Tag: ವೈಎಸ್‌ವಿ ದತ್ತ

  • ಹುಟ್ಟುಹಬ್ಬದ ದಿನದಿಂದ ವೈಎಸ್‌ವಿ ದತ್ತ ಸೋಲಿನ ಪ್ರಾಯಶ್ಚಿತ್ತ ಪಾದಯಾತ್ರೆ

    ಹುಟ್ಟುಹಬ್ಬದ ದಿನದಿಂದ ವೈಎಸ್‌ವಿ ದತ್ತ ಸೋಲಿನ ಪ್ರಾಯಶ್ಚಿತ್ತ ಪಾದಯಾತ್ರೆ

    ಚಿಕ್ಕಮಗಳೂರು: ಮೊನ್ನೆ ಮೊನ್ನೆ ಮುಗಿದ 2023ರ ವಿಧಾನಸಭಾ ಚುನಾವಣೆಯಲ್ಲಿ (Election) ಜಿಲ್ಲೆಯ ಕಡೂರು ಕ್ಷೇತ್ರದಲ್ಲಿ ಜೆಡಿಎಸ್‌ನಿಂದ (JDS) ಸ್ಪರ್ಧಿಸಿದ್ದ ಮಾಜಿ ಶಾಸಕ ವೈಎಸ್‌ವಿ ದತ್ತ (YSV Datta) ಈ ಬಾರಿಯೂ ಸೋತಿದ್ದಾರೆ. ಇದೀಗ ಸೋಲಿನ ಆತ್ಮಾವಲೋಕನ ಮಾಡಿಕೊಳ್ಳಲು ಸೋಲಿನ ಪ್ರಾಯಶ್ಚಿತ್ತ ಪಾದಯಾತ್ರೆಗೆ ದತ್ತ ಮುಂದಾಗಿದ್ದಾರೆ.

    ಚುನಾವಣೆಗೂ ಮುನ್ನ ಇದು ನನ್ನ ಕಡೆ ಎಲೆಕ್ಷನ್ ಎಂದಿದ್ದ ದತ್ತ ಇಂದಿಗೂ ತಮ್ಮ ಹೇಳಿಕೆಗೆ ಬದ್ಧರಾಗಿದ್ದಾರೆ. ಇನ್ನು ಮುಂದೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.

    ಕಡೂರಿಗರು ನನ್ನ ರಾಜಕೀಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಹೀಗಾಗಿ ನಾನಾಗಲೀ ಅಥವಾ ನಮ್ಮ ಕುಟುಂಬವಾಗಲಿ ಈ ಕ್ಷೇತ್ರವನ್ನು ಮರೆಯಲು ಸಾಧ್ಯವಿಲ್ಲ. ಕಡೂರು ಕ್ಷೇತ್ರದ ಜನತೆ ನೀಡಿರುವ ಪ್ರೀತಿಗೆ ಪ್ರತಿಯಾಗಿ ನನ್ನ ಕೊನೆಯುಸಿರು ಇರುವವರೆಗೂ ಎಲ್ಲರಲ್ಲೂ ಒಂದಾಗಿ ನನ್ನ ನೆಲದಲ್ಲಿಯೇ ಮಣ್ಣಾಗುತ್ತೇನೆ. ನನ್ನ ಹಲವಾರು ತಪ್ಪುಗಳಿಗೆ ಜನರು ಸರಿಯಾದ ಶಿಕ್ಷೆ ನೀಡಿದ್ದಾರೆ. ತಪ್ಪು ಮಾಡಿದ ನಾನು ಅದಕ್ಕಾಗಿ ಪ್ರಾಯಾಶ್ಚಿತ್ತ ಮಾಡಿಕೊಳ್ಳುವ ನಿರ್ಧಾರ ಮಾಡಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ಗ್ಯಾರಂಟಿ ಸಿಎಂ ಭಾಗ್ಯ ಕೊಡಿ – ಹೈಕಮಾಂಡ್‌ ಮುಂದೆ ಸಿದ್ದು, ಡಿಕೆಶಿ ವಾದ ಏನು?

    ಜೂನ್ 24 ನನ್ನ ಜನ್ಮದಿನ. ಅಂದಿನಿಂದ ಕ್ಷೇತ್ರದ ಪ್ರತಿ ಹಳ್ಳಿಗೆ ಪಾದಯಾತ್ರೆಯ ಮೂಲಕ ತೆರಳಿ ನನ್ನ ತಪ್ಪುಗಳಿಗಾಗಿ ಕ್ಷಮೆ ಕೋರುತ್ತೇನೆ. ಪಾದಯಾತ್ರೆಯಲ್ಲಿ ಹಳ್ಳಿಗಳಲ್ಲೇ ಗ್ರಾಮ ವಾಸ್ತವ್ಯ ಮಾಡುತ್ತೇನೆ. ಈ ಸಂಕಲ್ಪ ಯಾವುದೇ ಚುನಾವಣಾ ದೃಷ್ಟಿಯಿಂದ ಮಾಡಿಲ್ಲ. ಕೇವಲ ನನ್ನ ಆತ್ಮಾವಲೋಕನ ಮಾತ್ರ. ಎಲ್ಲ ವಿವರಗಳನ್ನು ತಮಗೆ ತಿಳಿಸುತ್ತೇನೆ ಎಂದು ಘೋಷಣೆ ಮಾಡಿದ್ದಾರೆ.

    ದತ್ತ ಈ ಮಾತುಗಳನ್ನು ಹೇಳುತ್ತಿದ್ದಂತೆ ಕಾರ್ಯಕರ್ತರು ತಪ್ಪು ಮಾಡಿದ್ದು ಯಾರೋ, ನೀವ್ಯಾಕೆ ಪ್ರಾಯಶ್ಚಿತ್ತ ಮಾಡಿಕೊಳ್ಳಬೇಕು ಎಂದಿದ್ದಾರೆ. ತಮ್ಮ ನಿರ್ಧಾರವನ್ನು ಕೈಬಿಡಬೇಕು ಎಂದು ಅಭಿಮಾನಿಗಳು ಮನವಿ ಮಾಡಿದ್ದಾರೆ. ಆದರೆ ದತ್ತ ನನ್ನ ನಿರ್ಧಾರ ಅಚಲ ಎಂದಿದ್ದಾರೆ. ಇದನ್ನೂ ಓದಿ: ನಾನು ತಪ್ಪು ಮಾಡಿದ್ರೆ ನನ್ನ ವಂಶ ನಿರ್ವಂಶವಾಗಲಿ – ಮಳವಳ್ಳಿ ಬಿಜೆಪಿ ಪರಾರ್ಜಿತ ಅಭ್ಯರ್ಥಿ

  • ಕಡೂರು ಕ್ಷೇತ್ರದಿಂದ ವೈಎಸ್‌ವಿ ದತ್ತ ಸ್ಪರ್ಧೆ: ರೇವಣ್ಣ ಘೋಷಣೆ

    ಕಡೂರು ಕ್ಷೇತ್ರದಿಂದ ವೈಎಸ್‌ವಿ ದತ್ತ ಸ್ಪರ್ಧೆ: ರೇವಣ್ಣ ಘೋಷಣೆ

    – ವೈಎಸ್‌ವಿ ದತ್ತ ಘರ್‌ ವಾಪ್ಸಿ
    – ಜೆಡಿಎಸ್ ಅಧಿಕೃತ ಅಭ್ಯರ್ಥಿ ಧನಂಜಯ್‌ಗೆ ಕೊಕ್!

    ಚಿಕ್ಕಮಗಳೂರು: ಮಾಜಿ ಶಾಸಕ ವೈ.ಎಸ್.ವಿ ದತ್ತ (YSV Datta) ಅವರು ಮರಳಿ ಜೆಡಿಎಸ್‌ಗೆ (JDS) ಬಂದಿದ್ದಾರೆ. ಕಡೂರಿನಲ್ಲಿ (Kaduru) ಜೆಡಿಎಸ್ ಅಭ್ಯರ್ಥಿಯಾಗಿ ದತ್ತ ಸ್ಪರ್ಧೆ ಮಾಡಲಿದ್ದಾರೆ.

    ವೈ.ಎಸ್.ವಿ ದತ್ತ ಮನೆಗೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ (H.D.Revanna), ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಇಂದು ಭೇಟಿ ನೀಡಿದರು. ಕಡೂರು ತಾಲೂಕಿನ ಯಗಟಿಯಲ್ಲಿರುವ ದತ್ತ ಅವರ ನಿವಾಸಕ್ಕೆ ತೆರಳಿ ಚರ್ಚಿಸಿದರು. ಕಡೂರಿನಲ್ಲಿ ದತ್ತ ಸ್ಪರ್ಧಿಸಲಿದ್ದಾರೆ ಎಂದು ಈ ವೇಳೆ ರೇವಣ್ಣ ಘೋಷಿಸಿದ್ದಾರೆ. ಇದನ್ನೂ ಓದಿ: ಎಂ.ಪಿ. ಕುಮಾರಸ್ವಾಮಿ ಸಂದರ್ಭಕ್ಕೊಂದು ಮಾತನಾಡ್ತಾರೆ: ಸಿ.ಟಿ ರವಿ

    ದತ್ತ ಅವರು ಇದೇ 18ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಆಗ ಎಷ್ಟೇ ಕಷ್ಟ ಆದರೂ ಸರಿ ನಾನು ಬಂದೇ ಬರುತ್ತೇನೆ ಎಂದು ಹೆಚ್‌.ಡಿ.ದೇವೇಗೌಡರು ತಿಳಿಸಿದ್ದಾರೆ ಎಂದು ರೇವಣ್ಣ ಹೇಳಿದ್ದಾರೆ.

    ಚುನಾವಣೆಯಲ್ಲಿ ಕಡೂರು ಕ್ಷೇತ್ರದಿಂದ ದತ್ತ ಅವರು ಟಿಕೆಟ್ ಆಕಾಂಕ್ಷಿಯಾಗಿದ್ದರು. ಜೆಡಿಎಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಪಕ್ಷ ಟಿಕೆಟ್ ನೀಡಲಿಲ್ಲ. ಹೀಗಾಗಿ ಬೇಸರಗೊಂಡು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದರು. ಆದರೆ ಕಾಂಗ್ರೆಸ್‌ನಲ್ಲೂ ಅವರಿಗೆ ಟಿಕೆಟ್ ಸಿಗಲಿಲ್ಲ. ಈ ವೇಳೆ ಬೇಸರ ವ್ಯಕ್ತಪಡಿಸಿದ ದತ್ತ ಸ್ವತಂತ್ರ ಅಭ್ಯರ್ಥಿಗಳಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದರು. ಈಗ ಮತ್ತೆ ಕಾಂಗ್ರೆಸ್ ಬಿಟ್ಟು ಜೆಡಿಎಸ್‌ಗೆ ಮರಳಿದ್ದಾರೆ. ಇದನ್ನೂ ಓದಿ: ಚಾಮರಾಜನಗರದಲ್ಲೇ ಸೋಮಣ್ಣ ಕಟ್ಟಿ ಹಾಕಲು ʼಕೈʼ ರಣವ್ಯೂಹ! – ಬಿಜೆಪಿ ಬಂಡಾಯವನ್ನೇ ಬಂಡವಾಳ ಮಾಡಿಕೊಳ್ಳಲು‌ ಪ್ಲಾನ್

    ಬುಧವಾರ ದೇವೇಗೌಡರನ್ನ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಇಂದು ದತ್ತ ಮನೆಗೆ ರೇವಣ್ಣ, ಪ್ರಜ್ವಲ್ ಭೇಟಿ ನೀಡಿದ್ದರು. ಈ ವೇಳೆ ದತ್ತ ಅವರ ಸ್ಪರ್ಧೆಯನ್ನು ಖಚಿತಪಡಿಸಿದರು.

    ಕಡೂರು ಕ್ಷೇತ್ರದಿಂದ ಸ್ಪರ್ಧಿಸಲು ಜೆಡಿಎಸ್‌ನಿಂದ ಧನಂಜಯ್ ಅವರನ್ನು ಅಧಿಕೃತಗೊಳಿಸಲಾಗಿತ್ತು. ಆದರೆ ಈಗ ಧನಂಜಯ್ ಅವರಿಗೆ ಕೊಕ್ ನೀಡಲಾಗಿದೆ. ದತ್ತ ಅವರಿಗೆ ಟಿಕೆಟ್ ಎಂದು ಘೋಷಿಸಿದ್ದಾರೆ.

  • ‘ಕೈ’ ತಪ್ಪಿದ ಟಿಕೆಟ್‌: ಸ್ವತಂತ್ರ ಅಭ್ಯರ್ಥಿಯಾಗಿ ವೈಎಸ್‌ವಿ ದತ್ತ ಸ್ಪರ್ಧೆ

    ‘ಕೈ’ ತಪ್ಪಿದ ಟಿಕೆಟ್‌: ಸ್ವತಂತ್ರ ಅಭ್ಯರ್ಥಿಯಾಗಿ ವೈಎಸ್‌ವಿ ದತ್ತ ಸ್ಪರ್ಧೆ

    – ಚುನಾವಣೆ ಖರ್ಚಿಗಾಗಿ ಟವೆಲ್‌ ಹಿಡಿದು ಜನರಿಂದ ಭಿಕ್ಷೆ

    ಚಿಕ್ಕಮಗಳೂರು: ಕಡೂರು (Kadur) ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧೆಗೆ ಕಾಂಗ್ರೆಸ್‌ನಿಂದ ಟಿಕೆಟ್‌ ಕೈತಪ್ಪಿದ ಕಾರಣಕ್ಕೆ ಮಾಜಿ ಎಂಎಲ್‌ಸಿ ವೈಎಸ್‌ವಿ ದತ್ತ (YSV Datta) ಅವರು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸುಳಿವು ಕೊಟ್ಟಿದ್ದಾರೆ.

    ಭಾನುವಾರ ನಡೆದ ಸ್ವಾಭಿಮಾನದ ಸಭೆಯಲ್ಲಿ, ಕಡೂರು ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ವೈಎಸ್‌ವಿ ದತ್ತ ಅವರಿಗೆ ಬೆಂಬಲಿಗರು ಒತ್ತಾಯಿಸಿದರು. ಬೆಂಬಲಿಗರ ಒತ್ತಾಯಕ್ಕೆ ದತ್ತ ಒಪ್ಪಿಗೆ ಸೂಚಿಸಿದ್ದಾರೆ. ಅಷ್ಟೇ ಅಲ್ಲದೇ ಚುನಾವಣೆಯಲ್ಲಿ ಸ್ಪರ್ಧೆ ಖರ್ಚಿಗಾಗಿ ಟವೆಲ್‌ ಹಿಡಿದು ಸಭೆಯಲ್ಲಿ ಜನರಿಂದ ಭಿಕ್ಷೆ ಕೂಡ ಎತ್ತಿದ್ದಾರೆ. ಇದನ್ನೂ ಓದಿ: ನೇಕಾರರ ನಾಡಲ್ಲಿ ಯಾರಿಗೆ ಟಿಕೆಟ್- ಎರಡೂ ಪಕ್ಷದಲ್ಲೂ ಎದ್ದಿದೆ ಅಸಮಾಧಾನದ ಬಿರುಗಾಳಿ

    ಅಭಿಮಾನಿಗಳು 50 ಸಾವಿರ, ಲಕ್ಷ ಹಾಗೂ 2 ಲಕ್ಷ ಹೀಗೆ ಹಣ ಮತ್ತು ಚೆಕ್‌ ಕೂಡ ನೀಡಿದ್ದಾರೆ. ಮತ್ತಷ್ಟು ಹಣ ಕೊಡುವುದಾಗಿಯೂ ಭರವಸೆಯನ್ನು ನೀಡಿದ್ದಾರೆ. ಅಭಿಮಾನಿಗಳ ಭರಪೂರ ಬೆಂಬಲಕ್ಕಾಗಿ ಈ ಬಾರಿ ಚುನಾವಣೆಯಲ್ಲಿ ಕಡೂರು ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸುಳಿವನ್ನು ದತ್ತ ಅವರು ಕೊಟ್ಟಿದ್ದಾರೆ.

    ಜೆಡಿಎಸ್‌ ತೊರೆದು ಈಚೆಗೆ ಕಾಂಗ್ರೆಸ್‌ ಸೇರಿದ್ದ ವೈಎಸ್‌ವಿ ದತ್ತ ಅವರು ಕಡೂರು ಕ್ಷೇತ್ರ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಆದರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಜೊತೆಗಿನ ಒಳಮುನಿಸಿನಿಂದ ಟಿಕೆಟ್‌ ಕೈತಪ್ಪಿದೆ ಎನ್ನಲಾಗುತ್ತಿದೆ. ಕಾಂಗ್ರೆಸ್‌ ಸೇರುವಾಗ ಬೇಷರತ್ತಾಗಿ ಪಕ್ಷ ಸೇರುತ್ತಿದ್ದೇನೆ ಎಂದು ದತ್ತ ಹೇಳಿದ್ದರು. ಆದರೆ ಟಿಕೆಟ್‌ ಗಿಟ್ಟಿಸಲು ಒಳಗೊಳಗೆ ಸಾಕಷ್ಟು ಪ್ರಯತ್ನ ನಡೆಸಿದ್ದರು. ಇದನ್ನೂ ಓದಿ: ಕಾಂಗ್ರೆಸ್ ಟಿಕೆಟ್ ಹರಾಜಾಗಿದ್ದು, ಚುನಾವಣೆ ಮಾಡುವಷ್ಟೇ ಹಣ ನೀಡಿದ್ದಾರೆ – ಎಸ್.ಕೆ ಬಸವರಾಜನ್ ಕಿಡಿ

    ಕಾಂಗ್ರೆಸ್‌ ಹೈಕಮಾಂಡ್‌ ಬಿಡುಗಡೆ ಮಾಡಿದ ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ ದತ್ತ ಅವರಿಗೆ ಟಿಕೆಟ್‌ ಕೈತಪ್ಪಿದೆ. ದತ್ತ ಬದಲಿಗೆ ಕೆ.ಎಸ್‌.ಆನಂದ್‌ ಅವರಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಿದೆ.

  • ಚುನಾವಣೆ ಖರ್ಚಿಗಾಗಿ ವೈಎಸ್‌ವಿ ದತ್ತಗೆ 101 ರೂ. ನೀಡಿದ ಅಭಿಮಾನಿ

    ಚುನಾವಣೆ ಖರ್ಚಿಗಾಗಿ ವೈಎಸ್‌ವಿ ದತ್ತಗೆ 101 ರೂ. ನೀಡಿದ ಅಭಿಮಾನಿ

    ಚಿಕ್ಕಮಗಳೂರು: ಜಿಲ್ಲೆಯ ಕಡೂರು (Kadur) ತಾಲೂಕಿನ ಮಾಜಿ ಶಾಸಕ ಹಾಗೂ ದತ್ತ ಮೇಷ್ಟ್ರು ಎಂದೇ ಖ್ಯಾತಿಯಾಗಿರುವ ವೈ.ಎಸ್.ವಿ. ದತ್ತ (YSV Datta) ಅವರಿಗೆ ಚುನಾವಣೆ ಖರ್ಚಿಗಾಗಿ ಅಭಿಮಾನಿಯೊಬ್ಬ 101 ರೂ. ಹಣ ನೀಡಿ ಶುಭ ಕೋರಿದ್ದಾರೆ.

    ಕಳೆದ 50 ವರ್ಷಗಳಿಂದ ಜೆಡಿಎಸ್‌ನ ಕಟ್ಟಾಳಾಗಿದ್ದ ವೈ.ಎಸ್.ವಿ.ದತ್ತ, ಮಾಜಿ ಪ್ರಧಾನಿ ದೇವೇಗೌಡರ ಮಾನಸ ಪುತ್ರನಂತೆಯೇ ಇದ್ದರು. ಆದರೆ, ಕಳೆದ 2 ತಿಂಗಳ ಹಿಂದೆ ಜೆಡಿಎಸ್ (JDS) ತೊರೆದು ಕಾಂಗ್ರೆಸ್ ಸೇರಿದ್ದರು. ಈಗ ಕಡೂರಿನ ಕಾಂಗ್ರೆಸ್ (Congress) ಅಭ್ಯರ್ಥಿ ಎಂದೇ ಬಿಂಬಿತವಾಗಿದ್ದಾರೆ. ಹಾಗಾಗಿ, ಕಡೂರು ತಾಲೂಕಿನ ಗಿರಿಯಾಪುರ ಮೂಲದ ವ್ಯಕ್ತಿಯೊಬ್ಬರು 101 ರೂಪಾಯಿ ದಾನ ನೀಡಿ ಚುನಾವಣೆಗೆ ಶುಭ ಕೋರಿದ್ದಾರೆ.

    ಕ್ಷೇತ್ರ ಹಾಗೂ ಮತದಾರರ ಮೇಲೆ ನಿಮಗೆ ಇದ್ದ ಪ್ರೀತಿ, ಕಾಳಜಿ, ಅಭಿಮಾನ ಹಾಗೂ ನೀವು ಮಾಡಿದ ಅಭಿವೃದ್ಧಿ ನೆನಪಿನಲ್ಲಿ ಉಳಿಯುವಂತದ್ದು. ಆಳ್ವಾಸ್ ನುಡಿಸಿರಿಯಲ್ಲಿ ಅಖಂಡ ಕರ್ನಾಟಕದ ವಿಷಯವಾಗಿ ನೀವು ಬಿತ್ತರಿಸಿದ ನಾಡಿನ ಅಖಂಡತೆಯ ವಿಚಾರಗಳು ಜನರ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದಿದೆ. ನಿಮಗಿರುವ ಮಳೆ ನೀರು ಶೇಖರಣೆ ಹಾಗೂ ಪ್ರಕೃತಿ ಉಳಿಸುವ ಪರಿಕಲ್ಪನೆ ಜನರನ್ನು ಆಕರ್ಷಿಸಿದೆ. ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡುವ ನಿಮ್ಮ ವ್ಯಕ್ತಿತ್ವಕ್ಕೆ ಜನ ನಿಮ್ಮ ಜೊತೆಗಿದ್ದಾರೆ. ನಿಮಗೆ ಜನಸಾಮಾನ್ಯರ ಸಮಸ್ಯೆಯನ್ನು ಬಗೆಹರಿಸುವ ಹೊಸ ಜವಾಬ್ದಾರಿ ಇದೆ. ಅದನ್ನು ನಿರ್ವಹಿಸುತ್ತೀರಾ ಎಂದು ನಂಬಿದ್ದೇವೆ ಎಂದು ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಬಿಜೆಪಿಯಲ್ಲಿ ಟಿಕೆಟ್ ಕೊಟ್ಟರೆ ನಿಂತ್ಕೊತೀನಿ, ಇಲ್ಲ ಅಂದ್ರೆ ಇಲ್ಲ: ಸೋಮಣ್ಣ

    ನಾನು ಆರ್ಥಿಕವಾಗಿ ಶಕ್ತಿವಂತನಲ್ಲ. ಹಾಗಾಗಿ, ನಿಮಗೆ ಚಿಕ್ಕ ಕಾಣಿಕೆ ನೀಡಿದ್ದೇನೆ. ನಮ್ಮ ಮನೆಯವರ ಎಲ್ಲಾ ಮತಗಳನ್ನು ನಿಮಗೆ ನೀಡುತ್ತೇವೆ.‌ ಸಮಾನ ಮನಸ್ಕರಾದ ಜೊತೆ ಮಾತನಾಡಿ ತಮ್ಮ ಕೈ ಬಲಗೊಳ್ಳಲು ಸಹಕರಿಸುತ್ತೇವೆ ಎಂದು ಪತ್ರ ಬರೆದು, 101 ರೂಪಾಯಿ ಹಣ ನೀಡಿ ವೈ.ಎಸ್.ವಿ. ದತ್ತ ಅವರಿಗೆ ಶುಭ ಕೋರಿದ್ದಾರೆ. ಇದನ್ನೂ ಓದಿ: ಪತ್ನಿ ತಡವಾಗಿ ಏಳುತ್ತಾಳೆ – ಪತಿಯಿಂದ ಪೊಲೀಸರಿಗೆ ದೂರು

  • ಕೋಮುವಾದಿ ಪಕ್ಷ ಮಣಿಸಲು ಕಾಂಗ್ರೆಸ್‌ ಸೇರಲು ನಿರ್ಧಾರ – ವೈಎಸ್‌ವಿ ದತ್ತ

    ಕೋಮುವಾದಿ ಪಕ್ಷ ಮಣಿಸಲು ಕಾಂಗ್ರೆಸ್‌ ಸೇರಲು ನಿರ್ಧಾರ – ವೈಎಸ್‌ವಿ ದತ್ತ

    ಬೆಂಗಳೂರು: ನನ್ನ ನಂಬಿ ಬಂದವರು ಅತಂತ್ರ ಆಗಬಾರದು. ಅವರಿಗೆ ನೆಲೆಕೊಡಿಸಲು ಕಾಂಗ್ರೆಸ್ (Congress) ಸೇರ್ಪಡೆಯಾಗುತ್ತಿದ್ದೇನೆ ಎಂದು ಜೆಡಿಎಸ್‌ (JDS) ಮಾಜಿ ಶಾಸಕ ವೈಎಸ್‌ವಿ ದತ್ತ (YSV Datta) ಹೇಳಿದರು.

    ಕಾಂಗ್ರೆಸ್‌ ಸೇರ್ಪಡೆ ಕುರಿತು ಮಾತನಾಡಿರುವ ಅವರು, ನಾನ್ನ ಮತ್ತು ದೇವೇಗೌಡರ (H.D.Devegowda) ರಾಜಕೀಯ 50 ವರ್ಷ ಸುದೀರ್ಘವಾದುದ್ದು. ದೇವೇಗೌಡರ ಜೊತೆ ನಾನು 20 ವರ್ಷಗಳಿಂದ ಇದ್ದೇನೆ. ನನಗೂ ಅವರಿಗೆ ತಂದೆ ಮಗನ ಸಂಬಂಧ. ನಾನು ದೇವೇಗೌಡರು ಇರುವವರೆಗೂ ಅವರ ಜೊತೆ ಇರುತ್ತೇನೆ ಎಂದು ಹೇಳಿದ್ದೆ. ಆದರೆ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗುವ ಬಗ್ಗೆ ಒತ್ತಾಯಿಸಿದ್ದಾರೆ. ನಾನು ದೇವೇಗೌಡರಿಗೆ ಈ ವಿಚಾರ ಹೇಳಲು ಹೋಗಿ ವಾಪಸ್ ಬಂದಿದ್ದೇನೆ. ನಮ್ಮ ಕ್ಷೇತ್ರದ ಕೋಮುವಾದಿಗಳ ಜೊತೆ ಸೆಣಸಬೇಕು ಅಂದ್ರೆ ಕಾಂಗ್ರೆಸ್ ಸೇರಬೇಕು ಎಂಬುದು ನಮ್ಮ ಕಾರ್ಯಕರ್ತರು ಮತ್ತು ಕ್ಷೇತ್ರದ ಜನರ ಒತ್ತಾಯವಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಭಾರತ್‌ ಜೋಡೋ ಯಾತ್ರೆಯಲ್ಲಿ RBI ಮಾಜಿ ಗವರ್ನರ್‌ ಭಾಗಿ

    ಪ್ರಜ್ವಲ್ ಎಂಪಿಗೆ ಸ್ವರ್ಧೆ ಮಾಡಿದಾಗಲೂ ಕಾಂಗ್ರೆಸ್ ಮತ್ತು ಜೆಡಿಎಸ್ ಒಟ್ಟಾಗಿ ಇದ್ರೂ ಕೂಡ ಬಿಜೆಪಿಗೆ ಹೆಚ್ಚು ವೋಟ್ ಬಂದಿದೆ. ಜನರು ಕೋಮುವಾದಿ ಶಕ್ತಿ ಮಣಿಸಲು ಕಾಂಗ್ರೆಸ್ ಸೇರ್ಪಡೆಯಾಗಬೇಕು ಎಂದು ಹೇಳಿದ್ದಾರೆ. ಕ್ಷೇತ್ರದ ಒಳಗಡೆ ಕೊನೆ ಹೋರಾಟ ಆಗಿದೆ. ನಾನು ಕ್ಷೇತ್ರ ಪೂರ್ತಿ ಸಂಚಾರ ಮಾಡುತ್ತಿದ್ದೇನೆ. ಅಲ್ಲಿನ ಜನರು ಕಾಂಗ್ರೆಸ್ ಸೇರ್ಪಡೆಯಾಗಿ ಎಂದು ಹೇಳುತ್ತಿದ್ದಾರೆ. ಪಕ್ಷತೀತವಾಗಿ ನನಗೆ ಕಾರ್ಯಕರ್ತರು ಇದ್ದಾರೆ. ಜನರು ಮತ್ತು ಕಾರ್ಯಕರ್ತರ ಒತ್ತಾಯ ಮೇಲೆ ಸೇರ್ಪಡೆಯಾಗುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು.

    ತಂದೆ ಸಮಾನರಾದ ದೇವೇಗೌಡರಿಗೆ ಈ ವಿಚಾರ ಹೇಳದೆ ಒದ್ದಾಡುತ್ತಿದ್ದೇನೆ. ನಾನು ಯಾವುದೇ ಷರತ್ತು ಹಾಕದೆ ಕಾಂಗ್ರೆಸ್ ಸೇರ್ಪಡೆಯಾಗಲು ನಿರ್ಧರಿಸಿದ್ದೇನೆ. ನಾನು ಹತ್ತಾರು ಭಾರೀ ಈ ವಿಚಾರ ಹೇಳಲು ದೇವೇಗೌಡರನ್ನು ಭೇಟಿಯಾಗಿದ್ದೆ, ಆದ್ರೆ ಅದು ಸಾಧ್ಯವಾಗಿಲ್ಲ. ನನ್ನ ಎಂಎಲ್‌ಸಿ ಮಾಡಿದ್ದು ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು. ಅವರ ಋಣ ನನ್ನ ಮೇಲೆ ಇದೆ. ಅದಕ್ಕಾಗಿ ನಾನು ತಳಮಟ್ಟದಿಂದ ಪಕ್ಷವನ್ನು ಕಟ್ಟಿ ಬೆಳೆಸಿದ್ದೇನೆ. ಜೆಡಿಎಸ್‌ನಿಂದ ಶಾಸಕ ಆಗುವವರೆಗೂ ಪಕ್ಷ ಕಟ್ಟಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಮಹಾ-ಕರ್ನಾಟಕ ಗಡಿ ವಿವಾದ; ಇಂದು ಮುಖಾಮುಖಿಯಾಗ್ತಾರೆ ಎರಡೂ ರಾಜ್ಯಗಳ ಸಿಎಂ

    ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿ, ನಾನು ಖರ್ಗೆಯವರನ್ನು ಭೇಟಿಯಾಗಿಲ್ಲ. ಸಿದ್ದರಾಮಯ್ಯ ಅವರನ್ನು ಹಲವು ಭಾರಿ ಭೇಟಿಯಾಗಿದ್ದೇನೆ. ಬೇರೆ ಬೇರೆ ಸಂದರ್ಭದಲ್ಲಿ ಸಿದ್ದರಾಮಯ್ಯರೊಂದಿಗೆ ಒಂದೇ ವೇದಿಕೆ ಹಂಚಿಕೊಂಡಿದ್ದೇನೆ. ಅಲ್ಲಿ ನನ್ನ ಕ್ಷೇತ್ರದ ಬಗ್ಗೆ ಮಾತನಾಡಿದ್ದೇನೆ. ಕೆಪಿಸಿಸಿ ಅಧ್ಯಕ್ಷ ಡಿಕೆಶಿಯವರನ್ನು ಕೂಡ ಭೇಟಿಯಾಗಿದ್ದೇನೆ. ಅವರಿಗೂ ಕ್ಷೇತ್ರದ ಬಗ್ಗೆ ತಿಳಿಸಿದ್ದೇನೆ. ಸೇರ್ಪಡೆ ಬಗ್ಗೆ ದಿನಾಂಕ ನಿಗದಿಯಾಗಿಲ್ಲ. ಸೇರ್ಪಡೆ ವಿಚಾರ ಚಾಲು ಆಗಿದೆ ಅಷ್ಟೇ ಎಂದು ಮಾತನಾಡಿದರು.

    Live Tv
    [brid partner=56869869 player=32851 video=960834 autoplay=true]