ಮಾಸ್ಕೋ: ರಷ್ಯಾದಲ್ಲಿ (Russia) ಕೋವಿಡ್ ಮಾದರಿಯ ನಿಗೂಢ ವೈರಸ್ (Virus) ವಿಜೃಂಭಿಸುತ್ತಿದೆ ಎಂಬ ಸುದ್ದಿ ಆತಂಕ ಮೂಡಿಸಿದೆ.
ಅಲ್ಲಿನ ಪ್ರಜೆಗಳು ತೀವ್ರ ಸ್ವರೂಪದ ಶ್ವಾಸಕೋಶ ಸಂಬಂಧಿ ರೋಗಗಳು, ದೀರ್ಘಕಾಲಿಕ ಜ್ವರದಿಂದ ಬಳಲುತ್ತಿದ್ದಾರೆ. ವೈರಸ್ ಕಾರಣದಿಂದ ಅವರು ಕೆಮ್ಮುವಾಗ ರಕ್ತ ಕೂಡ ಬೀಳುತ್ತಿದೆ. ಹಲವು ನಗರಗಳಲ್ಲಿ ಈ ವೈರಸ್ ತೀವ್ರ ವೇಗದಲ್ಲಿ ಹಬ್ಬುತ್ತಿದೆ. ವೈದ್ಯರು ಕೋವಿಡ್ ಟೆಸ್ಟ್ ಮಾಡಿದಾಗ ನೆಗೆಟಿವ್ ಎಂದು ಬಂದಿದೆ. ಹೀಗಾಗಿ ಇದು ಹೊಸ ವೈರಸ್ ಆಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ನಿಮ್ಮ ವಕ್ಫ್‌ಗೆ ಒಬ್ಬ ಮುಸ್ಲಿಮೇತರರೂ ಬರುವುದಿಲ್ಲ – ಅಮಿತ್ ಶಾ
ರಾಯಚೂರು: ಜಿಲ್ಲೆಯಲ್ಲಿ ಬೆಕ್ಕು ಜ್ವರ ಹೆಚ್ಚಾಗಿದ್ದು ಕಳೆದ 15 ದಿನಗಳಲ್ಲಿ ಸುಮಾರು 38 ಬೆಕ್ಕುಗಳು ಸಾವನ್ನಪ್ಪಿವೆ. ರಾಜ್ಯದಲ್ಲೆಡೆ ಬೆಕ್ಕುಗಳಲ್ಲಿ ಕಾಣಿಸಿಕೊಂಡಿರುವ ಮಾರಣಾಂತಿಕ ಎಫ್‌ಪಿವಿ(FPV) ವೈರಸ್ ಈ ಬಾರಿ ರಾಯಚೂರಿನ (Raichuru) ಬೆಕ್ಕುಗಳನ್ನ ಹೆಚ್ಚು ಬಾಧಿಸುತ್ತಿದೆ.
ರಾಯಚೂರಿನಲ್ಲಿ ಇದುವರೆಗೆ 100ಕ್ಕೂ ಹೆಚ್ಚು ಬೆಕ್ಕುಗಳಲ್ಲಿ ಫಿಲೈನ್ ಪ್ಯಾನ್‌ಲೀಕೊಪೇನಿಯಾ ವೈರಸ್ (Feline Panleukopenia Virus) ಪತ್ತೆಯಾಗಿದೆ. ಇದರಲ್ಲಿ 62 ಬೆಕ್ಕುಗಳಿಗೆ ಚಿಕಿತ್ಸೆ ನೀಡಲಾಗಿದ್ದು, ಚೇತರಿಸಿಕೊಂಡಿವೆ. ಕಾಯಿಲೆಗೆ ನಿರ್ದಿಷ್ಟ ಚಿಕಿತ್ಸೆ ಇಲ್ಲದಿದ್ದರೂ, ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ಬೆಕ್ಕುಗಳು ಸಾವನ್ನಪ್ಪುತ್ತಿವೆ. ಇದನ್ನೂ ಓದಿ: ಸಾಕು ನಾಯಿ ದಾಳಿ – ಮಹಿಳೆಯ ಮುಖಕ್ಕೆ ಬಿತ್ತು 20 ಸ್ಟಿಚ್
ಮೊದಲೆಲ್ಲಾ ಪರ್ಷಿಯನ್ ಬೆಕ್ಕುಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಕಾಯಿಲೆ, ಈಗ ಎಲ್ಲಾ ಬೆಕ್ಕುಗಳಲ್ಲೂ ಕಾಣಿಸಿಕೊಳ್ಳುತ್ತಿದೆ. ಸಾಮಾನ್ಯವಾಗಿ ಕ್ರಾಸ್ ಬ್ರೀಡ್ ಬೆಕ್ಕುಗಳಲ್ಲಿ ಹೆಚ್ಚಾಗಿ ವೈರಸ್ ಕಂಡು ಬರುತ್ತಿದೆ. ವಾಕ್ಸಿನ್ ಹಾಕಿಸದ ಬೆಕ್ಕುಗಳು ವೈರಸ್ ಬಾಧೆಗೆ ತುತ್ತಾಗುತ್ತಿವೆ. ಪ್ರತೀ ವರ್ಷಕ್ಕಿಂತ ಈ ಬಾರಿ ಹೆಚ್ಚು ಸಂಖ್ಯೆಯಲ್ಲಿ ಬೆಕ್ಕುಗಳು ಸಾವನ್ನಪ್ಪುತ್ತಿದ್ದು ಬೆಕ್ಕು ಪ್ರಿಯರು ಆತಂಕಕ್ಕೊಳಗಾಗಿದ್ದಾರೆ. ಇದನ್ನೂ ಓದಿ: ಟ್ರೋಲ್‌ಗೆ ಡೋಂಟ್ ಕೇರ್ ಎನ್ನುತ್ತಾ ಮಿನಿ ಡ್ರೆಸ್‌ನಲ್ಲಿ ಮಿಂಚಿದ ನಿವೇದಿತಾ ಗೌಡ
ಕಳೆದ 4 ದಿನಗಳ ಹಿಂದೆಯಷ್ಟೇ ಶೀತ ಜ್ವರದಿಂದ ಬಳಲುತ್ತಿದ್ದ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ರೋಗ ಲಕ್ಷಣಗಳನ್ನು ಪರಿಗಣಿಸಿ ಪರೀಕ್ಷೆಗೆ ಒಳಪಡಿಸಿದ ನಂತರ ಮಗುವಿನಲ್ಲಿ ಹೆಚ್‌ಎಂಪಿವಿ ಸೋಂಕು ಇರೋದು ದೃಢವಾಗಿದೆ ಎಂದು AMCH ಸೂಪರಿಂಟೆಂಡೆಂಟ್ ಧೃಬಜ್ಯೋತಿ ಭುಯಾನ್ ಹೇಳಿದ್ದಾರೆ. ಇದನ್ನೂ ಓದಿ: ಮಹಾ ಕುಂಭಮೇಳಕ್ಕೆ ವೈರಸ್ ಆತಂಕ – 100 ಬೆಡ್‌ಗಳ ಆಸ್ಪತ್ರೆ, ವೈದ್ಯರ ತಂಡ ನಿಯೋಜನೆ
ಈ ವರ್ಷದಲ್ಲಿ ಅಸ್ಸಾಂನಲ್ಲಿ ಕಾಣಿಸಿಕೊಂಡ ಮೊದಲ ಸೋಂಕು ಇದಾಗಿದೆ. ಆದಾಗ್ಯೂ ಇದು ಹೊಸದೇನಲ್ಲ ಎಂದು ವೈದ್ಯರು ಹೇಳಿದ್ದಾರೆ. 2001ರಲ್ಲಿ ಮೊದಲಬಾರಿಗೆ ಗುರುತಿಸಲಾದ ಈ ವೈರಸ್ ಹಲವು ವರ್ಷಗಳಿಂದ ಜಾಗತಿಕವಾಗಿ ಅಸ್ತಿತ್ವದಲ್ಲಿದೆ. 2014ರಲ್ಲಿ ಅಸ್ಸಾಂನಲ್ಲಿ ದಿಬ್ರುಗಢ ಜಿಲ್ಲೆಯಲ್ಲಿ 110 ಪ್ರಕರಣಗಳನ್ನು ಗುರುತಿಸಿದ್ದೆವು. ಪ್ರತಿ ವರ್ಷವೂ ಇದು ಪತ್ತೆಯಾಗುತ್ತಿದೆ. ಜನ ಆತಂಕ ಪಡುವ ಅಗತ್ಯವಿಲ್ಲ, ಮುನ್ನೆಚ್ಚರಿಕೆ ವಹಿಸಿದ್ರೆ ಸಾಕು ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: HMPV ಜಾಗತಿಕವಾಗಿ ಪರಿಚಲನೆಯಲ್ಲಿದೆ – ಐಸಿಎಂಆರ್ ಎಚ್ಚರಿಕೆ
ಬೆಂಗಳೂರು: ಹ್ಯೂಮನ್ ಮೆಟಾನ್ಯೂಮೋ ವೈರಸ್ (HMPV) ಸೋಂಕಿತ 8 ತಿಂಗಳ ಮಗು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದೆ.
ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಕಾರಣ ಇಂದು ಮಧ್ಯಾಹ್ನ ಬೆಂಗಳೂರಿನ ಖಾಸಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದೆ. ಸೋಮವಾರ ಬಿಬಿಎಂಪಿ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಆಸ್ಫತ್ರೆಗೆ ಭೇಟಿ ಮಗುವಿನ ಪೋಷಕರಿಂದ ಮಾಹಿತಿಯನ್ನು ಪಡೆದುಕೊಂಡಿದ್ದರು. ಇದನ್ನೂ ಓದಿ: Tumakuru| ಚಿರತೆ ಬಾಲ ಹಿಡಿದು ಬೋನಿಗೆ ಹಾಕಿದ ಯುವಕ – ಅರಣ್ಯ ಇಲಾಖೆ ಸಿಬ್ಬಂದಿ ಶಾಕ್
ಬೆಂಗಳೂರಿನ ಇಬ್ಬರು ಮಕ್ಕಳಲ್ಲಿ HMPV ಪತ್ತೆಯಾಗಿತ್ತು. ಸೋಂಕು ಕಾಣಿಸಿದ 3 ತಿಂಗಳ ಮಗು ಈಗಾಗಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರೆ 8 ತಿಂಗಳ ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಕೆ ಕಾಣುತ್ತಿದೆ.
ನವದೆಹಲಿ: ಚೀನಾದಲ್ಲಿ(China Virus) ಕಂಡು ಬಂದಿರುವ ಹ್ಯೂಮನ್ ಮೆಟಾನ್ಯೂಮೋ ವೈರಸ್ (HMPV) ಹರಡುವ ಬಗ್ಗೆ ಭಯಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸೇವೆಗಳ ಮಹಾನಿರ್ದೇಶನಾಲಯದ (DGHS) ಅಧಿಕಾರಿ ಡಾ ಅತುಲ್ ಗೋಯೆಲ್ ಹೇಳಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ವೈರಸ್ (Virus) ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಎಲ್ಲಾ ಉಸಿರಾಟದ ಸೋಂಕುಗಳ ವಿರುದ್ಧ ಸಾಮಾನ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೆ ಸಾಕು ಎಂದು ತಿಳಿಸಿದರು.
ನಾವು ದೇಶದಲ್ಲಿ ಉಸಿರಾಟಕ್ಕೆ ಸಂಬಂಧಿಸಿದಂತೆ ದಾಖಲಾದ ರೋಗಿಗಳ ಡೇಟಾವನ್ನು ವಿಶ್ಲೇಷಿಸಿದ್ದೇವೆ. ಡಿಸೆಂಬರ್ 2024ರ ಡೇಟಾದಲ್ಲಿ ಯಾವುದೇ ಗಣನೀಯ ಹೆಚ್ಚಳ ಕಂಡುಬಂದಿಲ್ಲ. ನಮ್ಮ ಯಾವುದೇ ಸಂಸ್ಥೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಕೇಸ್ ದಾಖಲಾದ ಬಗ್ಗೆ ವರದಿಯಾಗಿಲ್ಲ ಎಂದು ಹೇಳಿದರು.
HMPVಗೆ ಯಾವುದೇ ನಿರ್ದಿಷ್ಟ ಆಂಟಿವೈರಲ್ ಚಿಕಿತ್ಸೆ ಇಲ್ಲ, ಆದ್ದರಿಂದ ಅದರ ಹರಡುವಿಕೆಯನ್ನು ನಿಯಂತ್ರಿಸಲು ತಡೆಗಟ್ಟುವಿಕೆ ಮುಖ್ಯವಾಗಿದೆ. ಚೀನಾದಲ್ಲಿ HMPV ಏಕಾಏಕಿ ಹರಡಿರುವ ಬಗ್ಗೆ ಸುದ್ದಿಗಳಿವೆ. ಇದು ಯಾವುದೇ ಇತರ ಉಸಿರಾಟದ ವೈರಸ್‌ನಂತೆ ಸಾಮಾನ್ಯ ಶೀತವನ್ನು ಉಂಟುಮಾಡುತ್ತದೆ ಮತ್ತು ವಯಸ್ಸಾದವರಲ್ಲಿ ಮತ್ತು ಚಿಕ್ಕವರಲ್ಲಿ ಇದು ಜ್ವರಕ್ಕೆ ಕಾರಣವಾಗಬಹುದು ಎಂದು ವಿವರಿಸಿದರು. ಇದನ್ನೂ ಓದಿ: ಚೀನಾದಲ್ಲಿ ಆರ್ಭಟಿಸುತ್ತಿದೆ ಹೊಸ ವೈರಸ್| ಸಾವಿರಾರು ಮಂದಿ ಆಸ್ಪತ್ರೆ ಪಾಲು – ವೈರಸ್ ಲಕ್ಷಣಗಳೇನು?
