜಾನ್ ಬಂಧನ
Live Tv
[brid partner=56869869 player=32851 video=960834 autoplay=true]
ಚಿತ್ರದುರ್ಗ: ಮನೆಯಲ್ಲಿದ್ದ ಇಬ್ಬರು ವೃದ್ಧ ದಂಪತಿಯ (Elderly Couple) ಕತ್ತು ಕೊಯ್ದು ಹತ್ಯೆಗೈದಿರುವ (Murder) ಕೃತ್ಯ ಚಿತ್ರದುರ್ಗ (Chitradurga) ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿ ನಡೆದಿದೆ.
ನಗರದ ವಿನಾಯಕ ಬಡಾವಣೆಯಲ್ಲಿ ವಾಸವಾಗಿದ್ದ ವೃದ್ಧ ದಂಪತಿ ಮನೆಯಲ್ಲಿ ಇಬ್ಬರೇ ಇರುವುದನ್ನು ಖಚಿತಪಡಿಸಿಕೊಂಡ ದುಷ್ಕರ್ಮಿಗಳು ಅವರ ಕತ್ತು ಕೊಯ್ದು ಕೊಲೆ ಮಾಡಿದ್ದಾರೆ. ಮೃತರನ್ನು ಪ್ರಭಾಕರ್ ಶೆಟ್ರು (75) ವಿಜಯ ಲಕ್ಷ್ಮಿ (65) ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಘಟನೆ ನಡೆದಿದ್ದು, ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.
ವೃದ್ಧ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಚಿಕ್ಕನಾಯಕನಹಳ್ಳಿ ಹಾಗೂ ದಾವಣಗೆರೆಗೆ ಮದುವೆ ಮಾಡಿ ಕೊಟ್ಟಿದ್ದರು. ಮನೆಯಲ್ಲಿ ವೃದ್ಧ ದಂಪತಿ ಮಾತ್ರವೇ ವಾಸವಾಗಿದ್ದರು. ಹೊಸದುರ್ಗದಲ್ಲಿ ಅಡುಗೆ ಎಣ್ಣೆ ವ್ಯಾಪಾರ ಮಾಡುತ್ತಿದ್ದ ಪ್ರಭಾಕರ್ ಶೆಟ್ರು ಮೇಲಿನ ವೈಯುಕ್ತಿಕ ದ್ವೇಷದಿಂದ ಹತ್ಯೆಗೈದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ ನಿಖರ ಕಾರಣ ತಿಳಿದುಬಂದಿಲ್ಲ. ಇದನ್ನೂ ಓದಿ: ನನಗೆ ಸರ್ವಿಸ್ ಕೊಡ್ತೀರಾ, ದಿನಕ್ಕೆ 50 ಸಾವಿರ ರೂ. ಕೊಡ್ತೀನಿ – ಲೆಟರ್ ಬರೆದು ಮಹಿಳೆಗೆ ಲೈಂಗಿಕ ಕಿರುಕುಳ
ಹೆಚ್ಚಾಗುತ್ತಿರುವ ಕಳ್ಳತನ ಪ್ರಕರಣ:
ಹೊಸದುರ್ಗ ಪಟ್ಟಣದಲ್ಲಿ ಇತ್ತೀಚೆಗೆ ಕಳ್ಳತನ ಪ್ರಕರಣಗಳು ಜಾಸ್ತಿ ಆಗುತ್ತಿವೆ. ಹಗಲು ವೇಳೆ ಮನೆಗಳನ್ನು ನೋಡಿಕೊಂಡು ಪ್ಲಾನ್ ಮಾಡುವ ಕಳ್ಳರು ರಾತ್ರಿ ಸಮಯದಲ್ಲಿ ಬೀಗ ಹಾಕಿರುವ ಮನೆಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿದ್ದಾರೆ. ಒಂದು ವೇಳೆ ಅವರ ಕೃತ್ಯಕ್ಕೆ ಯಾರಾದರೂ ಅಡ್ಡಿಪಡಿಸಿದರೆ ಅಂತಹವರ ಹತ್ಯೆಗೈಯುತ್ತಾರೆ ಎಂಬ ಆತಂಕ ಇಲ್ಲಿನ ನಿವಾಸಿಗಳಲ್ಲಿದೆ. ಹೀಗಾಗಿ ಈ ಕೃತ್ಯಗಳನ್ನು ಭೇದಿಸಿ ಆರೋಪಿಗಳನ್ನು ಬಂಧಿಸಬೇಕೆಂಬ ಮನವಿ ಸ್ಥಳೀಯರಿಂದ ಕೇಳಿಬಂದಿದೆ. ಇದನ್ನೂ ಓದಿ: ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು ಮೂರು ಮಕ್ಕಳಿಗೆ ವಿಷ ಹಾಕಿ ಮಹಿಳೆ ನೇಣಿಗೆ ಶರಣು
Live Tv
[brid partner=56869869 player=32851 video=960834 autoplay=true]
ಹಾವೇರಿ: ಸಾವಿನಲ್ಲೂ ವೃದ್ಧ ದಂಪತಿ ಒಂದಾದ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಇಚ್ವಂಗಿ ಗ್ರಾಮದಲ್ಲಿ ನಡೆದಿದೆ.
ಮಂಗಳವಾರ ರಾತ್ರಿ ಪತಿ ಬಸಪ್ಪ ಕಂಬಳಿ(87) ತೀವ್ರ ಅನಾರೋಗ್ಯ ಕಾರಣದಿಂದ ನಿಧನರಾಗಿದ್ದಾರೆ. ಪತ್ನಿ ದ್ಯಾಮವ್ವ ಬಸಪ್ಪನ ಸಾವಿನ ಸುದ್ದಿ ತಿಳಿದು ಕುಸಿದು ಬಿದ್ದಿದ್ದು ಬೆಳಗಿನ ಜಾವ ಮೃತಪಟ್ಟಿದ್ದಾರೆ.
ಈ ಜೋಡಿ ಐವತ್ತೈದು ವರ್ಷಗಳ ಕಾಲ ಒಟ್ಟಿಗೆ ಜೀವನ ಕಳೆದಿದ್ದು, ಇಲ್ಲಿವರೆಗೂ ಜಗಳವಾಡದೆ ದಾಂಪತ್ಯ ಜೀವನ ನಡೆಸಿದ್ದರು. ನಾಲ್ಕು ಜನ ಮಕ್ಕಳು, ಹನ್ನೊಂದು ಜನ ಮೊಮ್ಮಕ್ಕಳನ್ನು ಈ ದಂಪತಿ ಅಗಲಿದ್ದಾರೆ. ಇದನ್ನೂ ಓದಿ: ರಾಜಪಕ್ಸೆ ಪಲಾಯನ – ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ
ದಂಪತಿಯ ಸಾವಿನ ಸುದ್ದಿ ತಿಳಿದ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಅಂತ್ಯಕ್ರಿಯೆಗೆ ಸಂಬಂಧಿಕರು ಹಾಗೂ ಗ್ರಾಮಸ್ಥರು ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ಜನರು ಭಾಗವಹಿಸಿದ್ದರು.
Live Tv
[brid partner=56869869 player=32851 video=960834 autoplay=true]
ಹುಬ್ಬಳ್ಳಿ: ಯೌವ್ವನದಲ್ಲಿ ನ್ಯಾಯಾಲಯದ ಮೂಲಕ ಬೇರೆಯಾದ ದಂಪತಿಯನ್ನು ಬೇರೊಬ್ಬರಿ 52 ವರ್ಷಗಳ ಬಳಿಕ ಮತ್ತೆ ಅದೇ ನ್ಯಾಯಾಲಯ ಒಂದು ಮಾಡಿದ ಅಪರೂಪದ ಘಟನೆ ಧಾರವಾಡ ಜಿಲ್ಲೆ ಕಲಘಟಗಿಯಲ್ಲಿ ನಡೆದಿದೆ.
