Tag: ವೇದಾ ಕೃಷ್ಣಮೂರ್ತಿ

  • ಅಂತಾರಾಷ್ಟ್ರೀಯ ಕ್ರಿಕೆಟಿಗೆ ಕನ್ನಡತಿ ವೇದಾ ಕೃಷ್ಣಮೂರ್ತಿ ವಿದಾಯ

    ಅಂತಾರಾಷ್ಟ್ರೀಯ ಕ್ರಿಕೆಟಿಗೆ ಕನ್ನಡತಿ ವೇದಾ ಕೃಷ್ಣಮೂರ್ತಿ ವಿದಾಯ

    ಬೆಂಗಳೂರು: ಭಾರತ ಮಹಿಳಾ ತಂಡದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿಯುತ್ತಿದ್ದ ಚಿಕ್ಕಮಗಳೂರು (Chikkamagaluru) ಮೂಲದ ವೇದಾ ಕೃಷ್ಣಮೂರ್ತಿ (Veda Krishnamurthy) ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಹೇಳಿದ್ದಾರೆ.

    ದೊಡ್ಡ ಕನಸುಗಳನ್ನು ಹೊಂದಿರುವ ಸಣ್ಣ ಪಟ್ಟಣದ ಹುಡುಗಿಯಿಂದ ಹಿಡಿದು ಹೆಮ್ಮೆಯಿಂದ ಭಾರತದ ಜೆರ್ಸಿಯನ್ನು ಧರಿಸಿದ್ದೇನೆ. ನನಗೆ ಪಾಠಗಳನ್ನು, ಜನರನ್ನು, ನೆನಪುಗಳನ್ನು ನೀಡಿದ ಕ್ರಿಕೆಟಿಗೆ ಕೃತಜ್ಞಳಾಗಿದ್ದೇನೆ. ಆಟಕ್ಕೆ ವಿದಾಯ ಹೇಳುವ ಸಮಯ ಬಂದಿದೆ, ಆದರೆ ಆಟಕ್ಕೆ ಅಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ.


    ಚಿಕ್ಕಮಗಳೂರಿನ ಕಡೂರಿನಲ್ಲಿ (Kaduru) 1992ರ ಅಕ್ಟೋಬರ್‌ 16 ರಂದು ಜನಿಸಿದ ವೇದಾ ಇಲ್ಲಿಯವರೆಗೆ 48 ಏಕದಿನ ಪಂದ್ಯಗಳ 41 ಇನ್ನಿಂಗ್ಸ್‌ಗಳಿಂದ 829 ರನ್‌ ಹೊಡೆದಿದ್ದಾರೆ. 76 ಟಿ20 ಪಂದ್ಯಗಳ 63 ಇನ್ನಿಂಗ್ಸ್‌ಗಳಿಂದ 875 ರನ್‌ ಹೊಡೆದಿದ್ದಾರೆ. ಆಸ್ಪ್ರೇಲಿಯಾದ ಪ್ರತಿಷ್ಟಿತ ಕ್ಲಬ್ ಲೀಗ್ ಬಿಗ್ ಬ್ಯಾಷ್‌ನಲ್ಲಿ ಆಡಿದ್ದರು.

    2011 ರಲ್ಲಿ ಇಂಗ್ಲೆಂಡ್‌ ವಿರುದ್ಧ ಮೊದಲ ಏಕದಿನ ಪಂದ್ಯವಾಡಿದ್ದ ವೇದಾ 2018 ರಲ್ಲಿ ಇಂಗ್ಲೆಂಡ್‌ ವಿರುದ್ಧವೇ ಕೊನೆಯ ಏಕದಿನವಾಡಿದ್ದರು. ಇದನ್ನೂ ಓದಿ: ಅಪ್ರಾಪ್ತೆ ಮೇಲೆ 2 ವರ್ಷಗಳಿಂದ ಅತ್ಯಾಚಾರ ಎಸಗಿದ ಆರೋಪ – RCB ಸ್ಟಾರ್‌ ಯಶ್‌ ದಯಾಳ್‌ ವಿರುದ್ಧ ಪೋಕ್ಸೊ ಕೇಸ್‌

    2011 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಮೊದಲ ಟಿ20 ಪಂದ್ಯವಾಡಿದ್ದ ವೇದಾ ಕೃಷ್ಣಮೂರ್ತಿ 2020 ರಲ್ಲಿ ನಡೆದಿದ್ದ ಮಹಿಳಾ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಟೀಂ ಇಂಡಿಯಾ ಪರ ಆಡಿದ್ದರು. ಈ ಪಂದ್ಯವೇ ಇವರ ಕೊನೆಯ ಅಂತರರಾಷ್ಟ್ರೀಯ ಪಂದ್ಯವಾಗಿತ್ತು

    ಕರ್ನಾಟಕ, ಗುಜರಾತ್‌ ಜೈಂಟ್ಸ್‌ ತಂಡವನ್ನು ವೇದಾ ಪ್ರತಿನಿಧಿಸಿದ್ದರು. ಮಾರ್ಚ್‌ 2024 ರಲ್ಲಿ ದೆಹಲಿಯಲ್ಲಿ ಆರ್‌ಸಿಬಿ ತಂಡದ ವಿರುದ್ಧ ಕೊನೆಯ ಟಿ20 ಪಂದ್ಯ ಆಡಿದ್ದರು.

