Tag: ವೈಟ್ ಟ್ಯಾಪಿಂಗ್

  • ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಶಾಶ್ವತ ರಸ್ತೆಗಾಗಿ ವೈಟ್ ಟ್ಯಾಪಿಂಗ್ ಯೋಜನೆ: ಡಿಕೆಶಿ

    ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಶಾಶ್ವತ ರಸ್ತೆಗಾಗಿ ವೈಟ್ ಟ್ಯಾಪಿಂಗ್ ಯೋಜನೆ: ಡಿಕೆಶಿ

    – 1,700 ಕೋಟಿ ರೂ. ವೆಚ್ಚದಲ್ಲಿ ಶಾಶ್ವತ ಯೋಜನೆ

    ಬೆಂಗಳೂರು: ಬ್ರ‍್ಯಾಂಡ್ ಬೆಂಗಳೂರು (Brand Bengaluru) ಸುಗಮ ಸಂಚಾರ ಯೋಜನೆ ಅಡಿಯಲ್ಲಿ ನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ವೈಟ್ ಟ್ಯಾಪಿಂಗ್ ಮಾಡಲಾಗುತ್ತಿದೆ. 30 ವರ್ಷಗಳ ಬಾಳಿಕೆ ಬರುವ ಶಾಶ್ವತ ರಸ್ತೆ ನಿರ್ಮಿಸುವ ಈ ಯೋಜನೆಗೆ 1,700 ಕೋಟಿ ಹಣ ವೆಚ್ಚ ಮಾಡಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ತಿಳಿಸಿದರು.

    ಬೆಂಗಳೂರಿನ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ವೈಟ್ ಟ್ಯಾಪಿಂಗ್ ಕಾಮಗಾರಿಗಳ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಯೋಜನೆಯಲ್ಲಿ 14 ಪ್ಯಾಕೇಜ್‌ಗಳ ಮೂಲಕ ಬೆಂಗಳೂರಿನ 150 ಕಿ.ಮೀ ಉದ್ದದ 97 ರಸ್ತೆಗಳಲ್ಲಿ ವೈಟ್ ಟ್ಯಾಪಿಂಗ್ ಕಾಮಗಾರಿ ನಡೆಯುತ್ತಿದೆ. ಬಿಡಬ್ಲ್ಯೂಎಸ್‌ಎಸ್‌ಬಿ, ಬಿಬಿಎಂಪಿ, ಬಿಡಿಎ, ಬೆಸ್ಕಾಂಗಳ ನಡುವೆ ಸಮನ್ವಯತೆ ಸಾಧಿಸಿ ಶಾಶ್ವತ ರಸ್ತೆ ನಿರ್ಮಿಸಲಾಗುತ್ತಿದೆ. ಕೇಬಲ್, ಪವರ್ ವೈಯರ್‌ಗಳಿಗೆ ಅವಕಾಶ ಕಲ್ಪಿಸಿ, ಯಾವುದೇ ಕಾರಣಕ್ಕೂ ರಸ್ತೆ ಅಗೆಯಲು ಅವಕಾಶ ನೀಡದೆ, ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಿ ಈ ರಸ್ತೆ ಕಾಮಗಾರಿ ಮಾಡಲಾಗುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: 422 ವಸ್ತುಗಳನ್ನು ಗುರುತಿಸಿ, ನೊಬೆಲ್ ವರ್ಲ್ಡ್ ರೆಕಾರ್ಡ್ ಪುಟ ಸೇರಿದ 9 ತಿಂಗಳ ಐರಾ

