Tag: ಶರಣು ಹುಲ್ಲೂರು

  • ನಿರ್ದೇಶಕ ಕೃಷ್ಣ ಹುಟ್ಟು ಹಬ್ಬಕ್ಕೆ ಅಭಿಷೇಕ್ ಅಂಬರೀಶ್ ನಟನೆಯ ‘ಕಾಳಿ’ ಮೋಷನ್ ಪೋಸ್ಟರ್

    ನಿರ್ದೇಶಕ ಕೃಷ್ಣ ಹುಟ್ಟು ಹಬ್ಬಕ್ಕೆ ಅಭಿಷೇಕ್ ಅಂಬರೀಶ್ ನಟನೆಯ ‘ಕಾಳಿ’ ಮೋಷನ್ ಪೋಸ್ಟರ್

    ಭಿಷೇಕ್ ಅಂಬರೀಶ್ ನಟನೆಯ ಮೂರನೇ ಸಿನಿಮಾದ ಮೋಷನ್ ಪೋಸ್ಟರ್ ಇಂದು ಬಿಡುಗಡೆ ಆಗಿದೆ. ಇಂದು ಈ ಸಿನಿಮಾದ ನಿರ್ದೇಶಕ ಕೃಷ್ಣ ಅವರು ಹುಟ್ಟು ಹಬ್ಬ. ಈ ಸಂದರ್ಭದಂದು ಖಡಕ್ ಆಗಿರುವ ಲುಕ್ ನಲ್ಲಿ ಅಭಿಷೇಕ್ ಇರುವ ಪೋಸ್ಟರ್ ರಿಲೀಸ್ ಮಾಡಿದೆ ಚಿತ್ರತಂಡ. ಈ ಪೋಸ್ಟರ್ ಅನ್ನು ವಿಶೇಷವಾಗಿ ಡಿಸೈನ್ ಮಾಡಲಾಗಿದ್ದು, ಅಭಿಷೇಕ್ ಖಡಕ್ ಲುಕ್ ನಲ್ಲಿ ಕಾಣಿಸುತ್ತಾರೆ. ಇದನ್ನೂ ಓದಿ : ನಯನತಾರಾ ಮದುವೆಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಹಾಜರ್?

    ಅಭಿಷೇಕ್ ಮತ್ತು ಕೃಷ್ಣ ಕಾಂಬಿನೇಷನ್ ನ ಮೊದಲ ಸಿನಿಮಾ ಇದಾಗಿದ್ದು, ಕಾವೇರಿ ಗಲಾಟೆಯ ಹಿನ್ನೆಲೆಯಾಗಿಟ್ಟುಕೊಂಡು ಕಥೆ ಬರೆದಿದ್ದಾರಂತೆ ನಿರ್ದೇಶಕರು. ಮೊನ್ನೆಯಷ್ಟೇ ಅಂಬರೀಶ್ ಅವರ ಹುಟ್ಟು ಹಬ್ಬದ ದಿನದಂದು ಫಸ್ಟ್ ಲುಕ್ ರಿಲೀಸ್ ಮಾಡಿದ್ದರು ನಿರ್ದೇಶಕರು. ಇವತ್ತು ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ. ಇದನ್ನೂ ಓದಿ: ಸನ್ನಿ ಲಿಯೋನ್ ಫುಲ್ ಗರಂ: ಓರ್ವ ವ್ಯಕ್ತಿಗೆ ಸನ್ನಿ ಕೊಟ್ರು ಚಪ್ಪಲಿ ಏಟು

    ಸದ್ಯ ಅಭಿಷೇಕ್ ಅಂಬರೀಶ್ ಬ್ಯಾಡ್ ಮ್ಯಾನರ್ಸ್ ಸಿನಿಮಾದಲ್ಲಿ ನಟಿಸುತ್ತಿದ್ದು, ಈ ಸಿನಿಮಾದ ಶೂಟಿಂಗ್ ಮುಗಿದ ನಂತರ ಕಾಳಿ ಸಿನಿಮಾಗಾಗಿ ಕೆಲಸ ಮಾಡಲಿದ್ದಾರೆ. ಬ್ಯಾಡ್ ಮ್ಯಾನರ್ಸ್ ಸಿನಿಮಾವನ್ನು ದುನಿಯಾ ಸೂರಿ ನಿರ್ದೇಶನ ಮಾಡುತ್ತಿದ್ದು, ಬಹುತೇಕ ಶೂಟಿಂಗ್ ಮುಗಿದಿದೆ ಎನ್ನಲಾಗುತ್ತಿದೆ. ಕಾಳಿ ಸಿನಿಮಾದಲ್ಲಿ ಅಭಿಷೇಕ್ ಕಾವೇರಿ ಗಲಾಟೆ ಹಿನ್ನೆಲೆಯಲ್ಲಿ ನಡೆದ ಪ್ರೇಮಕಥೆಗೆ ನಾಯಕನಾಗಲಿದ್ದಾರೆ.

  • ಅಂದು ಸುದೀಪ್ ಪುಸ್ತಕ ಬಿಡುಗಡೆ ಮಾಡಿದ್ದ ಪುನೀತ್, ಇಂದು ಪುನೀತ್ ಪುಸ್ತಕ ಬಿಡುಗಡೆ ಮಾಡಿದ ಸುದೀಪ್

    ಅಂದು ಸುದೀಪ್ ಪುಸ್ತಕ ಬಿಡುಗಡೆ ಮಾಡಿದ್ದ ಪುನೀತ್, ಇಂದು ಪುನೀತ್ ಪುಸ್ತಕ ಬಿಡುಗಡೆ ಮಾಡಿದ ಸುದೀಪ್

    ತೀ ನಿರೀಕ್ಷಿತ ಪುನೀತ್ ರಾಜ್ ಕುಮಾರ್ ಅವರ ಬಯೋಗ್ರಫಿ ‘ನೀನೇ ರಾಜಕುಮಾರ’ ಕೃತಿಯನ್ನು ಹೆಸರಾಂತ ನಟ ಕಿಚ್ಚ ಸುದೀಪ್ ಇಂದು ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದರು. ಪತ್ರಕರ್ತ ಡಾ. ಶರಣು ಹುಲ್ಲೂರು ಬರೆದಿರುವ ಈ ಕೃತಿ ಈಗಾಗಲೇ ಬಿಡುಗಡೆಗೂ ಮುನ್ನ ಎರಡನೇ ಮುದ್ರಣ ಕಂಡಿದೆ.

    ಕೃತಿಯ ಬಿಡುಗಡೆ ನಂತರ ಮಾತನಾಡಿದ ಸುದೀಪ್, ‘ಒಂದೊಳ್ಳೆಯ ಕೃತಿಯ ಮೂಲಕ ಶರಣು ಹುಲ್ಲೂರು ಪುನೀತ್ ರಾಜ್ ಕುಮಾರ್ ಅವರಿಗೆ ನಮನ ಸಲ್ಲಿಸಿದ್ದಾರೆ. ಪುನೀತ್ ಅವರದ್ದು ಪುಸ್ತಕವಾಗುವಂತಹ ವ್ಯಕ್ತಿತ್ವ. ಈ ಕೃತಿ ಅವರ ಜೀವನವನ್ನು ಸೊಗಸಾಗಿ ಹಿಡಿದಿಟ್ಟಿದೆ’ ಎಂದರು. ಅಲ್ಲದೇ ‘ಯಾವತ್ತಿಗೂ ನಾನು ಪುನೀತ್ ಅವರನ್ನು ಮೀಸ್ ಮಾಡಿಕೊಳ್ಳುತ್ತೇನೆ’ ಎಂದರು. ಕಿಚ್ಚ ಸುದೀಪ್ ಅವರ ಪುಸ್ತಕವನ್ನು ಎರಡು ವರ್ಷಗಳ ಹಿಂದೆ ಪುನೀತ್ ರಾಜ್ ಕುಮಾರ್ ಅವರು ಬಿಡುಗಡೆ ಮಾಡಿದ್ದರು. ಪುನೀತ್ ಅವರ ಬಯೋಗ್ರಫಿಯನ್ನು ಇದೀಗ ಸುದೀಪ್ ಅವರು ರಿಲೀಸ್ ಮಾಡಿದ್ದು ಭಾವುಕತೆಗೆ ಸಾಕ್ಷಿಯಾಗಿತ್ತು. ಇದನ್ನೂ ಓದಿ: ದಿ ಕಾಶ್ಮೀರ್ ಫೈಲ್ಸ್ : ಬಾಲಿವುಡ್ ಮೇಲೆ ಕಿಡಿಕಾರಿದ ಕಂಗನಾ ರಣಾವತ್

    ಈ ಪುಸ್ತಕ ಬಿಡುಗಡೆ ಸಂದರ್ಭದಲ್ಲಿ ನಿರ್ಮಾಪಕರಾದ ಜಾಕ್ ಮಂಜು ಮತ್ತು ಕುಮಾರ್ ಹಾಗೂ ಸಾವಣ್ಣ ಪ್ರಕಾಶನದ ಜಮೀಲ್ ಮತ್ತು ಲೇಖಕ ಶರಣು ಹುಲ್ಲೂರು ಉಪಸ್ಥಿತರಿದ್ದರು.

    ಪುನೀತ್ ಅವರ ಕುರಿತಾಗಿ ಬಂದಂತಹ ಮೊದಲ ಬಯೋಗ್ರಫಿ ಇದಾಗಿದ್ದು, 260ಕ್ಕೂ ಹೆಚ್ಚು ಪುಟಗಳನ್ನು ಹೊಂದಿದೆ. ಪುನೀತ್ ಅವರ ಹುಟ್ಟು ಹಬ್ಬದ ದಿನದಂದು ಬಿಡುಗಡೆಯಾಗಿದೆ. ಪುನೀತ್ ಅವರ ಖಾಸಗಿ ಜೀವನ, ವೃತ್ತಿ ಜೀವನ, ಅಪರೂಪದ ಸಂಗತಿಗಳು ಮತ್ತು ಫೋಟೋಗಳನ್ನುಈ ಪುಸ್ತಕದಲ್ಲಿ ಸೊಗಸಾಗಿ ಹಿಡಿದಿಟ್ಟಿದ್ದಾರೆ ಲೇಖಕ ಶರಣು ಹುಲ್ಲೂರು.