Tag: ವ್ಯಾಕ್ಸಿನೇಷನ್

  • ರಾಜ್ಯದಲ್ಲಿ ಇಂದಿನಿಂದ ಕೋವಿಡ್ ವ್ಯಾಕ್ಸಿನೇಷನ್ ಆರಂಭ – ಯಾವ ಜಿಲ್ಲೆಗೆ ಎಷ್ಟು ಡೋಸ್ ಹಂಚಿಕೆಯಾಗಿದೆ?

    ರಾಜ್ಯದಲ್ಲಿ ಇಂದಿನಿಂದ ಕೋವಿಡ್ ವ್ಯಾಕ್ಸಿನೇಷನ್ ಆರಂಭ – ಯಾವ ಜಿಲ್ಲೆಗೆ ಎಷ್ಟು ಡೋಸ್ ಹಂಚಿಕೆಯಾಗಿದೆ?

    ಬೆಂಗಳೂರು: ಕೋವಿಶೀಲ್ಡ್ (Covishield) ಅಥವಾ ಕೊವ್ಯಾಕ್ಸಿನ್ (Covaxin) 2ನೇ ಲಸಿಕೆ ಪಡೆದವರಿಗೆ ನೀಡಲು ಕೇಂದ್ರ ಸರ್ಕಾರವು ರಾಜ್ಯಕ್ಕೆ 30,000 ಡೋಸ್ ಕಾರ್ಬೆವ್ಯಾಕ್ಸ್ (Corbevax) ಲಸಿಕೆಯನ್ನು ಸರಬರಾಜು ಮಾಡಿದೆ.

    ಈ ಲಸಿಕೆಯನ್ನು ವಿಜಾತಿ (ಹೆಟೆರೊಲಾಗಸ್) ಮುನ್ನೆಚ್ಚರಿಕೆಯಾಗಿ ನೀಡಬಹುದು. ತಾಂತ್ರಿಕ ಸಲಹಾ ಸಮಿತಿಯ ಶಿಫಾರಸಿನಂತೆ ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಲಸಿಕೆಯ 2ನೇ ಡೋಸ್ ಪಡೆದು ಆರು ತಿಂಗಳು ಅಥವಾ 26 ತಿಂಗಳು ಪೂರೈಸಿದ ಬಳಿಕವೂ ಮುನ್ನೆಚ್ಚರಿಕೆ ಡೋಸ್ ಪಡೆಯದವರಿಗೆ ಈ ಲಸಿಕೆ ನೀಡಬಹುದು. ಇದನ್ನೂ ಓದಿ: ವರ್ಷದ ಮೊದಲ ದಿನವೇ ಬಿಎಂಟಿಸಿಗೆ 4.37 ಕೋಟಿ ಆದಾಯ

    60 ವರ್ಷ ದಾಟಿದವರು, ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು ಈ ಲಸಿಕೆಯನ್ನು ಪಡೆಯಬಹುದು. ಕೋವಿಡ್-19 ಲಸಿಕಾಕರಣದ ಮಾರ್ಗಸೂಚಿಯಂತೆಯೇ ಈ ಲಸಿಕೆಯನ್ನು ನೀಡಲಾಗುವುದು. ಜಿಲ್ಲಾ ಆಸ್ಪತ್ರೆಗಳು ಮತ್ತು ಜಿಲ್ಲಾ ಮಟ್ಟದಲ್ಲಿ ನಿರ್ಣಯಿಸಲಾದ ತಾಲೂಕು ಆಸ್ಪತ್ರೆಗಳಿಗೆ ಮಾತ್ರ ಹಂಚಿಕೆ ಮಾಡಿ ಲಸಿಕಾಕರಣ ಹಮ್ಮಿಕೊಳ್ಳಲಾಗಿದೆ. ಇದನ್ನೂ ಓದಿ: ಆಪ್ತರಿಗೆ ಸಿಬಿಐ ನೋಟಿಸ್‌- ಪೊಲಿಟಿಕಲ್‌ ಸೇಫ್‌ ಗೇಮ್‌ ಆಡಲು ಮುಂದಾದ ಡಿಕೆಶಿ

    ಯಾವ ಜಿಲ್ಲೆಗೆ ಎಷ್ಟು ಕಾರ್ಬೆವ್ಯಾಕ್ಸ್ ಡೋಸ್ ಹಂಚಿಕೆ?
    ಬೆಂಗಳೂರು ನಗರ-840, ಬೆಂಗಳೂರು ಗ್ರಾಮಾಂತರ-480, ಬಿಬಿಎಂಪಿ-5,680, ಚಿಕ್ಕಬಳ್ಳಾಪುರ-520, ಕೋಲಾರ-680, ರಾಮನಗರ-440, ತುಮಕೂರು-1,300, ಬೆಳಗಾವಿ-2,280, ಧಾರವಾಡ-920, ಹಾವೇರಿ-780, ಉತ್ತರ ಕನ್ನಡ-660, ಬಳ್ಳಾರಿ-640, ಚಿತ್ರದುರ್ಗ-720, ದಾವಣಗೆರೆ-740, ಶಿವಮೊಗ್ಗ-820,ವಿಜಯನಗರ-560, ಬಾಗಲಕೋಟೆ-900, ವಿಜಯಪುರ-1,000, ಗದಗ-500, ಕೊಪ್ಪಳ-520, ಚಾಮರಾಜನಗರ-440, ಹಾಸನ-720, ಕೊಡಗು-220, ಮಂಡ್ಯ-720, ಮೈಸೂರು-1,360, ಚಿಕ್ಕಮಗಳೂರು-480, ದಕ್ಷಿಣ ಕನ್ನಡ-1,140, ಉಡುಪಿ-520, ಬೀದರ್-840, ಕಲಬುರಗಿ-1,280, ರಾಯಚೂರು-820, ಯಾದಗಿರಿ-480 ಡೋಸ್ ಹಂಚಲಾಗಿದೆ. ಒಟ್ಟು 30,000 ಡೋಸ್ ಲಸಿಕೆಯನ್ನು ಸರಬರಾಜು ಮಾಡಲಾಗಿದೆ. ಇದನ್ನೂ ಓದಿ: ರಾಮಮಂದಿರ ವಿಚಾರದಲ್ಲಿ ಯೋಚಿಸಿ ಮಾತಾಡಿ – ಕೈ ನಾಯಕರಿಗೆ ಹೈಕಮಾಂಡ್‌ ಸೂಚನೆ

  • ಓಮಿಕ್ರಾನ್ ವೈರಸ್‍ಗೆ ಬೆಚ್ಚಿಬಿದ್ದ ಜನ –  ಡಿಸೆಂಬರ್‌ನಲ್ಲಿ ಹೆಚ್ಚು ವ್ಯಾಕ್ಸಿನೇಷನ್

    ಓಮಿಕ್ರಾನ್ ವೈರಸ್‍ಗೆ ಬೆಚ್ಚಿಬಿದ್ದ ಜನ – ಡಿಸೆಂಬರ್‌ನಲ್ಲಿ ಹೆಚ್ಚು ವ್ಯಾಕ್ಸಿನೇಷನ್

    ಬೆಂಗಳೂರು: ರಾಜ್ಯದಲ್ಲಿ ಓಮಿಕ್ರಾನ್ ವೈರಸ್ ಕೇಸ್ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಜನರು ಬೆಚ್ಚಿಬಿದ್ದಿದ್ದಾರೆ. ಪರಿಣಾಮ ಅಕ್ಟೋಬರ್, ನವೆಂಬರ್‌ಗಿಂತ ಡಿಸೆಂಬರ್ ನಲ್ಲಿ ಲಸಿಕೆ ಪ್ರಮಾಣ ಏರಿಕೆಯಾಗಿದೆ.