    ನಮಗೆ ಗುಣಮಟ್ಟದ ಕಾಮಗಾರಿ ಮುಖ್ಯ. ಕಾಮಗಾರಿ ಶೀಘ್ರಗತಿಯಲ್ಲಿ ಸಾಗಬೇಕು ಎಂದು ಇಂದು ಪರಿಶೀಲನೆ ಮಾಡಿದ್ದೇನೆ. ಈ ಯೋಜನೆ ಕಾಮಗಾರಿ ಪೂರ್ಣಗೊಳಿಸಲು 11 ತಿಂಗಳು ಕಾಲಮಿತಿ ನಿಗದಿಪಡಿಸಲಾಗಿದೆ. ಈ ಯೋಜನೆಯ ಎರಡನೇ ಹಂತದಲ್ಲಿ 450 ಕಿ.ಮೀ ಉದ್ದದ ರಸ್ತೆ ವೈಟ್ ಟ್ಯಾಪಿಂಗ್ ಮಾಡಲಾಗುವುದು. ಈ ಎಲ್ಲಾ ಹಂತಗಳ ಕಾಮಗಾರಿ ಮುಕ್ತಾಯವಾದರೆ ಬೆಂಗಳೂರಿನಲ್ಲಿ ಒಟ್ಟಾರೆ 1,700 ಕಿ.ಮೀ ಉದ್ದದ ರಸ್ತೆ ವೈಟ್ ಟ್ಯಾಪಿಂಗ್ ಮುಕ್ತಾಯಗೊಳ್ಳಲಿದೆ ಎಂದರು. ಇದನ್ನೂ ಓದಿ: IPL 2025 Schedule | ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್‌ KKR vs RCB ಕಾದಾಟ – ಪಂದ್ಯ ಯಾವಾಗ?

    ರಸ್ತೆ ಗುಣಮಟ್ಟ ಪರೀಕ್ಷೆಗೆ ನಾನು ಇಂದು ಭೇಟಿ ನೀಡಿದ್ದೇನೆ. ಪಾದಚಾರಿ ಮಾರ್ಗಗಳನ್ನು ನೋಡಿದ್ದೇನೆ. ಭಾನುವಾರ ವಾಹನ ದಟ್ಟಣೆ ಕಡಿಮೆ ಇರುವ ಕಾರಣ ಇಂದು ಕಾಮಗಾರಿ ಪರಿಶೀಲನೆ ಮಾಡುತ್ತಿದ್ದು, ಕಾಮಗಾರಿ ನಡೆಯುತ್ತಿರುವ ಎಲ್ಲಾ ಭಾಗಗಳಿಗೆ ಭೇಟಿ ನೀಡುತ್ತಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿ ಮುಂದುವರಿಯುತ್ತಾರೆ: ಕೊತ್ತೂರು ಮಂಜುನಾಥ್

    ಇದರ ಜೊತೆಗೆ ಬೆಂಗಳೂರಿನಾದ್ಯಂತ ಸಂಪೂರ್ಣವಾಗಿ ಮಳೆನೀರುಗಾಲುವೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಮುಂದಾಗಿದ್ದೇವೆ. ನಾವು ಒಂದೇ ದಿನದಲ್ಲಿ ಎಲ್ಲಾ ಬದಲಾವಣೆ ಮಾಡುತ್ತೇವೆ ಎಂದು ಹೇಳುವುದಿಲ್ಲ. ಹಂತ ಹಂತವಾಗಿ ಆರ್ಥಿಕ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಯೋಜನೆ ಮಾಡುತ್ತಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: Bengaluru| ಅರಮನೆ ಮೈದಾನದಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ

    ಈ ಯೋಜನೆಗೆ ಮೀಸಲಿಟ್ಟಿರುವ 1,700 ಕೋಟಿ ಹಣ ರಸ್ತೆಗೆ ವೆಚ್ಚವಾಗಬೇಕಲ್ಲವೇ. ಈ ರಸ್ತೆ ನಿರ್ದಿಷ್ಟ ಪ್ರಮಾಣದಲ್ಲಿ ದಪ್ಪ ಇರಬೇಕು, ಈ ರಸ್ತೆಗಳಲ್ಲಿ ಬಿಡಬ್ಲೂಎಸ್‌ಎಸ್‌ಬಿ ಕೆಲಸಗಳು ಒಟ್ಟಿಗೆ ಮುಗಿಯಬೇಕು. ಹೀಗಾಗಿ ಪರಿಶೀಲನೆ ಮಾಡಿದ್ದೇನೆ. ಕಾಮಗಾರಿ ಮುಗಿದ ನಂತರವೂ ಗುಣಮಟ್ಟ ಪರಿಶೀಲನೆ ಮಾಡಲಾಗುವುದು. ಎಲ್ಲಾ ಕಡೆಗಳಲ್ಲಿ ಉತ್ತಮ ಗುಣಮಟ್ಟದ ಕಾಮಗಾರಿ ನಡೆಯುತ್ತಿದೆ. ಒಂದು ಕಡೆ ನನಗೆ ಸ್ವಲ್ಪ ವ್ಯತ್ಯಾಸ ಕಂಡುಬಂದಿದೆ. ತಾಂತ್ರಿಕ ತಂಡವನ್ನು ಅಲ್ಲಿಗೆ ಕಳುಹಿಸಿ ಮತ್ತೊಮ್ಮೆ ಪರಿಶೀಲನೆ ನಡೆಸುತ್ತೇವೆ ಎಂದು ನುಡಿದರು. ಇದನ್ನೂ ಓದಿ: ದರ್ಶನ್ ಬರ್ತ್‌‌ಡೇ ಸಂಭ್ರಮ; ಆಪ್ತರಿಗಷ್ಟೇ ಆಹ್ವಾನ ನೀಡಿದ್ದ ದರ್ಶನ್ ಪತ್ನಿ ವಿಜಯಲಕ್ಷ್ಮಿ

    ಟನಲ್ ರಸ್ತೆ ಸರಿಯಿಲ್ಲ ಎಂಬ ಕೇಂದ್ರ ರೈಲ್ವೆ ಸಚಿವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹಾಗಿದ್ದರೆ ಅವರು ಮಹಾರಾಷ್ಟ್ರದಲ್ಲಿ ಯಾಕೆ ಟನಲ್ ರಸ್ತೆ ಮಾಡಿಸುತ್ತಿದ್ದಾರೆ? ಅವರಿಗೂ ಇದಕ್ಕೂ ಏನು ಸಂಬಂಧ? ಅವರ ಇಲಾಖೆ ಕೆಲಸ ಅವರು ಮಾಡಲಿ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಮುಂಬೈ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – ಇಬ್ಬರು ಕಾರ್ಮಿಕರು ಸಜೀವ ದಹನ

    ಬೆಂಗಳೂರಿನಲ್ಲಿ ನೀರಿನ ಅಭಾವ ಎದುರಾಗಬಾರದು ಎಂಬ ಕಾರಣಕ್ಕೆ ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆ ಜಾರಿ ಮಾಡಿದ್ದೇವೆ. ಜನರು ಮುಂದೆ ಬಂದು ನೀರಿನ ಸಂಪರ್ಕ ಪಡೆಯಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಸಿಎಂ ಬದಲಾವಣೆ ವಿಚಾರ ಹೈಕಮಾಂಡ್‌ಗೆ ಬಿಟ್ಟದ್ದು: ಬಿ.ಕೆ ಹರಿಪ್ರಸಾದ್

  • ಮೆಜೆಸ್ಟಿಕ್‌ ಶಾಂತಲಾ ಸರ್ಕಲ್‌ನಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗಿನ ರಸ್ತೆ 1 ತಿಂಗಳು ಬಂದ್‌

    ಮೆಜೆಸ್ಟಿಕ್‌ ಶಾಂತಲಾ ಸರ್ಕಲ್‌ನಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗಿನ ರಸ್ತೆ 1 ತಿಂಗಳು ಬಂದ್‌

    ಬೆಂಗಳೂರು: ಮೆಜೆಸ್ಟಿಕ್‌ನಲ್ಲಿರುವ ಶಾಂತಲಾ ಸರ್ಕಲ್(Shantala Circle) ಮತ್ತು ಸಂಗೊಳ್ಳಿ ರಾಯಣ್ಣ ವೃತ್ತದವರೆಗಿನ (Sangolli Rayanna)  ರಸ್ತೆ ಒಂದು ತಿಂಗಳು ಬಂದ್ ಆಗಲಿದೆ.

