Tag: ವೆಂಕ್ಯಾ

  • ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾದ ‘ವೆಂಕ್ಯಾ’ ಸಿನಿಮಾ

    ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾದ ‘ವೆಂಕ್ಯಾ’ ಸಿನಿಮಾ

    ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ (Goa Film Festival) ಕನ್ನಡದ ‘ವೆಂಕ್ಯಾ’ (Venkya) ಸಿನಿಮಾ ಆಯ್ಕೆಯಾಗಿದೆ. ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವು ನವೆಂಬರ್ 20ರಿಂದ 28ರ ತನಕ ನಡೆಯಲಿದೆ. ಗೋವಾದ ಪಣಜಿಯಲ್ಲಿ ನಡೆಯುವ ಚಿತ್ರೋತ್ಸವದಲ್ಲಿ ದೇಶ ವಿದೇಶದ ಕಲಾವಿದರು ಭಾಗಿಯಾಗಲಿದ್ದಾರೆ. ಜಾಗತಿಕ ಮಟ್ಟದಲ್ಲಿ ಮನ್ನಣೆ ಹೊಂದಿರುವ ಈ ಸಿನಿಮೋತ್ಸವದಲ್ಲಿ ‘ವೆಂಕ್ಯಾ’ ಪ್ರದರ್ಶನ ಕಾಣಲಿವೆ.

    ‘ಡೊಳ್ಳು’ (Dollu) ಸಿನಿಮಾ ಮೂಲಕ ನಿರ್ಮಾಣಕ್ಕಿಳಿದು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿ ಬಾಚಿಕೊಂಡಿದ್ದ ಪವನ್ ಒಡೆಯರ್ ಹಾಗೂ ಸಾಗರ್ ಪುರಾಣಿಕ್ ಕಾಂಬಿನೇಷನ್‌ನಲ್ಲಿ ‘ವೆಂಕ್ಯಾ’ ಚಿತ್ರ ಮೂಡಿ ಬಂದಿದೆ. ‘ವೆಂಕ್ಯಾ’ ಸಿನಿಮಾಗೆ ಸಾಗರ್ ಪುರಾಣಿಕ್ ನಿರ್ದೇಶನದ ಜೊತೆಗೆ ನಾಯಕನಾಗಿಯೂ ಬಣ್ಣ ಹಚ್ಚಿದ್ದಾರೆ. ಚಿತ್ರದಲ್ಲಿ ಸಾಗರ್ ಗೆ ಜೋಡಿಯಾಗಿ ಶಿಮ್ಲಾದ ರೂಪಾಲಿ ಸೂದ್ ಅಭಿನಯಿಸಿದ್ದಾರೆ.

    ಉತ್ತರ ಕರ್ನಾಟಕ ಕಥೆಯಾಧಾರಿಸಿತ ‘ವೆಂಕ್ಯಾ’ ಸಿನಿಮಾವನ್ನು ಅಪೇಕ್ಷಾ ಒಡೆಯರ್ ಮತ್ತು ಪವನ್ ಒಡೆಯರ್ ನಿರ್ಮಾಣ ಮಾಡುತ್ತಿದ್ದಾ. ಪವನ್ ಸ್ನೇಹಿತರಾದ ಅವಿನಾಶ್ ವಿ ರೈ ಮತ್ತು ಮೋಹನ್ ಲಾಲ್ ಮೆನನ್ ಸಹ ನಿರ್ಮಾಣವಿರಲಿದೆ. ಇದನ್ನೂ ಓದಿ:ಚಿತ್ರಮಂದಿರದಲ್ಲಿ ಹಾಲಿವುಡ್‌ನ ‘ವೆನಮ್: ದಿ ಲಾಸ್ಟ್ ಡ್ಯಾನ್ಸ್’ ಚಿತ್ರದ ಅಬ್ಬರ- ಪ್ರೇಕ್ಷಕರ ಮೆಚ್ಚುಗೆ

    ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ‘ಭಾರತೀಯ ಪನೋರಮಾ’ ವಿಭಾಗ ಪ್ರಮುಖವಾಗಿದೆ. ಇದರಲ್ಲಿ 25 ಕಥಾಚಿತ್ರ ಹಾಗೂ 20 ನಾನ್-ಫೀಚರ್ ಸಿನಿಮಾಗಳು ಪ್ರದರ್ಶನಕ್ಕೆ ಆಯ್ಕೆ ಆಗಿದೆ. ಇಂಡಿಯನ್ ಪನೋರಮಾ ವಿಭಾಗದ ಆರಂಭಿಕ ಸಿನಿಮಾವಾಗಿ ಬಾಲಿವುಡ್‌ನ ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಸಿನಿಮಾ ಪ್ರದರ್ಶನ ಆಗಲಿದೆ. ಎರಡನೇ ಸಿನಿಮಾವಾಗಿ ಕನ್ನಡದ ‘ಕೆರೆಬೇಟೆ’ ಆಯ್ಕೆ ಆಗಿದೆ. ಆಯ್ಕೆದಾದ ಸಿನಿಮಾಗಳ ಪಟ್ಟಿಯ 3ನೇ ಸ್ಥಾನದಲ್ಲಿ ಕನ್ನಡದ ‘ವೆಂಕ್ಯಾ’ ಚಿತ್ರವಿದೆ. ಭಾರತದ ಜನಪ್ರಿಯ ಸಿನಿಮಾಗಳನ್ನು ಕೂಡ ಆಯ್ಕೆ ಮಾಡಲಾಗಿದೆ. ಮಲಯಾಳ, ತಮಿಳು, ಮರಾಠಿ, ಬೆಂಗಾಲಿ, ತೆಲುಗು ಭಾಷೆಯ ಸಿನಿಮಾಗಳು ಪ್ರದರ್ಶನ ಕಾಣಲಿವೆ.

  • ಹಿಮಾಚಲದ ಪಹಾಡಿ ಹುಡುಗಿಯಾದ ನಟಿ ರೂಪಾಲಿ ಸೂದ್

    ಹಿಮಾಚಲದ ಪಹಾಡಿ ಹುಡುಗಿಯಾದ ನಟಿ ರೂಪಾಲಿ ಸೂದ್

    ಶಿಮ್ಲಾದ ಸುಂದರಿ ರೂಪಾಲಿ ಸೂದ್ ವೆಂಕ್ಯಾ ಸಿನಿಮಾದ ಮೂಲಕ ಕನ್ನಡಕ್ಕೆ ಬಂದಿರುವ ವಿಚಾರ ಗೊತ್ತೇ ಇದೆ. ಪವನ್ ಒಡೆಯರ್ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ವೆಂಕ್ಯಾ ಸಿನಿಮಾದಲ್ಲಿ ಈಕೆ ನಾಯಕಿಯಾಗಿ ನಟಿಸುತ್ತಿದ್ದಾರೆ. ಉತ್ತರ ಕರ್ನಾಟಕ ಹಿನ್ನೆಲೆಯ ಸಿನಿಮಾ ಇದಾಗಿದ್ದರೂ, ಈ ಚಿತ್ರದ ರೂಪಾಯಿ ಹಿಮಾಚಲದ ಪಹಾಡಿ ಹುಡುಗಿಯಾಗಿ ನಟಿಸುತ್ತಿದ್ದಾರೆ ಎನ್ನುವುದು ವಿಶೇಷ.

