Tag: ಶಕ್ತಿ ಯೋಜನೆ

  • ಶಕ್ತಿ ಯೋಜನೆ ಪ್ರತಿಷ್ಠಿತ ವಿಶ್ವ ದಾಖಲೆಗೆ ಸೇರ್ಪಡೆ; Golden Book of World Records ನಲ್ಲಿ ದಾಖಲು

    ಶಕ್ತಿ ಯೋಜನೆ ಪ್ರತಿಷ್ಠಿತ ವಿಶ್ವ ದಾಖಲೆಗೆ ಸೇರ್ಪಡೆ; Golden Book of World Records ನಲ್ಲಿ ದಾಖಲು

    ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಹಾಗೂ ಮಹಿಳಾ ಸಬಲೀಕರಣದ‌ ದಿಟ್ಟ ಯೋಜನೆಯಾದ ಶಕ್ತಿ ಯೋಜನೆಯು Golden Book of World Records ನಲ್ಲಿ ಅತಿ ಹೆಚ್ಚು ಮಹಿಳಾ ಪ್ರಯಾಣಿಕರು ಪ್ರಯಾಣಿಸಿರುವ (2023ರ ಜೂನ್ 11 ರಿಂದ 2025 ರ ಜುಲೈ 25 ಅವಧಿ) 5 ಬಿಲಿಯನ್, 49‌ ಮಿಲಿಯನ್, 426 ಸಾವಿರ, 417 ಮಹಿಳೆಯರು ಅಂದರೆ 500 ಕೋಟಿ ಮಹಿಳಾ ಪ್ರಯಾಣಿಕರ ಟಿಕೆಟ್ ಪ್ರಯಾಣವು ವಿಶ್ವ ದಾಖಲೆಯಲ್ಲಿ ಸ್ಥಾನ‌ ಪಡೆದಿದೆ.

    ಶಕ್ತಿ ಯೋಜನೆಯು (Shakti Scheme) ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ಔದ್ಯೋಗಿಕವಾಗಿ ಮಹಿಳೆಯರನ್ನು ಸಬಲರನ್ನಾಗಿಸುತ್ತದೆ ಎಂದು ಬಲವಾಗಿ ನಂಬಿದ್ದವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉಪ ಮುಖ್ಯಮಂತ್ರಿ‌ ಹಾಗೂ ಕೆಪಿಸಿಸಿ‌ ಅಧ್ಯಕ್ಷ ಡಿ.ಕೆ‌.ಶಿವಕುಮಾರ್. ಈ‌‌ ಚಾರಿತ್ರಿಕ ಸಾಧನೆಯು ಕೆಎಸ್‌ಆರ್‌ಟಿ‌ಸಿ, ಬಿಎಂಟಿಸಿ ವಾ‌ಯವ್ಯ ಕರ್ನಾಟಕ ರಸ್ತೆ ಸಾರಿಗೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ‌ ಆಡಳಿತ ಮಂಡಳಿ ಸಾರಿಗೆ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸಾರಿಗೆ ಇಲಾಖೆಯ ಕಾರ್ಯದರ್ಶಿ, ವ್ಯವಸ್ಥಾಪಕ ನಿರ್ದೇಶಕರು, ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸಮರ್ಪಿಸಲಾಗಿದೆ. ಇದನ್ನೂ ಓದಿ: ಬಿಜೆಪಿಯವ್ರು ರಾಜಕೀಯಕ್ಕಾಗಿ ಧರ್ಮಸ್ಥಳದ ಹೆಸರು ಬಳಕೆ ಮಾಡ್ತಿದ್ದಾರೆ – ಡಿಕೆಶಿ

    ನಾನು ಸಾರಿಗೆ ಸಚಿವನಾಗಿ ಎರಡನೇ ಬಾರಿಗೆ ಅಧಿಕಾರ ವಹಿಸಿಕೊಂಡ‌ ಕೂಡಲೇ ದೇಶದಲ್ಲೇ ಪ್ರಪ್ರಥಮ ಬಾರಿಗೆ ‌ಜಾರಿಗೆ ತಂದ ಗ್ಯಾರಂಟಿ ಯೋಜನೆಯಾದ ಶಕ್ತಿ‌ ಯೋಜನೆಯು‌ ಅತ್ಯಂತ ಸವಾಲಿನಿಂದ‌ ಕೂಡಿತ್ತು. ಕಳೆದ ಐದಾರು ವರ್ಷದಲ್ಲಿ ಸಾರಿಗೆ ಸಂಸ್ಥೆಗಳಲ್ಲಿ ಹೊಸ‌ ಬಸ್ಸುಗಳ ಸೇರ್ಪಡೆಯಾಗಿಲ್ಲ. ಹೊಸ‌ ನೇಮಕಾತಿ ಆಗಿಲ್ಲ, ಸಾರಿಗೆ ಸಂಸ್ಥೆಗಳು ಸಾಲದ‌ ಸುಳಿಯಲ್ಲಿದ್ದವು. ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಒಂದು ತಂಡವಾಗಿ ಕರ್ತವ್ಯ ನಿರ್ವಹಿಸಿ ಶಕ್ತಿ ಯೋಜನೆಯನ್ನು ಯಶಸ್ವಿಯಾಗಿ ಮುನ್ನಡೆಸಿರುವುದು ನನಗೆ ವೈಯಕ್ತಿಕವಾಗಿ ಸಂತೃಪ್ತಿ ತಂದಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

    ಈ ಎರಡು ವರ್ಷಗಳ ಶಕ್ತಿ ಯೋಜನೆಯ ಹಾದಿಯಲ್ಲಿ ಸಾರಿಗೆ ಸಂಸ್ಥೆಗಳಲ್ಲಿ‌‌ 5,800 ಹೊಸ ಬಸ್‌ಗಳ ಸೇರ್ಪಡೆ, 10,000 ಹೊಸ ನೇಮಕಾತಿ, ಸಾಲ ಪಾವತಿಸಲು ಸರ್ಕಾರದಿಂದ 2,000 ಕೋಟಿ ಸಹಾಯ, ಸಾರಿಗೆ ಸಂಸ್ಥೆಗಳ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳ ಇತರೆ ಅಮೂಲಾಗ್ರ ಬದಲಾವಣೆಗೆ ಕಾರಣವಾಗಿದೆ. ಸಾರಿಗೆ ಸಂಸ್ಥೆಗಳಲ್ಲಿ ಹತ್ತು ಹಲವು ಸವಾಲುಗಳಿದ್ದು, ಎಲ್ಲವನ್ನು ನಾನು ಇತ್ಯರ್ಥ ಪಡಿಸಲು ಸಾಧ್ಯವಿಲ್ಲ. ಆದರೆ ಪ್ರಾಮಾಣಿಕವಾಗಿ ಪ್ರಯತ್ನ ಮಾಡಿದ್ದೇನೆ ಮತ್ತು ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ವಿಧಾನ ಮಂಡಲದ ಅಧಿವೇಶನ ಮುಗಿದ ಬಳಿಕ ಬಿಪಿಎಲ್ ಕಾರ್ಡ್ ಪರಿಷ್ಕರಣೆ: ಮುನಿಯಪ್ಪ

    Beyond Free Rides- ಎಂಬ ಹೆಸರಿನಲ್ಲಿ Sustainable Mobility Networkನಿಂದ ದೇಶದ 10 ನಗರಗಳಲ್ಲಿ ಮಹಿಳೆಯರಿಗೆ ನೀಡಲಾಗುತ್ತಿರುವ ಉಚಿತ ಬಸ್ ಪ್ರಯಾಣದ ಬಗ್ಗೆ ನಡೆಸಿರುವ ಅಧ್ಯಯನದ ವರದಿಯು ಬೆಂಗಳೂರಿನಲ್ಲಿ 23% ಮತ್ತು ಹುಬ್ಬಳ್ಳಿ-ಧಾರವಾಡದಲ್ಲಿ 21% ಮಹಿಳಾ ಉದ್ಯೋಗಿಗಳ ಸಂಖ್ಯೆಯು ಶಕ್ತಿ ಯೋಜನೆಯಿಂದ ಹೆಚ್ಚಳವಾಗಿದೆಯೆಂದು ತಿಳಿಸಿದೆ. ಇದರಿಂದ‌ ರಾಜ್ಯದ ತಲಾ ಆದಾಯವು ಹೆಚ್ಚಳವಾಗಲು ಕಾರಣವಾಗಿದೆ ಎಂದಿದ್ದಾರೆ.

    ವಿಶ್ವ ದಾಖಲೆಗೆ ಸೇರ್ಪಡೆಯಾದ ಶಕ್ತಿ ಯೋಜನೆಯಲ್ಲಿ ತೊಡಗಿಸಿಕೊಂಡ ಪ್ರತಿಯೊಬ್ಬರಿಗೂ ಇಂದು ಹೆಮ್ಮೆ ಮತ್ತು ಗೌರವ. ಶಕ್ತಿ ಯೋಜನೆಯನ್ನು ದೇಶದ ವಿವಿಧ ರಾಜ್ಯಗಳಲ್ಲಿ‌ ಬೇರೆ ಬೇರೆ ಹೆಸರು, ಬದಲಾವಣೆಗಳೊಂದಿಗೆ ಜಾರಿಗೆ ತರಲಾಗುತ್ತಿರುವುದೇ ನಮ್ಮ ಸರ್ಕಾರದ ಶಕ್ತಿ‌ ಯೋಜನೆಯ ಯಶಸ್ಸಿಗೆ ಹಿಡಿ‌ದ ಕೈಗನ್ನಡಿಯಾಗಿದೆ ಎಂದು ತಿಳಿಸಿದ್ದಾರೆ.

  • ಫ್ರೀ ಬಸ್ ಎಫೆಕ್ಟ್ – ಉಸಿರುಗಟ್ಟಿ ಕಾಪಾಡಿ ಎಂದು ಕೂಗಿಕೊಂಡ ಮಹಿಳೆ

    ಫ್ರೀ ಬಸ್ ಎಫೆಕ್ಟ್ – ಉಸಿರುಗಟ್ಟಿ ಕಾಪಾಡಿ ಎಂದು ಕೂಗಿಕೊಂಡ ಮಹಿಳೆ

    ತುಮಕೂರು: ಮಹಿಳಾ ಪ್ರಯಾಣಿಕರಿಗಾಗಿ ಸರ್ಕಾರ ನೀಡಿರುವ ಫ್ರೀ ಬಸ್ ಯೋಜನೆ (Shakti Scheme) ಹಲವು ಫಜೀತಿ ಸೃಷ್ಟಿ ಮಾಡುತ್ತಿದೆ. ಮೈಸೂರಿನಿಂದ ತುಮಕೂರಿಗೆ (Tumakuru) ಸಂಚರಿಸುತ್ತಿದ್ದ ಬಸ್‌ನಲ್ಲಿ ಮಹಿಳೆಯೊಬ್ಬರು ಉಸಿರುಗಟ್ಟಿ ಕಿರುಚಾಡಿದ ಘಟನೆ ತುಮಕೂರು ಜಿಲ್ಲೆ ಕುಣಿಗಲ್ (Kunigal) ಪಟ್ಟಣದಲ್ಲಿ ನಡೆದಿದೆ.

    ಅತಿಯಾದ ಜನಸಂದಣಿಯಲ್ಲಿ ಬಸ್‌ನೊಳಗೆ ಉಂಟಾದ ತೀವ್ರ ನೂಕಾಟ-ತಳ್ಳಾಟದಿಂದ ಮಹಿಳೆಯೊಬ್ಬರಿಗೆ ಉಸಿರಾಡಲು ತೀವ್ರ ತೊಂದರೆ ಉಂಟಾಗಿದೆ. ನನ್ನನ್ನು ಕಾಪಾಡಿ, ಬಸ್ಸಿನಿಂದ ಕೆಳಗಿಳಿಸಿ ಎಂದು ಜೋರಾಗಿ ಮಹಿಳಾ ಪ್ರಯಾಣಿಕರೊಬ್ಬರು ಕೂಗಿಕೊಂಡಿದ್ದಾರೆ. ತಕ್ಷಣವೇ ಬಸ್ಸು ನಿಲ್ಲಿಸಿದ ನಿರ್ವಾಹಕರು ಮಹಿಳೆಯನ್ನು ಕೆಳಗಿಳಿಸಿದ್ದಾರೆ. ಇದನ್ನೂ ಓದಿ: ಹಳೆ ಬೇರು ಹೊಸ ಚಿಗುರು ರೀತಿ ವಿಜಯೇಂದ್ರ ಎಲ್ಲರನ್ನೂ ಒಟ್ಟಾಗಿ ಕರೆದೊಯ್ಯುತ್ತಿದ್ದಾರೆ: ರೇಣುಕಾಚಾರ್ಯ

    ಈ ಬಸ್ ಮೈಸೂರು ತುಮಕೂರು ಮಾರ್ಗದಲ್ಲಿ ಸಂಚರಿಸುತ್ತಿತ್ತು. ಗೌಡಗೆರೆ ಚಾಮುಂಡೇಶ್ವರಿ ದೇವಾಲಯಕ್ಕೆ ಹೋಗಿದ್ದ ಮಹಿಳಾ ತಂಡ ಈ ಬಸ್ಸಿನಲ್ಲಿ ಹೋಗುತ್ತಿದ್ದ ವೇಳೆ ಘಟನೆ ನಡೆದಿದೆ.  ಇದನ್ನೂ ಓದಿ: ಕಾಡಾನೆ ದಾಳಿ – ಮನೆ ಮೇಲೆ ತೆಂಗಿನ ಮರ ಬಿದ್ದು ಲಕ್ಷಾಂತರ ರೂ. ನಷ್ಟ

  • ಶಕ್ತಿಗೆ ಇಂದು 500 ಕೋಟಿ ಟಿಕೆಟ್‌ ಸಂಭ್ರಮ- ಕಂಡಕ್ಟರ್‌ ಆಗಿ ಟಿಕೆಟ್‌ ಹಂಚಿದ ಸಿಎಂ

    ಶಕ್ತಿಗೆ ಇಂದು 500 ಕೋಟಿ ಟಿಕೆಟ್‌ ಸಂಭ್ರಮ- ಕಂಡಕ್ಟರ್‌ ಆಗಿ ಟಿಕೆಟ್‌ ಹಂಚಿದ ಸಿಎಂ

    ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ 500ನೇ ಕೋಟಿಯ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟನ್ನು (Ticket) ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ವಿತರಿಸಿದರು.

