Tag: ಶಕ್ತಿಯೋಜನೆ

  • ತಲೆ ಮೇಲೆ ಹರಿದ ಸರ್ಕಾರಿ ಬಸ್- ವಿದ್ಯಾರ್ಥಿ ಸ್ಥಳದಲ್ಲೇ ಸಾವು

    ತಲೆ ಮೇಲೆ ಹರಿದ ಸರ್ಕಾರಿ ಬಸ್- ವಿದ್ಯಾರ್ಥಿ ಸ್ಥಳದಲ್ಲೇ ಸಾವು

    ಗದಗ: ಸರ್ಕಾರಿ ಬಸ್ ತಲೆ ಮೇಲೆ ಹರಿದು ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ನರಗುಂದ (Naragunda) ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ನಡೆದಿದೆ.

    ರಾಘವೇಂದ್ರ ಮನಿಕಟ್ಟಿ (20) ಮೃತ ವಿದ್ಯಾರ್ಥಿ. ಶಕ್ತಿಯೋಜನೆ ಪ್ರಭಾವದಿಂದ ಬಸ್ ಪೂರ್ತಿ ಪ್ರಯಾಣಿಕರು ತುಂಬಿದ್ದರು. ರಾಘವೇಂದ್ರ ಬಸ್ಸಿನ ಮುಂದಿನ ಬಾಗಿಲಲ್ಲಿ ನಿಂತಿದ್ದ. ಬಸ್ ಕೊಣ್ಣೂರ (Konnur) ನಿಲ್ದಾಣದಿಂದ ಹೊರಡುವ ವೇಳೆ ತಿರುವಿನಲ್ಲಿ ಆಯಾತಪ್ಪಿ ವಿದ್ಯಾರ್ಥಿ ಕೆಳಗೆ ಬಿದ್ದಿದ್ದಾನೆ. ಬಸ್ಸಿನ ಹಿಂದಿನ ಚಕ್ರಗಳಿಗೆ ವಿದ್ಯಾರ್ಥಿ ಸಿಲುಕಿದ್ದು, ತೀವ್ರ ರಕ್ತ ಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತ ವಿದ್ಯಾರ್ಥಿಯ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ಲಾಬಿ ಎಟಿಎಂ ಮಷಿನ್‌ನಲ್ಲಿ ಹಣ ಹಾಕಲು ಬಂದು 39,500 ರೂ. ಕಳೆದುಕೊಂಡ ವ್ಯಕ್ತಿ

    ಕೊಣ್ಣೂರ ನರಗುಂದ ಪಟ್ಟಣದ ಸರ್ಕಾರಿ ಸಿದ್ಧೇಶ್ವರ ಪದವಿ ಕಾಲೇಜಿನಲ್ಲಿ ರಾಘವೇಂದ್ರ ಅಂತಿಮ ವರ್ಷದ ಬಿಎ ವ್ಯಾಸಂಗ ಮಾಡುತ್ತಿದ್ದ. ಬೆಳಗಾವಿ (Belagavi) ಜಿಲ್ಲೆಯ ರಾಮದುರ್ಗದಿಂದ ಕೊಣ್ಣೂರ, ನರಗುಂದ, ಗದಗ ಮಾರ್ಗವಾಗಿ ಹೊಸಪೇಟೆಗೆ ಹೊರಟಿದ್ದ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಇದನ್ನೂ ಓದಿ: ಅಭಿವೃದ್ಧಿಗೆ ಬ್ರೇಕ್ ಹಾಕುವಲ್ಲಿ ಕಾಂಗ್ರೆಸ್, ಮಿತ್ರಪಕ್ಷಗಳಿಂದ ಪಿಹೆಚ್‌ಡಿ: ಮೋದಿ ವಾಗ್ದಾಳಿ

    ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಗದಗ (Gadaga) ಜಿಲ್ಲೆಯ ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: Kalaburagi| ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ

  • ಶಕ್ತಿ ಯೋಜನೆ ನಿಲ್ಲಿಸಲು ಸರ್ಕಾರದ ಹುನ್ನಾರ, ಮರು ಪರಿಶೀಲನೆ ಎಂಬುದು ನಾಟಕ: ಹೆಚ್‌ಡಿಕೆ

    ಶಕ್ತಿ ಯೋಜನೆ ನಿಲ್ಲಿಸಲು ಸರ್ಕಾರದ ಹುನ್ನಾರ, ಮರು ಪರಿಶೀಲನೆ ಎಂಬುದು ನಾಟಕ: ಹೆಚ್‌ಡಿಕೆ

    ರಾಮನಗರ: ರಾಜ್ಯ ಮಹಿಳೆಯರಿಗೆ ಉಚಿತ ಬಸ್ ಸಾರಿಗೆ ಸೌಲಭ್ಯ ಒದಗಿಸಲಾಗಿರುವ ಶಕ್ತಿ ಯೋಜನೆಯನ್ನು (Shakti Scheme) ಸ್ಥಗಿತ ಇಲ್ಲವೇ ಮರು ಪರಿಶೀಲನೆ ಮಾಡುವ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿಕೆ ವಿರುದ್ಧ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ತಿಟ್ಟಮಾರನಹಳ್ಳಿ ಗ್ರಾಮದಲ್ಲಿ ಮಾತನಾಡಿದ ಅವರು, ಒಂದೊಂದಾಗಿ 5 ಗ್ಯಾರಂಟಿಗಳನ್ನು (Guarantee Scheme) ನಿಲ್ಲಿಸಲು ಇದೊಂದು ಮೊದಲ ಹೆಜ್ಜೆ ಅಷ್ಟೇ. ಇನ್ನು ಕೆಲವೇ ದಿನಗಳಲ್ಲಿ ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ, ಯುವನಿಧಿ ಕಾರ್ಯಕ್ರಮಗಳನ್ನು ನಿಲ್ಲಿಸಲಿದ್ದಾರೆ. ಅದಕ್ಕೆ ಇವರು ಮರು ಪರಿಶೀಲನೆ ಎಂಬ ಪೀಠಿಕೆ ಹಾಕಿಕೊಂಡಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಕಾಂಗ್ರೆಸ್ ಕುತಂತ್ರದಿಂದ ನಾನು ಎರಡು ಬಾರಿ ಸೋತಿದ್ದೇನೆ: ಭಾಷಣದ ವೇಳೆ ನಿಖಿಲ್ ಕಣ್ಣೀರು

    ಮಹಿಳೆಯರು ಶಕ್ತಿ ಯೋಜನೆಯನ್ನು ನಿಲ್ಲಿಸಿ ಎಂದು ಒತ್ತಾಯ ಮಾಡುತ್ತಿದ್ದಾರೆ. ಅಥವಾ ಮಹಿಳೆಯರು ಆರ್ಥಿಕವಾಗಿ ಬಲಾಢ್ಯರಾಗಿದ್ದಾರೆ ಎಂದು ಇವರಿಗೆ ಹೊಸ ಜ್ಞಾನೋದಯ ಆಗಿದೆಯಾ? ಕೇವಲ ಒಂದೂವರೆ ವರ್ಷದಲ್ಲಿ ಇವರು ಆರ್ಥಿಕವಾಗಿ ಬಲಾಢ್ಯರಾಗಿದ್ದಾರೆಯೇ? ಶಕ್ತಿ ಯೋಜನೆಯ ಮರು ಪರಿಶೀಲನೆಯ ನಾಟಕ ಗ್ಯಾರಂಟಿಗಳನ್ನು ಒಂದೊಂದಾಗಿಯೇ ತೆಗೆಯಲು ಮೊದಲ ಹಂತದ ಪ್ರಕ್ರಿಯೆ ಎಂದೇ ಭಾವಿಸಬೇಕಾಗುತ್ತದೆ. ಇದು ಗ್ಯಾರಂಟಿ ನಿಲ್ಲಿಸಲು ಒಂದು ಪೀಠಿಕೆ ಮಾತ್ರ. ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಗ್ಯಾರಂಟಿಗಳನ್ನೇ ಪ್ರಮುಖವಾಗಿ ಇವರು ಹೇಳುತ್ತಿದ್ದರು. ನುಡಿದಂತೆ ನಡೆದಿದ್ದೇವೆ ಎಂದು ಜನರ ಬ್ರೈನ್‌ವಾಷ್ ಮಾಡುತ್ತಿದ್ದರು. ಇದರಿಂದ ಅಭಿವೃದ್ಧಿ ಕೆಲಸಗಳನ್ನು ಸಂಪೂರ್ಣವಾಗಿ ನಿಲ್ಲಿಸಿದ್ದರು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಸೇನಾ ವಾಪಸಾತಿ ಬಳಿಕ ಗಡಿಯಲ್ಲಿ ದೀಪಾವಳಿ ಸಿಹಿ ಹಂಚಿಕೊಂಡ ಭಾರತ-ಚೀನಾ ಸೈನಿಕರು

