Tag: ಶಂಕರ್ ಕೋನಮಾನಹಳ್ಳಿ

  • ರಾಗಿಣಿ ದ್ವಿವೇದಿ ನಟನೆಯ ‘ಬಿಂಗೊ’ ಚಿತ್ರಕ್ಕೆ ಡಬ್ಬಿಂಗ್ ಮುಕ್ತಾಯ

    ರಾಗಿಣಿ ದ್ವಿವೇದಿ ನಟನೆಯ ‘ಬಿಂಗೊ’ ಚಿತ್ರಕ್ಕೆ ಡಬ್ಬಿಂಗ್ ಮುಕ್ತಾಯ

    ಶಂಭೋ ಶಿವ ಶಂಕರ ಚಿತ್ರ ನಿರ್ದೇಶಿಸಿದ್ದ ಶಂಕರ್ ಕೋನಮಾನಹಳ್ಳಿ (Shankar Konamanahalli) ನಿರ್ದೇಶನದಲ್ಲಿ, ಆರ್ ಕೆ ಚಂದನ್ ಹಾಗೂ ರಾಗಿಣಿ ದ್ವಿವೇದಿ (Ragini Dwivedi) ನಾಯಕ – ನಾಯಕಿಯಾಗಿ ನಟಿಸಿರುವ ‘ಬಿಂಗೊ’ (Bingo) ಚಿತ್ರದ ಡಬ್ಬಿಂಗ್ ಸಾಧುಕೋಕಿಲ ಅವರ ಲೂಪ್ ಸ್ಟುಡಿಯೋದಲ್ಲಿ  ಮುಕ್ತಾಯವಾಗಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ. ಸಸ್ಪೆನ್ಸ್ ಥ್ರಿಲ್ಲರ್ ಜಾನರ್ ನ ಈ ಚಿತ್ರಕ್ಕೆ  ಬೆಂಗಳೂರಿನಲ್ಲೇ ಚಿತ್ರೀಕರಣ ನಡೆದಿದೆ. ಮೇ 24 ರಂದು ನಟಿ ರಾಗಿಣಿ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಬಿಂಗೊ ಚಿತ್ರತಂಡ ರಾಗಿಣಿ ಅವರಿಗೆ ಶುಭಾಶಯ ತಿಳಿಸಿದೆ.

    ಆರ್.ಕೆ ಸ್ಟುಡಿಯೋಸ್ ಮತ್ತು ಮುತರಾ ವೆಂಚರ್ಸ್ ಲಾಂಛನದಲ್ಲಿ ಲಲಿತಾಸ್ವಾಮಿ ಮತ್ತು ಆರ್ ಪರಾಂಕುಶ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.  ರಾಗಿಣಿ ದ್ವಿವೇದಿ, ಆರ್ ಕೆ ಚಂದನ್ ,  ರಾಜೇಶ್ ನಟರಂಗ, ಪವನ್(ಮಜಾ ಟಾಕೀಸ್),  ಮುರಳಿ ಪೂರ್ವಿಕ್, ಅಪೂರ್ವ, ಶ್ರವಣ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

     

    ಹಿತನ್ ಹಾಸನ್ ಸಂಗೀತ ನೀಡಿರುವ ಮೂರು ಹಾಡುಗಳು ಈ ಚಿತ್ರದಲ್ಲಿದೆ. ಸದ್ಯದಲ್ಲೇ ಹಾಡುಗಳು ಹಾಗೂ ಟೀಸರ್ ಬಿಡುಗಡೆಯಾಗಲಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ.  ನಟರಾಜ್ ಮುದ್ದಾಲ್ ಅವರ ಛಾಯಾಗ್ರಹಣವಿರುವ ಈ ಚಿತ್ರದಲ್ಲಿ ಮೈನವಿರೇಳಿಸುವ ಸಾಹಸ ಸನ್ನಿವೇಶಗಳಿದ್ದು, ನರಸಿಂಹ ಸಾಹಸ ನಿರ್ದೇಶನ ಮಾಡಿದ್ದಾರೆ. ಕಂಬಿ ರಾಜು ಅವರ ನೃತ್ಯ ನಿರ್ದೇಶನ ಹಾಗೂ ವೆಂಕಿ udv ಸಂಕಲನ “ಬಿಂಗೊ” ಚಿತ್ರಕ್ಕಿದೆ.

  • ರಾಗಿಣಿ ನಟನೆಯ ‘ಬಿಂಗೊ’ ಸಿನಿಮಾದ ಶೂಟಿಂಗ್ ಮುಕ್ತಾಯ

    ರಾಗಿಣಿ ನಟನೆಯ ‘ಬಿಂಗೊ’ ಸಿನಿಮಾದ ಶೂಟಿಂಗ್ ಮುಕ್ತಾಯ

    ಹಿಂದೆ ಶಂಭೋ ಶಿವ ಶಂಕರ ಚಿತ್ರ ನಿರ್ದೇಶಿಸಿದ್ದ ಶಂಕರ್ ಕೋನಮಾನಹಳ್ಳಿ ನಿರ್ದೇಶನದ, ಆರ್.ಕೆ ಚಂದನ್ (Chandan) ಹಾಗೂ ರಾಗಿಣಿ ದ್ವಿವೇದಿ (Ragini Dwivedi)  ನಾಯಕ – ನಾಯಕಿಯಾಗಿ ನಟಿಸಿರುವ ‘ಬಿಂಗೊ’ (Bingo) ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಸಸ್ಪೆನ್ಸ್ ಥ್ರಿಲ್ಲರ್ ಜಾನರ್ ನ ಈ ಚಿತ್ರಕ್ಕೆ ಬೆಂಗಳೂರಿನಲ್ಲೇ ಚಿತ್ರೀಕರಣ ನಡೆದಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ.