ಹೀಗಾಗಿ ಪ್ರತಿ ತಿಂಗಳು ಕಲ್ಲವ್ವಳಿಗೆ ಬಸಪ್ಪ ಜೀವನಾಂಶ ನೀಡುತ್ತಿದ್ದರು. ಆದರೆ ಕೆಲ ತಿಂಗಳಿನಿಂದ ಬಸಪ್ಪ ಜೀವನಾಂಶ ಕೊಡುವುದನ್ನು ನಿಲ್ಲಿಸಿದ್ದರು. ಈ ಹಿನ್ನೆಲೆ ಪತಿ ಕಲ್ಲವ್ವ ನ್ಯಾಯಾಲಯದ ಮೊರೆ ಕೇಳಿದ್ದಾಳೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸ್ಥಳೀಯ ಹಿರಿಯ ದಿವಾನಿ ನ್ಯಾಯಾಲಯ ಇಬ್ಬರ ಆರೋಗ್ಯ ಮತ್ತು ವಯೋಮಾನದ ದೃಷ್ಟಿಯಿಂದ ರಾಜಿ ಸಂಧಾನ ಮಾಡಿಸಿ ಒಂದು ಮಾಡಿದೆ. ಈ ಸಂಧಾನಕ್ಕೆ ವಕೀಲರು ಸಹ ಸಮ್ಮತಿ ನೀಡಿ ವೃದ್ಧ ದಂಪತಿಯನ್ನು ಒಂದು ಮಾಡಿದ್ದಾರೆ. ಇದನ್ನೂ ಓದಿ: ಅಗ್ನಿಪಥ್ ಸತ್ಯಾಗ್ರಹದಲ್ಲಿ ಮೈಕ್ ಭಾಷಣಕ್ಕೆ ಬ್ರೇಕ್ ಹಾಕಿದ ಪೊಲೀಸರು
ಲಕ್ನೋ: ಯುವಕನೊಬ್ಬ ಮದ್ಯ ಖರೀದಿಸಲು ಹಣಕ್ಕಾಗಿ ನಡೆದ ಜಗಳದಲ್ಲಿ ತನ್ನ ಅಜ್ಜ, ಅಜ್ಜಿಯನ್ನು ಕೊಂದು ಎರಡು ಪ್ರತ್ಯೇಕ ಕೊಠಡಿಗಳಲ್ಲಿ ಶವಗಳನ್ನು ಬಚ್ಚಿಟ್ಟ ಘಟನೆ ಉತ್ತರಪ್ರದೇಶದ ಹಳ್ಳಿಯೊಂದರಲ್ಲಿ ನಡೆದಿದೆ.
ಹಿಮೇಶ್(20) ಆರೋಪಿ ಹಾಗೂ ಪ್ರೇಮಶಂಕರ್ (65) ಮತ್ತು ಭವಾನ್ ದೇವಿ (60) ಮೃತರು. ಈತ ದೆಹಲಿಯಲ್ಲಿ ತನ್ನ ಅಜ್ಜ-ಅಜ್ಜಿಯೊಂದಿಗೆ ವಾಸಿಸುತ್ತಿದ್ದನು. ಈತನಿಗೆ ಕುಡಿತದ ಚಟವಿತ್ತು.
ಘಟನೆ ಸಂಬಂಧಿಸಿ ವೃದ್ಧ ದಂಪತಿಯ ಮೃತದೇಹಳು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಸಂಬಂಧ ಆ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಫೈಜ್‍ಗಂಜ್ ಪೊಲೀಸ್ ಠಾಣೆಯಲ್ಲಿ ವೃದ್ಧ ದಂಪತಿಯ ಪುತ್ರ ದೂರು ನೀಡಿದ್ದಾರೆ. ಈ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ:ಪ್ರತ್ಯೇಕ ರಾಜ್ಯ ಕೇಳುವುದು ಮೂರ್ಖತನ, ಕರ್ನಾಟಕ ಅಖಂಡವಾಗಿಯೇ ಉಳಿಯಬೇಕು: ಬಸವರಾಜ ಹೊರಟ್ಟಿ