  • ಶೀಘ್ರವೇ ಹಸೆಮಣೆ ಏರಲಿದ್ದಾರೆ ಟೀಂ ಇಂಡಿಯಾ ಕ್ರಿಕೆಟರ್ ವೇದಾ ಕೃಷ್ಣಮೂರ್ತಿ

    ಶೀಘ್ರವೇ ಹಸೆಮಣೆ ಏರಲಿದ್ದಾರೆ ಟೀಂ ಇಂಡಿಯಾ ಕ್ರಿಕೆಟರ್ ವೇದಾ ಕೃಷ್ಣಮೂರ್ತಿ

    ಮುಂಬೈ: ಕೆಲ ದಿನಗಳಿಂದ ಟೀಂ ಇಂಡಿಯಾದಿಂದ ದೂರ ಉಳಿದಿದ್ದ ಭಾರತೀಯ ಮಹಿಳಾ ಕ್ರಿಕೆಟರ್ (Cricketer) ವೇದಾ ಕೃಷ್ಣಮೂರ್ತಿ (Veda Krishnamurthy) ಇದೀಗ ಲೈಫ್‌ನಲ್ಲಿ ಹೊಸ ಇನ್ನಿಂಗ್ಸ್ ಆರಂಭಿಸುತ್ತಿದ್ದಾರೆ.

    ವೇದಾ ಕೃಷ್ಣಮೂರ್ತಿ ಕೆಲ ದಿನಗಳಿಂದ ಟೀಂ ಇಂಡಿಯಾದಿಂದ (Team India) ದೂರ ಉಳಿದಿದ್ದರು. ಆದರೆ ಈಗ ಅವರ ಬದುಕಿನ ಹೊಸ ಇನ್ನಿಂಗ್ಸ್ ಆರಂಭವಾಗುತ್ತಿದ್ದು, ಶೀಘ್ರದಲ್ಲೇ ಸಪ್ತಪದಿ ತುಳಿಯಲ್ಲಿದ್ದಾರೆ. ಇದನ್ನು ಸ್ವತಃ ವೇದಾ ಅವರೇ ಸಾಮಾಜಿಕ ಜಾಲತಾಣದಲ್ಲಿ (Social Media) ಬಹಿರಂಗಪಡಿಸಿದ್ದಾರೆ.

    ವೇದಾ ಅವರು ತಮ್ಮ ಗೆಳೆಯ ಮತ್ತು ಈಗ ನಿಶ್ಚಿತ ವರ ಅರ್ಜುನ್ ಹೊಯ್ಸಳ ಅವರೊಂದಿಗೆ ಕಾಣಿಸಿಕೊಂಡಿರುವ ಕೆಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಚಿತ್ರಗಳಲ್ಲಿ ಅರ್ಜುನ್ ಮಂಡಿಯೂರಿ ವೇದಾರಿಗೆ ರೊಮ್ಯಾಂಟಿಕ್ ಆಗಿ ಪ್ರಪೋಸ್ ಸಹ ಮಾಡ್ತಿದ್ದಾರೆ. ಇದನ್ನೂ ಓದಿ: ವಿಶ್ವವಿದ್ಯಾಲಯದ ಪರೀಕ್ಷೆ ಪ್ರವೇಶ ಪತ್ರದಲ್ಲಿ ಮೋದಿ, ಧೋನಿ ಫೋಟೋ – ತನಿಖೆಗೆ ಆದೇಶ