    ವೈಟ್ ಟ್ಯಾಪಿಂಗ್(White Topping) ಕಾಮಗಾರಿ ಶನಿವಾರದಿಂದ ಆರಂಭವಾಗಲಿರುವ ಹಿನ್ನೆಲೆ ಒಂದು ತಿಂಗಳು ಸಂಚಾರ ಬಂದ್ ಆಗಲಿದೆ.  ಇದನ್ನೂ ಓದಿ: ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ – ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ


    ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ((BBMP) ಯೋಜನೆ ಕೇಂದ್ರ-1 ವಿಭಾಗದ ವತಿಯಿಂದ ನಗರದ ಗುಬ್ಬಿ ತೋಟದಪ್ಪ ರಸ್ತೆಯನ್ನು ಶಾಂತಲಾ ಸರ್ಕಲ್‌ನಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗಿನ ಸುಮಾರು 580 ಮೀಟರ್ ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ನಡೆಯಲಿದೆ.

    ಈ ಅವಧಿಯಲ್ಲಿ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಆಗುವ ಅನಾನುಕೂಲವನ್ನು ತಪ್ಪಿಸಲು ಪರ್ಯಾಯ ರಸ್ತೆಗಳಲ್ಲಿ ಸಂಚರಿಸುವಂತೆ ಬಿಬಿಎಂಪಿ ಮನವಿ ಮಾಡಿದೆ.

    Live Tv
    [brid partner=56869869 player=32851 video=960834 autoplay=true]

  • ಆಗಸ್ಟ್ 21 ರಿಂದ 90 ದಿನ ಗೂಡ್‍ಶೆಡ್ ರಸ್ತೆ ಬಂದ್

    ಆಗಸ್ಟ್ 21 ರಿಂದ 90 ದಿನ ಗೂಡ್‍ಶೆಡ್ ರಸ್ತೆ ಬಂದ್

    – ಪರ್ಯಾಯ ಮಾರ್ಗ ಹೀಗಿದೆ

    ಬೆಂಗಳೂರು: ವೈಟ್ ಟ್ಯಾಪಿಂಗ್ ಕಾಮಗಾರಿ ಹಿನ್ನೆಲೆ ಮುಂದಿನ 90 ದಿನ ಬೆಂಗಳೂರಿನ ಪ್ರಮುಖ ರಸ್ತೆ ಗೂಡ್ ಶೆಡ್ ರೋಡ್ ಬಂದ್ ಆಗುತ್ತಿದೆ. ಗೂಡ್ ಶೆಡ್ ರೋಡ್ ನಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ.

    ಬಿಜಿಎಸ್ ಮೇಲ್ಸೇತುವೆಯ ಅಂಬೇಡ್ಕರ್ ಡೌನ್ ರ‍್ಯಾಂಪ್ ನಿಂದ ಡಾ.ಟಿಸಿಎಂ ರಾಯನ್ ಸರ್ಕಲ್ ವರೆಗೂ 1.5 ಕಿಮೀ ವರೆಗೂ ವೈಟ್ ಟ್ಯಾಪಿಂಗ್ ಕೆಲಸ ನಡೆಯಲಿದ್ದು, 90 ದಿನಗಳ ಕಾಲ ರಸ್ತೆ ಬಂದ್ ಆಗಲಿದೆ. ಮೈಸೂರು ರಸ್ತೆಯಿಂದ ಮೆಜೆಸ್ಟಿಕ್ ಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯಲ್ಲಿ ಲಕ್ಷಾಂತರ ವಾಹನಗಳು ಸಂಚಾರ ಮಾಡುತ್ತವೆ. ಈಗ ರಸ್ತೆ ಬಂದ್ ಆಗುತ್ತಿರೋದರಿಂದ ಪರ್ಯಾಯ ಮಾರ್ಗ ಅನುಸರಿಸಬೇಕಾಗುತ್ತದೆ.

