Tag: ಶರಣಬಸವಪ್ಪ ಅಪ್ಪ

  • ಶರಣಬಸಪ್ಪ ಅಪ್ಪ ಲಿಂಗೈಕ್ಯ – ಪತ್ರದ ಮೂಲಕ ಪ್ರಧಾನಿ ಮೋದಿ ಸಂತಾಪ

    ಶರಣಬಸಪ್ಪ ಅಪ್ಪ ಲಿಂಗೈಕ್ಯ – ಪತ್ರದ ಮೂಲಕ ಪ್ರಧಾನಿ ಮೋದಿ ಸಂತಾಪ

    ನವದೆಹಲಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಕ್ರಾಂತಿಯ ಹರಿಕಾರ ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿ ಡಾ.ಶರಣಬಸವಪ್ಪ ಅಪ್ಪ (Sharanabasappa appa) ಲಿಂಗೈಕ್ಯರಾದ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ (PM Modi) ಪತ್ರದ ಮೂಲಕ ಸಂತಾಪ ಸೂಚಿಸಿದ್ದಾರೆ.

    ಡಾ.ಶರಣಬಸಪ್ಪ ಅಪ್ಪ ಅವರನ್ನು ಕಳೆದುಕೊಂಡ ಅವರ ಕುಟುಂಬಕ್ಕೆ ಹಾಗೂ ದಾಕ್ಷಾಯಿಣಿ ಅಮ್ಮನವರಿಗೆ ದೇವರು ದು:ಖ ಸಹಿಸುವ ಶಕ್ತಿಯನ್ನು ನೀಡಲಿ. ಅಪ್ಪ ಅವರನ್ನು ಕಳೆದುಕೊಂಡಿದ್ದು ಅವರ ಕುಟುಂಬಕ್ಕೆ ಅಷ್ಟೇ ಅಲ್ಲದೆ ಭಕ್ತಗಣಕ್ಕೂ ನಷ್ಟ ಉಂಟಾಗಿದೆ. ಶರಣಬಸಪ್ಪ ಅವರ ಸಮಾಜ ಸೇವೆ, ಭಕ್ತರಿಗಾಗಿ ಅವರ ತ್ಯಾಗ, ಧಾರ್ಮಿಕ ಕ್ರಿಯೆ ಎಂದು ಮರೆಯಲಾಗದು. ಅದಲ್ಲದೇ ಅವರು ಶೈಕ್ಷಣಿಕ ಕ್ಷೇತ್ರದಲ್ಲಿ ಅಪಾರ ಕೊಡುಗೆ ನೀಡಿದ್ದಾರೆ ಎಂದು ಬರೆದುಕೊಂಡಿದ್ದಾರೆ.ಇದನ್ನೂ ಓದಿ: ಕಾಫಿನಾಡ ಮಲೆನಾಡು ಭಾಗದಲ್ಲಿ ಭಾರೀ ಮಳೆ – ಸೋಮವಾರ ಶಾಲೆಗಳಿಗೆ ರಜೆ ಘೋಷಣೆ

    90 ವರ್ಷದ ಶರಣಬಸಪ್ಪ ಅಪ್ಪ ಅವರು ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಕಲಬುರಗಿಯ ಶ್ರೀ ಶರಣಬಸವೇಶ್ವರ ಮಹಾಸಂಸ್ಥಾನ ಪೀಠದ 8ನೇ ಪೀಠಾಧಿಪತಿ ಶರಣಬಸಪ್ಪ ಅಪ್ಪ ಕಳೆದ ತಿಂಗಳು ಜು.26 ರಂದು ವಯೋಸಹಜ ಕಾಯಿಲೆ ಮತ್ತು ನ್ಯುಮೋನಿಯಾ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು.

    ಆಸ್ಪತ್ರೆಯಲ್ಲಿ ಕೃತಕ ಉಸಿರಾಟ ಮೂಲಕ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಗುರುವಾರ (ಆ.14) ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸಿತ್ತು. ಹೀಗಾಗಿ ಅವರನ್ನು ಮಠಕ್ಕೆ ಸ್ಥಳಾಂತರಿಸಲು ಕುಟುಂಬಸ್ಥರು ನಿರ್ಧರಿಸಿದ್ದರು. ಗೃಹ ಆರೈಕೆಗೆ ಕುಟುಂಬಸ್ಥರು ನಿರ್ಧರಿಸಿದ್ದರು. ರಾತ್ರಿ ಕಲಬುರಗಿಯ ಖಾಸಗಿ ಆಸ್ಪತ್ರೆಯಿಂದ ಶರಣಬಸಪ್ಪ ಅಪ್ಪ ಅವರನ್ನು ಮಠಕ್ಕೆ ಶಿಫ್ಟ್ ಮಾಡಲಾಗಿತ್ತು. ಜೊತೆಗೆ ಶರಣಬಸಪ್ಪ ಅಪ್ಪ ಅವರ ಅಂತಿಮ ಆಸೆ ಕೂಡ ಮಠಕ್ಕೆ ಹೋಗಬೇಕೆನ್ನುವುದಿತ್ತು. ತಮ್ಮ ಅಂತಿಮ ಇಚ್ಛೆಯಂತೆ, ಅಪ್ಪಾಜಿಯವರನ್ನು ಶರಣಬಸವೇಶ್ವರ ದೇವಾಲಯಕ್ಕೆ ಆರೋಗ್ಯಕರ ಉಸಿರಾಟದ ಸ್ಥಿತಿಯಲ್ಲಿ ಕೊಂಡೊಯ್ಯಲಾಗಿತ್ತು. ಅಲ್ಲಿ ಅಪ್ಪಾಜಿಯವರು ಗರ್ಭಗುಡಿಗೆ ಪ್ರವೇಶಿಸಿ ಶ್ರೀ ಶರಣಬಸವೇಶ್ವರರ ದರ್ಶನ ಪಡೆದರು. ಅದೇ ವೇಳೆ ಆರತಿ ಕೂಡ ನಡೆಯಿತು. ನಂತರ ವೈದ್ಯಕೀಯ ಮೇಲ್ವಿಚಾರಣೆಯ ವಾಹನದಲ್ಲಿ ದೇವಸ್ಥಾನಕ್ಕೆ ಪ್ರದಕ್ಷಿಣೆ ಮಾಡಿಸಲಾಗಿತ್ತು.

    ಸಂಜೆ ಸುಮಾರು 7:30ಕ್ಕೆ ಅಪ್ಪಾಜಿಯವರನ್ನು ದಾಸೋಹಕ್ಕೆ ಕರೆದೊಯ್ಯಲಾಯಿತು. ಅಲ್ಲಿ ತಾತ್ಕಾಲಿಕ ಐಸಿಯು ಸಿದ್ಧಪಡಿಸಲಾಗಿತ್ತು. ಅಂತಿಮ ಉಸಿರಿನವರೆಗೂ ಸಮರ್ಪಿತ ವೈದ್ಯಕೀಯ ತಂಡದ ಕಾಳಜಿಯಲ್ಲಿ ಎಲ್ಲಾ ಚಿಕಿತ್ಸಾ ಮತ್ತು ಸಹಾಯಕ ಔಷಧೋಪಚಾರಗಳನ್ನು ಮುಂದುವರೆಸಲಾಯಿತು. ರಾತ್ರಿ 9:23ಕ್ಕೆ ಮಹಾಸಂಸ್ಥಾನ ಮಠದಲ್ಲಿ ಶ್ರಾವಣ ಮಾಸದಲ್ಲಿಯೇ ಕೊನೆಯುಸಿರೆಳೆದರು.ಇದನ್ನೂ ಓದಿ: ನಗರಸಭೆಗೆ ಸಂಬಂಧಿಸಿದ ಬೋರ್‌ವೆಲ್ ಬಳಿ ಭೂಕುಸಿತ; ಸ್ಥಳಿಯರಲ್ಲಿ ಹೆಚ್ಚಿದ ಆತಂಕ

  • ಲಿಂಗೈಕ್ಯರಾದ ಶರಣಬಸಪ್ಪ ಅಪ್ಪ ಅಂತಿಮ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ

    ಲಿಂಗೈಕ್ಯರಾದ ಶರಣಬಸಪ್ಪ ಅಪ್ಪ ಅಂತಿಮ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ

    – ಶರಣಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ

    ಕಲಬುರಗಿ: ಪರಮ ಪೂಜ್ಯ ಡಾ. ಶರಣಬಸಪ್ಪ ಅಪ್ಪ (Sharnbaswappa Appa) ಅವರು ಗುರುವಾರ ರಾತ್ರಿ ಲಿಂಗೈಕ್ಯರಾದರು. ಶರಣಬಸವೇಶ್ವರ ಮಹಾಮನೆಯ ಮುಂಭಾಗ ಅಪ್ಪಾಜೀ ಪಾರ್ಥಿವ ಶರೀರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಅಪಾರ ಸಂಖ್ಯೆಯಲ್ಲಿ ಭಕ್ತರು ಬರುತ್ತಿದ್ದಾರೆ.

    ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು ಸೇರಿದಂತೆ ಕಲ್ಯಾಣ ಕರ್ನಾಟಕದ ಕುಗ್ರಾಮಗಳಿಂದ ಭಕ್ತ ಸಾಗರವೇ ದೇವಸ್ಥಾನಕ್ಕೆ ಹರಿದು ಬರುತ್ತಿದೆ. ಇದನ್ನೂ ಓದಿ: ಅಂತಿಮ ಇಚ್ಛೆಯಂತೆ ಶರಣಬಸವೇಶ್ವರರ ದರ್ಶನ ಪಡೆದು ಕೊನೆಯುಸಿರೆಳೆದ ಮಹಾದಾಸೋಹಿ

    ಸರತಿ ಸಾಲಿನಲ್ಲಿ ನಿಂತು ಲಕ್ಷಾಂತರ ಭಕ್ತರು ಅಪ್ಪಾಜಿಯ ದರ್ಶನ ಪಡೆದು ಕಣ್ಣೀರು ಹಾಕುತ್ತಿದ್ದಾರೆ. ‘ದಾಸೋಹ, ಶಿಕ್ಷಣ ಕ್ರಾಂತಿ ಮಾಡಿದ ಅಪ್ಪ ಅವರನ್ನು ಕಳೆದುಕೊಂಡು ನಾವು ಬಡವಾಗಿದ್ದೇವೆ. ಇಂತಹ ದೇವರನ್ನು ಕಳೆದುಕೊಂಡಿದ್ದು ನಮಗೆ ಬಹಳ ದುಃಖ ತರಿಸಿದೆ’ ನೊಂದು ಮಾತನಾಡಿದ್ದಾರೆ.

    ಇತ್ತ ಶರಣಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಅಂತಿಮ ವಿಧಿವಿಧಾನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪೂಜ್ಯ ಅಪ್ಪ ಅವರ ಸಮಾಧಿ ಬಳಿ ಇಂದು 5 ಗಂಟೆಗೆ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದು, ಪಂಚ ಪೀಠ ಮತ್ತು ಬಸವಾದಿ ಶರಣರ ತತ್ವದ ಪ್ರಕಾರ ಅಂತ್ಯಕ್ರಿಯೆ ಮಾಡಲಾಗುತ್ತಿದೆ. ಅಂತ್ಯಕ್ರಿಯೆ ಸಮಾಧಿಯನ್ನು ಉದ್ದ 16 ಪಾದ, ಅಂಗುಲ 9 ಪಾದ, ಮೂಲ 3 ಪಾದ ಅಂಗುಲ ಕ್ರಿಯಾ ಸಮಾದಿ ನಿರ್ಮಾಣ ಮಾಡಲಾಗಿದೆ. ಪೂಜ್ಯ ಅಪ್ಪಾಜಿ ಅವರ ಅಂತ್ಯಕ್ರಿಯೆಗೆ 1 ಲಕ್ಷಕ್ಕೂ ಅಧಿಕ ಬಿಲ್ವ ಪತ್ರೆ, 5050 ವಿಭೂತಿ ಬಳಕೆ ಮಾಡಲಾಗುವುದು. ಅಂತಿಮ ನಮನ ಸಲ್ಲಿಸಲು ಕಲ್ಯಾಣ ಕರ್ನಾಟಕ ಭಾಗದ ಪ್ರಮುಖ ಮಠಾಧೀಶರು ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಕಲಬುರಗಿಯ ಮಹಾ ದಾಸೋಹಿ ಶರಣಬಸಪ್ಪ ಅಪ್ಪ ಲಿಂಗೈಕ್ಯ