Tag: ವೈದ್ಯರ ನಿರ್ಲಕ್ಷ್ಯ

  • Haveri | ವೈದ್ಯರ ನಿರ್ಲಕ್ಷ್ಯ ಆರೋಪ – 17 ವರ್ಷದ ಬಾಲಕಿ ಸಾವು

    Haveri | ವೈದ್ಯರ ನಿರ್ಲಕ್ಷ್ಯ ಆರೋಪ – 17 ವರ್ಷದ ಬಾಲಕಿ ಸಾವು

    – ಆಸ್ಪತ್ರೆಯ ಮುಂಭಾಗ ಬಾಲಕಿ ಮೃತದೇಹವಿಟ್ಟು ಪ್ರತಿಭಟನೆ

    ಹಾವೇರಿ: ಕೈ ಮೇಲೆ ಗುಳ್ಳೆ ಎದ್ದಿದೆ ಎಂದು ಆಸ್ಪತ್ರೆಗೆ ಬಂದ ಬಾಲಕಿ ವೈದ್ಯರು ನೀಡಿದ ಇಂಜೆಕ್ಷನ್‌ನಿಂದ ಮೃತಪಟ್ಟಿದ್ದಾಳೆ ಎಂದು ಆರೋಪಿ ಬಾಲಕಿ ಕುಟುಂಬಸ್ಥರು ಆಸ್ಪತ್ರೆ ಎದುರು ಪ್ರತಿಭಟನೆ ಮಾಡಿರುವ ಘಟನೆ ಹಾವೇರಿಯಲ್ಲಿ (Haveri) ನಡೆದಿದೆ.

    ಹಾವೇರಿ ಜಿಲ್ಲೆಯ ಬ್ಯಾಡಗಿ (Byadgi) ತಾಲೂಕು ಹೆಡ್ಡಿಗೊಂಡ ಗ್ರಾಮದ ವಂದನಾ ಶಿವಪ್ಪ ತುಪ್ಪದ(17) ಮೃತ ಬಾಲಕಿ. ಇದನ್ನೂ ಓದಿ: Pegasus Case | ದೇಶ ಸ್ಪೈವೇರ್‌ ಹೊಂದಿರುವುದರಲ್ಲಿ ಯಾವುದೇ ತಪ್ಪಿಲ್ಲ: ಸುಪ್ರೀಂ ಕೋರ್ಟ್‌

    ವಂದನಾ ಕೈಯ ಮಣಿಕಟ್ಟಿನ ಭಾಗದಲ್ಲಿ ಗುಳ್ಳೆ ಎದ್ದಿದೆ ಎಂದು ನಗರದ ಖಾಸಗಿ ಆಸ್ಪತ್ರೆಗೆ ಆಕೆಯನ್ನು ಕುಟುಂಬಸ್ಥರು ಕರೆತಂದಿದ್ದರು. ಇದಕ್ಕೆ ಸಣ್ಣ ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ಹೇಳಿದ್ದರು. ಬಳಿಕ ಸಲೈನ್ ಹಚ್ಚಿ ಅದರಲ್ಲೇ ಇಂಜೆಕ್ಷನ್ ನೀಡಿದ್ದರು. ಇಂಜೆಕ್ಷನ್ ನೀಡಿದ ಕೂಡಲೇ ಬಾಲಕಿಯ ದೇಹದಲ್ಲಿ ರಿಯಾಕ್ಷನ್ ಆಗಿದ್ದು, ಮೈ ಕೆರೆತ, ಬಾಯಲ್ಲಿ ನೊರೆ ಬಂದು ಕ್ಷಣಾರ್ಧದಲ್ಲೇ ಮೃತಪಟ್ಟಿದ್ದಾಳೆ. ಇದನ್ನೂ ಓದಿ: ಭಯೋತ್ಪಾದಕರು ಎಂದಿಗೂ ಕಾಶ್ಮೀರದ ಪ್ರಗತಿ ನೋಡಲು ಬಯಸುವುದಿಲ್ಲ: ಸುನೀಲ್ ಶೆಟ್ಟಿ

    ಬಾಲಕಿ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪಿದ್ದಾರೆ. ಇತ್ತ ಬಾಲಕಿಯ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಆಸ್ಪತ್ರೆಯ ವೈದ್ಯರು ನಾಪತ್ತೆಯಾಗಿದ್ದಾರೆ. ಇದನ್ನೂ ಓದಿ: Kolar | ಮನೆಯಲ್ಲಿ ಬುದ್ಧಿವಾದ ಹೇಳಿದ್ದಕ್ಕೆ ವ್ಯಕ್ತಿ ನೇಣಿಗೆ ಶರಣು

    ವಿಷಯ ತಿಳಿಯುತ್ತಿದ್ದಂತೆ ತಾಲೂಕು ವೈದ್ಯಾಧಿಕಾರಿ ಡಾ.ಪ್ರಭಾಕರ ಕುಂದೂರ ಆಸ್ಪತ್ರೆಗೆ ದೌಡಾಯಿಸಿದರು. ಈ ವೇಳೆ ಮಾಧ್ಯಮಗಳ ಜತೆ ಮಾತನಾಡಿದ ಅವರು, ಸಾವಿನ ಕುರಿತು ಸಮಗ್ರ ಮಾಹಿತಿ ಪಡೆದಿದ್ದು, ಆಸ್ಪತ್ರೆಯನ್ನು ಸದ್ಯಕ್ಕೆ ಸೀಜ್ ಮಾಡಲಾಗುತ್ತದೆ. ಸಮಗ್ರ ವರದಿ ನಂತರ ಹಿರಿಯ ಅಧಿಕಾರಿಗಳಿಗೆ ಮುಂದಿನ ಕ್ರಮಕ್ಕೆ ಶಿಫಾರಸು ಮಾಡಲಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಮಗುವಿನ ಕಾಲಿಗೆ ಪೆಟ್ಟು – ಮಗುಗೆ ಏನಾಗುತ್ತೋ ಅನ್ನೋ ಆತಂಕದಲ್ಲಿ 12ರ ಬಾಲಕ ಆತ್ಮಹತ್ಯೆ

    ಬಾಲಕಿಯ ಕುಟುಂಬಸ್ಥರು ಆಸ್ಪತ್ರೆಯ ಮುಂಭಾಗದಲ್ಲಿ ಮೃತದೇಹವಿಟ್ಟು ಪ್ರತಿಭಟನೆ ನಡೆಸಿದ್ದು, ಆಸ್ಪತ್ರೆಯ ಗಾಜು ಒಡೆದು ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ. ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ನಿರೀಕ್ಷಕ ಎಲ್.ಎಸ್.ಶಿರಕೋಳ ಹಾಗೂ ನಗರ ಸಿಪಿಐ ಮೋಲಿಲಾಲ್ ಪವಾರ ಭೇಟಿ ನೀಡಿದರು.

  • ಸರ್ಕಾರಿ ಆಸ್ಪತ್ರೆ ವೈದ್ಯೆಯ ಯಡವಟ್ಟಿಗೆ ಬಾಣಂತಿ ಬಲಿ!

    ಸರ್ಕಾರಿ ಆಸ್ಪತ್ರೆ ವೈದ್ಯೆಯ ಯಡವಟ್ಟಿಗೆ ಬಾಣಂತಿ ಬಲಿ!

    ಯಾದಗಿರಿ: ಸರ್ಕಾರಿ ಆಸ್ಪತ್ರೆ ವೈದ್ಯರ ಯಡವಟ್ಟಿಗೆ ಬಾಣಂತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶಹಾಪುರಿನ (Shahapur)  ತಾಲೂಕಾ ಆಸ್ಪತ್ರೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ಮೃತ ಯುವತಿಯನ್ನು ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದ ಭವಾನಿ ಎಂದು ಗುರುತಿಸಲಾಗಿದೆ.

    ಕುಟುಂಬಸ್ಥರು ಮಹಿಳೆಯನ್ನು ಆಸ್ಪತ್ರೆಗೆ ಕರೆದುಕೊಂಡ ಹೋಗಿದ್ದರು. ಆಸ್ಪತ್ರೆಯ ವೈದ್ಯೆ ಸರೋಜಾ ಪಾಟೀಲ ರಕ್ತ ತಪಾಸಣೆಗೆ ಕೊಟ್ಟಿದ್ದು, ವರದಿ ಬರುವ ಮುನ್ನವೇ ಸಿಜೆರಿಯನ್ ಮಾಡುವ ಮೂಲಕ ಹೆರಿಗೆ ಮಾಡಿದ್ದಾರೆ. ಬಳಿಕ ಬ್ಲಡ್ ರಿಪೋರ್ಟ್ ಬಂದಿದ್ದು, ಬಾಣಂತಿಗೆ ಕಾಮಾಲೆ ಇರುವುದು ಪತ್ತೆಯಾಗಿದೆ. ಇದರಿಂದ ಹೆರಿಗೆಯಾದ ಒಂದು ಗಂಟೆ ಬಳಿಕ ತೀವ್ರ ರಕ್ತಸ್ರಾವದಿಂದ ಬಾಣಂತಿ ಅಸ್ವಸ್ಥಳಾಗಿದ್ದಾಳೆ ಎಂದು ಮೂಲಗಳು ತಿಳಿಸಿವೆ.ಇದನ್ನೂ ಓದಿ: ಕುಖ್ಯಾತ ದರೋಡೆಕೋರ ಬಿಷ್ಣೋಯ್‌ನನ್ನು ಮುಂಬೈ ಪೊಲೀಸರು ಯಾಕೆ ಕಸ್ಟಡಿಗೆ ಪಡೆಯಲು ಸಾಧ್ಯವಾಗುತ್ತಿಲ್ಲ?

    ಇದರಿಂದ ಬಾಣಂತಿಯನ್ನು ವೈದ್ಯೆ ತಕ್ಷಣ ಕಲಬುರಗಿ ಯುನೈಟೆಡ್ ಆಸ್ಪತ್ರೆಗೆ ದಾಖಲಿಸುವಂತೆ ಸೂಚಿಸಿದ್ದು, ಸ್ವತಃ ತಾನಾಗಿಯೇ ಹೋಗಿ ದಾಖಲಿಸಿದ್ದಾರೆ. ಆಗ ಯುನೈಟೆಡ್ ಆಸ್ಪತ್ರೆಯ ವೈದ್ಯರು ಆಪರೇಷನ್ ಪೇಲ್ ಆಗಿದೆ ಮತ್ತೊಮ್ಮೆ ಆಪರೇಷನ್ ಮಾಡಬೇಕೆಂದು ಸೂಚಿಸಿದ್ದಾರೆ. ಬಳಿಕ ಆಪರೇಷನ್ ಮುಗಿಯುವ ತನಕ ವೈದ್ಯೆ ಸರೋಜಾ ಪಾಟೀಲ ಅಲ್ಲಿಯೇ ಇದ್ದರು. ಆಪರೇಷನ್ ಬಳಿಕ 10 ಲಕ್ಷ ರೂ. ಬಿಲ್ ಮಾಡಿದ್ದಾರೆ.

    10 ಲಕ್ಷ ರೂ. ಬಿಲ್ ಪಾವತಿಸಿದರೂ ಬಾಣಂತಿಯ ಆರೋಗ್ಯದಲ್ಲಿ ಚೇತರಿಕೆಯಾಗಲಿಲ್ಲ. ಬಳಿಕ ಮಹಾರಾಷ್ಟ್ರದ ?(Maharashtra) ಸೊಲ್ಲಾಪುರದ (Solapur) ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ನಿನ್ನೆ (ಅ.13) ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಕಾರಣ ಶಹಾಪುರ ತಾಲೂಕಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ನಸುಕಿನ ಜಾವ ಚಿಕಿತ್ಸೆ ಫಲಕಾರಿಯಾಗದೇ ಬಾಣಂತಿ ಮೃತಪಟ್ಟಿದ್ದಾಳೆ.

    ಸದ್ಯ ಬಾಣಂತಿ ಕುಟುಂಬಸ್ಥರು ಶಹಾಪೂರ ಸರ್ಕಾರಿ ಆಸ್ಪತ್ರೆ ವೈದ್ಯೆ ಸರೋಜಾ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದು, ಕೂಡಲೇ ಸಸ್ಪೆಂಡ್ ಮಾಡಿ, ಆಸ್ಪತ್ರೆ ಬಿಲ್ ಪಾವತಿಸುವಂತೆ ಒತ್ತಾಯಿಸಿದ್ದಾರೆ.ಇದನ್ನೂ ಓದಿ: ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ 43 ಕೇಸ್ ವಾಪಸ್ ಪಡೆಯುವ ತೀರ್ಮಾನ ಆಗಿದೆ: ಸಚಿವ ಪರಮೇಶ್ವರ್‌

  • ಬೆಳಗಾವಿಯಲ್ಲಿ ಗರ್ಭಿಣಿ ಸಾವು – ವೈದ್ಯರ ನಿರ್ಲಕ್ಷ್ಯ ಎಂದು ಕುಟುಂಬಸ್ಥರ ಆರೋಪ

    ಬೆಳಗಾವಿಯಲ್ಲಿ ಗರ್ಭಿಣಿ ಸಾವು – ವೈದ್ಯರ ನಿರ್ಲಕ್ಷ್ಯ ಎಂದು ಕುಟುಂಬಸ್ಥರ ಆರೋಪ

    ಬೆಳಗಾವಿ: ದುಡ್ಡು ಕಟ್ಟಿಲ್ಲ ಎಂದು ಚಿಕಿತ್ಸೆ ನೀಡದ್ದಕ್ಕೆ ಆರು ತಿಂಗಳ ಗರ್ಭಿಣಿ ಸಾವನ್ನಪ್ಪಿದ್ದು, ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟಿರುವುದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ಬೆಳಗಾವಿ (Belagavi) ಜಿಲ್ಲೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿದೆ.

    ಮೃತ ಮಹಿಳೆಯನ್ನು ಜಿಲ್ಲೆಯ ಕಂಗ್ರಾಳ ಗಲ್ಲಿಯ ನಿವಾಸಿ ಆರತಿ ಅನಿಲ್ ಚವ್ಹಾಣ (30) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಫೆಬ್ರವರಿಯಲ್ಲಿ ಕಂಪ್ಲಿ ಕ್ಷೇತ್ರಕ್ಕೆ 10 ಸಾವಿರ ಮನೆ ವಿತರಣೆ: ಜಮೀರ್

    ಮಂಗಳವಾರ ಬೆಳಿಗ್ಗೆ ಹೊಟ್ಟೆನೋವು ಎಂದು ಜಿಲ್ಲೆಯ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ವೈದ್ಯರು ಮಧ್ಯಾಹ್ನ ಎರಡು ಗಂಟೆ ಹೊತ್ತಿಗೆ ಬಂದು ಮಗು ಹೊಟ್ಟೆಯಲ್ಲಿಯೇ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.

    ಈ ವೇಳೆ ಹೆಚ್ಚಿನ ಚಿಕಿತ್ಸೆಗಾಗಿ 30 ಸಾವಿರ ರೂ. ಹಣ ಕಟ್ಟುವಂತೆ ವೈದ್ಯರು ತಿಳಿಸಿದ್ದು, ಸದ್ಯಕ್ಕೆ 10 ಸಾವಿರ ರೂ. ಹಣವನ್ನು ಕಟ್ಟಿ, ಉಳಿದ ಹಣವನ್ನು ಆಮೇಲೆ ಕಟ್ಟುವುದಾಗಿ ಕುಟುಂಬಸ್ಥರು ಹೇಳಿದ್ದರು. ಬಾಕಿ ಹಣ ಕಟ್ಟದೇ ಇರುವ ಕಾರಣ ಗರ್ಭಿಣಿಗೆ ಸರಿಯಾಗಿ ಚಿಕಿತ್ಸೆ ನೀಡಿಲ್ಲ. ಆದ್ದರಿಂದ ಮೃತಪಟ್ಟಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

    ಕುಟುಂಬಸ್ಥರು ಆಸ್ಪತ್ರೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಠಾಣೆಯಲ್ಲಿ ನ್ಯಾಯ ಕೊಡಿಸುವಂತೆ ಕಣ್ಣೀರು ಹಾಕಿದ್ದು, ಸದ್ಯ ಖಡೇಬಜಾರ್ ಪೊಲೀಸ್ ಠಾಣೆಯಲ್ಲಿ (KhadeBazar Police Station) ದೂರು ದಾಖಲಾಗಿದೆ.ಇದನ್ನೂ ಓದಿ: Valmiki Scam | ಬಳ್ಳಾರಿ ಚುನಾವಣೆಗೆ ಹಣ ಬಳಕೆ – ಹಗರಣದ ಮಾಸ್ಟರ್‌ಮೈಂಡ್‌ ನಾಗೇಂದ್ರ

  • ಹೆರಿಗೆಯಾದ ನಂತ್ರ ಬಾಣಂತಿ ಸಾವು- ವೈದ್ಯರ ವಿರುದ್ಧ ಸಂಬಂಧಿಕರು ಆಕ್ರೋಶ

    ಹೆರಿಗೆಯಾದ ನಂತ್ರ ಬಾಣಂತಿ ಸಾವು- ವೈದ್ಯರ ವಿರುದ್ಧ ಸಂಬಂಧಿಕರು ಆಕ್ರೋಶ

    ರಾಯಚೂರು: ವೈದ್ಯರ ನಿರ್ಲಕ್ಷ್ಯದಿಂದ ಹೆರಿಗೆಯಾದ ನಂತರ ಬಾಣಂತಿ ಸಾವನ್ನಪ್ಪಿದ್ದಾರೆ ಎಂದು ಮೃತ ಮಹಿಳೆಯ ಸಂಬಂಧಿಕರು ಆರೋಪ ಮಾಡಿದ್ದಾರೆ.

    ಈ ಘಟನೆ ರಾಯಚೂರಿನ ದೇವದುರ್ಗದ ತಾಲೂಕು ಆಸ್ಪತ್ರೆಯಲ್ಲಿ ನಡೆದಿದ್ದು, ದೇವದುರ್ಗದ ಯಲ್ಲಾದೊಡ್ಡಿ ತಾಂಡದ ಶಿವಮ್ಮ( 24) ಮೃತ ಬಾಣಂತಿ. ಹೆರಿಗೆಯಾದ ಬಳಿಕ ಚಿಕಿತ್ಸೆ ಸಿಗದೆ ಸಾವನ್ನಪ್ಪಿದ್ದಾರೆ ಎಂದು ಆರೋಪ ಕೇಳಿ ಬಂದಿದೆ. ಮಗು ಕ್ಷೇಮವಾಗಿದ್ದು, ತಾಯಿ ಮೃತಪಟ್ಟಿದ್ದಾರೆ.

    ಶಿವಮ್ಮನಿಗೆ ಮಧ್ಯರಾತ್ರಿ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ಅಕೆಯನ್ನು ಬೆಳಗ್ಗಿನ ಜಾವ ನಾಲ್ಕು ಗಂಟೆಗೆ ಆಸ್ಪತ್ರೆಗೆ ಕರೆತರಲಾಗಿದೆ. ಆದರೆ ಬರುವ ಮಾರ್ಗಮಧ್ಯೆದಲ್ಲೇ ಹೆರಿಗೆಯಾಗಿದೆ. ಈ ವೇಳೆ ಬೆಳಗ್ಗಿನ ಜಾವ ನಾಲ್ಕು ಗಂಟೆಯಾಗಿದ್ದ ಕಾರಣ ಯಾವ ವೈದ್ಯರು ಬಾಣಂತಿಗೆ ಚಿಕಿತ್ಸೆ ನೀಡಲು ಬಂದಿಲ್ಲ. ಈ ಕಾರಣದಿಂದ ಬಾಣಂತಿ ಸಾವನ್ನಪ್ಪಿದ್ದಾರೆ ಎಂದು ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ದೇವದುರ್ಗ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.