Tag: ಶಬರಿ

  • ಬಾಲ್ಯದಲ್ಲಿ ನನ್ನ ಮೇಲೂ ಲೈಂಗಿಕ ದೌರ್ಜನ್ಯವಾಗಿತ್ತು: ನಟಿ ವರಲಕ್ಷ್ಮಿ

    ಬಾಲ್ಯದಲ್ಲಿ ನನ್ನ ಮೇಲೂ ಲೈಂಗಿಕ ದೌರ್ಜನ್ಯವಾಗಿತ್ತು: ನಟಿ ವರಲಕ್ಷ್ಮಿ

    ಕ್ಷಿಣದ ಹೆಸರಾಂತ ನಟ ಶರತ್ ಕುಮಾರ್ ಪುತ್ರಿ ವರಲಕ್ಷ್ಮಿ (Varalakshmi Sarath Kumar) ಶಾಕಿಂಗ್ ಹೇಳಿಕೆಯನ್ನು ನೀಡಿದ್ದಾರೆ. ಶಬರಿ ಸಿನಿಮಾದ ಪ್ರಚಾರದಲ್ಲಿ ತೊಡಗಿರುವ ಅವರು, ಈ ಸಿನಿಮಾದ ಸಂದರ್ಶನದಲ್ಲಿ ತಮ್ಮ ಮೇಲೆ ನಡೆದ ಲೈಂಗಿಕ ದೌರ್ಜನ್ಯವನ್ನು ಬಿಚ್ಚಿಟ್ಟಿದ್ದಾರೆ. ಬಾಲ್ಯದಲ್ಲಿ ನನ್ನ ಮೇಲೂ ಲೈಂಗಿಕ ದೌರ್ಜನ್ಯ ನಡೆದಿತ್ತು. ಅದನ್ನು ನೆನಪಿಸಿಕೊಂಡರೆ, ಈಗಲೂ ಹಿಂಸೆ ಅನಿಸುತ್ತದೆ ಎಂದಿದ್ದಾರೆ.

    ಈ ಮಾತುಗಳನ್ನು ಅವರು ಆಡೋದಕ್ಕೂ ಕಾರಣವಿದೆ. ಶಬರಿ ಸಿನಿಮಾದಲ್ಲಿ ತಾಯಿಯು ತನ್ನ ಮಗಳನ್ನು ಹೇಗೆ ಕಾಪಾಡಿಕೊಳ್ಳುತ್ತಾಳೆ ಎನ್ನುವ ಕಥೆಯನ್ನು ಆಧರಿಸಿದೆ. ಈ ಸಮಯದಲ್ಲಿ ವರಲಕ್ಷ್ಮಿ ಲೈಂಗಿಕ ದೌರ್ಜನ್ಯದ ಕುರಿತಾದ ಮಾತುಗಳನ್ನು ಆಡಿದ್ದಾರೆ. ತಮ್ಮ ಜೀವನದಲ್ಲೇ ನಡೆದ ಘಟನೆಯನ್ನು ನೆಪಿಸಿಕೊಂಡಿದ್ದಾರೆ.

    ಒಂದು ಕಡೆ ಸಿನಿಮಾ ಮತ್ತೊಂದು ಕಡೆ ಮದುವೆ ತಯಾರಿ ಕೂಡ ಮಾಡಿಕೊಳ್ಳುತ್ತಿದ್ದಾರೆ. ಮೊನ್ನೆಯಷ್ಟೇ ನಿಕೋಲಾಯ್ ಸಚ್‌ದೇವ್ (Nicholai Sachdev) ಎಂಬುವರ ಜೊತೆ ಮದುವೆ ನಿಶ್ಚಯವಾಗಿದೆ. ಇವರು ಅಥ್ಲೆಟ್ ಆಗಿದ್ದು ವೇಟ್‌ಲಿಫ್ಟಿಂಗ್‌ನಲ್ಲಿ ಹೆಸರು ಮಾಡಿದ್ದಾರೆ. ಈಗಾಗಲೇ ಅವರಿಗೆ ಮದುವೆಯಾಗಿದ್ದು, 15 ವರ್ಷದ ಮಗಳಿದ್ದಾಳೆ ಎನ್ನಲಾಗ್ತಿದೆ. ಇವರ ಜೊತೆ ವರಲಕ್ಷ್ಮಿ ನಿಶ್ಚಿತಾರ್ಥ ಹಲವು ಚರ್ಚೆಗೆ ಕಾರಣವಾಗಿದೆ.

