Tag: ವೈರಸ್

  • ರಾಜ್ಯದಲ್ಲಿ H3N2 ವೈರಸ್ ಸ್ಫೋಟ – 82 ದಿನದಲ್ಲಿ 115 ಪ್ರಕರಣ ದಾಖಲು

    ರಾಜ್ಯದಲ್ಲಿ H3N2 ವೈರಸ್ ಸ್ಫೋಟ – 82 ದಿನದಲ್ಲಿ 115 ಪ್ರಕರಣ ದಾಖಲು

    ಬೆಂಗಳೂರು: ರಾಜ್ಯದಲ್ಲಿ ಹೆಚ್3ಎನ್2 (H3N2) ವೈರಸ್ ಆತಂಕ ಹೆಚ್ಚಾಗಿದೆ. ಕಳೆದ 82 ದಿನಗಳಲ್ಲಿ ಬರೋಬ್ಬರಿ 115 ಪ್ರಕರಣಗಳು ದಾಖಲಾಗಿದ್ದು, ಮುಂದಿನ ದಿನಗಳಲ್ಲಿ ಸೈಲೆಂಟ್ ವೈರಸ್ ಡೆಡ್ಲಿ ಅಟ್ಯಾಕ್ ಮಾಡಲಿದೆ ಎನ್ನುವ ಭೀತಿ ಕಾಡುತ್ತಿದೆ.

    ಕೊರೊನಾ (Corona) ಬಳಿಕ ಮತ್ತೆ ಹೆಚ್3ಎನ್2 ಎಂಬ ಹೊಸ ವೈರಸ್ ಜನರನ್ನು ನಡುಗಿಸುತ್ತಿದೆ. ಅತಿಯಾದ ಜ್ವರ, ಶೀತ, ಕೆಮ್ಮು, ಉಸಿರಾಟದ ಸಮಸ್ಯೆಯ ಲಕ್ಷಣಗಳನ್ನು ಹೊಂದಿರುವ ಈ ವೈರಸ್ ರಾಜ್ಯದ 21 ಜಿಲ್ಲೆಗಳಲ್ಲಿ ಸದ್ದಿಲ್ಲದೆ ಹರಡಿದೆ. ಬೆಂಗಳೂರು (Bengaluru) ಸೇರಿ ರಾಜ್ಯದ 21 ಜಿಲ್ಲೆಗಳಲ್ಲಿ ಕೇವಲ 82 ದಿನಗಳಲ್ಲಿ ಬರೋಬ್ಬರಿ 115 ಪ್ರಕರಣಗಳು ದಾಖಲಾಗಿವೆ.

    ಈ ಸಂಖ್ಯೆ ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿದ್ದು, ಬೆಂಗಳೂರು ಒಂದರಲ್ಲೇ 30 ಪ್ರಕರಣಗಳು ದಾಖಲಾಗಿವೆ. ನಗರದ ಮೂಲೆ ಮೂಲೆಗೂ ಈ ವೈರಸ್ ಹರಡಬಹುದೆಂಬ ಆತಂಕವನ್ನು ವೈದ್ಯರು ವ್ಯಕ್ತಪಡಿಸಿದ್ದಾರೆ. ಸೈಲೆಂಟ್ ಆಗಿಯೇ ಹರಡುತ್ತಿರುವ ಈ ವೈರಸ್ ಮುಂದಿನ ದಿನಗಳಲ್ಲಿ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರಬಹುದು ಎನ್ನುತ್ತಿದ್ದಾರೆ.

    ಎಲ್ಲೆಲ್ಲಿ ಎಷ್ಟೆಷ್ಟು ಪ್ರಕರಣ?
    ಬೆಂಗಳೂರು/ ಬಿಬಿಎಂಪಿ ವ್ಯಾಪ್ತಿ – 30
    ಶಿವಮೊಗ್ಗ – 19
    ಧಾರವಾಡ – 14
    ಮೈಸೂರು – 09
    ವಿಜಯಪುರ – 08
    ಬೆಳಗಾವಿ – 05
    ಹಾಸನ – 05
    ತುಮಕೂರು – 03
    ದಾವಣಗೆರೆ – 03

    ಹಾವೇರಿ – 03
    ದ.ಕನ್ನಡ – 03
    ಬೆಂಗಳೂರು ಗ್ರಾಮಾಂತರ – 02
    ಗದಗ – 02
    ರಾಮನಗರ – 02
    ಚಾಮರಾಜನಗರ – 01
    ಬಾಗಲಕೋಟೆ – 01
    ಉತ್ತರ ಕನ್ನಡ – 01
    ಚಿತ್ರದುರ್ಗ – 01
    ಚಿಕ್ಕಮಗಳೂರು – 01
    ಕೊಡಗು – 01
    ಮಂಡ್ಯ – 01 ಇದನ್ನೂ ಓದಿ: 5, 8ನೇ ತರಗತಿ ಬೋರ್ಡ್‌ ಪರೀಕ್ಷೆಗೆ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌

    ಹಾಸನ ಜಿಲ್ಲೆಯಲ್ಲಿ ಮಾರ್ಚ್ 1 ರಂದು 87 ವರ್ಷದ ವೃದ್ಧರೊಬ್ಬರು ಹೆಚ್3ಎನ್2ಗೆ ಬಲಿಯಾಗಿದ್ದರು. ಇದು ದೇಶದಲ್ಲೇ ಮೊದಲ ಸಾವಾಗಿತ್ತು. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 5 ವರ್ಷಕ್ಕಿಂತ ಸಣ್ಣ ವಯಸ್ಸಿನ ಮಕ್ಕಳಲ್ಲಿ ಹಾಗೂ 60 ವರ್ಷ ಮೆಲ್ಪಟ್ಟ ವೃದ್ಧರಿಗೆ ಈ ವೈರಸ್ ತೀವ್ರವಾಗಿ ಕಾಡಲಿದ್ದು, ಆಕ್ಸಿಜನ್ ಲೆವೆಲ್‌ನಲ್ಲೂ ಏರುಪೇರಾಗಲಿದೆ. ಇಷ್ಟು ದಿನ ಕೊರೊನಾ ಕಂಟಕದಿಂದ ಬಚಾವ್ ಆಗಿ, ನೆಮ್ಮದಿಯಿಂದ ನಿಟ್ಟುಸಿರು ಬಿಡುವ ಸಂದರ್ಭ ಬಂತು ಎನ್ನುವಷ್ಟರಲ್ಲಿ ಮತ್ತೆ ಹೆಚ್3ಎನ್2 ಸೋಂಕು ಕಾಡುತ್ತಿದ್ದು, ಜನರಲ್ಲಿ ಆತಂಕ ಹೆಚ್ಚು ಮಾಡಿದೆ. ಇದನ್ನೂ ಓದಿ: PublicTV Explainer: ತೃತೀಯಲಿಂಗಿಗಳು, ಸಲಿಂಗಕಾಮಿಗಳು ರಕ್ತದಾನ ಮಾಡುವಂತಿಲ್ಲ – ಯಾಕೆ ಗೊತ್ತಾ?