    ಟಿಕೆಟ್‌ ವಿತರಿಸಿದ ನಂತರ ಮಾತನಾಡಿದ ಅವರು, 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಲಾಗಿತ್ತು. 2023ರ ಮೇ 20 ರಂದು ಸರ್ಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ಜಾರಿಗೊಳಿಸಲು ಸಚಿವಸಂಪುಟದಲ್ಲಿ ಕೈಗೊಂಡ ತೀರ್ಮಾನದಂತೆ ಜೂನ್ 11 ರಂದು ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು. ಅಂದಿನಿಂದ ರಾಜ್ಯದ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಲಾಗಿರುವ ಬಗ್ಗೆ ಮುಖ್ಯಮಂತ್ರಿ ವಿವರಿಸಿದರು. ಇದನ್ನೂ ಓದಿ: ಕೆಲಸಕ್ಕೆ ಬಾರದವರೆಲ್ಲ ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ನಟಿಯೆಂದು ಹೇಳ್ಕೊತಾರೆ, ಇವ್ರು ಇದನ್ನೆಲ್ಲ ಮಾಡ್ಲೇ ಇಲ್ಲ ರಾಜೇಂದ್ರ ಸಿಂಗ್ ಬಾಬು

    ಕಾಂಗ್ರೆಸ್ ಸರ್ಕಾರವು ರಾಜ್ಯದ ಎಲ್ಲ ಮಹಿಳೆಯರಿಗೆ ರಾಜ್ಯದೊಳಗೆ ಉಚಿತ ಬಸ್ ಪ್ರಯಾಣವನ್ನು ಒದಗಿಸುವ ನಿಟ್ಟಿನಲ್ಲಿ ‘ಶಕ್ತಿ’ ಯೋಜನೆಯನ್ನು 2023ರ ಜೂನ್ 11ರಿಂದ ಜಾರಿ ಮಾಡಿದೆ. ಈ ಯೋಜನೆಯಡಿಯಲ್ಲಿ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕೆಕೆಆರ್‌ಟಿಸಿ ಮತ್ತು ಎನ್‍ಡಬ್ಲ್ಯೂಆರ್‌ಟಿಸಿ ಸಾರಿಗೆ ಬಸ್‍ಗಳಲ್ಲಿ ಮಹಿಳೆಯರು ರಾಜ್ಯದೊಳಗೆ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಇದನ್ನೂ ಓದಿ: ಸಿಗಂದೂರು ಸೇತುವೆ| ಇಂದಿನ ಕಾರ್ಯಕ್ರಮವನ್ನು ಮುಂದೂಡಿ, ಬೇರೆ ದಿನ ನಿಗದಿಗೆ ಸಿಎಂ ಪತ್ರ

    ರಾಜ್ಯದ ಸಾರಿಗೆ ನಿಗಮಗಳ ಬಸ್‍ಗಳಲ್ಲಿ ಪ್ರತಿನಿತ್ಯ ಸುಮಾರು ಒಂದು ಕೋಟಿಗೂ ಅಧಿಕ ಮಂದಿ ಪ್ರಯಾಣಿಸುತ್ತಾರೆ. ಅದರಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ 80 ಲಕ್ಷ ಇದ್ದು, ‘ಶಕ್ತಿ ಯೋಜನೆ’ಯಡಿ ಪ್ರತಿನಿತ್ಯ 20 ಕೋಟಿ ರೂ.ಗಳಷ್ಟು ಉಚಿತ ಟಿಕೆಟ್ ಅನ್ನು ಮಹಿಳೆಯರಿಗೆ ವಿತರಿಸಲಾಗುತ್ತಿದೆ.

  • ಶಕ್ತಿ ಯೋಜನೆಯಿಂದ ಮೈಲಿಗಲ್ಲು – 500 ಕೋಟಿ ತಲುಪಲಿರುವ ಒಟ್ಟು ಮಹಿಳಾ ಪ್ರಯಾಣಿಕರ ಸಂಖ್ಯೆ

    ಶಕ್ತಿ ಯೋಜನೆಯಿಂದ ಮೈಲಿಗಲ್ಲು – 500 ಕೋಟಿ ತಲುಪಲಿರುವ ಒಟ್ಟು ಮಹಿಳಾ ಪ್ರಯಾಣಿಕರ ಸಂಖ್ಯೆ

    -ರಾಜ್ಯ ಸಾರಿಗೆ ಇಲಾಖೆಯ ಇತಿಹಾಸದಲ್ಲೇ ಹೊಸ ರೆಕಾರ್ಡ್‌
    – 500ನೇ ಟಿಕೆಟ್ ಪಡೆದ ಮಹಿಳೆಗೆ ಲಕ್ಕಿ ಬಹುಮಾನ

    ಬೆಂಗಳೂರು: ಕಾಂಗ್ರೆಸ್‌ನ (Congress) ಶಕ್ತಿ ಯೋಜನೆಯ ಪರಿಣಾಮದಿಂದಾಗಿ ಎರಡೇ ವರ್ಷದಲ್ಲಿ ಉಚಿತ ಬಸ್‌ಗಳಲ್ಲಿ ಪ್ರಯಾಣಿಸಿದ ಮಹಿಳೆಯರ ಸಂಖ್ಯೆ ಒಟ್ಟು 500 ಕೋಟಿಗೆ ತಲುಪಲಿದ್ದು, ಆ 500ನೇ ಟಿಕೆಟ್ ಪಡೆಯಲಿರುವ ಮಹಿಳೆಗೆ ಲಕ್ಕಿ ಬಹುಮಾನ ಸಿಗಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ತಿಳಿಸಿದ್ದಾರೆ.

    2023ರ ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಸರ್ಕಾರ ನೀಡಿದ ಭರವಸೆಯಂತೆ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಜಾರಿಯಾಗಿವೆ. ಈ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ಮಹಿಳೆಯರಿಂದ ಭರ್ಜರಿ ರೆಸ್ಪಾನ್ಸ್ ದೊರೆತಿದ್ದು, ಇದೀಗ ಶಕ್ತಿ ಯೋಜನೆ ಹೊಸ ಮೈಲುಗಲ್ಲು ಬರೆಯಲು ಮುಂದಾಗಿದೆ.ಇದನ್ನೂ ಓದಿ: KRS ಡ್ಯಾಂ ಮೇಲೆ ‘ಕೈ’ ಶಾಸಕ ಬೆಂಬಲಿಗನ ಹುಚ್ಚಾಟ- ನಿರ್ಬಂಧವಿದ್ದರೂ ಲೆಕ್ಕಿಸದೇ ಜಲಾಶಯದ ಮೇಲೆ ರೀಲ್ಸ್‌

    ಶಕ್ತಿ ಯೋಜನೆ ಜಾರಿಯಾದ ಎರಡೇ ವರ್ಷದಲ್ಲಿ 500 ಕೋಟಿ ಮಹಿಳೆಯರು ಸರ್ಕಾರಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಿ ದಾಖಲೆ ಬರೆಯಲಿದ್ದಾರೆ. 2023ರ ಜೂನ್ 11ರಂದು ಆರಂಭವಾಗಿದ್ದ ಈ ಯೋಜನೆಗೆ ಮಹಿಳೆಯರು ಬಹುಪರಾಕ್ ಎಂದಿದ್ದು, ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಸೋಮವಾರಕ್ಕೆ ಬರೋಬ್ಬರಿ 493 ಕೋಟಿ ಮಹಿಳಾ ಪ್ರಯಾಣಿಕರು ಒಂದು ರೂಪಾಯಿ ಹಣ ನೀಡದೆ ಉಚಿತವಾಗಿ ಪ್ರಯಾಣಿಸಿದ್ದಾರೆ.

    ಪ್ರತಿದಿನ ನಾಲ್ಕು ಸಾರಿಗೆ ನಿಗಮದ ಬಸ್‌ಗಳಲ್ಲಿ 70 ರಿಂದ 75 ಲಕ್ಷ ಮಹಿಳೆಯರು ಫ್ರೀಯಾಗಿ ಸಂಚರಿಸುತ್ತಿದ್ದಾರೆ. ಭಾನುವಾರದವರೆಗಿನ ಅಂಕಿ ಅಂಶಗಳನ್ನು ನೋಡುವುದಾದರೆ ಸುಮಾರು 494 ಕೋಟಿಯಷ್ಟು ಮಹಿಳೆಯರು ಸಂಚರಿಸಿದ್ದು, 12,511 ಕೋಟಿ ರೂ. ಟಿಕೆಟ್ ಮೌಲ್ಯವಾಗಿದೆ. ಬರುವ ಸೋಮವಾರಕ್ಕೆ ಶಕ್ತಿ ಯೋಜನೆ 500 ಕೋಟಿ ಮಹಿಳೆಯರ ಉಚಿತ ಪ್ರಯಾಣದ ಗುರಿ ತಲುಪಿ, ರಾಜ್ಯ ಸಾರಿಗೆ ಇಲಾಖೆಯ ಇತಿಹಾಸದಲ್ಲೇ ಹೊಸ ರೆರ್ಕಾಡ್ ನಿರ್ಮಿಸಲಿದೆ.

    ಇನ್ನೂ ಈ 500 ಕೋಟಿಯ ಸಂಭ್ರಮಾಚರಣೆಯನ್ನು ಅದ್ದೂರಿಯಾಗಿ ಆಚರಿಸಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ. ಪ್ರಮುಖವಾಗಿ 500ನೇ ಟಿಕೆಟ್ ಪಡೆದ ಮಹಿಳೆಗೆ ಲಕ್ಕಿ ಪ್ರೈಸ್ ಸಿಗಲಿದೆ. ಈ ಶಕ್ತಿಯೋತ್ಸವವನ್ನು ಎಲ್ಲಾ ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಸಮಿತಿ ಹಾಗೂ ಸಾರಿಗೆ ಇಲಾಖೆಯು ಆಚರಿಸಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಇನ್ನೂ ಈ ಶಕ್ತಿ ಯೋಜನೆಯಿಂದ ಧಾರ್ಮಿಕ ಕ್ಷೇತ್ರಗಳತ್ತ ಭಕ್ತಾದಿಗಳು ಹರಿದು ಬರುತ್ತಿದ್ದು, ಮುಜರಾಯಿ ಇಲಾಖೆಯ ಖಜಾನೆ ತುಂಬಿಸುತ್ತಿದೆ. ಕಾಂಗ್ರೆಸ್ ಸರ್ಕಾರ ಇರುವವರೆಗೂ ಶಕ್ತಿ ಯೋಜನೆ ಇರಲಿದೆ ಎಂದು ಸಾರಿಗೆ ಸಚಿವರು ಭರವಸೆ ನೀಡಿದ್ದಾರೆ.ಇದನ್ನೂ ಓದಿ: ಬಿಸಿನೀರು ಕುಡಿಯುವಾಗಲೇ ಹೃದಯಾಘಾತ – ಕುಸಿದು ಬಿದ್ದು ವ್ಯಕ್ತಿ ಸಾವು

  • ಶಕ್ತಿ ಯೋಜನೆಯಿಂದ ಗಂಡಸರಿಗೆ ತೊಂದರೆಯಾಗ್ತಿದೆ: ಆರ್‌ವಿ ದೇಶಪಾಂಡೆ

    ಶಕ್ತಿ ಯೋಜನೆಯಿಂದ ಗಂಡಸರಿಗೆ ತೊಂದರೆಯಾಗ್ತಿದೆ: ಆರ್‌ವಿ ದೇಶಪಾಂಡೆ

    ಬೆಂಗಳೂರು: ಶಕ್ತಿ ಯೋಜನೆಯಿಂದ (Shakti Scheme) ಗಂಡಸರಿಗೆ ಸಮಸ್ಯೆ ಆಗುತ್ತಿದೆ ಎಂದು ವಿಧಾನಸೌಧದಲ್ಲಿ ಮಾಜಿ ಸಚಿವ ಆರ್.ವಿ. ದೇಶಪಾಂಡೆ (RV Deshpande) ಹೇಳಿದ್ದಾರೆ.

    ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಕ್ತಿ ಯೋಜನೆ ಚೆನ್ನಾಗಿದೆ. ಸಮಸ್ಯೆಯನ್ನು ಸ್ವಲ್ಪ ಸರಿ ಮಾಡಬೇಕು. ಶಕ್ತಿ ಯೋಜನೆಯಿಂದ ಬಸ್‌ನಲ್ಲಿ ಬರೀ ಹೆಂಗಸರೇ ತುಂಬಿರುತ್ತಾರೆ. ಗಂಡಸರ ಸಂಖ್ಯೆ ಕಡಿಮೆ ಆಗುತ್ತಿದೆ. ಇದರಿಂದ ಬಸ್‌ನಲ್ಲಿ ಗಂಡಸರಿಗೆ ಸಮಸ್ಯೆ ಆಗುತ್ತಿದೆ. ಅಪ್ಪಿತಪ್ಪಿ ಹೆಂಗಸರಿಗೆ ಕೈ ತಾಗಿದರೆ ಏನೆಲ್ಲಾ ಸಮಸ್ಯೆ ಆಗಬಹುದು. ಇದನ್ನು (ಯೋಜನೆ) ಸೀಮಿತಗೊಳಿಸಿದರೆ ಸಮಸ್ಯೆ ಸರಿ ಹೋಗಬಹುದು ಎಂದರು. ಇದನ್ನೂ ಓದಿ: ಕದನ ವಿರಾಮ ಉಲ್ಲಂಘನೆ; ‘ಫ..’ 4 ಪದದ ಆಕ್ಷೇಪಾರ್ಹ ಪದ ಬಳಸಿ ಇಸ್ರೇಲ್‌-ಇರಾನ್‌ಗೆ ಟ್ರಂಪ್‌ ತರಾಟೆ

    ಶಾಸಕರು ಸಚಿವರನ್ನು ಭೇಟಿಯಾಗಬೇಕು. ಶಾಸಕರ ಸಮಸ್ಯೆ ಇದ್ದರೆ ಅದನ್ನ ಸರಿ ಮಾಡಬೇಕು. ಬಿಆರ್ ಪಾಟೀಲ್ (BR Patil) ಹಿರಿಯರು. ಅವರು ಅಭಿಪ್ರಾಯ ಪಡೆಯಲು ಮಾಧ್ಯಮಗಳಲ್ಲಿ ಹೇಳಬಾರದಿತ್ತು. ಸಿಎಂ ಗಮನಕ್ಕೆ ತಂದು ಈ ತರಹ ಆಗುತ್ತಿದೆ ಎಂದು ಹೇಳಬೇಕಿತ್ತು. ಸಿಎಂಗೆ ಈ ಬಗ್ಗೆ ಮಾಹಿತಿ ಕೊಡಬೇಕಿತ್ತು. ಆಗಲೂ ಸಿಎಂ, ಮಂತ್ರಿಗಳು ಸ್ಪಂದನೆ ಮಾಡದೇ ಹೋದರೆ ಹೀಗೆ ಮಾಡಬಹುದಿತ್ತು. ಸಿಎಂ ಮತ್ತು ಸಂಬಂಧಿಸಿದ ಸಚಿವರ ಜೊತೆ ಮಾತಾಡಬೇಕು. ಇದಕ್ಕೆ ಆಡಳಿತ ವ್ಯವಸ್ಥೆ ಕೆಟ್ಟಿದೆ ಎಂದು ಹೇಳೋದು ಸರಿಯಲ್ಲ ಎಂದು ಹೇಳಿದರು. ಇದನ್ನೂ ಓದಿ: ಬಾತ್‌ರೂಮಲ್ಲೇ ವ್ಯಕ್ತಿಯ ಬರ್ಬರ ಹತ್ಯೆ – ಕೊಲೆ ಫೋಟೋ ಇನ್ಸ್ಟಾದಲ್ಲಿ ಹಾಕಿ ‘ಜಾಲಿ ಜಾಲಿ’ ಎಂದು ಬರೆದ ಆರೋಪಿ

    ಶಾಸಕ ಅಧಿಕಾರ ಚಲಾವಣೆ ಮಾಡೋಕೆ ಕ್ರಮಬದ್ಧ ಇದೆ. ಬಿಜೆಪಿಗೂ ನಮಗೂ ಬಹಳ ವ್ಯತ್ಯಾಸ ಇದೆ. ನಮ್ಮ ಶಾಸಕರು ಬಹಿರಂಗವಾಗಿ ಹೇಳಿರೋದು ಸರಿಯಲ್ಲ. ಮೊದಲು ಸಿಎಂ ಬಳಿ ಮಾತನಾಡಬೇಕು ಎಂದು ಸೂಚಿಸಿದರು. ಇದನ್ನೂ ಓದಿ: ವಿಜಯ್ ಜೊತೆ ಲವ್ ವದಂತಿಗೆ ತ್ರಿಷಾ ಕೆಂಡ – ಹೊಲಸು ಮನಸ್ಥಿತಿಯ ಜನ ಎಂದ ನಟಿ

  • ದೂಡಿದ್ದಕ್ಕೆ ಬಿತ್ತು ಪೆಟ್ಟು – ಸೀಟಿಗಾಗಿ ಅಲ್ಲ ಈಗ ಬಸ್ಸು ಹತ್ತಲು ಮಹಿಳೆಯರ ಜಗಳ!

    ದೂಡಿದ್ದಕ್ಕೆ ಬಿತ್ತು ಪೆಟ್ಟು – ಸೀಟಿಗಾಗಿ ಅಲ್ಲ ಈಗ ಬಸ್ಸು ಹತ್ತಲು ಮಹಿಳೆಯರ ಜಗಳ!

    ತುಮಕೂರು: ರಾಜ್ಯದ್ಯಂತ ಕರ್ನಾಟಕದ ಮಹಿಳೆಯರಿಗೆ ಉಚಿತ ಪ್ರಯಾಣದ (Free Bus Rides Across Karnataka) ಪರಿಣಾಮ ಬಸ್ಸಿನಲ್ಲಿ ಹಿಂದೆ ಸೀಟ್‌ಗಾಗಿ ಜಗಳ ನಡೆದಿತ್ತು. ಆದರೆ ಈಗ ಪಾವಗಡದಲ್ಲಿ (Pavagada) ಬಸ್ಸು ಹತ್ತಲು ಮಹಿಳೆಯರು ಜಗಳ ಮಾಡಿದ್ದಾರೆ.

    ಪಾವಗಡ ಶನಿಮಹಾತ್ಮ ದೇವಸ್ಥಾನಕ್ಕೆ ಶನಿವಾರ, ಭಾನುವಾರ ಚಿತ್ರದುರ್ಗ, ಚಳ್ಳಕೆರೆ, ಹಿಂದೂಪುರ, ಮಡಕಶಿರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುತ್ತಾರೆ. ಇದನ್ನೂ ಓದಿ: Ghaziabad| ಏರ್‌ ಇಂಡಿಯಾ ಟೇಕಾಫ್‌ ವೇಳೆ ತಾಂತ್ರಿಕ ದೋಷ – ತಪ್ಪಿದ ಅನಾಹುತ

     

     

     

    View this post on Instagram

     

    A post shared by PUBLiC TV (@publictv)

     

    ದೇವಸ್ಥಾನದಲ್ಲಿ ಪೂಜೆ ಮುಗಿಸಿದ ನಂತರ ಬಸ್ಸು ಹತ್ತಲು ಮಹಿಳೆಯರು ಮುಗಿಬಿದ್ದಿದ್ದಾರೆ. ಬಹುತೇಕ ಬಸ್ಸುಗಳು ರಶ್‌ ಇದ್ದ ಕಾರಣ ಮಹಿಳೆಯರು ಸಿಕ್ಕಿದ ಬಸ್ಸು ಹತ್ತಲು ಮುಂದಾಗಿದ್ದಾರೆ. ಈ ವೇಳೆ ಒಬ್ಬರನ್ನು ತಳ್ಳಿ ಮತ್ತೊಬ್ಬರು ಹತ್ತಲು ಪೈಪೋಟಿ ನಡೆಸಿದ್ದಾರೆ.

    ಬಸ್ ಬಂದ ಕೂಡಲೇ ಸೀಟ್ ಹಿಡಿಯಲು ನಾನು ಮುಂದು ತಾ ಮುಂದು ಮಹಿಳೆ ಬಸ್ಸು ಹತ್ತಿದ್ದಾರೆ. ಈ ವೇಳೆ ಮಹಿಳೆಯೊಬ್ಬಳು ಮತ್ತೊಬ್ಬ ಮಹಿಳೆಗೆ ಹೊಡೆದಿದ್ದಾರೆ. ಮಹಿಳೆಯರು ಬಸ್ಸು ಹತ್ತಲು ಜಗಳ ಮಾಡುತ್ತಿರುವ ವಿಡಿಯೋ ಮೊಬೈಲ್‌ ಕ್ಯಾಮೆರಾದಲ್ಲಿ ಸೆರೆಯಾಗಿದೆ.

  • 4 ಸಾರಿಗೆ ನಿಗಮಗಳು ನಷ್ಟದಲ್ಲಿವೆ, ಶಕ್ತಿ ಯೋಜನೆಗೆ ಸರ್ಕಾರ 2,000 ಕೋಟಿ ಹಣ ಬಾಕಿ ಕೊಡಬೇಕು: ರಾಮಲಿಂಗಾ ರೆಡ್ಡಿ

    4 ಸಾರಿಗೆ ನಿಗಮಗಳು ನಷ್ಟದಲ್ಲಿವೆ, ಶಕ್ತಿ ಯೋಜನೆಗೆ ಸರ್ಕಾರ 2,000 ಕೋಟಿ ಹಣ ಬಾಕಿ ಕೊಡಬೇಕು: ರಾಮಲಿಂಗಾ ರೆಡ್ಡಿ

    ಬೆಂಗಳೂರು: ಸಾರಿಗೆ ಇಲಾಖೆಯ (Department of Transport) 4 ನಿಗಮಗಳು ನಷ್ಟದಲ್ಲಿವೆ. ಶಕ್ತಿ ಯೋಜನೆಗೆ (Shakti Scheme) ಸರ್ಕಾರ 2 ಸಾವಿರ ಕೋಟಿ ಹಣ ಬಾಕಿ ನೀಡಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ತಿಳಿಸಿದರು.

    ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಸಾರಿಗೆ ಇಲಾಖೆ ನಿಗಮಗಳ ನಷ್ಟದ ಬಗ್ಗೆ ಪ್ರಶ್ನೆ ಕೇಳಿದರು. ಇದಕ್ಕೆ ಸಚಿವ ರಾಮಲಿಂಗಾರೆಡ್ಡಿ ಉತ್ತರ ನೀಡಿದರು. ಕಳೆದ 5 ವರ್ಷಗಳಿಂದಲೂ 4 ಸಾರಿಗೆ ನಿಗಮಗಳು ನಷ್ಟದಲ್ಲಿವೆ. 2019-20ರಿಂದ 2023-24ವರೆಗೆ ಕೆಎಸ್‌ಆರ್‌ಟಿಸಿ- 1500.34 ಕೋಟಿ ನಷ್ಟ. ಬಿಎಂಟಿಸಿ- 1544.62 ಕೋಟಿ. ಕಲ್ಯಾಣ ಕರ್ನಾಟಕ ಸಾರಿಗೆ- 777.64 ಕೋಟಿ.ವಾಯುವ ವಾಯುವ್ಯ ಕರ್ನಾಟಕ ನಿಗಮ- 1386.58 ಕೋಟಿ ನಷ್ಟದಲ್ಲಿವೆ ಎಂದು ಸಚಿವರು ಅಂಕಿಅಂಶಗಳನ್ನ ಕೊಟ್ಟರು. ಇದನ್ನೂ ಓದಿ: ಕೇದಾರನಾಥ್‌ ರೋಪ್‌ವೇಗೆ ಕೇಂದ್ರ ಅಸ್ತು – ಈ ರೋಪ್‌ವೇಯ ವಿಶೇಷತೆಯೇನು?

    ಸಾರಿಗೆ ನಿಗಮಗಳು ನಷ್ಟದಲ್ಲಿವೆ. ಸರ್ಕಾರ ಸಹಕಾರ ಕೊಡದೇ ಹೋದರೆ ಸಾರಿಗೆ ನಿಗಮಗಳಿಗೆ ಕಷ್ಟ ಆಗುತ್ತದೆ. ಇಡೀ ದೇಶದಲ್ಲಿ ಸಾರಿಗೆ ನಿಗಮಗಳು ನಷ್ಟದಲ್ಲಿವೆ. ನಷ್ಟವನ್ನು ತಡೆಯಲು ಬಸ್ ಟಿಕೆಟ್ ದರ ಜಾಸ್ತಿ ಮಾಡಲಾಗಿದೆ. ಸಿಎಂ ಅವರು 2 ಸಾವಿರ ಕೋಟಿ ಲೋನ್ ಕೊಡಿಸಿದ್ದಾರೆ. ಅದನ್ನ ಸರ್ಕಾರ ತೀರಿಸುತ್ತದೆ. ಮೋಟಾರ್ ಟ್ಯಾಕ್ಸ್ ವಿನಾಯ್ತಿ ಸಾರಿಗೆ ಇಲಾಖೆಗೆ ಸರ್ಕಾರ ಕೊಟ್ಟಿದೆ ಎಂದು ತಿಳಿಸಿದರು. 2 ಸಾವಿರ ಕೋಟಿ ಶಕ್ತಿ ಯೋಜನೆ ಹಣವನ್ನ ಸರ್ಕಾರ ಬಾಕಿ ಉಳಿಸಿಕೊಂಡಿದೆ. 9,978 ಕೋಟಿ ಶಕ್ತಿ ಹಣ ಸರ್ಕಾರ ಕೊಡಬೇಕು. ಇದರಲ್ಲಿ 2 ಸಾವಿರ ಕೋಟಿ ಹಣ ಸರ್ಕಾರ ಬಾಕಿ ಉಳಿಸಿಕೊಂಡಿದೆ ಎಂದು ತಿಳಿಸಿದರು. ಇದನ್ನೂ ಓದಿ: ದರ್ಶನ್ ಯಾವತ್ತಿದ್ರೂ ನನ್ನ ಮಗ: ತಾಯಿ, ಮಗನ ಸಂಬಂಧದಲ್ಲಿ ವಿವಾದ ಸೃಷ್ಟಿಸಬೇಡಿ ಎಂದ ಸುಮಲತಾ

  • 226.53 ಕೋಟಿ ಮಹಿಳಾ ಪ್ರಯಾಣಿಕರಿಗೆ ಲಾಭ – ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ

    226.53 ಕೋಟಿ ಮಹಿಳಾ ಪ್ರಯಾಣಿಕರಿಗೆ ಲಾಭ – ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ

    ಬೆಂಗಳೂರು: ಶಕ್ತಿ ಯೋಜನೆಗೆ (Shakti Scheme) ಬಜೆಟ್‌ನಲ್ಲಿ 5,300 ಕೋಟಿ ರೂ. ಅನುದಾನನ್ನು ಮೀಸಲಿಡಲಾಗಿದೆ.

    ತಮ್ಮ ಬಜೆಟ್‌ ಭಾಷಣದಲ್ಲಿ ಸಿದ್ದರಾಮಯ್ಯ (Siddaramaiah) ಮಹಿಳೆಯರ ಸಬಲೀಕರಣಕ್ಕಾಗಿ ಮತ್ತು ಸಾಮರ್ಥ್ಯ ವೃದ್ಧಿಗಾಗಿ ಪ್ರಪ್ರಥಮವಾಗಿ ಜಾರಿಗೆ ತರಲಾಗಿರುವ ʻಶಕ್ತಿʼ ಯೋಜನೆಯಡಿ ಪ್ರಸಕ್ತ ವರ್ಷ ಇದುವರೆಗೆ ಒಟ್ಟು 226.53 ಕೋಟಿ ಮಹಿಳಾ ಪ್ರಯಾಣಿಕರು ಸೌಲಭ್ಯ ಪಡೆದಿರುತ್ತಾರೆ. ಮಹಿಳೆಯರ ಸ್ವಾವಲಂಬನೆ ಮತ್ತು ಆರ್ಥಿಕ ಅಭಿವೃದ್ಧಿಗೆ ಶಕ್ತಿ ತುಂಬಿದ ಈ ಯೋಜನೆಗಾಗಿ 2024-25 ನೇ ಸಾಲಿನಲ್ಲಿ 5,015 ಕೋಟಿ ರೂ. ವೆಚ್ಚ ಭರಿಸಲಾಗಿದ್ದು, 2025-26ನೇ ಸಾಲಿಗೆ 5,300 ಕೋಟಿ ರೂ. ಒದಗಿಸಲಾಗಿರುತ್ತದೆ ಎಂದು ತಿಳಿಸಿದರು.

    ಬಜೆಟ್‌ ಘೋಷಣೆಗಳು
    ಬೆಂಗಳೂರು ಮೆಜೆಸ್ಟಿಕ್‌ ಬಸ್ ನಿಲ್ದಾಣದ ಜಾಗವನ್ನು ʻಪ್ರಾಜೆಕ್ಟ್‌ ಮೆಜೆಸ್ಟಿಕ್‌ʼ ಯೋಜನೆಯಡಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಆಧಾರದ ಮೇಲೆ ಪುನರ್ ಅಭಿವೃದ್ಧಿಪಡಿಸಿ, ವಾಣಿಜ್ಯ ಸಂಕೀರ್ಣದೊಂದಿಗೆ ಸಾರಿಗೆ ಹಬ್ ನಿರ್ಮಾಣ

    ರಾಜ್ಯದಲ್ಲಿ ಪ್ರಗತಿಯಲ್ಲಿರುವ 42 ಸ್ವಯಂಚಾಲಿತ ಪರೀಕ್ಷಾ ಪಥಗಳ ನಿರ್ಮಾಣವನ್ನು ಸದರಿ ಸಾಲಿನಲ್ಲಿ ಪೂರ್ಣಗೊಳಿಸಲಾಗುವುದು. 2025-26ನೇ ಸಾಲಿನಲ್ಲಿ ಹೊನ್ನಾವರ, ಚಾಮರಾಜನಗರ ಮತ್ತು ಚಿತ್ರದುರ್ಗದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ಸ್ವಯಂಚಾಲಿತ ಪರೀಕ್ಷಾ ಪಥಗಳನ್ನು ನಿರ್ಮಿಸಲು ಕ್ರಮವಹಿಸಲಾಗುವುದು. ಈ ಉದ್ದೇಶಕ್ಕಾಗಿ 12 ಕೋಟಿ ರೂ. ಅನುದಾನ ಮೀಸಲು.

    ಸಾರಿಗೆ ಇಲಾಖೆಯ ಅಧೀನ ಕಛೇರಿಗಳಲ್ಲಿನ ಎಲ್ಲಾ ದಾಖಲೆಗಳನ್ನು ಹಂತಹಂತವಾಗಿ ಡಿಜಿಟಲೀಕರಣ ಮಾಡುವ ಉದ್ದೇಶ ಹೊಂದಲಾಗಿರುತ್ತದೆ. 2025-26ನೇ ಸಾಲಿನಲ್ಲಿ ಐದು ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿನ ದಾಖಲೆಗಳನ್ನು ಒಟ್ಟು 25 ಕೋಟಿ ರೂ. ವೆಚ್ಚದಲ್ಲಿ ಡಿಜಿಟಲೀಕರಣ.

    ರಾಜ್ಯದಲ್ಲಿ ವಾಹನ ಸಂಚಾರವನ್ನು ಮೇಲ್ವಿಚಾರಣೆ ಮಾಡಲು ಮತ್ತು ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಪತ್ತೆ ಹಚ್ಚಿ ನಿಯಂತ್ರಿಸಲು ದಾವಣಗೆರೆ, ಧಾರವಾಡ, ಕಲಬುರಗಿ, ಬೆಳಗಾವಿ, ಚಿತ್ರದುರ್ಗ, ಹಾವೇರಿ, ಹೊಸಪೇಟೆ, ಬಳ್ಳಾರಿ, ವಿಜಯಪುರ, ದಕ್ಷಿಣ ಕನ್ನಡ ಜಿಲ್ಲೆಗಳ ಒಟ್ಟು 60 ಸ್ಥಳಗಳಲ್ಲಿ 50 ಕೋಟಿ ರೂ. ವೆಚ್ಚದಲ್ಲಿ AI ಆಧಾರಿತ ವಿದ್ಯುನ್ಮಾನ ಕ್ಯಾಮರಾಗಳನ್ನು ಅಳವಡಿಕೆ

  • ಪುರುಷರಿಗೆ ಮೀಸಲಿರುವ ಸೀಟ್‌ನಲ್ಲಿ ಪುರುಷರೇ ಕುಳಿತುಕೊಳ್ಳುವಂತೆ ನೋಡಿಕೊಳ್ಳಿ – ಮೈಸೂರು KSRTC ಸೂಚನೆ

    ಪುರುಷರಿಗೆ ಮೀಸಲಿರುವ ಸೀಟ್‌ನಲ್ಲಿ ಪುರುಷರೇ ಕುಳಿತುಕೊಳ್ಳುವಂತೆ ನೋಡಿಕೊಳ್ಳಿ – ಮೈಸೂರು KSRTC ಸೂಚನೆ

    ಬೆಂಗಳೂರು: ಪುರುಷರಿಗೆ ಮೀಸಲಿರುವ ಸೀಟ್‌ನಲ್ಲಿ ಪುರುಷರೇ ಕುಳಿತುಕೊಳ್ಳುವಂತೆ ನೋಡಿಕೊಳ್ಳಿ ಎಂದು ತನ್ನ ಸಿಬ್ಬಂದಿಗೆ ಕೆಎಸ್‌ಆರ್‌ಟಿಸಿ (KSRTC) ಮೈಸೂರು ಘಟಕ ಸೂಚನೆ ನೀಡಿದೆ.

    ಶಕ್ತಿ ಯೋಜನೆ (Shakti Scheme) ಜಾರಿಯಾದ ಬಳಿಕ ರಾಜ್ಯದ ಸರ್ಕಾರಿ ಬಸ್ಸುಗಳು ಮಹಿಳಾ ಬಸ್ಸುಗಳಾಗಿ ಬದಲಾಗಿದೆ. ಉಚಿತ ಪ್ರಯಾಣ ಘೋಷಣೆಯಾದ ದಿನದಿಂದ ಬಸ್ಸುಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ ನಮಗೆ ಸೀಟು ಸಿಗುತ್ತಿಲ್ಲ ಎಂದು ಪುರುಷರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ಮೊದಲೇ ಬಸ್ಸುಗಳು ಸರಿಯಾದ ಸಮಯಕ್ಕೆ ಬರುತ್ತಿಲ್ಲ. ದುಡ್ಡು ಕೊಟ್ಟು ಟಿಕೆಟ್‌ ಪಡೆದರೂ ನಮಗೆ ಸೀಟು ಸಿಗುತ್ತಿಲ್ಲ. 60-70 ಕಿ.ಮೀ ದೂರ ಪ್ರಯಾಣವನ್ನು ನಿಂತುಕೊಂಡೇ ಮಾಡುವ ಪರಿಸ್ಥಿತಿ ಹಲವು ಭಾಗಗಳಲ್ಲಿ ನಿರ್ಮಾಣವಾಗಿದೆ ಎಂದು ಪುರುಷರು ಸಿಟ್ಟು ಹೊರಹಾಕುತ್ತಿದ್ದಾರೆ. ಇದನ್ನೂ ಓದಿ: ಗಂಗೂಲಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ- ಪ್ರಾಣಾಪಾಯದಿಂದ ಪಾರು

    ಬಸ್ಸಿನಲ್ಲಿ ನಿಂತುಕೊಂಡೇ ಪ್ರಯಾಣಿಸಿ ರೋಸಿಹೋದ ಮೈಸೂರು ನಿವಾಸಿ ವಿಷ್ಣುವರ್ಧನ್ ಪುರುಷರಿಗೂ ಸೀಟ್ ಕೊಡಿ ಎಂದು ಕೆಎಸ್‌ಆರ್‌ಟಿಸಿ ಮೈಸೂರು ಘಟಕಕ್ಕೆ ದೂರು ಕೊಟ್ಟಿದ್ದಾರೆ. ಮೈಸೂರು ನಗರ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಬಹುತೇಕ ಮಹಿಳೆಯರೇ ಕುಳಿತುಕೊಂಡಿರುತ್ತಾರೆ. ನಮಗೆ ಸೀಟು ಸಿಗುತ್ತಿಲ್ಲ. ಹೀಗಾಗಿ ನಮಗೂ ಕುಳಿತುಕೊಳ್ಳಲು ಸೀಟು ಕೊಡಿ ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ.

    ಈ ದೂರಿನ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಮೈಸೂರು ಘಟಕದಿಂದ ಕಾರ್ಯಾಚರಣೆಗೊಳ್ಳುವ ಎಲ್ಲಾ ಬಸ್‌ಗಳಲ್ಲಿಯೂ ಪುರುಷರಿಗೆ ಮೀಸಲಿರುವ ಸೀಟ್‌ನಲ್ಲಿ ಪುರುಷರೇ ಕುಳಿತುಕೊಳ್ಳುವಂತೆ ನೋಡಿಕೊಳ್ಳಿ ಅಂತ ಆಯಾ ಘಟಕಗಳ ನಿಯಂತ್ರಣಾಧಿಕಾರಿಗಳು ಸೂಚನೆ ನೀಡಿದ್ದಾರೆ. ಅಷ್ಟೇ ಅಲ್ಲದೇ ಈ ಬಗ್ಗೆ ತೆಗೆದುಕೊಂಡ ಕ್ರಮದ ಬಗ್ಗೆ ವರದಿ ಸಲ್ಲಿಸುವಂತೆ ತಮ್ಮ ಸಿಬ್ಬಂದಿಗೆ ಕೆಎಸ್‌ಆರ್‌ಟಿಸಿ ಮೈಸೂರು ವಿಭಾಗದ ನಿಯಂತ್ರಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

    ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಕೇವಲ ಮಹಿಳಾ ಸೀಟ್‌ಗಳು ಅಂತಾ ಬರೆದಿರುತ್ತಾರೆ. ಪುರುಷರ ಸೀಟ್ ಎಂದು ಎಲ್ಲೂ ಬರೆದಿಲ್ಲ. ಪುರುಷರ ಸೀಟು ಎಲ್ಲಿದೆ ಎನ್ನುವುದರ ಬಗ್ಗೆ ಕೆಎಸ್‌ಆರ್‌ಟಿಸಿ ಸರಿಯಾದ ಸ್ಪಷ್ಟನೆ ನೀಡಬೇಕಿದೆ. ಶಕ್ತಿ ಯೋಜನೆ ಜಾರಿಯಾದ ನಂತರ ಸರ್ಕಾರ ಒಂದು ಷರತ್ತು ವಿಧಿಸಿದೆ. ಬಸ್‌ಗಳಲ್ಲಿ ಶೇ.50 ರಷ್ಟು ಆಸನ ಪುರುಷರಿಗೆ ಮೀಸಲು ಎಂದು ತಿಳಿಸಲಾಗಿದೆ. ಹೀಗಾಗಿಯೇ ಎಲ್ಲಾ ಬಸ್‌ಗಳಲ್ಲಿಯೂ ಅರ್ಧದಷ್ಟು ಆಸನಗಳಲ್ಲಿ ಪುರುಷರಿಗೆ ಮೀಸಲು ಇಡಬೇಕಾಗುತ್ತದೆ. ಆದರೆ ಈ ಷರತ್ತಿನ ಪಾಲನೆ ಮಾತ್ರ ಸರಿಯಾಗಿ ಆಗುತ್ತಿಲ್ಲ.

    ಪುರುಷರಿಗೆ ಸೀಟುಗಳು ಎಂದು ಬೋರ್ಡ್‌ ಹಾಕಿದ್ದರೆ ಯಾವುದೇ ಸಮಸ್ಯೆ ಇಲ್ಲ. ಆದರೆ ಬೇರೆ ಸೀಟಿನಲ್ಲಿ ಕುಳಿತ ಮಹಿಳೆಯರನ್ನು ಏಳಿಸಿದರೆ ನಮ್ಮನ್ನು ಯಾಕೆ ಏಳಿಸುತ್ತೀರಿ ಎಂದು ಪ್ರಶ್ನೆ ಮಾಡುತ್ತಾರೆ ಮತ್ತು ಇದರಿಂದ ಗಲಾಟೆ ಆಗುತ್ತದೆ.

  • ಶಕ್ತಿ ಯೋಜನೆಯಿಂದ ಯಾವುದೇ ನಷ್ಟವಾಗಿಲ್ಲ: ರಾಮಲಿಂಗಾ ರೆಡ್ಡಿ

    ಶಕ್ತಿ ಯೋಜನೆಯಿಂದ ಯಾವುದೇ ನಷ್ಟವಾಗಿಲ್ಲ: ರಾಮಲಿಂಗಾ ರೆಡ್ಡಿ

    ರಾಮನಗರ: ಶಕ್ತಿ ಯೋಜನೆಯಿಂದ (Shakti Scheme) ಯಾವುದೇ ನಷ್ಟವಾಗಿಲ್ಲ. ಶಕ್ತಿ ಯೋಜನೆಯಿಂದ ಬರಬೇಕಾದ ಹಣ ಸಾರಿಗೆ ಇಲಾಖೆಗೆ ಬಂದಿದೆ ಎಂದು ರಾಮನಗರ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಹೇಳಿದ್ದಾರೆ.

    ರಾಮನಗರದಲ್ಲಿ (Ramanagara) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 8.8 ಕೋಟಿಗೂ ಹೆಚ್ಚು ಹಣ ಸಾರಿಗೆ ಇಲಾಖೆಗೆ ಬಂದಿದೆ. ಕೆಎಸ್‌ಆರ್‌ಟಿಸಿಯಲ್ಲಿ ಬಿಜೆಪಿ ಸರ್ಕಾರ ಇದ್ದಾಗ 5,900 ಕೋಟಿ ಸಾಲ ಇತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ 10 ಸಾವಿರ ಮಂದಿಯನ್ನು ಕೆಎಸ್‌ಆರ್‌ಟಿಸಿಗೆ ನೇಮಕ ಮಾಡಿಕೊಂಡಿದ್ದೇವೆ ಎಂದರು. ಇದನ್ನೂ ಓದಿ: ತುಮಕೂರಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೇನೆ: ಪರಮೇಶ್ವರ್

    ಈಗಾಗಲೇ ಡಿ.ಕೆ. ಶಿವಕುಮಾರ್ ಹಾಗೂ ಸುರೇಶ್ ಜಿಲ್ಲೆಯನ್ನ ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ರಾಮನಗರ ಜಿಲ್ಲೆಗೆ ಈ ಬಾರಿಯ ಬಜೆಟ್‌ನಲ್ಲಿ ಹೆಚ್ಚಿನ ಅನುದಾನಕ್ಕೆ ಮನವಿ ಮಾಡಿದ್ದೇವೆ. ಜಿಲ್ಲೆಗೆ ಆಗಬೇಕಿರುವ ಅಭಿವೃದ್ಧಿ ಪಟ್ಟಿಯನ್ನು ಡಿಸಿ ಅವರು ನೀಡುತ್ತಾರೆ. ಫೆ. 4 ರಂದು ಪ್ರಗತಿ ಪರಿಶೀಲನಾ ಸಭೆ ಕರೆದಿದ್ದೇನೆ. ಅಧಿಕಾರಿಗಳಿಂದ ಮಾಹಿತಿ ಪಡೆದು ಸಿಎಂ ಬಳಿ ಮಾತನಾಡುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: 76ನೇ ಗಣರಾಜ್ಯೋತ್ಸವ – ಕರ್ತವ್ಯ ಪಥದಲ್ಲಿ ಆಕರ್ಷಕ ಪಥಸಂಚಲನ, ಸೇನಾ ಶಕ್ತಿ ಪ್ರದರ್ಶನ

    ರಾಮನಗರ ಶಾಸಕರ ವಿರುದ್ಧ ಭೂ ಕಬಳಿಕೆ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ನೋಟಿಸ್ ಬಂದ ಮೇಲೆ ಶಾಸಕರು ದಾಖಲೆ ಕೊಡುತ್ತಾರೆ. ಲೋಕಾಯುಕ್ತ ತನಿಖೆ ಮಾಡಲಿ, ನೋಡೊಣ. ಇದಕ್ಕೆ ಸಂಬಂಧ ಪಟ್ಟ ಟ್ರಿಬಿನಲ್ ಕೂಡ ರೆಡಿಯಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಒಂದು ತಿಂಗಳ ರೆಸ್ಟ್ ಬಳಿಕ ಸಂಪೂರ್ಣ ಚಿತ್ರೀಕರಣದಲ್ಲಿ ಭಾಗಿ: ಶಿವಣ್ಣ

    ಶ್ರೀರಾಮುಲು ಜನಾರ್ದನ ರೆಡ್ಡಿ ಫೈಟ್ ವಿಚಾರವಾಗಿ ಮಾತನಾಡಿದ ಅವರು, ಶ್ರೀರಾಮುಲು ಸಾಕಷ್ಟು ವರ್ಷಗಳಿಂದ ಕಾಂಗ್ರೆಸ್ ವಿರೋಧ ಮಾಡಿಕೊಂಡು ಬಂದವರು. ಶ್ರೀರಾಮುಲು, ಜನಾರ್ಧನ ರೆಡ್ಡಿ ಪರಸ್ಪರ ಕೆಸರು ಎರಚಿಕೊಳ್ಳುತ್ತಿದ್ದಾರೆ. ನಮ್ಮ ಪಕ್ಷದಲ್ಲಿ ನಾಯಕರಿಗೆ ಕೊರತೆ ಇಲ್ಲ. ಸಿಎಂ ಕೂಡ ಯಾರನ್ನೂ ಕರೆಯುವುದಿಲ್ಲ ಎಂದಿದ್ದಾರೆ. ಆದರೆ ನಮ್ಮ ಪಕ್ಷಕ್ಕೆ ಬರುವುದಾದರೆ ಬರಬಹುದು ಎಂದರು. ಇದನ್ನೂ ಓದಿ: ದಾವಣಗೆರೆ | ಮೈಕ್ರೋ ಫೈನಾನ್ಸ್‌ನಿಂದ ಮಹಿಳೆಗೆ ಕಿರುಕುಳ

    ಸಚಿವ ಸಂಪುಟ ಪುನಾರಚನೆ ವಿಚಾರವಾಗಿ ಪ್ರತಿಕ್ರಿಯಿಸಿ, ಸಚಿವ ಸ್ಥಾನ ಎಲ್ಲರಿಗೂ ಸಿಗುವುದಿಲ್ಲ. ಆದರೆ ಆಸೆ ಇಟ್ಟುಕೊಳ್ಳುವುದರಲ್ಲಿ ಯಾವುದೇ ತಪ್ಪಿಲ್ಲ. ಈ ಬಗ್ಗೆ ಸಿಎಂ ಸಿದ್ದರಾಮಯ್ಯರನ್ನೇ ಕೇಳಿ ಎಂದು ನುಡಿದರು. ಇದನ್ನೂ ಓದಿ: ಶಿವಣ್ಣ ನಮ್ಮ ರಾಜ್ಯದ ಆಸ್ತಿ: ಕೃಷ್ಣ ಬೈರೇಗೌಡ