    ವ್ಯಾಕ್ಸಿನೇಷನ್ ಕುರಿತು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಅಕ್ಟೋಬರ್, ನವೆಂಬರ್ ಗಿಂತ ಡಿಸೆಂಬರ್ ನಲ್ಲಿ ಹೆಚ್ಚಿದ ಜನರು ವ್ಯಾಕ್ಸಿನೇಷನ್ ಪಡೆದುಕೊಳ್ಳುತ್ತಿದ್ದಾರೆ. ಡಿಸೆಂಬರ್ ತಿಂಗಳಲ್ಲಿ ಒಂದು ಕೋಟಿಗೂ ಅಧಿಕ ಡೋಸ್ ವ್ಯಾಕ್ಸಿನ್ ಹಾಕಲಾಗಿದೆ ಎಂದು ತಿಳಿಸಿದೆ. ಇದನ್ನೂ ಓದಿ: 14 ತಿಂಗಳ ನಂತರ ಭೇಟಿ – ಪಾಲಕನನ್ನು ಸುತ್ತುವರೆದು ಸೊಂಡಿಲಿನಿಂದ ಅಪ್ಪಿಕೊಂಡ ಆನೆಗಳು

    ಆರೋಗ್ಯ ಇಲಾಖೆಯು ಪ್ರಕಟಿಸಿದ ವಿವರಣೆಯಲ್ಲಿ, ಅಕ್ಟೋಬರ್ ತಿಂಗಳಲ್ಲಿ 84,75,785 ಡೋಸ್ ವ್ಯಾಕ್ಸಿನೇಶನ್ ಆಗಿದ್ದು, ನವೆಂಬರ್ ತಿಂಗಳಲ್ಲಿ 91,15,528 ಡೋಸ್ ವ್ಯಾಕ್ಸಿನೇಶನ್ ಆಗಿದೆ. ಆದರೆ ಈ ತಿಂಗಳು ಅಂದರೆ ಡಿಸೆಂಬರ್‌ನಲ್ಲಿ ಬರೋಬ್ಬರಿ 1,01,57,732 ಡೋಸ್ ವ್ಯಾಕ್ಸಿನ್ ಹಾಕಲಾಗಿದೆ ಎಂದು ತಿಳಿಸಿದೆ.

    ಕೊರೊನಾ ರೂಪಾಂತರಿ ಓಮಿಕ್ರಾನ್ ವೈರಸ್ ರಾಜ್ಯದಲ್ಲಿ ಪತ್ತೆಯಾಗ್ತಿದ್ದಂತೆ ಜನರು ವ್ಯಾಕ್ಸಿನ್ ಗೆ ಮುಗಿಬಿದ್ದಿದ್ರು. ಹೀಗಾಗಿ ಹೆಚ್ಚಿನ ಸಂಖ್ಯೆಯ ಜನ ಲಸಿಕೆಯನ್ನು ಪಡೆಯುತ್ತಿದ್ದಾರೆ.

  • ಜನವರಿಯಿಂದ ಮಕ್ಕಳಿಗೂ ಸಿಗಲಿದೆ ಲಸಿಕೆ?

    ಜನವರಿಯಿಂದ ಮಕ್ಕಳಿಗೂ ಸಿಗಲಿದೆ ಲಸಿಕೆ?

    ನವದೆಹಲಿ: ಮಕ್ಕಳಿಗೆ ಮುಂದಿನ ಜನವರಿಯಿಂದ ಲಸಿಕೆ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳನ್ನು ಆಧಾರಿಸಿ ಮಾಧ್ಯಮವೊಂದು ವರದಿ ಮಾಡಿದೆ.

    ರಾಷ್ಟ್ರೀಯ ತಾಂತ್ರಿಕ ಸಲಹೆ ಸಮಿತಿ ಭಾರತದಾದ್ಯಂತ ಮಕ್ಕಳಿಗೆ ಕೋವಿಡ್-19 ಲಸಿಕೆಯನ್ನು ನೀಡಲು ಸಭೆಯನ್ನು ನಡೆಸುತ್ತಿದೆ. ಈ ಸಭೆಯ ಪ್ರಕಾರ  2022ರ ಜನವರಿಯಲ್ಲಿ ಲಸಿಕೆಯನ್ನು ಮಕ್ಕಳಿಗೆ ಡಬಹುದು. ಮಾರ್ಚ್ ಒಳಗಡೆ ದೇಶದ ಎಲ್ಲ ಮಕ್ಕಳಿಗೆ ಲಸಿಕೆ ನೀಡಬೇಕೆಂಬ ಗುರಿಯನ್ನು ಹಾಕಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಲಿಂಗ ತಾರತಮ್ಯವಿಲ್ಲದೇ ಒಂದೇ ರೀತಿ ಸಮವಸ್ತ್ರ ನೀಡಿದ ಕೇರಳ ಶಾಲೆ

    ಭಾರತ್ ಬಯೋಟೆಕ್‍ನ ಕೋವಾಕ್ಸಿನ್ ಲಸಿಕೆಯನ್ನು 2-18 ವರ್ಷ ವಯಸ್ಸಿನ ಮಕ್ಕಳಿಗೆ ಅನುಮೋದಿಸಿದ ನಂತರವೇ ಸರ್ಕಾರವು ಮಕ್ಕಳಿಗೆ ಕೋವಿಡ್ ಲಸಿಕೆಯನ್ನು ಪ್ರಾರಂಭಿಸುವ ಸಾಧ್ಯತೆಯಿದೆ. ಕೋವಾಕ್ಸಿನ್ ಲಸಿಕೆಯನ್ನು ಈಗಾಗಲೇ 2-18 ವರ್ಷ ವಯಸ್ಸಿನ ಮಕ್ಕಳಿಗೆ ಬಳಸಲು ಶಿಫಾರಸ್ಸು ಮಾಡಲಾಗಿದೆ. ಆದರೆ ಭಾರತೀಯ ಔಷಧ ನಿಯಂತ್ರಣ ಸಂಸ್ಥೆ(ಡಿಸಿಜಿಐ) ಮಕ್ಕಳಿಗೆ ಲಸಿಕೆ ನೀಡುವ ಸಂಬಂಧ ಇನ್ನೂ ಅನುಮತಿ ನೀಡಿಲ್ಲ.

    ಅಮೆರಿಕದಲ್ಲಿ ಎಲ್ಲ ವಯಸ್ಕರು ಈಗ ಕೋವಿಡ್-19 ಲಸಿಕೆಯ ಬೂಸ್ಟರ್‌ ಡೋಸ್‍ಗಳನ್ನು ಪಡೆದುಕೊಂಡಿದ್ದಾರೆ. ಇದೇ ರೀತಿ ಇತರ ರಾಷ್ಟ್ರಗಳು ಸಹ ಅನುಸರಿಸುತ್ತಿವೆ. ಭಾರತದಲ್ಲಿ ಕೋವಿಡ್-19 ಲಸಿಕೆಗಳ ಬೂಸ್ಟರ್ ಶಾಟ್‍ಗಳನ್ನು ಮೊದಲು ಹಿರಿಯರು ಮತ್ತು ರೋಗಗಳಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ನೀಡಲು ಚಿಂತನೆ ನಡೆದಿದೆ. ಇದನ್ನೂ ಓದಿ:  ಬೇರೆಯವರ ವ್ಯಾಕ್ಸಿನೇಷನ್ ಮಾಹಿತಿಯನ್ನೂ CoWIN ವೆಬ್‍ಸೈಟ್‍ನಲ್ಲಿ ಚೆಕ್ ಮಾಡಿ

  • ಬೇರೆಯವರ ವ್ಯಾಕ್ಸಿನೇಷನ್ ಮಾಹಿತಿಯನ್ನೂ  CoWIN ವೆಬ್‍ಸೈಟ್‍ನಲ್ಲಿ ಚೆಕ್ ಮಾಡಿ

    ಬೇರೆಯವರ ವ್ಯಾಕ್ಸಿನೇಷನ್ ಮಾಹಿತಿಯನ್ನೂ CoWIN ವೆಬ್‍ಸೈಟ್‍ನಲ್ಲಿ ಚೆಕ್ ಮಾಡಿ

    ನವದೆಹಲಿ: ಈಗ ನಿಮ್ಮ ಲಸಿಕೆ ಮಾಹಿತಿಯ ಜೊತೆಗೆ ಬೇರೆಯವರು ಲಸಿಕೆ ಪಡೆದಿದ್ದಾರಾ ಇಲ್ಲವೋ ಎಂಬ ವಿವರವನ್ನು ನೀವು ಕೋವಿನ್ ವೆಬ್‍ಸೈಟ್‍ನಲ್ಲಿ ಪರಿಶೀಲಿಸಬಹುದು.

    ವ್ಯಾಕ್ಸಿನೇಷನ್ ಮಾಹಿತಿಯನ್ನು ತಿಳಿದುಕೊಳ್ಳಲು CoWIN ಪೋರ್ಟಲ್ ಅನ್ನು ಮತ್ತಷ್ಟು ಅಪ್ಡೇಟ್ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಶನಿವಾರ ಹೇಳಿದೆ.

    ಕೋವಿನ್ ಪೋರ್ಟಲ್ ನಲ್ಲಿ ವ್ಯಕ್ತಿಯ ನೋಂದಾಯಿತ ಮೊಬೈಲ್ ಸಂಖ್ಯೆ ಮತ್ತು ಹೆಸರಿನೊಂದಿಗೆ ವ್ಯಕ್ತಿಯ ವ್ಯಾಕ್ಸಿನೇಷನ್ ಸ್ಥಿತಿಯನ್ನು ಪರಿಶೀಲಿಸಲು ಒಟಿಪಿ ಬರುತ್ತದೆ. ಆ ಮೂಲಕ ನೀವು ನಿಮ್ಮ ವ್ಯಾಕ್ಸಿನೇಷನ್ ಬಗ್ಗೆ ತಿಳಿದುಕೊಳ್ಳಬಹುದು. ಇದನ್ನೂ ಓದಿ:  1.5 ಕೋಟಿ ರೂ. ಮೌಲ್ಯದ ಹಾವಿನ ವಿಷ ಮಾರಾಟ – ಇಬ್ಬರು ಅರೆಸ್ಟ್

    CoWIN ಡಿಜಿಟಲ್ ಪ್ಲಾಟ್‍ಫಾರ್ಮ್‍ನಲ್ಲಿ ‘ನಿಮ್ಮ ವ್ಯಾಕ್ಸಿನೇಷನ್ ಸ್ಥಿತಿಯನ್ನು ತಿಳಿಯಿರಿ’ ಎಂಬ ಹೊಸ ವೈಶಿಷ್ಟ್ಯವನ್ನು ಸಕ್ರಿಯಗೊಳಿಸಲಾಗಿದೆ. Co-WIN/MoHFW ಮೂಲಕ ನಿಮ್ಮ ವ್ಯಾಕ್ಸಿನೇಷನ್ ಬಗ್ಗೆ ಮಾತ್ರವಲ್ಲ ನಿಮ್ಮ ನೆರೆಯವರ ವ್ಯಾಕ್ಸಿನೇಷನ್ ಬಗ್ಗೆಯೂ ಮಾಹಿತಿ ತಿಳಿದುಕೊಳ್ಳಬೇಕು. ಅದು ಅವರು ಓಟಿಪಿಯನ್ನು ಶೇರ್ ಮಾಡಿದರೆ ಮಾತ್ರ ಸಾಧ್ಯವಾಗುತ್ತೆ. ಈ ಪರಿಶೀಲಿಸುವ ಘಟಕದ ಅಧಿಕೃತ ಹಕ್ಕುಗಳ ಪ್ರಕಾರ ನಾಗರಿಕರ ವ್ಯಾಕ್ಸಿನೇಷನ್ ಸ್ಥಿತಿ ಮತ್ತು ವಿವರಗಳನ್ನು ಪರಿಶೀಲಿಸಲು ಅಥವಾ ಹಿಂಪಡೆಯಲು ಇದು ಸಹಾಯ ಮಾಡುತ್ತದೆ ಎಂದು ಸರ್ಕಾರವು ಹೇಳಿಕೆಯಲ್ಲಿ ತಿಳಿಸಿದೆ.

    ಟ್ರಾವೆಲಿಂಗ್ ಏಜೆನ್ಸಿಗಳು, ಕಚೇರಿಗಳು, ಉದ್ಯೋಗದಾತರು, ಮನರಂಜನಾ ಏಜೆನ್ಸಿಗಳು ಅಥವಾ IRCTC  ಎಂತಹ ಸರ್ಕಾರಿ ಏಜೆನ್ಸಿಗಳಂತಹ ಖಾಸಗಿ ಸಂಸ್ಥೆಗಳಿಗೆ ವ್ಯಕ್ತಿಯ ವ್ಯಾಕ್ಸಿನೇಷನ್ ಸ್ಥಿತಿಯನ್ನು ಪರಿಶೀಲಿಸಲು ಈ ಸೇವೆ ಸುಲಭವಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ತಿಳಿಸಿದೆ. ಇದನ್ನೂ ಓದಿ: ಸ್ವಚ್ಛ ಸರ್ವೇಕ್ಷಣೆ 2021- ಸತತ 5ನೇ ಬಾರಿ ಸ್ವಚ್ಛ ನಗರ ಪ್ರಶಸ್ತಿ ಪಡೆದ ಇಂದೋರ್

    ಡಿಜಿಟಲ್ ಅಥವಾ ಕಾಗದದ ರೂಪದಲ್ಲಿ ಲಸಿಕೆ ಪ್ರಮಾಣಪತ್ರವನ್ನು ಹೊಂದಿರದ ನಾಗರಿಕರಿಗೆ ಸಹಾಯ ಮಾಡಲು ಹೊಸ ವಿಶೇಷತೆಯನ್ನು ಸೇರಿಸಲಾಗಿದೆ.

  • ಆದ್ಯತಾ ಗುಂಪು, ಮುಂಚೂಣಿ ಕಾರ್ಯಕರ್ತರ ವ್ಯಾಕ್ಸಿನೇಷನ್ ಪರಿಶೀಲಿಸಿದ ಡಿಸಿಎಂ

    ಆದ್ಯತಾ ಗುಂಪು, ಮುಂಚೂಣಿ ಕಾರ್ಯಕರ್ತರ ವ್ಯಾಕ್ಸಿನೇಷನ್ ಪರಿಶೀಲಿಸಿದ ಡಿಸಿಎಂ

    ಬೆಂಗಳೂರು: ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣರವರು ಬುಧವಾರ ಮಲ್ಲೇಶ್ವರ ವಿಧಾನಸಭೆ ಕ್ಷೇತ್ರದ ವಿವಿಧೆಡೆ ಸಂಚರಿಸಿ, ಕೋವಿಡ್ ಪರಿಸ್ಥಿತಿ ಹಾಗೂ ಮುಂಚೂಣಿ ಕಾರ್ಯಕರ್ತರ ಲಸಿಕೆ ಅಭಿಯಾನವನ್ನು ಪರಿಶೀಲನೆ ನಡೆಸಿದರು.

    ಬೆಳಿಗ್ಗೆಯಿಂದಲೇ ಕ್ಷೇತ್ರದಲ್ಲಿ ಬಿರುಸಿನ ಸಂಚಾರ ಕೈಗೊಂಡ ಡಿಸಿಎಂ, ಮುಖ್ಯವಾಗಿ ಕ್ಷೇತ್ರದಲ್ಲಿನ ಕೋವಿಡ್ ಸ್ಥಿತಿಗತಿಗಳ ಬಗ್ಗೆ ಅಧಿಕಾರಿಗಳು ಮತ್ತು ಸಾರ್ವಜನಿಕರಿಂದ ಮಾಹಿತಿ ಪಡೆದರು. ಸೋಂಕಿನ ಕಾರಣದಿಂದ ದೂರದಿಂದಲೇ ಜನರು ತಮ್ಮ ಅಹವಾಲು ಹೇಳಿಕೊಂಡರು.

    ಜೊತೆಗೆ, ಮುಂಚೂಣಿ ಕಾರ್ಯಕರ್ತರು ಹಾಗೂ ಆದ್ಯತೆಯ ಗುಂಪಿಗೆ ನಡೆಯುತ್ತಿರುವ ಲಸಿಕೆ ಆಭಿಯಾನವನ್ನೂ ವೀಕ್ಷಿಸಿದರಲ್ಲದೆ ಇದಕ್ಕೆ ಇನ್ನೂ ವೇಗ ನೀಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಪ್ಯಾಲೇಸ್ ಗುಟ್ಟಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯುತ್ತಿರುವ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿದರು. ಜೊತೆಗೆ, ಗುಟ್ಟಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹಾಗೂ ಅದರ ಪಕ್ಕದಲ್ಲೇ ಇರುವ ಕೋವಿಡ್ ಕೇರ್ ಕೇಂದ್ರಕ್ಕೂ ಭೇಟಿ ನೀಡಿ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದರು.

    ಮಲ್ಲೇಶ್ವರದ 19ನೇ ಅಡ್ಡರಸ್ತೆಯ ಕಾಶಿಮಠದಲ್ಲಿ ಆದ್ಯತಾ ಗುಂಪಿನಡಿ ವಿಕಲಚೇತನ ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದ್ದು, ಅಲ್ಲಿನ ವ್ಯವಸ್ಥೆಯನ್ನು ಡಿಸಿಎಂ ವೀಕ್ಷಿಸಿದರು. ಅಲ್ಲದೆ, ವ್ಯಾಕ್ಸಿನ್ ಕೊಟ್ಟ ನಂತರವೂ ಆರೋಗ್ಯದ ಮೇಲೆ ನಿಗಾ ಇಡುವಂತೆ ಆರೋಗ್ಯ ಸಿಬ್ಬಂದಿಗೆ ಸೂಚನೆ ಕೊಟ್ಟರು. ಇದೇ ವೇಳೆ ಮಲ್ಲೇಶ್ವರದ 13ನೇ ಅಡ್ಡರಸ್ತೆಯ ರೋಟರಿ ಜಾಗಕ್ಕೂ ಡಿಸಿಎಂ ಭೇಟಿ ನೀಡಿದ್ದರು. ಇದರ ನಡುವೆ ಮಲ್ಲೇಶ್ವರದ 13ನೇ ಅಡ್ಡರಸ್ತೆಯ ಪಬ್ಲಿಕ್ ಶಾಲೆ ಕಟ್ಟಡದ ಕಾಮಗಾರಿ ನಡೆಯುತ್ತಿದ್ದು, ಅದರ ಪ್ರಗತಿಯನ್ನು ವೀಕ್ಷಿಸಿದರು. ನಿಗದಿತ ಕಾಲಕ್ಕೆ ಕಾಮಗಾರಿ ಮುಗಿಯಬೇಕು ಎಂದು ಸಂಬಂಧಿತ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಡಿಸಿಎಂ ಸೂಚನೆ ಕೊಟ್ಟರು.

    ಇನ್ನೊಂದೆಡೆ ಆರೋಗ್ಯ ಕಾರ್ಯಕರ್ತರು ಮನೆಮನೆಗೂ ತೆರಳಿ ರೋಗ ಲಕ್ಷಣ ಇರುವ ಸೋಂಕಿತರನ್ನು ಪತ್ತೆ ಮಾಡುತ್ತಿದ್ದಾರೆ. ಅಗತ್ಯ ಇರುವವರನ್ನು ಕೋವಿಡ್ ಕೇರ್ ಸೆಂಟರ್‍ಗಳಿಗೆ ಶಿಫ್ಟ್ ಮಾಡಿ ಚಿಕಿತ್ಸೆ ಕೊಡುತ್ತಿದ್ದಾರೆ. ಕ್ಷೇತ್ರದಲ್ಲಿ ಕೋವಿಡ್ ನಿರ್ವಹಣೆ ಉತ್ತಮವಾಗಿದೆ ಎಂದು ತಿಳಿಸಿದರು.

  • 30ವರ್ಷ ಮೇಲ್ಪಟ್ಟವರಿಗೆ ಮಾತ್ರ ವ್ಯಾಕ್ಸಿನ್ ವಿತರಣೆ ಮಾಡಲಿ:  ಅಪ್ಪಚ್ಚು ರಂಜನ್

    30ವರ್ಷ ಮೇಲ್ಪಟ್ಟವರಿಗೆ ಮಾತ್ರ ವ್ಯಾಕ್ಸಿನ್ ವಿತರಣೆ ಮಾಡಲಿ: ಅಪ್ಪಚ್ಚು ರಂಜನ್

    ಮಡಿಕೇರಿ: ದೇಶದಲ್ಲಿ ವ್ಯಾಕ್ಸಿನ್ ಕೊರತೆ ಇರುವ ಹಿನ್ನೆಲೆಯಲ್ಲಿ ಸದ್ಯಕ್ಕೆ 30 ವರ್ಷದ ಮೇಲ್ಪಟ್ಟವರಿಗೆ ಮಾತ್ರ ವ್ಯಾಕ್ಸಿನ್ ವಿತರಣೆ ಮಾಡಲಿ ಎಂದು ಅರೋಗ್ಯ ಸಚಿವರಿಗೆ ಮನವಿ ಮಾಡುವುದಾಗಿ ಮಡಿಕೇರಿ ಕ್ಷೇತ್ರದ ಶಾಸಕ ಅಪ್ಪಚ್ಚು ರಂಜನ್ ತಿಳಿಸಿದ್ದಾರೆ.

    ಮಡಿಕೇರಿಯಲ್ಲಿ ಮಾತಾನಾಡಿದ ಅವರು, ದೇಶದಲ್ಲಿ ವ್ಯಾಕ್ಸಿನೇಷನ್ ಕೊರತೆ ಇದೆ. ನಮ್ಮ ರಾಜ್ಯದ 3 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಕೋವಿಡ್ ಸೋಂಕಿತರಿದ್ದಾರೆ. ಸೋಂಕಿನ ಸಂಖ್ಯೆ ಹೆಚ್ಚಾಗುತ್ತಿದೆ. ಇಂತಹ ಸಂದರ್ಭದಲ್ಲಿ ಇದೀಗಾ 18 ರಿಂದ 45 ವರ್ಷದ ಅವರಿಗೆ ಕೋಡಬೇಕು ಎಂದು ಇದೆ.ಅದರೆ ಸದ್ಯಕ್ಕೆ ವ್ಯಾಕ್ಸಿನೇಷನ್ ಕೊರತೆ ಇರುವುದರಿಂದ 30 ವರ್ಷ ಮೇಲ್ಪಟ್ಟವರಿಗೆ ಮಾತ್ರ ವ್ಯಾಕ್ಸಿನ್ ವಿತರಣೆ ಮಾಡಲಿ ಎಂದು ಹೇಳಿದ್ದಾರೆ.

    ಸಾಕಷ್ಟು ವ್ಯಾಕ್ಸಿನ್ ಬಂದ ಬಳಿಕ 18 ವರ್ಷದಿಂದ ಮೇಲ್ಪಟ್ಟ ಎಲ್ಲರಿಗೂ ವಿತರಿಸಲಿ ಈಗಾಗಲೇ ನೊಂದಣಿ ಮಾಡಿಕೊಂಡಿದ್ದರೆ ಅದನ್ನು ಸದ್ಯಕ್ಕೆ ತಡೆಹಿಡಿಯೋದು ಒಳ್ಳೆಯದು. ಈಗಾಗಲೇ ನೊಂದಣಿ ಮಾಡಿದವರಿಗೆ ವ್ಯಾಕ್ಸಿನೇಷನ್ ತಡೆಯಿಡಿಯಲಾಗಿದೆ. ಬಳಿಕ ವ್ಯಾಕ್ಸಿನೇಷನ್ ಹೆಚ್ಚಾಗಿ ಬಂದ ಬಳಿಕ ಮೊದಲ ಆದ್ಯತೆಯಾಗಿ ನೊಂದಣಿ ಮಾಡಿಕೊಂಡ ಯುವ ಸಮೂಹಕ್ಕೆ ನೀಡುವಂತೆ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.