Tag: ಶರಣಬಸಪ್ಪ ದರ್ಶನಾಪುರ

  • ಬಿಎಸ್‍ವೈಗೆ ಆಡಳಿತ ನಡೆಸಲು ಆಗುತ್ತಿಲ್ಲ,ಅವರ ಪುತ್ರ ಆಡಳಿತ ನಡೆಸುತ್ತಿದ್ದಾರೆ: ಶಾಸಕ ಶರಣಬಸಪ್ಪ ದರ್ಶನಾಪುರ

    ಬಿಎಸ್‍ವೈಗೆ ಆಡಳಿತ ನಡೆಸಲು ಆಗುತ್ತಿಲ್ಲ,ಅವರ ಪುತ್ರ ಆಡಳಿತ ನಡೆಸುತ್ತಿದ್ದಾರೆ: ಶಾಸಕ ಶರಣಬಸಪ್ಪ ದರ್ಶನಾಪುರ

    ಯಾದಗಿರಿ: ರಾಜ್ಯದಲ್ಲಿ ಸಿಎಂ ಆಗಿ ಬಿಎಸ್‍ವೈ ಅವರಿಗೆ ಆಡಳಿತ ನಡೆಸಲು ಆಗುತ್ತಿಲ್ಲ, ಅವರ ಬದಲಾಗಿ ಸಿಎಂ ಪುತ್ರ ಆಡಳಿತ ನಡೆಸುತ್ತಿದ್ದಾರೆ ಎಂದು ಆಡಳಿತ ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕ ಶರಣಬಸಪ್ಪ ದರ್ಶನಾಪುರ ಕಿಡಿಕಾರಿದ್ದಾರೆ.

    ಯಾದಗಿರಿ ಜಿಲ್ಲೆಯ ಶಹಾಪೂರ ತಾಲೂಕಿನ ದೋರನಹಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಬಿಎಸ್‍ವೈ ಅವರಿಂದ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಆಗುತ್ತಿಲ್ಲ,ಹೀಗಾಗಿ ರಾಜ್ಯದಲ್ಲಿ ಸಿಎಂ ಬದಲಾವಣೆ ಆದರೆ ರಾಜ್ಯಕ್ಕೆ ಉತ್ತಮವಾಗಿದೆ. ಬಿಜೆಪಿ ಪಕ್ಷ ಯಾರನ್ನು ಸಿಎಂ ಮಾಡುತ್ತಾರೆ? ಬಿಜೆಪಿ ಪಕ್ಷಕ್ಕೆ ಬಿಟ್ಟ ವಿಚಾರ ಸಿಗುತ್ತಿದೆ ಎಂದು ವ್ಯಂಗ್ಯ ಮಾಡಿದ್ದಾರೆ. ಇದನ್ನೂ ಓದಿ:  ಪೆಟ್ರೋಲ್, ಡಿಸೇಲ್ ಜಿಎಸ್ಟಿಗೆ ಸೇರಿಸಬೇಡಿ: ಕುಮಾರಸ್ವಾಮಿ

    ಇಂಧನ ಬೆಲೆ ಜಾಸ್ತಿ ಆದಂತೆ ಎಲ್ಲಾ ಸರಕು ಮತ್ತು ಸೇವೆಗಳ ಬೆಲೆ ಜಾಸ್ತಿಯಾಗುತ್ತದೆ. ಹೀಗಾಗಿ ಜಿಎಸ್ಟಿ ವ್ಯಾಪ್ತಿಗೆ ಪೆಟ್ರೋಲ್ ತರಬೇಕು ಎಂದು  ಆಗ್ರಹಿಸಿದರು.

  • ಕೊರೊನಾ ನಿಯಮ ಉಲ್ಲಂಫಿಸಿದ ಶಾಸಕ ಶರಣಬಸಪ್ಪ ದರ್ಶನಾಪುರ

    ಕೊರೊನಾ ನಿಯಮ ಉಲ್ಲಂಫಿಸಿದ ಶಾಸಕ ಶರಣಬಸಪ್ಪ ದರ್ಶನಾಪುರ

    ಯಾದಗಿರಿ: ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿ ತಾಂಡವಾಡುತ್ತಿದೆ. ಈಗಾಗಲೇ ಕೊರೊನಾ ಪಾಸಿಟಿವ್ ಸಂಖ್ಯೆ 5000 ತಲುಪುತ್ತಿದೆ. ಇಂತಹ ಸಮಯದಲ್ಲಿ ಜನರಿಗೆ ಕೊರೊನಾ ಬಗ್ಗೆ ಜಾಗೃತಿ ಮೂಡಸಬೇಕಾದ ಜನಪ್ರತಿನಿಧಿಗಳೇ, ಕೊರೊನಾ ನೀತಿ-ನಿಯಮಗಳನ್ನು ಗಾಳಿಗೆ ತೂರುತ್ತಿದ್ದು, ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

    ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಗನೂರ ಗ್ರಾಮದಲ್ಲಿ ಇಂದು ನಡೆದ ನ್ಯಾಷನಲ್ ಹೈವೆ ಗುದ್ದಲಿ ಪೂಜೆಯಲ್ಲಿ ಶಹಪುರದ ಕಾಂಗ್ರೆಸ್ ಶಾಸಕ ಶರಣಬಸಪ್ಪ ದರ್ಶನಾಪುರರಿಂದ ಕೊರೊನಾ ಪ್ರೋಟೋಕಾಲ್ ಉಲ್ಲಂಘನೆಯಾಗಿದೆ. ಇದು ಜಿಲ್ಲೆಯ ಪ್ರಜ್ಞಾವಂತ ನಾಗರಿಕ ಅಸಮಾಧಾನಕ್ಕೆ ಕಾರಣವಾಗಿದೆ. ಸ್ವತಃ ಶಾಸಕ ಮತ್ತು ಅವರ ಬೆಂಬಲಿಗರಿಂದ ಕೊರೊನಾ ನಿಯಮ ಉಲ್ಲಂಘನೆ ಆರೋಪ ಕೇಳಿ ಬಂದಿದ್ದು, ಜಿಲ್ಲೆಯಲ್ಲಿ ರಾಜಕೀಯ ನಾಯಕರಿಗೆ ಒಂದು ನ್ಯಾಯ, ಜನಸಾಮಾನ್ಯರಿಗೆ ಒಂದು ನ್ಯಾಯ ಅಂತ ಜನ ಪ್ರಶ್ನೆ ಮಾಡುತ್ತಿದ್ದಾರೆ.

    ಗುದ್ದಲಿ ಪೂಜೆ ವೇಳೆಯಲ್ಲಿ ಸಂಪೂರ್ಣವಾಗಿ ಸಾಮಾಜಿಕ ಅಂತರ ಮರೆತು ಜೊತೆಗೆ ಮಾಸ್ಕ್ ಇಲ್ಲದೆ ಪೂಜೆಯಲ್ಲಿ ಗುಂಪು ಗುಂಪಾಗಿ ಜನರ ಜೊತೆ ಶಾಸಕರು ಭಾಗಿಯಾಗಿರುವುದಕ್ಕೆ ಕ್ರಮ ಕೈಗೊಳ್ಳಲು ಬೇಕೆಂದು ಜನ ಆಗ್ರಹಿಸಿದ್ದಾರೆ.