Tag: ವೈಜಾಗ್

  • Vizag ನಲ್ಲಿರುವ ‘G’ ಅಂದರೆ ಅದು ಗೂಗಲ್‌-   ಅತಿ ಕಿರಿಯ ರಾಜ್ಯದಲ್ಲಿ ಹೆಚ್ಚು ಹೂಡಿಕೆ: ನಾಯ್ಡು ಸಂಭ್ರಮ

    Vizag ನಲ್ಲಿರುವ ‘G’ ಅಂದರೆ ಅದು ಗೂಗಲ್‌- ಅತಿ ಕಿರಿಯ ರಾಜ್ಯದಲ್ಲಿ ಹೆಚ್ಚು ಹೂಡಿಕೆ: ನಾಯ್ಡು ಸಂಭ್ರಮ

    ಹೈದರಾಬಾದ್‌: ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು (Chandrababu Naidu) ಅವರು Vizag ನಲ್ಲಿರುವ ‘G’ ಅಂದರೆ ಅದು ಗೂಗಲ್‌ ಎಂದು ಬಣ್ಣಿಸಿದ್ದಾರೆ.

    ವಿಶಾಖಪಟ್ಟಣದಲ್ಲಿ(ವೈಜಾಗ್) ಎಐ ಡೇಟಾ ಹಬ್ ಮಾಡಲು ಗೂಗಲ್‌ ಆಂಧ್ರ ಸರ್ಕಾರದ ಜೊತೆ ಸಹಿ ಹಾಕಿದ ಬೆನ್ನಲ್ಲೇ ಚಂದ್ರಬಾಬು ನಾಯ್ಡು ಸಾಮಾಜಿಕ ಜಾಲತಾಣದಲ್ಲಿ ಸಂಭ್ರಮ ವ್ಯಕ್ತಪಡಿಸಿದ್ದಾರೆ.

    ಬಂದರು ನಗರಿಯಾಗಿರುವ ವೈಜಾಗ್‌ನ ಫೋಟೋವನ್ನು ಹಾಕಿ #YoungestStateHighestInvestment ಎಂದು ಹ್ಯಾಶ್‌ಟ್ಯಾಗ್‌ ಹಾಕಿ ಪೋಸ್ಟ್‌ ಮಾಡಿದ್ದಾರೆ.

    ಡೇಟಾ ಹಬ್ ನಿರ್ಮಾಣಕ್ಕೆ ಗೂಗಲ್‌ ಸುಮಾರು 1.33 ಲಕ್ಷ ಕೋಟಿ ರೂ. ಹೂಡಿಕೆ ಮಾಡುತ್ತಿದ್ದು ಮುಂದಿನ 5 ವರ್ಷಗಳಲ್ಲಿ ತಲೆ ಎತ್ತಲಿದೆ. ಅಮೆರಿಕದ ಹೊರಗೆ ಗೂಗಲ್‌ ನಿರ್ಮಿಸುತ್ತಿರುವ ಅತಿ ದೊಡ್ಡ ಹೂಡಿಕೆ ಇದಾಗಿದೆ.

    AI ಮೂಲಸೌಕರ್ಯ, ಡೇಟಾ ಕೇಂದ್ರಗಳು, ನವೀಕರಿಸಬಹುದಾದ ಇಂಧನ ಸಾಮರ್ಥ್ಯ ಮತ್ತು ಹೊಸ ಸಬ್‌ಸೀ ಗೇಟ್‌ವೇ ಅನ್ನು ಸಂಯೋಜಿಸುತ್ತದೆ. ಇದು ದೇಶದ ಮೊದಲ ಗಿಗಾವ್ಯಾಟ್-ಪ್ರಮಾಣದ ಡೇಟಾ ಸೆಂಟರ್ ಕ್ಯಾಂಪಸ್ ಆಗಿರಲಿದೆ. ಇದನ್ನೂ ಓದಿ:  ಕರ್ನಾಟಕದಲ್ಲಿ ಮೂಲಸೌಕರ್ಯ ಕೆಟ್ಟದಾಗಿದೆ, ಪವರ್‌ ಕಟ್‌ ಸಮಸ್ಯೆಯಿದೆ: ಆಂಧ್ರ ಐಟಿ ಸಚಿವ

    ಐದು ವರ್ಷಗಳ ಯೋಜನೆಯು (2026–2030) 1 ಲಕ್ಷಕ್ಕೂ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸುವ ನಿರೀಕ್ಷೆಯಿದೆ ಎಂದು ನಾಗರಿಕ ವಿಮಾನಯಾನ ಸಚಿವ ಎನ್ ರಾಮ್ ಮೋಹನ್ ನಾಯ್ಡು ಹೇಳಿದ್ದಾರೆ. ಇದನ್ನೂ ಓದಿ:  ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ: ನಾರಾ ಲೋಕೇಶ್‌ಗೆ ಡಿಕೆಶಿ ತಿರುಗೇಟು

    ಈ ಕೇಂದ್ರವನ್ನು ಅಡಾನಿಕಾನೆಕ್ಸ್ (AdaniConneX) ಮತ್ತು ಏರ್‌ಟೆಲ್‌ನ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುವುದು. ಈ ಉಪಕ್ರಮದ ಭಾಗವಾಗಿ, ಗೂಗಲ್ ವಿಶಾಖಪಟ್ಟಣದಲ್ಲಿ ಹೊಸ ಅಂತರರಾಷ್ಟ್ರೀಯ ಸಬ್‌ಸೀ ಕೇಬಲ್‌ಗಳನ್ನು ನಿರ್ಮಿಸಲಿದೆ. ಇದು ಭಾರತದ ಇಂಟರ್ನೆಟ್ ಸಾಮರ್ಥ್ಯವನ್ನು ಸುಧಾರಿಸಲಿದೆ.

  • ವೈಜಾಗ್ ನಲ್ಲಿ ‘ಪುಷ್ಪ 2’ ಶೂಟಿಂಗ್ : ಹೈದರಾಬಾದ್ ಗೆ ಬಂದಿಳಿದ ಟೀಮ್

    ವೈಜಾಗ್ ನಲ್ಲಿ ‘ಪುಷ್ಪ 2’ ಶೂಟಿಂಗ್ : ಹೈದರಾಬಾದ್ ಗೆ ಬಂದಿಳಿದ ಟೀಮ್

    ಅಲ್ಲು ಅರ್ಜುನ್ (Allu Arjun) ಮತ್ತು ಸುಕುಮಾರ್ (Sukumar) ಕಾಂಬಿನೇಷನ್ ನ ‘ಪುಷ್ಪ 2’ (Pushpa 2) ಸಿನಿಮಾದ ವೈಜಾಗ್ ಭಾಗದ ಚಿತ್ರೀಕರಣ ನಿನ್ನೆಯಷ್ಟೇ ಮುಗಿದಿದೆ. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಫೋಟೋವೊಂದನ್ನು ಶೇರ್ ಮಾಡಿರುವ ಅಲ್ಲು ಅರ್ಜುನ್ ‘ಥ್ಯಾಂಕ್ಸ್ ವೈಜಾಗ್’ ಎಂದು ಬರೆದುಕೊಂಡಿದ್ದಾರೆ. ಹಲವು ದಿನಗಳಿಂದ ಚಿತ್ರತಂಡ ಈ ಸ್ಥಳದಲ್ಲಿ ಬೀಡುಬಿಟ್ಟಿದ್ದು, ಹಲವು ಮಹತ್ವದ ದೃಶ್ಯಗಳನ್ನು ಸೆರೆ ಹಿಡಿದಿದ್ದಾರಂತೆ.

    ವೈಜಾಗ್ ಬೀಚ್ ದಂಡೆಯ ಮೇಲೆ ಹಲವು ದೃಶ್ಯಗಳನ್ನು ಶೂಟಿಂಗ್ ಮುಗಿಸಿಕೊಂಡಿರುವ ಚಿತ್ರತಂಡ, ಮುಂದಿನ ಭಾಗದ ಚಿತ್ರೀಕರಣವನ್ನು ಹೈದರಾಬಾದ್ ನಲ್ಲಿ ಪ್ಲ್ಯಾನ್ ಮಾಡಲಾಗಿದೆ. ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಕಾಂಬಿನೇಷನ್ ನ ದೃಶ್ಯಗಳನ್ನು ಇಲ್ಲಿ ಸೆರೆ ಹಿಡಿಯಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಜೊತೆಗೆ ಸಾಹಸ ಸನ್ನಿವೇಶಗಳನ್ನು ಕೂಡ ಚಿತ್ರೀಕರಣ ಮಾಡುವ ಪ್ಲ್ಯಾನ್ ಮಾಡಿದ್ದಾರಂತೆ ನಿರ್ದೇಶಕ ಸುಕುಮಾರ್. ಇದನ್ನೂ ಓದಿ: ಆಸ್ಕರ್ ವೇದಿಕೆಯಲ್ಲಿ `ನಾಟು ನಾಟು’ ಸಾಂಗ್ ಹಾಡಲಿದ್ದಾರೆ ಎಂ.ಎಂ ಕ್ಷೀರವಾಣಿ

    ಪುಷ್ಪ 2 ಸಿನಿಮಾ ನಾನಾ ಕಾರಣಗಳಿಂದಾಗಿ ಕುತೂಹಲ ಮೂಡಿಸಿದೆ. ಈ ಸಿನಿಮಾದಲ್ಲಿ ಇನ್ನೂ ಹಲವು ಹೊಸ ಪಾತ್ರಗಳನ್ನು ಸೃಷ್ಟಿ ಮಾಡಿದ್ದಾರಂತೆ ನಿರ್ದೇಶಕರು. ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ (Rashmika Mandanna) ಜೊತೆ ಇನ್ನೂ ಹಲವು ಹೆಸರಾಂತ ಕಲಾವಿದರು ತಾರಾಗಣದಲ್ಲಿ ಇದ್ದಾರಂತೆ. ಅಲ್ಲದೇ, ಪುಷ್ಪ 1 ರಲ್ಲಿ ಮಾಡಿದ್ದ ಅಷ್ಟೂ ತಪ್ಪುಗಳನ್ನು ಈ ಸಿನಿಮಾದಲ್ಲಿ ಸರಿ ಮಾಡಿಕೊಂಡಿದ್ದಾರಂತೆ ನಿರ್ದೇಶಕರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k