Tag: ಶಸ್ತ್ರಾಸ್ತ್ರ ಕಾಯ್ದೆ

  • ವಾಹನ ತಪಾಸಣೆ ವೇಳೆ 500 ಸ್ನೈಪರ್ ರೈಫಲ್ ಬುಲೆಟ್‍ಗಳು ಪತ್ತೆ – ಆರೋಪಿ ಪರಾರಿ

    ವಾಹನ ತಪಾಸಣೆ ವೇಳೆ 500 ಸ್ನೈಪರ್ ರೈಫಲ್ ಬುಲೆಟ್‍ಗಳು ಪತ್ತೆ – ಆರೋಪಿ ಪರಾರಿ

    ನವದೆಹಲಿ: ಪಶ್ಚಿಮ ದೆಹಲಿಯ (Delhi) ಮೋತಿ ನಗರ ಪ್ರದೇಶದಲ್ಲಿ ವಾಹನ ತಪಾಸಣೆ ವೇಳೆ ಬೈಕ್‍ನಲ್ಲಿ ಸಾಗಿಸುತ್ತಿದ್ದ 500 ಸ್ನೈಪರ್ ರೈಫಲ್ ಬುಲೆಟ್‍ಗಳು ಪತ್ತೆಯಾಗಿದ್ದು, ಅವುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು (Delhi Police) ತಿಳಿಸಿದ್ದಾರೆ.

    ಟ್ರಾಫಿಕ್ ಪೊಲೀಸರು ವಾಹನಗಳನ್ನು ತಪಾಸಣೆ ಮಾಡುತ್ತಿದ್ದಾಗ ಬೈಕ್ ಸವಾರನಿಗೆ ನಿಲ್ಲಿಸುವಂತೆ ಸೂಚಿಸಿದರು. ಆದರೆ ಆತ ವೇಗವಾಗಿ ಬೈಕನ್ನು ಚಲಾಯಸಿಕೊಂಡು ಹೋಗಿದ್ದಾನೆ. ಈ ವೇಳೆ ಪೊಲೀಸರು ಬೈಕ್‍ನ್ನು ಬೆನ್ನಟ್ಟಿದ್ದಾರೆ. ಆಗ ಆತ ಸಿಗ್ನಲ್ ಬಳಿ ಬೈಕ್ ಬಿಟ್ಟು ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ಬಳಿಕ ಬೈಕ್ ಪರಿಶೀಲಿಸಿದಾಗ ಬ್ಯಾಗ್‍ನಲ್ಲಿ 7.62 ಕ್ಯಾಲಿಬರ್‍ನ 500 ಸಜೀವ ಗುಂಡುಗಳ ಕಾಟ್ರಿಡ್ಜ್‌ಗಳನ್ನು ಹೊಂದಿರುವ 10 ಬಾಕ್ಸ್‌ಗಳು ಪತ್ತೆಯಾಗಿವೆ. ಈ ಬಗ್ಗೆ ಮೋತಿ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದ್ದು, ಕಾಟ್ರಿಡ್ಜ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಶಸ್ತ್ರಾಸ್ತ್ರ ಕಾಯ್ದೆಯಡಿ (Arms Act) ಎಫ್‍ಐಆರ್ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಹಲವು ತಂಡಗಳನ್ನು ರಚಿಸಲಾಗಿದೆ. ಸಿಸಿಟಿವಿ ದೃಶ್ಯಗಳನ್ನು ಮತ್ತು ಆರೋಪಿಗಳು ಸಾಗಿದ ಮಾರ್ಗವನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

    7.62 ಕಾಟ್ರಿಡ್ಜ್‌ಗಳನ್ನು ಎಕೆ -47 ರೈಫಲ್‍ಗಳು, ಸ್ವಯಂ-ಲೋಡಿಂಗ್ ರೈಫಲ್‍ಗಳು (ಎಸ್‍ಎಲ್‍ಆರ್), ಲೈಟ್ ಮೆಷಿನ್ ಗನ್‍ಗಳು ಮತ್ತು ಸ್ನೈಪರ್ ರೈಫಲ್‍ಗಳಿಗೆ ಬಳಸಲಾಗುತ್ತದೆ. ಇಂತಹ ಗುಂಡುಗಳು ಪತ್ತೆಯಾಗಿದ್ದು ತೀವ್ರ ಕಳವಳಕಾರಿಯಾಗಿದೆ. ಪ್ರತಿ ಬುಲೆಟ್‍ಗೆ ಅದರ ಬ್ಯಾಚ್ ಸಂಖ್ಯೆಗಳನ್ನು ಗುರುತಿಸಿರುವುದರಿಂದ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

  • ತಂದೆಗೆ ಬಿಜೆಪಿ ಟಿಕೆಟ್ ಸಿಕ್ಕ ಖುಷಿಗೆ ಗಾಳಿಯಲ್ಲಿ ಗುಂಡು ಪ್ರಕರಣ – ಅಭ್ಯರ್ಥಿ ಪುತ್ರನ ವಿರುದ್ಧ ಎಫ್‍ಐಆರ್

    ತಂದೆಗೆ ಬಿಜೆಪಿ ಟಿಕೆಟ್ ಸಿಕ್ಕ ಖುಷಿಗೆ ಗಾಳಿಯಲ್ಲಿ ಗುಂಡು ಪ್ರಕರಣ – ಅಭ್ಯರ್ಥಿ ಪುತ್ರನ ವಿರುದ್ಧ ಎಫ್‍ಐಆರ್

    ವಿಜಯಪುರ: ಬಿಜೆಪಿ (BJP) ಟಿಕೆಟ್ ಘೋಷಣೆ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ್ದ ಸಮರ್ಥ ಪಾಟೀಲ್ ವಿರುದ್ಧ ಗಾಂಧಿ ಚೌಕ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

    ಜಿಲ್ಲೆಯ ಬಬಲೇಶ್ವರ (Babaleshwar) ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಜಯಕುಮಾರ್ ಪಾಟೀಲ್ ಅವರಿಗೆ ಟಿಕೆಟ್ ಘೋಷಣೆ ಮಾಡಿದ ದಿನ ಅವರ ಪುತ್ರ ಸಮರ್ಥ ಪಾಟೀಲ್ ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ. ಈ ಬಗ್ಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಜು ಆಲಗೂರ ಆರೋಪಿಸಿದ್ದರು. ಇದರ ವಿಸ್ತೃತ ವರದಿಯನ್ನು ‘ಪಬ್ಲಿಕ್ ಟಿವಿ’ ಬಿತ್ತರಿಸಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಪೊಲೀಸ್ ಇಲಾಖೆ ಸಮರ್ಥ ವಿರುದ್ಧ ಪ್ರಕರಣ ದಾಖಲಿಸಿದೆ. ಇದನ್ನೂ ಓದಿ: ಇವಿಎಂ ಖರೀದಿಯಲ್ಲಿ ಅಕ್ರಮ ಆರೋಪ – ಚುನಾವಣಾ ಆಯೋಗದ ವಿರುದ್ಧದ ಪಿಐಎಲ್ ವಜಾಗೊಳಿಸಿದ ಸುಪ್ರೀಂ

    ಟನೆಯ ವಿರುದ್ಧ ಕಾಂಗ್ರೆಸ್ ನಾಯಕರು ಸುದ್ದಿಗೋಷ್ಠಿ ನಡೆಸಿ ಬಿಜೆಪಿ ವಿರುದ್ಧ ಕಿಡಿಕಾರಿದ್ದರು. ಗುಂಡು ಹಾರಿಸುವುದು ಸರಿಯಾದ ವರ್ತನೆಯಲ್ಲ ಎಂಬ ಆರೋಪವನ್ನು ಕಾಂಗ್ರೆಸ್ (Congress) ಮುಖಂಡರು ಮಾಡಿದ್ದರು. ಅಲ್ಲದೇ ಬಿಜೆಪಿ ಅಭ್ಯರ್ಥಿಯ ಪುತ್ರನ ಮೇಲೆ ಕೇಸ್ ದಾಖಲಿಸುವಂತೆ ಸಭೆಯಲ್ಲಿ ಸರ್ಕಾರವನ್ನು ಒತ್ತಾಯಿಸಿದ್ದರು.

    ಸಮರ್ಥ ಪಾಟೀಲ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ (Arms Act) ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: 12 ವರ್ಷಗಳ ಬಳಿಕ ಭಾರತಕ್ಕೆ ಭೇಟಿ ನೀಡಿದ ಪಾಕ್ ವಿದೇಶಾಂಗ ಸಚಿವ