    ಒಟ್ಟು ಎರಡು ಹಂತದಲ್ಲಿ ವೈಟ್ ಟ್ಯಾಪಿಂಗ್ ನಡೆಯಲಿದೆ. ಮೊದಲ ಹಂತದಲ್ಲಿ ಅಂಬೇಡ್ಕರ್ ಡೌನ್ ರ‍್ಯಾಂಪ್ ನಿಂದ ಬೇಲಿ ಮಠದ ರಸ್ತೆವರೆಗೆ ಮತ್ತು ಎರಡನೇ ಹಂತದ ಕಾಮಗಾರಿ ಕಾಟನ್‍ಪೇಟೆಯ ಅಡ್ಡ ರಸ್ತೆವರೆಗೆ ನಡೆಯಲಿದೆ. ಇದನ್ನೂ ಓದಿ: 1,250 ಕೋಟಿ ರೂ. ಜೊತೆ ಘನಿ ಪರಾರಿ – ಈಗ ಯುಎಇಯಲ್ಲಿ ಆಶ್ರಯ

    ಪರ್ಯಾಯ ಮಾರ್ಗ ಹೇಗೆ?
    ಮೈಸೂರು ರಸ್ತೆಯಿಂದ ಮೆಜೆಸ್ಟಿಕ್ ಕಡೆಗೆ ಸಾಗುವ ವಾಹನಗಳು ಮೈಸೂರು ರಸ್ತೆಯ ಬಾಡಿ ಬಿಲ್ಡರ್ ಜಂಕ್ಷನ್ ನಿಂದ ಸರ್ವಿಸ್ ರಸ್ತೆಯ ಮೂಲಕ ಸಿರ್ಸಿ ಜಂಕ್ಷನ್ ಬಂದು ಬಳಿಕ ಎಡ ತಿರುವು ಪಡೆದು ಬಿನ್ನಿಮಿಲ್ ಟ್ಯಾಂಕ್ ಬಂಡ್ ರಸ್ತೆಯ ಬಾಳೆಕಾಯಿ ಮಂಡಿ ಜಂಕ್ಷನ್ ಗೆ ಬಂದು ಬಿನ್ನಿ ಮಿಲ್ ಜಂಕ್ಷನ್ ನಿಂದ ಬಲ ತಿರುವು ಪಡೆದು ಟಿಸಿಎಂ ರಾಯನ್ ಸರ್ಕಲ್ ಗೆ ಬಂದು ಶಾಂತಲ ಸಿಲ್ಕ್ ರೋಡ್ ಮೂಲಕ ಮೆಜೆಸ್ಟಿಕ್ ತಲುಪಬಹುದು. ಇದನ್ನೂ ಓದಿ: ವರಮಹಾಲಕ್ಷ್ಮಿ ಹಬ್ಬಕ್ಕೆ ಶಾಪಿಂಗ್ – ಕೊರೊನಾ ನಿಯಮಗಳಿಗೆ ಕ್ಯಾರೇ ಅನ್ನುತ್ತಿಲ್ಲ ಜನ

  • ವೈಟ್ ಟ್ಯಾಪಿಂಗ್‍ನಿಂದ ಭಾರೀ ಟ್ರಾಫಿಕ್ ಜಾಮ್!

    ವೈಟ್ ಟ್ಯಾಪಿಂಗ್‍ನಿಂದ ಭಾರೀ ಟ್ರಾಫಿಕ್ ಜಾಮ್!

    -ಒಂದು ಕಿ.ಮೀ. ದಾಟೋದಕ್ಕೆ ಗಂಟೆಗಟ್ಟಲೇ ಕಾಯಲೇಬೇಕು

    ಬೆಂಗಳೂರು: ನಮ್ಮ ಸಿಲಿಕಾನ್ ಸಿಟಿಯಲ್ಲಿ ಒಂದು ರಸ್ತೆ ದಾಟಬೇಕಾದ್ರೆ ಯುದ್ಧ ಗೆದ್ದಂತೆ ಆಗತ್ತದೆ. ಸಿಗ್ನಲ್ ಒಂದು ಕಡೆಯಾದ್ರೆ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡೋರು ಮತ್ತೊಂದು ಕಡೆ ಇರುತ್ತಾರೆ. ಐಟಿ-ಬಿಟಿ ಇರೋ ಕಡೆ ಹೋದ್ರೆ ಕಥೆ ಕೇಳೋದೇ ಬೇಡ. ಹದ್ದಿನ ಕಣ್ಣಿಟ್ಟುಕೊಂಡೇ ರಸ್ತೆ ದಾಟಬೇಕು.