  • ಆತಂಕ ಸೃಷ್ಟಿಸಿರುವ H3N2ಗೆ ರಾಜ್ಯದಲ್ಲಿ ಮೊದಲಿ ಬಲಿ

    ಆತಂಕ ಸೃಷ್ಟಿಸಿರುವ H3N2ಗೆ ರಾಜ್ಯದಲ್ಲಿ ಮೊದಲಿ ಬಲಿ

    ಹಾಸನ: ಎಲ್ಲೆಡೆ ಆತಂಕ ಸೃಷ್ಟಿಸಿರುವ ಹೆಚ್3ಎನ್2 (H3N2) ಸೋಂಕಿಗೆ ರಾಜ್ಯದಲ್ಲಿ (Karnataka) ಮೊದಲ ಬಲಿಯಾಗಿದೆ.

    ಅನಾರೋಗ್ಯದಿಂದ ಮೃತಪಟ್ಟಿದ್ದ 83 ವರ್ಷದ ವೃದ್ಧನಿಗೆ ಹೆಚ್3ಎನ್2 ವೈರಸ್ ತಗುಲಿದ್ದುದು ದೃಢಪಟ್ಟಿದೆ. ಹಾಸನ (Hassan) ಜಿಲ್ಲೆ, ಆಲೂರು ತಾಲೂಕಿನ ವೃದ್ಧನಿಗೆ ಸೋಂಕು ತಗುಲಿದ್ದುದು ತಡವಾಗಿ ಬೆಳಕಿಗೆ ಬಂದಿದೆ.

    ವೃದ್ಧ ಜ್ವರ, ಗಂಟಲು ನೋವು, ಕೆಮ್ಮಿನಿಂದ ಬಳಲುತ್ತಿದ್ದು, ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮಾರ್ಚ್ 1 ರಂದು ಆಲೂರಿನಲ್ಲಿ ವೃದ್ಧ ಮೃತಪಟ್ಟಿದ್ದರು. ಮೃತ ವ್ಯಕ್ತಿಗೆ ಮಾರಣಾಂತಿಕ ಸೋಂಕು ಇದ್ದುದು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಡಿಎಚ್‌ಓ ಡಾ.ಶಿವಸ್ವಾಮಿ ತಿಳಿಸಿದ್ದಾರೆ. ಇದನ್ನೂ ಓದಿ: ಜೆ.ಪಿ ನಡ್ಡಾ ಭೇಟಿಯಾದ ಸುಮಲತಾ- ಬಹುತೇಕ ಬಿಜೆಪಿ ಸೇರ್ಪಡೆ ಖಚಿತ

    ಇದೀಗ ಮೃತ ವ್ಯಕ್ತಿಯ ಗ್ರಾಮದ ಸುತ್ತಮುತ್ತಲ ಹಳ್ಳಿಯಲ್ಲಿ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ಆರೋಗ್ಯ ಇಲಾಖೆ ಅನಾರೋಗ್ಯ ಪೀಡಿತ ಜನರ ಹಾಗೂ ವೃದ್ಧರ ಆರೋಗ್ಯ ತಪಾಸಣೆ ನಡೆಸುತ್ತಿದೆ. ಗ್ರಾಮಸ್ಥರ ಗಂಟಲು ದ್ರವವನ್ನು ಸಂಗ್ರಹಿಸಿ ಲ್ಯಾಬ್‌ಗೆ ಕಳುಹಿಸಿರುವುದಾಗಿ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರತಿಸ್ಪರ್ಧಿಗಳ ಕಾಲಿಗೆ ಬಿದ್ದು ಗೃಹಪ್ರವೇಶಕ್ಕೆ ಆಮಂತ್ರಣ ನೀಡಿದ ರಘು ಆಚಾರ್

  • ಕೊರೋನಾ ಬಳಿಕ ದೇಶದಲ್ಲಿ ಫ್ಲೂ ಭೀತಿ- ಚಿಕಿತ್ಸೆ ಹೇಗೆ? ಏನು ಮಾಡಬೇಕು? ಏನು ಮಾಡಬಾರದು?

    ಕೊರೋನಾ ಬಳಿಕ ದೇಶದಲ್ಲಿ ಫ್ಲೂ ಭೀತಿ- ಚಿಕಿತ್ಸೆ ಹೇಗೆ? ಏನು ಮಾಡಬೇಕು? ಏನು ಮಾಡಬಾರದು?

    ಬೆಂಗಳೂರು: ಕೊರೋನಾ (Corona) ಬಳಿಕ ಪ್ರಸ್ತುತ ದೇಶದಲ್ಲಿ ಫ್ಲೂ (Flu) ಭೀತಿ ಎದುರಾಗಿದ್ದು ಜನರಲ್ಲಿ ಆತಂಕ ಹೆಚ್ಚಾಗಿದೆ. ದೇಶದಾದ್ಯಂತ ಹೆಚ್3ಎನ್2 (H3N2) ರೋಗವು ವ್ಯಾಪಕವಾಗಿ ಹಬ್ಬುತ್ತಿದ್ದು ಕಳೆದ ಒಂದು ವಾರದಿಂದ ಶೇ. 10-15 ರಷ್ಟು ರೋಗಿಗಳ ಸಂಖ್ಯೆ ಏರಿಕೆಯಾಗಿದೆ. ಇದರ ಚಿಕಿತ್ಸೆ ಹೇಗೆ? ಏನು ಮಾಡಬೇಕು ? ಏನು ಮಾಡಬಾರದು? ಇದರ ಮುನ್ನೆಚ್ಚರಿಕಾ ಕ್ರಮಗಳೇನು ಎಂಬುವುದನ್ನು ಪ್ರತಿಯೊಬ್ಬರು ತಿಳಿದುಕೊಳ್ಳುವುದು ಅವಶ್ಯಕವಾಗಿದೆ.

     

    ಚಿಕಿತ್ಸೆ ಹೇಗೆ?
    ಹೆಚ್3ಎನ್2 ಎಂಬುವುದು ಇನ್‌ಫ್ಲುಯೆಂಜಾ (Influenza) ಎ ವೈರಸ್‌ನ ಎರಡನೇ ಜೀನ್‌ಗಳಿಂದ ಸೃಷ್ಟಿಯಾದ ತಳಿಯಾಗಿದೆ. ಈ ಉಪತಳಿಯು ಮೊದಲಿಗೆ ಅಮೇರಿಕಾದಲ್ಲಿ 1968ರಲ್ಲಿ ವರದಿಯಾಗಿತ್ತು. ಪ್ರಸ್ತುತ ಭಾರತದಲ್ಲಿ ಹೆಚ್3ಎನ್2 ರೋಗ ಕಾಣಿಸಿಕೊಂಡಿದ್ದು ದೊಡ್ಡವರು ಮಾತ್ರವಲ್ಲದೆ 15 ವರ್ಷಕ್ಕಿಂತ ಕೆಳಗಿನ ಮಕ್ಕಳಲ್ಲೂ ಈ ರೋಗ ಪತ್ತೆಯಾಗಿದೆ. ಇದನ್ನೂ ಓದಿ: ಬೇಸಿಗೆಯಲ್ಲಿ ನಿಮ್ಮ ತ್ವಚೆ ರಕ್ಷಣೆಗೆ ಹೀಗೆ ಮಾಡಿ

    ಮೂರು ತಿಂಗಳಿನಿಂದ ಜ್ವರ, ವಿಪರೀತ ಕೆಮ್ಮು, ವಾಕರಿಕೆ ಹಾಗೂ ಶೀತ ಹೆಚ್3ಎನ್2 ರೋಗದ ಪ್ರಮುಖ ಲಕ್ಷಣಗಳಾಗಿವೆ. ಈ ರೋಗದ ಲಕ್ಷಣಗಳು ಕಂಡುಬಂದ ವ್ಯಕ್ತಿಗೆ ರೋಗಲಕ್ಷಣದ ಚಿಕಿತ್ಸೆಯನ್ನು ಮಾತ್ರ ನೀಡಬೇಕು. ಈ ರೋಗಕ್ಕೆ ಯಾವುದೇ ಆ್ಯಂಟಿ ಬಯೋಟಿಕ್‌ನ ಅಗತ್ಯವಿಲ್ಲ. ಇದನ್ನೂ ಓದಿ: ನೀವು ವೈನ್‌ ಕುಡಿಯುತ್ತೀರಾ? ವೈನ್‌ ಸೇವಿಸಿದ್ರೆ ಈ 6 ಆರೋಗ್ಯ ಪ್ರಯೋಜನ ಗ್ಯಾರಂಟಿ

    ಏನು ಮಾಡಬಾರದು?
    ಹೆಚ್3ಎನ್2 ರೋಗಕ್ಕೆ ತುತ್ತಾಗಿರುವ ವ್ಯಕ್ತಿಯಿಂದ ಯಾವುದೇ ಕಾರಣಕ್ಕೂ ಶೇಕ್ ಹ್ಯಾಂಡ್ ಮಾಡಿಸಿಕೊಳ್ಳಬಾರದು. ಇಂತಹ ವ್ಯಕ್ತಿಗಳು ಸಾರ್ವಜನಿಕ ಸ್ಥಳಗಳಲ್ಲಿ ಉಗಿಯುವುದರಿಂದ ಇತರರಿಗೆ ರೋಗ ಹರಡುವ ಸಾಧ್ಯತೆ ಹೆಚ್ಚಿರುತ್ತದೆ. ಆದ್ದರಿಂದ ಸಾರ್ವಜನಿಕ ಸ್ಥಳಗಳಲ್ಲಿ ಉಗಿಯುವುದನ್ನು ನಿಷೇಧಿಸಲಾಗಿದೆ. ಈ ರೋಗದ ಲಕ್ಷಣಗಳಿರುವವರು ವೈದ್ಯರ ಸಲಹೆಯಿಲ್ಲದೆ ಆ್ಯಂಟಿಬಯೋಟಿಕ್‌ (Antibiotic) ಮಾತ್ರೆಗಳನ್ನು ತೆಗೆದುಕೊಳ್ಳುವುದು ಸೂಕ್ತವಲ್ಲ. ಇಂತಹ ವ್ಯಕ್ತಿಗಳ ಜೊತೆ ಕುಳಿತು ಊಟ ಮಾಡಬಾರದು. ಇದನ್ನೂ ಓದಿ: ಚಳಿಗಾಲದಲ್ಲಿ ಕೀಲುನೋವಿನಿಂದ ಮುಕ್ತಿ ಪಡೆಯಲು ಈ ಆಹಾರ ಸೇವಿಸಿ

     

    ಏನು ಮಾಡಬೇಕು?
    ಹೆಚ್3ಎನ್2 ಸೋಂಕಿನ ತಡೆಗಟ್ಟುವಿಕೆಗಾಗಿ ಜನ ಸಮೂಹದಿಂದ ಕಿಕ್ಕಿರಿದ ಸ್ಥಳಗಳಿಗೆ ಅನಗತ್ಯವಾಗಿ ಹೋಗಬಾರದು. ಮಾಸ್ಕ್ ಕಡ್ಡಾಯ ಎಂಬ ನಿಯಮವನ್ನು ತಪ್ಪದೇ ಪಾಲಿಸುವುದರಿಂದ ಈ ರೋಗವನ್ನು ತಡೆಗಟ್ಟಬಹುದು. ಈ ಸೋಂಕಿಗೆ ತ್ತುತಾದವರು ಹೆಚ್ಚು ಹೆಚ್ಚು ದ್ರವ ಆಹಾರಗಳನ್ನು ಸೇವನೆ ಮಾಡಬೇಕು. ಪದೇ ಪದೇ ಕಣ್ಣುಗಳನ್ನು ಮುಟ್ಟುವುದರಿಂದ ಸೋಂಕು ಹೆಚ್ಚಾಗುವ ಸಾಧ್ಯತೆಗಳಿರುತ್ತವೆ. ಹೀಗಾಗಿ ಕಣ್ಣುಗಳನ್ನು ಮುಟ್ಟಬಾರದು. ಆಗಾಗ ಕೈಗಳನ್ನು ಸೋಪು ನೀರಿನಿಂದ ತೊಳಿಯಬೇಕು. ಜ್ವರ ಮತ್ತು ಮೈಕೈ ನೋವುಗಳು ಕಾಣಿಸಿಕೊಂಡಲ್ಲಿ ಪ್ಯಾರಸಿಟಮಲ್ (Paracetamol) ಮಾತ್ರೆಗಳನ್ನು ತೆಗೆದುಕೊಳ್ಳುವುದು ಹೆಚ್ಚು ಸೂಕ್ತ. ಇದನ್ನೂ ಓದಿ: ಸಾಮಾನ್ಯ ನೆಗಡಿಗೆ ಇಲ್ಲಿದೆ ಸುಲಭ ಪರಿಹಾರಗಳು

  • ಫಿಫಾ ವಿಶ್ವಕಪ್ – ಫೈನಲ್‍ಗೂ ಮುನ್ನ ಫ್ರಾನ್ಸ್ ಆಟಗಾರರಿಗೆ ಕಾಡುತ್ತಿದೆ ವೈರಸ್!

    ಫಿಫಾ ವಿಶ್ವಕಪ್ – ಫೈನಲ್‍ಗೂ ಮುನ್ನ ಫ್ರಾನ್ಸ್ ಆಟಗಾರರಿಗೆ ಕಾಡುತ್ತಿದೆ ವೈರಸ್!

    ಕತಾರ್: ಫಿಫಾ ಫುಟ್‍ಬಾಲ್ ವಿಶ್ವಕಪ್‌ನ (FIFA World Cup) ಸೆಮಿಫೈನಲ್ ಪಂದ್ಯದಲ್ಲಿ ಮೊರೊಕ್ಕೊ ವಿರುದ್ಧ ಭರ್ಜರಿ ಜಯ ಗಳಿಸಿ ಫೈನಲ್‍ಗೆ ಎಂಟ್ರಿಕೊಟ್ಟಿರುವ ಫ್ರಾನ್ಸ್ (France) ತಂಡಕ್ಕೆ ಇದೀಗ ಫೈನಲ್ (Final) ಪಂದ್ಯಕ್ಕೂ ಮುನ್ನ ವೈರಸ್ (Virus) ಕಾಡುತ್ತಿದೆ.

    ಈಗಾಗಲೇ ಫಿಫಾ ವಿಶ್ವಕಪ್ ಫೈನಲ್ ಹಂತದ ವರೆಗೆ ಸಾಗಿದೆ. ಫೈನಲ್‍ಗೆ ಫ್ರಾನ್ಸ್ ಮತ್ತು ಅರ್ಜೆಂಟಿನಾ (Argentina) ತಂಡಗಳು ಲಗ್ಗೆ ಇಟ್ಟಿವೆ. ಡಿ.18 ಭಾನುವಾರ ಫೈನಲ್ ಪಂದ್ಯ ನಡೆಯಲಿದೆ. ಆದರೆ ಫೈನಲ್ ಪಂದ್ಯವಾಡಲು ಸಿದ್ಧವಾಗುತ್ತಿರುವ ಫ್ರಾನ್ಸ್ ತಂಡಕ್ಕೆ ವೈರಸ್ ಕಾಟ ಕೊಡುತ್ತಿದೆ. ಫ್ರಾನ್ಸ್‌ನ 5 ಮಂದಿ ಆಟಗಾರರು ವಿಪರೀತ ಶೀತದಿಂದ ಬಳಲುತ್ತಿದ್ದು, ಅಭ್ಯಾಸದಿಂದ ಹೊರಗುಳಿದಿದ್ದಾರೆ. ಇದನ್ನೂ ಓದಿ: ಕೇವಲ 15 ರನ್‌ಗಳಿಗೆ ಆಲೌಟ್‌- ಟಿ20ಯಲ್ಲೇ ಕೆಟ್ಟ ದಾಖಲೆ ಬರೆದ ಸಿಡ್ನಿ ಥಂಡರ್‌

    ರಾಫೆಲ್ ವರಾನೆ, ಇಬ್ರಾಹಿಂ ಕೋನಾಟೆ, ದಯೋಟ್ ಉಪಮೆಕಾನೊ, ಆಡ್ರಿಯನ್ ರಾಬಿಯೊಟ್ ಮತ್ತು ಕಿಂಗ್ಸ್ಲಿ ಕೋಮನ್ ಸೇರಿ ಐವರು ಅಸ್ವಸ್ಥಗೊಂಡು ತಂಡದಿಂದ ದೂರ ಉಳಿದಿದ್ದಾರೆ. ದಯೋಟ್ ಉಪಮೆಕಾನೊ, ಆಡ್ರಿಯನ್ ರಾಬಿಯೊಟ್ ಮತ್ತು ಕಿಂಗ್ಸ್ಲಿ ಕೋಮನ್ ಮೂವರಿಗೆ ಅನಾರೋಗ್ಯ ಕಾಡಿತ್ತು. ಬಳಿಕ ರಾಫೆಲ್ ವರಾನೆ ಮತ್ತು ಇಬ್ರಾಹಿಂ ಕೋನಾಟೆಗೂ ಹರಡಿತ್ತು. ಹಾಗಾಗಿ ಈಗಾಗಲೇ ಈ ಐವರ ಮೇಲೆ ತಂಡದ ಆರೋಗ್ಯ ಸಿಬ್ಬಂದಿ ಹೆಚ್ಚಿನ ನಿಗಾ ವಹಿಸಿ ಚಿಕಿತ್ಸೆ ನೀಡುತ್ತಿದ್ದಾರೆ. ಇದನ್ನೂ ಓದಿ: ಡಿ.18ರ ಫೈನಲ್‌ ನನ್ನ ಕೊನೆಯ ವಿಶ್ವಕಪ್‌ ಪಂದ್ಯ – ನಿವೃತ್ತಿ ಖಚಿತಪಡಿಸಿದ ಮೆಸ್ಸಿ

    ಭಾನುವಾರ ಮೆಸ್ಸಿ ನೇತೃತ್ವದ ಅರ್ಜೆಂಟಿನಾ ವಿರುದ್ಧ ಫ್ರಾನ್ಸ್ ತಂಡ ಫೈನಲ್ ಪಂದ್ಯವಾಡಲಿದೆ. ಈ ಮೂಲಕ ಅರಬ್ಬರ ನಾಡಲ್ಲಿ ನವೆಂಬರ್ 20 ರಿಂದ ಆರಂಭವಾಗಿದ್ದ ಕಾಲ್ಚೆಂಡಿನಾಟ 38 ದಿನಗಳ ಕಾಲ ಯಶಸ್ವಿಯಾಗಿ ನಡೆದು ತೆರೆ ಕಾಣಲು ಸಜ್ಜಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಪಾಕಿಸ್ತಾನ, ಚೀನಾದಿಂದ ಡೆಡ್ಲಿ ವೈರಸ್ ಸೃಷ್ಟಿಸಲು ತಯಾರಿ – ಭಾರತಕ್ಕಿದೆಯಾ ಆಪತ್ತು?

    ಪಾಕಿಸ್ತಾನ, ಚೀನಾದಿಂದ ಡೆಡ್ಲಿ ವೈರಸ್ ಸೃಷ್ಟಿಸಲು ತಯಾರಿ – ಭಾರತಕ್ಕಿದೆಯಾ ಆಪತ್ತು?

    ಇಸ್ಲಾಮಾಬಾದ್: ಕೊರೊನಾ ವೈರಸ್‌ನಿಂದ (Corona Virus) ಈಗಷ್ಟೇ ಜಗತ್ತು ಚೇತರಿಸಿಕೊಳ್ಳುತ್ತಿದೆ. ಹೀಗಿರುವಾಗಲೇ ಚೀನಾ (China) ಹಾಗೂ ಪಾಕಿಸ್ತಾನ (Pakistan) ಜೈವಿಕ ಅಸ್ತ್ರ ಅಭಿವೃದ್ಧಿಪಡಿಸುವ ರಹಸ್ಯ ಸಂಶೋಧನೆ (Research) ನಡೆಸುತ್ತಿವೆ ಎಂಬ ಆತಂಕಕಾರಿ ಸಂಗತಿ ಬೆಳಕಿಗೆ ಬಂದಿದೆ.

    ಪಾಕಿಸ್ತಾನದ ರಾವಲ್ಪಿಂಡಿಯ ಪ್ರಯೋಗಾಲಯ (Laboratory) ಬಳಸಿಕೊಂಡು ಕೋವಿಡ್‌ಗಿಂತಲೂ ಭೀಕರವಾದ ಹಾಗೂ ಅದಕ್ಕಿಂತ ಹೆಚ್ಚು ಹಾನಿ ಉಂಟುಮಾಡಬಹುದಾದ ವೈರಸ್ (Virus) ಅನ್ನು ಚೀನಾ ಸೃಷ್ಟಿಸಲು ಹೊರಟಿದೆ ಎಂದು ಹಲವು ಜಾಗತಿಕ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಮೊದಲ ಬಲಿ – ಸ್ಥಳದಲ್ಲಿಯೇ ಮಹಿಳೆ ಸಾವು

    ಜೈವಿಕ ಅಸ್ತ್ರ ಕುರಿತು ಸಂಶೋಧನೆ ನಡೆಸುವ ಸಲುವಾಗಿ ವಿಶ್ವಕ್ಕೆ ಕೋವಿಡ್ ಹಬ್ಬಿಸಿದ ಕುಖ್ಯಾತಿ ಹೊಂದಿರುವ ಚೀನಾದ ವುಹಾನ್ ವೈರಾಲಜಿ ಸಂಸ್ಥೆ ಹಾಗೂ ಪಾಕಿಸ್ತಾನದ ರಕ್ಷಣಾ ವಿಜ್ಞಾನ-ತಂತ್ರಜ್ಞಾನ ಸಂಸ್ಥೆಗಳು ಅತ್ಯಾಧುನಿಕ ವೈಜ್ಞಾನಿಕ ಮೂಲಸೌಕರ್ಯ ಸೃಷ್ಟಿಸಿವೆ. ಅತ್ಯಂತ ಅಪಾಯಕಾರಿ ರೋಗಕಾರಕ ವೈರಸ್‌ಗಳ (Virus) ಕುರಿತು ಸಂಶೋಧನೆ ನಡೆಸುವ ಕೇಂದ್ರ ಇದಾಗಿದ್ದು, ಈ ಪ್ರಯೋಗಾಲಯ ರಾವಲ್ಪಿಂಡಿಯ ಚಾಲಾ ಕಂಟೋನ್ಮೆಂಟ್ ಪ್ರದೇಶದಲ್ಲಿದೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ. ಇದನ್ನೂ ಓದಿ: 10 ಬಾರಿ ಶಾಸಕರಾಗಿದ್ದ ಪ್ರಭಾವಿ ನಾಯಕ ಕಾಂಗ್ರೆಸ್‌ಗೆ ಗುಡ್‌ಬೈ – BJP ಸೇರ್ಪಡೆ

    2 ಸ್ಟಾರ್ ಹೊಂದಿರುವ ಜನರಲ್‌ವೊಬ್ಬರು ಇದರ ನೇತೃತ್ವ ವಹಿಸಿದ್ದಾರೆ. `ಬಯೋಸೇಫ್ಟಿ ಲೆವೆಲ್ 4′ (BSL-4) ಘಟಕ ಇದಾಗಿದ್ದು, ಇಲ್ಲಿ ಅತಿ ಅಪಾಯಕಾರಿ ಹಾಗೂ ಹೆಚ್ಚು ಸೋಂಕು ಹರಡುವ ವೈರಸ್‌ಗಳನ್ನು ಪರೀಕ್ಷಿಸಿ, ಅಭಿವೃದ್ಧಿಪಡಿಸಲಾಗುತ್ತದೆ. ಸಾಮಾನ್ಯವಾಗಿ BSL-4 ಲ್ಯಾಬ್‌ಗಳನ್ನು ಮಾರಣಾಂತಿಕ ಸೋಂಕುಗಳಿಗೆ ಕಾರಣವಾಗುವ ಸೋಂಕು ಕಾರಕಗಳ ಕುರಿತ ಅಧ್ಯಯನಕ್ಕೆ ಬಳಸಲಾಗುತ್ತದೆ. ಇಂತಹ ರೋಗಗಳಿಗೆ ಯಾವುದೇ ಲಸಿಕೆ ಅಥವಾ ಚಿಕಿತ್ಸೆ ಲಭ್ಯವಿರುವುದಿಲ್ಲ ಎಂದು ತಜ್ಞರು ತಿಳಿಸಿದ್ದಾರೆ.

    ಸದ್ಯ ಇದು ವೈಜ್ಞಾನಿಕ ಪ್ರಯೋಗವಲ್ಲ, ವೈರಸ್‌ಗಳನ್ನು ಅಸ್ತ್ರ ಮಾಡಿಕೊಳ್ಳುವ ಕೆಲಸ ಎಂದು ಜೈವಿಕ ಅಸ್ತçಗಳ ಪರಿಣತರು ಎಚ್ಚರಿಸಿರುವುದಾಗಿ ವರದಿ ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]

  • ರಾಜ್ಯದಲ್ಲಿಂದು 941 ಮಂದಿಗೆ ಕೊರೊನಾ ಸೋಂಕು – ಓರ್ವ ಸಾವು

    ರಾಜ್ಯದಲ್ಲಿಂದು 941 ಮಂದಿಗೆ ಕೊರೊನಾ ಸೋಂಕು – ಓರ್ವ ಸಾವು

    ಬೆಂಗಳೂರು: ದಿನದಿಂದ ದಿನಕ್ಕೆ ಕೊರೊನಾ ಇಳಿಮುಖವಾಗುತ್ತಿದೆ. ಇಂದು ರಾಜ್ಯದಲ್ಲಿ 941 ಕೊರೊನಾ ಸೋಂಕಿನ ಪ್ರಕರಣಗಳು ವರದಿಯಾಗಿದ್ದು, ಓರ್ವ ಸೋಂಕಿಗೆ ಬಲಿಯಾಗಿದ್ದಾರೆ.

    ಇಂದು ರಾಜ್ಯದಲ್ಲಿ 788 ಮಂದಿ ಕೊರೊನಾದಿಂದ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ 40,08,698 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. ಇಂದು 23,101 ಮಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದರೊಂದಿಗೆ ಇಲ್ಲಿಯವರೆಗೆ 6,86,86,074 ಮಂದಿಯನ್ನು ಟೆಸ್ಟ್ ಮಾಡಲಾಗಿದೆ. ಇದನ್ನೂ ಓದಿ: ಬಿಗ್ ಬಾಸ್ ಮನೆಯಿಂದ ಚೈತ್ರಾ ಹಳ್ಳಿಕೇರಿ – ಅಕ್ಷತಾ ಕುಕ್ಕಿ ಔಟ್

    ಕೋವಿಡ್‌ನಿಂದ ಇಂದು ಒಂದೇ ಒಂದು ಮರಣ ಪ್ರಕರಣ ದಾಖಲಾಗಿದ್ದು, ಇದುವೆರೆಗೆ ಒಟ್ಟು 40,203 ಮಂದಿ ಜೀವ ಕಳೆದುಕೊಂಡಿದ್ದಾರೆ. ಇಂದಿನ ಪಾಸಿಟಿವಿಟಿ ದರ ಶೇ.4.07 ಇದೆ. 5,203 ಸಕ್ರಿಯ ಪ್ರಕರಣಗಳಿವೆ. ಇಂದು 23,101 ಮಂದಿಯನ್ನು (6,522 ರ‍್ಯಾಪಿಡ್ ಆಂಟಿಜನ್, 16,579 ಆರ್‌ಟಿ-ಪಿಸಿಆರ್) ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಅಲ್ಲದೇ ಇಂದು 31,457 ಮಂದಿ ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಏರೋಪ್ಲೇನ್ ಕದ್ದು ಹಾರಾಟ ನಡೆಸಿದ ಪೈಲಟ್ – ವಾಲ್‌ಮಾರ್ಟ್‌ಗೆ ಗುದ್ದುತ್ತೇನೆಂದು ಬೆದರಿಕೆ

    ಬೆಂಗಳೂರು ನಗರದಲ್ಲೇ 526 ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರು ಗ್ರಾಮಾಂತರದಲ್ಲಿ 16, ಬಾಗಲಕೋಟೆ 2, ಬಳ್ಳಾರಿ 13, ಬೆಳಗಾವಿ 12, ಬೀದರ್ 0, ಚಾಮರಾಜನಗರ 24, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 18, ಚಿತ್ರದುರ್ಗ 1, ದಕ್ಷಿಣ ಕನ್ನಡ 29, ದಾವಣಗೆರೆ 4, ಧಾರವಾಡ 4, ಗದಗ 0, ಹಾಸನ 36, ಹಾವೇರಿ 1, ಕಲಬುರಗಿ 15, ಕೊಡಗು 13, ಕೋಲಾರ 15, ಕೊಪ್ಪಳ 2, ಮಂಡ್ಯ 9, ಮೈಸೂರು 99, ರಾಯಚೂರು 10, ಶಿವಮೊಗ್ಗ 24, ತುಮಕೂರು 7, ಉಡುಪಿ 13, ಉತ್ತರ ಕನ್ನಡ 10, ವಿಜಯಪುರದಲ್ಲಿ 1 ಪ್ರಕರಣ ಪತ್ತೆಯಾಗಿದ್ದು ರಾಮನಗರ ಹಾಗೂ ಯಾದಗಿರಿಯಲ್ಲಿ ಶೂನ್ಯ ಪ್ರಕರಣ ವರದಿಯಾಗಿರುವುದಾಗಿ ಆರೋಗ್ಯ ಇಲಾಖೆ ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಮೈಸೂರಿನಲ್ಲಿ ಹಂದಿಜ್ವರಕ್ಕೆ ತುಂಬು ಗರ್ಭಿಣಿ ಬಲಿ

    ಮೈಸೂರಿನಲ್ಲಿ ಹಂದಿಜ್ವರಕ್ಕೆ ತುಂಬು ಗರ್ಭಿಣಿ ಬಲಿ

    ಮೈಸೂರು: 2ನೇ ಮಗುವಿನ ನಿರೀಕ್ಷೆಯಲ್ಲಿದ್ದ ತುಂಬು ಗರ್ಭಿಣಿ ಹಂದಿಜ್ವರಕ್ಕೆ ಬಲಿಯಾಗಿದ್ದು, ಇದರಿಂದ ಜನರಲ್ಲಿ ಸಾಂಕ್ರಾಮಿಕ ರೋಗಗಳ ಭೀತಿ ಶುರುವಾಗಿದೆ.

    H1N1

    ಹುಣಸೂರು ತಾಲ್ಲೂಕಿನ ಕೋಣನ ಹೊಸಳ್ಳಿ ಗ್ರಾಮದ ಸ್ವಾಮಿ ನಾಯ್ಕ ಎಂಬವರ ಪುತ್ರಿ ಛಾಯಾ ಅವರು ಊ1ಓ1 ನಿಂದ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಪೊಲೀಸ್ ಎಂದು ನಂಬಿಸಿ ಮಹಿಳೆಯ ಚಿನ್ನಾಭರಣ ಎಗರಿಸಿದ್ದ ಆರೋಪಿ ಅಂದರ್

    ಛಾಯಾ ಅವರಿಗೆ ಈಗಾಗಳೇ 4 ವರ್ಷದ ಗಂಡು ಮಗುವಿದ್ದು, 2ನೇ ಮಗುವಿನ ನಿರೀಕ್ಷೆಯಲ್ಲಿದ್ದರು. ಇನ್ನು ಕೆಲವೇ ದಿನಗಳಲ್ಲಿ ಮಗುವಿಗೆ ಜನ್ಮ ನೀಡಬೇಕಿದ್ದ ಛಾಯಾ ಹಂದಿಜ್ವರಕ್ಕೆ ತುತ್ತಾಗಿದ್ದರು. ಈ ಹಿನ್ನೆಲೆಯಲ್ಲಿ ಛಾಯಾ ಅವರನ್ನ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಛಾಯಾ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

    Live Tv
    [brid partner=56869869 player=32851 video=960834 autoplay=true]

  • ರಾಜ್ಯದಲ್ಲಿಂದು 1,286 ಮಂದಿಗೆ ಕೊರೊನಾ – ಮೂವರು ಸಾವು

    ರಾಜ್ಯದಲ್ಲಿಂದು 1,286 ಮಂದಿಗೆ ಕೊರೊನಾ – ಮೂವರು ಸಾವು

    ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸಂಖ್ಯೆ ಇಳಿಕೆಯಾದಂತೆ ಕಾಣುತ್ತಿದೆ. ಇಂದು 1,286ಕ್ಕೆ ಇಳಿಕೆಯಾಗಿದೆ. ಮೂವರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

    ಇಂದು ರಾಜ್ಯದಲ್ಲಿ 2,358 ಮಂದಿ ಕೊರೊನಾದಿಂದ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ 39,97,181 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. ಇಂದು 27,668 ಮಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದರೊಂದಿಗೆ ಇಲ್ಲಿಯವರೆಗೆ 6,84,91,097 ಮಂದಿಯನ್ನು ಟೆಸ್ಟ್ ಮಾಡಲಾಗಿದೆ. ಇದನ್ನು ಓದಿ: ಉರಿಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ 

    ಕೋವಿಡ್‌ನಿಂದ ಇಂದು ಎರಡು ಮರಣ ಪ್ರಕರಣ ದಾಖಲಾಗಿದ್ದು, ಇದುವೆರೆಗೆ ಒಟ್ಟು 40,182 ಮಂದಿ ಜೀವ ಕಳೆದುಕೊಂಡಿದ್ದಾರೆ. ಇಂದಿನ ಪಾಸಿಟಿವಿಟಿ ದರ ಶೇ.4.64 ಇದೆ. 8,700 ಸಕ್ರಿಯ ಪ್ರಕರಣಗಳಿವೆ. ಇಂದು 27,668 ಮಂದಿಯನ್ನು (7,387 ರ‍್ಯಾಪಿಡ್ ಆಂಟಿಜನ್, 20,281 ಆರ್‌ಟಿ-ಪಿಸಿಆರ್) ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಅಲ್ಲದೇ ಇಂದು 30,173 ಮಂದಿ ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ರಾಕೆಟ್ರಿ’ ಸಿನಿಮಾದಲ್ಲಿ ಇಸ್ರೊಗೆ ಕಳಂಕ ತರುವಂತಹ ಸುಳ್ಳುಗಳನ್ನು ಹೇಳಲಾಗಿದೆ: ಮಾಜಿ ವಿಜ್ಞಾನಿಗಳ ಆರೋಪ

    ಬೆಂಗಳೂರು ನಗರದಲ್ಲೇ 796 ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರು ಗ್ರಾಮಾಂತರದಲ್ಲಿ 6, ಬಾಗಲಕೋಟೆ 3, ಬಳ್ಳಾರಿ 33, ಬೆಳಗಾವಿ 16, ಬೀದರ್ 3, ಚಾಮರಾಜನಗರ 17, ಚಿಕ್ಕಬಳ್ಳಾಪುರ 6, ಚಿಕ್ಕಮಗಳೂರು 20, ಚಿತ್ರದುರ್ಗ 4, ದಕ್ಷಿಣ ಕನ್ನಡ 18, ದಾವಣಗೆರೆ 5, ಧಾರವಾಡ 23, ಗದಗ 0, ಹಾಸನ 40, ಹಾವೇರಿ 6, ಕಲಬುರಗಿ 17, ಕೊಡಗು 46, ಕೋಲಾರ 43, ಕೊಪ್ಪಳ 3, ಮಂಡ್ಯ 20, ಮೈಸೂರು 64, ರಾಯಚೂರು 16, ರಾಮನಗರ 24, ಶಿವಮೊಗ್ಗ 19, ತುಮಕೂರು 12, ಉಡುಪಿ 7, ಉತ್ತರ ಕನ್ನಡ 17, ವಿಜಯಪುರದಲ್ಲಿ 2 ಹಾಗೂ ಯಾದಗಿರಿಯಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]

  • ರಾಜ್ಯದಲ್ಲಿಂದು 1,121 ಮಂದಿಗೆ ಕೊರೊನಾ – ಸೋಂಕಿಗೆ ಐದು ಮಂದಿ ಬಲಿ

    ರಾಜ್ಯದಲ್ಲಿಂದು 1,121 ಮಂದಿಗೆ ಕೊರೊನಾ – ಸೋಂಕಿಗೆ ಐದು ಮಂದಿ ಬಲಿ

    ಬೆಂಗಳೂರು: ಕಳೆದ ಒಂದು ವಾರದಿಂದಲೂ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದ್ದು, ನಿನ್ನೆ 1,200 ಇದ್ದ ಕೊರೊನಾ ಸೋಂಕಿತರ ಸಂಖ್ಯೆ ಇಂದು 1,121ಕ್ಕೆ ಇಳಿದಿದೆ. ರಾಜ್ಯದಲ್ಲಿಂದು 1,121 ಪ್ರಕರಣಗಳು ದಾಖಲಾಗಿದ್ದು, ಐವರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

    ಇಂದು ರಾಜ್ಯದಲ್ಲಿ 1,711 ಮಂದಿ ಕೊರೊನಾದಿಂದ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ 39,83,536 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. ಇಂದು 14,766 ಮಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದರೊಂದಿಗೆ ಇಲ್ಲಿಯವರೆಗೆ 6,82,49,341 ಮಂದಿಯನ್ನು ಟೆಸ್ಟ್ ಮಾಡಲಾಗಿದೆ. ಇದನ್ನೂ ಓದಿ: ಕಂಡಲ್ಲಿ ಗುಂಡು ಹಾರಿಸಲು ಅನುಮತಿ ಕೊಟ್ಟರಷ್ಟೇ ಹಿಂದೂಗಳು ಸೇಫ್: ಸಿದ್ದಲಿಂಗ ಸ್ವಾಮೀಜಿ

    ಕೋವಿಡ್‌ನಿಂದ ಇಂದು 5 ಮರಣ ಪ್ರಕರಣ ದಾಖಲಾಗಿದ್ದು, ಇದುವೆರೆಗೆ ಒಟ್ಟು 40,152 ಮಂದಿ ಜೀವ ಕಳೆದುಕೊಂಡಿದ್ದಾರೆ. ಇಂದಿನ ಪಾಸಿಟಿವಿಟಿ ದರ ಶೇ.7.59 ಇದೆ. 9,880 ಸಕ್ರಿಯ ಪ್ರಕರಣಗಳಿವೆ. ಇಂದು 14,766 ಮಂದಿಯನ್ನು (3,177, ರ‍್ಯಾಪಿಡ್ ಆಂಟಿಜನ್, 11,589 RTPCR) ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಅಲ್ಲದೇ ಇಂದು 45,950 ಮಂದಿ ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಕಾಶ್ಮೀರವನ್ನು ಬಿಟ್ಟು ಬನ್ನಿ: ಕಾಶ್ಮೀರಿ ಪಂಡಿತರ ಸಂಘರ್ಷ ಸಮಿತಿ ಒತ್ತಾಯ

    ಬೆಂಗಳೂರು ನಗರದಲ್ಲೇ 812 ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರು ಗ್ರಾಮಾಂತರದಲ್ಲಿ 23 , ಬಾಗಲಕೋಟೆ 9, ಬಳ್ಳಾರಿ 33, ಬೆಳಗಾವಿ 23, ಬೀದರ್ 0, ಚಾಮರಾಜನಗರ 7, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 10, ಚಿತ್ರದುರ್ಗ 4, ದಕ್ಷಿಣ ಕನ್ನಡ 6, ದಾವಣಗೆರೆ 13, ಧಾರವಾಡ 16, ಗದಗ 1, ಹಾಸನ 21, ಹಾವೇರಿ 13, ಕಲಬುರಗಿ 4, ಕೊಡಗು 22, ಕೋಲಾರ 3, ಕೊಪ್ಪಳ 2, ಮಂಡ್ಯ 6, ಮೈಸೂರು 33, ರಾಯಚೂರು 7, ರಾಮನಗರ 13, ಶಿವಮೊಗ್ಗ 16, ತುಮಕೂರು 4, ಉಡುಪಿ 5, ಉತ್ತರ ಕನ್ನಡ 6, ವಿಜಯಪುರ 6 ಹಾಗೂ ಯಾದಗಿರಿಯಲ್ಲಿ 2 ಪ್ರಕರಣ ವರದಿಯಾಗಿರುವುದಾಗಿ ಆರೋಗ್ಯ ಇಲಾಖೆ ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಕೋವಿಡ್ ಏರಿಳಿತ; ರಾಜ್ಯದಲ್ಲಿಂದು 1,329 ಮಂದಿಗೆ ಕೊರೊನಾ – ಮೂರೇ ದಿನಗಳಲ್ಲಿ 16 ಜೀವ ಬಲಿ

    ಕೋವಿಡ್ ಏರಿಳಿತ; ರಾಜ್ಯದಲ್ಲಿಂದು 1,329 ಮಂದಿಗೆ ಕೊರೊನಾ – ಮೂರೇ ದಿನಗಳಲ್ಲಿ 16 ಜೀವ ಬಲಿ

    ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೆ ಕೊರೊನಾ ಸೋಂಕಿತರ ಸಂಖ್ಯೆ ಏರಿಳಿತವಾಗುತ್ತಿದೆ. ಗುರುವಾರ 1,691 ಇದ್ದ ಸೋಂಕಿನ ಪ್ರಕರಣ ಶುಕ್ರವಾರ 2,032ಕ್ಕೆ ಏರಿಕೆಯಾಗಿತ್ತು. ಇಂದು 1,329 ಪ್ರಕರಣಗಳು ವರದಿಯಾಗಿದೆ. ಅಲ್ಲದೇ ಇಂದು ಸಹ 5 ಮಂದಿ ಮೃತಪಟ್ಟಿದ್ದು, ಕಳೆದ ಮೂರು ದಿನಗಳಲ್ಲಿ 16 ಜೀವಗಳು ಕೊರೊನಾ ಸೋಂಕಿಗೆ ಬಲಿಯಾಗಿವೆ.

    ಇಂದು ರಾಜ್ಯದಲ್ಲಿ 1,614 ಮಂದಿ ಕೊರೊನಾದಿಂದ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ 39,79,155 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. ಇಂದು 31,154 ಮಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದರೊಂದಿಗೆ ಇಲ್ಲಿಯವರೆಗೆ 6,81,80,482 ಮಂದಿಯನ್ನು ಟೆಸ್ಟ್ ಮಾಡಲಾಗಿದೆ. ಇದನ್ನೂ ಓದಿ: ಕನ್ನಡದ ಹಿರಿಯ ಹಾಸ್ಯ ನಟ ಉಮೇಶ್ ಸಿನಿ ಪಯಣಕ್ಕೆ 62ನೇ ಸಂಭ್ರಮ: ವಾಣಿಜ್ಯ ಮಂಡಳಿಯಿಂದ ಅಭಿನಂದನ ಕಾರ್ಯಕ್ರಮ

    ಕೋವಿಡ್‌ನಿಂದ ಇಂದು 5 ಮರಣ ಪ್ರಕರಣ ದಾಖಲಾಗಿದ್ದು, ಇದುವೆರೆಗೆ ಒಟ್ಟು 40,144 ಮಂದಿ ಜೀವ ಕಳೆದುಕೊಂಡಿದ್ದಾರೆ. ಇಂದಿನ ಪಾಸಿಟಿವಿಟಿ ಶೇ.4.26 ಇದೆ. 10,105 ಸಕ್ರಿಯ ಪ್ರಕರಣಗಳಿವೆ. ಇಂದು 31,154 ಮಂದಿಯನ್ನು (8,187 ರ‍್ಯಾಪಿಡ್ ಆಂಟಿಜನ್, 22,967 ಆರ್‌ಟಿ-ಪಿಸಿಆರ್) ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಅಲ್ಲದೇ ಇಂದು 47,299 ಮಂದಿ ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಹರ್ ಘರ್ ತಿರಂಗಾ ಅಭಿಯಾನಕ್ಕೆ ಸಿಎಂ ಚಾಲನೆ – ಭವ್ಯ ಭಾರತ ಕಟ್ಟಲು ಯುವಜನತೆ ಸನ್ನದ್ಧರಾಗುವಂತೆ ಕರೆ

    ಬೆAಗಳೂರು ನಗರದಲ್ಲೇ 791 ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರು ಗ್ರಾಮಾಂತರದಲ್ಲಿ 16, ಬಾಗಲಕೋಟೆ 3, ಬಳ್ಳಾರಿ 50, ಬೆಳಗಾವಿ 18, ಬೀದರ್ 0, ಚಾಮರಾಜನಗರ 2, ಚಿಕ್ಕಬಳ್ಳಾಪುರ 9, ಚಿಕ್ಕಮಗಳೂರು 5, ಚಿತ್ರದುರ್ಗ 6, ದಕ್ಷಿಣ ಕನ್ನಡ 17, ದಾವಣಗೆರೆ 30, ಧಾರವಾಡ 38, ಗದಗ 2, ಹಾಸನ 55, ಹಾವೇರಿ 10, ಕಲಬುರಗಿ 16, ಕೊಡಗು 21, ಕೋಲಾರ 19, ಕೊಪ್ಪಳ 8, ಮಂಡ್ಯ 28, ಮೈಸೂರು 38, ರಾಯಚೂರು 46, ರಾಮನಗರ 19, ಶಿವಮೊಗ್ಗ 25, ತುಮಕೂರು 22, ಉಡುಪಿ 8, ಉತ್ತರ ಕನ್ನಡ 21, ವಿಜಯಪುರ 6 ಹಾಗೂ ಯಾದಗಿರಿಯಲ್ಲಿ 3 ಪ್ರಕರಣ ವರದಿಯಾಗಿರುವುದಾಗಿ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]