Tag: ವೈದ್ಯಕೀಯ ಸೀಟು

  • ವೈದ್ಯಕೀಯ ಸೀಟ್‌ಗಾಗಿ ಕಿವುಡರಾದ 21 ಅಭ್ಯರ್ಥಿಗಳು – ನಕಲಿ ದಾಖಲೆ ನೀಡಿದ್ದವರು ಲಾಕ್

    ವೈದ್ಯಕೀಯ ಸೀಟ್‌ಗಾಗಿ ಕಿವುಡರಾದ 21 ಅಭ್ಯರ್ಥಿಗಳು – ನಕಲಿ ದಾಖಲೆ ನೀಡಿದ್ದವರು ಲಾಕ್

    – ಅಕ್ರಮ ಬಯಲು; ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ದೂರು

    ಬೆಂಗಳೂರು: ವೈದ್ಯಕೀಯ ಸೀಟಿಗಾಗಿ ನಕಲಿ ದಾಖಲೆ ನೀಡಿ ವಿಕಲಚೇತನ ಕೋಟಾದಡಿ ಅರ್ಜಿ ಹಾಕಿದ್ದ 21 ಅಭ್ಯರ್ಥಿಗಳು ಸಿಕ್ಕಿಬಿದ್ದಿದ್ದಾರೆ. ಈ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ದೂರು ನೀಡಿದೆ.

    ಮೆಡಿಕಲ್ ಸೀಟ್ ಪಡೆಯೋದಕ್ಕೆ ಅನ್ಯಮಾರ್ಗ ಹಿಡಿದಿದ್ದ 21 ಮಂದಿ ಅಭ್ಯರ್ಥಿಗಳು ಲಾಕ್ ಆಗಿದ್ದಾರೆ. 2025 ನೇ ಸಾಲಿನ ಯುಜಿಸಿಇಟಿ ಮತ್ತು ಯುಜಿ ನೀಟ್ ಸೀಟು ಕೋರಿ 21 ಅಭ್ಯರ್ಥಿಗಳು ವಿಕಲಚೇತನ ಕೋಟಾದಡಿ ಅರ್ಜಿ ಹಾಕಿದ್ದರು. ಆರಂಭದಲ್ಲಿ ಅರ್ಜಿ ಹಾಕದೆ, ಅರ್ಜಿ ತಿದ್ದುಪಡಿ ಮೂಲಕ ಪಿಹೆಚ್ ಮೀಸಲಾತಿ ಕೋರಿದ್ದಾರೆ. ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಅನುಮಾನ ಬಂದಿದೆ. ಕಿವಿ ಕೇಳಿಸಲ್ಲ ಎಂದು ಅರ್ಜಿ ಹಾಕಿದ್ದ 21 ಮಂದಿಯನ್ನ ನಿಯಾಮವಳಿಗಳ ಪ್ರಕಾರ ವಿಕ್ಟೋರಿಯಾ ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಕಳುಹಿಸಿಕೊಡಲಾಗಿತ್ತು. ಇಲ್ಲಿಂದ ಆಡಿಯೋ ಗ್ರಾಂ ಮತ್ತು ಅಂಗವಿಕಲತೆಯ ಪರೀಕ್ಷೆಗಾಗಿ ನಿಮ್ಹಾನ್ಸ್ ಆಸ್ಪತ್ರೆಗೆ ಕಳುಹಿಸಲಾಗಿತ್ತು. ವೈದ್ಯಕೀಯ ಪರೀಕ್ಷೆಯಲ್ಲಿ ಅಕ್ರಮ ಸಾಬೀತಾಗಿದ್ದು, ನಕಲಿ ಅಂಗವಿಕಲ ಪ್ರಮಾಣ ಪತ್ರವನ್ನು ಸಲ್ಲಿಸಿರುವುದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಗಮನಕ್ಕೆ ಬಂದಿದೆ. ಕೂಡಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಮಲ್ಲೇಶ್ವರಂ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