ಚಳಿಗಾಲದಲ್ಲಿ ಉಸಿರಾಟದ ವೈರಸ್ ಸೋಂಕುಗಳು ಉಲ್ಬಣವಾಗುವುದು ಸಾಮಾನ್ಯ. ಯಾರಿಗಾದರೂ ಕೆಮ್ಮು ಮತ್ತು ಶೀತ ಇದ್ದರೆ ಅವರು ಇತರ ಜನರೊಂದಿಗೆ ಸಂಪರ್ಕಕ್ಕೆ ಬರುವುದನ್ನು ತಪ್ಪಿಸಬೇಕು. ಕೆಮ್ಮು, ಶೀತ ಬಂದಾಗ ಪ್ರತ್ಯೇಕ ಕರವಸ್ತ್ರ ಅಥವಾ ಟವೆಲ್ ಬಳಸಿ ಎಂದು ಸಲಹೆ ನೀಡಿದರು.
ಕೇಂದ್ರ ಆರೋಗ್ಯ ಸಚಿವಾಲಯದ ಅಡಿಯಲ್ಲಿ ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ (NCDC) ಉಸಿರಾಟದ ಪ್ರಕರಣಗಳನ್ನು ಮೇಲ್ವಿಚಾರಣೆ ಮಾಡುತ್ತಿದೆ ಮತ್ತು ಅಂತರರಾಷ್ಟ್ರೀಯ ಏಜೆನ್ಸಿಗಳೊಂದಿಗೆ ಸಂಪರ್ಕದಲ್ಲಿದೆ.
ಬೀಜಿಂಗ್: ಕೊರೊನಾ ವೈರಸ್ ಇಡೀ ಜಗತ್ತನ್ನೇ ಭೀಕರವಾಗಿ ಕಾಡಿತ್ತು. ಇದು ಕಾಣಿಸಿಕೊಂಡು ಸರಿಸುಮಾರು 5 ವರ್ಷಗಳ ಬಳಿಕ ಈಗ ಚೀನಾದಲ್ಲಿ (China) ಮತ್ತೊಂದು ವೈರಸ್ ವ್ಯಾಪಕವಾಗಿ ಹರಡಿರುವ ಆತಂಕಕಾರಿ ಸುದ್ದಿ ಹೊರಬಿದ್ದಿದೆ.
ಕೆಲವರು, ಆಸ್ಪತ್ರೆಗಳು ಮತ್ತು ಸ್ಮಶಾನಗಳು ತುಂಬಿಹೋಗಿವೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಜನರು ಆಸ್ಪತ್ರೆಗಳಲ್ಲಿ ಕಿಕ್ಕಿರಿದು ತುಂಬಿರುವ ವೀಡಿಯೋಗಳು ಹರಿದಾಡುತ್ತಿವೆ. ಕೆಲವು ಬಳಕೆದಾರರು ಇನ್ಫ್ಲುಯೆನ್ಸ A, HMPV, ಮೈಕೋಪ್ಲಾಸ್ಮಾ ನ್ಯುಮೋನಿಯಾ, ಮತ್ತು ಕೋವಿಡ್-19 ಸೇರಿದಂತೆ ಅನೇಕ ವೈರಸ್‌ಗಳು ವ್ಯಾಪಿಸಿವೆ ಎಂದು ಪೋಸ್ಟ್‌ಗಳನ್ನು ಹರಿಬಿಟ್ಟಿದ್ದಾರೆ.
ಚೀನಾ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ ಎಂದು ಹೇಳಲಾಗಿದೆ. ಆದರೂ ಈ ಸುದ್ದಿ ಇನ್ನೂ ದೃಢಪಟ್ಟಿಲ್ಲ. HMPV ಜ್ವರ ತರಹದ ರೋಗಲಕ್ಷಣ ಮತ್ತು Covid-19 ನಂತಹ ರೋಗಲಕ್ಷಣಗಳನ್ನು ಸಹ ಉಂಟು ಮಾಡಬಹುದು ಎಂದು ಹೇಳಲಾಗಿದೆ. ವೈರಸ್ ಹರಡುತ್ತಿದ್ದಂತೆ ಆರೋಗ್ಯ ಅಧಿಕಾರಿಗಳು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಇದನ್ನೂ ಓದಿ: ಬಾಂಗ್ಲಾ ಹಿಂದೂ ಸನ್ಯಾಸಿ ಚಿನ್ಮಯ್ ಕೃಷ್ಣ ದಾಸ್ ಜಾಮೀನು ಅರ್ಜಿ ವಜಾ
⚠️ BREAKING:
China ???????? Declares State of Emergency as Epidemic Overwhelms Hospitals and Crematoriums.
Multiple viruses, including Influenza A, HMPV, Mycoplasma pneumoniae, and COVID-19, are spreading rapidly across China. pic.twitter.com/GRV3XYgrYX
‘SARS-CoV-2 (Covid-19)’ ಹೆಸರಿನಲ್ಲಿರುವ ಎಕ್ಸ್ ಖಾತೆಯೊಂದರಲ್ಲಿ, ‘ಚೀನಾ ಇನ್ಫ್ಲುಯೆನ್ಸ A, HMPV, ಮೈಕೋಪ್ಲಾಸ್ಮಾ ನ್ಯುಮೋನಿಯಾ ಮತ್ತು ಕೋವಿಡ್-19 ಸೇರಿದಂತೆ ಅನೇಕ ವೈರಸ್‌ಗಳ ಉಲ್ಬಣವನ್ನು ಎದುರಿಸುತ್ತಿದೆ. ಆಸ್ಪತ್ರೆಗಳು ರೋಗಿಗಳು ಮತ್ತು ಸ್ಮಶಾನಗಳು ಮೃತದೇಹಗಳಿಂದ ತುಂಬಿ ಹೋಗಿವೆ’ ಎಂದು ಪೋಸ್ಟ್ ಹಾಕಲಾಗಿದೆ.
ಏತನ್ಮಧ್ಯೆ, ಚೀನಾದ ರೋಗ ನಿಯಂತ್ರಣ ಪ್ರಾಧಿಕಾರವು ಶುಕ್ರವಾರದಂದು ಅಜ್ಞಾತ ಮೂಲದ ನ್ಯುಮೋನಿಯಾಕ್ಕೆ ಮೇಲ್ವಿಚಾರಣಾ ವ್ಯವಸ್ಥೆಯನ್ನು ನಡೆಸುತ್ತಿದೆ ಎಂದು ರಾಯಿಟರ್ಸ್ ಸುದ್ದಿ ವರದಿ ಹೇಳಿದೆ, ಚಳಿಗಾಲದಲ್ಲಿ ಕೆಲವು ಉಸಿರಾಟದ ಕಾಯಿಲೆಗಳ ಪ್ರಕರಣಗಳು ಹೆಚ್ಚಾಗುವ ನಿರೀಕ್ಷೆಯಿದೆ. ಮೀಸಲಾದ ವ್ಯವಸ್ಥೆಯನ್ನು ಸ್ಥಾಪಿಸುವ ಕ್ರಮವು ಅಜ್ಞಾತ ರೋಗಕಾರಕಗಳನ್ನು ನಿರ್ವಹಿಸಲು ಪ್ರೋಟೋಕಾಲ್‌ಗಳನ್ನು ಹೊಂದಿಸಲು ಅಧಿಕಾರಿಗಳಿಗೆ ಸಹಾಯ ಮಾಡುವ ಗುರಿಯನ್ನು ಹೊಂದಿದೆ, ಐದು ವರ್ಷಗಳ ಹಿಂದೆ ಕೋವಿಡ್ -19 ಗೆ ಕಾರಣವಾಗುವ ಕಾದಂಬರಿ ಕೊರೊನಾವೈರಸ್ ಮೊದಲು ಹೊರಹೊಮ್ಮಿದಾಗ ಕಡಿಮೆ ಮಟ್ಟದ ಸನ್ನದ್ಧತೆಗೆ ವ್ಯತಿರಿಕ್ತವಾಗಿದೆ. ಇದನ್ನೂ ಓದಿ: ಟ್ರಂಪ್ ಹೋಟೆಲ್ ಹೊರಗೆ ಟೆಸ್ಲಾ ಸೈಬರ್‌ಟ್ರಕ್ ಸ್ಫೋಟ – ಓರ್ವ ಸಾವು
ವಿಜ್ಞಾನ ಕ್ಷೇತ್ರದಲ್ಲಿ ನಡೆಯುತ್ತಿರುವ ಹೊಸ ಹೊಸ ಸಂಶೋಧನೆಗಳು ಅಚ್ಚರಿ ಮೂಡಿಸುತ್ತಿದ್ದರೆ, ಹೊಸ ಮಾದರಿಯ ವೈರಸ್‌ಗಳು ವಿಶ್ವದಾದ್ಯಂತ ಜನರ ನಿದ್ದೆಗೆಡಿಸಿವೆ. ಈಚೆಗೆ ಚೀನಾದಲ್ಲಿ ನ್ಯುಮೋನಿಯಾ ಮಾದರಿಯ ವೈರಸ್ ಪತ್ತೆಯಾಗಿತ್ತು. ಇದೀಗ ಜಪಾನ್‌ನಲ್ಲಿ (Japan) ಅತ್ಯಂತ ಭಯಾನಕವಾದ ಮಾಂಸ ತಿನ್ನುವ ವೈರಸ್‌ವೊಂದು (Flesh Eating Bacteria) ಕಾಣಿಸಿಕೊಂಡಿದೆ. ಈ ವೈರಸ್‌ನಿಂದ ಭಾರತಕ್ಕೆ ಯಾವುದೇ ಆತಂಕ ಸದ್ಯಕ್ಕೆ ಇಲ್ಲ. ಆದ್ರೆ ನಿರ್ಲಕ್ಷ್ಯ ವಹಿಸಿದ್ರೆ ಸಂಕಷ್ಟ ಕಟ್ಟಿಟ್ಟಬುತ್ತಿ ಎಂದು ಸಾಂಕ್ರಾಮಿಕ ರೋಗತಜ್ಞರು ಹೇಳುತ್ತಾರೆ.
2020-2021ರ ವೇಳೆಗೆ ಚೀನಾದ (China) ವುಹಾನ್ ಲ್ಯಾಬ್‌ವೊಂದರಲ್ಲಾದ ಯಡವಟ್ಟಿನಿಂದ ಇಡೀ ವಿಶ್ವವನ್ನೇ ಕೊರೊನಾ ವೈರಸ್ ಕಾಡಿತ್ತು. ಆದ್ರೆ ಇದಕ್ಕೂ ಮುನ್ನವೇ ಎಬೋಲಾ, ಮಾರ್ಬರ್ಗ್, ರೇಬಿಸ್ ಹಾಗೂ ಸಿಡುಬು, ಹಂಟಾ ದಂತಹ ವೈರಸ್‌ಗಳು ವಿಶ್ವವವನ್ನು ಕಾಡಿದ್ದವು. ಈ ಎಲ್ಲ ವೈರಸ್‌ಗಳಿಂದ ಚೇತರಿಸಿಕೊಳ್ಳುತ್ತಿರುವ ಹೊತ್ತಿನಲ್ಲೇ ಜಪಾನ್‌ನಲ್ಲಿ ಹುಟ್ಟಿಕೊಂಡ ವೈರಸ್‌ವೊಂದು ಜನರ ನಿದ್ದೆಗೆಡಿಸಿದೆ. ಮನುಷ್ಯನ ದೇಹದ ಮಾಂಸ ತಿನ್ನುವ ವೈರಸ್ ಇದಾಗಿದ್ದು, ಬೇರೆ ದೇಶಗಳಿಗೂ ಹರಡುವ ಆತಂಕ ಹುಟ್ಟಿಸಿದೆ. 2022ರಲ್ಲಿ ಕನಿಷ್ಠ 5 ಯುರೋಪಿಯನ್ ದೇಶಗಳಲ್ಲಿ ಈ ವೈರಸ್ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಆರೋಗ್ಯ ತಜ್ಞರು ವೈರಸ್‌ಗೆ ಹೊಸ ಔಷಧಿಯನ್ನು ಕಂಡುಹಿಡಿಯುವತ್ತ ಚಿತ್ತ ಹರಿಸಿದ್ದಾರೆ.
ಹೌದು. ಮಾಂಸ ತಿನ್ನುವ ಬ್ಯಾಕ್ಟೀರಿಯಾ ಹೊಸ ಆತಂಕ ಸೃಷ್ಟಿಸಿದೆ. ಜಪಾನ್‌ನಲ್ಲಿ ಹರಡುತ್ತಿರುವ ಈ ಅಪರೂಪದ ಬ್ಯಾಕ್ಟೀರಿಯಾ, ಗಂಭೀರ ಕಾಯಿಲೆ ಉಂಟುಮಾಡುತ್ತಿದ್ದು, 48 ಗಂಟೆಗಳಲ್ಲಿ ಸಾವಿಗೆ ಕಾರಣವಾಗುವಷ್ಟು ಅಪಾಯಕಾರಿಯಾಗಿದೆ. ಇದು ವೈದ್ಯಕೀಯ ಲೋಕಕ್ಕೆ ಹೊಸ ಸವಾಲೊಡ್ಡಿದೆ. ಕೋವಿಡ್ ಸಮಯದ ನಿರ್ಬಂಧಗಳನ್ನು ಸಡಿಲಿಸಿದ ಬಳಿಕ ಜಪಾನ್‌ನಲ್ಲಿ ಇದು ಕಾಣಿಸಿಕೊಂಡಿದೆ ಎಂದು ಇತ್ತೀಚಿನ ವರದಿಯೊಂದು ಹೇಳಿದೆ. ಜಪಾನ್‌ನಲ್ಲಿ ಸ್ಟ್ರೆಪ್ಟೋಕೊಕ್ಕಾಲ್ ಟಾಕ್ಸಿಕ್ ಶಾಕ್ ಸಿಂಡ್ರೋಮ್ (ಎಸ್‌ಟಿಎಸ್‌ಎಸ್ – Streptococcal Toxic Shock Syndrome) ಎಂಬ ಹೊಸ ವೈರಸ್ ಹುಟ್ಟಿಕೊಂಡಿದ್ದು, ಇದು ಇತ್ತೀಚಿನ ದಿನಗಳಲ್ಲಿ ಏರಿಕೆ ಕಂಡಿದೆ.
ಕಳೆದ ವರ್ಷ 941 ಪ್ರಕರಣಗಳು ದಾಖಲಾಗಿತ್ತು. ಆದ್ರೆ ಪ್ರಸಕ್ತ ವರ್ಷದಲ್ಲಿ ಈಗಾಗಲೇ ಪ್ರಕರಣಗಳ ಸಂಖ್ಯೆ 1,000ಕ್ಕೂ ಹೆಚ್ಚಿದೆ. ಈ ವರ್ಷಾಂತ್ಯಕ್ಕೆ ಇದರ ಸಂಖ್ಯೆ ಇನ್ನಷ್ಟು ದುಪ್ಪಟ್ಟಾಗಲಿದೆ ಎಂದು ತಜ್ಞ ವೈದ್ಯರು (Doctors) ಅಂದಾಜಿಸಿರುವುದಾಗಿ ಸಾಂಕ್ರಾಮಿಕ ಕಾಯಿಲೆಗಳ ರಾಷ್ಟ್ರೀಯ ಸಂಸ್ಥೆ ವರದಿ ಮಾಡಿದೆ.
ಅಷ್ಟಕ್ಕೂ ಈ ವೈರಸ್ ಹುಟ್ಟಿಕೊಂಡಿದ್ದು ಹೇಗೆ? ಇದರ ಅಪಾಯದ ತೀವ್ರತೆ ಎಷ್ಟು? ಇದು ಕೊರೊನಾದಂತೆ ವಿಶ್ವಕ್ಕೆ ವ್ಯಾಪಿಸುವ ಸಾಧ್ಯತೆ ಇದೆಯೇ? ಎಂಬುದನ್ನು ತಿಳಿಯುವ ಕುತೂಹಲ ನಿಮಗಿದ್ದರೆ ಮುಂದೆ ಓದಿ…
ಟಾಕ್ಸಿಕ್ ಶಾಕ್ ಸಿಂಡ್ರೋಮ್ ಲಕ್ಷಣಗಳೇನು?
ಈ ಕಾಯಿಲೆಯಲ್ಲಿ ಮರಣ ದರ ಶೇ.30ರಷ್ಟು ಇದ್ದು, ಅಪಾಯದ ಕರೆಗಂಟೆ ಬಾರಿಸಿದೆ. ಗ್ರೂಪ್ ಎ ಸ್ಟ್ರೆಪ್ಟೋಕೊಕ್ಕಸ್ (GAS), ಮಕ್ಕಳಲ್ಲಿ ಸ್ಟ್ರೆಪ್ ಥ್ರೋಟ್ ಎಂದು ಕರೆಯಲಾಗುವ ಲಘು ಕಾಯಿಲೆಯನ್ನು ಉಂಟುಮಾಡುತ್ತದೆ. ಇದರಲ್ಲಿ ಗಂಟಲು ನೋವು ಮತ್ತು ಊದುವಿಕೆ ಕಾಣಿಸಿಕೊಳ್ಳುತ್ತದೆ. ಅಲ್ಲದೇ ಅಂಗಾಂಗ ನೋವು, ಊತ, ಜ್ವರ ಹಾಗೂ 24 ರಿಂದ 48 ಗಂಟೆಯೊಳಗೆ ಕಡಿಮೆ ರಕ್ತದೊತ್ತಡದಂತಹ ಲಕ್ಷಣಗಳನ್ನು ತ್ವರಿತವಾಗಿ ಉಂಟುಮಾಡಬಹುದು. ಇದು ಜೀವಕೋಶಗಳ ಸಾವು, ಉಸಿರಾಟದ ತೊಂದರೆ, ಅಂಗಾಂಗ ವೈಫಲ್ಯ ಹಾಗೂ ಸಾವಿಗೆ ಕೂಡ ಕಾರಣವಾಗಬಹುದು. ವಯಸ್ಕರು, ಮುಖ್ಯವಾಗಿ 50 ವರ್ಷ ದಾಟಿದವರಿಗೆ ಈ ಕಾಯಿಲೆ ಹೆಚ್ಚು ಅಪಾಯಕಾರಿಯಾಗಿದೆ. ಅಲ್ಲದೇ ಈ ವೈರಸ್ ಕಾಣಿಸಿಕೊಂಡ 48 ಗಂಟೆಗಳಲ್ಲಿ ಮನುಷ್ಯ ಸಾಯುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ ಎಂದು ಟೋಕಿಯೋ ಮಹಿಳಾ ವೈದ್ಯಕೀಯ ಕಾಲೇಜಿನ ಸಾಂಕ್ರಾಮಿಕ ಕಾಯಿಲೆ ವಿಭಾಗದ ಪ್ರೊಫೆಸರ್ ಕೆನ್ ಕಿಕುಚಿ ತಿಳಿಸಿದ್ದಾರೆ.
ಚಿಕಿತ್ಸೆ ಏನು?
ಟಾಕ್ಸಿಕ್ ಶಾಕ್ ಸಿಂಡ್ರೋಮ್ ವೈರಸ್‌ಗೆ ನಿಖರ ಚಿಕಿತ್ಸೆ ಇಲ್ಲವಾದರೂ ತಾತ್ಕಾಲಿಕ ಚಿತ್ಸೆಗಾಗಿ ʻIV ʼ ಆಂಟಿಬಯೊಟಿಕ್ ಕಂಡುಹಿಡಿಯಲಾಗಿದೆ. ಇದು ರಕ್ತದೊತ್ತಡ ಕಡಿಮೆ ಮಾಡುವ ಜೊತೆಗೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿ ವೈರಸ್ ವಿರುದ್ಧ ಹೋರಾಟುವ ಶಕ್ತಿ ಒದಗಿಸುತ್ತದೆ. ಅಲ್ಲದೇ ಅಂಗಾಗ ವೈಫಲ್ಯತೆ ಮತ್ತು ಪ್ರಾಣಹಾನಿಯಂತಹ ತೀವ್ರ ಸಮಸ್ಯೆಗೆ ಸಿಲುಕದಂತೆ ನೋಡಿಕೊಳ್ಳುತ್ತದೆ.
ರೋಗ ನಿರ್ಣಯಿಸುವುದು ಹೇಗೆ?
ಅಪಾಯಕಾರಿ ಟಾಕ್ಸಿಕ್ ಶಾಕ್ ಸಿಂಡ್ರೋಮ್ ನಿರ್ಣಯಿಸಲು ಕೆಲವು ಪರೀಕ್ಷಾ ವಿಧಾನಗಳಿವೆ. ಮೊದಲನೆಯದ್ದಾಗಿ ರಕ್ತ ಪರೀಕ್ಷೆ ನಡೆಸಲಾಗುತ್ತದೆ. ಇದರೊಂದಿಗೆ ಕಿಡ್ನಿ, ಕಡಿಮೆ ರಕ್ತದೊತ್ತಡ, ಪಿತ್ತಜನಕಾಂಗ ಸಮಸ್ಯೆಗಳಿರುವ ಬಗ್ಗೆ ಗುರುತಿಸಲಾಗುತ್ತದೆ. ಜೊತೆಗೆ ಅಂಗಾಗ ವೈಫಲ್ಯಗಳು ಕಂಡುಬಂದಿದ್ದರೆ ಆಗ ಕಾಯಿಲೆಗೆ ತುತ್ತಾಗಿರುವ ಬಗ್ಗೆ ದೃಢೀಕರಿಸಲಾಗುತ್ತದೆ.
