Tag: ವೈ ಶ್ರೇಣಿ ಭದ್ರತೆ

  • ‘ವೈ’ ಭದ್ರತೆಯಲ್ಲಿ ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕನ ವಾಕಿಂಗ್

    ‘ವೈ’ ಭದ್ರತೆಯಲ್ಲಿ ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕನ ವಾಕಿಂಗ್

    ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರಿಗೆ ಕೇಂದ್ರ ಸರಕಾರ ‘ವೈ’ ಶ್ರೇಣಿಯ ಭದ್ರತೆಯನ್ನು ನೀಡಿದೆ. ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಬಂದ ನಂತರ ಅವರ ಜೀವಕ್ಕೆ ಅಪಾಯವಿದೆ ಎನ್ನುವ ಕಾರಣಕ್ಕಾಗಿ ಈ ಭದ್ರತೆಯನ್ನು ನೀಡಲಾಗಿದ್ದು, ವಿವೇಕ್ ಎಲ್ಲಿಗೆ ಹೋದರೂ ಹಿಂದೆಯೇ ಭದ್ರತಾ ಸಿಬ್ಬಂದಿ ಹೋಗುತ್ತದೆ. ಇಂಥದ್ದೊಂದು ವಿಡಿಯೋವನ್ನು ಸ್ವತಃ ವಿವೇಕ್ ಅಗ್ನಿಹೋತ್ರಿ ಅವರೇ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

    ವಿವೇಕ್ ಅಗ್ನಿಹೋತ್ರಿ ಮನೆಯಿಂದ ಆಚೆ ಕಾಲಿಟ್ಟರೆ, ಅವರು ಎಲ್ಲಿಗೆ ಹೋದರೂ, ಹಿಂದೆಯೇ ಭದ್ರತಾ ಸಿಬ್ಬಂದಿ ಹೋಗಲೇಬೇಕು. ಹಾಗಾಗಿ ವಿವೇಕ್ ವಾಕಿಂಗ್ ಮಾಡುವಾಗಲೂ ಅವರು ಜೊತೆಯಲ್ಲೇ ಇದ್ದಾರೆ. ಆ ವಿಡಿಯೋವನ್ನು ವಿವೇಕ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಂತೆಯೇ ಹಲವರು ನೆಗೆಟಿವ್ ಕಾಮೆಂಟ್ ಮಾಡಿದ್ದಾರೆ. ಇವರಿಗೆ ‘ವೈ’ ಭದ್ರತೆ ಕೊಡುವುದಕ್ಕೆ ಅಂತಹ ಘನಂದಾರಿ ಕೆಲಸವನ್ನು ಏನು ಮಾಡಿದ್ದಾರೆ ಎಂದು ಕೇಳಿದ್ದಾರೆ.

    ಇನ್ನೂ ಕೆಲವರು ನಮ್ಮ ತೆರಿಗೆ ಹಣ ಎಲ್ಲಿ ಖಾಲಿ ಆಗುತ್ತಿದೆ ಅಂತ ಕಣ್ತುಂಬಿಕೊಳ್ಳಿ. ಜನರ ತೆರಿಗೆ ಹಣದಲ್ಲಿ ಇಂಥವರು ಭದ್ರತೆ ಇಟ್ಟುಕೊಂಡು ಶೋಕಿ ಮಾಡುತ್ತಾರೆ ಎಂದು ಕಾಲೆಳೆದಿದ್ದಾರೆ. ಈ ಕುರಿತು ವಿವೇಕ್ ಯಾವುದೇ ಪ್ರತಿಕ್ರಿಯೆ ನೀಡದೇ ಇದ್ದರೂ, ಭದ್ರತೆಯೊಂದಿಗೆ ವಾಕ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅನೇಕರು ಅನೇಕ ರೀತಿಯಲ್ಲಿ ಅದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: ‘ಪುಷ್ಪಾ 2’ ಟೀಮ್ ಸೇರಿಕೊಂಡ ನಟಿ ಸಾಯಿ ಪಲ್ಲವಿ: ರಶ್ಮಿಕಾ ಮಂದಣ್ಣ ಪಾತ್ರವೇನು?

    kashmir

    ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ರಿಲೀಸ್ ನಂತರ ವಿವೇಕ್ ಅಗ್ನಿಹೋತ್ರಿ ಕುರಿತಾಗಿ ಅನೇಕರು ಪರ ಮತ್ತು ವಿರೋಧದ ಮಾತುಗಳನ್ನು ಆಡಿದ್ದರು. ಇನ್ನೂ ಈ ಸಿನಿಮಾ ಬಗ್ಗೆ ಚರ್ಚೆ ಆಗುತ್ತಲೇ . ಕೆಲವರು ಸೋಷಿಯಲ್ ಮೀಡಿಯಾ ಮೂಲಕ ವಿವೇಕ್ ಅವರಿಗೆ ಬೆದರಿಕೆಯನ್ನೂ ಹಾಕಿದ್ದರು. ಈ ಎಲ್ಲವನ್ನೂ ಪರಿಗಣಿಸಿ ಕೇಂದ್ರ ಸರಕಾರ ಅವರಿಗೆ ವೈ ಶ್ರೇಣಿಯ ಭದ್ರತೆಯನ್ನು ನೀಡಿದೆ.

    Live Tv
    [brid partner=56869869 player=32851 video=960834 autoplay=true]

  • ಹಿಜಬ್‌ ತೀರ್ಪು- ಹೈಕೋರ್ಟ್‌ ಜಡ್ಜ್‌ಗಳಿಗೆ ʼವೈʼ ಭದ್ರತೆ

    ಹಿಜಬ್‌ ತೀರ್ಪು- ಹೈಕೋರ್ಟ್‌ ಜಡ್ಜ್‌ಗಳಿಗೆ ʼವೈʼ ಭದ್ರತೆ

    ಬೆಂಗಳೂರು: ಹಿಜಬ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿದ ಹೈಕೋರ್ಟ್‌ ನ್ಯಾಯಮೂರ್ತಿಗಳಿಗೆ ಜೀವ ಬೆದರಿಕೆ ಎದುರಾಗಿರುವ ಹಿನ್ನೆಲೆಯಲ್ಲಿ ಅವರಿಗೆ ʼವೈʼ ಶ್ರೇಣಿಯ ಭದ್ರತೆ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

    ಹಿಜಾಬ್ ತೀರ್ಪು ನೀಡಿದ ಮೂವರೂ ನ್ಯಾಯಮೂರ್ತಿಗಳಿಗೆ ʻವೈʼ ಶ್ರೇಣಿ ಭದ್ರತೆ ನೀಡಲು ನಿರ್ಧರಿಸಿದ್ದೇವೆ. ನ್ಯಾಯಮೂರ್ತಿಗಳಿಗೆ ಕೆಲವರು ಜೀವ ಬೆದರಿಕೆ ಹಾಕಿರುವ ಕುರಿತು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸುವಂತೆ ಪೊಲೀಸ್‌ ಮಹಾನಿರ್ದೇಶಕರು ಹಾಗೂ ಐಜಿ ಅವರಿಗೆ ಸೂಚಿಸಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕರ್ನಾಟಕ ಹೈಕೋರ್ಟ್ ಜಡ್ಜ್‌ಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ಅರೆಸ್ಟ್

    ಮೂವರು ನ್ಯಾಯಮೂರ್ತಿಗಳಲ್ಲಿ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ಕೂಡ ಸೇರಿದ್ದಾರೆ. ಹಿಜಬ್‌ ಬಗ್ಗೆ ತೀರ್ಪು ನೀಡಿದ ತ್ರಿಸದಸ್ಯ ಪೀಠದಲ್ಲಿ ನ್ಯಾಯಮೂರ್ತಿಗಳಾದ ಕೃಷ್ಣ ದೀಕ್ಷಿತ್ ಮತ್ತು ಖಾಝಿ ಎಂ ಜೈಬುನ್ನಿಸಾ ಅವರೂ ಇದ್ದರು.

    ನ್ಯಾಯಮೂರ್ತಿಗಳಿಗೆ ಬೆದರಿಕೆ ಹಾಕಿರುವ ಮೂವರು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬೊಮ್ಮಾಯಿ ಒತ್ತಾಯಿಸಿದರು.

    ಸಮುದಾಯದ ಪರವಾಗಿರುವುದು ಜಾತ್ಯತೀತತೆ ಅಲ್ಲ, ಅದು ಕೋಮುವಾದ. ನಾನು ಇದನ್ನು ಖಂಡಿಸುತ್ತೇನೆ. ನಾವೆಲ್ಲರೂ ಒಟ್ಟಾಗಿ ನಿಲ್ಲಬೇಕು. ಇದನ್ನು ಸರ್ಕಾರ ಖಂಡಿಸುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹಿಜಬ್‌ ತೀರ್ಪು ಪ್ರಕಟಿಸಿದ ಜಡ್ಜ್‌ಗಳಿಗೆ ಕೊಲೆ ಬೆದರಿಕೆ – ಕೇಸ್‌ ದಾಖಲು

    ಹಿಜಬ್‌ ತೀರ್ಪು ಪ್ರಕಟಿಸಿದ ಹೈಕೋರ್ಟ್‌ ನ್ಯಾಯಾಧೀಶರಿಗೆ ತಮಿಳುನಾಡು ಮೂಲದ ಮತೀಯ ಸಂಘಟನೆಯೊಂದು ಕೊಲೆ ಬೆದರಿಕೆ ಹಾಕಿದೆ. ತೌಹೀದ್‌ ಜಮಾತ್‌ ಸಂಘಟನೆ ಬೆದರಿಕೆ ಹಾಕಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ವಿಡಿಯೋ ವೈರಲ್‌ ಬೆನ್ನಲೇ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ಸಂಘಟನೆ ವಿರುದ್ಧ ಪ್ರಕರಣ ದಾಖಲಾಗಿದೆ.

    ತರಗತಿಗಳಲ್ಲಿ ಹಿಜಬ್‌ ಧರಿಸಿ ಹೋಗುವಂತಿಲ್ಲ. ಸಮವಸ್ತ್ರ ನಿಯಮ ಪಾಲನೆ ಮಾಡಬೇಕು ಎಂದು ಈಚೆಗೆ ತೀರ್ಪು ನೀಡಿದ್ದ ಹೈಕೋರ್ಟ್‌, ಹಿಜಬ್‌ ಪರವಾಗಿ ಸಲ್ಲಿಕೆಯಾಗಿದ್ದ ಎಲ್ಲಾ ಅರ್ಜಿಗಳನ್ನು ತಿರಸ್ಕರಿಸಿತ್ತು. ಇದನ್ನೂ ಓದಿ: ಭಗವದ್ಗೀತೆ ಹೊಟ್ಟೆ ತುಂಬಿಸುವುದಿಲ್ಲ, ತಲೆಯನ್ನು ತುಂಬಿಸುತ್ತದೆ: ಪ್ರತಾಪ್‍ಸಿಂಹ

    ವೈ ಶ್ರೇಣಿ ಭದ್ರತೆ ಹೇಗಿರುತ್ತೆ?
    ವೈ ಶ್ರೇಣಿಯಲ್ಲಿ ಒಬ್ಬರು ಅಥವಾ ಇಬ್ಬರು ಕಮಾಂಡೋಗಳು ಮತ್ತು ಪೊಲೀಸ್ ಸಿಬ್ಬಂದಿ ಸೇರಿದಂತೆ 8 ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗುವುದು.

  • ಪೇಜಾವರ ವಿಶ್ವಪ್ರಸನ್ನ ತೀರ್ಥರಿಗೆ ವೈ ಸೆಕ್ಯೂರಿಟಿ- ರಾಜ್ಯ ಸರ್ಕಾರಕ್ಕೆ ಮಠ ಧನ್ಯವಾದ

    ಪೇಜಾವರ ವಿಶ್ವಪ್ರಸನ್ನ ತೀರ್ಥರಿಗೆ ವೈ ಸೆಕ್ಯೂರಿಟಿ- ರಾಜ್ಯ ಸರ್ಕಾರಕ್ಕೆ ಮಠ ಧನ್ಯವಾದ

    ಉಡುಪಿ: ಅಯೋಧ್ಯೆ ಶ್ರೀ ರಾಮ ಜನ್ಮ ಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ವಿಶ್ವಸ್ಥ ಉಡುಪಿ ಪೇಜಾವರ ಮಠಾಧೀಶ ವಿಶ್ವಪ್ರಸನ್ನತೀರ್ಥ ಶ್ರೀಪಾದರಿಗೆ ರಾಜ್ಯ ಸರ್ಕಾರ ವೈ ಶ್ರೇಣಿಯ ಭದ್ರತೆ ಮಂಜೂರು ಮಾಡಿದೆ.

    ರಾಮಮಂದಿರ ನಿರ್ಮಾಣದ ಜನಜಾಗೃತಿ ಅಭಿಯಾನದಲ್ಲಿ ನಿರತಾಗಿರುವ ಶ್ರೀಗಳು, ದೇಶಾದ್ಯಂತ ಸಂಚಾರ ಕೈಗೊಂಡಿದ್ದಾರೆ. ಅಲ್ಲಲ್ಲಿ ಸಭೆ, ಸಮಾರಂಭ, ಕಾರ್ಯಕ್ರಮ ಉದ್ಘಾಟನೆ, ಧನ ಸಂಗ್ರಹ ಕಚೇರಿ ತೆರೆಯುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಅವರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಉಡುಪಿ ಶಾಸಕ ಕೆ.ರಘುಪತಿ ಭಟ್ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು.

    ಸೂಕ್ತ ಭಧ್ರತೆ ಒದಗಿಸುವ ಶಾಸಕರ ಮನವಿಗೆ ತ್ವರಿತವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಪೇಜಾವರಶ್ರೀ ಗಳಿಗೆ ವೈ ಶ್ರೇಣಿಯ ಭದ್ರತೆಯನ್ನು ಒದಗಿಸಿದ್ದಾರೆ. ಸ್ವಾಮೀಜಿಯವರ ವಾಹನಕ್ಕೆ ಇನ್ನು ಒಂದು ಪೊಲೀಸ್ ಬೆಂಗಾವಲು ವ್ಯವಸ್ಥೆ ಇರಲಿದೆ.

    ಭದ್ರತೆ ನೀಡಿದ್ದಕ್ಕೆ ಸಿಎಂ ಯಡುಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಉಡುಪಿ ಶಾಸಕ ರಘುಪತಿ ಭಟ್ ಹಾಗೂ ರಾಜ್ಯ ಪೋಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ಉಡುಪಿ ಪೇಜಾವರ ಮಠ ಕೃತಜ್ಞತೆ ಸಲ್ಲಿಸಿದೆ.