    ಅಭ್ಯರ್ಥಿಗಳು ಮೆಡಿಕಲ್ ಬೋರ್ಡ್ ಚೇರ್ಮನ್ ನಕಲಿ ಸಹಿ, ಸೀಲ್ ಬಳಸಿ ನಕಲಿ ಅಂಗವಿಕಲ ವೈದ್ಯಕೀಯ ಪ್ರಮಾಣ ಪತ್ರವನ್ನ ಸಲ್ಲಿಸಿದ್ದರು. ಇದರ ಜೊತೆಗೆ UD ಐಡಿ ಕಾರ್ಡ್ ನ್ನು ಹೆಚ್ಚಿನ ಸಂಖ್ಯೆಯಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಟೆ ಸರ್ಕಾರಿ ಆಸ್ಪತ್ರೆಯಿಂದ ಪ್ರಮಾಣ ಪತ್ರವನ್ನ ಪಡೆದಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಭ್ಯರ್ಥಿಗಳಿಗೆ ಮೂಲ ದಾಖಲೆಗಳನ್ನ ತಂದು ಹಾಜರುಪಡಿಸುವಂತೆ ನೋಟಿಸ್ ನೀಡಲಾಗಿತ್ತು. ಈ ವೇಳೆಯೂ ಅಕ್ರಮ ಪತ್ತೆಯಾಗಿದೆ. ನಿಮ್ಹಾನ್ಸ್ ಆಸ್ಪತ್ರೆಯಿಂದ ಮೆಡಿಕಲ್ ಸರ್ಟಿಫಿಕೇಟ್ ಕೊಟ್ಟಿದ್ದಾರೆಂದು ನೀಡಿದ ಸರ್ಟಿಫಿಕೇಟ್ ಕೂಡ ನಕಲಿ ಅನ್ನೋದು ಬೆಳಕಿಗೆ ಬಂದಿದೆ.

    21 ಜನರನ್ನೊಳಗೊಂಡು ಇನ್ನೂ ಐವರನ್ನ ಈ ಪಟ್ಟಿಗೆ ಸೇರಿಸಲಾಗಿದೆ. ದೂರು ದಾಖಲಿಸಿಕೊಂಡಿರುವ ಮಲ್ಲೇಶ್ವರಂ ಠಾಣೆಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

  • UG-NEET: ಸೀಟು ಹಂಚಿಕೆಯಾದ ಅಭ್ಯರ್ಥಿಗಳು ಕಾಲೇಜಿನಲ್ಲೇ ದಾಖಲೆ ಸಲ್ಲಿಸಿ – ಕೆಇಎ ಸೂಚನೆ

    ಬೆಂಗಳೂರು: ಯುಜಿನೀಟ್-24 (UGNEET) ಮಾಪ್ ಅಪ್ ಸುತ್ತಿನಲ್ಲಿ ವೈದ್ಯಕೀಯ ಸೀಟು (Medical Seat) ಹಂಚಿಕೆಯಾಗಿರುವ ಅಭ್ಯರ್ಥಿಗಳು ತಮ್ಮ ಮೂಲ ದಾಖಲೆಗಳ ಸಮೇತ ಸಂಬಂಧಪಟ್ಟ ಕಾಲೇಜುಗಳಿಗೇ ಹೋಗಿ ವರದಿ ಮಾಡಿಕೊಳ್ಳಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ (H Prasanna) ತಿಳಿಸಿದ್ದಾರೆ.

    ವೈದ್ಯಕೀಯ ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳು ದಾಖಲೆ ಸಲ್ಲಿಸಲು ಅ.21ರಂದು ಕೆಇಎ ಕಚೇರಿಗೆ ಬರುವ ಅಗತ್ಯ ಇಲ್ಲ. ಶುಲ್ಕ ಪಾವತಿ ಮಾಡುವುದಕ್ಕೆ ಮತ್ತು ಕಾಲೇಜಿಗೆ ದಾಖಲೆ ಸಲ್ಲಿಸಿ ವರದಿ‌ ಮಾಡಿಕೊಳ್ಳಲು ಅ. 22ರ ವರೆಗೂ ಅವಕಾಶ‌ ಇದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಕನ್ನಡದಲ್ಲೇ ಪತ್ರ ಬರೆದು ಸುದೀಪ್ ತಾಯಿ ನಿಧನಕ್ಕೆ ಸಂತಾಪ ಸೂಚಿಸಿದ ಪವನ್ ಕಲ್ಯಾಣ್

    ಈ ಮುಂಚೆ ಮೂಲ ದಾಖಲೆಗಳನ್ನು ಸಲ್ಲಿಸಲು ಕೆಇಎಗೆ ಬರುವಂತೆ ಸೂಚಿಸಿದ್ದನ್ನು ಸ್ಮರಿಸಬಹುದು. ಇದನ್ನೂ ಓದಿ: 36 ವರ್ಷಗಳ ಬಳಿಕ ಭಾರತದ ನೆಲದಲ್ಲಿ ಟೆಸ್ಟ್‌ ಗೆದ್ದ ಕಿವೀಸ್‌ – ಟೀಂ ಇಂಡಿಯಾ ಸೋಲಿಗೆ ಕಾರಣಗಳೇನು?

  • ವೈದ್ಯ ಸೀಟು ಹಂಚಿಕೆ ವಿಳಂಬ – ಸುಪ್ರೀಂ ಮೊರೆ ಹೋಗುವಂತೆ ಸರ್ಕಾರಕ್ಕೆ ಹೆಚ್‍ಡಿಕೆ ಒತ್ತಾಯ

    ವೈದ್ಯ ಸೀಟು ಹಂಚಿಕೆ ವಿಳಂಬ – ಸುಪ್ರೀಂ ಮೊರೆ ಹೋಗುವಂತೆ ಸರ್ಕಾರಕ್ಕೆ ಹೆಚ್‍ಡಿಕೆ ಒತ್ತಾಯ

    ಬೆಂಗಳೂರು: ವೈದ್ಯ ವಿದ್ಯಾರ್ಥಿಗಳಿಗೆ ಸೀಟು ಹಂಚಿಕೆ ಪ್ರಕ್ರಿಯೆ ನೆನೆಗುದಿಗೆ ಬಿದ್ದಿರುವ ಬಗ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ಟೀಕಾಪ್ರಹಾರ ನಡೆಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ರಾಜ್ಯ ಸರ್ಕಾರ ಕೂಡಲೇ ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.

    ಈ ಬಗ್ಗೆ ಇಂದು ಬೆಳಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ವೈದ್ಯ ಸೀಟುಗಳ ಹಂಚಿಕೆ ವಿಳಂಬ ಆಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಗಳೇ ಮ್ಯಾನೇಜ್ ಮೆಂಟುಗಳಿಗೆ ಅನುಕೂಲ ಮಾಡಿಕೊಡುತ್ತಿವೆ ಎಂದು ದೂರಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮರುಪ್ರತಿಷ್ಠಾಪನೆ

    ವೈದ್ಯ ಶಿಕ್ಷಣವನ್ನು ಹಳ್ಳಿ ವಿದ್ಯಾರ್ಥಿಗಳಿಗೆ ನೀಟಾಗಿ ತಪ್ಪಿಸುವ ಹುನ್ನಾರ ನಡೆಯುತ್ತಿದೆಯಾ? ಎನ್ನುವ ಅನುಮಾನ ಕಾಡುತ್ತಿದೆ. ಕೇಂದ್ರ ಸರ್ಕಾರಕ್ಕೆ ನೀಟ್ ವ್ಯವಸ್ಥೆಯನ್ನು ಹಾಳು ಮಾಡುವ ಬಗ್ಗೆ ಇದ್ದ ಉತ್ಸಾಹ ಸರಿ ಮಾಡಲು ಇಲ್ಲ ಎನ್ನುವುದು ವಿದ್ಯಾರ್ಥಿಗಳಿಗೆ ಮನವರಿಕೆಯಾಗಿದೆ ಎಂದಿದ್ದಾರೆ.

    ಸಮಾನ ಶಿಕ್ಷಣ, ಸಮಾನ ಅವಕಾಶಗಳ ಸಂವಿಧಾನದ ಆಶಯವನ್ನು ಕೇಂದ್ರ ಸರ್ಕಾರ ಗಾಳಿಗೆ ಬಿಟ್ಟಿದೆ. ನಾಲ್ಕು ತಿಂಗಳಿನಿಂದ ವೈದ್ಯ ಸೀಟುಗಳು ಹಂಚಿಕೆಯಾಗಿಲ್ಲ. ಪರಿಣಾಮ ಎಂಜಿನಿಯರಿಂಗ್ ಕೌನ್ಸೆಲಿಂಗ್ ಕೂಡ ತಡವಾಗಿ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ. ಸಮರ್ಪಕ ನಿರ್ವಹಣೆ, ಅದಕ್ಷತೆಗೆ ಹಿಡಿದ ಕನ್ನಡಿ ಇದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಶಾಂತಿ ಕದಡುವುದೇ ನಾಡದ್ರೋಹಿ ಕಾಂಗ್ರೆಸ್ ಉದ್ದೇಶ – ಕೈ ವಿರುದ್ಧ ಬಿಜೆಪಿ ಟ್ವೀಟ್ ದಾಳಿ

    ಉನ್ನತ ಶಿಕ್ಷಣ ಉಳ್ಳವರಿಗೆ ಮಾತ್ರವೇ? ಇದೇ ಸತ್ಯ ಎನ್ನುವಂತೆ ಕೇಂದ್ರ ಸರ್ಕಾರ ನಡೆದುಕೊಳ್ಳುತ್ತಿದೆ. ಗುಣಮಟ್ಟದ ಕೋಚಿಂಗ್ ಪಡೆಯಲು ಶಕ್ತಿ ಇಲ್ಲದ, ಆರ್ಥಿಕವಾಗಿ ದುರ್ಬಲರಾದ ಗ್ರಾಮೀಣ ವಿದ್ಯಾರ್ಥಿಗಳಿಗೆ ವೈದ್ಯ ಶಿಕ್ಷಣವನ್ನು ಶಾಶ್ವತವಾಗಿ ತಪ್ಪಿಸುವ ದುರಾಲೋಚನೆ ಈ ವಿಳಂಬ ದ್ರೋಹದ ಹಿಂದೆ ಇದೆಯಾ? ಎಂದು ಪ್ರಶ್ನಿಸಿದ್ದಾರೆ.

    ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಸರ್ಕಾರಗಳು ಅಸಹಾಯತೆಯ ನಾಟಕ ಆಡುತ್ತಾ ವಿದ್ಯಾರ್ಥಿ-ಪೋಷಕರನ್ನು ಯಾಮಾರಿಸುತ್ತಿವೆ. ನೀಟ್ ವಿಳಂಬದಿಂದ ವೈದ್ಯ, ಎಂಜಿನಿಯರಿಂಗ್ ಸೀಟುಗಳ ಕಾಳಸಂತೆ ಬಿಕರಿಗೆ ಸರ್ಕಾರಗಳೇ ಅವಕಾಶ ಮಾಡಿಕೊಟ್ಟಂತೆ ಆಗಿದೆ. ಇದ್ಯಾವ ಸೀಮೆ ಶಿಕ್ಷಣ ನೀತಿ? ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಪ್ರತಿಮೆ ಭಗ್ನ ಮಾಡೋರು ನೀವೇ, ಗೌರವ ಸಲ್ಲಿಸೋರು ನೀವೇ – ಸಿದ್ದು ವಿರುದ್ಧ ಬಿಜೆಪಿ ಕಿಡಿ

    ರಾಜ್ಯ ಸರ್ಕಾರ ಕೂಡಲೇ ಸುಪ್ರೀಂ ಕೋರ್ಟ್‍ಗೆ ಮನವಿ ಸಲ್ಲಿಸಿ ತ್ವರಿತ ತೀರ್ಪು ನೀಡುವಂತೆ ಮನವಿ ಮಾಡುವುದು ಸೇರಿ, ಕೇಂದ್ರದ ಮೇಲೆ ಒತ್ತಡ ಹೇರಬೇಕು. ಭಾರತವನ್ನು ವಿಶ್ವಗುರು ಮಾಡುವ ಉಮೇದಿನಲ್ಲಿರುವ ಕೇಂದ್ರವು, ಗ್ರಾಮೀಣ ವಿದ್ಯಾರ್ಥಿಗಳಿ ಹಿತ ಕಾಯಬೇಕು ಎಂದು ತಿಳಿಸಿದ್ದಾರೆ.

    ನೀಟ್ ಅವ್ಯವಸ್ಥೆ ಬಗ್ಗೆ ರಾಜ್ಯ ಸರ್ಕಾರವು ನೆರೆ ರಾಜ್ಯಗಳಂತೆ ದನಿಯೆತ್ತಬೇಕು. ಹಾಗೆ ಮಾಡದಿದ್ದರೆ, ಖಾಸಗಿ ವೈದ್ಯ ಕಾಲೇಜುಗಳ ಜತೆ ರಾಜ್ಯ ಸರ್ಕಾರ ಒಳ ಒಪ್ಪಂದ ಮಾಡಿಕೊಂಡಿದೆ ಎಂದು ಜನರು ಭಾವಿಸಬೇಕಾಗುತ್ತದೆ ಎಂದಿದ್ದಾರೆ.