Tag: ವೆಂಕಟರಮಣ ಸ್ವಾಮಿ

  • ಶ್ರಾವಣ ಮಾಸದ ಕೊನೆಯ ವಾರ: ವೆಂಕಟರಮಣ ಸ್ವಾಮಿ ದೇವಾಲಯಕ್ಕೆ ಹರಿದು ಬಂದ ಜನ ಸಾಗರ

    ಶ್ರಾವಣ ಮಾಸದ ಕೊನೆಯ ವಾರ: ವೆಂಕಟರಮಣ ಸ್ವಾಮಿ ದೇವಾಲಯಕ್ಕೆ ಹರಿದು ಬಂದ ಜನ ಸಾಗರ

    ಕೋಲಾರ: ಹಿಂದೂ ಪಂಚಾಂಗದಲ್ಲಿ ಶ್ರಾವಣ ಮಾಸ ಶ್ರೇಷ್ಠ ಮಾಸಗಳಲ್ಲಿ ಒಂದಾಗಿದೆ. ಹಾಗಾಗಿ ಶ್ರಾವಣ ಮಾಸದ ಕೊನೆಯ ವಾರ ಶನಿವಾರದ ಹಿನ್ನೆಲೆಯಲ್ಲಿ ಜಿಲ್ಲೆಯ ಬಹುತೇಕ ದೇವಾಲಯಗಳಲ್ಲಿ ಜನರು ವಿಶೇಷ ಪೂಜೆ ಸಲ್ಲಿಸುವ ಮೂಲಕ ದೇವರ ಕೃಪೆಗೆ ಪಾತ್ರರಾಗುತ್ತಿದ್ದಾರೆ.

    ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಬಂಗಾರ ತಿರುಪತಿ ವೆಂಕಟರಮಣ ಸ್ವಾಮಿ, ಮಾಲೂರು ತಾಲೂಲಿನ ಚಿಕ್ಕತಿರುಪತಿ ಶ್ರೀ ಪ್ರಸನ್ನ ವೆಂಕಟರಮಣ ಸ್ವಾಮಿ ದೇವಾಲಯಕ್ಕೆ ಜನ ಸಾಗರವೇ ಹರಿದು ಬರುತ್ತಿದೆ.

    ಶ್ರಾವಣ ಮಾಸ ದೇವಾನು ದೇವತೆಗಳಿಗೆ ಶುಭ ಸಂದರ್ಭವಾಗಿದ್ದು, ಈ ಸಂದರ್ಭದಲ್ಲಿ 17 ನಕ್ಷತ್ರಗಳು ಒಂದೇ ರೇಖೆಯಲ್ಲಿ ಬಂದು ಮಂಗಳವಾಗುತ್ತದೆ ಎಂಬ ನಂಬಿಕೆ ಇದೆ. ವಿವಿಧ ಹಬ್ಬಗಳು ಈ ಸಂದರ್ಭದಲ್ಲಿ ಬಂದು ಎಲ್ಲಾ ಒಳಿತಾಗುತ್ತೆ ಅನ್ನೋ ನಂಬಿಕೆ ನಡೆದು ಬಂದಿದೆ. ಹಾಗಾಗಿ ಸಾವಿರಾರು ಜನರು ಕೊನೆಯ ಶನಿವಾರದ ಪ್ರಯುಕ್ತ ದೇವಾಲಯಗಳಲ್ಲಿ ವಿಶೇಷ ಪೂಜೆಗಳನ್ನ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾಗುತ್ತಿದ್ದಾರೆ.