Tag: ಶಂಕರ ಪಾಟೀಲ್ ಮುನೇನಕೊಪ್ಪ

  • ಕಳಸಾ ಬಂಡೂರಿ – ಇನ್ನೂ 60 ದಿನಗಳಲ್ಲಿ ಒಳ್ಳೆ ಸುದ್ದಿ‌ ಕೊಡ್ತೇವೆ: ಮುನೇನಕೊಪ್ಪ

    ಕಳಸಾ ಬಂಡೂರಿ – ಇನ್ನೂ 60 ದಿನಗಳಲ್ಲಿ ಒಳ್ಳೆ ಸುದ್ದಿ‌ ಕೊಡ್ತೇವೆ: ಮುನೇನಕೊಪ್ಪ

    ಧಾರವಾಡ: ಕಳಸಾ ಬಂಡೂರಿಗೆ ಇನ್ನೂ 60 ದಿನಗಳಲ್ಲಿ ಒಂದು ಒಳ್ಳೆ ಸಿಹಿ‌ ಸುದ್ದಿ‌ ಕೊಡುತ್ತೇವೆ ಎಂದು ಸಚಿವ ಶಂಕರ್‌ ಪಾಟೀಲ್ ಮುನೇನಕೊಪ್ಪ (Shankar Patil Munenakoppa) ತಿಳಿಸಿದರು.

    ಕಾಂಗ್ರೆಸ್‌ನಿಂದ ಕಳೆದ ವಾರವಷ್ಟೇ ಹುಬ್ಬಳ್ಳಿಯಲ್ಲಿ ಮಹದಾಯಿ ಬಗ್ಗೆ ಸಮಾವೇಶ ಮಾಡಲಾಗಿತ್ತು. ಈ‌ ವಿಚಾರವಾಗಿ ಧಾರವಾಡದಲ್ಲಿ ಪ್ರತಿಕ್ರಿಯಿಸಿ, ಕಳಸಾ ಬಂಡೂರಿಗೆ (Kalasa Banduri) ಕಾಂಗ್ರೆಸ್ (Congress) ವಿರೋಧ ಮಾಡುತ್ತಲೇ ಬಂದಿದೆ. ಈ ಹಿಂದೆ ಕಳಸಾ‌ ಬಂಡೂರಿಗೆ ಒಂದು ಹನಿ ನೀರು ಬಿಡಲ್ಲ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ (Sonia Gandhi) ಹೇಳಿದ್ದರು. ಈ ಹಿನ್ನೆಲೆಯಲ್ಲಿ ಕಳಸಾ‌ ಬಂಡೂರಿ ಬಗ್ಗೆ ಮಾತನಾಡುವಂತದ್ದು‌ ಹಾಗೂ ಸಮಾವೇಶ ಮಾಡುವಂತ ನೈತಿಕತೆ ಕಾಂಗ್ರೆಸ್‌ನವರಿಗೆ ಇಲ್ಲ ಎಂದು ತಿಳಿಸಿದರು.

    ಟ್ರಿಬ್ಯುನಲ್ ಸರಿ ಪಡಿಸುವ ಕೆಲಸ ಅವರಿಂದ ಯಾವತ್ತೂ ಆಗಿಲ್ಲ. ರೈತರ ಮೇಲೆ ಗೋಲಿಬಾರ್ ಹಾಗೂ ಲಾಠಿ ಚಾರ್ಜ್ ಮಾಡಿದ್ದು ಕಾಂಗ್ರೆಸ್, ನಾನು ಅದೇ ಭಾಗದಲ್ಲಿ ಹುಟ್ಟಿದ್ದೇನೆ. ನಾವು ಹೋರಾಟದಿಂದ ನೀರು ಪಡೆಯುವಂತಹ ಪರಿಸ್ಥಿತಿ ಬಂದಿದೆ. ನಮ್ಮ ಭಾಗದ ಅನೇಕ ರೈತರಿಗೆ ಚಿತ್ರದುರ್ಗ ಹಾಗೂ ಬಳ್ಳಾರಿ ಜೈಲಿಗೆ ಹಾಕುವಂತೆ ಆಯಿತು, ಹೀಗಾಗಿ ಕಾಂಗ್ರೆಸ್‌ಗೆ ಈ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಕಿಡಿಕಾರಿದರು.

    ಕಾಂಗ್ರೆಸ್‌ನವರು ಹುಬ್ಬಳ್ಳಿ ನೆಹರು ಮೈದಾನದಲ್ಲಿ ಸಮಾವೇಶ ಮಾಡಿದ್ದು, ಚುನಾವಣೆ ಸಮಾವೇಶ ಅಷ್ಟೇ ಎಂದ ಅವರು, ಮಹದಾಯಿ ವಿಚಾರವಾಗಿ ಗೋವಾ‌ ಸಚಿವ ರಾಜೀನಾಮೆ ನೀಡುವ ವಿಚಾರವಾಗಿ ನಾನು ಮಾತನಾಡಲ್ಲ ಎಂದರು. ಇದನ್ನೂ ಓದಿ: ಬಿಜೆಪಿಯ 20 ಶಾಸಕರಿಗೆ ಟಿಕೆಟ್ ಟೆನ್ಷನ್ – ಹೈಕಮಾಂಡ್ ಕೈ ಸೇರಿದೆ 16 ಜಿಲ್ಲೆಗಳ ಶಾರ್ಟ್ ಲಿಸ್ಟ್

    ಕಾನೂನು ಬದ್ಧವಾಗಿ ಟ್ರಿಬ್ಯುನಲ್‌ನಲ್ಲಿ ಆದೇಶವಾದ 3.9 ಟಿಎಂಸಿ ನೀರು ನಮ್ಮ ಹಕ್ಕು. ಆ‌ ಹಕ್ಕನ್ನು ಪಡೆಯುವ‌ ಕೆಲಸ ಮಾಡುತ್ತೇವೆ.‌ ಗೋವಾ ರಾಜ್ಯ ತಮ್ಮ ನೆಲ‌, ಜಲದ ವಿಚಾರದಲ್ಲಿ ಅವರು ಹೇಳಿದ್ದಾರೆ. ನಮಗೆ ಆಗಲೇ ಅನುಮೋದನೆ ಸಿಕ್ಕಿದೆ. ಆದರೆ ನಾವು ಚರ್ಚೆ ಮಾಡುವ ಅವಶ್ಯಕತೆ ಇಲ್ಲ. ಬೇಗ ಟೆಂಡರ್ ಕರೆದು ಭೂಮಿ ಪೂಜೆ ಮಾಡುವ ಬಗ್ಗೆ ಸಿಎಂ ತೀರ್ಮಾನ ತೆಗೆದುಕೊಳ್ಳುತ್ತಾರೆ. ಡಿಪಿಆರ್ ಅನುಮೋದನೆ ಸಿಕ್ಕಿದೆ. ಇದಕ್ಕಾಗಿ 60 ವರ್ಷ ಕಾದಿದ್ದೇವೆ. ಇನ್ನೂ 60 ದಿನ ಕಾದರೆ ಇದಕ್ಕೆ ಒಳ್ಳೆ ಸುದ್ದಿಯನ್ನ ಕೊಡುತ್ತೇವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: 13 ವರ್ಷಗಳ ಬಳಿಕ ಗಣರಾಜ್ಯೋತ್ಸವ ಪರೇಡ್‍ನಲ್ಲಿ ಕರ್ನಾಟಕದ ಟ್ಯಾಬ್ಲೋಗಿಲ್ಲ ಅವಕಾಶ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಾನೂ ಹಿಂದೂ ಇದೀನಿ ಅಂತ ಕೊಲೆ ಮಾಡಬೇಕನ್ನೋದು ಯಾವ ನ್ಯಾಯ – ಸಚಿವ ಶಂಕರ ಪಾಟೀಲ್

    ನಾನೂ ಹಿಂದೂ ಇದೀನಿ ಅಂತ ಕೊಲೆ ಮಾಡಬೇಕನ್ನೋದು ಯಾವ ನ್ಯಾಯ – ಸಚಿವ ಶಂಕರ ಪಾಟೀಲ್

    ಬೆಳಗಾವಿ: ದೇಶದಲ್ಲಿ ಹಿಂದೂ ಮುಸ್ಲಿಂ ಯಾರೇ ಇರಬಹುದು ಅಣ್ಣ-ತಮ್ಮಂದಿರ ಹಾಗೆ ಬದುಕಬೇಕು. ಅದನ್ನು ಬಿಟ್ಟು ನಾನೂ ಹಿಂದೂ ಇದೀನಿ ಅಂತ ಕೊಲೆ ಮಾಡಬೇಕೆಂಬುದು ಯಾವ ನ್ಯಾಯ? ಎಂದು ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಪ್ರಶ್ನಿಸಿದ್ದಾರೆ.

    shankar patil munenakoppa

    ಬೆಂಗಳೂರಿನ ಸಾರಾಯಿಪಾಳ್ಯದಲ್ಲಿ ಹಿಂದೂ ಮುಖಂಡರ ಹತ್ಯೆಗೆ ಸ್ಕೆಚ್‌ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಹಿಂದೂ ಎಂಬ ಒಂದೇ ಕಾರಣಕ್ಕೆ ಅವನ ಹತ್ಯೆ ಮಾಡಬೇಕು ಎಂಬುದು ಸರಿಯಲ್ಲ. ಯಾವುದೇ ಸಮಾಜ ಇದ್ದರೂ ಆ ಸಮಾಜ ತಿದ್ದುಕೊಳ್ಳಬೇಕು. ನಾನು ಹಿಂದೂ ಇದೀನಿ ಅಂತಾ ಕೊಲೆ ಮಾಡಬೇಕೆಂಬುದು ಯಾವ ನ್ಯಾಯ, ಇದು ಸರಿಯಾದುದಲ್ಲ ಎಂದು ತಿಳಿವಳಿಕೆ ನೀಡಿದ್ದಾರೆ. ಇದನ್ನೂ ಓದಿ: ಸಚಿವ ಸ್ಥಾನಕ್ಕಾಗಿ ಯಾರಿಗೂ ಅರ್ಧ ಕಪ್ ಚಹಾ ಸಹ ಕುಡಿಸಿಲ್ಲ: ಮುನೇನಕೊಪ್ಪ

    shankar patil munenakoppa

    ಇಂದಿನ ರಾಜಕೀಯ ವ್ಯವಸ್ಥೆಯಲ್ಲಿ ಹಿಂದೂ ಇರಬಹುದು, ಮುಸ್ಲಿಂ ಇರಬಹುದು ಈ ದೇಶದಲ್ಲಿ ವಾಸಿಸುವವ ಪ್ರತಿಯೊಬ್ಬರೂ ಅಣ್ಣತಮ್ಮಂದಿರ ರೀತಿ ಬದುಕಬೇಕು. ಧರ್ಮ ಗುರುಗಳಿಂದ ಸಮಾಜ ಪರಿವರ್ತನೆಯ ಕೆಲಸಗಳಾಗಬೇಕು. ಸಾಮರಸ್ಯದಿಂದ ಬದುಕುವಂತೆ ಸಮಾಜ ಕಟ್ಟಬೇಕು ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಸಂಪುಟ ವಿಸ್ತರಣೆ ಕಸರತ್ತು: ನಾಳೆ ದೆಹಲಿಗೆ ಸಿಎಂ

    ಈ ರೀತಿ ಒಂದು ಸಮಾಜ ಗುರಿಯಾಗಿಸುವುದನ್ನು ಯಾರೂ ಸಹಿಸೋದಿಲ್ಲ. ಸರ್ಕಾರ ಸಹ ಕಾನೂನಿನ ಕ್ರಮಗಳು ಏನಿದೆ? ನೋಡಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

  • ಸಿಎಂ ಬೊಮ್ಮಾಯಿ ಬದಲಾವಣೆ ಇಲ್ಲ: ಮುನೇನಕೊಪ್ಪ

    ಸಿಎಂ ಬೊಮ್ಮಾಯಿ ಬದಲಾವಣೆ ಇಲ್ಲ: ಮುನೇನಕೊಪ್ಪ

    ಹುಬ್ಬಳ್ಳಿ: ಹಿರಿಯ ನಾಯಕರು ಹೇಳಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬದಲಾವಣೆ ಆಗಲ್ಲ ಎಂದು ಕೈಮಗ್ಗ ಮತ್ತು ಜವಳಿ, ಸಕ್ಕರೆ ಮತ್ತು ಕಬ್ಬು ಅಭಿವೃದ್ಧಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಹೇಳಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ಅವರನ್ನು ಬದಲಿಸಲು ಯಾವ ಮುಖಂಡರು ಪ್ರಯತ್ನ ಪಟ್ಟಿಲ್ಲ. ಉತ್ತರ ಕರ್ನಾಟಕ ಭಾಗಕ್ಕೆ ಸಿಕ್ಕ ಸಿಎಂ ಪಟ್ಟ ಉಳಿಸಿಕೊಳ್ಳುತ್ತೇವೆ ಎಂದರು.

    basavaraj bommai

    ಮತಾಂತರ ಮಸೂದೆ ವಿಚಾರವಾಗಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಮನಸ್ಸಿನಲ್ಲಿ ಮತಾಂತರ ಕಾಯ್ದೆ ಬರಬೇಕು ಎಂಬ ಬಯಕೆ ಇದೆ. ಈ ವಿಚಾರ ಮೊನ್ನೆ ನಡೆದ ಕಲಾಪದಲ್ಲಿ ಸಾಬೀತಾಗಿದೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ನಾಡಿನ ಮುಖ್ಯಮಂತ್ರಿ ಆಗಲಿ: ಹಂಸಲೇಖ

    ಮಹಿಳೆಯರ ರಕ್ಷಣೆ ವಿಚಾರವಾಗಿ ಮಾತನಾಡಿ, ಗಾರ್ಮೆಂಟ್ ಕ್ಷೇತ್ರದಲ್ಲಿ ಮಹಿಳೆಯರಿಗೆ ರಕ್ಷಣೆ ನೀಡಲು ಅಗತ್ಯ ಕ್ರಮ ವಹಿಸಲಾಗಿದೆ. ಎಲ್ಲಾ ಗಾರ್ಮೆಂಟ್ ಮಾಲೀಕರ ಜೊತೆ ಮಾತನಾಡಿದ್ದೇವೆ ಎಂದು ಭರವಸೆ ನೀಡಿದ ಅವರು, ಟೆಕ್ಸ್ಟೈಲ್ಸ್ನಲ್ಲಿ ನೇಕಾರರ ಮಕ್ಕಳಿಗೆ ವಿದ್ಯಾನಿಧಿ ನೀಡಲು ಕ್ರಮ ವಹಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಮೆಸ್ಕಾಂ ಇಲಾಖೆಯ ಅವ್ಯವಹಾರ ಬಯಲುಗೊಳಿಸಿ ಅಧಿಕಾರಿಗಳಿಗೆ ಈಶ್ವರಪ್ಪ ಕ್ಲಾಸ್

    ಮಹಿಕೋ ಕಂಪೆನಿ ವಿತರಿಸಿದ ಹತ್ತಿ ಬೀಜ ಕಳಪೆ ಎಂಬ ದೂರು ರೈತರಿಂದ ಬಂದಿದೆ. ಕೃಷಿ ಇಲಾಖೆಗೆ ಅಗತ್ಯ ಕ್ರಮ ವಹಿಸಲು ಸೂಚಿಸಲಾಗುವುದು ಎಂದರು.

    ರಾಜ್ಯ ಕಾರ್ಯಕಾರಿಣಿ ಸಭೆಯ ವಿಚಾರವಾಗಿ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆ ಆಯೋಜನೆ ಆಗಿರುವುದು ಸಂತಸದ ವಿಚಾರವಾಗಿದೆ. ಕಾರ್ಯಕಾರಿಣಿ ಸಭೆಯಲ್ಲಿ ಎರಡು ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲು ನಿರ್ಧರಿಸಲಾಗಿದೆ. ಸಭೆಯಲ್ಲಿ ಚುನಾವಣೆಯ ಸೋಲು, ಗೆಲವುಗಳ ಕುರಿತು ಆತ್ಮಾವಲೋಕನ ಮಾಡಿಕೊಳ್ಳಲಾಗುವುದು. ಜೊತೆಗೆ ಗೆಲ್ಲಲು ಕಾರಣವಾದ ಅಂಶಗಳೇನು ಹಾಗೂ ಜನ ಕೈ ಬಿಡಲು ಕಾರಣವೇನು ಎಂಬ ವಿಚಾರಗಳ ಕುರಿತು ಚರ್ಚೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: 29 ವರ್ಷದ ಬಳಿಕ ಪಾಕಿಸ್ತಾನದ ಜೈಲಿನಿಂದ ತಾಯಿನಾಡಿಗೆ ಕಾಲಿಟ್ಟ ಕುಲದೀಪ್ ಸಿಂಗ್

    ಬೆಳಗಾವಿಯಲ್ಲಿ ವಿಧಾನ ಪರಿಷತ್ ಚುನಾವಣೆಯಲ್ಲಿ ಸೋಲು ಹಾಗೂ ಹಾನಗಲ್ ಉಪಚುನಾವಣೆ ಸೋಲಿನ ಬಗ್ಗೆ ಈಗಾಗಲೇ ಆತ್ಮಾವಲೋಕನ ಆಗಿದೆ ಎಂದ ಅವರು, ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ನಡೆಯುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ನೂಡಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ- 6 ಮಂದಿ ಸಾವು

    ಇದೇ ಸಂದರ್ಭದಲ್ಲಿ ಹುಬ್ಬಳ್ಳಿ ಕಾರ್ಯಕಾರಿಣಿ ಸಭೆ ಲೋಗೋವನ್ನು ಬಿಡುಗಡೆ ಮಾಡಲಾಯಿತು. ಹುಡಾ ಅಧ್ಯಕ್ಷ ನಾಗೇಶ್ ಕಲಬುರ್ಗಿ, ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ, ದತ್ತಮೂರ್ತಿ ಕುಲಕರ್ಣಿ ಇತರರಿದ್ದರು. ಇದನ್ನೂ ಓದಿ:  ತನ್ನ ಬರ್ತ್‌ಡೇ ಪಾರ್ಟಿ ಸಿದ್ಧತೆಗೆ ಫಾರ್ಮ್‌ಹೌಸ್‌ಗೆ ಹೋಗಿದ್ದ ಸಲ್ಲುಗೆ ಹಾವು ಕಡಿತ!

  • ನಟ ಪುನೀತ್ ರಾಜ್‍ಕುಮಾರ್ ನಿಧನಕ್ಕೆ ಸಂತಾಪ ಸೂಚಿಸಿದ ಗಣ್ಯರು

    ನಟ ಪುನೀತ್ ರಾಜ್‍ಕುಮಾರ್ ನಿಧನಕ್ಕೆ ಸಂತಾಪ ಸೂಚಿಸಿದ ಗಣ್ಯರು

    ಬೆಂಗಳೂರು: ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ ಈ ನಾಡು ಕಂಡ ಯಶಸ್ವಿ ನಾಯಕ ನಟ, ಕನ್ನಡಿಗರ ಕಣ್ಮಣಿ, ಯುವ ನಟ ಪುನೀತ್ ರಾಜ್‍ಕುಮಾರ್ ಅವರ ನಿಧನ ಬರಸಿಡಿಲು ಬಡಿದಂತಾಗಿದೆ. ಪವರ್ ಸ್ಟಾರ್ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

    ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ ಈ ನಾಡು ಕಂಡ ಯಶಸ್ವಿ ನಾಯಕ ನಟ, ಕನ್ನಡಿಗರ ಕಣ್ಮಣಿ, ಯುವ ನಟ ಪುನೀತ್ ರಾಜ್‍ಕುಮಾರ್ ಅವರ ನಿಧನ ಬರಸಿಡಿಲು ಬಡಿದಂತಾಗಿದೆ ಎಂದು ಮುಜರಾಯಿ, ವಕ್ಫ್ ಹಜ್ ಸಚಿವರಾದ ಶಶಿಕಲಾ ಜೊಲ್ಲೆಯವರು ದುಖಃ ವ್ಯಕ್ತಪಡಿಸಿದ್ದಾರೆ.

    ಪುನೀತ್ ಅವರ ನಿಧನದ ಸುದ್ದಿ ಮನಸ್ಸಿಗೆ ತೀವ್ರ ದುಖಃವುಂಟಾಗುತ್ತಿದೆ. ಡಾಕ್ಟರ್ ರಾಜಕುಮಾರ್ ಅವರ ಪುತ್ರರಾಗಿದ್ದರೂ ಯಾವುದೇ ಅಹಂ ಇಲ್ಲದೇ ಎಲ್ಲರ ಪ್ರೀತಿಯ ಅಪ್ಪು ಆಗಿ ನಾಡಿಗಷ್ಟೆ ಅಲ್ಲ ವಿಶ್ವದ ಕನ್ನಡಿಗರು ಹಾಗೂ ಭಾರತೀಯ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಈ ದಿನ ಕರ್ನಾಟಕದ ಪಾಲಿಗೆ ಕರಾಳ ದಿನ. ಕನ್ನಡ ಭಾಷೆ, ನೆಲ, ಜಲದ ವಿಚಾರ ಬಂದಾಗ ಮುಂಚೂಣಿಯಲ್ಲಿ ನಿಲ್ಲುತ್ತಿದ್ದರು. ಎಲ್ಲರ ಮನಗಳಲ್ಲಿ ನೆಲೆಸಿರುವ ಅಪ್ಪು ಅವರ ನಿಧನದ ದುಃಖ ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗ, ಅಭಿಮಾನಿಗಳಿಗೆ ಆ ದೇವರು ಕರುಣಿಸಲಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಚಿವರು ಸಂತಾಪದಲ್ಲಿ ತಿಳಿಸಿದ್ದಾರೆ.

    ಕಂಬನಿ ಮಿಡಿದ ಸಚಿವ ಕೆ.ಎಸ್. ಈಶ್ವರಪ್ಪ: ಕನ್ನಡ ಚಿತ್ರ ರಂಗದ ಖ್ಯಾತ ಚಿತ್ರನಟ ಯುವರತ್ನ ಪುನೀತ್ ರಾಜ್ ಕುಮಾರ್ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ದುಃಖವಾಗಿದೆ. ಪುನೀತ್ ಅವರ ನಿಧನದ ಈ ದಿನ ಕೇವಲ ಚಿತ್ರರಂಗದ ಪಾಲಿಗೆ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗ ಮತ್ತು ಕರ್ನಾಟಕದ ಪಾಲಿಗೆ ಕರಾಳ ದಿನ. ಕನ್ನಡ ಭಾಷೆ, ನೆಲ, ಜಲದ ವಿಚಾರ ಬಂದಾಗ ಮುಂಚೂಣಿಯಲ್ಲಿ ನಿಲ್ಲುತ್ತಿದ್ದರು. ಎಲ್ಲರ ಮನಗಳಲ್ಲಿ ನೆಲೆಸಿರುವ ಅಪ್ಪು ಅವರ ನಿಧನದ ದುಃಖ ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗ, ಅಭಿಮಾನಿಗಳಿಗೆ ಆ ದೇವರು ಕರುಣಿಸಲಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ. ಎಂದು ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಶ್ರೀ ಕೆ.ಎಸ್.ಈಶ್ವರಪ್ಪ ರವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

    ಕಂಬನಿ ಮಿಡಿದ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ: ಆಡಿಸಿಯೇ ನೋಡು, ಬೀಳಿಸಿಯೇ ನೋಡು, ಎಂದೂ ಸೋಲದು, ಸೋತು ತಲೆಯಾ ಬಾಗದು ಎಂದು ಹೇಳುತ್ತಲೇ ನಮ್ಮನ್ನೆಲ್ಲಾ ಅಗಲಿದ ಪುನೀತ್ ರಾಜ್ ಕುಮಾರ್ ಅವರು ನಮ್ಮ ಗಂಧದ ಗುಡಿಯ ನಿಜವಾದ ರಾಜರತ್ನ ಎಂದು ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಕಂಬನಿ ಮಿಡಿದಿದ್ದಾರೆ.

    ಪವರ್ ಸ್ಟಾರ್ ಆಗಿದ್ದರೂ ಯಾವುದೇ ಗರ್ವವಿಲ್ಲದೇ ಎಲ್ಲರೊಂದಿಗೆ ಬೆರೆಯುತ್ತಿದ್ದ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ನಿಧನ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟು ಮಾಡಿದೆ. ತಂದೆ ಡಾ.ರಾಜ್ ಕುಮಾರ್ ಅವರಂತೆಯೆ ಸರಳತೆಯನ್ನು ಮೈಗೂಡಿಸಿಕೊಂಡಿದ್ದ ಪುನೀತ್, ಬಾಲನಟನಾಗಿ ರಾಷ್ಟ್ರಪ್ರಶಸ್ತಿ ಪಡೆದಿದ್ದರು. ಅವರ ಅಭಿನಯ ಜನ ಮಾನಸದಲ್ಲಿ ಅಚ್ಚಳಿಯದೇ ನಿಂತಿದೆ. ನಾಯಕ ನಟನಾಗಿ ಅನೇಕ ಚಿತ್ರಗಳಲ್ಲಿ ಅಮೋಘವಾಗಿ ಅಭಿನಯಿಸಿ ಕೋಟ್ಯಾಂತರ ಅಭಿಮಾನಿಗಳ ಮನ ಗೆದ್ದಿದ್ದ ಪುನೀತ್ ಅವರ ಮೃತ ಆತ್ಮಕ್ಕೆ ಚಿರಶಾಂತಿ ಸಿಗಲಿ ಮತ್ತು ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಿಗೆ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಸಚಿವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

    ಅಪ್ಪು ಅಕಾಲಿಕ ನಿಧನಕ್ಕೆ ವಿಶ್ವೇಶ್ವರ ಹೆಗಡೆ ಕಾಗೇರಿ ಸಂತಾಪ: ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ನಿಧನ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಶ್ರೀ ಕಾಗೇರಿ ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ. ಕನ್ನಡ ಚಿತ್ರ ರಂಗದಲ್ಲಿ ಪುನೀತ್ ರಾಜ್ ಕುಮಾರ್ ತಮ್ಮದೇ ಆದ ಛಾಪು ಮೂಡಿಸಿದ್ದರು. ತಾವು ನಿರ್ವಹಿಸುತ್ತಿದ್ದ ಪಾತ್ರಕ್ಕೆ ಜೀವ ತುಂಬುತ್ತಿದ್ದರು. ಅವರ ಅಕಾಲಿಕ ನಿಧನ ನಿಜಕ್ಕೂ ದುರ್ದೈವ, ಬಹುಮುಖ ಪ್ರತಿಭೆಯ ಅದ್ಭುತ ನಟನ ಬದುಕು ಅರ್ಧಕ್ಕೇ ನಿಂತಿದ್ದು ನಿಜಕ್ಕೂ ದುರಾದೃಷ್ಟಕರ ಎಂದು ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸಂತಾಪ ವ್ಯಕ್ತಪಡಿಸಿದ್ದಾರೆ.

    ಪುನೀತ್ ನಿಧನಕ್ಕೆ ಮಾಜಿ ಸಿಎಂ ಶೆಟ್ಟರ್ ಸಂತಾಪ: ಡಾ.ರಾಜ್‍ಕುಮಾರ ಅವರ ಕಿರಿಯ ಪುತ್ರರಾಗಿ ಆ ಮೇರು ನಟನ ಸರಳ,ಸಜ್ಜನಿಕೆಯನ್ನು ತಮ್ಮ ಬದುಕಿನಲ್ಲಿಯೂ ಅಳವಡಿಸಿಕೊಂಡಿದ್ದರು.ಅಪಾರ ಜನಪ್ರಿಯತೆ ಹೊಂದಿದ್ದರೂ ಕೂಡ ಎಳ್ಳಷ್ಟೂ ಅಹಂಕಾರವನ್ನು ಹೊಂದಿರಲಿಲ್ಲ. ಸಮಾಜ ಸೇವಾ ಕಾರ್ಯಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡು ಸಮಾಜಕ್ಕೆ ಆದರ್ಶವಾಗಿದ್ದರು. ನಟ ಪುನೀತ್ ರಾಜ್‍ಕುಮಾರ್ ಹೃದಯಾಘಾತದಿಂದ ಅಕಾಲಿಕವಾಗಿರುವುದು ಕನ್ನಡ ನಾಡಿಗೆ ತುಂಬಲಾರದ ಹಾನಿಯಾಗಿದೆ. ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ಕುಟುಂಬ ಮತ್ತು ಅಭಿಮಾನಿಗಳಿಗೆ ಬರಲಿ ಎಂದು ಮಾಜಿ ಮುಖ್ಯಮಂತ್ರಿ, ಶಾಸಕ ಜಗದೀಶ್ ಶೆಟ್ಟರ್ ಸಂತಾಪ ವ್ಯಕ್ತಪಡಿಸಿದ್ದಾರೆ

  • ಕಳಸಾ ಬಂಡೂರಿ ವಿಚಾರದಲ್ಲಿ ಗೊಂದಲ ಬೇಡ : ಶಂಕರ ಪಾಟೀಲ್ ಮುನೇನಕೊಪ್ಪ

    ಕಳಸಾ ಬಂಡೂರಿ ವಿಚಾರದಲ್ಲಿ ಗೊಂದಲ ಬೇಡ : ಶಂಕರ ಪಾಟೀಲ್ ಮುನೇನಕೊಪ್ಪ

    – ಮಹದಾಯಿ ಹೋರಾಟದಿಂದ ಇಂದು ಅಧಿಕಾರದಲ್ಲಿದ್ದೇವೆ

    ಹುಬ್ಬಳ್ಳಿ: ಮಹಾದಾಯಿ ಹೋರಾಟದಲ್ಲಿ ನಾವೆಲ್ಲಾ ಪಾಲ್ಗೊಂಡಿದ್ದೇವೆ. ನಾನು ಸಹ ಕಳಸಾ ಬಂಡೂರಿ ಹೋರಾಟದಿಂದಲೇ ಬಂದವನು. ಮಹದಾಯಿ ಹೋರಾಟದಲ್ಲಿ ನಾವೆಲ್ಲಾ ಪಾಲ್ಗೊಂಡಿದ್ದಕ್ಕೆ ಇಂದು ಅಧಿಕಾರದಲ್ಲಿದ್ದೇವೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಶಂಕರಪಾಟೀಲ್ ಮುನೇನಕೊಪ್ಪ ಹೇಳಿದ್ದಾರೆ.

    ನೂತನ ಸಚಿವರಾದ ಮೇಲೆ ಮೊದಲ ಬಾರಿಗೆ ಹುಬ್ಬಳ್ಳಿಗೆ ಶಂಕರಪಾಟೀಲ್ ಮುನೇನಕೊಪ್ಪ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿ ಕಳಸಾ ಬಂಡೂರಿ ವಿಚಾರದಲ್ಲಿ ಗೊಂದಲದ ಹೇಳಿಕೆ ಬೇಡವೆಂದು ತಿಳಿಸಿದ್ದಾರೆ.

    ಮಹಾದಾಯಿ ಹೋರಾಟ ವಿಚಾರದಲ್ಲಿ ಈಗಾಗಲೇ ಟ್ರಿಮಿನಲ್ ಆದೇಶ ಆಗಿದೆ. 4 ಟಿಎಂಸಿ ಕುಡಿಯುವ ನೀರಿನ ಆದೇಶ ದೊರೆತಿದೆ. ಸಣ್ಣ ಪುಟ್ಟ ತೊಡಕುಗಳನ್ನು ಬಗೆಹರಿಸಿ ಯೋಜನೆಯನ್ನು ಜಾರಿ ಮಾಡುತ್ತೇವೆ. ಈ ವಿಚಾರದಲ್ಲಿ ಮೂರು ರಾಜ್ಯಗಳ ಸಹಕಾರ ಅಗತ್ಯವಾಗಿದೆ. ಗೊಂದಲಗಳು ಆಗಬಾರದು 330 ಹಳ್ಳಿಗಳಿಗೂ ನೀರು ಕೊಡುವ ಯೋಜನೆ ಮಾಡುತ್ತಿದ್ದೇವೆ. ಹೀಗಾಗಿ ಕಳಸಾ ಬಂಡೂರಿ ವಿಚಾರದಲ್ಲಿ ಗೊಂದಲದ ಹೇಳಿಕೆ ನೀಡುವುದು ಬೇಡವೆಂದು ಮನವಿ ಮಾಡಿದರು. ಅಲ್ಲದೇ ಇನ್ನೂ 60 ದಿನಗಳಲ್ಲಿ ಸಿಹಿ ಸುದ್ದಿ ನೀಡುವುದಾಗಿ ಭರವಸೆ ನೀಡಿದ್ದಾರೆ.

    ಪಕ್ಷ ಬಹು ದೊಡ್ಡ ಜವಾಬ್ದಾರಿಯಿಂದ ನನಗೆ ಸ್ಥಾನ ಕೊಟ್ಟಿದೆ. ಹೀಗಾಗಿ ಮುಖ್ಯ ಮಂತ್ರಿಗಳು ಯಾವ ಸ್ಥಾನ ನೀಡಿದರೂ ಸಮರ್ಥವಾಗಿ ನಿಭಾಯಿಸುವೆ ಎಂದು ಹೇಳಿದ್ದಾರೆ. ಇದನ್ನೂ ಓದಿ:ಎಲ್ಲರೂ ಬಿಟ್ಟಿರುವ ಖಾತೆ ಕೊಟ್ಟರೂ ಓಕೆ: ಮುರುಗೇಶ್ ನಿರಾಣಿ