    ಮೂಲತಃ ಶಿಮ್ಲಾದವರಾದ ರೂಪಾಲಿ ಕಾಲೇಜು ದಿನಗಳಲ್ಲಿದ್ದಾಗಲೇ ಮಾಡೆಲಿಂಗ್ ಅಖಾಡಕ್ಕೆ ಇಳಿದಿದ್ದರು. ಮಾಡೆಲಿಂಗ್ ಜೊತೆ ಜೊತೆಯಲಿ ಹಲವು ಮ್ಯೂಸಿಕ್ ಆಲ್ಬಂಗಳಲ್ಲಿ ನಟಿಸಿರುವ ಈ ಶಿಮ್ಲಾ ಚೆಲುವೆ, ಹಾರ್ಡಿ ಸಂಧು ಅವರೊಂದಿಗಿನ ಸೂಪರ್ ಹಿಟ್ ಹಾಡು ‘ಹಾರ್ನ್ ಬ್ಲೋ’ನಲ್ಲಿ ಹೆಜ್ಜೆ ಹಾಕಿದ್ದಾರೆ. ಇದೀಗ ‘ವೆಂಕ್ಯಾ’ ಸಿನಿಮಾದ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.

    ರೂಪಾಲಿ ಈಗಾಗಲೇ ‘ವೆಂಕ್ಯಾ’ ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರೆ. ಅವರು ಹಿಮಾಚಲದ ಪಹಾಡಿ ಹುಡುಗಿಯಾಗಿ ನಟಿಸುತ್ತಿದ್ದಾರೆ. ಶೂಟಿಂಗ್ ಅನುಭವ ಹಂಚಿಕೊಂಡಿರುವ ರೂಪಾಲಿ, ‘ನಾವು ಇತ್ತೀಚೆಗೆ ಮನಾಲಿಯ ಮುಂದೆ ಕೈಲಾಂಗ್ನಲ್ಲಿ, ಪರ್ವತಗಳ ನಡುವೆ ಸುಂದರವಾದ ಸ್ಥಳದಲ್ಲಿ ಕೆಲವು ಭಾಗಗಳನ್ನು ಚಿತ್ರೀಕರಿಸಿದ್ದೇವೆ. ಇದು ನನ್ನ ಸಿನಿಮಾ ವೃತ್ತಿಜೀವನಕ್ಕೆ ಅದ್ಭುತ ಆರಂಭ’ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

    ‘ಡೊಳ್ಳು’ ಸಿನಿಮಾ ನಿರ್ಮಾಣ ಮಾಡಿದ್ದ ಪವನ್ ಒಡೆಯರ್ ವೆಂಕ್ಯಾನಿಗೂ ಸಾಥ್ ಕೊಟ್ಟಿದ್ದಾರೆ. ಒಡೆಯರ್ ಫಿಲ್ಮ್ಸ್ ನಡಿ ತಯಾರಾಗ್ತಿರುವ ಈ ಚಿತ್ರಕ್ಕೆ ಅವಿನಾಶ್ ವಿ ರೈ ಮತ್ತು ಮೋಹನ್ ಲಾಲ್ ಮೆನನ್ ಕೂಡ ಹಣ ಹಾಕಿದ್ದಾರೆ. ಉತ್ತರ ಕರ್ನಾಟಕವನ್ನು ಕಥೆ ಆಧಾರಿಸಿ ಮೂಡಿ ಬರುತ್ತಿರುವ ‘ವೆಂಕ್ಯಾ’ ಚಿತ್ರದ ಚಿತ್ರಕಥೆ ಮತ್ತು ಸಂಭಾಷಣೆಯನ್ನು ಶ್ರೀನಿಧಿ ಡಿಎಸ್ ಬರೆದಿದ್ದಾರೆ, ಪ್ರಣವ್ ಮುಲೆ ಅವರ ಛಾಯಾಗ್ರಹಣ ಮತ್ತು ಹೇಮಂತ್ ಜೋಯಿಸ್ ಸಂಗೀತ ನೀಡಿದ್ದಾರೆ.

     

    ರಾಷ್ಟ್ರ ಪ್ರಶಸ್ತಿ ವಿಜೇತ ಸಾಗರ್ ಪುರಾಣಿಕ್ (Sagar Puranik) ಈ ಸಿನಿಮಾಗೆ ನಿರ್ದೇಶಕ ಕಂ ಹೀರೋ.

  • ಸಾಗರ್ ಪುರಾಣಿಕ್ ನಿರ್ದೇಶನದ ‘ವೆಂಕ್ಯಾ’ ಚಿತ್ರಕ್ಕೆ ಶಿಮ್ಲಾ ಬೆಡಗಿ ರೂಪಾಲಿ ಎಂಟ್ರಿ

    ಸಾಗರ್ ಪುರಾಣಿಕ್ ನಿರ್ದೇಶನದ ‘ವೆಂಕ್ಯಾ’ ಚಿತ್ರಕ್ಕೆ ಶಿಮ್ಲಾ ಬೆಡಗಿ ರೂಪಾಲಿ ಎಂಟ್ರಿ

    ರಾಷ್ಟ್ರ ಪ್ರಶಸ್ತಿ ವಿಜೇತ ಸಾಗರ್ ಪುರಾಣಿಕ್ (Sagar Puranik) ಹೊಸ ಸಿನಿಮಾ ‘ವೆಂಕ್ಯಾ’ (Venkya) ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಬಾರಿ ಸಾಗರ್ ನಿರ್ದೇಶನದ ಜೊತೆಗೆ ನಾಯಕನಾಗಿಯೂ ಬಣ್ಣ ಹಚ್ಚಿದ್ದು, ಇದೀಗ ವೆಂಕ್ಯಾ ಬಳಗಕ್ಕೆ ಯುವ ನಟಿಯರೊಬ್ಬರ ಆಗಮನವಾಗಿದೆ. ಶಿಮ್ಲಾ ಸುಂದರಿ ರೂಪಾಲಿ ಸೂದ್ (Roopali Sood) ಇದೀಗ ಸಾಗರ್ ಪುರಾಣಿಕ್ ನಾಯಕನಾಗಿರುವ ಚಿತ್ರದಲ್ಲಿ ನಟಿಸ್ತಿದ್ದು, ಈ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ್ದಾರೆ.

    ಮೂಲತಃ ಶಿಮ್ಲಾದವರಾದ ರೂಪಾಲಿ ಕಾಲೇಜು ದಿನಗಳಲ್ಲಿದ್ದಾಗಲೇ ಮಾಡೆಲಿಂಗ್ ಅಖಾಡಕ್ಕೆ ಇಳಿದಿದ್ದರು. ಮಾಡೆಲಿಂಗ್ ಜೊತೆ ಜೊತೆಯಲಿ ಹಲವು ಮ್ಯೂಸಿಕ್ ಆಲ್ಬಂಗಳಲ್ಲಿ ನಟಿಸಿರುವ ಈ ಶಿಮ್ಲಾ ಚೆಲುವೆ, ಹಾರ್ಡಿ ಸಂಧು ಅವರೊಂದಿಗಿನ ಸೂಪರ್ ಹಿಟ್ ಹಾಡು ‘ಹಾರ್ನ್ ಬ್ಲೋ’ನಲ್ಲಿ ಹೆಜ್ಜೆ ಹಾಕಿದ್ದಾರೆ. ಇದೀಗ ‘ವೆಂಕ್ಯಾ’ ಸಿನಿಮಾದ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಇದನ್ನೂ ಓದಿ:ಡಿಜಿಟಲ್ ವರ್ಷನ್‌ನಲ್ಲಿ ಬರಲಿದೆ ‘ಸ್ಟುಡೆಂಟ್ ಆಫ್ ದಿ ಇಯರ್ 3’

    ರೂಪಾಲಿ ಈಗಾಗಲೇ ‘ವೆಂಕ್ಯಾ’ ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರೆ. ಅವರು ಹಿಮಾಚಲದ ಪಹಾಡಿ ಹುಡುಗಿಯಾಗಿ ನಟಿಸುತ್ತಿದ್ದಾರೆ. ಶೂಟಿಂಗ್ ಅನುಭವ ಹಂಚಿಕೊಂಡಿರುವ ರೂಪಾಲಿ, ‘ನಾವು ಇತ್ತೀಚೆಗೆ ಮನಾಲಿಯ ಮುಂದೆ ಕೈಲಾಂಗ್ನಲ್ಲಿ, ಪರ್ವತಗಳ ನಡುವೆ ಸುಂದರವಾದ ಸ್ಥಳದಲ್ಲಿ ಕೆಲವು ಭಾಗಗಳನ್ನು ಚಿತ್ರೀಕರಿಸಿದ್ದೇವೆ. ಇದು ನನ್ನ ಸಿನಿಮಾ ವೃತ್ತಿಜೀವನಕ್ಕೆ ಅದ್ಭುತ ಆರಂಭ’ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

    ‘ಡೊಳ್ಳು’ ಸಿನಿಮಾ ನಿರ್ಮಾಣ ಮಾಡಿದ್ದ ಪವನ್ ಒಡೆಯರ್ ವೆಂಕ್ಯಾನಿಗೂ ಸಾಥ್ ಕೊಟ್ಟಿದ್ದಾರೆ. ಒಡೆಯರ್ ಫಿಲ್ಮ್ಸ್ ನಡಿ ತಯಾರಾಗ್ತಿರುವ ಈ ಚಿತ್ರಕ್ಕೆ ಅವಿನಾಶ್ ವಿ ರೈ ಮತ್ತು ಮೋಹನ್ ಲಾಲ್ ಮೆನನ್ ಕೂಡ ಹಣ ಹಾಕಿದ್ದಾರೆ. ಉತ್ತರ ಕರ್ನಾಟಕವನ್ನು ಕಥೆ ಆಧಾರಿಸಿ ಮೂಡಿ ಬರುತ್ತಿರುವ ‘ವೆಂಕ್ಯಾ’ ಚಿತ್ರದ ಚಿತ್ರಕಥೆ ಮತ್ತು ಸಂಭಾಷಣೆಯನ್ನು ಶ್ರೀನಿಧಿ ಡಿಎಸ್ ಬರೆದಿದ್ದಾರೆ, ಪ್ರಣವ್ ಮುಲೆ ಅವರ ಛಾಯಾಗ್ರಹಣ ಮತ್ತು ಹೇಮಂತ್ ಜೋಯಿಸ್ ಸಂಗೀತ ನೀಡಿದ್ದಾರೆ.

  • ಸೆಟ್ಟೇರಿತು ಪವನ್ ಒಡೆಯರ್ ನಿರ್ಮಾಣದ ‘ವೆಂಕ್ಯಾ’ ಸಿನಿಮಾ

    ಸೆಟ್ಟೇರಿತು ಪವನ್ ಒಡೆಯರ್ ನಿರ್ಮಾಣದ ‘ವೆಂಕ್ಯಾ’ ಸಿನಿಮಾ

    ಸ್ಯಾಂಡಲ್ ವುಡ್ ನಲ್ಲಿ ಯಶ್, ಪುನೀತ್ ರಾಜ್ ಕುಮಾರ್ ಅವರಂತಹ ಸ್ಟಾರ್ ನಟರಿಗೆ ಸಿನಿಮಾ ಮಾಡಿ ಸೈ ಎನಿಸಿಕೊಂಡವರು ಪವನ್ ಒಡೆಯರ್ (Pawan Wodeyar). ನಿರ್ದೇಶನದಲ್ಲಿ ಗೆದ್ದಿರುವ ಪವನ್ ನಿರ್ಮಾಪಕರಾಗಿಯೂ ಮೊದಲ ಹೆಜ್ಜೆಯಲ್ಲಿ ಶಹಬಾಸ್ ಗಿರಿ ಪಡೆದುಕೊಂಡಿದ್ದಾರೆ. ಡೊಳ್ಳು ಸಿನಿಮಾ ಮೂಲಕ ನಿರ್ಮಾಣಕ್ಕಿಳಿದು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿ ಬಾಚಿಕೊಂಡಿದ್ದ ಪವನ್ ಒಡೆಯರ್ ಮತ್ತೊಮ್ಮೆ ಸಾಗರ್ ಪುರಾಣಿಕ್ ಜೊತೆ ಕೈ ಜೋಡಿಸಿರುವುದು ಗೊತ್ತೇ ಇದೆ.

    ಡೊಳ್ಳು ಸಾರಥಿ ಸಾಗರ್ ಪುರಾಣಿಕ್ (Sagar Puranik) ಹಾಗೂ ಪವನ್ ಒಡೆಯರ್ ಮತ್ತೊಂದು ಸಂಗಮದ ಸಿನಿಮಾ ಸೆಟ್ಟೇರಿದೆ. ಹುಬ್ಬಳ್ಳಿಯ ಸಿದ್ಧಾರೂಢ ಮಠದಲ್ಲಿ ಇತ್ತೀಚೆಗಷ್ಟೇ ಮುಹೂರ್ತ ನೆರವೇರಿದೆ. ಈ ಚಿತ್ರಕ್ಕೆ ವೆಂಕ್ಯಾ (Venkya) ಎಂಬ ಟೈಟಲ್ ಇಡಲಾಗಿದೆ. ವೆಂಕ್ಯಾನಿಗೆ ಸಾಗರ್ ಪುರಾಣಿಕ್ ಆಕ್ಷನ್ ಕಟ್ ಹೇಳುವುದರ ಜೊತೆಗೆ ನಾಯಕನಾಗಿಯೂ ಮೊದಲ ಹೆಜ್ಜೆ ಇಟ್ಟಿದ್ದಾರೆ. ನಿರ್ದೇಶನದ ಜೊತೆಗೆ ಸಾಗರ್ ನಟನೆ ಜವಾಬ್ದಾರಿನ್ನು ಹೊತ್ತುಕೊಂಡಿದ್ದಾರೆ.

    ವೆಂಕ್ಯಾ ಶೂಟಿಂಗ್ ಈಗಾಗಲೇ ಚಾಲುವಾಗಿದೆ. ಇದೊಂದು ವಿಭಿನ್ನ ಪ್ರಯತ್ನದ ಸಿನಿಮಾ. ಉತ್ತರ ಕರ್ನಾಟಕದ ಕಥೆಯಾದ್ರೂ ಅದು ದೇಶ ಎಲ್ಲಾ ಸುತ್ತಲಿದೆ. ಇದೊಂದು ಹೊಸ ಬಗೆಯ ಕಮರ್ಷಿಯಲ್ ಸಿನಿಮಾ  ಅಂತಿದೆ ಚಿತ್ರತಂಡ. ಶೀಘ್ರದಲ್ಲೇ ಉಳಿದ ತಾರಾ ಬಳಗ ಹಾಗೂ ತಾಂತ್ರಿಕ ವರ್ಗದ ಬಗ್ಗೆ ಚಿತ್ರತಂಡ ಮಾಹಿತಿ ನೀಡಲಿದೆ.

    ಅಪೇಕ್ಷಾ ಒಡೆಯರ್ ಮತ್ತು ಪವನ್ ಒಡೆಯರ್ ಹಣ ಹಾಕುತ್ತಿರುವ ವೆಂಕ್ಯಾ ಚಿತ್ರಕ್ಕೆ ಸ್ನೇಹಿತರಾದ ಅವಿನಾಶ್ ವಿ ರೈ ಮತ್ತು ಮೋಹನ್ ಲಾಲ್ ಮೆನನ್ ಸಹ ನಿರ್ಮಾಣವಿರಲಿದೆ.