ನ್ಯೂಯಾರ್ಕ್: ಕೊರೊನಾ ವೈರಸ್ ನಿಯಂತ್ರಿಸಲು ವಿಜ್ಞಾನಿಗಳು ಈಗಾಗಲೇ ಅನೇಕ ಲಸಿಕೆಗಳನ್ನು ಕಂಡು ಹಿಡಿದಿದ್ದು, ಇನ್ನು ವಿಜ್ಞಾನಿಗಳು ಈ ಕುರಿತಾಗಿ ಸಂಶೋಧನೆ ಮಾಡುತ್ತಿದ್ದಾರೆ. ಆದರೆ ಇದೀಗ ವೈರಸ್‍ಗೆ ಪರಿಹಾರ ಕಂಡುಕೊಳ್ಳಲು ವಿಜ್ಞಾನಿಗಳು ಚೂಯಿಂಗಮ್ ಮೊರೆ ಹೋಗಿದ್ದಾರೆ.
ಸಸ್ಯಜನ್ಯ ಪ್ರೊಟೀನ್ ಲೇಪಿತ ಚೂಯಿಂಗಮ್‍ನ್ನು ಸೇವಿಸುವ ಮೂಲಕ ಕೊರೊನಾ ವೈರಸ್ ಹರಡುವುದನ್ನು ತಪ್ಪಿಸಬಹುದು ಎಂದು ಅಧ್ಯಯನವೊಂದು ತಿಳಿಸಿದೆ. ನ್ಯಾಷನಲ್ ಪತ್ರಿಕೆಯಲ್ಲಿ ಪ್ರಕಟವಾದ ಅಧ್ಯಯನ ವರದಿಯೊಂದು ಇದನ್ನು ಸಾಬೀತು ಪಡಿಸಿದೆ. ಇದನ್ನೂ ಇದನ್ನೂ ಓದಿ: ಕೊರೊನಾ ಮನುಷ್ಯರಿಂದ ಪ್ರಾಣಿಗಳಿಗೆ ಹರಡುತ್ತದೆ – ಸಂಶೋಧನಾ ವರದಿ
ಸಸ್ಯಜನ್ಯ ಪ್ರೊಟೀನ್ ಲೇಪಿತ ಚೂಯಿಂಗಮ್‍ನ್ನು ಜಗಿಯುವ ಮೂಲಕ ಕೊರೊನಾ ಹರಡುವುದನ್ನು ತಡೆಯಬಹುದು ಎಂದು ಹೇಳಲಾಗಿದೆ. ವೈರಸ್ ಬಾಯಿಯ ಲಾಲಾರಸದಲ್ಲಿ ಅಡಗಿರುತ್ತದೆ. ಇದು ಕೆಮ್ಮಿದಾಗ, ಸೀನಿದಾಗ ವೇಗವಾಗಿ ಪ್ರಸರಣ ಹೊಂದುತ್ತದೆ. ಸಂಶೋಧಿಸಲಾದ ಚೂಯಿಂ ಗಮ್ ಅಗೆಯುವ ಮೂಲಕ ಲಾಲಾರಸದಲ್ಲಿನ ವೈರಸ್‍ಗಳನ್ನು ಕೊಲ್ಲಬಹುದು ಎಂದು ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದ ಸಂಶೋಧಕ ಹೆನ್ರಿ ಡೆನೀಯಲ್ ಹೇಳಿದ್ದಾರೆ. ಇದನ್ನೂ ಓದಿ: ಪಾಸಿಟಿವ್ ಬಂದಿದ್ದ ವಿದ್ಯಾರ್ಥಿಗಳಿಗೆ ಎರಡೇ ದಿನದಲ್ಲಿ ನೆಗೆಟಿವ್ ರಿಪೋರ್ಟ್!
ಕೋವಿಡ್ ರೋಗಿಗಳಿಗೆ ಈ ಗಮ್ ಅನ್ನು ನೀಡಿದಾಗ ಅವರ ಲಾವಾರಸದಲ್ಲಿನ ಕೊರೊನಾ ವೈರಸ್‍ನ ಪ್ರಮಾಣ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದ್ದು ಕಂಡು ಬಂದಿದೆ. ಇದನ್ನು ಕ್ಲಿನಿಕಲ್ ಟ್ರಯಲ್‍ಗೆ ನೀಡಬೇಕಾಗಿದೆ ಎಂದು ಹೆನ್ರಿ ಡೇನಿಯಲ್ ಹೇಳಿದ್ದಾರೆ.
ನವದೆಹಲಿ: ಲಸಿಕೆಯೆ ಅಭಿಯಾನ ಪ್ರಾರಂಭವಾದ ಬಳಿಕ 5ನೇ ಸಲ ಈ ದಾಖಲೆಯಾಗಿದೆ. ಓಮಿಕ್ರೋನ್ ವೈರಸ್ ಪತ್ತೆಯಾಗಿರುವ ಬೆನ್ನಲ್ಲೇ ದೇಶಾದ್ಯಂತ ಮತ್ತೆ ಜನರು ಲಸಿಕೆ ತೆಗೆದುಕೊಳ್ಳುತ್ತಿದ್ದಾರೆ.
ದೇಶದಲ್ಲಿ ಓಮಿಕ್ರೋನ್ ವೈರಸ್ ಬೆನ್ನಲ್ಲೇ ಕುಂಠಿತಗೊಂಡಿದ್ದ ಲಸಿಕಾ ಅಭಿಯಾನಕ್ಕೆ ಮತ್ತೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಶನಿವಾರ ಒಂದೇ ದಿನ 1 ಕೋಟಿ ಲಸಿಕೆ ಡೋಸ್‍ಗಳನ್ನು ನೀಡಲಾಗಿದೆ.
2 ತಿಂಗಳ ಬಳಿಕ ಮೊದಲ ಬಾರಿಗೆ 1 ಕೋಟಿಗಿಂತ ಹೆಚ್ಚು ಡೋಸ್ ನೀಡಿದಂತಾಗಿದೆ. ಜೊತೆಗೆ ಇದುವರೆಗೆ ನೀಡಲಾದ ಒಟ್ಟು ಲಸಿಕೆಯ ಪ್ರಮಾಣ 127.5 ಕೋಟಿ ಡೋಸ್ ದಾಟಿದೆ. ಈ ಸಂಬಂಧ ನಿನ್ನೆ ರಾತ್ರಿ 8.15ರ ವೇಳೆಗೆ 1 ಕೋಟಿಗಿಂತ ಹೆಚ್ಚು ಡೋಸ್ ನೀಡಲಾಗಿದೆ. ಇದನ್ನೂ ಓದಿ: ಲಸಿಕೆ ಪ್ರಮಾಣ ಪತ್ರ ಎಡವಟ್ಟು – ವ್ಯಾಕ್ಸಿನ್ ಪಡೆಯಲು ಬಂದಾತನಿಗೆ ಶಾಕ್
ಲಸಿಕೆ ಅಭಿಯಾನ ಆರಂಭವಾಗಿದ್ದು, ಈವರೆಗೆ 5ನೇ ಸಲ ಒಂದು ದಿನದಲ್ಲಿ 1 ಕೋಟಿಗಿಂತ ಹೆಚ್ಚು ಲಸಿಕೆ ನೀಡಲಾಗಿದೆ. ತನ್ನಮೂಲಕ ವಿಶ್ವದಲ್ಲೇ ಅತಿದೊಡ್ಡ ಲಸಿಕೆ ಅಭಿಯಾನವು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಹೊಸ ಎತ್ತರಕ್ಕೆ ತಲುಪುತ್ತಿದೆ ಎಂದು ಹರ್ಷಿಸಿದ್ದಾರೆ. ಈ ಹಿಂದೆ ಆ.27ರಂದು ದೇಶಾದ್ಯಂತ 1 ಕೋಟಿಗಿಂತ ಹೆಚ್ಚು ಡೋಸ್ ನೀಡಲಾಗಿತ್ತು. ಪ್ರಧಾನಿ ಮೋದಿ ಅವರ ಜನ್ಮದಿನದಂದು 2 ಕೋಟಿ ಜನಕ್ಕೆ ಲಸಿಕೆ ನೀಡಲಾಗಿತ್ತು. ಇದನ್ನೂ ಓದಿ: ಕಾಫಿನಾಡಲ್ಲಿ ಪುನೀತ್ ರಾಜ್‍ಕುಮಾರ್ ಸ್ಮರಣಾರ್ಥ ಅಪ್ಪು ಕಪ್ ಕ್ರಿಕೆಟ್ ಪಂದ್ಯಾವಳಿ
ತಿರುವನಂತಪುರಂ: ಓಮಿಕ್ರಾನ್ ವೈರಸ್ ಭೀತಿ ಹೆಚ್ಚಾಗುತ್ತಿದೆ. ಕೊರೊನಾ ಲಸಿಕೆ ಪಡೆಯುವಂತೆ ಉತ್ತೇಜಿಸಲು ಲಸಿಕೆ ಹಾಕದ ಕೋವಿಡ್ -19 ರೋಗಿಗಳಿಗೆ ಉಚಿತ ಚಿಕಿತ್ಸೆಯನ್ನು ನೀಡುವುದಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.
ಕೋವಿಡ್ ತಡೆಗಟ್ಟುವ ಕ್ರಮಗಳೊಂದಿಗೆ ಸಹಕರಿಸದವರಿಗೆ ಉಚಿತ ಚಿಕಿತ್ಸೆ ಇಲ್ಲ. ಲಸಿಕೆ ಪಡೆಯದ ಶಿಕ್ಷಕರು ಮತ್ತು ಕಚೇರಿಗಳಲ್ಲಿ ಕೆಲಸ ಮಾಡುವ ಅಥವಾ ಸಾರ್ವಜನಿಕರೊಂದಿಗೆ ಸಂವಹನ ನಡೆಸುವ ಉದ್ಯೋಗಿಗಳು, ಎಲ್ಲರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು RTPCR ಪರೀಕ್ಷೆಗಳಿಗೆ ತಾವೇ ಹಣ ಪಾವತಿಸಬೇಕಾಗುತ್ತದೆ ಎಂದು ಪಿಣರಾಯಿ ವಿಜಯನ್ ಟ್ವೀಟ್ ಮಾಡುವ ಮೂಲಕವಾಗಿ ಜನರಿಗೆ ಜಾಗೃತಿಯ ಸೂಚನೆಯನ್ನು ನೀಡಿದ್ದಾರೆ. ಇದನ್ನೂ ಓದಿ: ಕೋವಿಡ್ ಹಾಟ್‌ಸ್ಪಾಟ್‌ಗಳಿಂದ ಸ್ಯಾಂಪಲ್ ಕಳುಹಿಸಿ: ರಾಜ್ಯಗಳಿಗೆ ಕೇಂದ್ರ ಸೂಚನೆ
No more free treatment for those who do not cooperate with Covid prevention measures. Non vaccinated teachers and employees who work from offices or interact with public, will have to submit weekly results of RTPCR tests, paid for by themselves, to ensure safety of all.
ನಿನ್ನೆ ನಡೆದ ಕೋವಿಡ್-19 ಪರಿಶೀಲನಾ ಸಭೆಯ ಬಳಿಕ ಸಿಎಂ ಪಿಣರಾಯಿ ವಿಜಯನ್ ಇಂತಹುದೊಂದು ನಿರ್ಧಾರಕ್ಕೆ ಬಂದಿದ್ದು, ಕೊರೊನಾ ನಿಯಂತ್ರಣ ಕ್ರಮಗಳೊಂದಿಗೆ ಸಹಕರಿಸದ ರೋಗಿಗಳಿಗೆ ಉಚಿತ ಚಿಕಿತ್ಸೆಯನ್ನು ನೀಡಲಾಗುವುದಿಲ್ಲ. ಲಸಿಕೆಯನ್ನು ತೆಗೆದುಕೊಳ್ಳದವರಿಗೆ ಚಿಕಿತ್ಸಾ ವೆಚ್ಚವನ್ನೂ ಸರ್ಕಾರ ಭರಿಸುವುದಿಲ್ಲ. ಅಲರ್ಜಿ ಅಥವಾ ಯಾವುದೇ ಕಾಯಿಲೆಯ ಹಿನ್ನೆಲೆಯಲ್ಲಿ ಲಸಿಕೆ ತೆಗೆದುಕೊಳ್ಳಲು ಹಿಂದೇಟು ಹಾಕುವವರು ಸರ್ಕಾರಿ ಸೇವೆಯಲ್ಲಿರುವ ವೈದ್ಯರು ನೀಡಿರುವ ಪ್ರಮಾಣ ಪತ್ರವನ್ನು ಹಾಜರುಪಡಿಸಬೇಕು. ಇದು ಲಸಿಕೆ ಹಾಕಿಸಿಕೊಳ್ಳದ ಸರ್ಕಾರಿ ನೌಕರರು ಮತ್ತು ಶಿಕ್ಷಕರಿಗೂ ಅನ್ವಯಿಸುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಶಾಸಕ ವಿಶ್ವನಾಥ್ ಹತ್ಯೆಗೆ ಸ್ಕೆಚ್ – ಸುಪಾರಿ ಕೊಡ್ತಿರೋ ವೀಡಿಯೋ, ಆಡಿಯೋ ವೈರಲ್
On #WorldAIDSDay, let’s pledge to support HIV victims, spread scientific awareness against the stigma around AIDS and strengthen efforts to wipe out the disease.
ಲಸಿಕೆ ಹಾಕಿಸಿಕೊಳ್ಳದಿದ್ದರೆ ಪ್ರತಿ ವಾರ ಆರ್‍ಟಿ-ಪಿಸಿಆರ್ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ, ಅದಕ್ಕಾಗಿ ಅವರೇ ವೆಚ್ಚವನ್ನು ಭರಿಸಬೇಕಾಗುತ್ತದೆ. ಪರೀಕ್ಷಾ ವರದಿಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಸಲ್ಲಿಸಬೇಕು. ಕಚೇರಿಗೆ ತೆರಳುವವರಿಗೂ ಇದು ಕಡ್ಡಾಯವಾಗಿದೆ. ಹೀಗೆ ತೆಗೆದುಕೊಂಡ ಕ್ರಮಗಳು ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸುತ್ತದೆ ಎಂದು ವಿಜಯನ್ ಜನರಲ್ಲಿ ಕೊರೊನಾ ಜಾಗೃತಿಯ ಕುರಿತಾಗಿ ತಿಳಿಸಿದ್ದಾರೆ.
ನವದೆಹಲಿ: ಕೊರೊನಾ ವೈರಸ್‍ನ ರೂಪಾಂತರ ತಳಿ ಓಮಿಕ್ರಾನ್ ತಳಿ ಹರಡುವ ಭೀತಿಯಿದ್ದು, ಅದನ್ನು ಎದುರಿಸಲು ಸರ್ಕಾರ ಸಜ್ಜಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
ಕೇಜ್ರಿವಾಲ್ ಅವರು ಸರ್ಕಾರದ ವಿವಿಧ ಇಲಾಖೆಗಳ ಜೊತೆ ಸಿದ್ಧತೆ ಪರಿಶೀಲನಾ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಆಮ್ಲಜನಕ ಸೌಲಭ್ಯವಿರುವ 30,000 ಬೆಡ್‌ಗಳು ಹಾಗೂ ಆಮ್ಲಜನಕ ಪೂರೈಕೆ ಹಾಗೂ ಸಂಗ್ರಹ ವ್ಯವಸ್ಥೆಯನ್ನು ಒಂದೆರಡು ವಾರಗಳಲ್ಲಿ ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗುವುದು. ಕೊರೊನಾ ರೂಪಾಂತರಿ ವೈರಸ್ ಆಗಿರುವ ಓಮಿಕ್ರಾನ್ ಎದುರಿಸಲು ಸರ್ಕಾರ ಸಜ್ಜಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಎವರ್ ಗ್ರೀನ್ ಹೀರೋಯಿನ್ ಸುಧಾರಾಣಿ ಇನ್ಮುಂದೆ ಡಾ.ಸುಧಾರಾಣಿ
30 ಸಾವಿರ ಹಾಸಿಗೆಗಳಲ್ಲಿ 10,000 ಐಸಿಯು ಹಾಸಿಗೆಗಳು ಸೇರಿವೆ. ಇನ್ನೂ 6,800 ಹಾಸಿಗೆಗಳು ಫೆಬ್ರುವರಿ ಹೊತ್ತಿಗೆ ಸಿದ್ಧವಾಗಲಿವೆ. ಪ್ರತೀ ವಾರ್ಡ್‍ನಲ್ಲಿ 100 ಆಮ್ಲಜನಕ ಸೌಲಭ್ಯವಿರುವ ಹಾಸಿಗೆಗಳನ್ನು ಎರಡು ವಾರದಲ್ಲಿ ಸಿದ್ಧಪಡಿಸಲು ಸಾಧ್ಯವಿದೆ. ಒಟ್ಟು 270 ವಾರ್ಡ್‍ಗಳಿಂದ 27,000 ಹಾಸಿಗೆಗಳು ಸಿದ್ಧವಾಗಲಿವೆ. ಸಿಬ್ಬಂದಿಯನ್ನು ಈ ಕುರಿತಾಗಿ ತರಬೇತುಗೊಳಿಸುತ್ತಿದ್ದು, 32 ರೀತಿಯ ಔಷಧಗಳ ಖರೀದಿ ಮಾಡಲಾಗುತ್ತಿದೆ. ಹೋಮ್ ಐಸೊಲೇಷನ್‍ಗೆ ಸಿದ್ಧತೆ ನಡೆಯುತ್ತಿದ್ದು, 121 ಟನ್ ಆಮ್ಲಜನಕ ಉತ್ಪಾದಿಸುವ ಘಟಕಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳು ನ್ಯಾಯಾಲಯಕ್ಕೆ ಹಾಜರು
ಬೆಂಗಳೂರು: ಓಮಿಕ್ರಾನ್ ಕೊರೊನಾ ರೂಪಾಂತರ ವೈರಸ್ ತೀವ್ರತೆಯ ಕುರಿತಾಗಿ ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ತಾಂತ್ರಿಕ ಇಲಾಖೆ ಸಮಿತಿ ಸಭೆ ಮಾಡಲಾಗಿದೆ. ಸಭೆಯಲ್ಲಿ ವ್ಯಾಕ್ಸಿನೇಷನ್ ಕಡ್ಡಾಯವಲ್ಲ ಎಂದು ಚರ್ಚಿಸಲಾಗಿದೆ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಭೆಗೆ ಪೂರಕವಾಗಿ ಸಭೆ ಆಗಿದೆ. ಓಮಿಕ್ರಾನ್ ಹೊಸ ತಳಿ ನಿಯಂತ್ರಣದ ಬಗ್ಗೆ ಚರ್ಚೆ ಆಗಿದ್ದು, ಒಂದು ವೇಳೆ ವೈರಸ್ ಬಂದರೆ ಅದಕ್ಕೆ ಸಿದ್ಧತೆ ಹೇಗೆ ಇರಬೇಕು ಅಂತ ಚರ್ಚೆ ಮಾಡಿದ್ದೇವೆ. ವೈದ್ಯರು, ಆಸ್ಪತ್ರೆಗಳ ಸಿದ್ಧತೆ, ಸರ್ಕಾರಿ, ಖಾಸಗಿ ಆಸ್ಪತ್ರೆಗಳ ಸಿದ್ಧತೆ ಬಗ್ಗೆ ಚರ್ಚೆ ಆಗಿದೆ. ಮೊದಲು ಕ್ವಾರಂಟೈನ್ ಇತ್ತು, ಈಗ ಅದನ್ನ ಮತ್ತೆ ಜಾರಿ ಮಾಡುತ್ತೇವೆ. ವಿದೇಶದಿಂದ ಬರೋ ಎಲ್ಲರಿಗೂ RTPCR ಟೆಸ್ಟ್ ಮಾಡುತ್ತೇವೆ. ನೆಗೆಟಿವ್ ಬಂದರೆ ಮನೆಯಲ್ಲಿ ಒಂದು ವಾರ ಕ್ವಾರಂಟೈನ್ ಇರಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಬನ್ನಿ ದೇವೇಗೌಡ್ರೇ… ಇಲ್ಲಿ ಕುಳಿತುಕೊಳ್ಳಿ: ಪ್ರಧಾನಿ ಮೋದಿ
ರೋಗದ ಲಕ್ಷಣ ಇದ್ದರೆ 5ನೇ ದಿನ ಟೆಸ್ಟ್ ಮಾಡುತ್ತೇವೆ. ರೋಗದ ಲಕ್ಷಣ ಇಲ್ಲದೆ ಹೋದರೆ 7 ನೇ ದಿನ ಟೆಸ್ಟ್ ಮಾಡಿ ಹೊರಗೆ ಓಡಾಟ ಮಾಡಲು ಅವಕಾಶ ಕೊಡುತ್ತೇವೆ. ಟೆಲಿ ಮೆಡಿಸಿನ್, ಟೆಲಿ ಕೌನ್ಸಿಲಿಂಗ್ ಸಿದ್ಧತೆ ಮಾಡಿಕೊಳ್ಳುತ್ತೇವೆ. ಚಿಕಿತ್ಸೆಗೆ ಯುನಿಫಾರ್ಮ್ ವ್ಯವಸ್ಥೆ ಮಾಡಲು ತಂಡ ರಚನೆ ಮಾಡಲಾಗುತ್ತದೆ. ಚಿಕಿತ್ಸೆ ಪ್ರೋಟೋ ಕಾಲ್‍ಗೆ ತಂಡ ರಚನೆಯಾಗಿದ್ದು, ಡಾ. ರವಿ ಅವರನ್ನು ನೇಮಕ ಮಾಡಲಾಗಿದೆ. ಸಮಿತಿಯಲ್ಲಿ 10 ಜನ ಇರುತ್ತಾರೆ. ಅಗತ್ಯ ಔಷಧಿ ದಾಸ್ತಾನು ಬಗ್ಗೆ ಸಭೆ ಆಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ, ಜಿಟಿಡಿ ನಡುವಿನ ಹೊಸ ಲವ್ ಸಕ್ಸಸ್ ಆಗಲ್ಲ: ಎಸ್.ಟಿ. ಸೋಮಶೇಖರ್
ಲಸಿಕೆ ಕಡ್ಡಾಯವಾಗಿ 41 ಲಕ್ಷ ಜನ ಎರಡನೇ ಡೋಸ್ ಪಡೆಯಬೇಕು. ಇವರಿಗೂ ಪ್ರತಿ ಜಿಲ್ಲೆಯಲ್ಲಿ ಲಸಿಕೆ ಆದ್ಯತೆ ಮೇಲೆ ಕೊಡುತ್ತೇವೆ. ಇವರಿಗೆ ಲಸಿಕೆ ಕೊಟ್ರೆ 70% ಲಸಿಕೆ ಆಗುತ್ತೆ. ಹೀಗಾಗಿ ಲಸಿಕೆ ನೀಡಲು ಕ್ರಮ ತಗೋತೀವಿ. ಓಮಿಕ್ರಾನ್ ಹರಡುವಿಕೆ ಪ್ರಮಾಣ ಹೆಚ್ಚಿದೆ. ಅದರ ತೀವ್ರತೆ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಜನರು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುತ್ತೇವೆ. ಲಸಿಕೆ ಜನರು ಬಂದು ಪಡೆಯಬೇಕು. ಲಸಿಕೆ ರೋಗ ನಿರೋಧಕ ಸೃಷ್ಟಿ ಮಾಡುತ್ತೆ. ಜನ ಲಸಿಕೆ ಪಡೆಯಬೇಕು. ಹೈರಿಸ್ಕ್ ದೇಶದಿಂದ ಬರೋ ಪ್ರಯಾಣಿಕರಿಗೆ ಕೆಲ ನಿರ್ಬಂಧ ಹಾಕೋ ಬಗ್ಗೆ ಸಿಎಂ ಚಿಂತನೆ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಸಿಎಂ ಕೇಂದ್ರಕ್ಕೆ ಪತ್ರ ಬರೆಯಲು ನಿರ್ಧಾರ ಮಾಡಿದ್ದಾರೆ. ಪ್ರಾರಂಭಿಕ ಹಂತದಲ್ಲಿ ನಿಯಂತ್ರಣ ಮಾಡಲು ಸಿಎಂ ಈ ನಿರ್ಧಾರ ಮಾಡಿದ್ದಾರೆ. ತಾಂತ್ರಿಕ ಸಲಹಾ ಸಮಿತಿ ಶಿಫಾರಸು ಕುರಿತು ಸಿಎಂ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ನಿತ್ಯ ವಿದೇಶದಿಂದ 2.5 ಸಾವಿರ ಜನ ಬೆಂಗಳೂರಿಗೆ ಬರ್ತಾರೆ. ಎಲ್ಲರಿಗೂ RTPCR ಟೆಸ್ಟ್ ಕಡ್ಡಾಯ ಮಾಡಲಾಗುತ್ತೆ ಎಂದರು.
ಲಸಿಕೆ ಪಡೆಯದೇ ಹೋದರೆ ಸರ್ಕಾರಿ ಸೌಲಭ್ಯ ನೀಡಬಾರದು ಅನ್ನೋ ಶಿಫಾರಸು ವಿಚಾರವಾಗಿ ಮಾತನಾಡಿದ ಅವರು, ಜನರಿಗೆ ಕಾನೂನು ತಂದು, ದಂಡ ಹಾಕಿ ಲಸಿಕೆ ಕೊಡೊ ಚಿಂತನೆ ಸರ್ಕಾರಕ್ಕೆ ಇಲ್ಲ. ಆದರೆ ಎರಡನೇ ಡೋಸ್ ಲಸಿಕೆ ಪಡೆಯದೇ ಇರೋರಿಗೆ ಆಸ್ಪತ್ರೆ ವೆಚ್ಚ ಭರಿಸಬಾರದು ಅಂತ ಸಮಿತಿ ಶಿಫಾರಸ್ಸು ಮಾಡಿದೆ. ಇದರ ಜೊತೆ ಅನೇಕ ಶಿಫಾರಸು ತಜ್ಞರ ತಂಡ ಮಾಡಿದೆ. ಮಾಲ್ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡೋರಿಗೆ ಎರಡು ಡೋಸ್ ಲಸಿಕೆ ಕಡ್ಡಾಯ ಮಾಡೋ ಬಗ್ಗೆ ಶಿಫಾರಸು ಮಾಡಿದ್ದಾರೆ. ಈ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಹೇಳಿದ್ದಾರೆ.
ಬೆಂಗಳೂರು: ಬೇರೆ ಬೇರೆ ದೇಶದಲ್ಲಿ ಹೊಸ ತಳಿ ಬಗ್ಗೆ ಆಗಿರೋ ಪರಿಸ್ಥಿತಿ ಅವಲೋಕನ ಮಾಡುತ್ತಿದ್ದೇವೆ. ಓಮಿಕ್ರಾನ್ ಕೊರೊನಾ ರೂಪಾಂತರ ವೈರಸ್ ತೀವ್ರ ಆದರೆ ಚಟುವಟಿಕೆಗಳನ್ನು ನಿರ್ಬಂಧ ಮಾಡುವ ವಿಚಾರವಾಗಿ ಇಂದು ಚರ್ಚೆ ಮಾಡಲಾಗುತ್ತದೆ ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೊಸ ಪ್ರಭೇದ ತೀವ್ರ ಆದರೆ ಚಟುವಟಿಕೆಗಳ ನಿರ್ಬಂಧಕ್ಕೆ ನಿರ್ಧಾರ ಮಾಡೋ ಬಗ್ಗೆ ಚರ್ಚೆ ಆಗುತ್ತದೆ. ವಿಶ್ವಸಂಸ್ಥೆ ಕೂಡಾ ಡಿಸೆಂಬರ್ 1,2ರಂದು ವರದಿ ನೀಡುತ್ತದೆ. ಆ ಮೇಲೆ ಮುಂದಿನ ತೀರ್ಮಾನ ಮಾಡುತ್ತೇವೆ. ಅಲ್ಲಿಯವರೆಗೂ ಯಾವುದೇ ಚಟುವಟಿಕೆ ಮೇಲೆ ನಿರ್ಬಂಧ ಇಲ್ಲ. ಆರಂಭಿಕ ಹಂತದ ಮಾರ್ಗಸೂಚಿಗಳ ಜಾರಿಗೆ ಇವತ್ತು ಸಭೆ ಮಾಡುತ್ತೇವೆ. ಇವತ್ತಿನ ಸಭೆ ಬಳಿಕ ಸಿಎಂ ಜೊತೆ ಚರ್ಚೆ ಮಾಡಿ ಮುಂದಿನ ನಿರ್ಧಾರ ಮಾಡುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಗುರುದ್ವಾರದಲ್ಲಿ ಫೋಟೋಶೂಟ್ – ಮಾಡೆಲ್ ವಿರುದ್ಧ ನೆಟ್ಟಿಗರು ಗರಂ
ವಿದೇಶದಿಂದ ಬಂದ ಇಬ್ಬರಿಗೆ ಮಾತ್ರ ಸೋಂಕು ಬಂದಿದೆ. ಅವರ ಸ್ಯಾಂಪಲ್ ಜಿನೋಮಿಕ್ ಸೀಕ್ವೆನ್ಸ್ ಗೆ ಕಳಿಸಲಾಗಿದೆ. ಇನ್ನೆರಡು ದಿನಗಳಲ್ಲಿ ವರದಿ ಬರುತ್ತದೆ. ಲಾಕ್‍ಡೌನ್ ಮಾಡುವ ಪ್ರಸ್ತಾಪ ನಮ್ಮ ಮುಂದೆ ಇಲ್ಲ. ಬೂಸ್ಟರ್ ಡೋಸ್ ಕೊಡೊ ಬಗ್ಗೆ ನಾವು ತೀರ್ಮಾನ ಮಾಡಲು ಸಾಧ್ಯವಿಲ್ಲ. ಇದನ್ನ ಕೇಂದ್ರ ಸರ್ಕಾರ ಮತ್ತು ICMR ತೀರ್ಮಾನ ಮಾಡಬೇಕು. ನಾವೇ ನಿರ್ಧಾರ ಮಾಡಿ ಬೂಸ್ಟರ್ ಡೋಸ್ ಕೊಡಲು ಸಾಧ್ಯವಿಲ್ಲ.ಕೇಂದ್ರ ಸರ್ಕಾರ ತೆಗೆದುಕೊಳ್ಳೋ ತೀರ್ಮಾನ ಮೇಲೆ ಬೂಸ್ಟರ್ ಡೋಸ್ ನೀಡೋ ಬಗ್ಗೆ ನಾವು ತೀರ್ಮಾನ ಮಾಡುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: 62 ನಿವಾಸಿಗಳಿಗೆ ಕೋವಿಡ್ ಪಾಸಿಟಿವ್ – ಕಂಟೈನ್ಮೆಂಟ್ ಝೋನ್ ಆಯ್ತು ವೃದ್ಧಾಶ್ರಮ
ಈಗಾಗಲೇ ನಿನ್ನೆ ಒಂದಷ್ಟು ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಮತ್ತಷ್ಟು ಬದಲಾವಣೆ ತರಬೇಕಾ ಅಂತ ಇವತ್ತಿನ ಸಭೆಯಲ್ಲಿ ಚರ್ಚೆ ಮಾಡಿ ತೀರ್ಮಾನ ಮಾಡ್ತೀವಿ. ತಜ್ಞರ ಜೊತೆ ಚರ್ಚೆ ಬಳಿಕ ಏನಾದ್ರು ಮಾರ್ಗಸೂಚಿಯಲ್ಲಿ ಬದಲಾವಣೆ ತರಬೇಕಾದ್ರೆ ತರುತ್ತೇವೆ. WHO ಹೊಸ ತಳಿ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಡಿಸೆಂಬರ್ 1 ಅಥವಾ 2ರ ಒಳಗೆ ವಿಶ್ವ ಆರೋಗ್ಯ ಸಂಸ್ಥೆ ನಮಗೆ ಮಾರ್ಗಸೂಚಿ ಕೊಡಬಹುದು. ಆದಾದ ಬಳಿಕ ನಾವು ರಾಜ್ಯದಲ್ಲಿ ಯಾವ ಕ್ರಮ ತೆಗೆದುಕೊಳ್ಳಬೇಕು ಅಂತ ನಿರ್ಧಾರ ಮಾಡುತ್ತೇವೆ. ಅಲ್ಲಿಯವರೆಗೂ ಯಾವುದೇ ಚಟುವಟಿಕೆಗಳಿಗೆ ನಿರ್ಬಂಧ ಹಾಕೋದಿಲ್ಲ. ಸದ್ಯಕ್ಕೆ ಯಾವುದೇ ಚಟುವಟಿಕೆಗಳ ಮೇಲೆ ನಿರ್ಬಂಧ ಇಲ್ಲ ಎಂದು ಸಚಿವ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.
ಮುಂದಿನ ಎರಡು-ಮೂರು ದಿನಗಳಲ್ಲಿ ರಿಸ್ಕ್ ಭತ್ಯೆಯನ್ನು ಎಲ್ಲಾ ವೈದ್ಯರಿಗೂ ಪಾವತಿಸಲಾಗುವುದು. ಆದ್ದರಿಂದ ಈ ಸಂದರ್ಭದಲ್ಲಿ ಪ್ರತಿಭಟನೆ ಹಿಂಪಡೆದು ಕರ್ತವ್ಯಕ್ಕೆ ಮರಳಬೇಕು ಎಂದು ಕೋರುತ್ತೇನೆ. (2/2)
ಈಗಾಗಲೇ ಸಿಎಂ ಕೂಡಾ ಲಾಕ್‍ಡೌನ್ ಬಗ್ಗೆ ಹೇಳಿದ್ದಾರೆ. ಶಾಲಾ-ಕಾಲೇಜುಗಳ ಬಗ್ಗೆಯೂ ಸಿಎಂ ಸ್ಪಷ್ಟನೆ ನೀಡಿದ್ದಾರೆ. ಹೀಗಾಗಿ ಯಾವುದೇ ನಿರ್ಬಂಧ ಇರೋದಿಲ್ಲ. ತಾಂತ್ರಿಕ ಸಲಹಾ ಸಮಿತಿ ಸದಸ್ಯರ ನಿಡೋ ಸಲಹೆ ಮೇಲೆ ಮುಂದಿನ ಕ್ರಮ ತಗೋತೀವಿ. ರಾಜ್ಯದಲ್ಲಿ ಸದ್ಯಕ್ಕೆ ಯಾವುದೇ ಚಟುವಟಿಕೆಗಳ ಮೇಲೆ ನಿರ್ಬಂಧ ಇಲ್ಲ. ವಿಶ್ವ ಆರೋಗ್ಯ ಸಂಸ್ಥೆ ಮಾರ್ಗಸೂಚಿ ಕೊಡೋ ವರೆಗೂ ಯಾವುದೇ ಚಟುವಟಿಕೆಗಳ ಮೇಲೆ ನಿರ್ಬಂಧ ಹಾಕೋದಿಲ್ಲ. ಇವತ್ತಿನ ಸಭೆಯಲ್ಲಿ ತಜ್ಞರ ಜೊತೆ ಚರ್ಚೆ ಮಾಡುತ್ತೇವೆ. ಪ್ರಾರಂಭಿಕ ಹಂತದ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವ ಬಗ್ಗೆ ಇವತ್ತಿನ ಸಭೆಯಲ್ಲಿ ಚರ್ಚೆ. ಬಳಿಕ ಸಿಎಂ ಜೊತೆ ಚರ್ಚೆ ಮಾಡಿ ಅಂತಿಮ ನಿರ್ಧಾರ ಮಾಡುತ್ತೇವೆ ಎಂದಿದ್ದಾರೆ.
ಜಿನೀವಾ: ಓಮಿಕ್ರಾನ್(Omicron) ಕೊರೊನಾ ವೈರಸ್ ರೂಪಾಂತರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಡುವ ಸಾಧ್ಯತೆಯಿದೆ. ಕೆಲವು ದೇಶಗಳಿಗೆ ಇದು ಹೆಚ್ಚು ಅಪಾಯವನ್ನು ಉಂಟುಮಾಡುವ ಸಾಧ್ಯತೆ ಇದೆ ಎಂದು ವಿಶ್ವ ಆರೋಗ್ಯ ಸಂಸ್ಥೆ(WHO) ಹೇಳಿದೆ.
ಓಮಿಕ್ರಾನ್ ಸೋಂಕಿನಿಂದ ಇದುವರೆಗೆ ಯಾವುದೇ ಸಾವು ಸಂಭವಿಸಿಲ್ಲ. ಆದರೆ ಲಸಿಕೆ ಇದರ ವಿರುದ್ಧ ಹೋರಾಡುವ ಸಾಮಥ್ರ್ಯ ಹೊಂದಿದೆಯೇ, ಇದು ನಮಗೆ ರಕ್ಷಣೆ ನೀಡುತ್ತದೆಯೇ ಎಂಬುದನ್ನು ಅರಿಯಲು ಸಂಶೋಧನೆಯ ಅಗತ್ಯವಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ(World Health Organization) ಹೇಳಿದೆ.
ಕಳೆದ ವಾರ ಮೊದಲ ಓಮಿಕ್ರಾನ್ ಪ್ರಕರಣ ವರದಿಯಾಯಿತು. ಅಲ್ಲಿಂದ ಇಲ್ಲಿಯವರೆಗೆ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ವಿಶ್ವ ಸಂಸ್ಥೆಯು ತನ್ನ 194 ಸದಸ್ಯ ರಾಷ್ಟ್ರಗಳಿಗೆ ವ್ಯಾಕ್ಸಿನೇಷನ್‍ನನ್ನು ವೇಗಗೊಳಿಸಲು ಮತ್ತು ಆರೋಗ್ಯ ಸೇವೆಗಳನ್ನು ನೀಡಲು ಯೋಜನೆಗಳನ್ನು ಜಾರಿಗೊಳಿಸಿ. ಓಮಿಕ್ರೋನ್ ರೂಪಾಂತರಿ ವ್ಯಕ್ತಿ ಪ್ರತಿರಕ್ಷಣಾ ಸಾಮರ್ಥ್ಯದಿಂದ ತಪ್ಪಿಸಿಕೊಳ್ಳುವ ಸಾಮರ್ಥ್ಯ ಹೊಂದಿದೆ. ಡೆಲ್ಟಾದಿಂದಲೂ ಅತಿ ಹೆಚ್ಚು ವೇಗವಾಗಿ ಹರಬಡಲ್ಲುದು. ಜಾಗತಿಕ ಮಟ್ಟದಲ್ಲಿ ಹೆಚ್ಚು ಹರಡುವ ಸಂಭವನೀಯತೆ ಇದೆ. ತೀವ್ರ ಪರಿಣಾಮ ಉಂಟಾಗಬಹುದು ಎಂದು ಮುನ್ಸೂಚನೆ ಕೊಟ್ಟಿದೆ. ಹೊಸ ರೂಪಾಂತರಕ್ಕೆ ಸಂಬಂಧಿಸಿದಂತೆ ಒಟ್ಟಾರೆ ಜಾಗತಿಕ ಅಪಾಯ ಅತಿ ಹೆಚ್ಚು ಎಂದು ವಿಶ್ವ ಸಂಸ್ಥೆ ಹೇಳಿದೆ. ಇದನ್ನೂ ಓದಿ: ಗುರುದ್ವಾರದಲ್ಲಿ ಫೋಟೋಶೂಟ್ – ಮಾಡೆಲ್ ವಿರುದ್ಧ ನೆಟ್ಟಿಗರು ಗರಂ
Day 1 of the World Health Assembly Special Session #WHASpecial is now adjourned.
The meeting will reconvene tomorrow at 10h00 CET.
ಓಮಿಕ್ರಾನ್ ಪ್ರಕರಣ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾದಲ್ಲಿ ನವೆಂಬರ್ 24 ರಂದು ವರದಿಯಾಗಿದೆ. ಅಲ್ಲಿ ಸೋಂಕುಗಳು ತೀವ್ರವಾಗಿ ಏರಿಕೆಯಾಗಿವೆ. ಅಂದಿನಿಂದ ಇದು 12ಕ್ಕೂ ಹೆಚ್ಚು ದೇಶಗಳಿಗೆ ಹರಡಿದೆ.
ಮುಂಬೈ: ಬಾಲಿವುಡ್ ಅಂಗಳದಲ್ಲಿ ಭರ್ಜರಿ ಸುದ್ದಿಯಲ್ಲಿರುವ ಕತ್ರಿನಾ ಕೈಫ್, ವಿಕ್ಕಿ ಕೌಶಲ್ ಮದುವೆಗೆ ಹೊಸ ವೈರಸ್ ಬಿಸಿ ತಟ್ಟಿದೆ.
ಈ ಜೋಡಿ ಮದುವೆ ಆಗುತ್ತಿರುವ ಬಗ್ಗೆ ಅಧಿಕೃತವಾಗಿ ಎಲ್ಲಿಯೂ ಹೇಳಿಕೊಂಡಿಲ್ಲ. ಮೂಲಗಳ ಪ್ರಕಾರ ಇವರು ಮದುವೆ ಆಗುತ್ತಿರುವ ವಿಚಾರ ಬಹುತೇಕ ಖಚಿತವಾಗಿದೆ. ರಾಜಸ್ಥಾನದ ಸವಾಯಿ ಮಾಧೋಪುರ್ನಲ್ಲಿ ಮದುವೆ ಸಂಭ್ರಮಕ್ಕೆ ತಯಾರಿ ನಡೆಯುತ್ತಿದೆ. ಅದರೆ ಈ ಜೋಡಿ ಮದುವೆಗೆ ಕೊರೊನಾ ಕೆಂಗಣ್ಣು ಬಿದ್ದಿದೆ.
ಡಿಸೆಂಬರ್ 7ರಿಂದ 9ರವರೆಗೆ ಈ ಜೋಡಿಯ ಮದುವೆ ನಡೆಯಲಿದೆ. ರಾಜಸ್ಥಾನದ ಸಿಕ್ಸ್ ಸೆನ್ಸಸ್ ಫೋರ್ಟ್ ಹೋಟೆಲ್‍ನಲ್ಲಿ ವಿವಾಹ ಸಮಾರಂಭ ಏರ್ಪಡಿಸಲಾಗಿದೆ ಎನ್ನಲಾಗುತ್ತಿದೆ. ಇದಕ್ಕಾಗಿ ಈಗಾಗಲೇ ಎಲ್ಲಾ ರೀತಿಯ ಸಿದ್ಧತೆ ನಡೆಯುತ್ತಿದೆ. ಈಗಾಗಲೇ ಬಾಲಿವುಡ್ ಸೆಲೆಬ್ರಿಟಿಗಳಿಗೆ ಮದುವೆ ಆಮಂತ್ರಣ ಹೋಗಿದೆ. ಹೀಗಿರುವಾಗಲೇ ಭಾರತದಲ್ಲಿ ಕೋವಿಡ್ ಸಂಖ್ಯೆ ಹೆಚ್ಚುತ್ತಿದೆ. ಕೊರೊನಾದ ರೂಪಾಂತರಿಯೂ ಪತ್ತೆ ಆಗಿದೆ. ಈ ಕಾರಣಕ್ಕೆ ಮದುವೆಗೆ ಸಮಸ್ಯೆ ಎದುರಾಗುವ ಸೂಚನೆ ಈಗಾಗಲೇ ಸಿಕ್ಕಿದೆ.
ಈ ಮದುವೆಗೆ ಬಾಲಿವುಡ್‍ನ ಅನೇಕ ಸ್ಟಾರ್ ಕಲಾವಿದರು ಅಟೆಂಟ್ ಆಗುತ್ತಾರೆ ಎನ್ನಲಾಗುತ್ತಿತ್ತು. 45 ಹೋಟೆಲ್ ಕೂಡಾ ಬುಕ್ ಮಾಡಲಾಗಿತ್ತು. ಆದರೆ ಹೊಸ ವೈರಸ್ ಕಾರಣದಿಂದಾಗಿ ಮದುವೆ ಬರುತ್ತಿರುವ ಗಣ್ಯರ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಲಿದೆ ಎಂದು ತಿಳಿದು ಬಂದಿದೆ. ಕೋವಿಡ್ ರೂಪಾಂತರಿ ಓಮಿಕ್ರಾನ್ ವೈರಸ್ ಆತಂಕ ಹೆಚ್ಚಾಗಿದೆ. ಎಲ್ಲ ರಾಜ್ಯಗಳಲ್ಲೂ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ಇಂಥ ಸಂದರ್ಭದಲ್ಲಿ ಅದ್ದೂರಿಯಾಗಿ ಮದುವೆ ಆಗುತ್ತಾರ ಎನ್ನುವುದನ್ನು ಕಾದು ನೋಡಬೇಕಾಗಿದೆ.
ಕೋಲಾರ: ಕೊರೊನಾ ರೂಪಾಂತರಿ ಬಗ್ಗೆ ಭಯ ಬೇಡ, ಸರ್ಕಾರದಿಂದ ಮುನ್ನಚ್ಚರಿಕಾ ಕ್ರಮ ಕೈಗೊಳ್ಳಲಾಗುತ್ತಿದೆ. ಸೌತ್ ಆಫ್ರಿಕಾದಿಂದ ಬಂದವರ ಕ್ವಾರಂಟೈನ್ ಮಾಡಲಾಗುತ್ತಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದ್ದಾರೆ.
ಕೋಲಾರದ ಕೋಗಿಲಹಳ್ಳಿ ಮಾಜಿ ಸಚಿವ ವರ್ತೂರು ಪ್ರಕಾಶ್ ಮನೆ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಷ್ಟು ದಿನ ಡೆಲ್ಟಾ ರೂಪಾಂತರ ವೈರಸ್ ಅದರ ಪ್ರಾಬಲ್ಯ ಮೆರೆದಿತ್ತು, ಸೌತ್ ಆಫ್ರಿಕಾದಲ್ಲಿ ಡಿ-11523 ಎಂಬ ವೈರಸ್ ಪತ್ತೆಯಾಗಿದೆ. ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಮತ್ತೆ ಹೆಚ್ಚಳವಾದ ಹಿನ್ನೆಲೆ ರಾಜ್ಯದಲ್ಲಿ ಕೂಡ ಎಚ್ಚರ ವಹಿಸಲಾಗುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ನಡು ರಸ್ತೆಯಲ್ಲೇ ಶಿಶುವಿನ ತಲೆ ಕಂಡು ಭಯಭೀತರಾದ ಜನ
ಕೋವಿಡ್ 3ನೇ ಅಲೆ ಆರಂಭವಾಗಿದೆ ಎಂದು ಹೇಳಕಾಗಲ್ಲ, ಇಷ್ಟು ದಿನ ಡೆಲ್ಟಾ ರೂಪಾಂತರ ವೈರಸ್ ಅದರ ಪ್ರಾಬಲ್ಯ ಮೆರೆದಿದೆ. ಇನ್ನೂ ಸೌತ್ ಆಫ್ರಿಕಾದಲ್ಲಿ ಡಿ 11523 ಎಂಬ ವೈರಸ್ ಪತ್ತೆಯಾಗಿದ್ದು, ಹೊಸ ವೈರಸ್ ಬೇಗ ಹರಡುವ ಸಾಧ್ಯತೆಯಿದೆ ಎಂದು ವಿಶ್ವ ಸಂಸ್ಥೆ ಅಭಿಪ್ರಾಯ ಪಟ್ಟಿದೆ. ಹೀಗಾಗಿ ಇನ್ನೊಂದು ವಾರದಲ್ಲಿ ಹೊಸ ವೈರಸ್‍ನ ತೀವ್ರತೆ ತಿಳಿಯಲಿದೆ. ರಾಜ್ಯ ಸರ್ಕಾರದಿಂದ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಇದುವರೆಗೆ ಯಾವುದೇ ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ, ವೈರಸ್ ಇರುವ ದೇಶದಿಂದ ಬಂದವರನ್ನ ಹೋಮ್ ಕ್ವಾರೆಂಟೈನ್ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಾಗರಹಾವಿನೊಂದಿಗೆ ಹುಡುಗಾಟವಾಡಿ ಮಸಣ ಸೇರಿದ ವೃದ್ಧ
ಬೆಂಗಳೂರು: ಕೊರೊನಾ ವೈರಸ್‍ನ ರೂಪಾಂತರ ತಳಿ ಓಮಿಕ್ರಾನ್ ಕುರಿತಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಇಂದು ವಿಶೇಷ ಸಭೆ ನಡೆಯಿತು. ರಾಜ್ಯದ ಜನತೆಗೆ ಸರ್ಕಾರ ಕೆಲವು ಸೂಚನೆಯನ್ನು ನೀಡಿದೆ.
ಈ ಕುರಿತಾಗಿ ಮಾಧ್ಯಮದವರ ಜೊತೆಗೆ ಮಾತನಾಡಿದ ಕಂದಾಯ ಸಚಿವ ಆರ್, ಅಶೋಕ್ ಅವರು, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸರ್ಕಾರ ಬ್ರೇಕ್ ಹಾಕಿದೆ. ಕೋವಿಡ್ ಇರೋ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ಕ್ರಮಕೊಳ್ಳುತ್ತಿದ್ದು, ಆಯಾ ಜಿಲ್ಲೆಯ ಡಿಸಿಗಳಿಗೆ ಜಿಲ್ಲಾವಾರು ಕೋವಿಡ್ ಪರಿಸ್ಥಿತಿ ಗಮನಿಸಿ ಕ್ರಮ ತೆಗೆದುಕೊಳ್ಳಬೇಕು. ಜನ ಗುಂಪು, ಗುಂಪು ಸೇರದಂತೆ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಮಾಸ್ಕ್ ಹಾಕದವರಿಗೆ ದಂಡ ಹಾಕಲು ಪಾಲಿಕೆ ಆಯುಕ್ತರಿಗೆ ಸೂಚನೆ ನೀಡಲಾಗಿದೆ. ಮದುವೆ ಸಮಾರಂಭಗಳಿಗೆ ಸದ್ಯಕ್ಕೆ ಯಾವುದೇ ನಿರ್ಬಂಧ ಇಲ್ಲ, ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಸದ್ಯದಲ್ಲೇ ಪ್ರಕಟವಾಗಲಿದೆ. ಸೋಂಕಿನ ಸ್ವರೂಪದ ಬಗ್ಗೆ ಅಧ್ಯಯನ ನಡೆಸಲು ತಜ್ಞರಿಗೆ ಸೂಚನೆಯನ್ನು ನೀಡಲಾಗಿದೆ. ಇದನ್ನೂ ಓದಿ: ಕೋವಿಡ್ ಹೊಸ ರೂಪಾಂತರಿ ವೈರಾಣು ನಿಯಂತ್ರಣಕ್ಕೆ ಕ್ರಮ: ಸುಧಾಕರ್
ಕೇರಳದಲ್ಲಿ ಸೋಂಕು ಹೆಚ್ಚಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. ಕೇರಳ, ಮಹಾರಾಷ್ಟ್ರ ಗಡಿಜಿಲ್ಲೆಗಳಲ್ಲಿ ಕಟ್ಟೆಚ್ಚರ ನೀಡಿದ್ದು, ಮಂಗಳೂರು, ಮೈಸೂರು, ಕೊಡಗು, ಚಾಮರಾಜನಗರಗಳಲ್ಲಿ ಕಟ್ಟೆಚ್ಚರಕ್ಕೆ ಸೂಚನೆ ನೀಡುವಂತೆ ಡಿಸಿಗಳಿಗೆ ಹೇಳಲಾಗಿದೆ. ಪೊಲೀಸ್ ಇಲಾಖೆ ಸಿಬ್ಬಂದಿ ಜೊತೆಗೆ ಬೇರೆ ಇಲಾಖೆಗಳ ಸಿಬ್ಬಂದಿ ಮೂಲಕವೂ ಕಟ್ಟೆಚ್ಚರ ನೀಡಲಾಗುತ್ತಿದೆ. ಕೇರಳದಿಂದ ಬರೋರಿಗೆ ಆರ್ಟಿಪಿಸಿಆರ್ ಟೆಸ್ಟ್ ಕಡ್ಡಾಯವಾಗಿದ್ದು, ಕೇರಳದಿಂದ ಈಗಾಗಲೇ ಬಂದಿರುವ ವಿದ್ಯಾರ್ಥಿಗಳಿಗೂ ಆರ್ಟಿಪಿಸಿಆರ್ ಟೆಸ್ಟ್ ಮಾಡಿಸಬೇಕು ಎಂದಿದ್ದಾರೆ. ಇದನ್ನೂ ಓದಿ: ಓಮಿಕ್ರಾನ್ ಆತಂಕ- ಅಂತಾರಾಷ್ಟ್ರೀಯ ವಿಮಾನಯಾನ ನಿರ್ಬಂಧ ಸಡಿಲಗೊಳಿಸುವ ಯೋಜನೆ ಪರಾಮರ್ಶಿಸಲು ಪ್ರಧಾನಿ ಸೂಚನೆ
ಸರ್ಕಾರಿ ಕಚೇರಿ, ಮಾಲ್, ಹೋಟೆಲ್‍ಗಳಲ್ಲಿ ಕೆಲಸ ಮಾಡೋರಿಗೆ ಎರಡು ಡೋಸ್ ಕಡ್ಡಾಯ. ಎರಡು ಡೋಸ್ ಆಗದಿದ್ದರೆ ಕೆಲಸ ಮಾಡುವಂತಿಲ್ಲ. ಕೋವಿಡ್ ಹೆಚ್ಚು ಇರೋ ಜಿಲ್ಲೆಗಳ ಡಿಸಿಗಳಿಗೆ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಶಾಲಾ ಕಾಲೇಜುಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಮಾಡುವಂತಿಲ್ಲ, ನಿಗದಿಯಾಗಿರುವ ಕಾರ್ಯಕ್ರಮಗಳು ಬಿಟ್ಟು ಬೇರೆ ಯಾವುದೇ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ ಎಂದು ಸರ್ಕಾರ ಸೂಚನೆ ನೀಡಿದೆ.
ವೈದ್ಯಕೀಯ ಕಾಲೇಜು ಮತ್ತು ನರ್ಸಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸುವುದು. ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆಗಳನ್ನು ತೀವ್ರಗೊಳಿಸುವುದು. ನೆಗಟಿವ್ ಇದ್ದವರಿಗೆ ನಗರ ಪ್ರವೇಶಕ್ಕೆ ಅನುಮತಿ. ಪಾಸಿಟಿವ್ ಇದ್ದವರಿಗೆ ಚಿಕಿತ್ಸೆಗೆ ಆಸ್ಪತ್ರೆಗೆ ಕಳುಹಿಸುವುದು. ಹಾಸ್ಟೆಲ್ ಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳಿಗೆ ನೆಗಟಿವ್ ರಿಪೋರ್ಟ್ ಬಂದ ನಂತರದ 7 ನೇ ದಿನಕ್ಕೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾಡುವುದು ಗಡಿ ಜಿಲ್ಲೆಗಳಲ್ಲಿ ಮೂರು ಶಿಫ್ಟ್‌ಗಳಲ್ಲಿ ಕೆಲಸ ಮಾಡುವಂತೆ ಡಿಸಿಗಳಿಗೆ ಸೂಚನೆ. ಇದಕ್ಕೆ ಎಲ್ಲ ಇಲಾಖೆಗಳ ಸಹಕಾರ ಪಡೆಯಬೇಕು. ಈ ಎಲ್ಲಾ ವಿಚಾರಗಳ ಕುರಿತಾಗಿ ಇಂದಿನ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಹೇಳಿದ್ದಾರೆ.