    ನಿಕೋಲಾಯ್ ಅವರು ಖ್ಯಾತ ಮಾಡೆಲ್ ಕವಿತಾ (Kavitha) ಅವರನ್ನು ಮದುವೆಯಾಗಿದ್ದರು. ಅವರಿಗೆ 15 ವರ್ಷದ ಮಗಳೂ ಸಹ ಇದ್ದಾರೆ ಎನ್ನಲಾಗಿದೆ. ಈ ಜೋಡಿಗೆ ಮದುವೆ ಬಳಿಕ ಹೊಂದಾಣಿಕೆ ಸಮಸ್ಯೆ ಎದುರಾಗಿತ್ತು. ಹೀಗಾಗಿ ಇಬ್ಬರು ಬೇರೆಯಾಗುವ ನಿರ್ಧಾರಕ್ಕೆ ಬಂದಿದ್ದರು. ಆ ಬಳಿಕ ವರಲಕ್ಷ್ಮಿ ಜೊತೆ ಎಂಗೇಜ್ ಆದರು. ನಿಕೋಲಾಯ್ ಹಾಗೂ ಕವಿತಾ ಡಿವೋರ್ಸ್ ಬಳಿಕವಷ್ಟೇ ವರಲಕ್ಷ್ಮಿ ಜೊತೆ ಡೇಟಿಂಗ್ ಶುರುವಾಗಿತ್ತು ಎಂದು ವರದಿಯಾಗಿವೆ.

    ವರಲಕ್ಷ್ಮಿ ಶರತ್‌ಕುಮಾರ್ ತಮ್ಮ ಅಭಿಮಾನಿಗಳಿಗೆ ಮಾರ್ಚ್ 1ರಂದು ಗುಡ್ ನ್ಯೂಸ್ ಕೊಟ್ಟಿದ್ದರು. ಆಪ್ತರ ಸಮ್ಮುಖದಲ್ಲಿ ನಟಿ ಬಹುಕಾಲದ ಗೆಳೆಯನ ಜೊತೆ ಎಂಗೇಜ್ ಆದರು. ಎಂಗೇಜ್‌ಮೆಂಟ್‌ನ ಸುಂದರ ಫೋಟೋಗಳನ್ನ ನಟಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ವರಲಕ್ಷ್ಮಿ ಅವರು ಆರ್ಟ್ ಗ್ಯಾಲರಿ ಮಾಲೀಕ ನಿಕೋಲಾಯ್ ಸಚ್‌ದೇವ್ ಜೊತೆ ಎಂಗೇಜ್ ಆಗಿದ್ದಾರೆ. ಅಂದಹಾಗೆ, ಕಳೆದ 14 ವರ್ಷದಿಂದ ನಿಕೋಲಾಯ್ ಪರಿಚಯವಿತ್ತು. ಮುಂಬೈನ ಖಾಸಗಿ ರೆಸಾರ್ಟ್‌ವೊಂದರಲ್ಲಿ ವರಲಕ್ಷ್ಮಿ ನಿಶ್ಚಿತಾರ್ಥ ಸಮಾರಂಭ ಜರುಗಿದೆ.