    ವೇದಾ ಅವರನ್ನು ವರಿಸಲಿರುವ ಅರ್ಜುನ್ ಹೊಯ್ಸಳ (Arjun Hoysala) ಕೂಡ ಕ್ರಿಕೆಟಿಗರಾಗಿದ್ದು, ಅವರು ದೇಶೀಯ ಕ್ರಿಕೆಟ್‌ನಲ್ಲಿ ಕರ್ನಾಟಕದ ಪರವಾಗಿ ಆಡುತ್ತಾರೆ. 2016 ರಲ್ಲಿ ಪ್ರಥಮ ದರ್ಜೆಗೆ ಪದಾರ್ಪಣೆ ಮಾಡಿದ ಅರ್ಜುನ್ ಕೂಡ ತಂಡದ ಉತ್ತಮ ಬ್ಯಾಟ್ಸ್‌ಮನ್‌ ಆಗಿದ್ದಾರೆ. ಆದರೆ ಅವರು ಇನ್ನೂ ಐಪಿಎಲ್ ಅಥವಾ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪದಾರ್ಪಣೆ ಮಾಡಲು ಸಾಧ್ಯವಾಗಿಲ್ಲ. 32 ವರ್ಷದ ಅರ್ಜುನ್ 2019 ರ ಕರ್ನಾಟಕ ಪ್ರೀಮಿಯರ್ ಲೀಗ್‌ನಲ್ಲಿ ಶಿವಮೊಗ್ಗ ಲಯನ್ಸ್ ಪರ ಆಡಿದ್ದರು. ಇದನ್ನೂ ಓದಿ: ಸಿಕ್ಸ್ ಚಚ್ಚಿ ಅಂಪೈರ್‌ರನ್ನು ಬಡಿದೆಬ್ಬಿಸಿದ ಸ್ಮಿತ್ – ಆಸಿಸ್ ಆಟಗಾರನ ಕ್ರೀಡಾ ಬದ್ಧತೆಗೆ ಮೆಚ್ಚುಗೆ

    ಕಳೆದ ಕೆಲವು ವರ್ಷಗಳು ವೇದಾ ಕೃಷ್ಣಮೂರ್ತಿಯವರಿಗೆ ಉತ್ತಮವಾಗಿಲ್ಲ. ಅವರು ಟೀಂ ಇಂಡಿಯಾದಿಂದ ಹೊರಗಿದ್ದರು. ಆದರೆ ಅವರ ಕುಟುಂಬವೂ ಸಾಕಷ್ಟು ಕಷ್ಟಗಳನ್ನು ಎದುರಿಸಿತು. 2021ರಲ್ಲಿ ಕೊರೊನಾದ (Corona) 2ನೇ ಅಲೆಯು ಅವರ ತಾಯಿ ಮತ್ತು ಸಹೋದರಿ ಇಬ್ಬರನ್ನೂ ಬಲಿ ಪಡೆಯಿತು. ಇದು ವೇದ ಅವರ ಮನಸ್ಸಿನ ಮೇಲೆ ಬಹಳ ಪ್ರಭಾವ ಬೀರಿತ್ತು.

    ಇದುವರೆಗೆ 48 ಏಕದಿನ ಪಂದ್ಯ, 76 ಟಿ20 ಪಂದ್ಯಗಳನ್ನಾಡಿರುವ ವೇದಾ ಕೃಷ್ಣಮೂರ್ತಿ 10 ಅರ್ಧಶತಕಗಳನ್ನ ಬಾರಿಸಿ ಮಿಂಚಿದ್ದಾರೆ. ಆದರೆ ಈವರೆಗೆ ಒಂದೇ ಒಂದು ಶತಕವನ್ನು ಗಳಿಸಿಲ್ಲ.

    Live Tv
    [brid partner=56869869 player=32851 video=960834 autoplay=true]

  • ಧನಂಜಯ್ ಜೊತೆ ನಟಿಸ್ತಾರಾ ಟೀಮ್ ಇಂಡಿಯಾ ಮಹಿಳಾ ಕ್ರಿಕೆಟ್ ಆಟಗಾರ್ತಿ ವೇದಾಕೃಷ್ಣಮೂರ್ತಿ?

    ಧನಂಜಯ್ ಜೊತೆ ನಟಿಸ್ತಾರಾ ಟೀಮ್ ಇಂಡಿಯಾ ಮಹಿಳಾ ಕ್ರಿಕೆಟ್ ಆಟಗಾರ್ತಿ ವೇದಾಕೃಷ್ಣಮೂರ್ತಿ?

    ಡಾಲಿ ಧನಂಜಯ್ ನಾಯಕನಾಗಿ ನಟಿಸುತ್ತಿರುವ ಹೊಯ್ಸಳ ಸಿನಿಮಾದ ಶೂಟಿಂಗ್ ಮೈಸೂರಿನಲ್ಲಿ ನಡೆಯುತ್ತಿದೆ. ಒಂದು ವಾರಗಳಿಂದ ಅಲ್ಲಿಯೇ ಚಿತ್ರತಂಡ ಬೀಡು ಬಿಟ್ಟಿದೆ. ಈಗಾಗಲೇ ಒಂದು ವಾರದ ಶೂಟಿಂಗ್ ನಡೆದಿದ್ದು, ಚಿತ್ರೀಕರಣದಲ್ಲಿ ನಟ ಅಚ್ಯುತ್ ಕುಮಾರ್, ರಾಘು ಶಿವಮೊಗ್ಗ ಸೇರಿದಂತೆ ಹಲವು ಕಲಾವಿದರು ಭಾಗಿಯಾಗಿದ್ದಾರೆ. ಇನ್ನೂ ಶೂಟಿಂಗ್ ಅಲ್ಲಿಯೇ ಮುಂದುವರೆದಿದ್ದು, ಇದೀಗ ಚಿತ್ರೀಕರಣದ ಸ್ಥಳದಲ್ಲಿ ಟೀಮ್ ಇಂಡಿಯಾ ಮಹಿಳಾ ಕ್ರಿಕೆಟ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಕಾಣಿಸಿಕೊಂಡಿದ್ದಾರೆ.

    ಹೊಯ್ಸಳ ಸಿನಿಮಾ ಸೆಟ್ ನಲ್ಲಿ ವೇದ ಕೃಷ್ಣಮೂರ್ತಿ ಇರುವ ಫೋಟೋವನ್ನು ಸ್ವತಃ ಡಾಲಿ ಧನಂಜಯ್ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಆದರೆ, ಅವರು ಯಾಕೆ ಅಲ್ಲಿಗೆ ಬಂದರು? ಸುಮ್ನೆ ಶೂಟಿಂಗ್ ವೀಕ್ಷಿಸಲು ಬಂದಿದ್ದಾರಾ? ಅಥವಾ ಈ ಸಿನಿಮಾದಲ್ಲಿ ಅವರು ಪಾತ್ರ ಮಾಡಲಿದ್ದಾರೆ ಎನ್ನುವುದನ್ನು ಅವರು ಬಹಿರಂಗ ಪಡಿಸಿಲ್ಲ. ಆದರೆ, ವೇದಾ ಅವರು ಶೂಟಿಂಗ್ ಸ್ಥಳದಲ್ಲಿ ಕಾಣಿಸಿಕೊಂಡಿದ್ದು ಮಾತ್ರ ಕುತೂಹಲಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಎನ್.ಎಫ್.ಟಿ (NFT) ಮಾರುಕಟ್ಟೆಗೆ ಕನ್ನಡದ ಮತ್ತೊಬ್ಬ ಸೂಪರ್ ಸ್ಟಾರ್ ಎಂಟ್ರಿ

    ವೇದಾ ಕೃಷ್ಣಮೂರ್ತಿ ಇತ್ತೀಚಿನ ದಿನಗಳಲ್ಲಿ ಸಿನಿಮಾ ರಂಗದವರ ಜೊತೆ ಹೆಚ್ಚಾಗಿ ಗುರುತಿಸಿಕೊಳ್ಳುತ್ತಿದ್ದಾರೆ. ಮೊನ್ನೆಯಷ್ಟೇ ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದ ‘ರಾ ರಾ ರಕ್ಕಮ್ಮ’ ಹಾಡಿಗೆ ಸಖತ್ ಸ್ಟೆಪ್ ಹಾಕಿದ್ದರು. ಆ ವಿಡಿಯೋ ವೈರಲ್ ಕೂಡ ಆಗಿತ್ತು. ಅಲ್ಲದೇ ಸಿನಿಮಾ ಸಂಬಂಧಿ ಅವರು ಅನೇಕ ಟ್ವಿಟ್ ಗಳನ್ನು ಕೂಡ ಮಾಡುತ್ತಲೇ ಇರುತ್ತಾರೆ. ಈ ಬಾರಿ ಹೊಯ್ಸಳ ಟೀಮ್ ಜೊತೆ ಕಾಣಿಸಿಕೊಂಡು ಕುತೂಹಲ ಮೂಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮಹಿಳಾ ಕ್ರಿಕೆಟರ್ ವೇದಾ ಕೃಷ್ಣಮೂರ್ತಿ ಅಕ್ಕ ಕೊರೊನಾಗೆ ಬಲಿ

    ಮಹಿಳಾ ಕ್ರಿಕೆಟರ್ ವೇದಾ ಕೃಷ್ಣಮೂರ್ತಿ ಅಕ್ಕ ಕೊರೊನಾಗೆ ಬಲಿ

    ಚಿಕ್ಕಮಗಳೂರು: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಹಿರಿಯ ಸಹೋದರಿ ವತ್ಸಲಾ ಇಂದು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

    ಮೃತ ವತ್ಸಲಾ (40) ಅವರಿಗೆ ಕೊರೊನಾ ದೃಢಪಟ್ಟ ಹಿನ್ನೆಲೆ ಚಿಕ್ಕಮಗಳೂರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಇಂದು ಬೆಳಗ್ಗಿನ ಜಾವ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

