Tag: ಶಂಕೆ

  • ಪತ್ನಿಯ ಖಾಸಗಿ ಅಂಗಕ್ಕೆ ಬಿಸಿ ಚಾಕು ಇಟ್ಟ ಕ್ರೂರ ಪತಿ!

    ಪತ್ನಿಯ ಖಾಸಗಿ ಅಂಗಕ್ಕೆ ಬಿಸಿ ಚಾಕು ಇಟ್ಟ ಕ್ರೂರ ಪತಿ!

    ಅಹಮದಾಬಾದ್: ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯ ಖಾಸಗಿ ಅಂಗವನ್ನು ಬಿಸಿ ಚಾಕುವಿನಿಂದ ಸುಟ್ಟು ವಿಕೃತಿ ಮೆರೆದಿರುವ ಘಟನೆ ಗುಜರಾತ್‍ನ ರಾಯಗಢ ಪ್ರದೇಶದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

    ಶುಕ್ರವಾರದಂದು 40 ವರ್ಷದ ಮಹಿಳೆ ತನ್ನ ಸ್ನೇಹಿತನ ಜೊತೆ ಮೊಬೈಲ್‍ನಲ್ಲಿ ಮಾತನಾಡುತ್ತಿದ್ದಳು. ಈ ವೇಳೆ ಮನೆಗೆ ಬಂದ ಪತಿ, ಪತ್ನಿ ಫೋನ್‍ನಲ್ಲಿ ಮಾತನಾಡುತ್ತಿರುವುದನ್ನು ಕೇಳಿಸಿಕೊಂಡಿದ್ದಾನೆ. ಬಳಿಕ ಇಬ್ಬರ ನಡುವೆ ಅಕ್ರಮ ಸಂಬಂಧವಿದೆ ಎಂದು ಅನುಮಾನ ಪಟ್ಟು ಜಗಳವಾಡಿದ್ದಾನೆ. ಆಗ ತಾನು ಏನು ತಪ್ಪು ಮಾಡಿಲ್ಲ ಅಂತ ಪತ್ನಿ ಮಕ್ಕಳ ಮೇಲೆ ಪ್ರಮಾಣ ಮಾಡಿದಾಗ ಇನ್ನಷ್ಟು ಕೋಪಗೊಂಡ ಪತಿ ಆಕೆಗೆ ಬೆಲ್ಟ್‍ನಿಂದ ಹಿಗ್ಗಾಮುಗ್ಗಾ ಥಳಿಸಿ ಹಲ್ಲೆ ಮಾಡಿದ್ದಾನೆ.

    ಥಳಿತದಿಂದ ಪತ್ನಿ ಪ್ರಜ್ಞೆತಪ್ಪಿ ಬಿದ್ದಿದ್ದಾಳೆ. ಆಗ ಆಕೆಯ ಖಾಸಗಿ ಅಂಗಕ್ಕೆ ಚಾಕುವೊಂದನ್ನು ಬಿಸಿ ಮಾಡಿ ಇಟ್ಟು ಚಿತ್ರಹಿಂಸೆ ನೀಡಿದ್ದಾನೆ. ಅಷ್ಟಕ್ಕೆ ಸುಮ್ಮನಾಗದೆ ಮರುದಿನ ಮತ್ತೆ ಪತ್ನಿ ಮೇಲೆ ಹಲ್ಲೆ ನಡೆಸಿದ್ದಾನೆ. ಇತ್ತ ಪತಿ ಮನೆಯಿಂದ ಹೊರ ಹೋಗ್ತಿದ್ದಂತೆ ಅಲ್ಲಿಂದ ತಪ್ಪಿಸಿಕೊಂಡ ಪತ್ನಿ, ಸಂಬಂಧಿಕರಿಗೆ ಕರೆ ಮಾಡಿ ವಿಷಯ ತಿಳಿಸಿ ಬಳಿಕ ಆಸ್ಪತ್ರೆ ಸೇರಿದ್ದಾಳೆ.

    ಈ ಘಟನೆಯಿಂದ ಆಕ್ರೋಶಗೊಂಡ ಸಂಬಂಧಿಕರು ವಿಕೃತಿ ಮೆರೆದ ಪತಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಬಗ್ಗೆ ತಿಳಿಯುತ್ತಿದ್ದಂತೆ ಪಾಪಿ ಪತಿ ಪರಾರಿಯಾಗಿದ್ದು, ಆರೋಪಿಯ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಳೇಬರ ಪತ್ತೆ – ರಾಮನಗರಕ್ಕೂ ಮಂಗನ ಕಾಯಿಲೆ ಎಂಟ್ರಿ?

    ಕಳೇಬರ ಪತ್ತೆ – ರಾಮನಗರಕ್ಕೂ ಮಂಗನ ಕಾಯಿಲೆ ಎಂಟ್ರಿ?

    ರಾಮನಗರ: ಮಲೆನಾಡಿಗರ ನಿದ್ದೆಗೆಡಿಸಿದ್ದ ಮಂಗನ ಕಾಯಿಲೆ ಭೀತಿ ಇದೀಗ ರಾಮನಗರಕ್ಕೂ ಕಾಲಿಟ್ಟಿರುವ ಸಂಶಯ ಮೂಡಿದೆ.

    ರಾಮನಗರ ಹೊರವಲಯದಲ್ಲಿ ಅನಾರೋಗ್ಯದಿಂದ ಮೃತಪಟ್ಟಿರುವ ಮಂಗದ ದೇಹ ಪತ್ತೆಯಾಗಿದ್ದು, ಮಂಗನ ಕಾಯಿಲೆ ಶಂಕೆ ಹಿನ್ನೆಲೆಯಲ್ಲಿ ಮೃತ ಮಂಗದ ಮರಣೋತ್ತರ ಪರೀಕ್ಷೆ ನಡೆಸಿ ದೇಹದ ಕೆಲ ಮಾದರಿಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

    ರಾಮನಗರ ಹೊರವಲಯದ ಕಾಮತ್ ಹೋಟೆಲ್ ಬಳಿ ಮಂಗ ಮೃತಪಟ್ಟಿದ್ದು, ಸುಮಾರು 5 ವರ್ಷದ ಹೆಣ್ಣು ಮಂಗ ಸಾವನ್ನಪ್ಪಿದೆ. ಬೆಳಗ್ಗೆ ಹೋಟೆಲ್ ಸಿಬ್ಬಂದಿ ಮಂಗ ಸಾವನ್ನಪ್ಪಿರುವ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಅಧಿಕಾರಿಗಳು ಪಶುವೈಧ್ಯಾಧಿಕಾರಿಗಳ ಮೂಲಕ ಸಾವನ್ನಪ್ಪಿರುವ ಕೋತಿಯ ಮರಣೋತ್ತರ ಪರೀಕ್ಷೆ ನಡೆಸಿದ್ದು, ಮರಣೋತ್ತರ ಪರೀಕ್ಷೆಯ ವೇಳೆ ಮಂಗನ ದೇಹದಲ್ಲಿ ಗೆಡ್ಡೆಯೊಂದು ಕಾಣಿಸಿಕೊಂಡಿದೆ. ಅದು ಮೇಲ್ನೋಟಕ್ಕೆ ಅನಾರೋಗ್ಯದಿಂದ ಆಹಾರ ಸೇವಿಸದೇ ಸಾವನ್ನಪ್ಪಿರುವ ಸಂದೇಹವನ್ನು ವೈದ್ಯಾಧಿಕಾರಿಗಳು ಹೊರಹಾಕಿದ್ದಾರೆ.

    ಮರಣೋತ್ತರ ಪರೀಕ್ಷೆ ನಡೆಸಿ ಮಾದರಿಗಳನ್ನ ಪುಣೆ ಹಾಗೂ ಬೆಂಗಳೂರಿನ ಪ್ರಯೋಗಾಲಯಗಳಿಗೆ ರವಾನಿಸಲಾಗಿದೆ. ರಾಮನಗರ ಹೊರವಲಯದ ಕಾಮತ್ ಹೋಟೆಲ್, ಜನಪದಲೋಕ, ಕೆಂಗಲ್ ಆಂಜನೇಯ ದೇವಾಲಯದ ಬಳಿ ಸುಮಾರು ಐನೂರಕ್ಕು ಹೆಚ್ಚು ಮಂಗಗಳು ವಾಸ ಮಾಡುತ್ತಿದ್ದು, ಇತ್ತೀಚೆಗೆ ಕೆಲವು ಮಂಗಗಳು ಕಾಯಿಲೆಯಿಂದ ಬಳಲುತ್ತಿರುವ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಇದನ್ನೂ ಓದಿ: ಏನಿದು ಮಂಗನ ಜ್ವರ? ಕಾಯಿಲೆ ಹೇಗೆ ಬರುತ್ತೆ? ರೋಗ ಲಕ್ಷಣ ಏನು? ಚಿಕಿತ್ಸೆ ಹೇಗೆ- ಇಲ್ಲಿದೆ ಸಂಪೂರ್ಣ ಮಾಹಿತಿ

    ರಾಜ್ಯದಲ್ಲಿ ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡು ಹಲವರು ಸಾವನ್ನಪ್ಪಿರುವ ಬಗ್ಗೆ ಇದೀಗ ಜನರಲ್ಲಿ ಆತಂಕವನ್ನುಂಟು ಮಾಡಿದೆ. ಸಾವನ್ನಪ್ಪಿರುವ ಕೋತಿಯ ಮರಣೋತ್ತರ ಪರೀಕ್ಷೆಯನ್ನ ಮುಂಜಾಗ್ರತಾ ಕ್ರಮವಾಗಿ ನಡೆಸಲಾಗಿದೆ. ಅಲ್ಲದೇ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರಕ್ತ ಹಾಗೂ ದೇಹದ ಕೆಲವು ಭಾಗಗಳನ್ನು ಕಳುಹಿಸಲಾಗಿದೆ ಎಂದು ಅರಣ್ಯ ಇಲಾಖೆಯ ಎಸಿಎಫ್ ರಾಮಕೃಷ್ಣಪ್ಪ ಮಾಹಿತಿ ನೀಡಿದ್ದಾರೆ. ಇತ್ತ ಮಂಗನ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಹೋಟೆಲ್ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಪೂಜೆ ಪುನಸ್ಕಾರ ನಡೆಸಿ ಕೋತಿಯ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಪತಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪತ್ನಿ

    ಪತಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪತ್ನಿ

    ಮೈಸೂರು: ಅನೈತಿಕ ಸಂಬಂಧ ಎಂದು ಶಂಕಿಸಿ ಪತ್ನಿ ತನ್ನ ಪತಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆಯೊಂದು ಮೈಸೂರಿನ ಉದಯಗಿರಿಯ ಸತ್ಯಾನಗರದಲ್ಲಿ ನಡೆದಿದೆ.

    ಮಹಜರ್ ಪಾಷಾ(45) ಗಾಯಗೊಂಡ ಪತಿ. 23 ವರ್ಷಗಳ ಹಿಂದೆ ಮಮ್ತಾಜ್ ಹಾಗೂ ಮಹಜರ್ ಪಾಷಾ ಮದುವೆಯಾಗಿದ್ದರು. ಈ ದಂಪತಿ ಒಟ್ಟು 6 ಮಕ್ಕಳನ್ನು ಹೊಂದಿದ್ದಾರೆ. ಮಹಜರ್ ಪಾಷಾ ಆಟೋ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದನು ಎಂದು ತಿಳಿದು ಬಂದಿದೆ.

    ಪತಿ ಮಹಜರ್ ಪಾಷಾ ಅನೈತಿಕ ಸಂಬಂಧದ ಬಗ್ಗೆ ದಂಪತಿ ನಡುವೆ ಪದೇ ಪದೇ ಜಗಳವಾಗುತ್ತಿತ್ತು. ಮಹಜರ್ ರಾತ್ರಿ ಮಲಗಿದ್ದ ವೇಳೆ ಮಮ್ತಾಜ್ ಆತನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾಳೆ. ಮಹಜರ್ ಪಾಷಾ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವು ನೋವಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ.

    ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಮ್ತಾಜ್ (44)ಳನ್ನು ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅನೈತಿಕ ಸಂಬಂಧದ ಶಂಕೆ- ಸಹ ಕಾರ್ಮಿಕರಿಂದಲೇ ವ್ಯಕ್ತಿಯ ಭೀಕರ ಹತ್ಯೆ

    ಅನೈತಿಕ ಸಂಬಂಧದ ಶಂಕೆ- ಸಹ ಕಾರ್ಮಿಕರಿಂದಲೇ ವ್ಯಕ್ತಿಯ ಭೀಕರ ಹತ್ಯೆ

    ಚಿತ್ರದುರ್ಗ: ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಸಹ ಕಾರ್ಮಿಕರೇ ಕೊಲೆಗೈದಿರುವ ಘಟನೆ ಚಳ್ಳಕೆರೆ ಪಟ್ಟಣದ ನೂತನ ನಗರಸಭೆಯ ಬಳಿ ನಡೆದಿದೆ.

    ಮೇಸ್ತ್ರಿ ಚನ್ನಕೃಷ್ಣ (38) ಮೃತ ದುರ್ದೈವಿ. ನಾಗರಾಜ್ ಹಾಗೂ ಚಂದ್ರು ಕೊಲೆಗೈದ ಆರೋಪಿಗಳು. ಚನ್ನಕೃಷ್ಣ ಮೂಲತಃ ಆಂಧ್ರದ ನೆಲ್ಲೂರು ಜಿಲ್ಲೆಯ ದುರ್ಗಂಪಲ್ಲಿ ಗ್ರಾಮದ ನಿವಾಸಿಯಾಗಿದ್ದಾರೆ.

    ಚಳ್ಳಕೆರೆಯಲ್ಲಿ ನಗರಸಭೆ ಕಟ್ಟಡ ನಿರ್ಮಾಣದಲ್ಲಿ ಮೇಸ್ತ್ರಿಯಾಗಿ ಕೆಲಸ ಮಾಡಲು ಚನ್ನಕೃಷ್ಣ ಚಳ್ಳಕೆರೆಗೆ ಬಂದಿದ್ದರು. ಹೀಗಾಗಿ ಚನ್ನಕೃಷ್ಣ, ನಾಗರಾಜ್ ಹಾಗೂ ಚಂದ್ರು ನಗರಸಭೆ ಕಟ್ಟಡ ನಿರ್ಮಿಸಲು ಒಟ್ಟಿಗೆ ಕೆಲಸ ಮಾಡುತ್ತಿದ್ದರು. ಈ ವೇಳೆ ತನ್ನ ಪತ್ನಿ ಜೊತೆ ಮೇಸ್ತ್ರಿ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ನಾಗರಾಜ್ ಶಂಕಿಸಿದ್ದಾನೆ. ಬಳಿಕ ತನ್ನ ಸ್ನೇಹಿತ ಚಂದ್ರು ಜೊತೆ ಸೇರಿ ನಾಗರಾಜ್, ಮೇಸ್ತ್ರಿಯನ್ನು ಕೊಲೆ ಮಾಡಲು ನಿರ್ಧರಿಸಿದ್ದಾನೆ.

    ರಾತ್ರಿ ಚನ್ನಕೃಷ್ಣ ಮಲಗಿದ್ದ ವೇಳೆ ದೊಣ್ಣೆಯಿಂದ ಆತನ ತಲೆಗೆ ಹೊಡೆದು ಇಬ್ಬರು ಕೊಲೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಚಳ್ಳಕೆರೆ ಸಿಪಿಐ ತಿಮ್ಮಣ್ಣ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

    ಆರೋಪಿಗಳ ವಿರುದ್ಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಗಾಗಲೆ ಆರೋಪಿ ನಾಗರಾಜ್ ಅನ್ನು ಪೊಲೀಸರು ಬಂಧಿಸಿದ್ದು, ಇನ್ನೋರ್ವ ಆರೋಪಿಗಾಗಿ ಹುಡುಕಾಟ ಮುಂದುವರಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ವಿವಾಹಿತೆ, ಯುವಕ ಒಂದೇ ಸೀರೆಯಲ್ಲಿ ನೇಣು ಬಿಗಿದುಕೊಂಡಂತೆ ಶವ ಪತ್ತೆ!

    ವಿವಾಹಿತೆ, ಯುವಕ ಒಂದೇ ಸೀರೆಯಲ್ಲಿ ನೇಣು ಬಿಗಿದುಕೊಂಡಂತೆ ಶವ ಪತ್ತೆ!

    ಬಳ್ಳಾರಿ: ಜಿಲ್ಲೆಯ ಕೂಡ್ಲಿಗಿ ತಾಲೂಕು ಹುರಳಿಹಾಳು ಗ್ರಾಮದ ಹೊರವಲಯದ ಹೊಲದಲ್ಲಿ ವಿವಾಹಿತೆ ಹಾಗೂ ಯುವಕ ಒಂದೇ ಸೀರೆಯಲ್ಲಿ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

    ವಿವಾಹಿತ ಮಹಿಳೆ ಶೋಭಿತಾ(21) ಹಾಗೂ ಯುವಕ ತಿಪ್ಪೇಸ್ವಾಮಿ(21) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದವರು. ಅಕ್ರಮ ಸಂಬಂಧ ಆರೋಪದ ಹಿನ್ನೆಲೆಯಲ್ಲಿ ಶೋಭಿತಾ ಹಾಗೂ ತಿಪ್ಪೇಸ್ವಾಮಿ ಕೊಲೆಯಾಗಿರುವ ಶಂಕೆ ವ್ಯಕ್ತವಾಗುತ್ತಿದೆ.

    ಶೋಭಿತಾ ಹಾಗೂ ತಿಪ್ಪೇಸ್ವಾಮಿ ಇಬ್ಬರ ಮೃತದೇಹ ಒಂದೇ ಸೀರೆಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತರು ಚಿರತೆಗುಂಡು ಗ್ರಾಮದ ನಿವಾಸಿಗಳು ಎಂದು ಹೇಳಲಾಗುತ್ತಿದೆ. ಅಕ್ರಮ ಸಂಬಂಧ ಹಿನ್ನೆಲೆಯಲ್ಲಿ ಕೊಲೆಯಾಗಿರುವು ಕುರಿತು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

    ಸದ್ಯ ಘಟನಾ ಸ್ಥಳಕ್ಕೆ ಗುಡೇಕೋಟೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ನಾಪತ್ತೆಯಾಗಿದ್ದ ಕೆ.ಆರ್.ಪೇಟೆಯ ತಹಶೀಲ್ದಾರ್ ಸಂಜೆ ವೇಳೆ ಪತ್ತೆ!

    ನಾಪತ್ತೆಯಾಗಿದ್ದ ಕೆ.ಆರ್.ಪೇಟೆಯ ತಹಶೀಲ್ದಾರ್ ಸಂಜೆ ವೇಳೆ ಪತ್ತೆ!

    ಮಂಡ್ಯ: ಇಂದು ಬೆಳಗ್ಗೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕ್ಕೊಳಗಾಗಿದ್ದ ತಹಶೀಲ್ದಾರ್ ರವರು ಕೆ.ಆರ್.ಪೇಟೆಯ ತೆಂಡೇಕೆರೆ ಗ್ರಾಮದ ಬಳಿ ಪತ್ತೆಯಾಗಿದ್ದಾರೆ.

    ತಹಶೀಲ್ದಾರ್ ಮಹೇಶ್ ಚಂದ್ರರವರು ಪತ್ತೆಯಾಗಿರುವ ಕುರಿತು ಖುದ್ದು ಮೈಸೂರು ಜಿಲ್ಲಾ ವರಿಷ್ಠಾಧಿಕಾರಿಗಳಾದ ಅಮಿತ್ ಸಿಂಗ್‍ ರವರು ದೂರವಾಣಿ ಮೂಲಕ ಮಾಹಿತಿ ನೀಡಿದ್ದಾರೆ. ಮಹೇಶ್ ಚಂದ್ರರವರು ಸದ್ಯ ಕೆ.ಆರ್.ಪೇಟೆಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿದ್ದಾರೆ ಎಂದು ತಿಳಿಸಿದ್ದಾರೆ.

    ಖುದ್ದು ತಹಶೀಲ್ದಾರರಾದ ಮಹೇಶ್ ಚಂದ್ರರವರು ಕೆ.ಆರ್.ಪೇಟೆ ಪೊಲೀಸರ ಮುಂದೆ ಹಾಜರಾಗಿದ್ದಾರೆ. ಅಲ್ಲದೇ ಸರ್ಕಲ್ ಇನ್ಸ್ ಪೆಕ್ಟರ್ ಹೆಚ್.ಬಿ. ವೆಂಕಟೇಶಯ್ಯ ಅವರಿಂದ ತಹಶೀಲ್ದಾರ್ ಮಹೇಶ್ ಚಂದ್ರರ ವಿಚಾರಣೆ ನಡೆಯುತ್ತಿದ್ದು, ವಿಚಾರಣೆ ವೇಳೆ ಇಂದು ಬೆಳಗ್ಗೆ ಎರಡು ಮೋಟಾರ್ ಬೈಕುಗಳಲ್ಲಿ ಬಂದಿದ್ದ ನಾಲ್ವರು ದುಷ್ಕರ್ಮಿಗಳು ನನ್ನನ್ನು ಅಪಹರಣ ಮಾಡಿ, ತೆಂಡೇಕೆರೆ ಗ್ರಾಮದ ಬಳಿ ಬಿಟ್ಟು ಹೋಗಿದ್ದಾರೆ ಎಂದು ಮಹೇಶ್ ಚಂದ್ರರವರು ಹೇಳಿಕೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಕೆ.ಆರ್.ಪೇಟೆಯ ತಹಶೀಲ್ದಾರ್ ಅಪಹರಣ

    ತಹಶೀಲ್ದಾರ್ ಮಹೇಶ್ ಚಂದ್ರರವರ ಯೋಗಕ್ಷೇಮವನ್ನು ವಿಚಾರಿಸಲು ಶಾಸಕ ಡಾ.ನಾರಾಯಣಗೌಡರವರು ಠಾಣೆಗೆ ಆಗಮಿಸಿದ್ದಾರೆ. ಅಲ್ಲದೇ ನಾಪತ್ತೆಯಾಗಿದ್ದ ತಹಶೀಲ್ದಾರ್ ನೋಡಲು ಗ್ರಾಮಾಂತರ ಪೊಲೀಸ್  ಠಾಣೆಯ ಮುಂದೆ ನೂರಾರು ಸಾರ್ವಜನಿಕರು ಜಮಾಯಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಬೆಳ್ಳಂಬೆಳಗ್ಗೆ ಕೆ.ಆರ್.ಪೇಟೆಯ ತಹಶೀಲ್ದಾರ್ ಅಪಹರಣ?

    ಬೆಳ್ಳಂಬೆಳಗ್ಗೆ ಕೆ.ಆರ್.ಪೇಟೆಯ ತಹಶೀಲ್ದಾರ್ ಅಪಹರಣ?

    ಮೈಸೂರು: ಕೆ.ಆರ್. ನಗರ ತಾಲೂಕಿನ ಚಿಕ್ಕವಡ್ಡರಗುಡಿ ಗ್ರಾಮದ ಹಾಸನ-ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಕೆ.ಆರ್.ಪೇಟೆಯ ತಹಶೀಲ್ದಾರ್ ರವರು ಅಪಹರಣಕ್ಕೊಳಗಾಗಿದ್ದಾರೆ.

    ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯ ಮಹೇಶ್ ಚಂದ್ರ ನಿಗೂಢವಾಗಿ ಅಪಹರಣಗೊಂಡಿದ್ದಾರೆ. ಇಂದು ಮುಂಜಾನೆ ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಚಿಕ್ಕವಡ್ಡರಗುಡಿ ಗ್ರಾಮದ ಹಾಸನ-ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಮಹೇಶ್ ಚಂದ್ರರವರ ಓಮ್ನಿ ಕಾರು ಹಾಗೂ ಶೂಗಳು ಪತ್ತೆಯಾಗಿದ್ದು, ದುಷ್ಕರ್ಮಿಗಳು ಅಪಹರಣ ಮಾಡಿದ್ದಾರೆ.

    ಇಂದು ಬೆಳಗ್ಗೆ ವಾಹನವನ್ನು ಗಮನಿಸಿದ ಚಿಕ್ಕವಡ್ಡರಗುಡಿ ಗ್ರಾಮಸ್ಥರು ಪೊಲೀಸರಿಗೆ ವಿಷಯವನ್ನು ಮುಟ್ಟಿಸಿದ್ದಾರೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಪರಿಶೀಲನೇ ವೇಳೆ ಓಮ್ನಿ ವಾಹನವು ಕೆ.ಆರ್.ಪೇಟೆಯ ತಹಶೀಲ್ದಾರರಾದ ಮಹೇಶ್ ಚಂದ್ರ ಎಂಬವರದ್ದು ಎಂದು ತಿಳಿದು ಬಂದಿದೆ. ಅಲ್ಲದೇ ಸ್ಥಳದಲ್ಲಿ ಸಿಕ್ಕ ಶೂ ಹಾಗೂ ಹರಿದ ಬಟ್ಟೆ ಚೂರಿನಿಂದಾಗಿ ಅವರನ್ನು ಯಾರಾದರೂ ಅಪಹರಿಸಬಹುದೆಂಬ ಅನುಮಾನಕ್ಕೆ ಕಾರಣವಾಗಿದೆ.

    ತಹಶೀಲ್ದಾರ್ ನಾಪತ್ತೆ ಕುರಿತು ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲೆಯ ಹೆಚ್ಚುವರಿ ಜಿಲ್ಲಾವರಿಷ್ಠಾಧಿಕಾರಿಯಾದ ಅರುಣಾಂಶಿ ಗಿರಿಯವರು, ಮಹೇಶ್ ಚಂದ್ರರವರು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಹಶೀಲ್ದಾರ್ ಆಗಿದ್ದು, ಕಳೆದ ವಾರವಷ್ಟೇ ಅಧಿಕಾರ ಸ್ವೀಕರಿಸಿದ್ದರು. ಮಹೇಶ್ ರವರು ಈ ಹಿಂದೆ ಕೆ.ಆರ್. ನಗರದಲ್ಲಿ ತಹಶೀಲ್ದಾರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಹೀಗಾಗಿ ಅವರ ಕುಟುಂಬದವರು ಕೆ.ಆರ್. ನಗರದಲ್ಲೇ ವಾಸವಾಗಿದ್ದರು. ಎಂದಿನಂತೆ ಗುರುವಾರ ರಾತ್ರಿ 7.30 ಕ್ಕೆ ಕೆ.ಆರ್.ಪೇಟೆಯಲ್ಲಿ ಸಕಾಲ ಸಭೆ ಮುಗಿಸಿ ಹಿಂತಿರುಗುವಾಗ ನಿಗೂಢವಾಗಿ ನಾಪತ್ತೆಯಾಗಿದ್ದಾರೆಂದು ತಿಳಿಸಿದ್ದಾರೆ.

    ಘಟನೆ ಕುರಿತು ಪ್ರತಿಕ್ರಿಯಿಸಿದ ದಕ್ಷಿಣ ವಲಯ ಐಜಿಪಿ ಸೌಮೇಂದ್ರ ಮುಖರ್ಜಿಯವರು, ಘಟನೆ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ. ಆದರೆ ತಹಶೀಲ್ದಾರ್ ಮಹೇಶ್ ಚಂದ್ರ ನಾಪತ್ತೆಯಾಗಿರುವುದು ನಿಜ. ಈ ಹಿನ್ನೆಲೆಯಲ್ಲಿ ಏಳು ತಂಡಗಳಿಂದ ಪತ್ತೆ ಕಾರ್ಯ ನಡೆಯುತ್ತಿದ್ದು, ಮೈಸೂರು, ಮಂಡ್ಯಗಳಲ್ಲಿ ತಲಾ ಮೂರು ತಂಡಗಳು ಹಾಗೂ ಬೆಂಗಳೂರಿನಲ್ಲಿ ಒಂದು ತಂಡ ತನಿಖೆ ನಡೆಸುತ್ತಿದೆ. ಮಹೇಶ್ ಚಂದ್ರರವರ ಕುಟುಂಬಸ್ಥರು ಬೆಂಗಳೂರಿನಲ್ಲಿ ವಾಸವಿದ್ದು, ಅವರು ಮಾಹಿತಿಯನ್ನು ಕಲೆ ಹಾಕುತ್ತಿದ್ದೇವೆ. ಕೆಲ ಹೊತ್ತಿನಲ್ಲಿ ಪ್ರಕರಣದ ಬಗ್ಗೆ ಸ್ಪಷ್ಟತೆ ಸಿಗುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಅನೈತಿಕ ಸಂಬಂಧ ಶಂಕೆ: ಪೋಷಕರೊಂದಿಗೆ ಸೇರಿ ಪತ್ನಿಗೆ ಬೆಂಕಿ ಇಟ್ಟ ಪತಿ!

    ಅನೈತಿಕ ಸಂಬಂಧ ಶಂಕೆ: ಪೋಷಕರೊಂದಿಗೆ ಸೇರಿ ಪತ್ನಿಗೆ ಬೆಂಕಿ ಇಟ್ಟ ಪತಿ!

    ಕಲಬುರಗಿ: ಅನೈತಿಕ ಸಂಬಂಧ ಶಂಕೆ ವ್ಯಕ್ತವಾಗಿದಕ್ಕೆ ಪೋಷಕರ ಜೊತೆ ಸೇರಿ ಪತಿಯೇ ಪತ್ನಿಗೆ ಬೆಂಕಿ ಹಚ್ಚಿದ ಅಮಾನವೀಯ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಕೂಡಲಹಂಗರಗಾ ಗ್ರಾಮದಲ್ಲಿ ನಡೆದಿದೆ.

    ಶಾರದಾಬಾಯಿ (20) ಸಾವು ಬದುಕಿನ ಹೋರಾಡುತ್ತಿರುವ ಪತ್ನಿ. ಶಾರದಾರ ಮುಖ ಸೇರಿದಂತೆ ದೇಹದ ಬಹುತೇಕ ಭಾಗ ಬೆಂಕಿಯಿಂದ ಸುಟ್ಟಿದೆ. ವೀರಣ್ಣ ಬೆಂಕಿ ಹಚ್ಚಿದ ಪತಿ.

    ಒಂದು ವರ್ಷದ ಹಿಂದೆ ಶಾರದಾಬಾಯಿ ಕೊಡಲಹಂಗರಗಾ ಗ್ರಾಮದ ವೀರಣ್ಣ ಜೊತೆ ವಿವಾಹವಾಗಿತ್ತು. ವೀರಣ್ಣ ಕೃಷಿಕನಾಗಿ ಕೆಲಸ ಮಾಡಿಕೊಂಡಿದ್ದನು. ಸಂಶಯ ಸ್ವಭಾವದವನಾಗಿದ್ದ ಪತಿ ವೀರಣ್ಣ, ನಿನ್ನ ನಡೆತೆ ಸರಿಯಾಗಿಲ್ಲ ಅಂತಾ ವಿನಾಕಾರಣ ಜಗಳ ಮಾಡುತ್ತಿದ್ದನು. ಶುಕ್ರವಾರ ಬೆಳಗ್ಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ. ಈ ಕೃತ್ಯ ಎಸಗಲು ವೀರಣ್ಣನ ತಾಯಿ ನೀಲಮ್ಮ ಹಾಗೂ ತಂದೆ ಗುಂಡಪ್ಪ ಸಹಾಯ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

    ಕೃತ್ಯದ ಬಳಿಕ ಶಾರದಾಬಾಯಿ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ವೀರಣ್ಣ ಪರಾರಿಯಾಗಿದ್ದಾನೆ. ಶಾರದಾಬಾಯಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಈ ಕುರಿತು ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ದನದ ವ್ಯಾಪಾರಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ ವ್ಯಕ್ತಪಡಿಸಿದ ಕುಟುಂಬಸ್ಥರು!

    ದನದ ವ್ಯಾಪಾರಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ ವ್ಯಕ್ತಪಡಿಸಿದ ಕುಟುಂಬಸ್ಥರು!

    ಉಡುಪಿ: ದನದ ವ್ಯಾಪಾರಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಪೆರ್ಡೂರಿನಲ್ಲಿ ನಡೆದಿದೆ.

    ದಕ್ಷಿಣ ಕನ್ನಡ ಜಿಲ್ಲೆ ಮೂಲದ ಜೋಕಟ್ಟೆ ನಿವಾಸಿಯಾಗಿರುವ ಹುಸೇನಬ್ಬ ಮೃತ ವ್ಯಕ್ತಿ. ಕಳೆದ 35 ವರ್ಷಗಳಿಂದ ಹಸುವಿನ ವ್ಯಾಪಾರ ಮಾಡುತ್ತಿದ್ದ ಹುಸೇನಬ್ಬ ಕಳೆದ ರಾತ್ರಿ ಉಡುಪಿಯ ಪೆರ್ಡೂರು ಸಮೀಪ ಬರುತ್ತಿರುವಾಗ ಪೊಲೀಸರು ವಾಹನವನ್ನು ಅಡ್ಡಗಟ್ಟಿದ್ದರು. ಹಸು ಸಾಗಾಟದ ವಾಹನದಲ್ಲಿದ್ದ ನಾಲ್ಕೈದು ಮಂದಿ ದಿಕ್ಕಾಪಾಲಾಗಿ ಓಡಿದ್ದಾರೆ. ಈ ವೇಳೆ ಪೊಲೀಸರು ವಾಹವನ್ನು ಕಳೆದ ರಾತ್ರಿಯೇ ವಶ ಪಡಿಸಿಕೊಂಡಿದ್ದಾರೆ.

    ಪೊಲೀಸರಿಂದ ಕಳೆದ ರಾತ್ರಿ ತಪ್ಪಿಸಿಕೊಂಡು ಓಡಿದ್ದ ಹುಸೇನಬ್ಬರ ಮೃತದೇಹ ಬೆಳಗ್ಗೆ ಕಾಫಿ ತೋಟದಲ್ಲಿ ಪತ್ತೆಯಾಗಿದೆ. ಹುಸೇನಬ್ಬ ಅವರ ಮನೆಯವರು ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದು, ದುಷ್ಕರ್ಮಿಗಳು ಕೊಲೆ ಮಾಡಿರಬಹುದು ಎಂದು ಗಂಭೀರ ಆರೋಪ ಮಾಡಿದ್ದಾರೆ.

    ಕಳೆದ ರಾತ್ರಿ ಪೊಲೀಸರು ದಾಳಿ ನಡೆಸಿದ ವೇಳೆ ಅವರೊಂದಿಗೆ ಇತರೇ ಸ್ಥಳಿಯ ಸಂಘಟನೆಗಳ ಕಾರ್ಯಕರ್ತರಿದ್ದರು ಎಂಬ ಶಂಕೆಯನ್ನು ಕುಟುಂಬಸ್ಥರು ವ್ಯಕ್ತಪಡಸಿದ್ದಾರೆ. ಈ ಹಿಂದೆ ಕೂಡಾ ಎರಡು ಮೂರು ಬಾರಿ ಹುಸೇನಬ್ಬ ಮೇಲೆ ಇದೇ ರೀತಿಯ ದಾಳಿ ನಡೆಲಾಗಿತ್ತು ಎಂದು ಆರೋಪಿಸಿರುವ ಅವರು ಸ್ಥಳೀಯ ಸಂಘಟನೆಯ ಕಾರ್ಯಕರ್ತರು ಹೊಡೆದು ಕೊಲೆಗೈದಿರಬಹುದು ಎಂದು ಕುಟುಂಬಸ್ಥರು ಹಿರಿಯಡ್ಕ ಠಾಣೆಯಲ್ಲಿ ಅಸಹಜ ಸಾವಿನ ಪ್ರಕರಣ ದಾಖಲು ಮಾಡಿದ್ದಾರೆ.

    ಸದ್ಯ ಹುಸೇನಬ್ಬ ಅವರ ಮೃತದೇಹವನ್ನು ಮಣಿಪಾಲ ಶವಾಗಾರಕ್ಕೆ ರವಾನಿಸಲಾಗಿದ್ದು, ಹೃದಯಾಘಾತದಿಂದ ಸತ್ತಿರಬಹುದೆಂಬ ಶಂಕೆಯೂ ಇದೆ. ಮೃತರು ಹೃದಯದ ಸಮಸ್ಯೆ ಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮೃತದೇಹದ ಶವಪರೀಕ್ಷೆಯ ವರದಿ ಬಂದ ನಂತರ ಸಾವಿಗೆ ಖಚಿತ ಕಾರಣ ತಿಳಿಯುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಉಡುಪಿ ಎಸ್ ಪಿ ಲಕ್ಷ್ಮಣ್ ನಿಂಬರ್ಗಿ ಮಾಧ್ಯಮಗಳ ಜೊತೆ ಮಾತನಾಡಿ, ಘಟನೆಯ ಕುರಿತು ಪ್ರತ್ಯೇಕ ಎರಡು ಪ್ರಕರಣಗಳು ದಾಖಲಾಗಿದೆ. ಎಲ್ಲಾ ಆಯಾಮಗಳಿಂದಲೂ ತನಿಖೆ ಮಾಡುತ್ತೇವೆ. ಹುಸೇನಬ್ಬ ಕುಟುಂಬಸ್ಥರು ಕೆಲ ಸಂಘಟನೆಯ ಹೆಸರು ಹೇಳಿದ್ದಾರೆ. ಆ ನಿಟ್ಟಿನಲ್ಲೂ ತನಿಖೆ ಮಾಡುತ್ತೇವೆ ಎಂದು ಹೇಳಿದ್ದಾರೆ.