  • ಪಂಚ ಭಾಷೆಗಳಲ್ಲಿ ‘ಶಬರಿ’: ಸಿನಿಮಾ ರಿಲೀಸ್ ಡೇಟ್ ಫಿಕ್ಸ್

    ಪಂಚ ಭಾಷೆಗಳಲ್ಲಿ ‘ಶಬರಿ’: ಸಿನಿಮಾ ರಿಲೀಸ್ ಡೇಟ್ ಫಿಕ್ಸ್

    ಥೆ ಆಯ್ಕೆ ವಿಚಾರದಲ್ಲಿ ವಿಭಿನ್ನ ಪ್ರಯತ್ನಗಳತ್ತ ಹೊರಳುವ ನಟಿಯರಲ್ಲಿ ವರಲಕ್ಷ್ಮೀ ಶರತ್‌ಕುಮಾರ್‌ (Varalakshmi Sarath Kumar) ಸಹ ಒಬ್ಬರು. ಈಗ ಇದೇ ನಟಿ ‘ಶಬರಿ’ (Shabari) ಹೆಸರಿನ ಸಿನಿಮಾ ಮೂಲಕ ಆಗಮಿಸಲು ಸಜ್ಜಾಗಿದ್ದಾರೆ. ನಾಯಕಿ ಪ್ರಧಾನ ಈ ಸಿನಿಮಾ ಒಂದೇ ಭಾಷೆಗೆ ಸೀಮಿತವಾಗಿರದೇ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ನಿರ್ಮಾಣವಾಗಿದ್ದು, ಬಿಡುಗಡೆಗೂ ದಿನಾಂಕ ನಿಗದಿಯಾಗಿದೆ. ಮೇ 3ರಂದು ಈ ಸಿನಿಮಾ ಪಂಚ ಭಾಷೆಗಳಲ್ಲಿ ಬಿಡುಗಡೆ ಆಗಲಿದೆ.

    ಮಹಾ ಮೂವೀಸ್‌ ಬ್ಯಾನರ್‌ನಲ್ಲಿ ಮಹೇಂದ್ರ ನಾಥ್‌ ಕೊಂಡ್ಲಾ ಶಬರಿ ಸಿನಿಮಾಕ್ಕೆ ಹಣ ಹೂಡಿದ್ದಾರೆ. ಮಹರ್ಷಿ ಕೊಂಡ್ಲಾ ಈ ಸಿನಿಮಾ ಪ್ರಸೆಂಟ್‌ ಮಾಡುತ್ತಿದ್ದಾರೆ. ತೆಲುಗು, ತಮಿಳು, ಹಿಂದಿ, ಕನ್ನಡ ಮತ್ತು ಮಲಯಾಳಂನಲ್ಲಿ ಬಿಡುಗಡೆ ಆಗಲಿರುವ ಈ ಚಿತ್ರವನ್ನು ಅನಿಲ್‌ ಕಾಟ್ಜ್ (Anil Katz) ನಿರ್ದೇಶನ ಮಾಡಿದ್ದಾರೆ. ವಿಶೇಷ ಏನೆಂದರೆ, ಇದು ಇವರ ಚೊಚ್ಚಲ ನಿರ್ದೇಶನದ ಸಿನಿಮಾ.

    ಈ ಸಿನಿಮಾ ಬಗ್ಗೆ ನಿರ್ಮಾಪಕ ಮಹೇಂದ್ರನಾಥ್‌ ಕೊಂಡ್ಲಾ ಹೇಳುವುದೇನೆಂದರೆ, “ಶಬರಿ ಸಿನಿಮಾದ ಕಥೆ ಮತ್ತು ಸ್ಕ್ರೀನ್‌ ಪ್ಲೇ ತುಂಬ ವಿಶೇಷವಾಗಿದೆ. ಭಾವುಕ ಎಳೆಯ ಜತೆಗೆ ಸೀಟಿನ ತುದಿಗೆ ತಂದು ಕೂರಿಸುವ ಥ್ರಿಲ್ಲರ್‌ ಶೈಲಿಯೂ ಈ ಸಿನಿಮಾದಲ್ಲಿರಲಿದೆ. ವರಲಕ್ಷ್ಮೀ ಅವರ ಈ ವರೆಗಿನ ಸಿನಿಮಾಗಳಿಗೆ ಹೋಲಿಕೆ ಮಾಡಿದರೆ, ಇದು ತುಂಬ ವಿಭಿನ್ನ. ಈ ಸಿನಿಮಾದಲ್ಲಿನ ಅವರ ನಟನೆಯೂ ಅಷ್ಟೇ ರೋಚಕವಾಗಿಯೇ ಮೂಡಿಬಂದಿದೆ” ಎನ್ನುತ್ತಾರೆ.

    ಮುಂದುವರಿದು ಮಾತನಾಡುವ ಅವರು, “ಈಗಾಗಲೇ ತೆಲುಗು ಮತ್ತು ತಮಿಳಿನ ಮೊದಲ ಕಾಪಿಯನ್ನು ನೋಡಿರುವುದರಿಂದ, ಎಲ್ಲರಿಗೂ ಇಷ್ಟವಾಗಲಿದೆ ಎಂದು ನಂಬಿದ್ದೇನೆ. ಈ ನಡುವೆ ಕನ್ನಡ, ಮಲಯಾಳಂ ಮತ್ತು ಹಿಂದಿ ಭಾಷೆಯ ಡಬ್ಬಿಂಗ್‌ ಕೆಲಸಗಳು ನಡೆಯುತ್ತಿದ್ದು, ಮೇ 3ರಂದು ಪ್ಯಾನ್‌ ಇಂಡಿಯಾ ಲೆವೆಲ್‌ನಲ್ಲಿ ಸಿನಿಮಾ ರಿಲೀಸ್‌ ಮಾಡಲಿದ್ದೇವೆ” ಎಂದಿದ್ದಾರೆ.

     

    ವರಲಕ್ಷ್ಮೀ ಶರತ್‌ ಕುಮಾರ್‌, ಗಣೇಶ್‌ ವೆಂಕಟರಮಣನ್‌, ಶಶಾಂಕ್‌, ಮೈಮ್‌ ಗೋಪಿ, ಸುನಯನಾ, ರಾಜಶ್ರೀ ನಾಯರ್‌, ಮಧುನಂದನ್‌, ರಶಿಕಾ ಬಾಲಿ (ಬಾಂಬೆ), ವಿವಾ ರಾಘವ್‌, ಪ್ರಭು, ಭದ್ರಮ್‌, ಕೃಷ್ಣ ತೇಜ, ಬಿಂದು ಪಜಿದಿಮರ್ರಿ, ಅಸ್ರಿತಾ ವೆಮುಗಂಟಿ, ಹರ್ಷಿಣಿ ಕೊಡುರು. ಅರ್ಚನ್‌ ಅನಂತ್‌, ಪ್ರಮೋದಿನಿ, ಬೇಬಿ ನಿವೇಕ್ಷಾ, ಬೇಬಿ ಕೃತಿಕಾ ತಾರಾಗಣದಲ್ಲಿದ್ದಾರೆ.

  • ಕೊಪ್ಪಳಕ್ಕುಂಟು ಶ್ರೀರಾಮನ ನಂಟು – ಈ ಸ್ಥಳದಲ್ಲಿದೆ ಶಬರಿ ಗುಹೆ, ರಾವಣನ ಸಂಹಾರಕ್ಕೆ ಸೈನ್ಯ ಸಜ್ಜಾಗಿದ್ದೂ ಇಲ್ಲಿಯೇ!

    ಕೊಪ್ಪಳಕ್ಕುಂಟು ಶ್ರೀರಾಮನ ನಂಟು – ಈ ಸ್ಥಳದಲ್ಲಿದೆ ಶಬರಿ ಗುಹೆ, ರಾವಣನ ಸಂಹಾರಕ್ಕೆ ಸೈನ್ಯ ಸಜ್ಜಾಗಿದ್ದೂ ಇಲ್ಲಿಯೇ!

    ಕೊಪ್ಪಳ: ಕೋಟ್ಯಂತರ ರಾಮ ಭಕ್ತರ ಕನಸಿನ ಮಂದಿರ (Ram Mandir) ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ರಾಜ್ಯದಲ್ಲೂ ಸಾವಿರಾರು ಭಕ್ತರು ರಾಮನೂರಿಗೆ ತೆರಳಲು ಬರದ ಸಿದ್ಧತೆಯಲ್ಲಿ ತೊಡಗಿದ್ದಾರೆ. ಈ ಸಂದರ್ಭದಲ್ಲಿ ಶ್ರೀರಾಮನ (Shri Rama) ನಂಟಿರುವ ಕರ್ನಾಟಕದ (Karnataka) ವಿವಿಧ ಸ್ಥಳಗಳ ಬಗ್ಗೆ ತಿಳಿಯುವುದೂ ಅಷ್ಟೇ ಅವಶ್ಯಕವಾಗಿದೆ.

    ಹೌದು. ಸೀತೆಯನ್ನ ಹುಡುಕುತ್ತಾ ಹೊರಟ ಶ್ರೀರಾಮನ ಹೆಜ್ಜೆ ಗುರುತುಗಳು ಕರುನಾಡಿನಲ್ಲೂ ಮೂಡಿವೆ ಅನ್ನೋದು ಕನ್ನಡಿಗರಿಗೆ ಹೆಮ್ಮೆಯ ವಿಷಯ. ನಮ್ಮ ರಾಜ್ಯದ ಕೊಪ್ಪಳ ಜಿಲ್ಲೆಗೂ ರಾಮಾಯಣಕ್ಕೂ ಅವಿನಾಭಾವ ಸಂಬಂಧವಿದೆ ಅನ್ನೋದಕ್ಕೆ ಅನೇಕ ನಿದರ್ಶನಗಳು ಇಲ್ಲಿವೆ. ಇದನ್ನೂ ಓದಿ: ಕೊಪ್ಪಳಕ್ಕುಂಟು ಶ್ರೀರಾಮನ ನಂಟು – ರಾಮ, ಆಂಜನೇಯ, ಸುಗ್ರೀವರು ಭೇಟಿಯಾಗಿದ್ದ ಚಂಚಲಕೋಟೆ ಬಗ್ಗೆ ನಿಮ್ಗೆ ಗೊತ್ತಾ?

    ರಾವಣ ಸೀತೆಯನ್ನು ಅಪಹರಿಸಿದಾಗ ವನವಾಸದಲ್ಲಿದ್ದ ಶ್ರೀರಾಮ, ಸೀತೆಯನ್ನು ಹುಡುಕುತ್ತಾ ಹೊರಟಿದ್ದ. ಈ ವೇಳೆ ಶ್ರೀರಾಮನಿಗೆ ಶಕ್ತಿ ತುಂಬಿದ್ದು ಕೊಪ್ಪಳ ಜಿಲ್ಲೆಯ ಅಂಜನಾದ್ರಿಯಲ್ಲಿ ಅದುವೆ ಕಿಷ್ಕಿಂದೆ ರಾಜ್ಯ. ವಾನರಸೇನೆ ಹಾಗೂ ಶ್ರೀರಾಮನ ಬಂಟ ಹನುಮ ಸಿಕ್ಕಿದ್ದು ಇದೇ ಕಿಷ್ಕಿಂದೆ ರಾಜ್ಯದಲ್ಲಿ ಅದು ಇಂದಿನ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿ ಭಾಗದಲ್ಲಿ. ಇದನ್ನೂ ಓದಿ: ಅಯೋಧ್ಯೆ ರಾಮ ಮಂತ್ರಾಕ್ಷತೆ ಅಂದ್ರೆ ಏನು?, ಯಾಕಿಷ್ಟು ಮಹತ್ವ?, ಹೇಗೆಲ್ಲಾ ಬಳಸಬಹುದು?

    ಆನೆಗೊಂದಿ ಸಮೀಪದ ಪಂಪಾಸರೋವರದಲ್ಲಿ ಮೊದಲ ಬಾರಿಗೆ ಶ್ರೀರಾಮನನ್ನ ಆಂಜನೇಯ ಭೇಟಿಯಾಗುತ್ತಾನೆ. ಇದೇ ಸ್ಥಳದಲ್ಲಿ ವಾಲಿ ಸುಗ್ರೀವರ ಕಾಳಗ ಸಹ ನಡೆಯತ್ತೆ. ವಾಲಿ – ಸುಗ್ರೀವರ ಕಾಳಗದಲ್ಲಿ ಶ್ರೀರಾಮ ವಾಲಿವಧೆ ಮಾಡಿ ಸುಗ್ರೀವನಿಗೆ ಕಿಷ್ಕಿಂದೆಯ ಅಧಿಕಾರ ತಂದುಕೊಡುತ್ತಾನೆ. ಇದು ಒಂದು ಕಡೆಯಾದ್ರೆ, ಸೀತಾಮಾತೆಯನ್ನ ಹುಡುಕಿ ಹೊರಟ ಶ್ರೀ ರಾಮನಿಗೆ ಶಬರಿ ಕಾದು ಕುಳಿತಿದ್ದು ಕೂಡಾ ಇದೆ, ಪಂಪಾಸರೋವರದಲ್ಲಿ, ಈ ಪಂಪಾಸರೋವರದಲ್ಲಿ ಶಬರಿಯ ಗುಹೆ ಇಂದಿಗೂ ಇದೆ‌. ಈ ಗುಹೆಯಲ್ಲಿ ಪ್ರಭು ಶ್ರೀರಾಮನ ಪಾದುಕೆಗಳಿವೆ. ರಾಮ ಇಲ್ಲಿಂದ ತೆರಳಿದ ಬಳಿಕ ಶಬರಿ ಈ ಪಾದುಕೆಗಳಿಗೆ ಪೂಜೆ ಸಲ್ಲಿಸುತ್ತಿದ್ದಳು ಅನ್ನೋ ಬಗ್ಗೆ ಪುರಾಣಗಳಲ್ಲಿಯೂ ಉಲ್ಲೆಖವಿದೆ‌‌. ಇದನ್ನೂ ಓದಿ: ಅಯೋಧ್ಯೆಯ ರಾಮಮಂದಿರದ ರಾತ್ರಿಯ ವಿಹಂಗಮ ನೋಟವನ್ನು ಚಿತ್ರಗಳಲ್ಲಿ ನೋಡಿ

    14 ವರ್ಷಗಳ ವನವಾಸದಲ್ಲಿದ್ದ ಶ್ರೀರಾಮ ಸೀತೆಯನ್ನ ಹುಡುಕಿ ಹೊರಟಾಗ ಆತನ ಬಳಿ ಯಾವುದೇ ಸೈನ್ಯವಾಗಲಿ, ಯುದ್ಧ ಸಲಕರಣೆಗಳಾಗಲಿ ಇರಲಿಲ್ಲ. ಅಲ್ಲದೇ ಸಮುದ್ರವನ್ನ ದಾಟಿ ಲಂಕೆಗೆ ಹೋಗಲು ಮುಂದಾಗಿದ್ದಾಗ ಹನುಮ ಹಾಗೂ ಕಿಷ್ಕಿಂದೆಯ ರಾಜ್ಯದ ವಾನರ ಸೇನೆ ರಾಮನನ್ನ ಸೇರಿದ್ದು ಇದೇ ಕಿಷ್ಕಿಂದೆಯಲ್ಲಿ. ಕೊಪ್ಪಳ ಜಿಲ್ಲೆಯ ಸುತ್ತ ಮುತ್ತಲಿನ, ಹೊಸಪೇಟೆ, ಬಳ್ಳಾರಿ ಭಾಗದ ಕಬ್ಬಿಣ ಅಧಿರಿನಿಂದಲೇ ಅಂದು ಯುದ್ಧಕ್ಕೆ ಬೇಕಾದ ಆಯುಧಗಳನ್ನು ಸಿದ್ಧಪಡಿಸಿಕೊಳ್ಳಲಾಗಿದೆ. ಇಲ್ಲಿಯೇ ಸೇನೆಯನ್ನು ಸಿದ್ಧಪಡಿಸಿಕೊಂಡಿದ್ದ ಬಗ್ಗೆಯೂ ಇತಿಹಾಸವಿದೆ.

    ನಂತರ ವಾನರ ಸೇನೆಯ ಸಹಾಯದಿಂದಲೇ ಲಂಕೆಗೆ ಸೇತುವೆ ನಿರ್ಮಿಸಿ ಆಂಜನೇಯನ ಸಹಾಯದಿಂದ ಲಂಕಾ ಪ್ರವೇಶಿಸಿ ರಾವಣನ ಸಂಹಾರ ಮಾಡಲಾಯಿತು. ನಂತರ ಸೀತಾ ಮಾತೆಯನ್ನ ಅಯೋಧ್ಯೆಗೆ ಕರೆತರಲಾಯಿತು. ಈ ಎಲ್ಲ ಮಹತ್ಕಾರ್ಯಕ್ಕೆ ಸಹಾಯಕವಾಗಿದ್ದು ಅಂದಿನ ಕಿಷ್ಕಿಂದೆ ರಾಜ್ಯದ ವಾನರ ಸೇನೆ. ಅದು ಇಂದಿನ ಅಂಜನಾದ್ರಿಯ ಆನೆಗೊಂದಿ ಭಾಗ. ಇದಕ್ಕೆ ಅಂಜನಾದ್ರಿ ಬೆಟ್ಟದ ಸುತ್ತಲಿನ ಪ್ರದೇಶದಲ್ಲಿ ಹಲವು ಸಾಕ್ಷಿಗಳು ದೊರೆತಿವೆ‌. ಇದರಿಂದ ರಾಮಾಯಣಕ್ಕೂ ಕೊಪ್ಪಳ ಜಿಲ್ಲೆಯಗೂ ಅವಿನಾಭಾವ ಸಂಬಂಧವಿದೆ ಎನ್ನುತ್ತಾರೆ ಇತಿಹಾಸ ತಜ್ಞರು. ಇದನ್ನೂ ಓದಿ: ರಾಮಲಲ್ಲಾ ಪ್ರಾಣಪ್ರತಿಷ್ಠೆ – 96 ವರ್ಷದ ಕರಸೇವಕಿಗೆ ವಿಶೇಷ ಆಹ್ವಾನ – ಈಕೆ ಯಾರು ಗೊತ್ತಾ?