Tag: ಶಬರಿ ಮಲೆ

  • 39 ದಿನಗಳಲ್ಲಿ ಶಬರಿಮಲೆಗೆ 204 ಕೋಟಿ ರೂ. ಆದಾಯ- ಕಳೆದ ವರ್ಷ ಎಷ್ಟಿತ್ತು?

    39 ದಿನಗಳಲ್ಲಿ ಶಬರಿಮಲೆಗೆ 204 ಕೋಟಿ ರೂ. ಆದಾಯ- ಕಳೆದ ವರ್ಷ ಎಷ್ಟಿತ್ತು?

    ಪತ್ತನಂತಿಟ್ಟ: ಅಯ್ಯಪ್ಪ (Ayyappa) ಸನ್ನಿಧಾನದಲ್ಲಿ ಕಳೆದ 39 ದಿನಗಳಲ್ಲಿ ಬರೋಬ್ಬರಿ 204.30 ಕೋಟಿ ರೂ. ಆದಾಯ (Revenue) ಸಂಗ್ರಹವಾಗಿದೆ. ಆದರೆ ಕಳೆದ ವರ್ಷಕ್ಕಿಂತ ಈ ವರ್ಷ ಸುಮಾರು 18 ಕೋಟಿ ಆದಾಯ ಕಡಿಮೆಯಾಗಿದೆ ಎಂಬುದಾಗಿ ವರದಿಯಾಗಿದೆ.

    ಶಬರಿಮಲೆ (Sabarimala) ದೇಗುಲದಲ್ಲಿ 41 ದಿನಗಳ ಕಾಲ ನಡೆದ ಮಂಡಲಂ-ಮಕರವಿಳಕ್ಕು (Mandalam-Makaravilakku) ಯಾತ್ರೆಯ ಮೊದಲ ಹಂತ ಇಂದು ಮುಕ್ತಾಯಗೊಳ್ಳಲಿದೆ. ಮೊದಲ 39 ದಿನಗಳ ಅಂದರೆ ಡಿಸೆಂಬರ್ 25 ರವರೆಗೆ ಬೆಟ್ಟದ ದೇಗುಲದ ಆದಾಯವು 204,30,76,704 ರೂ.ಗೆ ತಲುಪಿದೆ. ಆದಾಯದಲ್ಲಿ ಕಳೆದ ವರ್ಷಕ್ಕಿಂತ ಈ ವರ್ಷ ಕಡಿಮೆಯಾಗಿದೆ. ಆದರೆ ಮೊದಲ 39 ದಿನಗಳಲ್ಲಿ ದೇವಾಲಯಕ್ಕೆ ಭೇಟಿ ನೀಡಿದ ಯಾತ್ರಾರ್ಥಿಗಳ ಸಂಖ್ಯೆ ಹಿಂದಿನ ವರ್ಷಕ್ಕಿಂತ ಹೆಚ್ಚಾಗಿದೆ.

    ತಿರುವಾಂಕೂರು ದೇವಸ್ವಂ ಬೋರ್ಡ್ (TDB) ಅಧ್ಯಕ್ಷ ಪಿ.ಎಸ್.ಪ್ರಶಾಂತ್ ಶಬರಿಮಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ವರ್ಷ ಈ ಬಾರಿ 222,98,70,250 (222.98 ಕೋಟಿ ರೂ.) ಆದಾಯ ಬಂದಿದ್ದು, ಈ ಬಾರಿ 18,67,93, 546 ರೂ. ಇಳಿಕೆಯಾಗಿದೆ. ಇನ್ನು ನಾಣ್ಯಗಳನ್ನು ಎಣಿಸಿದ ನಂತರ ‘ಕುತಕ ಲೇಲಂ’ ಆದಾಯವನ್ನು ಸೇರಿಸಿದರೆ ಆದಾಯ ಹೆಚ್ಚಾಗಬಹುದು ಎಂದು ಅವರು ತಿಳಿಸಿದ್ದಾರೆ.

    ಭಕ್ತರು ಸಲ್ಲಿಸಿರುವ ಕಾಣಿಕೆಯಿಂದ 63.89 ಕೋಟಿ ರೂ. ಸಂಗ್ರಹವಾಗಿದೆ. ಅರವಣ ಪ್ರಸಾದದಿಂದ 96.32 ಕೋಟಿ ರೂ., ಅಪ್ಪಂ ಪ್ರಸಾದ ಮಾರಾಟದಿಂದ 12.39 ಕೋಟಿ ರೂ. ಆದಾಯ ಬಂದಿದೆ. ಈ ಋತುವಿನಲ್ಲಿ 31 ಲಕ್ಷ ಯಾತ್ರಾರ್ಥಿಗಳು ಬೆಟ್ಟದ ದೇಗುಲಕ್ಕೆ ಭೇಟಿ ನೀಡಿದ್ದಾರೆ. ಕಳೆದ ಋತುವಿನಲ್ಲಿ ಸುಮಾರು 30 ಲಕ್ಷ ಭಕ್ತರು ಶಬರಿಮಲೆಗೆ ಭೇಟಿ ನೀಡಿದ್ದರು. ಹಿಂದಿನ ವರ್ಷ 50 ಲಕ್ಷ ಭಕ್ತರು ಇಡೀ ತೀರ್ಥೋದ್ಭವದಲ್ಲಿ ಪಾಲ್ಗೊಂಡಿದ್ದರು. ಈ ಬಾರಿ 50 ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳನ್ನು ನಿರೀಕ್ಷಿಸುತ್ತಿದ್ದೇವೆ ಎಂದು ಪ್ರಶಾಂತ್‌ ವಿವರಿಸಿದ್ದಾರೆ.

  • ಶಬರಿಮಲೆಗೆ ತೆರಳಿದ ಕರ್ನಾಟಕದ ಟಿಟಿ ವಾಹನ ಅಪಘಾತ – 3 ಸಾವು, 11 ಜನರಿಗೆ ಗಾಯ

    ಶಬರಿಮಲೆಗೆ ತೆರಳಿದ ಕರ್ನಾಟಕದ ಟಿಟಿ ವಾಹನ ಅಪಘಾತ – 3 ಸಾವು, 11 ಜನರಿಗೆ ಗಾಯ

    ತಿರುವನಂತಪುರಂ: ಶಬರಿಮಲೆ ದೇವರ ದರ್ಶನಕ್ಕೆ ತೆರಳಿದ ಕರ್ನಾಟಕದ ಟಿಟಿ ವಾಹವೊಂದು ಭೀಕರ ಅಪಘಾತಕ್ಕಿಡಾಗಿ ಮೂವರು ಮರಣ ಹೊಂದಿರುವ ಘಟನೆ ಕೇರಳದ ಕೋಝಿಕ್ಕೋಡ್‍ನ ಪುರಕ್ಕಾಟ್ಟಿರಿಯಲ್ಲಿ ನಡೆದಿದೆ.

    ಕರ್ನಾಟಕ ಮೂಲದ ಭಕ್ತರು ಟಿಟಿ ವಾಹನದಲ್ಲಿ ಶಬರಿ ಮಲೆಗೆ ತೆರಳುತ್ತಿದ್ದಾಗ ಪುರಕ್ಕಾಟ್ಟಿರಿಯ ಪುಲದಿಕುನ್ನು ಬೈಪಾಸ್ ಬಳಿ ಟಿಪ್ಪರ್ ಲಾರಿ ಮತ್ತು ಟಿಟಿ ನಡುವೆ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮರಣ ಹೊಂದಿದ್ದು 11 ಮಂದಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: 7 ರಾಜ್ಯಗಳಲ್ಲಿ 14 ಮಹಿಳೆಯರನ್ನು ಮದುವೆಯಾಗಿದ್ದ ಭೂಪ ಅರೆಸ್ಟ್

    ಗಾಯಾಳುಗಳನ್ನು ಸ್ಥಳೀಯ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತರನ್ನು ಕರ್ನಾಟಕ ಮೂಲದ ಶಿವಣ್ಣ ಮತ್ತು ನಾಗರಾಜ ಎಂದು ಗುರುತಿಸಲಾಗಿದ್ದು, ಟಿಪ್ಪರ್ ಚಾಲಕ ಎರ್ನಾಕುಲಂ ಮೂಲದವರಾಗಿದ್ದಾರೆ. ಇದನ್ನೂ ಓದಿ: 13ರ ಬಾಲಕಿ ಮೇಲೆ 16 ಮಂದಿಯಿಂದ ಸಾಮೂಹಿಕ ಅತ್ಯಾಚಾರ – ನೋವಿನ ಕಥೆ ಬಿಚ್ಚಿಟ್ಟ ತಂದೆ!

  • ದೇವರ ನಾಡು ಕೇರಳದಲ್ಲಿ ಜಲಪ್ರಳಯ –  6 ಸಾವು, 15 ಮಂದಿ ನಾಪತ್ತೆ

    ದೇವರ ನಾಡು ಕೇರಳದಲ್ಲಿ ಜಲಪ್ರಳಯ – 6 ಸಾವು, 15 ಮಂದಿ ನಾಪತ್ತೆ

    ತಿರುವನಂತಪುರ: ಕೇರಳದಲ್ಲಿ ಸುರಿಯುತ್ತಿರುವ ಕುಂಭದ್ರೋಣ ಮಳೆ ಭಾರೀ ಭೀಭತ್ಸವನ್ನೇ ಸೃಷ್ಟಿಸಿದೆ. ಧಾರಾಕಾರ ಮಳೆಯಿಂದಾಗಿ ಹಲವೆಡೆ ಭೂ ಕುಸಿತ ಉಂಟಾಗಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ.

    ರಣ ಪ್ರವಾಹದ ಧಾಟಿಗೆ ಕೊಟ್ಟಾಯಂ, ಇಡುಕ್ಕಿ ಜಿಲ್ಲೆಯಲ್ಲಿ ಬೆಟ್ಟ ಗುಡ್ಡಗಳು ಕುಸಿದು ಆರು ಮಂದಿ ಸಾವನ್ನಪ್ಪಿದ್ದಾರೆ. ಒರವಹದಿಂದಾಗಿ ಇಡುಕ್ಕಿಯಲ್ಲಿ ಕಾರೊಂದು ಕೊಚ್ಚಿ ಹೋಗಿ ಮಹಿಳೆಯೊಬ್ಬರು ನೀರುಪಾಲಾಗಿದ್ದಾರೆ. 12ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಅಲ್ಲದೇ ಹೆದ್ದಾರಿಗಳೆಲ್ಲಾ ಸಂಪೂರ್ಣ ಜಲಮಯವಾಗಿವೆ. ಇದನ್ನೂ ಓದಿ:  ಲಖೀಂಪುರ್ ಖೇರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವರನ್ನು ವಜಾ ಮಾಡದಿರುವುದು ನಾಚಿಕೆಗೇಡು: ಕಾಂಗ್ರೆಸ್

    ಪ್ರವಾಹದಲ್ಲಿ ಸಿಲುಕಿದ್ದ ಬಸ್ಸು ಕಾರುಗಳನ್ನು ಮೇಲಕ್ಕೆ ಎಳೆದು, ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಪ್ರವಾಹದಲ್ಲಿ ಹಲವಾರು ವಾಹನಗಳು ನೀರು ಪಾಲಾಗಿದೆ. ಸದ್ಯ ಜನ ನಾನಾ ಅವಸ್ಥೆ ಪಡುತ್ತಿದ್ದಾರೆ. ಅಲ್ಲದೇ ಹವಾಮಾನ ಇಲಾಖೆ ಕೊಟ್ಟಾಯಂ, ಇಡುಕ್ಕಿ, ಎರ್ನಾಕುಲಂ, ಪಟ್ಟಣಂತಿಟ್ಟ, ತ್ರಿಶ್ಯೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಇದನ್ನೂ ಓದಿ:  1 ರಿಂದ 5ನೇ ತರಗತಿ ಆರಂಭಕ್ಕೆ ಅಗತ್ಯವುಳ್ಳ ಎಲ್ಲಾ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ: ಬಿ.ಸಿ.ನಾಗೇಶ್

    ತಿರುವನಂತಪುರ, ವಯನಾಡ್ ಸೇರಿ ಏಳು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್, ಎರಡು ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಪ್ರಕಟಿಸಿದೆ. ಬೆಟ್ಟಗುಡ್ಡಗಳು ಕುಸಿಯುತ್ತಿರುವ ಹಿನ್ನೆಲೆಯಲ್ಲಿ ರಸ್ತೆಗಳು ಜಲಮಯವಾಗಿದ್ದು, ರಕ್ಷಣಾ ಕಾರ್ಯಾಚರಣೆ ವಿಳಂಬ ಆಗುತ್ತಿದೆ. ಹೀಗಾಗಿ ಕೇರಳ ಸರ್ಕಾರ, ಐಎಎಫ್ ನೆರವು ಕೋರಿದೆ. ಇದೀಗ ಹೆಲಿಕಾಪ್ಟರ್‍ಗಳ ಮೂಲಕ ವಾಯುಪಡೆ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಇದನ್ನೂ ಓದಿ: ಕಟ್ಟಡ ಕಾರ್ಮಿಕರ ಕಾರ್ಡ್ ದುರುಪಯೋಗವಾದರೆ ಕ್ರಮ: ಸಿಎಂ

    ಕೇರಳದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಅಕ್ಟೋಬರ್ 19ರವರೆಗೆ ಶಬರಿಮಲೆ ಯಾತ್ರೆಗೆ ನಿಷೇಧ ಹೇರಲಾಗಿದೆ. ಅಲ್ಲದೇ ನಾಳೆಯಿಂದ ಆರಂಭವಾಗಬೇಕಿದ್ದ ಕಾಲೇಜುಗಳನ್ನು ಅಕ್ಟೋಬರ್ 20ಕ್ಕೆ ಮುಂದೂಡಲಾಗಿದೆ ಮತ್ತು ಕೇರಳ ಸ್ಥಿತಿ ಗಂಭೀರವಾಗಿದೆ ಎಂದು ಸಿಎಂ ಪಿಣರಾಯಿ ವಿಜಯನ್ ತಿಳಿದ್ದಾರೆ.

  • ಹ್ಯಾಟ್ರಿಕ್ ಹೀರೋ ಶಿವಣ್ಣ ಶಬರಿ ಮಲೆ ಯಾತ್ರೆ ರದ್ದು

    ಹ್ಯಾಟ್ರಿಕ್ ಹೀರೋ ಶಿವಣ್ಣ ಶಬರಿ ಮಲೆ ಯಾತ್ರೆ ರದ್ದು

    ಬೆಂಗಳೂರು: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಶಬರಿ ಮಲೆ ಯಾತ್ರೆಗೂ ಬ್ರೇಕ್ ಬಿದ್ದಿದೆ.

    ಶಿವಣ್ಣ ಪ್ರತಿ ಬಾರಿ ಮಾಲೆ ಧರಿಸಿಕೊಂಡು ತಮ್ಮ ತಂಡದೊಂದಿಗೆ ಶಬರಿಮಲೆಯ ಸ್ವಾಮಿ ಅಯ್ಯಪ್ಪ ದರ್ಶನಕ್ಕೆ ಹೋಗುತ್ತಿದ್ದರು. ಈ ಬಾರಿಯೂ ಮಾಲೆ ಧರಿಸಿಕೊಂಡು ಸ್ವಾಮಿ ಅಯ್ಯಪ್ಪ ದೇವಾಲಯಕ್ಕೆ ಹೋಗಲು ಸಿದ್ಧತೆ ಮಾಡಿಕೊಂಡಿದ್ದರು. ಆದರೆ ಕೊರೊನಾ ವೈರಸ್‍ನಿಂದ ಶಿವಣ್ಣ ಮುಂಜಾಗ್ರತವಾಗಿ ಶಬರಿ ಮಲೆ ಯಾತ್ರೆಯನ್ನು ರದ್ದು ಮಾಡಿದ್ದಾರೆ.

    ಹೀಗಾಗಿ ಶಿವಣ್ಣ ಇಂದು ಮನೆಯಲ್ಲಿ ಪೂಜೆ ಮಾಡಿ ಮಾಲೆ ಬಿಚ್ಚಲಿದ್ದಾರೆ. ಈ ಪೂಜೆಯಲ್ಲಿ ರಾಘವೇಂದ್ರ ರಾಜ್ ಕುಮಾರ್ ಸೇರಿದಂತೆ ಕುಟುಂಬ ಸದಸ್ಯರು ಭಾಗಿಯಾಗಿದ್ದಾರೆ. ಮನೆಯಲ್ಲಿ ಪೂಜೆಯನಂತರ ಜಾಲಹಳ್ಳಿಯ ಅಯ್ಯಪ್ಪ ದೇವಸ್ಥಾನಕ್ಕೆ ಶಿವರಾಜ್‍ಕುಮಾರ್ ಭೇಟಿ ಕೊಡಲಿದ್ದಾರೆ.

    ಶಿವಣ್ಣ ಅವರು ನಿರ್ದೇಶಕ ರಘುರಾಮ್ ಮತ್ತು ಅವರ ಬಳಗ ಫೆಬ್ರವರಿ 21ರಂದು ಮಾಲೆ ಧರಿಸಿತ್ತು. ಇಂದು ಸಂಜೆ ಶಬರಿಮಲೆ ಯಾತ್ರೆಗೆ ತೆರಳು ನಿರ್ಧರಿಸಿದ್ದರು. ಅದೇ ರೀತಿ ಯಾತ್ರೆ ಮುಗಿಸಿ ಮಾರ್ಚ್ 18ರಂದು ವಾಪಸ್ ಬರಬೇಕಿತ್ತು. ಆದರೆ ಕೇರಳದಲ್ಲಿ ಅತಿ ಹೆಚ್ಚು ಪ್ರಕರಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಅನೇಕ ದೇವಾಲಯಗಳು ಬಂದ್ ಆಗಿವೆ.

    ಶಬರಿಮಲೆ ದೇವಸ್ಥಾನ ಮಂಡಳಿ ಕೂಡ ಭಕ್ತರು ಈ ಸಂದರ್ಭದಲ್ಲಿ ದೇವಸ್ಥಾನಕ್ಕೆ ಬರುವುದು ಬೇಡ ಎಂದು ತಿಳಿಸಿದೆ. ಈ ಎಲ್ಲಾ ಕಾರಣ ದಿಂದ ಶಿವರಾಜ್ ಕುಮಾರ್ ಯಾತ್ರೆಯನ್ನು ಕೈಬಿಟ್ಟಿದ್ದಾರೆ.

  • ಶಬರಿಮಲೆ ಮಹಿಳೆಯರ ಪ್ರವೇಶ ವಿಚಾರ ಉಡುಪಿಯಲ್ಲಿ ಜ್ವಾಲ ಪ್ರಜ್ವಲನಾ ಅಭಿಯಾನ

    ಶಬರಿಮಲೆ ಮಹಿಳೆಯರ ಪ್ರವೇಶ ವಿಚಾರ ಉಡುಪಿಯಲ್ಲಿ ಜ್ವಾಲ ಪ್ರಜ್ವಲನಾ ಅಭಿಯಾನ

    ಉಡುಪಿ: ಸೋಮವಾರ ಶಬರಿಮಲೆ ಪಂದಳ ಕಂದನ ಸನ್ನಿಧಾನದಲ್ಲಿ ವಿಜ್ರಂಭಣೆಯ ಆಚರಣೆ ನಡೆಯಿತು. ಇದೇ ಸಂದರ್ಭ ಉಡುಪಿಯಲ್ಲಿ ದೀಪಪ್ರಜ್ವಲನಾ ಅಭಿಯಾನ ನಡೆಯಿತು.

    ಸಂಜೆ ಆರು ನಲವತ್ತೈದರ ಸುಮಾರಿಗೆ ಜ್ಯೋತಿಯ ದರ್ಶನವೂ ಆಯ್ತು. ಅದೇ ಸಮಯಕ್ಕೆ ಸರಿಯಾಗಿ ದೇಶಾದ್ಯಂತ ಅಯ್ಯಪ್ಪ ಭಕ್ತರು ತಮ್ಮ ದೇವಸ್ಥಾನದ ಆವರಣದಲ್ಲಿ , ಪ್ರಮುಖ ರಸ್ತೆಗಳಲ್ಲಿ ಕೋಟಿ ದೀಪ ಹಚ್ಚಲು ನಿರ್ಧರಿಸಿದ್ದರು. ಈ ಮೂಲಕ ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶವನ್ನು ಖಂಡಿಸಲು ಅಯ್ಯಪ್ಪ ಭಕ್ತರು ನಿರ್ಧರಿಸಿದ್ದರು.

    ಪಂದಳ ರಾಜನ ಈ ಆದೇಶದಂತೆ ಉಡುಪಿಯಲ್ಲೂ ಕೂಡ ಪ್ರಮುಖ ರಸ್ತೆಗಳಲ್ಲಿ ಜ್ವಾಲೆ ಪ್ರಜ್ವಲನ ಅಭಿಯಾನ ನಡೆಯಿತು. ಉಡುಪಿಯ ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದ ಆವರಣದಲ್ಲಿ ನೂರಾರು ಮಂದಿ ಅಯ್ಯಪ್ಪ ಭಕ್ತರು ಪಾಲ್ಗೊಂಡಿದ್ದರು. ಅಭಿಯಾನದಲ್ಲಿ ಮಹಿಳೆಯರು, ಯುವತಿಯರು ಜ್ವಾಲೆ ಪ್ರಜ್ವಲಿಸಿದರು.

    ಈ ಮೂಲಕ ಅಯ್ಯಪ್ಪ ದೇವಸ್ಥಾನದ ವಿಚಾರದಲ್ಲಿ ನಡೆಯುತ್ತಿರುವ ಸರ್ಕಾರ ಕೋರ್ಟ್ ಮತ್ತು ಭಕ್ತರ ತಿಕ್ಕಾಟ ಶೀಘ್ರ ಅಂತ್ಯವಾಗಲಿ ಎಂದು ಪ್ರಾರ್ಥಿಸಲಾಯಿತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅಯ್ಯಪ್ಪನ ಬಾಗಿಲು ಮಹಿಳೆಯರಿಗೆ ಮುಕ್ತ: ಸುಪ್ರೀಂ ಕೋರ್ಟ್

    ಅಯ್ಯಪ್ಪನ ಬಾಗಿಲು ಮಹಿಳೆಯರಿಗೆ ಮುಕ್ತ: ಸುಪ್ರೀಂ ಕೋರ್ಟ್

    ನವದೆಹಲಿ: ಕೇರಳದ ಶಬರಿಮಲೆಯ ಅಯ್ಯಪ್ಪನ ದೇವಸ್ಥಾನವನ್ನು ಎಲ್ಲ ವಯೋಮಿತಿಯ ಮಹಿಳೆಯರು ಪ್ರವೇಶಿಸಬಹುದು ಎಂದು ಸುಪ್ರೀಂ ಕೋರ್ಟ್ ನ ಪಂಚಪೀಠ ನಾಲ್ಕು ಒಂದರಲ್ಲಿ ಇಂದು ಮಹತ್ವದ ತೀರ್ಪನ್ನು ನೀಡಿದೆ. ಮಹಿಳೆಯರನ್ನು ಸಮಾನವಾಗಿ ನಡೆಸಿಕೊಳ್ಳಬೇಕಿದೆ. ಮಹಿಳೆಯರು ಅಬಲೆಯರಲ್ಲ. ನಮ್ಮ ದೇಶದಲ್ಲಿ ಮಹಿಳೆಯರು ದೇವರು ಅಂತಾ ಪೂಜಿಸಲಾಗುತ್ತಿದೆ ಎಂದು ಸಿಜೆಐ ದೀಪಕ್ ಮಿಶ್ರಾ ಹೇಳಿದ್ದಾರೆ. ನ್ಯಾ. ಇಂದು ಮಲ್ಹೋತ್ರಾ ಮಾತ್ರ ಭಿನ್ನ ತೀರ್ಪನ್ನು ನೀಡಿದ್ದಾರೆ.

    `ಸುಪ್ರೀಂ’ ಹೇಳಿದ್ದೇನು?
    ಶಬರಿಮಲೆ, ಮಹಿಳೆಯರ ಧಾರ್ಮಿಕ ಹಕ್ಕನ್ನು ಕಸಿದುಕೊಂಡಿದ್ದು, ಭಕ್ತಿಯನ್ನು ಲಿಂಗದ ಆಧಾರದಲ್ಲಿ ವಿವರಿಸಲು ಸಾಧ್ಯವಿಲ್ಲ. ಧಾರ್ಮಿಕ ಹಕ್ಕಿಗೂ- ದೈಹಿಕ ಸ್ಥಿತಿಗತಿಗೂ ಸಂಬಂಧವೇ ಇಲ್ಲ. ಅಯ್ಯಪ್ಪನ ಭಕ್ತರು ಅನ್ಯಧರ್ಮದವರಂತೆ ಪ್ರತ್ಯೇಕ ಸ್ಥಾನಮಾನ ಹೊಂದಿಲ್ಲ. ಒಂದೆಡೆ ಮಹಿಳೆಯರನ್ನು ದೇವರಂತೆ ಪೂಜಿಸುತ್ತೇವೆ. ಮತ್ತೊಂದೆಡೆ ನಿಷೇಧ ಹೇರಲಾಗಿದೆ. ಮಹಿಳೆ ದೇವರಿಗೆ ಸಮಾನವಾಗಿದ್ದು ಮಹಿಳೆಯರಿಗೆ ಶಬರಿಮಲೆಗೆ ಬಹಿಷ್ಕಾರ ಸರಿಯಲ್ಲ. ಮಹಿಳೆಯರ ಬಗೆಗಿನ ಇಬ್ಬಗೆ ನೀತಿಯಿಂದ ಆಕೆಯ ಸ್ಥಾನಮಾನಕ್ಕೆ ಧಕ್ಕೆಯಾಗಿದೆ.

    ನಂಬಿಕೆ ಸ್ವಾತಂತ್ರ್ಯ ಹತ್ತಿಕ್ಕಲು ದೈಹಿಕ ಕಾರಣಗಳನ್ನು ಒಪ್ಪಿಕೊಳ್ಳಲಾಗದು. ಮಹಿಳೆ ಅಬಲೆ ಎನ್ನುವುದಾದರೆ ವೃತಗಳನ್ನು ಮಾಡುತ್ತಲೇ ಇರಲಿಲ್ಲ. ಋತುಮತಿಯಾಗುವುದಕ್ಕೂ ಮಹಿಳೆಯ ಪ್ರಾಥನೆಯ ಹಕ್ಕಿಗೂ ಯಾವುದೇ ಸಂಬಂಧವಿಲ್ಲ ಅಷ್ಟೇ ಅಲ್ಲದೇ ಮಹಿಳೆಯರು ಪುರುಷರಿಗಿಂತ ಕೀಳಲ್ಲ. ಸಾಂವಿಧಾನಿಕ ನೈತಿಕತೆಯೇ ಅತ್ಯುನ್ನತ. ಅದರ ಹೊರತು ಬೇರೇನೂ ಇಲ್ಲ. ಶಬರಿಮಲೆಗೆ ಮಹಿಳೆಯರನ್ನು ನಿರ್ಬಂಧಿಸುವಂತಿಲ್ಲ. ಹೀಗಾಗಿ ಶಬರಿಮಲೆಗೆ ಆಬಾಲ-ವೃದ್ಧರಾಗಿ ಎಲ್ಲರಿಗೂ ಪ್ರವೇಶಕ್ಕೆ ಅನುಮತಿ ನೀಡಬೇಕು.

    ಈ ಹಿಂದಿನ ವಿಚಾರಣೆ ವೇಳೆ  ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಕೇರಳ ರಾಜ್ಯ ಸರ್ಕಾರ ಸಮ್ಮತಿ ಸೂಚಿಸಿದ ಬೆನ್ನಲ್ಲೇ ಮಹಿಳೆಯರ ದೇಗುಲ ಪ್ರವೇಶದ ವಿಚಾರಕ್ಕೆ ಸಂಬಂಧಪಟ್ಟಂತೆ ಕೇರಳ ಸರ್ಕಾರ ಸುಪ್ರೀಂ ಕೋರ್ಟ್ ಮುಂದೆ ತನ್ನ ಅಭಿಪ್ರಾಯ ತಿಳಿಸಿತ್ತು. ಕೇರಳ ಸರ್ಕಾರ ನಾಲ್ಕನೇ ಬಾರಿ ತನ್ನ ನಿರ್ಧಾರವನ್ನು ಬದಲಾಯಿಸಿದೆಯಲ್ಲಾ ಎಂಬ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ದೀಪಕ್ ಮಿಶ್ರಾ ಪ್ರಶ್ನೆಗೆ ಉತ್ತರಿಸಿದ ಕೇರಳ ಸರ್ಕಾರದ ಪರ ವಕೀಲರು, ಅಧಿಕಾರ ಬದಲಾದಾಗ ಸರ್ಕಾರದ ನಿರ್ಧಾರಗಳೂ ಬದಲಾಗುತ್ತವೆ ಎಂದು ಹೇಳಿದ್ದರು.

    ಶಬರಿಮಲೆ ದೇಗುಲದಲ್ಲಿ ದೇವರ ಆರಾಧನೆಗೆ ಎಲ್ಲರಿಗೂ ಸಮಾನವಾದ ಅಧಿಕಾರವಿದೆ. ಹೀಗಿದ್ದಾಗ ಯಾವ ಆಧಾರದಲ್ಲಿ ಪ್ರವೇಶ ನಿಷೇಧಿಸುತ್ತೀರಿ. ರಾಜ್ಯ ಸರ್ಕಾರದ ಈ ನಡೆ ಸಂವಿಧಾನ ವಿರೋಧಿ. ಜನ ಸಾಮಾನ್ಯರಿಗೆ ದೇಗುಲ ತೆರೆದಾಗ ಅಲ್ಲಿಗೆ ಎಲ್ಲರೂ ಹೋಗುವಂತಾಗಬೇಕು. ಇಲ್ಲಿನ ಆಡಳಿತ ವರ್ಗ ಮಹಿಳೆಯರಿಗೆ ನಿಷೇಧ ಹೇರುತ್ತಿರುವುದು ಯಾಕೆ ಎಂದು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾ. ರೋಹಿಂಟನ್ ಫಾಲಿ ನಾರಿಮನ್, ನ್ಯಾ. ಎ.ಎಂ ಖಾನ್ವಿಲ್ಕರ್, ನ್ಯಾ. ಡಿವೈ ಚಂದ್ರಚೂಡ್ ಹಾಗೂ ನ್ಯಾ. ಇಂದು ಮಲ್ಹೋತ್ರಾ ಒಳಗೊಂಡ ಸಾಂವಿಧಾನಿಕ ಪೀಠ ಪ್ರಶ್ನಿಸಿತ್ತು.

    ಪ್ರಾರ್ಥನೆ ಸಲ್ಲಿಸುವಾಗ ಪುರುಷರಿಗುವಷ್ಟೇ ಸಮಾನತೆ ಮಹಿಳೆಯರಿಗೂ ಇರುತ್ತದೆ. ಈ ಅವಕಾಶ ತಡೆಯಲು ಕಾನೂನಿನಲ್ಲಿ ಯಾವುದೇ ಅವಕಾಶವಿಲ್ಲ ಎಂದು ನ್ಯಾ. ಡಿ.ವೈ.ಚಂದ್ರಚೂಡ್ ಹೇಳಿದ್ದರು.

    ಸಾರ್ವಜನಿಕ ಸ್ವತ್ತು:
    ಮಹಿಳೆಯರ ಋತುಸ್ರಾವದ ಕಾಲಘಟ್ಟ ಎಂದು 10ರಿಂದ 50 ವರ್ಷದವರೆಗಿನ ಮಹಿಳೆಯರಿಗೆ ಪ್ರವೇಶ ನಿರ್ಬಂಧಿಸಲಾಗಿದೆ ಎಂಬ ಆಮಿಕಸ್ ಕ್ಯೂರಿ ಅಭಿಪ್ರಾಯಕ್ಕೆ ಸುಪ್ರೀಂ ಕೋರ್ಟ್, ಹೆಣ್ಣು ಮಕ್ಕಳಿಗೆ 10 ವರ್ಷಕ್ಕೂ ಮೊದಲೇ ಋತುಸ್ರಾವ ಆರಂಭವಾಗಬಹುದು. 50 ವರ್ಷದ ನಂತರವೂ ಇದು ಮುಂದುವರಿಯಬಹುದು. ದೇವಸ್ಥಾನ ಎನ್ನುವುದು ಯಾವತ್ತೂ ಖಾಸಗಿ ಸ್ವತ್ತಲ್ಲ. ಅದು ಸಾರ್ವಜನಿಕ ಆಸ್ತಿ. ಸಾರ್ವಜನಿಕ ಆಸ್ತಿಗೆ ಯಾರಿಗೆ ಯಾವಾಗ ಬೇಕಾದರೂ ಪ್ರವೇಶ ಮಾಡಬಹುದು ಎಂದು ಹೇಳಿತ್ತು.

    ನಮಗೆ ಪೂಜೆ ಮಾಡಲು ಅವಕಾಶ ಬೇಡ, ನಮಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸಿ ಎಂದು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅರ್ಜಿ ಸಲ್ಲಿಸಿದ ಹ್ಯಾಪಿ ಟು ಬ್ಲೀಡ್ ಸಂಘಟನೆ ಕೋರ್ಟ್ ಮುಂದೆ ವಾದ ಮಂಡಿಸಿತ್ತು.

    ಶಬರಿಮಲೆ ದೇಗುಲದಲ್ಲಿ ಮಹಿಳೆಯರಿಗೂ ಪ್ರಾರ್ಥನೆಗೆ ಅವಕಾಶ ನೀಡಬೇಕೆನ್ನುವುದು ಸರ್ಕಾರದ ಅಭಿಪ್ರಾಯ ಎಂದು ಕೇರಳದ ಮುಜರಾಯಿ ಸಚಿವ ಕಡಕಂಪಳ್ಳಿ ಸುರೇಂದ್ರನ್ ಹೇಳಿದ್ದರು. ಇದಕ್ಕೆ ಸಂಬಂಧಿಸಿದ ಅಫಿಡವಿಟ್ ನಾವು ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದೇವೆ. ಸುಪ್ರೀಂ ಕೋರ್ಟ್ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಬೇಕು. ನ್ಯಾಯಾಲಯದ ಆದೇಶವನ್ನು ನಾವು ಪಾಲಿಸುತ್ತೇವೆ ಎಂದು ಹೇಳಿದ್ದರು.

    ಏನಿದು ಪ್ರಕರಣ?:
    ಕೇರಳದ ಶಬರಿಮಲೆ ದೇವಾಲಯದಲ್ಲಿ 800 ವರ್ಷಗಳಿಂದ ನಡೆದು ಬಂದಿರುವ ಮಹಿಳೆಯರ ಪ್ರವೇಶ ನಿಷೇಧ ಆಚರಣೆಯನ್ನು ವಿರೋಧಿಸಿ ಇಂಡಿಯನ್ ಯಂಗ್ ಲಾಯರ್ಸ್ ಅಸೋಸಿಯೇಷನ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಶಬರಿಮಲೆ ಅಯ್ಯಪ್ಪ ದೇವಾಲಯ ಪ್ರವೇಶಕ್ಕೆ 10 ರಿಂದ 50 ವರ್ಷಗಳ ಒಳಗಿನ ಮಹಿಳೆಯರಿಗೆ ಅನುಮತಿ ನೀಡುವಂತೆ ಕೇರಳ ರಾಜ್ಯ ಸರ್ಕಾರ, ದೇವಾಲಯ ಆಡಳಿತ ಮಂಡಳಿ, ಪತ್ತನಂತಿಟ್ಟ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಅರ್ಜಿಯಲ್ಲಿ ಮನವಿ ಮಾಡಿತ್ತು.

    ಅರ್ಜಿದಾರರ ಪರ ಸಲಹೆಗಾರ ಪ್ರಕಾಶ್ ಗುಪ್ತಾ ಅವರು ನ್ಯಾಯಾಲಯಕ್ಕೆ ಮಾಹಿತಿ ನೀಡಿ, ಮಹಿಳೆಯರ ದೇವಾಲಯದ ಪ್ರವೇಶದ ಬಗ್ಗೆ ತಾರತಮ್ಯ ತೋರುವುದು ಹಿಂದೂ ಧರ್ಮದ ಭಾಗವಲ್ಲ. ಯಾವುದೇ ಮಹಿಳೆಯ ನೋಟದಿಂದ ಯಾರ ಬ್ರಹ್ಮಚರ್ಯದ ಮೇಲೂ ಪರಿಣಾಮ ಬೀರುವುದಿಲ್ಲ. ಅದ್ದರಿಂದ ಅಂತಹ ಆಚರಣೆಗಳಿಗೆ ಅರ್ಥವಿಲ್ಲ ಎಂಬ ವಾದ ಮಂಡಿಸಿದ್ದರು.

    ಸಂವಿಧಾನದ 14ನೇ ವಿಧಿ ಸಮಾನತೆಯ ಹಕ್ಕು. 15ನೇ ವಿಧಿ ಧರ್ಮ, ಜಾತಿ, ಲಿಂಗ ಅಥವಾ ಸ್ಥಳದ ಆಧಾರ ಮೇಲೆ ಅಸಮಾನತೆ ತೋರುವಂತಿಲ್ಲ. 17ನೇ ವಿಧಿ ಅಸ್ಪೃಶ್ಯತೆಯನ್ನು ಆಚರಣೆ ಮಾಡುವುದನ್ನು ನಿಷೇಧಿಸಿದೆ. ಕಳೆದ ವರ್ಷದ ಅಕ್ಟೋಬರ್ ತಿಂಗಳಿನಲ್ಲಿ ಸುಪ್ರೀಂ ಕೋರ್ಟ್ ಈ ಅರ್ಜಿಯನ್ನು ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv