ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಕ್ರಾಂತಿಯ ಹರಿಕಾರ ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿ ಡಾ.ಶರಣಬಸವಪ್ಪ ಅಪ್ಪ ಲಿಂಗೈಕ್ಯರಾಗಿದ್ದಾರೆ. ಈ ಹಿನ್ನೆಲೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಕಲಬುರಗಿಗೆ ಆಗಮಿಸಿ ಶರಣಬಸಪ್ಪ ಅಪ್ಪ ಅವರ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ.
ಸರ್ಕಾರದ ಪ್ರತಿನಿಧಿಯಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಕಲಬುರಗಿ ನಗರದ ಶರಣಬಸವೇಶ್ವರ ಸಂಸ್ಥಾನಕ್ಕೆ ಆಗಮಿಸಿದ್ದಾರೆ. ಶಿವಾನುಭವ ಮಂಟಪದಲ್ಲಿರುವ ಅಪ್ಪ ಅವರ ಪಾರ್ಥೀವ ಶರೀರಕ್ಕೆ ನಮಸ್ಕರಿಸಿ, ಅಂತಿಮ ದರ್ಶನ ಪಡೆದಿದ್ದಾರೆ. ಈ ವೇಳೆ ಸಚಿವ ಪ್ರಿಯಾಂಕ್ ಖರ್ಗೆ, ಮಾಜಿ ಸಚಿವ ಅಜಯ್ ಸಿಂಗ್ ಅವರು ಡಿಕೆಶಿಗೆ ಸಾಥ್ ನೀಡಿದ್ದಾರೆ.ಇದನ್ನೂ ಓದಿ: ಶರಣಬಸಪ್ಪ ಅಪ್ಪ ಲಿಂಗೈಕ್ಯ – ಅಂತ್ಯಕ್ರಿಯೆಗೆ 1 ಲಕ್ಷಕ್ಕೂ ಅಧಿಕ ಬಿಲ್ವಪತ್ರೆ, 5050 ವಿಭೂತಿ ಸಿದ್ಧತೆ
ಈ ವೇಳೆ ಮಾತನಾಡಿದ ಅವರು, ಅಪ್ಪ ಅವರ ಶರೀರ ಇದೀಗ ದೇವರ ಪಾದಕ್ಕೆ ಸೇರಿದೆ. ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ದೊಡ್ಡ ಸೇವೆ ಮಾಡಿದ್ದಾರೆ. ಆ ಪೈಕಿ ಶಿಕ್ಷಣದಲ್ಲಿ ಅಪ್ಪ ಅವರು ತುಂಬಾ ಪ್ರಸಿದ್ಧರಾಗಿದ್ದರು. ಎಲ್ಲಾ ಧರ್ಮದವರು ಸಹ ಅಪ್ಪ ಅವರಿಗೆ ಗೌರವ ಕೊಡುವುದು ನಾವು ಕಾಣುತ್ತಿದ್ದೇವೆ. ಅವರು ಮಾಡಿದ್ದ ಸಾಧನೆಯಲ್ಲಿ ಕಲ್ಯಾಣ ಕರ್ನಾಟಕಕ್ಕೆ ನೀಡಿದ ಕೊಡುಗೆ ಅಪಾರವಾದದ್ದು. ಅಪ್ಪ ಅವರ ಅಗಲಿಕೆಯಿಂದಾಗಿ ಅವರ ಕುಟುಂಬ, ಭಕ್ತರು ಹಾಗೂ ಸರ್ಕಾರ ನೋವಿನಲ್ಲಿದೆ ಎಂದು ಸಂತಾಪ ಸೂಚಿಸಿದ್ದಾರೆ.
– ಇಂದು ದೇವಾಲಯದ ಎದುರು ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಸಂಸ್ಕಾರ – ಶರಣಬಸಪ್ಪ ಅಪ್ಪ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಸಂತಾಪ
ಕಲಬುರಗಿ: ಕಲ್ಯಾಣ ಕರ್ನಾಟಕ (Kalyana Karnataka) ಭಾಗದ ಶೈಕ್ಷಣಿಕ ಕ್ರಾಂತಿಯ ಹರಿಕಾರ, ಶರಣರ ನಾಡು ಕಲಬುರಗಿಯ ಮಹಾದಾಸೋಹಿ, ಕಲಬುರಗಿ (Kalaburagi) ಜನರ ಆರಾಧ್ಯ ದೈವ ಶ್ರೀ ಶರಣಬಸಪ್ಪ ಅಪ್ಪ ಲಿಂಗೈಕ್ಯರಾಗಿದ್ದಾರೆ. ತಮ್ಮ ಕೊನೆಯಾಸೆಯಂತೆ ಶರಣಬಸವೇಶ್ವರರ ದರ್ಶನ ಪಡೆದು ಕೊನೆಯುಸಿರೆಳೆದಿದ್ದಾರೆ.
90 ವರ್ಷದ ಶರಣಬಸಪ್ಪ ಅಪ್ಪ ಅವರು ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಕಲಬುರಗಿಯ ಶ್ರೀ ಶರಣಬಸವೇಶ್ವರ ಮಹಾಸಂಸ್ಥಾನ ಪೀಠದ 8ನೇ ಪೀಠಾಧಿಪತಿ ಶರಣಬಸಪ್ಪ ಅಪ್ಪ ಕಳೆದ ತಿಂಗಳು ಜು.26 ರಂದು ವಯೋಸಹಜ ಕಾಯಿಲೆ ಮತ್ತು ನ್ಯುಮೋನಿಯಾ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು.ಇದನ್ನೂ ಓದಿ: 79th Independence Day: ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ
ಆಸ್ಪತ್ರೆಯಲ್ಲಿ ಕೃತಕ ಉಸಿರಾಟ ಮೂಲಕ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಗುರುವಾರ (ಆ.14) ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸಿತ್ತು. ಹೀಗಾಗಿ ಅವರನ್ನು ಮಠಕ್ಕೆ ಸ್ಥಳಾಂತರಿಸಲು ಕುಟುಂಬಸ್ಥರು ನಿರ್ಧರಿಸಿದ್ದರು. ಗೃಹ ಆರೈಕೆಗೆ ಕುಟುಂಬಸ್ಥರು ನಿರ್ಧರಿಸಿದ್ದರು. ರಾತ್ರಿ ಕಲಬುರಗಿಯ ಖಾಸಗಿ ಆಸ್ಪತ್ರೆಯಿಂದ ಶರಣಬಸಪ್ಪ ಅಪ್ಪ ಅವರನ್ನು ಮಠಕ್ಕೆ ಶಿಫ್ಟ್ ಮಾಡಲಾಗಿತ್ತು. ಜೊತೆಗೆ ಶರಣಬಸಪ್ಪ ಅಪ್ಪ ಅವರ ಅಂತಿಮ ಆಸೆ ಕೂಡ ಮಠಕ್ಕೆ ಹೋಗಬೇಕೆನ್ನುವುದಿತ್ತು. ತಮ್ಮ ಅಂತಿಮ ಇಚ್ಛೆಯಂತೆ, ಅಪ್ಪಾಜಿಯವರನ್ನು ಶರಣಬಸವೇಶ್ವರ ದೇವಾಲಯಕ್ಕೆ ಆರೋಗ್ಯಕರ ಉಸಿರಾಟದ ಸ್ಥಿತಿಯಲ್ಲಿ ಕೊಂಡೊಯ್ಯಲಾಯಿತು. ಅಲ್ಲಿ ಅಪ್ಪಾಜಿಯವರು ಗರ್ಭಗುಡಿಗೆ ಪ್ರವೇಶಿಸಿ ಶ್ರೀ ಶರಣಬಸವೇಶ್ವರರ ದರ್ಶನ ಪಡೆದರು. ಅದೇ ವೇಳೆ ಆರತಿ ಕೂಡ ನಡೆಯಿತು. ನಂತರ ವೈದ್ಯಕೀಯ ಮೇಲ್ವಿಚಾರಣೆಯ ವಾಹನದಲ್ಲಿ ದೇವಸ್ಥಾನಕ್ಕೆ ಪ್ರದಕ್ಷಿಣೆ ಮಾಡಲಾಯಿತು.
ಸಂಜೆ ಸುಮಾರು 7:30ಕ್ಕೆ ಅಪ್ಪಾಜಿಯವರನ್ನು ದಾಸೋಹಕ್ಕೆ ಕರೆದೊಯ್ಯಲಾಯಿತು. ಅಲ್ಲಿ ತಾತ್ಕಾಲಿಕ ಐಸಿಯು ಸಿದ್ಧಪಡಿಸಲಾಗಿತ್ತು. ಅಂತಿಮ ಉಸಿರಿನವರೆಗೂ ಸಮರ್ಪಿತ ವೈದ್ಯಕೀಯ ತಂಡದ ಕಾಳಜಿಯಲ್ಲಿ ಎಲ್ಲಾ ಚಿಕಿತ್ಸಾ ಮತ್ತು ಸಹಾಯಕ ಔಷಧೋಪಚಾರಗಳನ್ನು ಮುಂದುವರೆಸಲಾಯಿತು. ರಾತ್ರಿ 9:23ಕ್ಕೆ ಮಹಾಸಂಸ್ಥಾನ ಮಠದಲ್ಲಿ ಶ್ರಾವಣ ಮಾಸದಲ್ಲಿಯೇ ಅಂತಿಮ ಉಸಿರೆಳೆದರು.
ಕಲಬುರಗಿಯ ಶರಣಬಸವೇಶ್ವರ ಸಂಸ್ಥಾನ 200 ವರ್ಷಗಳಿಗೂ ಹೆಚ್ಚಿನ ಶ್ರೀಮಂತ ಇತಿಹಾಸ ಹೊಂದಿರುವ ಧಾರ್ಮಿಕ ಮತ್ತು ಸಾಮಾಜಿಕ ಸಂಸ್ಥೆಯಾಗಿದೆ. ಇದನ್ನು 18ನೇ ಶತಮಾನದ ಸಂತ ಶ್ರೀ ಶರಣಬಸವೇಶ್ವರರು ಸ್ಥಾಪಿಸಿದರು. ಇದು ಈ ಪ್ರದೇಶದ ಸಾಮಾಜಿಕ, ಧಾರ್ಮಿಕ, ಆಧ್ಯಾತ್ಮಿಕ ಮತ್ತು ಶೈಕ್ಷಣಿಕ ಉನ್ನತಿಗೆ ನೀಡಿದ ಕೊಡುಗೆಗಳಿಗೆ ಹೆಸರುವಾಸಿಯಾಗಿದೆ. ಪೂಜ್ಯ ದೊಡ್ಡಪ್ಪ ಅಪ್ಪ ಹಾಗೂ ಮಾತೋಶ್ರೀ ಗೋದುತಾಯಿಯವ್ರಿಗೆ 1935ರಲ್ಲಿ ಜನಿಸಿದ ಶರಣಬಸಪ್ಪ ಅಪ್ಪ ಅವರು ತಮ್ಮ ತಂದೆ ದೊಡ್ಡಪ್ಪ ಅಪ್ಪಾರನ್ನೇ ಮಾದರಿಯಾಗಿಸಿಕೊಂಡಿದ್ದರು. ಆಧ್ಯಾತ್ಮ, ಧರ್ಮಚಿಂತನೆ, ತತ್ವಜ್ಞಾನದತ್ತ ಹೆಚ್ಚಿನ ಆಸಕ್ತಿ ಹೊಂದಿದ್ದರು. ಶಿಕ್ಷಣವನ್ನೇ ಉಸಿರಾಗಿಸಿಕೊಂಡಿದ್ದ ಡಾ.ಶರಣಬಸಪ್ಪ ಅಪ್ಪ, ಅನ್ನ ದಾಸೋಹ ಜೊತೆಗೆ ಶಿಕ್ಷಣ ದಾಸೋಹ ನೀಡಿದ್ದರು. ಕಲ್ಯಾಣ ನಾಡಿನಲ್ಲಿ ಶಿಕ್ಷಣ ಕ್ರಾಂತಿಗೈದ ಕೀರ್ತಿ ಅಪ್ಪಾರಿಗೆ ಸಲ್ಲುತ್ತದೆ. 1973 ರಿಂದ 2017ರವರೆಗೆ ಬರೋಬ್ಬರಿ 60ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳ ಪ್ರಾರಂಭಿಸಿದ್ದರು.
ಇನ್ನೂ ಶರಣಬಸಪ್ಪ ಅಪ್ಪ ಅವರ ನಿಧನ ವಿಚಾರ ತಿಳಿಯುತ್ತಿದ್ದಂತೆ ಇಲ್ಲಿನ ಭಕ್ತರು ಮಠಕ್ಕೆ ದೌಡಾಯಿಸಿ ಕಂಬನಿ ಮಿಡಿದಿದ್ದಾರೆ. ಇನ್ನು ಸಿಎಂ ಸಿದ್ದರಾಮುಯ್ಯ ಸೇರಿ ಅನೇಕ ಗಣ್ಯರು ಅಪ್ಪ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಶುಕ್ರವಾರ (ಆ.15) ಮಧ್ಯಾಹ್ನ 2 ಗಂಟೆವರೆಗೆ ದೇವಸ್ಥಾನದ ಆವರಣದಲ್ಲಿಯೇ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಸಾಯಂಕಾಲ 5 ಗಂಟೆಗೆ ದೇವಸ್ಥಾನದ ಮುಂಭಾಗದಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಶರಣಬಸವಪ್ಪ ಅಪ್ಪ ಅವರ ಕುಟುಂಬಸ್ಥರು ತಿಳಿಸಿದ್ದಾರೆ. ರಾಜ್ಯೋತ್ಸವ ಪ್ರಶಸ್ತಿ ಸೇರಿ 7ಕ್ಕೂ ಹೆಚ್ಚು ಪ್ರಶಸ್ತಿ, ಡಾಕ್ಟರೇಟ್ ಗೌರವಕ್ಕೆ ಅಪ್ಪ ಪಾತ್ರರಾಗಿದ್ದಾರೆ. ಶರಣರ ನಾಡಿನ ಮಹಾದಾಸೋಹಿ, ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಕ್ರಾಂತಿಯ ಹರಿಕಾರ ಶರಣಬಸಪ್ಪ ಅಪ್ಪ ಅವರ ಅಗಲಿಕೆ ಈ ಭಾಗಕ್ಕೆ ತುಂಬಲಾರದ ನಷ್ಟವಾಗಿದೆ.ಇದನ್ನೂ ಓದಿ: ಸರ್ವಸಮರ್ಪಣೋತ್ಸವದೊಂದಿಗೆ ರಾಯರ 354 ನೇ ಆರಾಧನಾ ಮಹೋತ್ಸವಕ್ಕೆ ತೆರೆ
ಕಲಬುರಗಿ: ಗಂಡು ಮಗುವಿನ ತಂದೆಯಾದ ಬಳಿಕ ಇದೇ ಮೊದಲ ಬಾರಿಗೆ ಶರಣಬಸಪ್ಪ ಅಪ್ಪಾ ದಂಪತಿ ಕಲಬುರಗಿಗೆ ಆಗಮಿಸಿದ್ದಾರೆ.
ಸಂಪ್ರಾದಾಯಿಕ ಸ್ವಾಗತ, ಕುಂಭಮೇಳ, ಆರತಿ, ಡೊಳ್ಳು, ಭಜನೆ ಮೂಲಕ ಅಪ್ಪಾ ದಂಪತಿಗೆ ಭರ್ಜರಿ ಸ್ವಾಗತ ಮಾಡಲಾಯ್ತು. ಇದೆ ಸಂದರ್ಭದಲ್ಲಿ ಲಕ್ಷ ದೀಪೋತ್ಸವಕ್ಕೆ ಡಾ ಶರಣಬಸಪ್ಪ ಅಪ್ಪಾ ಚಾಲನೆ ನೀಡಿದ್ದಾರೆ. ದೇವಸ್ಥಾನದತ್ತ ಅಪಾರ ಭಕ್ತರು ದರ್ಶನಕ್ಕಾಗಿ ಹರಿದು ಬಂದಿದ್ದಾರೆ.
ಜಿಲ್ಲೆಯ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿ ಡಾ. ಶ್ರೀ ಶರಣಬಸಪ್ಪ ಅಪ್ಪಾ ಅವರು ತಮ್ಮ 82ನೇ ವಯಸ್ಸಿನಲ್ಲಿ ಗಂಡು ಮಗುವಿಗೆ ತಂದೆಯಾಗಿದ್ದಾರೆ. ಶ್ರೀ ಶರಣಬಸಪ್ಪ ಅವರ ಪತ್ನಿ 40 ವರ್ಷದ ದಾಕ್ಷಾಯಿಣಿ ಅವರು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಶ್ರೀಗಳು ತಮ್ಮ 82ನೇ ವಯಸ್ಸಿಯಲ್ಲಿ ತಂದೆಯಾಗಿದ್ದಕ್ಕೆ ಶರಣಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಭಕ್ತರು ಸಡಗರದಿಂದ ಪಟಾಕಿ ಸಿಡಿಸಿ ತಮ್ಮ ಸಂಭ್ರಮವನ್ನು ವ್ಯಕ್ತಪಡಿಸಿದ್ದರು.
ಡಾ. ಶರಣಬಸಪ್ಪ ಅಪ್ಪಾ ಅವರು 1935ರ ನವೆಂಬರ್ 14 ರಂದು ಜನಿಸಿದ್ದರು. ಶ್ರೀಗಳಿಗೆ ಎರಡು ಮದುವೆಯಾಗಿದ್ದು, ಮೊದಲನೇ ಪತ್ನಿ ಕೋಮಲಾತಾಯಿ ಐದು ಪುತ್ರಿಯರಿಗೆ ಜನ್ಮ ನೀಡಿದ್ದರು. ಮೊದಲ ಪತ್ನಿಯ ಐದು ಪುತ್ರಿಯರಿಗೂ ಮದುವೆಯಾಗಿದೆ. ಮೊದಲ ಪತ್ನಿ ಕೋಮಲಾತಾಯಿ ಹಲವು ವರ್ಷಗಳ ಹಿಂದೆಯೇ ಅನಾರೋಗ್ಯದಿಂದ ಮೃತಪಟ್ಟಿದ್ದರು.
ಮೊದಲ ಪತ್ನಿ ಮೃತಪಟ್ಟ ಬಳಿಕ ದಾಕ್ಷಾಯಿಣಿ ಅವರನ್ನು ಶರಣಬಸಪ್ಪ ಅಪ್ಪಾ ಅವರು ಮದುವೆಯಾಗಿದ್ದರು. ಎರಡನೇ ಪತ್ನಿಗೆ ಈಗಾಗಲೇ ಮೂರು ಹೆಣ್ಣು ಮಕ್ಕಳು ಜನಿಸಿದ್ದು, ಇದೀಗ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.