Tag: ವೈ ಭದ್ರತೆ

  • ರಾಮಾನುಜ ಜೀಯರ್ ಸ್ವಾಮೀಜಿಗೆ Y ಶ್ರೇಣಿಯ ಭದ್ರತೆ

    ರಾಮಾನುಜ ಜೀಯರ್ ಸ್ವಾಮೀಜಿಗೆ Y ಶ್ರೇಣಿಯ ಭದ್ರತೆ

    ಬೆಂಗಳೂರು: ಮೇಲುಕೋಟೆಯ ಯದುಗಿರಿ ಮಠದ ಪೀಠಾಧಿಪತಿ ಯತಿರಾಜ ರಾಮಾನುಜ ಜೀಯರ್ ಸ್ವಾಮೀಜಿ ಅವರಿಗೆ (Ramanujacharya Jeeyar Swamiji Melukote) ಕೇಂದ್ರ ಗೃಹ ಸಚಿವಾಲಯ ವೈ ಕೆಟಗರಿ ಭದ್ರತೆ (Y Category Security) ನೀಡಿದೆ.

    ಯದುಗಿರಿ ಮಠದಿಂದ ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ವಿಶಿಷ್ಟಾದ್ವೈತ ತತ್ವದ ಜನಕರಾದ ರಾಮಾನುಜಾಚಾರ್ಯರ ಪ್ರತಿಮೆಯನ್ನು 2022ರ ಜುಲೈನಲ್ಲಿ ಲೋಕಾರ್ಪಣೆ ಮಾಡಲಾಗಿತ್ತು.

    ಪ್ರತಿಮೆ ಲೋಕಾರ್ಪಣೆ ಮಾಡಿದ ಬಳಿಕ ನಿಷೇಧಿತ ಸಂಘಟನೆಯ ಸದಸ್ಯರು ಮೇಲುಕೋಟೆಯ ರಾಮಾನುಜ ಜೀಯರ್ ಸ್ವಾಮೀಜಿಗೆ ಜೀವ ಬೆದರಿಕೆ ಹಾಕಿದ್ದರು. ಇಂಟರ್​ನೆಟ್ ಕರೆ ಮಾಡಿ ದುಷ್ಕರ್ಮಿಗಳು ಬೆದರಿಕೆ ಹಾಕುತ್ತಿರುವ ಹಿನ್ನೆಲೆಯಲ್ಲಿ ಶ್ರೀಗಳಿಗೆ ವೈ ಕೆಟಗರಿ ಭದ್ರತೆ ಕಲ್ಪಿಸಲಾಗಿದೆ. ಇದನ್ನೂ ಓದಿ: ಫೆ.14 – ಹಸುಗಳನ್ನಪ್ಪಿಕೊಳ್ಳೊ ದಿನ ಆಚರಿಸಲು ಪ್ರಾಣಿ ಕಲ್ಯಾಣ ಮಂಡಳಿ ಕರೆ

    ಗುಪ್ತಚರ ಇಲಾಖೆಯ  ಬೆದರಿಕೆ ಗ್ರಹಿಕೆ ವರದಿಯ ಆಧಾರದ ಮೇಲೆ ಗೃಹ ಸಚಿವಾಲಯ (Ministry of Home Affairs) ಭದ್ರತೆಯನ್ನು ನೀಡಿದೆ. ಕರ್ನಾಟಕ, ತೆಲಂಗಾಣ ಮತ್ತು ಆಂಧ್ರಪ್ರದೇಶ ಸೇರಿದಂತೆ ಇತರ ರಾಜ್ಯಗಳಲ್ಲಿ ರಾಮಾನುಜ ಜೀಯರ್ ಸ್ವಾಮೀಜಿ ಅವರಿಗೆ ವೈ ಕೆಟಗರಿ ಭದ್ರತೆ ಸಿಗಲಿದೆ. ಒಟ್ಟು 8-10 ಭದ್ರತಾ ಸಿಬ್ಬಂದಿ 24×7 ಸಮಯದಲ್ಲಿ ಭದ್ರತೆಯಲ್ಲಿರುತ್ತಾರೆ.

    ಪ್ರಸ್ತುತ ಈಗ ಯತಿರಾಜ ರಾಮಾನುಜ ಜೀಯರ್ ಸ್ವಾಮೀಜಿ ಬೆಂಗಳೂರಿನ ಮಲ್ಲೇಶ್ವರಂ ಶಾಖಾ ಮಠದಲ್ಲಿ ವಾಸ್ತವ್ಯ ಹೊಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕೇಜ್ರಿವಾಲ್‌ ವಿರುದ್ಧ ಹೇಳಿಕೆ – ಎಎಪಿ ಮಾಜಿ ನಾಯಕನಿಗೆ ʼವೈʼ ಶ್ರೇಣಿ ಭದ್ರತೆ

    ಕೇಜ್ರಿವಾಲ್‌ ವಿರುದ್ಧ ಹೇಳಿಕೆ – ಎಎಪಿ ಮಾಜಿ ನಾಯಕನಿಗೆ ʼವೈʼ ಶ್ರೇಣಿ ಭದ್ರತೆ

    ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಪ್ರತ್ಯೇಕತಾವಾದಿ ಎಂದು ಹೇಳಿಕೆ ನೀಡಿದ್ದ ಆಮ್‌ ಆದ್ಮಿ ಪಕ್ಷದ (ಎಎಪಿ) ಕುಮಾರ್‌ ವಿಶ್ವಾಸ್‌ ಅವರಿಗೆ ʼವೈʼ ಶ್ರೇಣಿ ಭದ್ರತೆ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

    ಎಎಪಿ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ವಿರುದ್ಧ ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ವಿಶ್ವಾಸ್‌ ಅವರಿಗೆ ಬೆದರಿಕೆ ಇದೆ ಎಂದು ಭದ್ರತೆ ಮತ್ತು ಗುಪ್ತಚರ ಮಾಹಿತಿ ಆಧರಿಸಿ ಭದ್ರತೆ ಒದಗಿಸಲು ಮುಂದಾಗಿದೆ. ಇದನ್ನೂ ಓದಿ: ಕೇಜ್ರಿವಾಲ್‍ಗೆ ಖಾಲಿಸ್ತಾನ್ ಉಗ್ರರ ನಂಟು – ತನಿಖೆ ನಡೆಸುತ್ತೇವೆ ಎಂದ ಅಮಿತ್ ಶಾ

    ಪರಿಶೀಲನೆಯ ನಂತರ, ಕೇಂದ್ರ ಮೀಸಲು ಪೊಲೀಸ್‌ ಪಡೆ (ಸಿಆರ್‌ಪಿಎಫ್‌) ಮೂಲಕ ವಿಶ್ವಾಸ್‌ ಅವರಿಗೆ ʼವೈʼ ಶ್ರೇಣಿಯ ಭದ್ರತೆ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

    ಪಂಜಾಬ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಕೇಜ್ರಿವಾಲ್‌ ಅವರು ಪ್ರತ್ಯೇಕತಾವಾದಿಗಳನ್ನು ಬೆಂಬಲಿಸುತ್ತಾರೆ ಎಂದು ವಿಶ್ವಾಸ್‌ ಆರೋಪಿಸಿದ್ದರು. ಆದರೆ ಈ ಆರೋಪಗಳನ್ನು ಕೇಜ್ರಿವಾಲ್‌ ತಳ್ಳಿಹಾಕಿದ್ದಾರೆ. ಇದನ್ನೂ ಓದಿ: ಪಂಜಾಬ್‍ನನ್ನು ಕಾಂಗ್ರೆಸ್ ಲೂಟಿ ಮಾಡುತ್ತಿದೆ: ಅರವಿಂದ್ ಕೇಜ್ರಿವಾಲ್

    ಪಂಜಾಬ್‌ ವಿಧಾನಸಭಾ ಚುನಾವಣೆಗೆ ಫೆ.20 ರಂದು ಮತದಾನ ನಡೆಯಲಿದೆ. ಮಾ.10 ರಂದು ಫಲಿತಾಂಶ ಹೊರ ಬೀಳಲಿದೆ.