Tag: ಶಬರಿಮಲೆ ದೇವಸ್ಥಾನ

  • ಶಬರಿಮಲೆ ಯಾತ್ರಾರ್ಥಿಗಳಿಗೆ ವಿಮಾನಗಳ ಕ್ಯಾಬಿನ್ ಬ್ಯಾಗ್‌ನಲ್ಲಿ `ಇರುಮುಡಿ’ ಸಾಗಿಸಲು ಅನುಮತಿ

    ಶಬರಿಮಲೆ ಯಾತ್ರಾರ್ಥಿಗಳಿಗೆ ವಿಮಾನಗಳ ಕ್ಯಾಬಿನ್ ಬ್ಯಾಗ್‌ನಲ್ಲಿ `ಇರುಮುಡಿ’ ಸಾಗಿಸಲು ಅನುಮತಿ

    ತಿರುವನಂತಪುರಂ: ಕೇರಳದ ಶಬರಿಮಲೆ ದೇವಸ್ಥಾನಕ್ಕೆ (Sabarimala temple) ತೆರಳುವ ಯಾತ್ರಾರ್ಥಿಗಳು ವಿಮಾನಗಳ ಕ್ಯಾಬಿನ್ ಬ್ಯಾಗ್‌ನಲ್ಲಿ `ಇರುಮುಡಿ’ಯನ್ನು ಸಾಗಿಸಬಹುದು ಎಂದು ನಾಗರಿಕ ವಿಮಾನಯಾನ ಸಚಿವ ಕೆ.ರಾಮಮೋಹನ್ ನಾಯ್ಡು (K Rammohan Naidu) ತಿಳಿಸಿದರು.

    ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಶನಿವಾರ ಮಾಹಿತಿ ಹಂಚಿಕೊಂಡ ಅವರು, ನವೆಂಬರ್ ಮಧ್ಯದಿಂದ ಜನವರಿಯ ಕೊನೆಯವರೆಗೆ ಶಬರಿಮಲೆಗೆ ಯಾತ್ರಾರ್ಥಿಗಳು ತೆರಳುತ್ತಾರೆ. 2025ರ ಜನವರಿ 20ರವರೆಗೆ ಯತಾರ್ಥಿಗಳು ವಿಮಾನಗಳ ಕ್ಯಾಬಿನ್ ಬ್ಯಾಗ್‌ನಲ್ಲಿ ತೆಂಗಿನಕಾಯಿಯನ್ನು ತೆಗೆದುಕೊಂಡು ಪ್ರಯಾಣಿಸಬಹುದು ಹಾಗೂ ಈ ಸೀಮಿತ ಅವಧಿಯಲ್ಲಿ ಮಾತ್ರ ತೆಗೆದುಕೊಂಡು ಹೋಗಲು ಅನುಮತಿಸಲಾಗಿದೆ ಎಂದು ತಿಳಿಸಿದರು.ಇದನ್ನೂ ಓದಿ: ಅನ್ನಕ್ಕೆ ಆರ್ಸೆನಿಕ್ ಎಂಬ ವಿಷ ಬೆರೆಸಿ ಕೊಲೆಗೆ ಯತ್ನ? – ಎಫ್‌ಎಸ್‌ಎಲ್ ವರದಿಗಾಗಿ ಕಾಯುತ್ತಿರೋ ಪೊಲೀಸರು

    ಸದ್ಯದ ನಿಯಮಗಳ ಪ್ರಕಾರ ವಿಮಾನಗಳ ಕ್ಯಾಬಿನ್ ಬ್ಯಾಗ್‌ನಲ್ಲಿ ತೆಂಗಿನಕಾಯಿ ತೆಗೆದುಕೊಂಡು ಹೋಗಲು ಅನುಮತಿಯಿಲ್ಲ. ಶಬರಿಮಲೆಗೆ ಹೋಗುವವರಿಗೆ ಯಾತ್ರೆ ಸುಲಭವಾಗಿರಲಿ ಎನ್ನುವ ಕಾರಣಕ್ಕೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಮಂಡಲಂ-ಮಕರವಿಳಕ್ಕು ತೀರ್ಥಯಾತ್ರೆಯ ಅವಧಿಯಲ್ಲಿ `ಇರುಮುಡಿ’ಯಲ್ಲಿ (ತುಪ್ಪ ತುಂಬಿದ ತೆಂಗಿನಕಾಯಿ ಸೇರಿದಂತೆ ಅರ್ಪಣೆಗಳನ್ನು ಹೊಂದಿರುವ ಪವಿತ್ರ) ತೆಂಗಿನಕಾಯಿಯನ್ನು ಸಾಗಿಸಲು ವಿನಾಯಿತಿ ನೀಡಲಾಗಿದೆ ಎಂದು ಹೇಳಿದರು.

    ಈ ಆದೇಶವು 2025ರ ಜನವರಿ 20ರವರೆಗೆ ಮಾತ್ರ ಚಾಲ್ತಿಯಲ್ಲಿರುತ್ತದೆ. ಅಗತ್ಯವಿರುವ ಎಕ್ಸ್-ರೇ, ಇಟಿಡಿ (ಎಕ್ಸ್ಪ್ಲೋಸಿವ್ ಟ್ರೇಸ್ ಡಿಟೆಕ್ಟರ್) ಮತ್ತು ಭೌತಿಕ ತಪಾಸಣೆ ಹೀಗೆ ಭದ್ರತಾ ತಪಾಸಣೆಗಳ ಬಳಿಕವೇ ಅನುಮತಿ ನೀಡಲಾಗುವುದು ಎಂದರು.

    ಒಟ್ಟು ಎರಡು ತಿಂಗಳ ಕಾಲ ಅಂದರೆ ಜನವರಿ ಅಂತ್ಯದವರೆಗೆ ತೀರ್ಥಯಾತ್ರೆಗಾಗಿ ಶಬರಿಮಲೆಯ ಅಯ್ಯಪ್ಪ ದೇವಾಲಯವು ತೆರೆದಿರುತ್ತದೆ. ಪ್ರತಿ ವರ್ಷ ಲಕ್ಷಾಂತರ ಭಕ್ತರು ದೇಗುಲಕ್ಕೆ ಭೇಟಿ ನೀಡುತ್ತಾರೆ. ಜೊತೆಗೆ `ಇರುಮುಡಿ ಕೆಟ್ಟು’ (ತುಪ್ಪ ತುಂಬಿದ ತೆಂಗಿನಕಾಯಿ ಸೇರಿದಂತೆ ಅರ್ಪಣೆಗಳನ್ನು ಹೊಂದಿರುವ ಪವಿತ್ರ ಚೀಲವನ್ನು ಭಗವಂತನಿಗೆ ಕೊಂಡೊಯ್ಯತ್ತಾರೆ).

    ಸಾಮಾನ್ಯವಾಗಿ, ಶಬರಿಮಲೆಗೆ ಯಾತ್ರೆ ಕೈಗೊಳ್ಳುವವರು `ಕೆಟ್ಟುನಿರಕಲ್’ ಆಚರಣೆಯ ಭಾಗವಾಗಿ `ಇರುಮುಡಿ ಕೆಟ್ಟು’ ಸಿದ್ಧಪಡಿಸುತ್ತಾರೆ. ಆಚರಣೆಯ ಸಮಯದಲ್ಲಿ, ತೆಂಗಿನಕಾಯಿಯೊಳಗೆ ತುಪ್ಪ ತುಂಬಿಸಲಾಗುತ್ತದೆ. ನಂತರ ಅದನ್ನು ಇತರ ನೈವೇದ್ಯಗಳೊಂದಿಗೆ ಚೀಲದಲ್ಲಿ ಇರಿಸಲಾಗುತ್ತದೆ. ತೀರ್ಥಯಾತ್ರೆಯ ಸಮಯದಲ್ಲಿ ವಿವಿಧ ಪವಿತ್ರ ಸ್ಥಳಗಳಲ್ಲಿ ಒಡೆಯಲು ಹೆಚ್ಚಿನ ತೆಂಗಿನಕಾಯಿಗಳನ್ನು ಇರಿಸಿರಲಾಗುತ್ತದೆ.

    `ಇರುಮುಡಿ ಕಟ್ಟೆ’ಯನ್ನು ತಲೆಯ ಮೇಲೆ ಹೊತ್ತ ಯಾತ್ರಾರ್ಥಿಗಳಿಗೆ ಮಾತ್ರ ದೇವಾಲಯದ ಗರ್ಭಗುಡಿಯನ್ನು ತಲುಪಲು 18 ಪವಿತ್ರ ಮೆಟ್ಟಿಲುಗಳನ್ನು ಹತ್ತಲು ಅನುಮತಿಸಲಾಗುತ್ತದೆ. ಅದನ್ನು ಹೊತ್ತುಕೊಳ್ಳದವರು ಗರ್ಭಗುಡಿಯನ್ನು ತಲುಪಲು ಬೇರೆ ಮಾರ್ಗದ ಮೂಲಕ ಗರ್ಭಗುಡಿಗೆ ಹೋಗಬೇಕು.ಇದನ್ನೂ ಓದಿ: ಶಕ್ತಿ ಯೋಜನೆಯಲ್ಲೂ ದೋಖಾ? – ಮಹಿಳೆಯರ ಫ್ರೀ ಬಸ್ ಪ್ರಯಾಣ ಟಿಕೆಟ್ ಪುರುಷರಿಗೆ ವಿತರಣೆ

  • ನಾಳೆಯಿಂದ ಶಬರಿಮಲೆ ದೇಗುಲ ಓಪನ್ – ಭಕ್ತರಿಗೆ ಕೊರೊನಾ ಟೆಸ್ಟ್ ಕಡ್ಡಾಯ

    ನಾಳೆಯಿಂದ ಶಬರಿಮಲೆ ದೇಗುಲ ಓಪನ್ – ಭಕ್ತರಿಗೆ ಕೊರೊನಾ ಟೆಸ್ಟ್ ಕಡ್ಡಾಯ

    – ನೆಗೆಟಿವ್ ಇದ್ರೆ ಮಾತ್ರ ಪ್ರವೇಶಕ್ಕೆ ಅವಕಾಶ
    – ಕಟ್ಟುನಿಟ್ಟಿನ ನಿಯಮ ಪಾಲನೆ ಜಾರಿಗೆ

    ತಿರುವನಂತಪುರಂ: ಈ ವರ್ಷದ ಮಂಡಲಕ್ಕೆ ಶಬರಿಮಲೆ ದೇವಸ್ಥಾನವನ್ನು ತೆರೆಯಲಾಗುತ್ತಿದ್ದು, ಸೋಮವಾರದಿಂದ ಅಯ್ಯಪ್ಪನ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಆದರೆ ಕಟ್ಟುನಿಟ್ಟಿನ ಕೊರನಾ ನಿಯಮಾವಳಿಗಳನ್ನು ಪಾಲಿಸುವುದು ಕಡ್ಡಾಯವಾಗಿದೆ.

    ಶಬರಿಮಲೆ ಅಯ್ಯಪ್ಪ ದೇವಾಲಯದ ಪ್ರಧಾನ ಅರ್ಚಕ ಎ.ಕೆ.ಸುಧೀರ್ ನಂಬೂಥಿರಿಯವರು ಪ್ರಧಾನ ಅರ್ಚಕ ಕಂದರರು ರಾಜೀವರು ಅವರ ನೇತೃತ್ವದಲ್ಲಿ ಇಂದು ಸಂಜೆ 5 ಗಂಟೆಗೆ ದೇವಸ್ಥಾನದ ಬಾಗಿಲು ತೆರೆಯಲಿದ್ದಾರೆ. ಶಬರಿಮಲೆಯ ಹೊಸ ಪ್ರಧಾನ ಅರ್ಚಕರಾದ ವಿ.ಕೆ.ಜಯರಾಜ್ ಪೊಟ್ಟಿ ಹಾಗೂ ಮಲ್ಲಿಕಾಪುರಂ ಪ್ರಧಾನ ಅರ್ಚಕ ಎಂ.ಎನ್ ರಾಜಿಕುಮಾರ್ ಅವರು ಸಂಜೆ ದೇವಸ್ಥಾನಕ್ಕೆ ಆಗಮಿಸಲಿದ್ದಾರೆ.

    ಸೋಮವಾರ ವೃಶ್ಚಿಕದ ಮೊದಲ ದಿನವಾದ್ದರಿಂದ ಹೊಸ ಪ್ರಧಾನ ಅರ್ಚಕರು ದೇವಸ್ಥಾನದ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಿದ್ದಾರೆ. ಸೋಮವಾರ ಬೆಳಗ್ಗೆಯಿಂದ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಆದರೆ ಕೊರೊನಾ ಹಿನ್ನೆಲೆ ಕಟ್ಟುನಿಟ್ಟಿನ ನಿಯಮ ಪಾಲಿಸುವುದು ಕಡ್ಡಾಯವಾಗಿದ್ದು, ಒಂದು ದಿನಕ್ಕೆ ಕೇವಲ 1 ಸಾವಿರ ಭಕ್ತರಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ.

    ಈ ಕುರಿತು ದೇವಸ್ವಂ ಸಚಿವ ಕಡಕಂಪಲ್ಲಿ ಸುರೇಂದ್ರನ್ ಅವರು ಮಾತನಾಡಿ, ಆರಂಭದಲ್ಲಿ 1 ಸಾವಿರ ಭಕ್ತರಿಗೆ ಮಾತ್ರ ಅವಕಾಶ ನೀಡುತ್ತಿದ್ದು, ನಂತರದ ದಿನಗಳಲ್ಲಿ ನಿಧಾನವಾಗಿ ಹೆಚ್ಚು ಭಕ್ತರಿಗೆ ಅವಕಾಶ ನೀಡಲಾಗುವುದು. ಆರಂಭದ ಎರಡು ದಿನಗಳಲ್ಲಿ ದರ್ಶನ ಪಡೆಯದವರು ವರ್ಚುವಲ್ ಕ್ಯೂನಲ್ಲಿ ನೋಂದಾಯಿಸಿಕೊಳ್ಳಬಹದು. ಅವರಿಗೆ ನಂತರದ ದಿನಗಳಲ್ಲಿ ಅವಕಾಶ ನೀಡಲಾಗುವುದು ಎಂದರು.

    ಶುಕ್ರವಾರ ಉನ್ನತ ಮಟ್ಟದ ಸಭೆ ನಡೆಸಿದ ಬಳಿಕ ಸಚಿವರು ಈ ನಿರ್ಧಾರ ಕೈಗೊಂಡಿದ್ದಾರೆ. ಸಂಪೂರ್ಣವಾಗಿ ವರ್ಚುವಲ್ ಕ್ಯೂ ರಿಜಿಸ್ಟ್ರೇಶನ್ ವ್ಯವಸ್ಥೆ ಮೂಲಕ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗುವುದು. ಯಾತ್ರಾರ್ಥಿಗಳು ಆ್ಯಂಟಿ ವೈರಸ್ ಮಾಸ್ಕ್, ಸಾಮಾಜಿಕ ಅಂತರ ಕಾಪಾಡುವುದು, 60-65 ವರ್ಷದೊಳಗಿರುವವರು ವೈದ್ಯಕೀಯ ವರದಿ ತರುವುದು ಕಡ್ಡಾಯವಾಗಿದೆ. ಅಲ್ಲದೆ 24 ಗಂಟೆಯೊಳಗಡೆ ಪರೀಕ್ಷೆ ಮಾಡಿಸಿದ ಕೊರೊನಾ ನೆಗೆಟಿವ್ ವರದಿಯನ್ನು ತರುವುದು ಕಡ್ಡಾಯವಾಗಿದೆ.

    ಆರೋಗ್ಯ ಇಲಾಖೆ ಕೊರೊನಾ ಟೆಸ್ಟಿಂಗ್ ಕೇಂದ್ರಗಳನ್ನು ಸಹ ತೆರೆಯಲಾಗಿದ್ದು, ತಿರುವನಂತಪುರಂ, ತಿರುವಳ್ಳ, ಚೆಂಗಣ್ಣೂರ್ ಹಾಗೂ ಕೊಟ್ಟಯಂ ರೈಲು ನಿಲ್ದಾಣಗಳಲ್ಲಿ ಆ್ಯಂಟಿಜೆನ್ ಟೆಸ್ಟ್ ಮಾಡಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಅಲ್ಲದೆ ನಿಲಕ್ಕಲ್ ಹಾಗೂ ಪಂಬಾಗಳಲ್ಲಿ ಕೋವಿಡ್-19 ಟೆಸ್ಟಿಂಗ್ ಕಿಯೋಸ್ಕ್‍ಗಳನ್ನು ಸಹ ಸ್ಥಾಪಿಸಲಾಗುತ್ತಿದೆ. ಪರೀಕ್ಷ ವೇಳೆ ಯಾರಿಗಾದರೂ ಪಾಸಿಟಿವ್ ವರದಿ ಬಂದಲ್ಲಿ, ಅಂತರಾಜ್ಯ ಭಕ್ತರಾಗಿದ್ದರೂ ನೆಗೆಟಿವ್ ವರದಿ ಬರುವ ವರೆಗೆ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದಾಗಿದೆ.