Tag: ವೇಯ್ಟ್‌ ಲಿಫ್ಟಿಂಗ್‌

  • Commonwealth Games: ಟಾಪ್-10 ಪಟ್ಟಿಯಲ್ಲಿ ಭಾರತಕ್ಕೆ ಸ್ಥಾನ

    Commonwealth Games: ಟಾಪ್-10 ಪಟ್ಟಿಯಲ್ಲಿ ಭಾರತಕ್ಕೆ ಸ್ಥಾನ

    ಬರ್ಮಿಂಗ್‌ಹ್ಯಾಮ್: ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ 2022ರ ಕಾಮನ್‌ವೆಲ್ತ್ ಗೇಮ್ಸ್ ರೋಚಕತೆಯಿಂದ ಕೂಡಿದೆ. 72 ರಾಷ್ಟ್ರಗಳಿಂದ 5 ಸಾವಿರಕ್ಕೂ ಹೆಚ್ಚು ಕ್ರೀಡಾಪಟುಗಳು ವಿವಿಧ ಸ್ಪರ್ಧೆಗಳಲ್ಲಿ ಕಣಕ್ಕಿಳಿದು, ಪೈಪೋಟಿ ನೀಡುತ್ತಿದ್ದಾರೆ.

    ಮಹಿಳಾ ಕ್ರಿಕೆಟ್, 3*3 ಬಾಸ್ಕೆಟ್‌ಬಾಲ್, ವ್ಹೀಲ್ ಚೇರ್ ಬಾಸ್ಕೆಟ್‌ಬಾಲ್, ಪ್ಯಾರಾ ಟೇಬಲ್ ಟೆನ್ನಿಸ್ ಕ್ರೀಡೆಗಳು ಹೊಸದಾಗಿ ಸೇರ್ಪಡೆಗೊಂಡಿವೆ. ಸಾವಿರಾರು ಕ್ರೀಡಾ ಪ್ರತಿಭೆಗಳು ತಮ್ಮ ಸಾಮರ್ಥ್ಯ ಪ್ರದರ್ಶನ ಮಾಡುತ್ತಿದ್ದು, ಇದರ ಟಾಪ್-10 ಪಟ್ಟಿಯಲ್ಲಿ ಭಾರತ ಸ್ಥಾನ ಪಡೆದುಕೊಂಡಿದೆ. ಇದನ್ನೂ ಓದಿ: ಮೆಕಾಯ್ ಮ್ಯಾಜಿಕ್, 2ನೇ T20ಯಲ್ಲಿ ವಿಂಡೀಸ್‌ಗೆ ರೋಚಕ ಜಯ – ಹೋರಾಡಿ ಸೋತ ಭಾರತ

    ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಕಾಮನ್‌ವೆಲ್ತ್ ಗೇಮ್ಸ್ನಲ್ಲಿ ಕಳೆದ ಮೂರು ದಿನಗಳಿಂದಲೂ ಭಾರತ ಪದಕಗಳ ಭರ್ಜರಿ ಬೇಟೆಯಾಡುತ್ತಿದೆ. 21ರ ತರುಣ ಸಂಕೇತ್ ಮಹಾದೇವ್ ಸರ್ಗರ್ ಅವರು ಬೆಳ್ಳಿ ಪದಕ ಪಡೆಯುವ ಮೂಲಕ ಖಾತೆ ತೆರೆದ ಭಾರತ ಕಳೆದ ಮೂರು ದಿನಗಳಲ್ಲಿ 3 ಚಿನ್ನ ಸೇರಿ ಒಟ್ಟು 9 ಪದಕಗಳನ್ನು ಪಡೆಯುವ ಮೂಲಕ 6ನೇ ಸ್ಥಾನಕ್ಕೆ ಜಿಗಿದಿದೆ.

    ಆಸ್ಟ್ರೇಲಿಯಾ 31 ಚಿನ್ನ, 20 ಬೆಳ್ಳಿ ಹಾಗೂ 20 ಕಂಚು ಸೇರಿ 71 ಪದಕಗಳನ್ನು ಪಡೆಯುವ ಮೂಲಕ ಅಗ್ರಸ್ಥಾನದಲ್ಲಿದೆ. 21 ಚಿನ್ನ, 22 ಬೆಳ್ಳಿ ಹಾಗೂ 11 ಕಂಚಿನ ಪದಕ ಪಡೆದ ಇಂಗ್ಲೆಂಡ್ 2ನೇ ಸ್ಥಾನದಲ್ಲಿದೆ 24 ಪದಗಳನ್ನು ಪಡೆದ ನ್ಯೂಜಿಲೆಂಡ್ 3ನೇ ಸ್ಥಾನ, 33 ಪದಕ ಪಡೆದ ಕೆನಡಾ 4ನೇ ಸ್ಥಾನ, 12 ಪದಕ ಪಡೆದ ಸೌತ್ ಆಫ್ರಿಕಾ 5ನೇ ಸ್ಥಾನದಲ್ಲಿದ್ದು, 9 ಪದಕಗಳನ್ನು ಪಡೆದ ಭಾರತ 6ನೇ ಸ್ಥಾನ ಉಳಿಸಿಕೊಂಡಿದೆ. ಕಳೆದ ಎರಡು ದಿನಗಳ ಹಿಂದೆ ಭಾರತ 12-16ನೇ ಸ್ಥಾನದಲ್ಲಿತ್ತು. ಇದನ್ನೂ ಓದಿ: Commonwealth Games: ಹರ್ಜಿಂದರ್ ಹವಾ – ಭಾರತಕ್ಕೆ ಮತ್ತೊಂದು ಕಂಚು

    ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದ ಮೀರಾಬಾಯಿ ಚಾನು ಕಾಮನ್‌ವೆಲ್ತ್‌ನಲ್ಲಿ ಚಿನ್ನದ ಪದಕ ಪಡೆದರು. ನಂತರದಲ್ಲಿ ಜೆರೆಮಿ ಲಾಲ್ರಿನ್ನುಂಗಾ, ಅಚಿಂತ್ ಶೆಯುಲಿ ತಲಾ ಒಂದೊಂದು ಚಿನ್ನದ ಪದಕ ಗಿಟ್ಟಿಸಿಕೊಂಡರು. ಸಂಕೇತ್ ಸರ್ಗರ್, ಬಿಂದ್ಯಾರಾಣಿ ದೇವಿ ಹಾಗೂ ಸುಶೀಲಾ ದೇವ್ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದರೆ, ಕನ್ನಡಿಗ ಗುರುರಾಜ್ ಪೂಜಾರಿ, ವಿಜಯ್‌ಕುಮಾರ್ ಯಾದವ್ ಹಾಗೂ ಹರ್ಜಿಂದರ್ ಕೌರ್ ಕಂಚಿನ ಪದಕಗಳನ್ನು ಗೆದ್ದು ಬೀಗಿದ್ದಾರೆ.

    ದೇಶ-ವಿದೇಶಗಳಿಂದ ಸಾವಿರಾರು ಕ್ರೀಡಾಪ್ರತಿಭೆಗಳು ತಮ್ಮ ಸಾಮರ್ಥ್ಯ ಮೆರೆಯುತ್ತಿದ್ದಾರೆ. ಈ ನೆಡುವೆ ಭಾರತದ ಯುವ ಸಮೂಹ ಹೊಸ ದಾಖಲೆ ಬರೆಯುವತ್ತ ದಾಪುಗಾಲು ಹಾಕುತ್ತಿದೆ. ಇದನ್ನೂ ಓದಿ: ಪದಕ ಗೆದ್ದಾಗಿದೆ ಇನ್ನಾದರೂ ಸಿನಿಮಾ ನೋಡು – ಚಿನ್ನದ ಹುಡುಗ ಅಚಿಂತ್‌ಗೆ ಮೋದಿ ಸಂದೇಶ

    ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯಮಾನ್ಯರು ಕ್ರೀಡಾಪಟುಗಳಿಗೆ ಶುಭ ಹಾರೈಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • Commonwealth Games: ಹರ್ಜಿಂದರ್ ಹವಾ – ಭಾರತಕ್ಕೆ ಮತ್ತೊಂದು ಕಂಚು

    Commonwealth Games: ಹರ್ಜಿಂದರ್ ಹವಾ – ಭಾರತಕ್ಕೆ ಮತ್ತೊಂದು ಕಂಚು

    ಬರ್ಮಿಂಗ್‌ಹ್ಯಾಮ್: ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಪದಕಗಳ ಬೇಟೆ ಮುಂದುವರಿದಿದೆ. ನಿನ್ನೆ ಒಂದೇ ದಿನ 3 ಪದಕಗಳು ಭಾರತದ ಪಾಲಾಗಿದ್ದು. ಒಟ್ಟು 9 ಪದಕಗಳನ್ನು ಗೆದ್ದಿದೆ. ನಿನ್ನೆ 48 ಕೆಜಿ ಮಹಿಳೆಯರ ವಿಭಾಗದಲ್ಲಿ ಸುಶೀಲ ದೇವಿ ಲಿಕ್ಮಾದಂ ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟರು. 60 ಕೆಜಿ ಪುರುಷರ ಜುಡೋ ವಿಭಾಗದಲ್ಲಿ ವಿಜಯ್ ಕುಮಾರ್ ಯಾದವ್ ಕಂಚಿನ ಪದಕ ಪಡೆದುಕೊಂಡಿದ್ದರು.

    ಇಂದು ಮಹಿಳೆಯರ 71 ಕೆಜಿ ಮಹಿಳೆಯರ ವಿಭಾಗದಲ್ಲಿ ವೇಯ್ಟ್ಲಿಫ್ಟರ್ ಹರ್ಜಿಂದ್ರ ಕೌರ್ ಶಕ್ತಿ ಪ್ರದರ್ಶಿಸಿ ಕಂಚಿನ ಪದಕದ ಬೇಟೆಯಾಡಿದ್ದಾರೆ. ಭಾರತದ ಹರ್ಜಿಂದರ್ ಕೌರ್ 71 ಕೆಜಿ ಮಹಿಳೆಯರ ವಿಭಾಗದ ವೇಯ್ಟ್‌ಲಿಫ್ಟಿಂಗ್‌ನಲ್ಲಿ ಒಟ್ಟು 212 ಕೆಜಿ ಭಾರ ಎತ್ತುವ ಮೂಲಕ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ. ಇದನ್ನೂ ಓದಿ: IND vs WI 2nd T20: ಎರಡು ಗಂಟೆ ತಡವಾಗಿ ಪಂದ್ಯ ಆರಂಭ – ಕಾರಣ ಮಾತ್ರ ಸಿಂಪಲ್

    ಕ್ಲೀನ್ ಮತ್ತು ಜರ್ಕ್ ಸುತ್ತಿನಲ್ಲಿ ಹರ್ಜಿಂದರ್ ಸಿಂಗ್ ತನ್ನ ಎಲ್ಲಾ ಪ್ರಯತ್ನಗಳಲ್ಲಿ ಯಶಸ್ವಿಯಾದರು. ತನ್ನ 3ನೇ ಪ್ರಯತ್ನದಲ್ಲಿ 119 ಕೆಜಿ (93 ಕೆಜಿ, 119 ಕೆಜಿ) ಎತ್ತುವ ಮೂಲಕ ತನ್ನ ಒಟ್ಟು ತೂಕ 212 ಕೆಜಿ ಎತ್ತುವಲ್ಲಿ ಯಶಸ್ವಿಯಾದರು.

    ಹರ್ಜಿಂದರ್ ಕೌರ್ ಸ್ನ್ಯಾಚ್‌ ವಿಭಾಗದಲ್ಲಿ ಮೊದಲ ಪ್ರಯತ್ನದಲ್ಲಿ 90 ಕೆಜಿ ಎತ್ತುವಲ್ಲಿ ವಿಫಲರಾದರು. 2ನೇ ಸುತ್ತಿನಲ್ಲಿ 90 ಕೆಜಿ ಹಾಗೂ 3ನೇ ಸುತ್ತಿನಲ್ಲಿ ಯಶಸ್ವಿಯಾಗಿ 93 ಕೆಜಿ ಭಾರವನ್ನು ಎತ್ತಿದರು. ನಂತರ ಕ್ಲೀನ್ ಮತ್ತು ಜರ್ಕ್ ವಿಭಾಗದಲ್ಲಿ ಮೊದಲ ಪ್ರಯತ್ನದಲ್ಲೇ 113 ಕೆ.ಜಿ ಎತ್ತುವಲ್ಲಿ ಯಶಸ್ವಿಯಾದರು. 2ನೇ ಸುತ್ತಿನಲ್ಲಿ 116 ಕೆಜಿ ಹಾಗೂ 3ನೇ ಸುತ್ತಿನಲ್ಲಿ 119 ಕೆಜಿಯನ್ನು ಯಶಸ್ವಿಯಾಗಿ ಎತ್ತುವ ಮೂಲಕ ಶಕ್ತಿ ಪ್ರದರ್ಶಿಸಿ ಕಂಚಿನ ಪದಕಕ್ಕೆ ಕೊರಳೊಡ್ಡಿದರು.

    Live Tv
    [brid partner=56869869 player=32851 video=960834 autoplay=true]

  • Commonwealth Games: ಭಾರತಕ್ಕೆ ಮತ್ತೊಂದು ಚಿನ್ನ ತಂದ ಜೆರೆಮಿ ಚಮತ್ಕಾರ

    Commonwealth Games: ಭಾರತಕ್ಕೆ ಮತ್ತೊಂದು ಚಿನ್ನ ತಂದ ಜೆರೆಮಿ ಚಮತ್ಕಾರ

    ಬರ್ಮಿಂಗ್‌ಹ್ಯಾಮ್: ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಕಳೆದ ಎರಡು ದಿನಗಳಿಂದ ಭಾರತ ಪದಕಗಳ ಭರ್ಜರಿ ಬೇಟೆಯಾಡುತ್ತಿದೆ. 21ರ ತರುಣ ಸಂಕೇತ್ ಮಹಾದೇವ್ ಸರ್ಗರ್ ಮೂಲಕ ಖಾತೆ ತೆರೆದ ಭಾರತ ಕಳೆದ ಎರಡು ದಿನಗಳಲ್ಲಿ 5 ಪದಕಗಳನ್ನು ಬಾಚಿಕೊಂಡಿದೆ.

    ಭಾರತದ ಜೆರೆಮಿ ಲಾಲ್ರಿನ್ನುಂಗಾ ಪುರುಷರ 67 ಕೆಜಿ ವಿಭಾಗದ ವೇಟ್‌ಲಿಫ್ಟಿಂಗ್‌ನಲ್ಲಿ ಒಟ್ಟು 300 ಕೆಜಿ ಭಾರ ಎತ್ತುವ ಮೂಲಕ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ. ಇದನ್ನೂ ಓದಿ: CommonwealthGames: ಚಿನ್ನದ ಬೇಟೆಯೊಂದಿಗೆ ದಾಖಲೆ ಬರೆದ ಮೀರಾಬಾಯಿ ಚಾನು

    ಜೆರೆಮಿ ಸ್ನ್ಯಾಚ್ ಈವೆಂಟ್‌ನಲ್ಲಿ 140 ಕೆಜಿ ಹಾಗೂ ಕ್ಲೀನ್ ಮತ್ತು ಜರ್ಕ್ ವಿಭಾಗದಲ್ಲಿ ಒಟ್ಟು 160 ಕೆಜಿ (ಒಟ್ಟು 300 ಕೆ.ಜಿ) ಎತ್ತುವ ಮೂಲಕ ಚಿನ್ನದ ಪದಕ ಬಾಚಿಕೊಂಡಿದ್ದು, ದಾಖಲೆ ನಿರ್ಮಿಸಿದ್ದಾರೆ. ಇದು ಭಾರತಕ್ಕೆ ಒಲಿದ 2ನೇ ಚಿನ್ನದ ಪದಕವಾಗಿದೆ. ಇದನ್ನೂ ಓದಿ: Commonwealth Games 2022: ಭಾರತಕ್ಕೆ ನಾಲ್ಕನೇ ಪದಕ – ವೇಟ್‍ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕ ಗೆದ್ದ ಬಿಂದ್ಯಾರಾಣಿ ದೇವಿ

    ನಿನ್ನೆ ಮೀರಾಬಾಯಿ ಚಾನು ಅವರು ವೇಯ್ಟ್ ಲಿಫ್ಟಿಂಗ್ ವಿಭಾಗದಲ್ಲಿ ಮೊದಲ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಭಾರತದ ಪದಕ ಬೇಟೆ ಆರಂಭ – ಸಂಕೇತ್‌ಗೆ ವೇಟ್‌ಲಿಫ್ಟಿಂಗ್‌ನಲ್ಲಿ ಬೆಳ್ಳಿ

    ಭಾರತದ ಪದಕ ಬೇಟೆ ಆರಂಭ – ಸಂಕೇತ್‌ಗೆ ವೇಟ್‌ಲಿಫ್ಟಿಂಗ್‌ನಲ್ಲಿ ಬೆಳ್ಳಿ

    ಬರ್ಮಿಂಗ್‌ಹ್ಯಾಮ್: ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತ ಪದಕದ ಬೇಟೆ ಆರಂಭಸಿದೆ. 21ರ ತರುಣ ಸಂಕೇತ್ ಮಹಾದೇವ್ ಸರ್ಗರ್ ಬೆಳ್ಳಿಪದಕ ಗೆದ್ದಿದ್ದಾರೆ.

    ಸಂಕೇತ್ ಮಹಾದೇವ್ ಸರ್ಗರ್ (21) ಪುರುಷರ ವಿಭಾಗದ 55 ಕೆಜಿ ವೇಟ್‌ಲಿಫ್ಟಿಂಗ್‌ನಲ್ಲಿ ಒಟ್ಟು 248 ಕೆಜಿ (113+135) ಭಾರ ಎತ್ತುವ ಮೂಲಕ ಬೆಳ್ಳಿ ಕಿರೀಟ ಧರಿಸಿದ್ದಾರೆ. ಇದನ್ನೂ ಓದಿ: ಕಾಮನ್‍ವೆಲ್ತ್ ಗೇಮ್ಸ್ 2022: ಎರಡನೇ ದಿನ ಪದಕದ ನಿರೀಕ್ಷೆಯಲ್ಲಿ ಭಾರತ – ಲವ್ಲಿನಾ, ಮೀರಾಬಾಯಿ ಚಾನು ಕಣಕ್ಕೆ

    ಚಿನ್ನಕ್ಕಾಗಿ ಸೆಟ್ಟೇರಿದ್ದ ಸಂಕೇತ್‌ಗೆ ಸರ್ಗರ್ ಕ್ಲೀನ್ ಮತ್ತು ಜರ್ಕ್ ಸುತ್ತಿನ 2ನೇ ಪ್ರಯತ್ನದಲ್ಲಿ ಚಿನ್ನ ಕೈತಪ್ಪಿತು. 139 ಕೆಜಿ ಎತ್ತಲು ಪ್ರಯತ್ನಿಸಿದರೂ ಸಾಧ್ಯವಾಗದ ಕಾರಣ ಬೆಳ್ಳಿ ಪದಕ ಗೆದ್ದಿದ್ದಾರೆ.

    Live Tv
    [brid partner=56869869 player=32851 video=960834 autoplay=true]