ಮುಂಜಾಗ್ರತಾ ಕ್ರಮ ಏನು?
* ಸುತ್ತಮುತ್ತಲಿನ ವಾತಾವರಣವನ್ನು ಶುಚಿಯಾಗಿಟ್ಟುಕೊಳ್ಳಬೇಕು
* ಯಾವುದೇ ವಸ್ತುಗಳನ್ನು ಮುಟ್ಟುವ ಮುನ್ನ ಕೈಗಳನ್ನು ಶುಚಿಯಾಗಿಟ್ಟುಕೊಳ್ಳಬೇಕು.
* ಕೆಮ್ಮುವಾಗ ಸೀನುವಾಗ ಬಾಯಿ, ಮೂಗನ್ನು ಕೈನಿಂದ ಮುಚ್ಚಿಕೊಳ್ಳಬೇಕು ಅಥವಾ ಬಟ್ಟೆಯನ್ನು ಅಡ್ಡಲಾಗಿಟ್ಟುಕೊಳ್ಳಬೇಕು.
* ದೇಹದಲ್ಲಿ ಗಾಯಗೊಂಡ ಭಾಗಗಳನ್ನು ಸೂಕ್ಷವಾಗಿ- ನೋಡಿಕೊಳ್ಳಬೇಕು, ಸೆಪ್ಟಿಕ್‌ಗೆ ಅವಕಾಶ ನೀಡಬಾರದು.
* ಸೋಂಕಿನ ಬಗ್ಗೆ ಯಾವುದೇ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ವೈದ್ಯಕೀಯ ಚಿಕಿತ್ಸೆ ಪಡೆದುಕೊಳ್ಳಬೇಕು ಎಂಬುದು ತಜ್ಞರ ಸಲಹೆ.
ನವದೆಹಲಿ: ಚೀನಾದಲ್ಲಿ (China) ನ್ಯುಮೋನಿಯಾ ಮಾದರಿಯ ಮತ್ತೊಂದು ಡೆಡ್ಲಿ ವೈರಸ್ ಪತ್ತೆಯಾಗಿದ್ದು, ಇತರ ದೇಶಗಳ ನಿದ್ದೆಗೆಡಿಸಿದೆ. ಇತ್ತ ಕೇಂದ್ರ ಆರೋಗ್ಯ ಇಲಾಖೆಯು (Central Health Department) ಭಾರತದಲ್ಲಿ ಹೈ ಅಲರ್ಟ್ ಘೋಷಿಸಿದೆ. ಈ ಬೆನ್ನಲ್ಲೇ ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ಆಸ್ಪತ್ರೆಯಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳನ್ನು ತಕ್ಷಣವೇ ಪರಿಶೀಲಿಸುವಂತೆ ಕೇಂದ್ರವು ರಾಜ್ಯ ಸರ್ಕಾರಗಳಿಗೆ ಖಡಕ್ ಸೂಚನೆ ಕೊಟ್ಟಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದ್ದಾರೆ. ಆಸ್ಪತ್ರೆಗಳಲ್ಲಿ ಹಾಸಿಗೆಗಳು, ಔಷಧಗಳು, ಇನ್ಫ್ಲುಯೆನ್ಸಾ ಲಸಿಕೆಗಳು, ಆಕ್ಸಿಜನ್, ಆ್ಯಂಟಿಬಯೊಟಿಕ್, ವೈಯಕ್ತಿಕ ಸುರಕ್ಷತೆಯ ಸಾಧನಗಳು ಇತರೇ ಪರೀಕ್ಷಾ ಕಿಟ್‌ಗಳಂತಹ ಮೂಲ ಸೌಕರ್ಯಗಳನ್ನು ಹೆಚ್ಚಿಸಲು ಕ್ರಮ ತೆಗೆದುಕೊಳ್ಳುವಂತೆ ನಿರ್ದೇಶನ ನೀಡಿದ್ದಾರೆ. ಇದನ್ನೂ ಓದಿ: ವ್ಯಕ್ತಿಯ ಕರುಳಲ್ಲಿ ನೊಣ ಕಂಡು ದಂಗಾದ ವೈದ್ಯರು!
ಅಲ್ಲದೇ ಆಕ್ಸಿಜನ್ ಪ್ಲಾಂಟ್, ವೆಂಟಿಲೇಟರ್‌ಗಳ ಕಾರ್ಯವೈಖರಿ, ಸೋಂಕು ನಿಯಂತ್ರಿಸುವ ಅಗತ್ಯ ಕ್ರಮಗಳ ಬಗ್ಗೆ ಎಚ್ಚರ ವಹಿಸುವಂತೆ ಪತ್ರದಲ್ಲಿ ಸೂಚಿಸಿದ್ದಾರೆ. ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಮುನ್ನೆಚ್ಚರಿಕೆ ಕ್ರಮವಾಗಿ ಅಗತ್ಯವಿದ್ದರೆ ಕೋವಿಡ್ ಸಂದರ್ಭದಲ್ಲಿ ಅನುಸರಿಸಲಾದ ಮಾರ್ಗಸೂಚಿಗಳನ್ನು ಜಾರಿಗೆ ತರಬೇಕು. ಅಲ್ಲದೇ ಸೋಂಕಿನ ಲಕ್ಷಣಗಳು ಮತ್ತು ತೀವ್ರ ಉಸಿರಾಟದ ಸಮಸ್ಯೆಗಳು ಹೊಂದಿರುವವರ ಮೇಲೆ ತೀವ್ರ ನಿಗಾ ವಹಿಸುವಂತೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಮುಂಬೈ ಭಯೋತ್ಪಾದಕ ದಾಳಿಗೆ 15 ವರ್ಷ – ನೆನೆಪಿದೆಯಾ ಆ ಕರಾಳ ದಿನಗಳು..?
ಇಂಟಿಗ್ರೇಟೆಡ್ ಡಿಸೀಸ್ ಸರ್ವೆಲೆನ್ಸ್ ಯೋಜನೆ ಅಡಿಯಲ್ಲಿ ಹದಿಹರೆಯದವರು ಮತ್ತು ಮಕ್ಕಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ಜೊತೆಗೆ ವೈದ್ಯಕೀಯ ಕಾಲೇಜು ಆಸ್ಪತ್ರೆಗಳು ಮತ್ತು ಇತರೇ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಐಎಲ್‌ಐ ಮತ್ತು ಸಾರಿ ಪ್ರಕರಣಗಳು ಪತ್ತೆಯಾದಲ್ಲಿ, ಅಂತಹ ಪ್ರಕರಣಗಳ ಮಾಹಿತಿಯನ್ನ ಐಡಿಎಸ್‌ಪಿ-ಐಹೆಚ್‌ಐಪಿ ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಬೇಕಾಗುತ್ತದೆ. ಅಲ್ಲದೇ ಗಂಟಲು ದ್ರವ ಮತ್ತು ಸಾರಿ ಪ್ರಕರಣಗಳ ಪರೀಕ್ಷೆ ಕೈಗೊಳ್ಳಬೇಕು. ಅದರಲ್ಲೂ ಮಕ್ಕಳ ಮಾದರಿ ಪರೀಕ್ಷೆ ಮಾಡಿ ಮಾದರಿಗಳನ್ನು ವೈರಸ್ ಸಂಶೋಧನೆ ಮತ್ತು ರೋಗನಿರ್ಣಯ ಪ್ರಯೋಗಾಲಯಗಳಿಗೆ ಕಳುಹಿಸಬೇಕು ಎಂದು ರಾಜ್ಯಗಳಿಗೆ ಸೂಚಿಸಿದ್ದಾರೆ.
ಚೀನಾದಲ್ಲಿ ವೈರಸ್ ಹೆಚ್ಚಾಗಿ ಹರಡುತ್ತಿದ್ದು, ಮಕ್ಕಳು ಅನಾರೋಗ್ಯಕ್ಕೆ ಗುರಿಯಾಗುತ್ತಿದ್ದಾರೆ. ನ್ಯೂಮೋನಿಯಾ (Pneumonia) ಮಾದರಿಯ ಲಕ್ಷಣಗಳುಳ್ಳ ಈ ವೈರಸ್ ನೇರವಾಗಿ ಶ್ವಾಸಕೋಶದ ಮೇಲೆ ಪರಿಣಾಮ ಬೀರಲಿದ್ದು, ಉಸಿರಾಟದ ಸಮಸ್ಯೆ ಉಂಟಾಗುತ್ತದೆ. ಆದ್ದರಿಂದ ಚೀನಾದಲ್ಲಿ ಈಗಾಗಲೇ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಆಸ್ಪತ್ರೆಗಲ್ಲಿ ಹಾಸಿಗೆಗಳೂ ಫಿಲ್ ಆಗುತ್ತಿವೆ. ಈ ಹಿನ್ನೆಲೆಯಲ್ಲಿ ಭಾರತದಲ್ಲಿ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಕೇಂದ್ರ ನಿಗಾ ವಹಿಸಿದೆ. ಇದನ್ನೂ ಓದಿ:
ಬೆಂಗಳೂರು: ನೆರೆಯ ರಾಜ್ಯ ಕೇರಳದಲ್ಲಿ (Kerala) ನಿಫಾ ವೈರಸ್‌ನಿಂದಾಗಿ (Nipah Virus) ವ್ಯಕ್ತಿಯೊಬ್ಬರು ಮೃತಪಟ್ಟಿರುವುದು ದೃಢಪಟ್ಟಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲೂ (Karnataka) ರೋಗದ ಭೀತಿ ಹುಟ್ಟಿಕೊಂಡಿದ್ದು, ಅದು ಹರಡದಂತೆ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಕರ್ನಾಟಕದ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಮಾಧ್ಯಮ ಹೇಳಿಕೆಯಲ್ಲಿ ಏನಿದೆ?
1. ನಿಫಾ ವೈರಸ್ ನಿಂದ ಉಂಟಾಗಬಹುದಾದ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಂಡು, ರಾಜ್ಯದ ಕೇರಳ ಗಡಿ ಪ್ರದೇಶಗಳಲ್ಲಿ ಎಚ್ಚರಿಕೆ ಮತ್ತು ಜಾಗರೂಕತೆ ಕ್ರಮವಹಿಸುವಂತೆ ಪ್ರಧಾನ ಕಾರ್ಯದರ್ಶಿಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಕಾಸ ಸೌಧ ಬೆಂಗಳೂರು ಇವರಿಗೆ ಸೂಚಿಸಿದೆ.
2. ನಿಫಾ ವೈರಸ್ ನಿರ್ವಹಣೆಗೆ ಸಂಬಂಧಿಸಿದಂತೆ ಜಿಲ್ಲಾ ಕ್ಷಿಪ್ರ ಪ್ರತಿಕ್ರಿಯೆ ತಂಡದ ಸಭೆಯನ್ನು ನಡೆಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಅಗತ್ಯ ಕ್ರಮವಹಿಸುವಂತೆ ಸೂಚಿಸಲಾಗಿದೆ. ಇದನ್ನೂ ಓದಿ: ಕೋಝಿಕ್ಕೋಡ್‌ನಲ್ಲಿ ಮೃತಪಟ್ಟ ವ್ಯಕ್ತಿಗೆ ನಿಫಾ ವೈರಸ್ ದೃಢ
3. ದಕ್ಷಿಣ ಕನ್ನಡದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಸಂಸ್ಥೆಗಳು ನಿಫಾ ಶಂಕಿತ ಪಕರಣಗಳನ್ನು ದಾಖಲಿಸಿಕೊಂಡು, ಕೂಡಲೇ ಜಿಲ್ಲಾ ಕಾವಲು ಕಛೇರಿ/ಘಟಕಕ್ಕೆ ತಿಳಿಸಬೇಕು.
4. ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆಗಳು ಮತ್ತು ಎಲ್ಲಾ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ನಿಫಾ ವೈರಸ್ ನಿರ್ವಹಣೆಗಾಗಿ 10 ಹಾಸಿಗೆಗಳ ಪ್ರತ್ಯೇಕ ವಾರ್ಡ್ ಅನ್ನು ಕಾಯ್ದಿರಿಸುವಂತೆ ಹಾಗೂ ಆಮ್ಲಜನಕ ಮತ್ತು ಇತರ ಅಗತ್ಯ ಔಷಧಿಗಳನ್ನೊಳಗೊಂಡಂತೆ ಎಲ್ಲಾ ಪಿಎಚ್ ವೈದ್ಯಾಧಿಕಾರಿಗಳಿಗೆ ಜ್ವರದ ಕಣಾವಲು ಘಟಕಗಳನ್ನು ಬಲಪಡಿಸಲು ಸೂಚಿಸಿದೆ. ಅಲ್ಲದೆ ಅಗತ್ಯವಿರುವ ಔಷಧಿಗಳನ್ನು ಶೇಖರಿಸಿಟ್ಟುಕೊಳ್ಳಲು ಮತ್ತು ನಿಫಾ ರೋಗಲಕ್ಷಣಗಳಿಗೆ ಕ್ಷೇತ್ರ ಸಿಬ್ಬಂದಿಗೆ ತರಬೇತಿ ನೀಡುವ ವ್ಯವಸ್ಥೆ ಮಾಡಬೇಕು.
5. ಜಿಲ್ಲಾ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯಗಳಲ್ಲಿ ವರದಿಯಾಗಿರುವ ಯಾವುದೇ ಶಂಕಿತ ಪುಕರಣಗಳ ಮಾದರಿಗಯನ್ನು ಪುಣೆಯಲ್ಲಿನ ಎನ್‌ಐವಿ ಪುಯೋಗಾಲಯಕ್ಕೆ ಕಳುಹಿಸಲು ವ್ಯವಸ್ಥೆ ಮಾಡಬೇಕು.
ಬೀಜಿಂಗ್: ವೈರಸ್‌ಗಳ ಆಗರ ಎಂದೇ ಕರೆಸಿಕೊಳ್ಳುವ ಚೀನಾದಲ್ಲಿ (China) ಮತ್ತೊಂದು ಡೆಡ್ಲಿ ವೈರಸ್ ಪತ್ತೆಯಾಗಿದೆ.
ಕಳೆದ ಮಾರ್ಚ್ 27 ರಂದು ಏವಿಯನ್ ಇನ್ಫ್ಲುಯೆನ್ಸಾ-ಎ (H3N8 Virus – ಹಕ್ಕಿಜ್ವರದ ರೀತಿಯ ವೈರಸ್) ವೈರಸ್‌ನಿಂದ ಬಳಲುತ್ತಿದ್ದ ಮಹಿಳೆ ಸಾವನ್ನಪ್ಪಿರುವುದು ಕಂಡುಬಂದಿದೆ. ಈ ಬಗ್ಗೆ ಪರಿಶೀಲಿಸಾಗ ಈವರೆಗೆ ಮೂರು ಪ್ರಕರಣಗಳು ಚೀನಾದಿಂದಲೇ ವರದಿಯಾಗಿರುವುದಾಗಿ ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.
ಪ್ರಾಥಮಿಕ ಮಾಹಿತಿಗಳ ಪ್ರಕಾರ ಈ ವೈರಸ್ ವ್ಯಕ್ತಿಯಿಂದ ವ್ಯಕ್ತಿಗೆ ಸುಲಭವಾಗಿ ಹರಡುವ ಸಾಮರ್ಥ್ಯ ಹೊಂದಿಲ್ಲ. ಜೊತೆಗೆ ವೈರಸ್ ನಿಂದ ಹರಡುವಿಕೆಯಲ್ಲಿ ಅಪಾಯದ ಪ್ರಮಾಣವೂ ಕಡಿಮೆ ಎಂದು ಪರಿಗಣಿಸಲಾಗಿದೆ.
ನ್ಯೂಮೋನಿಯಾ ಕಾಯಿಲೆಯಿಂದ ಬಳಲುತ್ತಿದ್ದ 56ರ ಮಹಿಳೆ ಇಲ್ಲಿನ ಆಸ್ಪತ್ರೆಗೆ ದಾಖಲಾಗಿದ್ದರು. ತೀವ್ರ ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದ ಮಹಿಳೆ ಆಸ್ಪತ್ರೆಗೆ ದಾಖಲಾದ ಒಂದು ತಿಂಗಳ ನಂತರ ಅವರು ನಿಧನರಾದರು. ಈ ಕುರಿತು ಮಾಹಿತಿ ಪಡೆದ ನಂತರ ವಿಶ್ವ ಆರೋಗ್ಯ ಸಂಸ್ಥೆ (WHO) ಕೋಳಿಗೆ ತಗುಲುವ ರೋಗಲಕ್ಷಣಗಳು (ಹಕ್ಕಿಜ್ವರದ ಲಕ್ಷಣಗಳು) ಮಹಿಳೆಯಲ್ಲಿ ಕಂಡುಬಂದಿದೆ ಎಂದು ಹೇಳಿದೆ. ಇದನ್ನೂ ಓದಿ: ದೃಷ್ಟಿ ಮಂಜಾಗ್ತಿದೆ, ಕೈ-ಕಾಲು ಸ್ವಾಧೀನ ಕಳೆದುಕೊಳ್ತಿದೆ – ಪುಟಿನ್ ಆರೋಗ್ಯದಲ್ಲಿ ಬಿಗ್ ಅಪ್ಡೇಟ್ಸ್
ಏನಿದು H3N8 ವೈರಸ್?
ಉತ್ತರ ಅಮೆರಿಕದ ಜಲಪಕ್ಷಿಗಳಲ್ಲಿ ಕಂಡುಬಂದಿದ್ದ ಈ H3N8 ವೈರಸ್ 2002ರಿಂದ ಇತರ ದೇಶಗಳಿಗೆ ವ್ಯಾಪಿಸಿತು. ಈ ವೈರಸ್ ಕುದುರೆ, ನಾಯಿ ಹಾಗೂ ಸೀಲ್‌ನಂತಹ ಜಲಚರ ಪ್ರಾಣಿಗಳಲ್ಲಿ ಕಂಡುಬರುತ್ತದೆ. ಕೋಳಿಯಂತಹ ಸಾಮಾನ್ಯ ಪಕ್ಷಿಗಳಲ್ಲೂ ಕಂಡುಬರುತ್ತದೆ. ಜೊತೆಗೆ ಪ್ರಾಣಿಗಳಿಂದ ಮನುಷ್ಯರಿಗೂ ಹರಡುತ್ತದೆ. ಆದರೆ ವೇಗವಾಗಿ ಹರಡುವುದಿಲ್ಲ. ನಿರ್ದಿಷ್ಟ ಸನ್ನಿವೇಶಗಳಲ್ಲಿ ಹರಡುತ್ತದೆ ಎಂದು ಹೇಳಲಾಗಿದೆ.
ಈ ವೈರಸ್ ಝೂನೋಟಿಕ್ ಇನ್ಫ್ಲುಯೆನ್ಸಾ ಸೋಂಕು ಆಗಿರುವುದರಿಂದ ಲಕ್ಷಣ ರಹಿತವಾಗಿ ರೋಗವನ್ನು ಉಂಟುಮಾಡಬಹುದು. ಸೌಮ್ಯ ಜ್ವರ, ತೀವ್ರತರಹದ ಉಸಿರಾಟ, ಜಠರ ಅಥವಾ ನರಗಳಲ್ಲಿ ಸಮಸ್ಯೆ ಉಂಟುಮಾಡುವ ರೋಗಲಕ್ಷಣಗಳ ಮೂಲಕ ವೈರಸ್ ನ್ಯೂನತೆಯನ್ನು ಉಂಟುಮಾಡುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ ಹಂಚಿಕೊಂಡಿದೆ.
H3N8 ವೈರಸ್‌ಗೆ ಲಸಿಕೆ ಇದೆಯೇ?
H3N8 ಇನ್ಫ್ಲುಯೆನ್ಸಾ-ಎ ವೈರಸ್‌ಗೆ ಈವರೆಗೂ ಲಸಿಕೆ ಕಂಡುಹಿಡಿದಿಲ್ಲ. ಹಾಗಾಗಿ ಇದರಿಂದ ಸಾರ್ವಜನಿಕರ ಆರೋಗ್ಯಕ್ಕೆ ಆಗುವ ಅಪಾಯದ ಪ್ರಮಾಣವನ್ನು ತಿಳಿಯಲು ತನಿಖೆ ನಡೆಸುವ ಅಗತ್ಯವಿದೆ ಎಂದು ಹೇಳಿದೆ.
ಮುನ್ನೆಚ್ಚರಿಕೆ ಕ್ರಮಗಳೇನು?
* ಯಾವುದೇ ವಸ್ತುವನ್ನು ಮುಟ್ಟುವ ಮುನ್ನ ಕೈಗಳನ್ನು ಶುಚಿಯಾಗಿ ತೊಳೆದುಕೊಳ್ಳಬೇಕು.
* ಆಲ್ಕೋಹಾಲ್ ಆಧಾರಿತ ಹ್ಯಾಂಡ್ ಸ್ಯಾನಿಟೈಸರ್ ಅನ್ನು ಬಳಸಬೇಕು.
* ಮಾರುಕಟ್ಟೆ, ಫಾರ್ಮ್, ಪೌಲ್ಟ್ರಿಗಳನ್ನು ಶುಚಿಯಾಗಿಟ್ಟುಕೊಳ್ಳಬೇಕು.