    ಇದೆಲ್ಲದರ ನಡುವೆ ಬಿಬಿಎಂಪಿ ಬೆಂಗಳೂರಿನ ರಸ್ತೆಗಳನ್ನ ಹೈಟೆಕ್ ಮಾಡೋಕೆ ಹೊರಟಿರೋದು ಗೊತ್ತೆ ಇದೆ. ಕಳೆದ ಎರಡು ತಿಂಗಳಿಂದ ಹೆಬ್ಬಾಳದಿಂದ ಬಾಣಸವಾಡಿವರೆಗೆ ವೈಟ್ ಟ್ಯಾಪಿಂಗ್ ಕಾಮಗಾರಿ ಪ್ರಗತಿಯಲ್ಲಿದೆ. ನಾಗವಾರದಲ್ಲಿರೋ ಮಾನ್ಯತಾ ಟೆಕ್ ಪಾರ್ಕ್‍ಗೆ ಪ್ರತಿನಿತ್ಯ ಲಕ್ಷಕ್ಕೂ ಹೆಚ್ಚು ವಾಹನಗಳು ಬರುತ್ತವೆ. ಆದ್ರೆ ಇಲ್ಲಿ ಇದೀಗ ವೈಟ್ ಟಾಪಿಂಗ್ ಮಾಡುತ್ತಿರೋದ್ರಿಂದ ದಾಟೋದಕ್ಕೇ ಸರ್ಕಸ್ಸೇ ಮಾಡಬೇಕಾಗಿದೆ.

    ಹೀಗಾಗಿ ಇದೀಗ ಇಲ್ಲಿ ವೈಟ್ ಟಾಪಿಂಗ್ ಬೇಕಿತ್ತಾ ಅಂತಾ ವಾಹನ ಸವಾರರು ಪ್ರಶ್ನಿಸುತ್ತಿದ್ದಾರೆ. ಕಾಮಗಾರಿ ಆರಂಭವಾಗುವ ಮೊದಲೇ ಬೇರೆ ಮಾರ್ಗವನ್ನ ಮಾಡಿದ್ರೆ ಚೆನ್ನಾಗಿ ಇರುತ್ತಿತ್ತು. ಪ್ರತ್ಯೇಕ ಲೈನ್ ಮಾಡಿ ಟ್ರಾಫಿಕ್ ಕಂಟ್ರೋಲ್ ಮಾಡುವ ಹಲವು ಅವಕಾಶಗಳಿತ್ತು. ಒಂದು ವೇಳೆ ಅರ್ಜೆಂಟ್ ಅಂತಾ ಏನಾದರೂ ಬಂದ್ರೇ ಅಷ್ಟೇ ಮುಗೀತು ನಮ್ಮ ಕತೆ ಅಂತ ವಾಹನ ಸವಾರರು ಅಸಮಾಧಾನ ಹೊರ ಹಾಕುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಬೆಂಗಳೂರಲ್ಲಿ ಹೆಚ್ಚಾಗಲಿದೆ ಟ್ರಾಫಿಕ್ ಸಮಸ್ಯೆ

    ಬೆಂಗಳೂರಲ್ಲಿ ಹೆಚ್ಚಾಗಲಿದೆ ಟ್ರಾಫಿಕ್ ಸಮಸ್ಯೆ

    – ಯಾವ ರಸ್ತೆಯಲ್ಲಿ ಟ್ರಾಫಿಕ್ ಉಂಟಾಗಲಿದೆ?

    ಬೆಂಗಳೂರು: ಸಿಲಿಕಾನ್ ಸಿಟಿ ಜನರು ಈಗಾಗಲೇ ಟ್ರಾಫಿಕ್ ಕಿರಿಕಿರಿಯಿಂದ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಈಗ ಬೆಂಗಳೂರಿನ ಜನರು ಇನ್ನಷ್ಟು ಟ್ರಾಫಿಕ್ ಸಮಸ್ಯೆ ಎದುರಿಸಲು ಸಿದ್ಧರಾಗಬೇಕಿದೆ. ಇಷ್ಟು ದಿನ ಸ್ಥಗಿತಗೊಂಡಿದ್ದ ವೈಟ್ ಟಾಪಿಂಗ್ ಕಾಮಗಾರಿ ಮತ್ತೆ ಆರಂಭವಾಗುತ್ತಿದೆ.