    ಏಪ್ರಿಲ್ 24ರಂದು ವೇಧಾ ಕೃಷ್ಣಮೂರ್ತಿ ತಾಯಿ ಚೆಲುವಾಂಭ(67) ಕೊರೊನಾ ಸೋಂಕಿಗೆ ಬಲಿಯಾಗಿದ್ದರು. 15 ದಿನಗಳ ಅಂತರದಲ್ಲಿ ವೇದಾ ಕೃಷ್ಣಮೂರ್ತಿ ಕೊರೊನಾದಿಂದ ಅಮ್ಮ ಹಾಗೂ ಅಕ್ಕನನ್ನ ಕಳೆದುಕೊಂಡಿದ್ದಾರೆ. ಮೃತ ವತ್ಸಲಾ ಅವರ ಪತಿ ಕೆಲ ವರ್ಷಗಳ ಹಿಂದೆಯೇ ಅಪಘಾತದಲ್ಲಿ ಸಾವನ್ನಪ್ಪಿದ್ದರು. ವತ್ಸಲಾ ಅವರಿಗೆ ಓರ್ವ ಪುತ್ರನಿದ್ದಾನೆ. ಇಂದು ತಾಲೂಕು ಆಡಳಿತದ ವತಿಯಿಂದ ಕೊರೊನಾ ನಿಯಾಮವಳಿಯಂತೆ ವತ್ಸಲಾ ಅವರ ಅಂತ್ಯಸಂಸ್ಕಾರ ನಡೆಸಲಾಗಿದೆ.

    ಕಡೂರು ತಾಲೂಕಿನ ಬೀರೂರು ರಸ್ತೆಯಲ್ಲಿ ವೇಧಾ ಅವರ ಜಮೀನಿನಲ್ಲೇ ಅವರ ತಾಯಿಯ ಅಂತ್ಯಸಂಸ್ಕಾರ ನಡೆಸಿದ ಜಾಗದ ಪಕ್ಕದಲ್ಲೇ ತಾಲೂಕು ಆಡಳಿತದ ವತಿಯಿಂದ ವತ್ಸಲಾ ಅವರ ಅಂತ್ಯ ಸಂಸ್ಕಾರ ನಡೆಸಲಾಗಿದೆ.

  • ಕ್ರಿಕೆಟರ್ ವೇದಾ ಕೃಷ್ಣಮೂರ್ತಿ ತಾಯಿ ಕೊರೊನಾಗೆ ಬಲಿ

    ಕ್ರಿಕೆಟರ್ ವೇದಾ ಕೃಷ್ಣಮೂರ್ತಿ ತಾಯಿ ಕೊರೊನಾಗೆ ಬಲಿ

    ಚಿಕ್ಕಮಗಳೂರು: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ವೇದಾ ಕೃಷ್ಣಮೂರ್ತಿ ತಾಯಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ವೇದಾ ತಾಯಿ ಚೆಲುವಾಂಬ ಅವರಿಗೆ 67 ವರ್ಷ ವಯಸ್ಸಾಗಿತ್ತು.

    ನಾಲ್ಕು ದಿನಗಳ ಹಿಂದೆ ಏಪ್ರಿಲ್ 20ರಿಂದು ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆ ದಾಖಲಾಗಿದ್ದರು. ಕೊರೊನಾ ವರದಿಯಲ್ಲಿ ಪಾಸಿಟಿವ್ ಬಂದಿತ್ತು. ಕಳೆದ ನಾಲ್ಕು ದಿನಗಳಿಂದ ಹೋಂ ಐಸೋಲೇಷನ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚೆಲುವಾಂಬ ಅವರಿಗೆ ಕಳೆದ ರಾತ್ರಿ ಉಸಿರಾಟದ ಸಮಸ್ಯೆ ಎದುರಾಗಿತ್ತು. ಕೂಡಲೇ ಅವರನ್ನ ಕಡೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

    ಚೆಲುವಾಂಬ ಅವರ ಮೃತದೇಹವನ್ನ ಮನೆಯವರು ತಮ್ಮ ವಶಕ್ಕೆ ನೀಡುವಂತೆ ಕೇಳಿದ್ದರು. ಆದರೆ ತಾಲೂಕು ಆಡಳಿತ ಕೊರೊನಾದಿಂದ ಸಾವನ್ನಪ್ಪಿರೋ ಕಾರಣ ಮೃತದೇಹವನ್ನ ನೀಡೋದಕ್ಕೆ ಸಾಧ್ಯವಿಲ್ಲ ಎಂದು ಹೇಳಿದ್ದು, ಮೃತ ಚೆಲುವಾಂಬ ಮನೆಯವರು ಎಲ್ಲಿ ಹೇಳುತ್ತಾರೋ ಅಲ್ಲೇ ತಾಲೂಕು ಆಡಳಿತದ ವತಿಯಿಂದಲೇ ಕೊರೊನಾ ಗೈಡ್ ಲೈನ್ ಮೂಲಕವೇ ಅಂತ್ಯ ಸಂಸ್ಕಾರ ನಡೆಸೋದಕ್ಕೆ ತಾಲೂಕು ಆಡಳಿತ ಸಜ್ಜಾಗಿದ್ದಾರೆ. ಆ ಹಿನ್ನೆಲೆ ಕಡೂರು ತಾಲೂಕಿನ ಬೀರೂರು ರಸ್ತೆಯಲ್ಲಿ ವೇಧಾ ಅವರ ಜಮೀನಿನಲ್ಲೇ ತಾಲೂಕು ಆಡಳಿತದ ವತಿಯಿಂದ ಅಂತ್ಯ ಸಂಸ್ಕಾರ ಮಾಡಲಾಗಿದೆ.

    ಕ್ರಿಕೆಟರ್ ವೇಧಾ ತಂದೆ ಕೃಷ್ಣಮೂರ್ತಿ ಕೇಬಲ್ ಆಪರೇಟರ್ ಆಗಿದ್ದು, ನಿವೃತ್ತ ಸೈನಿಕ ಕೂಡ. ವೇಧಾಗೆ ಅಕ್ಕ ಹಾಗೂ ತಮ್ಮನಿದ್ದಾನೆ. ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ವೇಧಾ ಮೂಲತಃ ಚಿಕ್ಕಮಗಳೂರು ಜಿಲ್ಲೆ ಕಡೂರು ಮೂಲದವರು.

  • ಕಾಫಿನಾಡಲ್ಲಿ ರಸ್ತೆ ಮಧ್ಯೆ ಬ್ಯಾಟ್ ಬೀಸಿದ ಕ್ರಿಕೆಟರ್ ವೇದಾ ಕೃಷ್ಣಮೂರ್ತಿ

    ಕಾಫಿನಾಡಲ್ಲಿ ರಸ್ತೆ ಮಧ್ಯೆ ಬ್ಯಾಟ್ ಬೀಸಿದ ಕ್ರಿಕೆಟರ್ ವೇದಾ ಕೃಷ್ಣಮೂರ್ತಿ

    ಚಿಕ್ಕಮಗಳೂರು: ಭಾರತೀಯ ಕ್ರಿಕೆಟ್ ತಂಡದ ಮಹಿಳಾ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಜಿಲ್ಲೆ ಎನ್.ಆರ್.ಪುರ ತಾಲೂಕಿನಲ್ಲಿ ರಸ್ತೆ ಮಧ್ಯೆಯೇ ಕ್ರಿಕೆಟ್ ಆಡಿದ್ದಾರೆ. ಮೂಲತಃ ಜಿಲ್ಲೆಯ ಕಡೂರು ತಾಲೂಕಿನವರಾದ ವೇದಾ ಕೃಷ್ಣಮೂರ್ತಿ ಖಾಸಗಿ ಕಾರ್ಯಕ್ರಮದ ನಿಮಿತ್ತ ಎನ್.ಆರ್.ಪುರಕ್ಕೆ ಭೇಟಿ ನೀಡಿದ್ದರು. ಈ ವೇಳೆ ಅವರನ್ನ ಕಂಡ ಅಭಿಮಾನಿಗಳು ಸೆಲ್ಫಿಗಾಗಿ ಮುಗಿಬಿದ್ದು ಫೋಟೋ ಕ್ಲಿಕ್ಕಿಸಿಕೊಂಡು ಖುಷಿ ಪಟ್ಟರು.

    ಇದೇ ವೇಳೆ ಎನ್.ಆರ್.ಪುರದ ಲೆದರ್ ಬಾಲ್ ಕ್ರಿಕೆಟ್ ಕ್ಲಬ್ ವೇದಾ ಕೃಷ್ಣಮೂರ್ತಿಗೆ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು. ಸನ್ಮಾನದ ಬಳಿಕ ಅಭಿಮಾನಿಗಳು ಬ್ಯಾಟ್ ತಂದು ವೇದಾ ಕೈಗಿಟ್ಟು ಕ್ರಿಕೆಟ್ ಆಡುವಂತೆ ಕೇಳಿಕೊಂಡರು. ಅಭಿಮಾನಿಗಳು ಎಸೆದ ಬಾಲ್‍ಗೆ ವೇದಾ ಎನ್.ಆರ್.ಪುರ ನಗರದ ವಾಟರ್ ಟ್ಯಾಂಕ್ ಸರ್ಕಲ್‍ನಲ್ಲಿ ರಸ್ತೆ ಮಧ್ಯೆಯೇ ಬ್ಯಾಟ್ ಬೀಸಿ ಖುಷಿ ಪಟ್ಟರು.

    ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ಜಿಲ್ಲೆಯ ಹೆಮ್ಮೆ-ಕೀರ್ತಿಯ ತಾರೆ ಜೊತೆ ಕೆಲ ಕಾಲ ಸಂಭ್ರಮಿಸಿದ ಕ್ಷಣಗಳನ್ನ ಕ್ರಿಕೆಟ್ ಪ್ರೇಮಿಗಳು ಖುಷಿಪಟ್ಟರು. ಅವಕಾಶಕ್ಕಾಗಿ ನಾವು ಕಾಯಬಾರದು. ಅವಕಾಶವನ್ನು ನಾವೇ ಹುಡುಕುವ ಪ್ರಯತ್ನ ಮಾಡಬೇಕು ಎಂದ ವೇದಾ, ಕ್ರಿಕೆಟ್‍ನಲ್ಲಿ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ಸಿಗುತ್ತಿದೆ. ನಮ್ಮನ್ನ ನಾವು ಮೊದಲು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು. ಕ್ರಿಕೆಟ್‍ನಲ್ಲಿ ಸಾಧನೆ ಮಾಡುವ ಕನಸು ಕಂಡಿದ್ದ ನನಗೆ ಅವಕಾಶ ಸಿಕ್ಕಿದೆ. ಎಲ್ಲಾ ಮಹಿಳೆಯರೂ ಕೂಡ ಎಲ್ಲಾ ಕ್ಷೇತ್ರದಲ್ಲೂ ಕೂಡ ಸಮಾಜದ ಮುಖ್ಯ ವಾಹಿನಿಗೆ ಬರುವಂತಾಗಬೇಕು ಎಂದ ವೇದಾ ಕೃಷ್ಣಮೂರ್ತಿ ಅಭಿಪ್ರಾಯಪಟ್ಟರು.

  • ಹಸೆಮಣೆ ಏರಲು ಸಿದ್ಧರಾದ ಟೀಂ ಇಂಡಿಯಾ ಆಟಗಾರ್ತಿ!

    ಹಸೆಮಣೆ ಏರಲು ಸಿದ್ಧರಾದ ಟೀಂ ಇಂಡಿಯಾ ಆಟಗಾರ್ತಿ!

    ಬೆಂಗಳೂರು: ಟೀಂ ಇಂಡಿಯಾ ಮಹಿಳಾ ತಂಡದ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಅವರು ಶೀಘ್ರದಲ್ಲೇ ಹಸೆಮಣೆ ಏರಲಿದ್ದಾರೆ. ಈ ವಿಚಾರವನ್ನು ಸ್ವತಃ ವೇದಾ ಅವರೇ ರಿವೀಲ್ ಮಾಡಿದ್ದಾರೆ.

    ಕಳೆದ ತಿಂಗಳು ಫೇಸ್‍ಬುಕ್ ಪೋಸ್ಟ್ ಮಾಡಿರುವ ವೇದಾ, ತಾವು ವಿವಾಹವಾಗುತ್ತಿರುವ ಲಲಿತ್ ಚೌಧರಿ ಎಂಬ ಯುವಕನ ಫೋಟೋವನ್ನು ಪೋಸ್ಟ್ ಮಾಡಿದ್ದರು. ಆದರೆ ಯುವಕನ ಬಗ್ಗೆ ಹೆಚ್ಚಿನ ಮಾಹಿತಿಯನ್ನು ವೇದಾ ಅವರು ಬಿಟ್ಟು ಕೊಟ್ಟಿರಲಿಲ್ಲ. ಅಲ್ಲದೆ ಮದುವೆ ದಿನಾಂಕದ ಕುರಿತು ಕೂಡ ಯಾವುದೇ ಮಾಹಿತಿ ನೀಡಿರಲಿಲ್ಲ. ಶೀಘ್ರವೇ ಈ ಕುರಿತ ಅಧಿಕೃತ ಮಾಹಿತಿ ಲಭ್ಯವಾಗುವ ನಿರೀಕ್ಷೆ ಇದೆ ಎಂದು ಹೇಳಿದ್ದರು. ವೇದಾ ಅವರ ಪೋಸ್ಟ್ ಕಂಡ ಹಲವು ಅಭಿಮಾನಿಗಳು ಶುಭಕೋರಿ ಕಾಮೆಂಟ್ ಮಾಡಿದ್ದಾರೆ. ಇದುವರೆಗೂ ಈ ಪೋಸ್ಟ್ ಗೆ 4.7 ಸಾವಿರ ಮಂದಿ ಲೈಕ್ ಮಾಡಿದ್ದಾರೆ.

    26 ವರ್ಷದ ವೇದಾ ಕೃಷ್ಣಮೂರ್ತಿ ಟೀಂ ಇಂಡಿಯಾ ಪರ 48 ಏಕದಿನ ಪಂದ್ಯಗಳನ್ನು ಆಡಿದ್ದು, 8 ಅರ್ಧ ಶತಕಗಳೊಂದಿಗೆ 829 ರನ್ ಗಳಿಸಿದ್ದಾರೆ. ಟಿ20 ಮಾದರಿಯಲ್ಲಿ 59 ಪಂದ್ಯಗಳನ್ನು ಆಡಿದ್ದು, ಅರ್ಧ ಶತಕದೊಂದಿಗೆ 686 ರನ್ ಗಳಿಸಿದ್ದಾರೆ. ಸ್ಥಿರ ಪ್ರದರ್ಶನ ನೀಡಲು ವಿಫಲರಾದ ಹಿನ್ನೆಲೆಯಲ್ಲಿ ಸದ್ಯ ಟೀಂ ಇಂಡಿಯಾದಿಂದ ಹೊರಗಿದ್ದಾರೆ.

    ಮೇ 06 ರಿಂದ ಆರಂಭವಾಗಲಿರುವ ಚೊಚ್ಚಲ ಮಹಿಳಾ ಐಪಿಎಲ್ ಟೂರ್ನಿಯಲ್ಲಿ ವೇದಾ ಭಾಗವಹಿಸಲಿದ್ದು, ಮಿಥಾಲಿ ರಾಜ್ ನಾಯಕತ್ವದ ವೆಲಾಸಿಟಿ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಜೈಪುರದಲ್ಲಿ ಮೇ 06 ರಿಂದ 11 ರವರೆಗೂ ಈ ಪ್ರಯೋಗಾತ್ಮಕ ಮಹಿಳಾ ಚುಟುಕು ಟೂರ್ನಿ ನಡೆಯಲಿದೆ.

  • ಚಿರತೆ ದತ್ತು ಪಡೆದು ಪ್ರಾಣಿ ಪ್ರೀತಿ ಮೆರೆದ ಮಹಿಳಾ ಕ್ರಿಕೆಟರ್ ವೇದಾ ಕೃಷ್ಣಮೂರ್ತಿ

    ಚಿರತೆ ದತ್ತು ಪಡೆದು ಪ್ರಾಣಿ ಪ್ರೀತಿ ಮೆರೆದ ಮಹಿಳಾ ಕ್ರಿಕೆಟರ್ ವೇದಾ ಕೃಷ್ಣಮೂರ್ತಿ

    ಮೈಸೂರು: ಭಾರತ ಮಹಿಳಾ ಕ್ರಿಕೆಟ್ ತಂಡದ ಆಲ್‍ರೌಂಡರ್ ಆಟಗಾರ್ತಿ ಕೆ.ವೇದಾ ಕೃಷ್ಣಮೂರ್ತಿ ಅವರು ಮೈಸೂರು ಜಯಚಾಮರಾಜೇಂದ್ರ ಮೃಗಾಲಯದ ಚಿರತೆಯನ್ನು ದತ್ತು ಪಡೆದಿದ್ದಾರೆ.

    ಇದನ್ನೂ ಓದಿ: ಬಹಿರಂಗವಾಗಿ ಪತ್ನಿ ಮೇಲೆ ಪ್ರೀತಿ ತೋರಿಸಿದ ಸಿಎಂ!

    ಮೈಸೂರು ಮೃಗಾಲಯದ ಪ್ರಾಣಿಯನ್ನ ದತ್ತು ಯೋಜನೆ ಅಡಿಯಲ್ಲಿ ‘ಭಾವನಾ’ ಎಂಬ ಹೆಸರಿನ ಹೆಣ್ಣು ಚಿರತೆಯನ್ನು ಕೆ.ವೇದಾ ಕೃಷ್ಣಮೂರ್ತಿ ಅವರು ದತ್ತು ಪಡೆದಿದ್ದಾರೆ. ಈ ಚಿರತೆಯ ನಿರ್ವಹಣೆಗಾಗಿ ವರ್ಷಕ್ಕೆ 35 ಸಾವಿರ ರೂ. ಹಣವನ್ನು ವೇದಾ ನೀಡಲಿದ್ದಾರೆ. ಮೃಗಾಲಯದ ನಿರ್ದೇಶಕರು ದತ್ತು ಪತ್ರವನ್ನು ವೇದಾ ಕೃಷ್ಣಮೂರ್ತಿ ಅವರಿಗೆ ಹಸ್ತಾಂತರಿಸಿದ್ದಾರೆ.

    ಈ ಹಿಂದೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಒಂದು ಆನೆ ಹಾಗೂ ಒಂದು ಚಿರತೆಯನ್ನು ದತ್ತು ಪಡೆದಿದ್ದರು.

    ಇದನ್ನೂ ಓದಿ: ಪ್ರಾಣಿಗಳನ್ನು ದತ್ತು ಸ್ವೀಕರಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್