Tag: ಶಹಾಪುರ

  • ಲಾಕ್‍ಡೌನ್ ಸಂಕಷ್ಟ – ಒಂದೇ ಕುಟುಂಬದ ಆರು ಜನ ಆತ್ಮಹತ್ಯೆ

    ಲಾಕ್‍ಡೌನ್ ಸಂಕಷ್ಟ – ಒಂದೇ ಕುಟುಂಬದ ಆರು ಜನ ಆತ್ಮಹತ್ಯೆ

    ಯಾದಗಿರಿ: ಕೊರೊನಾ ಲಾಕ್‍ಡೌನ್ ಸಂಕಷ್ಟಕ್ಕೆ ಸಿಲುಕಿ, ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಆರು ಸದಸ್ಯರು, ಕೃಷಿ ಹೊಂಡಕ್ಕೆ ಹಾರಿ ಪ್ರಾಣ ಬಿಟ್ಟಿರುವ ಹೃದಯ ವಿದ್ರಾವಕ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿಯಲ್ಲಿ ಇಂದು ನಡೆದಿದೆ.

    ಗ್ರಾಮದ ಭೀಮರಾಯ್ ಎಂಬಾತ ತನ್ನ ಹೆಂಡತಿ ಶಾಂತಮ್ಮ ಜೊತೆಗೆ ತನ್ನ ನಾಲ್ವರು ಮಕ್ಕಳಾದ ಸುಮಿತ್ರಾ, ಶ್ರೀದೇವಿ, ಲಕ್ಷ್ಮೀ, ಶಿವರಾಜ್ ಜೊತೆ ತನ್ನದೆ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    ಮೃತ ಭೀಮರಾಯ್ ಕೃಷಿ ಮತ್ತು ವೈಯಕ್ತಿಕ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಇಂದು ತನ್ನ ಕುಟುಂಬದ ಜೊತೆಗೆ ಜಮೀನಿಗೆ ತೆರಳಿದ್ದ ಭೀಮರಾಯ್, ಮೊದಲಿಗೆ ಮಕ್ಕಳ ಕಾಲಿಗೆ ಕಲ್ಲು ಕಟ್ಟಿ ಹೊಂಡಕ್ಕೆ ಹಾಕಿದ್ದಾನೆ. ಬಳಿಕ ತನ್ನ ಹೆಂಡತಿ ಜೊತೆಗೆ ತಾನು ಸಹ ಹಾರಿದ್ದಾನೆ.

    ಶಹಾಪುರ ಪೋಲಿಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸದ್ಯ ನಾಲ್ವರ ಶವಗಳನ್ನ ಹೊರತೆಗೆದಿದ್ದು, ತಾಲೂಕು ಆಸ್ಪತ್ರೆಗೆ ರವಾನಿಸಿದ್ದಾರೆ. ಸ್ಥಳಕ್ಕೆ ಎಸ್ಪಿ ವೇದಮೂರ್ತಿ, ಎಸಿ ಪ್ರಶಾಂತ್ ಹನಗಂಡಿ, ತಹಶೀಲ್ದಾರ ಜಗನ್ನಾಥ್ ರೆಡ್ಡಿ, ಡಿವೈಎಸ್ಪಿ ವೆಂಕಟೇಶ್ ಹುಗಿಬಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • ಟಿಪ್ಪು ಜಯಂತಿಯಲ್ಲಿ ಭಾಗಿಯಾಗಿದ್ದ ಶಾಸಕರಿಗೆ ಬಿಜೆಪಿ ಟಿಕೆಟ್-ಟ್ವಿಟ್ಟರ್ ನಲ್ಲಿ ಅಸಮಾಧಾನ

    ಟಿಪ್ಪು ಜಯಂತಿಯಲ್ಲಿ ಭಾಗಿಯಾಗಿದ್ದ ಶಾಸಕರಿಗೆ ಬಿಜೆಪಿ ಟಿಕೆಟ್-ಟ್ವಿಟ್ಟರ್ ನಲ್ಲಿ ಅಸಮಾಧಾನ

    ಯಾದಗಿರಿ: ಅಲ್ಪಸಂಖ್ಯಾತರ ಮತಗಳ ಓಲೈಕೆಗಾಗಿ ಪಕ್ಷದ ಸಿದ್ಧಾಂತಗಳನ್ನು ಗಾಳಿಗೆ ತೂರಿ ಟಿಪ್ಪು ಜಯಂತಿಯಲ್ಲಿ ಭಾಗಿಯಾಗಿದ್ದ ಶಹಾಪುರ ಶಾಸಕ ಗುರುಪಾಟೀಲ್‍ರಿಗೆ ಬಿಜೆಪಿ ಟಿಕೆಟ್ ನೀಡಿದೆ.

    ರಾಜ್ಯಾದ್ಯಂತ ಬಿಜೆಪಿ ಟಿಪ್ಪು ಜಯಂತಿಗೆ ಭಾರೀ ವಿರೋಧವನ್ನು ವ್ಯಕ್ತಪಡಿಸಿತ್ತು. ಆದ್ರೂ ಶಹಾಪುರ ಬಿಜೆಪಿ ಶಾಸಕ ಗುರುಪಾಟೀಲ್ ಟಿಪ್ಪು ಜಯಂತಿಯಲ್ಲಿ ಭಾಗಿಯಾಗಿದ್ದರು. ಆದ್ರೆ ಇದೀಗ ಬಿಜೆಪಿ ಮತ್ತೊಮ್ಮೆ ಗುರುಪಾಟೀಲ್ ಅವರಿಗೆ ಟಿಕೆಟ್ ನೀಡಿದ್ದು, ಸ್ಥಳೀಯ ಕಾರ್ಯಕರ್ತರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ.

    ಬಿಜೆಪಿಯ ಟಿಪ್ಪು ಜಯಂತಿ ವಿರೋಧದ ಪ್ರತಿಭಟನೆ ಕೇವಲ ರಾಜಕೀಯ ಬೂಟಾಟಿಕೆ ಆಯಿತಾ? ಇದು ಚೀಪ್ ಪೊಲಿಟಿಕ್ಸ್. ಪಕ್ಷದ ವಿರೋಧದ ನಡುವೆಯೂ ಟಿಪ್ಪು ಜಯಂತಿಯಲ್ಲಿ ಭಾಗಿಯಾಗಿದ್ದ ಗುರುಪಾಟೀಲ್ ಗೆ ಬಿಜೆಪಿ ಟಿಕೆಟ್ ನೀಡಿರುವುದು ಎಷ್ಟು ಸರಿ ಅಂತಾ ನಮೋ ಬ್ರಿಗೇಡ್‍ನ ಮಾಜಿ ಸದಸ್ಯ ನೀರಜ್ ಕಾಮತ್ ಟ್ವಿಟ್ಟರ್ ನಲ್ಲಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

    ಈ ಹಿಂದೆ ಹೊಸಪೇಟೆಯ ಶಾಸಕ ಆನಂದ್ ಸಿಂಗ್ ಬಿಜೆಪಿಯಲ್ಲಿದ್ದಾಗ ಟಿಪ್ಪು ಜಯಂತಿಯಲ್ಲಿ ಭಾಗಿಯಾಗಿದ್ದಕ್ಕೆ, ರಾಜ್ಯ ನಾಯಕರೆಲ್ಲಾ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು. ಅಂತೆಯೇ ಜಯಂತಿಯಲ್ಲಿ ಭಾಗವಹಿಸಿದ್ದಕ್ಕೆ ಉತ್ತರ ನೀಡಬೇಕೆಂದು ಬಿಜೆಪಿ ಆನಂದ್ ಸಿಂಗ್ ಅವರಿಗೆ ಶೋಕಾಸ್ ನೋಟಿಸ್ ಸಹ ಜಾರಿ ಮಾಡಿತ್ತು. ಇದನ್ನೂ ಓದಿ: ಶಾಸಕ ಆನಂದ್ ಸಿಂಗ್‍ಗೆ ಬಿಜೆಪಿಯಿಂದ ಶೋಕಾಸ್ ನೋಟಿಸ್

  • ಡೀಸೆಲ್ ಟ್ಯಾಂಕರ್ ಪಲ್ಟಿ- ಬಕೆಟ್, ಡಬ್ಬಿಗಳಲ್ಲಿ ಡೀಸೆಲ್ ತುಂಬಿಕೊಂಡು ಹೋದ್ರು ಜನ

    ಡೀಸೆಲ್ ಟ್ಯಾಂಕರ್ ಪಲ್ಟಿ- ಬಕೆಟ್, ಡಬ್ಬಿಗಳಲ್ಲಿ ಡೀಸೆಲ್ ತುಂಬಿಕೊಂಡು ಹೋದ್ರು ಜನ

    ಯಾದಗಿರಿ: ಡೀಸೆಲ್ ಹೊತ್ತೊಯ್ಯುತ್ತಿದ್ದ  ಟ್ಯಾಂಕರೊಂದು ಪಲ್ಟಿಯಾದ ಘಟನೆ ಶಹಾಪೂರ ತಾಲೂಕಿನ ಹುಲಕಲ್ ಗ್ರಾಮದ ಬಳಿ ನಡೆದಿದೆ.

    ಭಾರತ್ ಪೆಟ್ರೋಲಿಯಂ ಕಂಪನಿಗೆ ಸೇರಿದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ನೆಲಕ್ಕೆ ಉರುಳಿದೆ. ಈ ಸಮಯದಲ್ಲಿ ಯಾವುದೇ ವಾಹನಗಳು ಸಂಚರಿಸಿದ ಕಾರಣ ಭಾರೀ ದುರಂತ ತಪ್ಪಿದೆ. ಘಟನೆಯಲ್ಲಿ ಟ್ಯಾಂಕರ್ ಚಾಲಕ ಪ್ರಾಣಪಾಯದಿಂದ ಪಾರಾಗಿದ್ದಾರೆ.

    ಟ್ಯಾಂಕರ್ ನಲ್ಲಿದ್ದ ಡಿಸೇಲ್ ಸೊರಿಕೆಯಾಗುತ್ತಿರುವುದನ್ನು ಕಂಡ ಗ್ರಾಮಸ್ಥರು ಡಬ್ಬಿ ಹಾಗೂ ಬಕೆಟ್ ಗಳಲ್ಲಿ ಡಿಸೇಲ್ ತುಂಬಿಕೊಂಡು ಹೋಗುತ್ತಿದ್ದ ದೃಶ್ಯ ಕಂಡು ಬಂತು.

    ಭೀಮರಾಯನ ಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  • ಲಾರಿ-ಕಾರು ಡಿಕ್ಕಿ: ಕಾರು ಚಾಲಕ ಸ್ಥಳದಲ್ಲಿಯೇ ಸಾವು

    ಲಾರಿ-ಕಾರು ಡಿಕ್ಕಿ: ಕಾರು ಚಾಲಕ ಸ್ಥಳದಲ್ಲಿಯೇ ಸಾವು

    ಯಾದಗಿರಿ: ಜಿಲ್ಲೆಯ ಶಹಾಪುರ ತಾಲೂಕಿನ ರಸ್ತಾಪುರ ಗ್ರಾಮದ ಬಳಿ ಲಾರಿ-ಕಾರು ಡಿಕ್ಕಿ ಸಂಭವಿಸಿ ಸ್ಥಳದಲ್ಲಿಯೇ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ಸುರಪುರ ನಗರದ ರಂಗಂಪೇಟೆಯ ನಿವಾಸಿ ಸಿದ್ದಾರ್ಥ ಎತ್ತಿನಮನಿ (28) ಮೃತಪಟ್ಟ ಚಾಲಕ. ಮಂಗಳವಾರ ರಾತ್ರಿ ಅಪಘಾತ ಸಂಭವಿಸಿದ್ದು ಸಿದ್ದಾರ್ಥ ಸಾವನ್ನಪ್ಪಿದ್ದಾರೆ. ಘಟನೆ ನಂತರ ಲಾರಿ ಚಾಲಕ ಲಾರಿಯನ್ನು ಬಿಟ್ಟು ಪರಾರಿಯಾಗಿದ್ದಾನೆ.

    ಈ ಸಂಬಂಧ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.