    ತೆರಿಗೆ ಅಧಿಕಾರಿಗಳ ಸಭೆ ಮಾಡಿ ಇನ್ನೂ ಹೆಚ್ಚುವರಿಯಾಗಿ 10,000 ಕೋಟಿ ರೂ. ವಸೂಲಿ ಮಾಡುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಅಂದರೆ ಇನ್ನಷ್ಟು ಸುಲಿಗೆ ಮಾಡಿ ಅಂತ ಅರ್ಥ ಅಲ್ಲವೇ? ಇದು ಯಾವ ಪುರುಷಾರ್ಥಕ್ಕೆ ಎಂದು ಹರಿಹಾಯ್ದರು. ಇದನ್ನೂ ಓದಿ: ಗ್ಯಾರಂಟಿ ಯೋಜನೆ ಕೊಡಲು ಆಗದ ಕಾಂಗ್ರೆಸ್ ಸರ್ಕಾರ ಯೂಟರ್ನ್ ಸರ್ಕಾರ: ಛಲವಾದಿ ನಾರಾಯಣಸ್ವಾಮಿ

  • ಶಕ್ತಿ ಯೋಜನೆ ಎಫೆಕ್ಟ್ – ಓಲಾ, ಊಬರ್‌ಗೂ ತಟ್ಟಿದ ಬಿಸಿ

    ಶಕ್ತಿ ಯೋಜನೆ ಎಫೆಕ್ಟ್ – ಓಲಾ, ಊಬರ್‌ಗೂ ತಟ್ಟಿದ ಬಿಸಿ

    – ಬುಕ್ಕಿಂಗ್ ಸಂಖ್ಯೆಯಲ್ಲಿ ಕೊಂಚ ಇಳಿಕೆ
    – ಎರಡೇ ದಿನಕ್ಕೆ ಕಂಗಲಾದ ಓಲಾ-ಊಬರ್, ಟ್ಯಾಕ್ಸಿ ಚಾಲಕರು

    ಬೆಂಗಳೂರು: ರಾಜ್ಯದಲ್ಲಿ ಶಕ್ತಿ ಯೋಜನೆಗೆ (Shakti Scheme) ಅಭೂತಪೂರ್ವ ಮೆಚ್ಚುಗೆ ವ್ಯಕ್ತವಾಗ್ತಿದೆ. ಕೆಲವೆಡೆ ಜನರಿಂದ ವಿರೋಧವೂ ವ್ಯಕ್ತವಾಗ್ತಿದೆ. ಈ ನಡುವೆ ಶಕ್ತಿ ಯೋಜನೆಯ ಎಫೆಕ್ಟ್ ಓಲಾ, ಊಬರ್‌ಗೂ (Ola, Uber) ತಟ್ಟಿದ್ದು, ಬುಕ್ಕಿಂಗ್‌ನಲ್ಲಿ ಶೇ.30 ರಷ್ಟು ಇಳಿಕೆಯಾಗಿದೆ .

    ಹೌದು. ಶಕ್ತಿ ಯೋಜನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಮಹಿಳೆಯರು BMTC ಬಸ್‌ನತ್ತ ಮುಖ ಮಾಡಿದ್ದಾರೆ. ಆಸ್ಪತ್ರೆ, ಆಫೀಸ್, ಶಾಪಿಂಗ್, ಹೀಗೆ ವಿವಿಧ ಕೆಲಸಗಳಿಗೆ ನಗರದಲ್ಲಿ ಬಿಎಂಟಿಸಿಯನ್ನೇ ಹೆಚ್ಚು ಅವಲಂಬಿಸಿಕೊಂಡಿದ್ದಾರೆ. ಹೀಗಾಗಿ ಫ್ರೀ ಬಸ್ ಪ್ರಯಾಣದ ಎಫೆಕ್ಟ್ ಓಲಾ, ಊಬರ್‌ಗೂ ತಟ್ಟಿದೆ. ಇದನ್ನೂ ಓದಿ: ‘ಶಕ್ತಿ’ ಯೋಜನೆಗೆ ಭರ್ಜರಿ ರೆಸ್ಪಾನ್ಸ್- ಮೊದಲ ದಿನವೇ 5.71 ಲಕ್ಷ ಮಹಿಳೆಯರ ಸಂಚಾರ

    ಶಕ್ತಿ ಯೋಜನೆ ಜಾರಿಯಾದ ಎರಡು ದಿನಗಳಿಂದ, ಓಲಾ-ಊಬರ್ ಚಾಲಕರಿಗೆ ಬುಕ್ಕಿಂಗ್‌ನಲ್ಲಿ ವಿಳಂಬವಾಗ್ತಿದೆ. ಗಂಟೆಗೆ ಒಂದೋ ಎರಡೋ ಬುಕ್ಕಿಂಗ್ ಬರುತ್ತಿದೆ. ಹೀಗಾಗಿ ಓಲಾ- ಊಬರ್, ಟ್ಯಾಕ್ಸಿ ಚಾಲಕರು ಆತಂಕದಲ್ಲಿದ್ದಾರೆ. ಈ ಪರಿಸ್ಥಿತಿ ಹೀಗೆ ಮುಂದುವರಿದರೆ ನಮ್ಮ ಹೊಟ್ಟೆ ಮೇಲೂ ಸರ್ಕಾರ ಹೊಡೆದಂತಾಗುತ್ತೆ. ಕನಿಷ್ಟ ಪಕ್ಷ ಸರ್ಕಾರ ನಮ್ಮ ವಾಹನಗಳ ಮೇಲಿರುವ ಪರ್ಮಿಟ್ ಟ್ಯಾಕ್ಸ್ ಆದ್ರೂ ಕಡಿಮೆ ಮಾಡಲಿ ಅಂತಾ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಫ್ರೀ ಬಸ್ ಟಿಕೆಟ್ ಪಡೆಯುವ ಮಹಿಳೆಯರಿಗೆ ಗುಡ್‍ನ್ಯೂಸ್

    ಕೇವಲ ಟ್ಯಾಕ್ಸಿಗಳಿಗೆ ಮಾತ್ರವಲ್ಲ, ಆಟೋಗಳಿಗೂ ಬಾಡಿಗೆ ಸಿಗ್ತಿಲ್ಲ. ಬಡವರ್ಗ, ಮಧ್ಯಮ ವರ್ಗದವ್ರೆಲ್ಲಾ, ಬಿಎಂಟಿಸಿಯತ್ತ ಮುಖ ಮಾಡಿದ್ರೆ, ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡೋರು, ಉನ್ನತ ಹುದ್ದೆಯಲ್ಲಿರುವವರು, ಹಣ ಇದ್ದವ್ರು ಮಾತ್ರ ಓಲಾ-ಊಬರ್‌ನಲ್ಲಿ ಪ್ರಯಾಣ ಮಾಡ್ತಿದ್ದಾರೆ ಅನ್ನೋದು ಆಟೋ ಹಾಗೂ ಟ್ಯಾಕ್ಸಿ ಚಾಲಕರ ಮಾತು.