Tag: ಶಕುಂತಲಾ

  • ಹೃದಯಾಘಾತದಿಂದ ಬಹುಭಾಷಾ ನಟಿ ಶಕುಂತಲಾ ನಿಧನ

    ಹೃದಯಾಘಾತದಿಂದ ಬಹುಭಾಷಾ ನಟಿ ಶಕುಂತಲಾ ನಿಧನ

    ಹುಭಾಷಾ ನಟಿ ಶಕುಂತಲಾ (A. Sakunthala) ಅವರು ಹೃದಯಾಘಾತದಿಂದ (Heart Attack) ಸೆ.17ರಂದು ನಿಧನರಾಗಿದ್ದಾರೆ. ಸಿಐಡಿ ಶಕುಂತಲಾ ಎಂದೇ ಫೇಮಸ್ ಆಗಿದ್ದ ನಟಿ ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ. ಇದನ್ನೂ ಓದಿ:ಸಿನಿ ಪ್ರೇಕ್ಷಕರಿಗೆ ಗುಡ್ ನ್ಯೂಸ್: ಸೆ.20ರಂದು ಟಿಕೆಟ್ ಬೆಲೆ 99ಕ್ಕೆ ಇಳಿಕೆ

    ಬೆಂಗಳೂರಿನ ಮಗಳ ಮನೆಯಲ್ಲಿ ವಾಸಿಸುತ್ತಿದ್ದ ನಟಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಮಂಗಳವಾರ (ಸೆ.17) ನಟಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಮನೆಯ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಸೆ.17ರ ಸಂಜೆ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ. ಶಕುಂತಲಾಗೆ 84 ವರ್ಷ ವಯಸ್ಸಾಗಿತ್ತು.

    ಅಂದಹಾಗೆ, ನೃತ್ಯಗಾರ್ತಿಯಾಗಿ ಸಿನಿಮಾ ಇಂಡಸ್ಟ್ರಿಗೆ ಬಂದ ಶಕುಂತಲಾ, ನಂತರ ನಾಯಕಿಯ ಪಟ್ಟಕ್ಕೆ ಏರಿದ್ರು. ಶಿವಾಜಿ ಗಣೇಶನ್, ಎಂಜಿಆರ್, ಜೈಶಂಕರ್ ಮುಂತಾದ ನಾಯಕ ನಟರೊಂದಿಗೆ ನಟಿಸಿದ್ದಾರೆ. ಅಶಿಕ್ಷಿತ ಪ್ರತಿಭೆ, ಕೊಟ್ಟ ದೇವತೆ,ಪಶ್ಚಾತ್ತಾಪ, ವಸಂತ ಅರಮನೆ, ನ್ಯಾಯ, ಭಾರತ ವಿಲಾಸ, ರಾಜರಾಜ ಚೋಳನ್, ಪೊನ್ನುಂಚಲ್ ಸೇರಿದಂತೆ ಹಲವು ತಮಿಳು ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡ ಸೇರಿದಂತೆ ಸುಮಾರು 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಶಕುಂತಲಾ ನಟಿಸಿದ್ದಾರೆ.

  • ಮಿಸ್ಟರ್ ಅಂಡ್ ಮಿಸಸ್ ಮನ್ಮಥ ಸಿನಿಮಾದ ಟ್ರೈಲರ್ ರಿಲೀಸ್

    ಮಿಸ್ಟರ್ ಅಂಡ್ ಮಿಸಸ್ ಮನ್ಮಥ ಸಿನಿಮಾದ ಟ್ರೈಲರ್ ರಿಲೀಸ್

    ಅಂದು ಹಾಸ್ಯನಟ ಕಾಶೀನಾಥ್ ಅವರು ಮನ್ಮಥನ ಪಾತ್ರದಲ್ಲಿ ಪ್ರೇಕ್ಷಕರನ್ನು ರಂಜಿಸಿದ್ದರು, ಈಗ ‘ಮಿ.ಅಂಡ್ ಮಿಸಸ್ ಮನ್ಮಥ’ (Mr and Miss Manmatha) ಹೆಸರಿನಲ್ಲಿ ಚಿತ್ರವೊಂದು ತಯಾರಾಗಿದ್ದು, ಅದರಲ್ಲಿ ಸುಬ್ರಮಣಿ ಅವರು  ಮನ್ಮಥನಾಗಿ ಕಾಣಿಸಿಕೊಂಡಿದ್ದಾರೆ.  ಸುಬ್ರಮಣಿ ಅವರೇ  ನಿರ್ದೇಶನ ಮಾಡಿರುವ ‘ಮಿಸ್ಟರ್ ಅಂಡ್ ಮಿಸ್ ಮನ್ಮಥ’ ಚಿತ್ರದ ಟ್ರೈಲರ್ (Trailer) ಮತ್ತು ಆಡಿಯೋ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು, ಇದೊಂದು ಕಾಮಿಡಿ ಹಾಗೂ ಫ್ಯಾಮಿಲಿ ಎಂಟರ್‌ಟೈನರ್ ಕಥಾಹಂದರ ಇರುವ ಚಿತ್ರವಾಗಿದ್ದು, ಮೂರು ದಶಕಗಳಿಂದ ಸೀರಿಯಲ್, ಸಿನಿಮಾ, ನಾಟಕ ಅಂತ ಅಭಿನಯದಲ್ಲಿ ತೊಡಗಿಕೊಂಡಿರುವ ಎ.ಸುಬ್ರಮಣಿ ರಾಮಗೊಂಡನಹಳ್ಳಿ (Subramani) ಅವರು ಈ ಚಿತ್ರದ ನಿರ್ಮಾಣ ಹಾಗೂ ನಿರ್ದೇಶನದ ಜವಾಬ್ದಾರಿ ಹೊತ್ತು ನಿಭಾಯಿಸಿದ್ದಾರೆ. ಜೊತೆಗೆ ಚಿತ್ರದ ನಾಯಕನಾಗೂ ಸಹ ಅಭಿನಯಿಸಿದ್ದಾರೆ,‌ ರೈತ ಕುಟುಂಬದಿಂದ ಬಂದ ಸುಬ್ರಮಣಿ ರಿಯಲ್ ಎಸ್ಟೇಟ್ ವ್ಯವಹಾರದಲ್ಲೂ ಪಳಗಿ ಈಗ ಚಿತ್ರ ನಿರ್ಮಾಪಕನಾಗಿದ್ದಾರೆ,  ಓರ್ವ ಶ್ರೀಮಂತ ಹಾಗೂ ಆಧುನಿಕ ಮನ್ಮಥನ ಕಥೆಯಿದಾಗಿದ್ದು, ಚಿತ್ರದಲ್ಲಿ ಶಕುಂತಲಾ, ಚಂದನಾ ಹಾಗೂ ವೈಶಾಲಿ(ಮಂಗಳಮುಖಿ) ಎಂಬ ಮೂವರು ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ.

    ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ, ನಾಯಕ ಸುಬ್ರಮಣಿ ಕಳೆದ 94ರಿಂದಲೂ ಒಬ್ಬ ಹೀರೋ ಆಗಬೇಕೆಂದು  ಪ್ರಯತ್ನಿಸಿದೆ, ಐದಾರು ಸೀರಿಯಲ್ ಹಾಗೂ ಅರಬ್ಬೀ ಕಡಲತೀರದಲ್ಲಿ ಸೇರಿದಂತೆ ಹಲವಾರು ಚಿತ್ರಗಳಲ್ಲಿ ಅಭಿನಯಿಸಿದ್ದೇನೆ. ಆರಂಭದಲ್ಲಿ ಮನ್ಮಥ ಒಬ್ಬ ಮೂಗನಾಗಿದ್ದು, ಶ್ರೀಮಂತನಾದ ಆತನಲ್ಲಿರುವ  ಹಣವನ್ನು ಲಪಟಾಯಿಸಲು ಜಾಕ್ ಅಂಡ್ ಜಿಲ್ ಎಂಬ ಇಬ್ಬರು ವ್ಯಕ್ತಿಗಳು ಆತನ ಹಿಂದೆ  ಮೂವರು ಹುಡುಗಿಯರನ್ನು ಛೂ ಬಿಡುತ್ತಾರೆ, ಆದರೆ ಆತ ಯಾವುದೇ ಆಮಿಷಕ್ಕೂ ಬಗ್ಗಲ್ಲ, ಹೀಗೆ ಮನರಂಜನಾತ್ಮಕವಾಗಿ  ಕಥೆಯನ್ನು ಹೇಳಿಕೊಂಡು ಹೋಗಿದ್ದೇವೆ. ಚಿತ್ರಕ್ಕೆ ಬೆಂಗಳೂರು, ಅರಸೀಕೆರೆ, ಮಂಗಳೂರು ಮತ್ತು ಉಡುಪಿ ಸುತ್ತಮತ್ತ ಚಿತ್ರೀಕರಣ ನಡೆಸಲಾಗಿದೆ. ಅಲ್ಲದೆ ಚಿತ್ರವನ್ನು ಅ.6ಕ್ಕೆ ರಿಲೀಸ್ ಮಾಡುವ ಯೋಜನೆಯಿದೆ ಎಂದರು.

     

    ನಂತರ ನಾಯಕಿ ವೈಶಾಲಿ ಮಾತನಾಡಿ ಸಿನಿಮಾದಲ್ಲಿ ಅಭಿನಯಿಸಬೇಕೆಂದು ತುಂಬಾ ಆಸೆಯಿತ್ತು, ನಮಗಾರೂ ಅವಕಾಶ ನೀಡಿರಲಿಲ್ಲ, ಸುಬ್ರಮಣಿ ಅವರು ಅವಕಾಶ ನೀಡಿದ್ದಾರೆ, ಚಿತ್ರದಲ್ಲಿ ರಮ್ಯ ಎಂಬ ಯುವತಿಯ ಪಾತ್ರವನ್ನು ಮಾಡಿದ್ದೇನೆ ಎಂದರು, ಮತ್ತೊಬ್ಬ ನಟಿ ಚಂದನಾ ಮಾತನಾಡಿ ನನ್ನದು ಒಬ್ಬ ಲವರ್ ಪಾತ್ರ, ನಾನು ಸಕಲೇಶಪುರದವಳು ಎಂದು ಹೇಳಿದರು, ಸಂಗೀತ ನಿರ್ದೇಶಕ ಕೆವಿನ್ ಎಂ. ಮಾತನಾಡಿ ಇದು ನನ್ನ ಸಂಗೀತ ನಿರ್ದೇಶನದ 8ನೇ ಚಿತ್ರ, ಚಿತ್ರದಲ್ಲಿ 4 ಹಾಡುಗಳಿದ್ದು, ಎಲ್ಲವೂ ವಿಭಿನ್ನವಾಗಿವೆ ಎಂದರು. ಮಜಾಭಾರತದಲ್ಲಿ ಅಭಿನಯಿಸಿದ ಬಸವರಾಜ ನಾಯಕನ ಸ್ನೇಹಿತನಾಗಿ ಕಾಣಿಸಿಕೊಂಡಿದ್ದಾರೆ, ಮತ್ತೊಬ್ಬ ಸ್ನೇಹಿತನಾಗಿ ರವಿ ಕುಂದಾಪುರ ನಟಿಸಿದ್ದಾರೆ, ಮಾನ್ಯ ಶ್ರೇಯಶ್ರೀ ಕ್ರಿಯೇಶನ್ಸ್  ನಿರ್ಮಾಣದ ಈ ಚಿತ್ರಕ್ಕೆ ವಿಜಯರಾಜ್ ಅವರ ಕಥೆ-ಸಂಕಲನ, ರವಿಶ್ರೀ ಮಾರುತಿ ಅವರ ಸಹನಿರ್ದೇಶನ ಮತ್ತು ಸಂಭಾಷಣೆ, ರವಿ ಅವರ ಛಾಯಾಗ್ರಹಣ, ಜೈಪ್ರಕಾಶ್ ಅವರ ನೃತ್ಯ ನಿರ್ದೇಶನ, ಶಿವು ಅವರ ಸಾಹಸ ನಿರ್ದೇಶನವಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಉಡುಪಿ ವೀಡಿಯೋ ಕೇಸ್‌ – ಸಿಎಂ ವಿರುದ್ಧ ಆಕ್ಷೇಪಾರ್ಹ ಟ್ವೀಟ್‌ ಮಾಡಿದ್ದ ಬಿಜೆಪಿ ಕಾರ್ಯಕರ್ತೆ ಬಂಧನ

    ಉಡುಪಿ ವೀಡಿಯೋ ಕೇಸ್‌ – ಸಿಎಂ ವಿರುದ್ಧ ಆಕ್ಷೇಪಾರ್ಹ ಟ್ವೀಟ್‌ ಮಾಡಿದ್ದ ಬಿಜೆಪಿ ಕಾರ್ಯಕರ್ತೆ ಬಂಧನ

    ಬೆಂಗಳೂರು: ಉಡುಪಿ (Udupi) ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಪಕ್ಷವನ್ನು ಟೀಕಿಸುವ ಭರದಲ್ಲಿ ಸಿಎಂ ವಿರುದ್ಧ ಅವಾಚ್ಯ ಪದಗಳನ್ನು ಬಳಸಿ ಟ್ವೀಟ್‌ ಮಾಡಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ (Shakunthala) ಅವರನ್ನು ಪೊಲೀಸರು ಬಂಧಿಸಿದ್ದಾರೆ.

    ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ವಿರುದ್ಧ ಟ್ವಿಟ್ಟರ್‌ನಲ್ಲಿ ಅವಾಚ್ಯ ಪದಗಳನ್ನು ಬಳಸಿ ಪೋಸ್ಟ್‌ ಹಾಕಿದ್ದ ಬಿಜೆಪಿ (BJP) ಕಾರ್ಯಕರ್ತೆ ಶಕುಂತಲಾ ವಿರುದ್ಧ ಹೈಗ್ರೌಂಡ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು.  ಇದನ್ನೂ ಓದಿ: ವೀಡಿಯೋ ಹಲವು ಬಾರಿ ಫಾರ್ವರ್ಡ್ ಆಗಿದೆ: ಯಶ್‍ಪಾಲ್ ಸುವರ್ಣ ಹೊಸ ಬಾಂಬ್

    ಶಕುಂತಲಾ ಅವರನ್ನು ಹೈಗ್ರೌಂಡ್ ಪೊಲೀಸರು ಬಂಧಿಸಿ ಸ್ಟೇಷನ್ ಬೇಲ್ ಮೇಲೆ ರಿಲೀಸ್ ಮಾಡಿದ್ದಾರೆ. ಠಾಣೆಯಿಂದ ನೇರವಾಗಿ ಬಿಜೆಪಿ ಕಚೇರಿ ತೆರಳಿ ತಮ್ಮ ಪಕ್ಷದ ನಾಯಕರೊಂದಿಗೆ ಅವರು ಚರ್ಚೆ ನಡೆಸಿದರು.

    ಉಡುಪಿಯ ಖಾಸಗಿ ಕಾಲೇಜೊಂದರಲ್ಲಿ ಶೌಚಾಲಯದಲ್ಲಿ ಕೆಲ ವಿದ್ಯಾರ್ಥಿನಿಯರು ಮೊಬೈಲ್‌ ಇಟ್ಟು ಮತ್ತೊಬ್ಬ ವಿದ್ಯಾರ್ಥಿನಿಯ ವೀಡಿಯೋ ಸೆರೆ ಹಿಡಿದಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿತು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ತನಿಖೆ ಆರಂಭಿಸಿದ್ದಾರೆ. ವಿದ್ಯಾರ್ಥಿನಿಯರ ಮೊಬೈಲ್‌ಗಳನ್ನು ಎಫ್‌ಎಸ್‌ಎಲ್‌ಗೆ ತನಿಖೆಗೆ ರವಾನಿಸಲಾಗಿದೆ.

    ವೀಡಿಯೋ ಚಿತ್ರೀಕರಣ ವಿಚಾರ ಕಾಲೇಜು ಆಡಳಿತ ಮಂಡಳಿಗೆ ತಿಳಿಯುತ್ತಿದ್ದಂತೆ ವಿದ್ಯಾರ್ಥಿನಿಯರನ್ನು ಕರೆಸಿ ಬುದ್ದಿಮಾತು ಹೇಳಿ, ವೀಡಿಯೋ ಡಿಲೀಟ್‌ ಮಾಡಿಸಲಾಗಿದೆ. ಅಷ್ಟೇ ಅಲ್ಲದೇ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಕಾಲೇಜು ತಿಳಿಸಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ವ್ಯಾಪಕ ಪ್ರತಿಭಟನೆ ನಡೆಸುತ್ತಿದೆ. ಇದನ್ನೂ ಓದಿ: ಬುರ್ಖಾ ಧರಿಸದಿದ್ದಕ್ಕೆ ಮುಸ್ಲಿಂ ವಿದ್ಯಾರ್ಥಿನಿಯರನ್ನ ಬಸ್ ಹತ್ತಲು ಬಿಡದ ಡ್ರೈವರ್ ಅಮಾನತು

    ಬಿಜೆಪಿ ಕಚೇರಿಯಿಂದ ಎಸ್‌ಪಿ ಕಚೇರಿ ವರೆಗೂ ಶಾಸಕ ಯಶ್‌ಪಾಲ್‌ ಸುವರ್ಣ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ವಿದ್ಯಾರ್ಥಿಗಳನ್ನು ಡಿಬಾರ್‌ ಮಾಡಬೇಕು. ಪ್ರಕರಣವನ್ನು ಕೇಂದ್ರ ತನಿಖಾ ಸಂಸ್ಥೆಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]