    ಆರ್.ಕೆ ಸ್ಟುಡಿಯೋಸ್ ಮತ್ತು ಮುತರಾ ವೆಂಚರ್ಸ್ ಲಾಂಛನದಲ್ಲಿ ಲಲಿತಾಸ್ವಾಮಿ ಮತ್ತು ಆರ್ ಪರಾಂಕುಶ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.  ಆರ್ ಕೆ ಚಂದನ್ ,  ರಾಗಿಣಿ ದ್ವಿವೇದಿ, ರಾಜೇಶ್ ನಟರಂಗ, ಪವನ್(ಮಜಾ ಟಾಕೀಸ್),  ಮುರಳಿ ಪೂರ್ವಿಕ್, ಅಪೂರ್ವ, ಶ್ರವಣ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

    ಹಿತನ್ ಹಾಸನ್ ಸಂಗೀತ ನೀಡಿರುವ ಮೂರು ಹಾಡುಗಳು ಸುಮಧುರವಾಗಿ ಮೂಡಿಬಂದಿದೆ. ಸದ್ಯದಲ್ಲೇ ಅದ್ದೂರಿ ಸಮಾರಂಭ ಆಯೋಜಿಸಿ ಟ್ರೇಲರ್ ಹಾಗೂ ಹಾಡುಗಳನ್ನು ಬಿಡುಗಡೆ ಮಾಡುವುದಾಗಿ ನಿರ್ದೇಶಕರು ತಿಳಿಸಿದ್ದಾರೆ.

    ನಟರಾಜ್ ಮುದ್ದಾಲ್ ಅವರ ಛಾಯಾಗ್ರಹಣವಿರುವ ಈ ಚಿತ್ರದಲ್ಲಿ ಮೈನವಿರೇಳಿಸುವ ಸಾಹಸ ಸನ್ನಿವೇಶಗಳಿದ್ದು, ನರಸಿಂಹ ಸಾಹಸ ನಿರ್ದೇಶನ ಮಾಡಿದ್ದಾರೆ. ಕಂಬಿ ರಾಜು ಅವರ ನೃತ್ಯ ನಿರ್ದೇಶನ ಹಾಗೂ ವೆಂಕಿ udv ಸಂಕಲನ ಬಿಂಗೊ ಚಿತ್ರಕ್ಕಿದೆ.

  • ರಾಗಿಣಿ ದ್ವಿವೇದಿ ಹುಟ್ಟು ಹಬ್ಬಕ್ಕೆ ‘ಬಿಂಗೋ’ ಪೋಸ್ಟರ್

    ರಾಗಿಣಿ ದ್ವಿವೇದಿ ಹುಟ್ಟು ಹಬ್ಬಕ್ಕೆ ‘ಬಿಂಗೋ’ ಪೋಸ್ಟರ್

    ತುಪ್ಪದ ಹುಡುಗಿ ಎಂದೇ ಖ್ಯಾತರಾಗಿರುವ ರಾಗಿಣಿ ದ್ವಿವೇದಿ ಇಂದು ಹುಟ್ಟು ಹಬ್ಬವನ್ನು (Birthday)  ಆಚರಿಸಿಕೊಳ್ಳುತ್ತಿದ್ದಾರೆ. ಜೈಲಿನಿಂದ ವಾಪಸ್ಸಾದ ನಂತರ ಅವರು ಹಲವು ಸಿನಿಮಾಗಳನ್ನು ಒಪ್ಪಿಕೊಂಡಿದ್ದು ಆ ಚಿತ್ರಗಳಲ್ಲಿ ಬಿಂಗೋ ಕೂಡ ಒಂದು. ಬಿಂಗೋ ಚಿತ್ರತಂಡ ರಾಗಿಣಿ ಹುಟ್ಟು ಹಬ್ಬಕ್ಕೆ ಪೋಸ್ಟರ್ ( Poster) ರಿಲೀಸ್ ಮಾಡಿದೆ. ಖಡಕ್ ಲುಕ್ ನಲ್ಲಿ ತಯಾರಾದ ಪೋಸ್ಟರ್ ಅದಾಗಿದೆ.

    ಶಂಭೋ ಶಿವ ಶಂಕರ ಚಿತ್ರ ನಿರ್ದೇಶಿಸಿದ್ದ ಶಂಕರ್ ಕೋನಮಾನಹಳ್ಳಿ (Shankar Konamanahalli) ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದು, ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಖ್ಯಾತ ನಟಿ ರಾಗಿಣಿ ದ್ವಿವೇದಿ (Ragini Dwivedi) ಅಭಿನಯಿಸುತ್ತಿದ್ದಾರೆ. ನಾಯಕನಾಗಿ ಆರ್ ಕೆ ಚಂದನ್ (R.K.Chandan) ನಟಿಸುತ್ತಿದ್ದಾರೆ. ಇದನ್ನೂ ಓದಿ:‘ರಾನಿ’ ಸಿನಿಮಾ ಸೆಟ್ ನಲ್ಲಿ ನಿರ್ದೇಶಕರ ಹುಟ್ಟುಹಬ್ಬ

    ಈಗಾಗಲೇ ಹಲವು ಹಂತಗಳ ಚಿತ್ರೀಕರಣ ಮುಗಿಸಿರುವ ಬಿಂಗೋ ತಂಡ ಬೆಂಗಳೂರು, ನಗರದ ಹೊರವಲಯದಲ್ಲಿರುವ ದೇವರಾಜ್ ಎಸ್ಟೇಟ್ ಸೇರಿದಂತೆ ಹಲವು ಕಡೆ ಚಿತ್ರೀಕರಣ ಮಾಡಿದೆ. ಆರ್.ಕೆ ಸ್ಟುಡಿಯೋಸ್ ಮತ್ತು ಮುತರಾ ವೆಂಚರ್ಸ್ ಲಾಂಛನದಲ್ಲಿ ಲಲಿತಾಸ್ವಾಮಿ ಮತ್ತು ಆರ್ ಪರಾಂಕುಶ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ರಾಗಿಣಿ ದ್ವಿವೇದಿ, ಆರ್ ಕೆ ಚಂದನ್ (ನಾಯಕ) , ರಕ್ಷಾ ನಿಂಬರ್ಗಿ (ನಾಯಕಿ), ರಾಜೇಶ್ ನಟರಂಗ, ಪವನ್(ಮಜಾ ಟಾಕೀಸ್),  ಮುರಳಿ ಪೂರ್ವಿಕ್, ಅಪೂರ್ವ, ಆಶಾ ಸುಜಯ್, ಶ್ರವಣ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

    ಈ ಚಿತ್ರದಲ್ಲಿ ರಾಗಿಣಿ ದ್ವಿವೇದಿ ಅವರು ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಎರಡು ಶೇಡ್ ಗಳಲ್ಲಿ ಅವರ ಪಾತ್ರವಿರುತ್ತದೆ ಎಂದು ನಿರ್ದೇಶಕರು ತಿಳಿಸಿದ್ದಾರೆ. ಹಿತನ್ ಹಾಸನ್ ಸಂಗೀತ ನಿರ್ದೇಶನವಿರುವ  “ಬಿಂಗೋ” ಚಿತ್ರಕ್ಕೆ  ನಟರಾಜ್ ಮುದ್ದಾಲ್ ಅವರ ಛಾಯಾಗ್ರಹಣವಿದೆ.

  • ‘ಬಿಂಗೋ’ ಚಿತ್ರದ ಡಬಲ್ ಶೇಡ್ ಪಾತ್ರದಲ್ಲಿ ರಾಗಿಣಿ ದ್ವಿವೇದಿ

    ‘ಬಿಂಗೋ’ ಚಿತ್ರದ ಡಬಲ್ ಶೇಡ್ ಪಾತ್ರದಲ್ಲಿ ರಾಗಿಣಿ ದ್ವಿವೇದಿ

    ಶಂಭೋ ಶಿವ ಶಂಕರ ಚಿತ್ರ ನಿರ್ದೇಶಿಸಿದ್ದ ಶಂಕರ್ ಕೋನಮಾನಹಳ್ಳಿ (Shankar Konamanahalli) ಇದೀಗ ಮತ್ತೊಂದು ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದು, ಈ ಚಿತ್ರಕ್ಕೆ ‘ಬಿಂಗೋ’ (Bingo) ಎಂದು ಹೆಸರಿಟ್ಟಿದ್ದಾರೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಖ್ಯಾತ ನಟಿ ರಾಗಿಣಿ ದ್ವಿವೇದಿ (Ragini Dwivedi) ಅಭಿನಯಿಸುತ್ತಿದ್ದಾರೆ. ನಾಯಕನಾಗಿ ಆರ್ ಕೆ ಚಂದನ್ (R.K.Chandan) ನಟಿಸುತ್ತಿದ್ದಾರೆ.

    ಈಗಾಗಲೇ ಎರಡು ಹಂತಗಳ ಚಿತ್ರೀಕರಣ ಮುಗಿಸಿರುವ “ಬಿಂಗೋ ಚಿತ್ರಕ್ಕೆ ಮೂರನೇ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ಸಾಗಿದೆ. ನಗರದ ಹೊರವಲಯದಲ್ಲಿರುವ ದೇವರಾಜ್ ಎಸ್ಟೇಟ್ ನಲ್ಲಿ ಚಿತ್ರೀಕರಣ ನಡೆಯುತ್ತಿದೆ. ರಾಗಿಣಿ ದ್ವಿವೇದಿ, ಆರ್ ಕೆ ಚಂದನ್ ಹಾಗೂ ಚಿತ್ರದಲ್ಲಿ ಅಭಿನಯಿಸಿರುವ ಬಹುತೇಕ ಕಲಾವಿದರು ಈ ಹಂತದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಇದನ್ನೂ ಓದಿ: ಬ್ಯಾಕ್‌ಲೆಸ್ ಫೋಟೋ ಶೇರ್‌, ಇಂಟರ್‌ನೆಟ್‌ಗೆ ಬೆಂಕಿ ಹಚ್ಚಿದ `ಸಲಾರ್’ ನಟಿ

    ಆರ್.ಕೆ ಸ್ಟುಡಿಯೋಸ್ ಮತ್ತು ಮುತರಾ ವೆಂಚರ್ಸ್ ಲಾಂಛನದಲ್ಲಿ ಲಲಿತಾಸ್ವಾಮಿ ಮತ್ತು ಆರ್ ಪರಾಂಕುಶ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ರಾಗಿಣಿ ದ್ವಿವೇದಿ, ಆರ್ ಕೆ ಚಂದನ್ (ನಾಯಕ) , ರಕ್ಷಾ ನಿಂಬರ್ಗಿ (ನಾಯಕಿ), ರಾಜೇಶ್ ನಟರಂಗ, ಪವನ್(ಮಜಾ ಟಾಕೀಸ್),  ಮುರಳಿ ಪೂರ್ವಿಕ್, ಅಪೂರ್ವ, ಆಶಾ ಸುಜಯ್, ಶ್ರವಣ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

    ಈ ಚಿತ್ರದಲ್ಲಿ ರಾಗಿಣಿ ದ್ವಿವೇದಿ ಅವರು ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಎರಡು ಶೇಡ್ ಗಳಲ್ಲಿ ಅವರ ಪಾತ್ರವಿರುತ್ತದೆ ಎಂದು ನಿರ್ದೇಶಕರು ತಿಳಿಸಿದ್ದಾರೆ. ಹಿತನ್ ಹಾಸನ್ ಸಂಗೀತ ನಿರ್ದೇಶನವಿರುವ  “ಬಿಂಗೋ” ಚಿತ್ರಕ್ಕೆ  ನಟರಾಜ್ ಮುದ್ದಾಲ್ ಅವರ ಛಾಯಾಗ್ರಹಣವಿದೆ.

  • ರಾಗಿಣಿ ನಟನೆ ‘ಬಿಂಗೊ’ ಚಿತ್ರಕ್ಕೆ ದ್ವಿತೀಯ ಹಂತದ ಚಿತ್ರೀಕರಣ ಮುಕ್ತಾಯ

    ರಾಗಿಣಿ ನಟನೆ ‘ಬಿಂಗೊ’ ಚಿತ್ರಕ್ಕೆ ದ್ವಿತೀಯ ಹಂತದ ಚಿತ್ರೀಕರಣ ಮುಕ್ತಾಯ

    ಲಿತಾಸ್ವಾಮಿ ಮತ್ತು ಆರ್ ಪರಾಂಕುಶ ನಿರ್ಮಿಸುತ್ತಿರುವ, ಶಂಕರ್ ಕೋನಮಾನಹಳ್ಳಿ (Shankar Konamanahalli) ನಿರ್ದೇಶನದ ‘ಬಿಂಗೋ’ (Bingo) ಚಿತ್ರದ ದ್ವಿತೀಯ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರಿನಲ್ಲಿ ಇಪ್ಪತ್ತಕ್ಕೂ ಅಧಿಕ ದಿನಗಳ ಕಾಲ ಚಿತ್ರೀಕರಣ ನಡೆದಿದೆ. ಅರ್ ಕೆ ಚಂದನ್ (Chandan) (ನಾಯಕ) ರಕ್ಷಾ ನಿಂಬರ್ಗಿ (ನಾಯಕಿ), ರಾಜೇಶ್ ನಟರಂಗ, ಪವನ್(ಮಜಾ ಟಾಕೀಸ್),  ಮುರಳಿ ಪೂರ್ವಿಕ್, ಅಪೂರ್ವ, ಆಶಾ ಸುಜಯ್, ಶ್ರವಣ್ ಮುಂತಾದವರು ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.

    ಈ ಚಿತ್ರದಲ್ಲಿ ರಾಗಿಣಿ ದ್ವಿವೇದಿ ಅವರು ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಎರಡು ಶೇಡ್ ಗಳಲ್ಲಿ ಅವರ ಪಾತ್ರವಿರುತ್ತದೆ. ಫೆಬ್ರವರಿಯಲ್ಲಿ ಮೂರನೇ ಹಂತದ ಚಿತ್ರೀಕರಣ ಆರಂಭವಾಗಲಿದ್ದು, ರಾಗಿಣಿ (Ragini) ಚಿತ್ರೀಕರಣದಲ್ಲಿ ಭಾಗವಹಿಸಲಿದ್ದಾರೆ. ಕಿರುತೆರೆ ಹಿನ್ನೆಲೆಯಿಂದ ಬಂದಿರುವ ಆರ್ ಕೆ ಚಂದನ್ ಈ ಚಿತ್ರದ ಮೂಲಕ ನಾಯಕನಾಗಿ ಹಿರಿತೆರೆ ಪ್ರವೇಶಿಸುತ್ತಿದ್ದಾರೆ. ರಕ್ಷ ನಿಂಬರ್ಗಿ ನಾಯಕಿ. ರಾಜೇಶ್ ನಟರಂಗ, ಮಜಾಟಾಕೀಸ್ ಪವನ್ ಅವರಂತಹ ಅನುಭವಿ ಕಲಾವಿದರು “ಬಿಂಗೋ” ಚಿತ್ರದಲ್ಲಿದ್ದಾರೆ ಎಂದು ನಿರ್ದೇಶಕ ಶಂಕರ್ ಕೋನಮಾನಹಳ್ಳಿ ತಿಳಿಸಿದ್ದಾರೆ. ಇದನ್ನೂ ಓದಿ: ರಾತ್ರಿ 2 ಗಂಟೆಗೆ ಅಸ್ಸಾಂ ಸಿಎಂಗೆ ಶಾರುಖ್‌ ಖಾನ್‌ ಫೋನ್‌ ಕಾಲ್‌

    ಹಿತನ್ ಹಾಸನ್ ಈ ಚಿತ್ರದ ಹಾಡುಗಳಿಗೆ ಸಂಗೀತ ನೀಡಿದ್ದಾರೆ ನಟರಾಜ್ ಮುದ್ದಾಲ್ ‘ಬಿಂಗೋ’ ಚಿತ್ರದ ಛಾಯಾಗ್ರಹಕರಾಗಿದ್ದಾರೆ. ಎರಡು ಹಂತದ ಶೂಟಿಂಗ್ ಮುಗಿಸಿರುವ ಸಿನಿಮಾ ತಂಡ ಸದ್ಯದಲ್ಲೇ ಮೂರನೇ ಹಂತರ ಚಿತ್ರೀಕರಣಕ್ಕೂ ರೆಡಿ ಮಾಡಿಕೊಳ್ಳುತ್ತಿದೆ. ಈ ಹಂತದ ಶೂಟಿಂಗ್ ನಲ್ಲಿ ಪ್ರಮುಖ ದೃಶ್ಯಗಳನ್ನು ಸೆರೆ ಹಿಡಿಯಲಾಗುತ್ತದೆ ಎಂದಿದ್ದಾರೆ ನಿರ್ದೇಶಕರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ಬಿಂಗೊ’ ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟಿಸ್ತಿದ್ದಾರೆ ರಾಗಿಣಿ ದ್ವಿವೇದಿ

    ‘ಬಿಂಗೊ’ ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟಿಸ್ತಿದ್ದಾರೆ ರಾಗಿಣಿ ದ್ವಿವೇದಿ

    ರ್.ಕೆ ಸ್ಟುಡಿಯೋಸ್ ಮತ್ತು ಮುತರಾ ವೆಂಚರ್ಸ್ ಲಾಂಛನದಲ್ಲಿ ಲಲಿತಾಸ್ವಾಮಿ ಮತ್ತು ಆರ್ ಪರಾಂಕುಶ ನಿರ್ಮಿಸುತ್ತಿರುವ, ಶಂಕರ್ ಕೋನಮಾನಹಳ್ಳಿ ನಿರ್ದೇಶನದಲ್ಲಿ ರಾಗಿಣಿ ದ್ವಿವೇದಿ ಹಾಗೂ ಆರ್ ಕೆ ಚಂದನ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ “ಬಿಂಗೊ” ಚಿತ್ರದ ಮುಹೂರ್ತ ಸಮಾರಂಭ ನಾಗರಭಾವಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನೆರವೇರಿತು. ಮೊದಲ ಸನ್ನಿವೇಶಕ್ಕೆ ನಟ ವಸಿಷ್ಠ ಸಿಂಹ ಆರಂಭಫಲಕ ತೋರಿದರು. ಸಚಿವ ವಿ.ಸೋಮಣ್ಣ ಅವರು ಕ್ಯಾಮೆರಾ ಚಾಲನೆ ಮಾಡಿದರು. ಸಚಿವರಾದ ಮುನಿರತ್ನ ಮುಂತಾದ ಗಣ್ಯರು ಚಿತ್ರತಂಡಕ್ಕೆ ಶುಭ ಕೋರಿದರು.

    “ಬಿಂಗೊ” ನನ್ನ ನಿರ್ದೇಶನದ ಎರಡನೇ ಚಿತ್ರ. ನನ್ನ ನಿರ್ದೇಶನದ ಮೊದಲ ಚಿತ್ರ “ಶಂಭೋ ಶಿವ ಶಂಕರ” ಸದ್ಯದಲ್ಲೇ ಬಿಡುಗಡೆಯಾಗಲಿದೆ. “ಬಿಂಗೊ” ಪದಕ್ಕೆ ಹಲವು ಅರ್ಥಗಳಿದೆ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ ಎಂದು ಹೇಳಬಹುದು. ಆರು ಮುಖ್ಯಪಾತ್ರಗಳಿರುತ್ತದೆ. ಅದರಲ್ಲಿ ಅತೀ ಮುಖ್ಯಪಾತ್ರದಲ್ಲಿ ರಾಗಿಣಿ ಅವರು ಅಭಿನಯಿಸುತ್ತಿದ್ದಾರೆ. ಅರ್ ಕೆ ಚಂದನ್ ನಾಯಕನಾಗಿ, ರಕ್ಷಾ ನಿಂಬರ್ಗಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ರಾಜೇಶ್ ನಟರಂಗ, ಪವನ್(ಮಜಾ ಟಾಕೀಸ್),  ಮುರಳಿ ಪೂರ್ವಿಕ್, ಅಪೂರ್ವ, ಆಶಾ ಸುಜಯ್, ಶ್ರವಣ್, ವಿದ್ಯಾ, ಕುಮಾರ್ ಮುಂತಾದ ಕಲಾವಿದರು “ಬಿಂಗೊ” ನಲ್ಲಿರುತ್ತಾರೆ. ಬೆಂಗಳೂರಿನಲ್ಲೇ ಚಿತ್ರೀಕರಣ ನಡೆಯಲಿದೆ ಎಂದು ನಿರ್ದೇಶಕ ಶಂಕರ್ ಕೋನಮಾನಹಳ್ಳಿ ವಿವರಣೆ ನೀಡಿದರು.

    ಈ ಚಿತ್ರದ ಪಾತ್ರ ತುಂಬಾ ಚೆನ್ನಾಗಿದೆ. ಪಾತ್ರದ ಕುರಿತು ಹೆಚ್ಚು ಹೇಳುವ ಹಾಗಿಲ್ಲ. ಮುಂದೆ ನನ್ನ ಪಾತ್ರದ ಬಗ್ಗೆ ಮಾಹಿತಿ ನೀಡುತ್ತೀನಿ. ಒಟ್ಟಿನಲ್ಲಿ ನಾನು ಈ ಹಿಂದೆ ಮಾಡಿರುವ ಪಾತ್ರಗಳಿಗಿಂತ ಸ್ವಲ್ಪ ಭಿನ್ನ ಅಂತ ಹೇಳಬಹುದು. ಹೊಸ ನಿರ್ದೇಶಕರ ಜೊತೆ ಕೆಲಸ ಮಾಡಲು ಖುಷಿಯಾಗುತ್ತದೆ ಎಂದರು ನಟಿ ರಾಗಿಣಿ ದ್ವಿವೇದಿ. ಇದನ್ನೂ ಓದಿ:ಕಾಲಿವುಡ್‌ನತ್ತ ಕನ್ನಡದ ನಟ ಭರತ್ ಭೋಪಣ್ಣ

    ನಾನು ಧಾರಾವಾಹಿಯಲ್ಲಿ ಅಭಿನಯಿಸಬೇಕಾದರೆ, ಶಂಕರ್ ಅವರ ಪರಿಚಯವಾಯಿತು. ಈ ಚಿತ್ರದ ಕುರಿತು ಮಾತನಾಡಿದರು. ಇದೇ ಮೊದಲ ಬಾರಿಗೆ ಹಿರಿತೆರೆಯಲ್ಲಿ ನಾಯಕನಾಗಿ ನಟಿಸುತ್ತಿದ್ದೇನೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎನ್ನುತ್ತಾರೆ ನಾಯಕ ಆರ್ ಕೆ ಚಂದನ್. ಇದು‌ ನಮ್ಮ ನಿರ್ಮಾಣದ ಮೊದಲ ಚಿತ್ರ.  ಕಥೆ ಇಷ್ಟವಾಯಿತು‌. ನಿರ್ಮಾಣಕ್ಕೆ ಮುಂದಾದೆವು ಎನ್ನುತ್ತಾರೆ ನಿರ್ಮಾಪಕ ಪುನೀತ ಹಾಗೂ ಆರ್ ಪರಾಂಕುಶ್. ನಾಯಕಿ ರಕ್ಷಾ ನಿಂಬರ್ಗಿ, ಸಂಗೀತ ನಿರ್ದೇಶಕ ಹಿತನ್ ಹಾಸನ್, ಛಾಯಾಗ್ರಾಹಕ ನಟರಾಜ್ ಮುದ್ದಾಲ್ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

    Live Tv
    [brid partner=56869869 player=32851 video=960834 autoplay=true]

  • ಮತ್ತೊಂದು ಹೊಸ ಸಿನಿಮಾ ಒಪ್ಪಿಕೊಂಡ ರಾಗಿಣಿ ದ್ವಿವೇದಿ

    ಮತ್ತೊಂದು ಹೊಸ ಸಿನಿಮಾ ಒಪ್ಪಿಕೊಂಡ ರಾಗಿಣಿ ದ್ವಿವೇದಿ

    ನ್ನಷ್ಟೇ ತೆರೆಗೆ ಬರಲು ಸಿದ್ದವಾಗಿರುವ ವಿಭಿನ್ನ ಕಥಾಹಂದರದ  “ಶಂಭೋ ಶಿವ ಶಂಕರ” ಚಿತ್ರವನ್ನು ಶಂಕರ್ ಕೋನಮಾನಹಳ್ಳಿ (Shankar Konamanahalli) ನಿರ್ದೇಶಿಸಿದ್ದಾರೆ. ಆ ಚಿತ್ರ ತೆರೆಗೆ ಬರುವ ಮುಂಚೆಯೇ ನಿರ್ದೇಶಕ ಶಂಕರ್ ಕೋನಮಾನಹಳ್ಳಿ ಎರಡನೇ  ಚಿತ್ರವನ್ನು ನಿರ್ದೇಶಿಸುವ ತಯಾರಿಯಲ್ಲಿದ್ದಾರೆ. ತಮ್ಮ ಅಭಿನಯದ ಮೂಲಕ ಜನಮನಸೂರೆಗೊಂಡಿರುವ ರಾಗಿಣಿ ದ್ವಿವೇದಿ (Ragini) ಈ ಚಿತ್ರದ ನಾಯಕಿಯಾಗಿ ನಟಿಸಲಿದ್ದಾರೆ. ಈ ನೂತನ ಚಿತ್ರದ ಚಿತ್ರೀಕರಣವನ್ನು ನವೆಂಬರ್ ನಲ್ಲಿ ನಡೆಯಲಿದೆ.

    ಇದೀಗ ತುಪ್ಪದ ಹುಡುಗಿ ಕೈಯಲ್ಲಿ ಸಾಕಷ್ಟು ಸಿನಿಮಾಗಳಿವೆ. ಅವೆಲ್ಲವೂ ವಿಭಿನ್ನವಾದ ಪಾತ್ರಗಳಾಗಿವೆ. ಹಾಗಾಗಿಯೇ ರಾಗಿಣಿ ಮತ್ತೆ ಸ್ಯಾಂಡಲ್ ವುಡ್ ನಲ್ಲಿ ಮಿಂಚಲು ರೆಡಿಯಾಗಿದ್ದಾಳೆ. ಅದಕ್ಕಾಗಿ ಹೊಸ ಫೋಟೋಶೂಟ್ (Photoshoot)ಕೂಡ ಮಾಡಿಸಿಕೊಂಡಿದ್ದಾರೆ. ಇದನ್ನೂ ಓದಿ:ಸಾನ್ಯ ಕ್ಯಾಪ್ಟೆನ್ಸಿಗೆ ಕಳಪೆ ಎಂದ ರೂಪೇಶ್‌ ಶೆಟ್ಟಿ

    ಕೆಂಪೇಗೌಡ, ವೀರಮದಕರಿ ಸೇರಿದಂತೆ ಅನೇಕ ಹಿಟ್ ಸಿನಿಮಾಗಳಲ್ಲಿ ನಟಿಸಿರುವ ರಾಗಿಣಿ, ಮಹಿಳಾ ಪ್ರಧಾನ ಸಿನಿಮಾಗಳನ್ನೂ ಮಾಡಿದರು. ಅದರಲ್ಲಿ ಯಶಸ್ಸೂ ಕಂಡರು. ಸುದೀಪ್ ಸೇರಿದಂತೆ ಹಲವು ಸ್ಟಾರ್ ನಟರ ಸಿನಿಮಾಗಳಲ್ಲಿ ನಟಿಸಿದ ಹೆಗ್ಗಳಿಕೆ ಕೂಡ ಇವರದ್ದು. ಹಾಗಾಗಿ ರಾಗಿಣಿ ಕೂಡ ಸ್ಟಾರ್ ನಟಿಯಾಗಿಯೇ ಮಿಂಚಿದವರು.

    ಗಾಂಧಿಗಿರಿ, ಒನ್ ಟು ಒನ್, ಕರ್ವ 3, ಜಾನಿವಾಕರ್ ಸೇರಿದಂತೆ ಹಲವು ಚಿತ್ರಗಳನ್ನು ಒಪ್ಪಿಕೊಂಡಿರುವ ಇವರು, ಪ್ರಶಾಂತ್ ರಾಜ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ತೆಲುಗು ಸಿನಿಮಾದಲ್ಲಿ ವಿಶೇಷ ಪಾತ್ರ ನಿರ್ವಹಿಸಿದ್ದಾರೆ. ಸಂತಾನಂ ಈ ಸಿನಿಮಾದ ಹೀರೋ. ನಾಯಕಿಯಾಗಿ ಬಸಣ್ಣಿ ಖ್ಯಾತಿಯ ತಾನ್ಯಾ ಹೋಪ್ ಕಾಣಿಸಿಕೊಂಡಿದ್ದಾರೆ.

    ಹಿಂದಿ, ಕನ್ನಡ, ತೆಲುಗು ಹಾಗೂ ತಮಿಳಿನಲ್ಲಿ ತಯಾರಾಗುತ್ತಿರುವ ಸಾರಿ ಕರ್ಮ ರಿಟನರ್ಸ್ ಸಿನಿಮಾದಲ್ಲಿ ರಾಗಿಣಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಇದೊಂದು ಸಸ್ಪನ್ಸ್ ಮತ್ತು ಥ್ರಿಲ್ಲರ್ ಆಧರಿಸಿದ ಸಿನಿಮಾವಾಗಿದ್ದು, ಈ ಚಿತ್ರದಲ್ಲಿ ಅವರು ವಿಶೇಷ ರೀತಿಯ ಪಾತ್ರಗಳನ್ನು ಮಾಡುತ್ತಿದ್ದಾರಂತೆ.

    ಕೋವಿಡ್ ವೇಳೆಯಲ್ಲಿ ಸಮಾಜಮುಖಿ ಕೆಲಸಗಳನ್ನೂ ಮಾಡಿದ್ದ ರಾಗಿಣಿ, ಡ್ರಗ್ಸ್ ಕೇಸಿನಲ್ಲಿ ಪಡಬಾರದ ಕಷ್ಟ ಪಟ್ಟರು. ಜೈಲಿಗೂ ಹೋಗಿ ಬಂದರು. ಜೈಲಿನಿಂದ ವಾಪಸ್ಸಾದ ನಂತರ ಮತ್ತೆ ಅವರು ಸಿನಿಮಾ ಹಾಗೂ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಅಲ್ಲದೇ, ಸಿನಿಮಾ ರಂಗದಲ್ಲೂ ಬ್ಯುಸಿಯಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಶಂಭೋ ಶಿವ ಶಂಕರ್ ಸಿನಿಮಾದಲ್ಲಿ ಹಾಡುಗಳ ಕಿಕ್

    ಶಂಭೋ ಶಿವ ಶಂಕರ್ ಸಿನಿಮಾದಲ್ಲಿ ಹಾಡುಗಳ ಕಿಕ್

    ಕಿರುತೆರೆ ಜಗತ್ತಿನಲ್ಲಿ ನಿರ್ದೇಶಕ ಶಂಕರ್ ಕೋನಮಾನಹಳ್ಳಿ ದೊಡ್ಡ ಹೆಸರು. ಸೂಪರ್ ಹಿಟ್ ಧಾರಾವಾಹಿಗಳನ್ನು ನಿರ್ದೇಶನ ಮಾಡಿರುವ ಇವರು, ಇದೇ ಮೊದಲ ಬಾರಿಗೆ ಹಿರಿತೆರೆಗೆ ಬಂದಿದ್ದಾರೆ. ಇವರ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಶಂಭೋ ಶಿವ ಶಂಕರ’ ಸಿನಿಮಾದ ಹಾಡುಗಳು ಸದ್ಯ ಸ್ಯಾಂಡಲ್ ವುಡ್ ನಲ್ಲಿ ವೈರಲ್ ಆಗಿವೆ.

    ಪಂಚತಂತ್ರ ಸಿನಿಮಾ ಖ್ಯಾತಿಯ ಸೋನಲ್ ಮೆಂಟೆರೋ ಈ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದು, ಅಭಯ್ ಪುನೀತ್, ರಕ್ಷಕ್ ಮತ್ತು ರೋಹಿತ್ ಮೂವರು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದ ಹಾಡೊಂದರ ಚಿತ್ರೀಕರಣ ಭಾರತ ಚೀನಾ ಗಡಿಯ ಲಾಹೌಲ್ ಸ್ಪಿಟಿ ಎಂಬ ಸ್ಥಳದಲ್ಲಿ ನಡೆದದ್ದು, ಅದ್ಧೂರಿಯಾಗಿಯೇ ಈ ಹಾಡನ್ನು ಶೂಟ್ ಮಾಡಿದ್ದಾರೆ ನಿರ್ದೇಶಕರು. ಇದನ್ನೂ ಓದಿ : ಅಜಿತ್ ನಟನೆ ಬ್ಲಾಕ್ ಬಸ್ಟರ್ ‘ವಲಿಮೈ’ಸಿನಿಮಾ ಒಟಿಟಿಗೆ ಎಂಟ್ರಿ

    ಸೋಮವಾರ ಬೆಂಗಳೂರಿನಲ್ಲಿ ಈ ಸಿನಿಮಾದ ಹಾಡುಗಳು ಲೋಕಾರ್ಪಣೆಗೊಂಡಿದ್ದು, ನಟ ವಸಿಷ್ಠ ಸಿಂಹ, ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಸೇರಿದಂತೆ ಹಲವು ಗಣ್ಯರು ಈ ಸಂದರ್ಭದಲ್ಲಿ ಹಾಜರಿದ್ದರು. ಇದನ್ನೂ ಓದಿ : ಕನ್ನಡದ ಹುಡುಗನ ಚಿತ್ರಕ್ಕೆ ಹನ್ಸಿಕಾ ಮೊಟ್ವಾನಿ ಹೀರೋಯಿನ್

    ಕಿರುತೆರೆಯಲ್ಲಿ ಹಲವಾರು ಧಾರಾವಾಹಿಗಳಿಗೆ ನಿರ್ದೇಶನ ಮಾಡಿರುವ ಶಂಕರ್ ಕೋನಮಾನಹಳ್ಳಿ ಇದೇ ಮೊದಲ ಬಾರಿಗೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದುಕೊಂಡು ನಿರ್ದೇಶನ ಕೂಡ ಮಾಡಿದ್ದಾರೆ. ಸಿನಿಮಾದ ಮತ್ತೊಂದು ವಿಶೇಷ ಅಂದರೆ, ಹಿರಿಯ ನಟ ಶಶಿಕುಮಾರ್ ಕೂಡ ಈ ಚಿತ್ರದಲ್ಲಿ ನಟಿಸಿದ್ದು, ಅವರು ಖಡಕ್ ಪೊಲೀಸ್ ಆಫೀಸರ್ ಪಾತ್ರವನ್ನು ನಿರ್ವಹಿಸಿದ್ದಾರಂತೆ. ಇದನ್ನೂ ಓದಿ : ಪುನೀತ್ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ಪ್ರದಾನ

    “ಶಂಭೋ ಶಿವ ಶಂಕರ್’ ಟೈಟಲ್ ಕೇಳಿದಾಕ್ಷಣ ಇದೊಂದು ಭಕ್ತಿ ಪ್ರಧಾನ ಸಿನಿಮಾ ಅಂತ ಅನಿಸಬಹುದು. ಆದರೆ, ಈ ಸಿನಿಮಾದ ಟೈಟಲ್ ಹೇಳುವಂತೆ ಮೂವರು ನಾಯಕರ ಹೆಸರನ್ನು ಚಿತ್ರದ ಶೀರ್ಷಿಕೆಗೆ ಬಳಸಿಕೊಂಡಿದ್ದಾರಂತೆ ನಿರ್ದೇಶಕರು. ಪ್ರೀತಿ, ಗೆಳೆತನ ಮತ್ತು ಸಮಾಜಕ್ಕೆ ಒಂದೊಳ್ಳೆ ಸಂದೇಶವನ್ನು ಈ ಸಿನಿಮಾ ನೀಡಲಿದೆಯಂತೆ. ಜತೆಗೆ ಸಸ್ಪೆನ್ಸ್ ಮತ್ತು ಥ್ರಿಲ್ಲರ್ ನೀಡುವಂತಹ ಸಾಕಷ್ಟು ಅಂಶಗಳನ್ನು ಈ ಸಿನಿಮಾ ಒಳಗೊಂಡಿದೆ.