    ಸಿಲಿಕಾನ್ ಸಿಟಿಯಲ್ಲಿ ವೈಟ್ ಟ್ಯಾಪಿಂಗ್ ಕಾಮಗಾರಿಯಿಂದ ಟ್ರಾಫಿಕ್ ಕಿರಿಕಿರಿಗೆ ಒಳಗಾಗಿದ್ದ ಜನ ಕೆಲಕಾಲ ನಿಟ್ಟುಸಿರು ಬಿಟ್ಟಿದ್ದರು. ಆದ್ರೆ ಈಗ ಮತ್ತೆ ವೈಟ್ ಟ್ಯಾಪಿಂಗ್ ಕಾಮಗಾರಿ ಆರಂಭವಾಗುತ್ತಿದ್ದು ಟ್ರಾಫಿಕ್‍ನಿಂದ ನರಕ ಸದೃಶ್ಯ ಎದುರಾಗಲಿದೆ. ಹೌದು ಸಂಚಾರಿ ಪೊಲೀಸರಿಂದ ಅನುಮತಿ ದೊರೆಯದ ಹಿನ್ನೆಲೆ ಸ್ಥಗಿತಗೊಂಡಿದ್ದ ಕಾಮಗಾರಿ ಮತ್ತೆ ಆರಂಭವಾಗುತ್ತಿದೆ. ಉಪಮುಖ್ಯಮಂತ್ರಿ ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಾ.ಜಿ ಪರಮೇಶ್ವರ್ ಅವರು ಸಂಚಾರಿ ಪೊಲೀಸರಿಂದ ಕಾಮಗಾರಿಗೆ ಅನುಮತಿ ದೊರಕಿಸಿದ್ದು, ಇದೇ ತಿಂಗಳ 27 ರಿಂದ ಕಾಮಗಾರಿ ಆರಂಭವಾಗಲಿದೆ.

    ಯಾವ ರಸ್ತೆಯಲ್ಲಿ ವೈಟ್ ಟ್ಯಾಪಿಂಗ್?
    ಹೆಬ್ಬಾಳ – ಹೆಣ್ಣೂರು ರಸ್ತೆ
    ನಾಯಂಡಳ್ಳಿ – ಸುಮ್ಮನಹಳ್ಳಿ
    ವೆಸ್ಟ್ ಆಫ್ ಕಾರ್ಡ್ ರೋಡ್ – ಟೋಲ್ ಗೇಟ್

    95 ಕಿ.ಮೀಗೆ ಟೆಂಡರ್ ಆಗಿದ್ದ ವೈಟ್ ಟ್ಯಾಪಿಂಗ್ ಕಾಮಗಾರಿ ಇಲ್ಲಿಯವರಗೂ 15 ಕಿ.ಮೀ ವರೆಗೂ ಕಾಮಗಾರಿ ಪೂರ್ಣವಾಗಿದೆ. ಮತ್ತೆ ವೈಟ್ ಟ್ಯಾಪಿಂಗ್ ಕಾಮಗಾರಿ ಶುರುವಾಗಿದ್ದರಿಂದ ವಾಹನ ಸವಾರರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಚೆನ್ನಾಗಿ ಇರೋ ರಸ್ತೆನಾ ಹಾಳು ಮಾಡಿ ವೈಟ್ ಟ್ಯಾಪಿಂಗ್ ಮಾಡಲು ಹೊರಟಿದ್ದಾರೆ. ಯಾರಿಗೆ ಬೇಕು ಈ ವೈಟ್ ಟ್ಯಾಪಿಂಗ್? ಎಂದು ಪ್ರಶ್ನಿಸುತ್ತಿದ್ದಾರೆ.ಪಡಿಸ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv