Tag: ಶರಣು ಸಲಗಾರ

  • ಶಾಸಕ ಶರಣು ಸಲಗಾರ ಭರ್ಜರಿ ಡ್ಯಾನ್ಸ್- ವೀಡಿಯೋ ವೈರಲ್

    ಶಾಸಕ ಶರಣು ಸಲಗಾರ ಭರ್ಜರಿ ಡ್ಯಾನ್ಸ್- ವೀಡಿಯೋ ವೈರಲ್

    ಬೀದರ್: ಡ್ಯಾನ್ಸ್ ಕ್ಲಾಸ್ ಉದ್ಘಾಟನೆ ವೇಳೆ ನೃತ್ಯಗಾರರ ಜೊತೆ ಸೇರಿ ಬಸವಕಲ್ಯಾಣ ಶಾಸಕ ಶರಣು ಸಲಗಾರ ಭರ್ಜರಿ ಟಪ್ಪಾಂಗುಚ್ಚಿ ಡ್ಯಾನ್ಸ್ ಮಾಡಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

    ಶುಕ್ರವಾರದಂದು ನಗರದ ಬಸವಕಲ್ಯಾಣ ಪಟ್ಟಣದಲ್ಲಿ ನೂತನವಾಗಿ ಉದ್ಘಾಟನೆಯಾದ ಡ್ಯಾನ್ಸ್ ಕ್ರೇಜಿ ಅಕಾಡೆಮಿ ಉದ್ಘಾಟನೆಯಲ್ಲಿ ಡಾನ್ಸ್ ಮಾಡಿದ ಅವರು ಎಲ್ಲರ ಗಮನ ಸೆಳೆದಿದ್ದಾರೆ. ಇದನ್ನೂ ಓದಿ: ಕೊರೊನಾ ತನಗೆ ಬರಬಾರದೆಂದು ಸೋಂಕಿತ ಮಗನನ್ನೇ ಕಾರ್‌ನ ಟ್ರಂಕ್‌ನಲ್ಲಿ ಬಂಧಿಸಿದ್ದ ತಾಯಿ ಅರೆಸ್ಟ್

    ಒಂದು ಕಾಲದಲ್ಲಿ ಜೆಡಿಎಸ್ ಭದ್ರಕೋಟೆಯಾದ ಬಸವಕಲ್ಯಾಣದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‍ನ ನಾರಾಯಣ ರಾವ್ ಗೆಲುವು ಸಾಧಿಸಿದ್ದರು. ಕ್ಷೇತ್ರದಲ್ಲಿ ಉತ್ತಮ ಹೆಸರನ್ನು ಗಳಿಸಿದ್ದ ನಾರಾಯಣ ರಾವ್ ಕೋವಿಡ್ ಸೋಂಕಿಗೆ ತುತ್ತಾಗಿ ಮೃತಪಟ್ಟರು. ಈ ಹಿನ್ನಲೆಯಲ್ಲಿ ನಡೆದ ಉಪಚುನಾವಣೆಯಲ್ಲಿ ಅವರ ಪತ್ನಿ ಮಾಲಾ ಅವರ ವಿರುದ್ಧ ಬಿಜೆಪಿ ಪರ ನಿಂತು ಭರ್ಜರಿ ಗೆಲುವು ಸಾಧಿಸಿದ್ದರು. ಇದನ್ನೂ ಓದಿ: ಕರ್ಫ್ಯೂ ವೇಳೆ ಕ್ರಿಕೆಟ್ ಆಡಬಹುದೇ – ಯುವಕನ ಪ್ರಶ್ನೆಗೆ ಪೊಲೀಸರ ‘ಸಿಲ್ಲಿ ಪಾಯಿಂಟ್’ ಉತ್ತರ

  • ಕಾಂಗ್ರೆಸ್‍ಗೆ ಮುಖಭಂಗ – ಬಸವ ಕಲ್ಯಾಣದಲ್ಲಿ ಬಿಜೆಪಿಗೆ ಭರ್ಜರಿ ಜಯ

    ಕಾಂಗ್ರೆಸ್‍ಗೆ ಮುಖಭಂಗ – ಬಸವ ಕಲ್ಯಾಣದಲ್ಲಿ ಬಿಜೆಪಿಗೆ ಭರ್ಜರಿ ಜಯ

    ಬೀದರ್: ಬಿಜೆಪಿ ಅಭ್ಯರ್ಥಿ ಶರಣು ಸಲಗಾರ ಅವರು ಬಸವಕಲ್ಯಾಣದಿಂದ 20,629 ಮತಗಳ ಅಂತರದಿಂದ ಭರ್ಜರಿ ಗೆಲವು ಸಾಧಿಸಿದ್ದು, ಕಾಂಗ್ರೆಸ್ಸಿಗೆ ಮುಖಭಂಗವಾಗಿದೆ

    ಬಿಜೆಪಿ 71,012 ಮತಗಳನ್ನು ಪಡೆದರೆ ಕಾಂಗ್ರೆಸ್ 50,383 ಮತ, ಜೆಡಿಎಸ್ 11,402 ಮತಗಳನ್ನು ಪಡೆದಿದೆ. ಡಿಸಿಎಂ ಲಕ್ಷ್ಮಣ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಚಿವ ವಿಸೋಮಣ್ಣ ಹಾಗೂ ಸಂಸದ ಭಗವಂತ್ ಖೂಬಾ ಈ ಚುನಾವಣೆಗೆ ರಣತಂತ್ರ ಹೆಣೆದಿದ್ದರು.

    2018ರ ಚುನಾವಣೆಯಲ್ಲಿ ಕಾಂಗ್ರೆಸ್‍ನಿಂದ ಸ್ಪರ್ಧಿಸಿದ್ದ ಬಿ ನಾರಾಯಣ ರಾವ್ ಈ ಕ್ಷೇತ್ರದಿಂದ ಗೆದ್ದಿದ್ದರು. ಕಾಂಗ್ರೆಸ್ 61,425 ಮತಗಳನ್ನು ಪಡೆದರೆ ಬಿಜೆಪಿ 44,153 ಮತಗಳನ್ನು ಪಡೆದಿತ್ತು.

    ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿ, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ, ಭಾರತೀಯ ಜನತಾ ಪಕ್ಷಕ್ಕೆ ಆಶೀರ್ವದಿಸಿದ ಕ್ಷೇತ್ರದ ಎಲ್ಲ ಮತದಾರ ಬಂಧುಗಳಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು. ಕ್ಷೇತ್ರದ ಜನರ ವಿಶ್ವಾಸ ಗಳಿಸಿ, ಗೆಲುವು ಸಾಧಿಸಿದ ನಮ್ಮ ಅಭ್ಯರ್ಥಿ ಶ್ರೀ ಶರಣು ಸಲಗರ ಅವರಿಗೆ ಮತ್ತು ಅಲ್ಲಿನ ಎಲ್ಲಾ ನಮ್ಮ ಕಾರ್ಯಕರ್ತರಿಗೆ ಅಭಿನಂದನೆಗಳು ಎಂದು ಬರೆದುಕೊಂಡಿದ್ದಾರೆ.

    ಬಸವಕಲ್ಯಾಣ ಉಪಚುನಾವಣೆಯಲ್ಲಿ ಸುಸ್ಪಷ್ಟ ಜನಾದೇಶದೊಂದಿಗೆ ಗೆಲುವು ಸಾಧಿಸಿರುವ ಶರಣು ಸಲಗಾರ ಅವರಿಗೆ ಅಭಿನಂದನೆಗಳು. ಕಾರ್ಯಕರ್ತರ ಅವಿರತ ಪರಿಶ್ರಮಗಳ ಜೊತೆಗೆ ಮುಖ್ಯಮಂತ್ರಿ ಶ್ರೀ ಯಡಿಯೂರಪ್ಪ, ರಾಜ್ಯಾಧ್ಯಕ್ಷ ಶ್ರೀ ನಳೀನ್ ಕುಮಾರ್ ಕಟೀಲ್ ಮತ್ತು ಎಲ್ಲಾ ನಾಯಕರ ಮೇಲೆ ವಿಶ್ವಾಸವಿಟ್ಟು ಪಕ್ಷವನ್ನು ಬೆಂಬಲಿಸಿದ ಮತದಾರರಿಗೆ ನನ್ನ ಧನ್ಯವಾದಗಳು ಎಂದು ಬಿವೈ ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.

  • ಬೀದರ್‌ ಗ್ರಾಮೀಣ ಭಾಗದ 114 ಮಕ್ಕಳಿಗೆ ಟ್ಯಾಬ್‌ ವಿತರಣೆ

    ಬೀದರ್‌ ಗ್ರಾಮೀಣ ಭಾಗದ 114 ಮಕ್ಕಳಿಗೆ ಟ್ಯಾಬ್‌ ವಿತರಣೆ

    ಬೀದರ್ : ಪಬ್ಲಿಕ್ ಟಿವಿ ಹಾಗೂ ರೋಟರಿ ಕ್ಲಬ್ ಜ್ಲಾನದೀವಿಗೆ ಅಭಿಯಾನದ ಅಡಿ ಬೀದರ್ ಜಿಲ್ಲೆಯ ಗ್ರಾಮೀಣ ಭಾಗದ ಸರ್ಕಾರಿ ಶಾಲೆಯ 114 ವಿದ್ಯಾರ್ಥಿಗಳಿಗೆ ಇಂದು ಉಚಿತ ಟ್ಯಾಬ್‌ ವಿತರಣೆ ಮಾಡಲಾಯಿತು.

    ಬಸವಕಲ್ಯಾಣ ತಾಲೂಕಿನ ತಾಲೂಕಿನ ಗೌರ ಮತ್ತು ಸಸ್ತಾಪೂರ್ ಹಾಗೂ ಹುಲಸೂರ ತಾಲೂಕಿನ ಮುಚಳಂಬ ಗ್ರಾಮದ  ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್‌ ವಿತರಣೆ ಮಾಡಲಾಯಿತು. ಟ್ಯಾಬ್‌ ದಾನಿಗಳಾದ ಬಸವಕಲ್ಯಾಣದ ಬಿಜೆಪಿ ಮುಖಂಡರಾದ ಶರಣು ಸಲಗಾರ ಅವರು ಮಚಳಂಬ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್‌ಗಳನ್ನು ವಿತರಣೆ ಮಾಡಿದರು.

    ಕೊರೊನಾ ಸಮಯದಲ್ಲಿ ಶಾಲೆಗಳು ಇಲ್ಲದೆ ಕಲಿಕೆಯಲ್ಲಿ ನಾವು ಹಿಂದೆ ಉಳಿದಿದ್ದೇವೆ. ಹೀಗಾಗಿ ಮುಂಬರುವ ಪರೀಕ್ಷೆಯನ್ನು ಬರೆಯುವುದು ಹೇಗೆ ಎಂಬ ಭಯ ಶುರುವಾಗಿತ್ತು. ಈಗ ಪಬ್ಲಿಕ್‌ ಟಿವಿ ನಮಗೆ ಉಚಿತ ಟ್ಯಾಬ್‌ಗಳನ್ನು ನೀಡಿದೆ. ಇದರ ಸದುಪಯೋಗ ಪಡೆದು ಒಳ್ಳೆಯ ಫಲಿತಾಂಶ ಪಡೆಯುತ್ತೇವೆ. ಉಚಿತವಾಗಿ ಟ್ಯಾಬ್‌ ನೀಡಿದ ಪಬ್ಲಿಕ್ ಟಿವಿ ಹಾಗೂ ದಾನಿಗಳಿಗೆ ವಿದ್ಯಾರ್ಥಿಗಳು ಧನ್ಯವಾದಗಳನ್ನು ತಿಳಿಸಿದರು.

    ಟ್ಯಾಬ್‌ ಕೊಡುಗೆ ನೀಡಿದ ಶರಣು ಸಲಗಾರ ಮಾತನಾಡಿ, ಶ್ರೀಮಂತರ ಮಕ್ಕಳು ಹೈಟೆಕ್ ಶಿಕ್ಷಣ ಪಡೆಯುತ್ತಿದ್ದಾರೆ. ಆದರೆ ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ. ಈ ದಿಶೆಯಲ್ಲಿ ಪಬ್ಲಿಕ್‌ ಟಿವಿ ಉತ್ತಮ ಕಾರ್ಯ ಮಾಡುತ್ತಿದ್ದು, ಈ ಕಾರ್ಯ ನನಗೆ ವೈಯುಕ್ತಿಕವಾಗಿ ಖುಷಿ ನೀಡಿದೆ. ಬಡ ಮಕ್ಕಳಿಗೆ ಅನುಕೂಲ ಮಾಡಿಕೊಡಲು ಅವಕಾಶ‌ ನೀಡಿದ ಪಬ್ಲಿಕ್‌ ಟಿವಿಗೆ ಧನ್ಯವಾದಗಳು ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ನಾಗಭೂಷಣ ಶಿವಯೋಗಿ ಮಠದ ಪೀಠಾಧಿಪತಿಗಳಾದ ಪ್ರಣವಾನಂದ ಶಿವಯೋಗಿಗಳು, ಶಿಕ್ಷಕರು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ವಿದ್ಯಾರ್ಥಿಗಳು ಭಾಗಿಯಾಗಿದ್ದರು.