Tag: ಶಾರುಖ್ ಖಾನ್

  • ಶೂಟಿಂಗ್ ವೇಳೆ ನಟ ಶಾರುಖ್ ಖಾನ್‌ಗೆ ಗಾಯ

    ಶೂಟಿಂಗ್ ವೇಳೆ ನಟ ಶಾರುಖ್ ಖಾನ್‌ಗೆ ಗಾಯ

    ಕಿಂಗ್‌ (King) ಸಿನಿಮಾ ಶೂಟಿಂಗ್‌ ವೇಳೆ ಬಾಲಿವುಡ್‌ ನಟ ಶಾರುಖ್‌ ಖಾನ್‌ (Shah Rukh Khan) ಗಾಯಗೊಂಡಿದ್ದಾರೆ. ಕಿಂಗ್‌ ಖಾನ್‌ ಬೆನ್ನಿಗೆ ಪೆಟ್ಟಾಗಿದ್ದು, ವಿಶ್ರಾಂತಿಗೆ ವೈದ್ಯರು ಸಲಹೆ ನೀಡಿದ್ದಾರೆ.

    ಸಾಹಸ ಸನ್ನಿವೇಶ ಚಿತ್ರೀಕರಣ ಮಾಡುವಾಗ ಶಾರುಖ್‌ ಕಾನ್‌ ಗಾಯಗೊಂಡಿದ್ದಾರೆ. ಮುಂಬೈನ ಚಿತ್ರೀಕರಣದ ಸ್ಟುಡಿಯೋದಲ್ಲಿ ಘಟನೆ ನಡೆದಿದೆ. ಚಿತ್ರೀಕರಣದ ವೇಳೆ ಮಗಳು ಕೂಡ ಭಾಗಿಯಾಗಿದ್ದರು. ಇದನ್ನೂ ಓದಿ: ಕಿಡ್ನಿ ವೈಫಲ್ಯದಿಂದ ಖ್ಯಾತ ಖಳನಟ ಫಿಶ್ ವೆಂಕಟ್‌ ನಿಧನ

    ಗಾಯದ ಕಾರಣಕ್ಕೆ ಶಾರುಖ್ ಅಮೆರಿಕಕ್ಕೆ ಪ್ರಯಾಣ ಬೆಳೆಸಬಹುದು ಎನ್ನಲಾಗಿದೆ. ನಂತರ ಯುಕೆಗೆ ಪ್ರವಾಸ ಮಾಡಲಿದ್ದಾರೆ. ಅಲ್ಲಿ ಕುಟುಂಬದವರೊಟ್ಟಿಗೆ ಇದ್ದು ಚೇತರಿಸಿಕೊಳ್ಳಲಿದ್ದಾರೆ. ವಿಶ್ರಾಂತಿ ಕಾರಣಕ್ಕಾಗಿ ಶ್ರೀಲಂಕಾಗೆ ಯೋಜಿಸಿದ್ದ ಪ್ರವಾಸವನ್ನು ಮುಂದೂಡಲಾಗಿದೆ.

    ಸಿದ್ಧಾರ್ಥ್ ಆನಂದ್ ನಿರ್ದೇಶನದಲ್ಲಿ ‘ಕಿಂಗ್’ ಚಿತ್ರ ಶೂಟಿಂಗ್‌ ನಡೆಯುತ್ತಿದೆ. ಈ ಚಿತ್ರದಲ್ಲಿ ದೀಪಿಕಾ ಪಡುಕೋಣೆ, ಅಭಿಷೇಕ್ ಬಚ್ಚನ್, ಜೈದೀಪ್ ಅಹ್ಲಾವತ್, ಅನಿಲ್ ಕಪೂರ್ ಮತ್ತು ಅಭಯ್ ವರ್ಮಾ ಕೂಡ ನಟಿಸಿದ್ದಾರೆ. ಇದನ್ನೂ ಓದಿ: ರಿಯಲ್ ಹೀರೋ ಅಕ್ಷಯ್‌ಕುಮಾರ್ ಮಾಡಿದ ಕಾರ್ಯ ಎಲ್ಲರಿಗೂ ಮಾದರಿ

    ಶಾರುಖ್‌ ಖಾನ್‌ಗೆ ಗಂಭೀರ ಪೆಟ್ಟಾಗಿಲ್ಲ. ಚೇತರಿಸಿಕೊಳ್ಳುತ್ತಿದ್ದಾರೆ. ಕಿಂಗ್‌ ಖಾನ್‌ ಗಾಯಗೊಂಡಿರುವುದರಿಂದ ಸಿನಿಮಾ ಚಿತ್ರೀಕರಣದಲ್ಲಿ ವಿಳಂಬವಾಗಲಿದೆ.

  • Met Gala 2025 | ಬಾಲಿವುಡ್ ತಾರೆಯರು ಕಾಣಿಸಿಕೊಂಡಿದ್ದು ಹೇಗೆ ಗೊತ್ತಾ?

    Met Gala 2025 | ಬಾಲಿವುಡ್ ತಾರೆಯರು ಕಾಣಿಸಿಕೊಂಡಿದ್ದು ಹೇಗೆ ಗೊತ್ತಾ?

    ತ್ತೀಚೆಗಷ್ಟೆ ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ಮೆಟ್ರೋಪಾಲಿಟನ್ ಮ್ಯೂಸಿಯಂ ಆಫ್ ಆರ್ಟ್‌ನಲ್ಲಿ ನಡೆದ ಅತಿ ದೊಡ್ಡ ಫ್ಯಾಷನ್ ನೈಟ್ ಮೆಟ್ ಗಾಲಾ 2025ರ(Met Gala 2025) `ಸೂಪರ್‌ಫೈನ್: ಟೈಲರಿಂಗ್ ಬ್ಲ್ಯಾಕ್ ಸ್ಟೈಲ್’ ಥೀಮ್‌ನಲ್ಲಿ ಹಾಲಿವುಡ್ ಹಾಗೂ ಬಾಲಿವುಡ್‌ನ ಸ್ಟಾರ್ಸ್ ಬ್ಲೂ ಕಾರ್ಪೆಟ್‌ನಲ್ಲಿ ಮಿಂಚಿದ್ದರು. ಇದೊಂದು ಕಾಸ್ಟ್ಯೂಮ್‌ ಇನ್‌ಸ್ಟಿಟ್ಯೂಟ್‌ಗಾಗಿ ನಿಧಿ ಸಂಗ್ರಹಿಸಲು ಆಯೋಜಿಸಲಾಗುವ ಫ್ಯಾಷನ್ ಕಾರ್ಯಕ್ರಮ.

    ಈ ಮೆಟ್ ಗಾಲಾ ಫ್ಯಾಷನ್ ನೈಟ್ ಮಾಡೆಲ್ಸ್, ಆಕ್ಟರ್ಸ್‌ಗಳು ತಮ್ಮ ಫ್ಯಾಷನ್ ಬಗೆಗಿನ ಆಸಕ್ತಿಯನ್ನು ತೋರಿಸುವ ಅತಿ ದೊಡ್ಡ ಕಾರ್ಯಕ್ರಮವಾಗಿದೆ. ಇದರಲ್ಲಿ ಖ್ಯಾತ ನಟ ನಟಿಯರು, ಸೆಲೆಬ್ರಿಟಿಗಳು ವಿಭಿನ್ನವಾದ ಉಡುಗೆ ತೊಟ್ಟು ಫ್ಯಾಷನ್ ನೈಟ್‌ನ ಮೆರುಗು ಹೆಚ್ಚಿಸುತ್ತಾರೆ.

    ಭಾರತದಲ್ಲಿ ತಯಾರಾದ ಬ್ಲೂ ಕಾರ್ಪೆಟ್
    ಈ ಬಾರಿಯ ಮೆಟ್ ಗಾಲಾದ ಇನ್ನೊಂದು ವಿಶೇಷವೇನೆಂದರೆ, ಸೆಲೆಬ್ರಿಟಿಗಳು ರೆಡ್ ಕಾರ್ಪೆಟ್ ಬದಲಾಗಿದೆ. ಬಿಳಿ ಹಾಗೂ ನೀಲಿ ಬಣ್ಣದ ಡ್ಯಾಫೋಡಿಲ್‌ಗಳಿಂದ ಅಲಂಕರಿಸಲ್ಲಟ್ಟ ಬ್ಲೂ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿದರು. ಇನ್ನೊಂದು ವಿಷಯವೇನೆಂದರೆ ಈ ಬ್ಲೂ ಕಾರ್ಪೆಟ್ ತಯಾರಾಗಿದ್ದು ಭಾರತದಲ್ಲೇ. ಹೌದು, ಈ ಕಾರ್ಪೆಟ್‌ನ ಬೇಸ್ ಅನ್ನು ನೆಯ್ಟ್ ಹೋಮ್ಸ್ ಸಂಸ್ಥಾಪಕರಾದ ಶಿವನ್ ಸಂತೋಷ್ ಮತ್ತು ನಿಮಿಷಾ ಆರೀನಿವಾಸ್ ಅವರು ಕೇರಳದ(Kerala) ಅಲಪ್ಪುಳದಲ್ಲಿ ತಯಾರಿಸಿದ್ದಾರೆ.

    ಬೇಬಿ ಬಂಪ್‌ನೊಂದಿಗೆ ಬ್ಲ್ಯಾಕ್ ಗೌನ್‌ನಲ್ಲಿ ಮಿಂಚಿದ ಕಿಯಾರಾ
    ಬಾಲಿವುಡ್ ಬೆಡಗಿ ಕಿಯಾರಾ ಅಡ್ವಾಣಿ(Kiara Advani) ಬೇಬಿ ಬಂಪ್‌ನೊಂದಿಗೆ ಗೋಲ್ಡ್ ವಿಥ್ ಬ್ಲ್ಯಾಕ್ ಕಲರ್‌ನ ಆಫ್-ಶೋಲ್ಡರ್ ಗೌನ್‌ನಲ್ಲಿ ಮೆಟ್ ಗಾಲಾದಲ್ಲಿ ಕಾಣಿಸಿಕೊಂಡರು. ಫ್ಯಾಷನ್ ಜಗತ್ತಿನ ಅತಿ ದೊಡ್ಡ ಕಾರ್ಯಕ್ರಮದಲ್ಲಿ ಕಿಯಾರಾ ಭಾರತೀಯ ವಸ್ತ್ರ ವಿನ್ಯಾಸಕ ಗೌರವ್ ಗುಪ್ತಾ ವಿನ್ಯಾಸಗೊಳಿಸಿದ್ದ ಗೌನ್ ಧರಿಸಿದ್ದರು. ಈ ಫ್ಯಾಷನ್ ನೈಟ್‌ನಲ್ಲಿ ಕಿಯಾರ ಪ್ರೆಗ್ನೆನ್ಸಿ ಗ್ಲೋನಲ್ಲಿ ಕಂಗೊಳಿಸಿದ್ದು ವಿಶೇಷವಾಗಿತ್ತು.

    ಬಾಲಿವುಡ್ `ಕಿಂಗ್ ಖಾನ್’ ಐಕಾನಿಕ್ ಲುಕ್
    ಮೆಟ್ ಗಾಲಾದ ಬ್ಲೂ ಕಾರ್ಪೆಟ್‌ನಲ್ಲಿ ಭಾಗವಹಿಸಿದ ಮೊದಲ ಭಾರತೀಯ ನಟ ಎಂಬ ಹೆಗ್ಗಳಿಕೆಗೆ ಬಾಲಿವುಡ್‌ನ ಕಿಂಗ್ ಖಾನ್ ಎಂದೇ ಖ್ಯಾತಿ ಪಡೆದಿರುವ ನಟ ಶಾರುಖ್ ಖಾನ್(Shah Rukh Khan) ಪಾತ್ರರಾಗಿದ್ದಾರೆ. ಶಾರುಖ್ ಖಾನ್ ವಸ್ತ್ರ ವಿನ್ಯಾಸಕ ಸಬ್ಯಸಾಚಿ ಮುಖರ್ಜ ವಿನ್ಯಾಸಗೊಳಿಸಿದ ಬ್ಲಾಕ್ ಸ್ಟೈಲೀಶ್ ಸೂಟ್‌ನಲ್ಲಿ ಮಿಂಚಿದ್ದರು. ಇನ್ನು ಡ್ರೆಸ್‌ಗೆ `K’ ಎಂಬ ಲಾಕೆಟ್ ಇರುವ ಚೈನ್ ಮ್ಯಾಚ್ ಮಾಡಿದ್ದರು.

    ಕ್ಲಾಸಿಕ್ ಹಾಲಿವುಡ್ ಸ್ಟೈಲ್‌ನಲ್ಲಿ ಪ್ರಿಯಾಂಕಾ ಚೋಪ್ರಾ
    ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ(Priyanka Chopra) ಅವರು ಪತಿ ನಿಕ್ ಜೋನಸ್‌ರೊಂದಿಗೆ(Nik Jonas) ಕ್ಲಾಸಿಕ್ ಹಾಲಿವುಡ್ ಸ್ಟೈಲ್‌ನ ಬಿಳಿ ಹಾಗೂ ಕಪ್ಪು ಚುಕ್ಕೆಯ ಡ್ರೆಸ್‌ನಲ್ಲಿ ಕಾಣಿಸಿಕೊಂಡಿದ್ದರು. 2017ರಲ್ಲಿ ಮೊದಲ ಬಾರಿಗೆ ಮೆಟ್ ಗಾಲಾದಲ್ಲಿ ಭಾಗವಹಿಸಿದ್ದರು. ಈ ಬಾರಿಯ ಮೆಟ್ ಗಾಲಾ ಅವರಿಗೆ 5ನೇ ಶೋ ಆಗಿದೆ. ಇನ್ನು ಪ್ರಿಯಾಂಕಾ ಅವರ ಪತಿ ನಿಕ್ ಜೋನಸ್ ಟೈಲರ್ಡ್ ಸೂಟ್‌ನಲ್ಲಿ ಪತ್ನಿಗೆ ಮ್ಯಾಚ್ ಮಾಡಿದ್ದರು.

    ಮೆಟ್ ಗಾಲಾದಲ್ಲಿ ಕಾಣಿಸಿಕೊಂಡ ಅಂಬಾನಿ ಪುತ್ರಿ
    ಮುಕೇಶ್ ಅಂಬಾನಿ ಮತ್ತು ನೀತಾ ಅಂಬಾನಿಯ ಏಕೈಕ ಪುತ್ರಿ ಇಶಾ ಅಂಬಾನಿ(Isha Ambani) ಸಹ ಮೆಟ್ ಗಾಲಾದಲ್ಲಿ ವಿಶಿಷ್ಟ ಉಡುಪು ಹಾಗೂ ಆಭರಣದಲ್ಲಿ ಎಲ್ಲರ ಗಮನ ಸೆಳೆದರು. ಇಶಾ ಅಂಬಾನಿ ಧರಿಸಿದ್ದ ಉಡುಪನ್ನು ಖ್ಯಾತ ಭಾರತೀಯ ವಸ್ತ್ರ ವಿನ್ಯಾಸಕಿ ಅನಾಮಿಕಾ ಖನ್ನಾ ವಿನ್ಯಾಸಗೊಳಿಸಿದ್ದರು. ಇಶಾ ಧರಿಸಿದ್ದ ಬಿಳಿ ಬಣ್ಣದ ಕಾರ್ಸೆಟ್, ಕಪ್ಪು ಬಣ್ಣದ ಟೇಲರ್ಡ್ ಪ್ಯಾಂಟ್ ಹಾಗೂ ಉದ್ದದ ಅಲಂಕೃತ ಕೇಪ್ ಉಡುಪಿನ ಪ್ರಮುಖ ಆಕರ್ಷಣೆಯಾಯಿತು. ಈ ಡ್ರೆಸ್‌ಗೆ ದುಬಾರಿ ಬೆಲೆಯ ಆಭರಣಗಳನ್ನು ಧರಿಸಿ ಕ್ಲಾಸಿಕ್ ಲುಕ್ ನೀಡಿದ್ದರು.

    ಪಂಜಾಬಿ ಸ್ಟೈಲ್‌ ಡ್ರೆಸ್‌ನಲ್ಲಿ ದಿಲ್ಜಿತ್ ದೋಸಾಂಜ್
    ಪಂಜಾಬ್‌ನ ಖ್ಯಾತ ಗಾಯಕ ದಿಲ್ಜಿತ್ ದೋಸಾಂಜ್(Diljit Dosanjh) ಪೇಟ ಧರಿಸಿ ಥೇಟ್ ಪಂಜಾಬಿ ಲುಕ್‌ನಲ್ಲಿ ಕಾಣಿಸಿಕೊಂಡಿದ್ದರು. ಇವರು ತಮ್ಮ ಸಂಸ್ಕೃತಿ ಹಾಗೂ ಪರಂಪರೆಯನ್ನು ಮೆಟ್ ಗಾಲಾ ಫ್ಯಾಷನ್ ನೈಟ್‌ನಲ್ಲಿ ಪ್ರತಿನಿಧಿಸಿದ್ದರು. ಇವರ ಈ ವಸ್ತ್ರ ವಿನ್ಯಾಸವನ್ನು ಪ್ರಬಲ್ ಗುರುಂಗ್ ಅವರು ಮಾಡಿದ್ದಾರೆ. ಬಿಳಿ ಹಾಗೂ ಗೋಲ್ಡ್ ಬಣ್ಣದ ಶೆರ್ವಾಣಿ ವಿನ್ಯಾಸದ ಉಡುಪು ಧರಿಸಿದ್ದ ದಿಲ್ಜಿತ್, ಹಸಿರು ಬಣ್ಣದ ಹರಳುಗಳಿರುವ ಜ್ಯುವೆಲರಿಯನ್ನು ಮ್ಯಾಚ್ ಮಾಡಿದ್ದರು.

    ಗಾರಾ ಉಡುಪಿನಲ್ಲಿ ನತಾಶಾ ಪೂನಾವಾಲ್ಲಾ
    ನತಾಶಾ ಪೂನಾವಾಲ್ಲಾ(Natasha Poonawalla) ಅವರು ಮೆಟ್ ಗಾಲಾದಲ್ಲಿ ಪಾರ್ಸಿಯ ಗಾರಾ ಉಡುಪಿನಲ್ಲಿ ಮಿಂಚಿದರು. ಈ ಉಡುಪಿನ ಕೇಂದ್ರಬಿಂದುವೇನೆಂದರೆ ಫಿಶ್‌ಟೇಲ್ ಸ್ಕರ್ಟ್ ಹಾಗೂ 2 ವಿಂಟೇಜ್ ಗಾರಾ ಸೀರೆಯಲ್ಲಿ ಈ ವಸ್ತ್ರ ವಿನ್ಯಾಸವನ್ನು ಮಾಡಲಾಗಿತ್ತು. ಇದರ ಸ್ಕರ್ಟ್‌ನ ಸಂಪೂರ್ಣ ವಿನ್ಯಾಸವನ್ನು ಕೈ ಕಸೂತಿಯಿಂದಲೇ ಮಾಡಲಾಗಿದೆ. ಇದರಲ್ಲಿ ಇನ್ನೊಂದು ವಿಶೇಷವೆಂದರೆ ಕತ್ತಿನ ಭಾಗಕ್ಕೆ ಕಮಲದ ಆಕಾರವನ್ನು ಹೋಲುವ ಮಳೆಹನಿಯಂತೆ ನೇತಾಡುವ ಮುತ್ತುಗಳನ್ನು ಜೋಡಿಸಲಾಗಿತ್ತು. ನತಾಶಾ ಪೂನಾವಾಲ್ಲಾ ಅವರ ಮೆಟ್ ಗಾಲಾದ ವಸ್ತ್ರ ವಿನ್ಯಾಸವನ್ನು ಮನೀಶ್ ಮಲ್ಹೋತ್ರಾ ಮಾಡಿದ್ದಾರೆ.

    ಈ ಬಾರಿ ನ್ಯೂಯಾರ್ಕ್‌ನಲ್ಲಿ ನಡೆದ ಮೆಟ್ ಗಾಲಾ ಫ್ಯಾಷನ್ ನೈಟ್‌ನಲ್ಲಿ ಬಾಲಿವುಡ್ ತಾರೆಯರು ವಿಭಿನ್ನ ಹಾಗೂ ವಿಶಿಷ್ಟ ವಸ್ತ್ರ ವಿನ್ಯಾಸದಲ್ಲಿ ಕಂಗೊಳಿಸಿದರು. ಈ ಮೆಟ್ ಗಾಲಾದಲ್ಲಿ ದೇಶ-ವಿದೇಶದ ಫ್ಯಾಷನ್ ಮಾಡೆಲ್ಸ್, ಸೆಲೆಬ್ರಿಟಿಸ್ ಭಾಗಿಯಾಗಿದ್ದರು.

  • Met Gala 2025: ರೆಡ್ ಕಾರ್ಪೆಟ್‌ನಲ್ಲಿ ಶಾರುಖ್ ಖಾನ್ ಸ್ಟೈಲಿಶ್ ಲುಕ್

    Met Gala 2025: ರೆಡ್ ಕಾರ್ಪೆಟ್‌ನಲ್ಲಿ ಶಾರುಖ್ ಖಾನ್ ಸ್ಟೈಲಿಶ್ ಲುಕ್

    ಬಾಲಿವುಡ್ ನಟ ಶಾರುಖ್ ಖಾನ್ (Shah Rukh Khan) ಮೊದಲ ಬಾರಿಗೆ ‘ಮೆಟ್ ಗಾಲಾ 2025’ರ (Met Gala 2025) ಫ್ಯಾಷನ್ ಹಬ್ಬದಲ್ಲಿ ಭಾಗಿಯಾಗಿದ್ದಾರೆ. ಸ್ಟೈಲೀಶ್ ಲುಕ್‌ನಲ್ಲಿ ಶಾರುಖ್ ಮಿಂಚಿದ್ದಾರೆ. ಕಿಂಗ್ ಖಾನ್ ಫ್ಯಾಷನ್ ಲುಕ್‌ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.‌ ಇದನ್ನೂ ಓದಿ:ರಮೇಶ್ ಅರವಿಂದ್ ನಟನೆಯ ‘ದೈಜಿ’ ಚಿತ್ರದಲ್ಲಿ ದಿಗಂತ್

    ಪ್ರತಿ ವರ್ಷದಂತೆ ಈ ವರ್ಷವು ಕೂಡ ‘ಮೆಟ್ ಗಾಲಾ 2025’ ಫ್ಯಾಷನ್ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯುತ್ತಿದೆ. ದೇಶ- ವಿದೇಶಗಳಿಂದ ಸೆಲೆಬ್ರಿಟಿಗಳು ಆಗಮಿಸುತ್ತಿದ್ದಾರೆ. ಈ ಸಾಲಿನಲ್ಲಿ ಶಾರುಖ್ ಖಾನ್ ಕೂಡ ಭಾಗಿಯಾಗಿದ್ದಾರೆ. ಮೊದಲ ಬಾರಿಗೆ ಈ ಫ್ಯಾಷನ್ ಹಬ್ಬದಲ್ಲಿ ಅವರು ಭಾಗಿಯಾಗಿದ್ದಾರೆ. ಇದನ್ನೂ ಓದಿ:ಅಭಿಮಾನಿ ಕಡೆ ಗನ್ ಇಟ್ಟ ದಳಪತಿ ವಿಜಯ್ ಬಾಡಿಗಾರ್ಡ್!

    ಮೆಟ್ ಗಾಲಾ ರೆಡ್ ಕಾರ್ಪೆಟ್‌ನಲ್ಲಿ ಕಪ್ಪು ಬಣ್ಣದ ಉಡುಗೆಯಲ್ಲಿ ಶಾರುಖ್ ಸ್ಟೈಲೀಶ್ ಆಗಿ ಪೋಸ್ ನೀಡಿದ್ದಾರೆ. ಕಣ್ಣಿಗೆ ಕೂಲಿಂಗ್ ಗ್ಲಾಸ್, ಕೊರಳಿನಲ್ಲಿ ಕೆ ಪದವಿರುವ ಸರ ಧರಿಸಿದ್ದಾರೆ. ಕೈಯಲ್ಲಿ ಚೆಂದದ ಸ್ಟಿಕ್ ಹಿಡಿದು ಅವರು ಫೋಟೋಗೆ ವಿವಿಧ ಭಂಗಿಯಲ್ಲಿ ಪೋಸ್ ನೀಡಿದ್ದಾರೆ. 59ರ ವಯಸ್ಸೂ ಫಿಟ್ ಆಗಿರೋ ಶಾರುಖ್ ಅವರನ್ನು ನೋಡಿ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

    ಈ ಕಾರ್ಯಕ್ರಮಕ್ಕೆ ಬೇಬಿ ಬಂಪ್‌ನೊಂದಿಗೆ ಕಿಯಾರಾ ಅಡ್ವಾಣಿ, ನಿಕ್ ಜೋನಸ್ ಮತ್ತು ಪ್ರಿಯಾಂಕಾ ಚೋಪ್ರಾ ದಂಪತಿ, ಸಿದ್ಧಾರ್ಥ್ ಮಲ್ಹೋತ್ರಾ ಸೇರಿದಂತೆ ಅನೇಕರು ಭಾಗಿಯಾಗಿದ್ದಾರೆ.

    ಅಂದದಾಗೆ, ಶಾರುಖ್ ಖಾನ್ ಪ್ರಸ್ತುತ ‘ಕಿಂಗ್’ ಸಿನಿಮಾದಲ್ಲಿ ತೊಡಗಿಸಿಕೊಂಡಿದ್ದಾರೆ. ಮಗಳು ಸುಹಾನಾರನ್ನು ಈ ಚಿತ್ರದ ಮೂಲಕ ಲಾಂಚ್ ಮಾಡಲು ಮುಂದಾಗಿದ್ದಾರೆ.

    200 ಕೋಟಿ ರೂ. ಬಜೆಟ್‌ನಲ್ಲಿ ನಿರ್ಮಾಣ ಮಾಡುತ್ತಿರುವ ಕಿಂಗ್ ಚಿತ್ರದಲ್ಲಿ ದೀಪಿಕಾ ಪಡುಕೋಣೆ ಕೂಡ ಪವರ್‌ಫುಲ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಒಟ್ನಲ್ಲಿ ಮೊದಲ ಸಿನಿಮಾದಲ್ಲೇ ಮಗಳು ಗೆದ್ದು ಬೀಗಬೇಕು ಎಂದು ಅದ್ಧೂರಿಯಾಗಿ ಶಾರುಖ್ ನಿರ್ಮಾಣ ಮಾಡ್ತಿದ್ದಾರೆ.

  • ಮತ್ತೆ ಬೆಳ್ಳಿಪರದೆಯಲ್ಲಿ ಮಿಂಚಲು ಸಜ್ಜಾದ ದೀಪಿಕಾ ಪಡುಕೋಣೆ

    ಮತ್ತೆ ಬೆಳ್ಳಿಪರದೆಯಲ್ಲಿ ಮಿಂಚಲು ಸಜ್ಜಾದ ದೀಪಿಕಾ ಪಡುಕೋಣೆ

    ‘ಪಠಾಣ್’ ಬೆಡಗಿ ದೀಪಿಕಾ ಪಡುಕೋಣೆ‌ (Deepika Padukone) ಬಗ್ಗೆ ಫ್ಯಾನ್ಸ್‌ಗೆ ಗುಡ್ ನ್ಯೂಸ್‌ವೊಂದು ಸಿಕ್ಕಿದೆ. ಮಗುವಿನ ಆರೈಯಲ್ಲಿ ಬ್ಯುಸಿಯಾಗಿದ್ದ ದೀಪಿಕಾ ಮತ್ತೆ ಕ್ಯಾಮೆರಾ ಮುಂದೆ ಬರಲು ಸಜ್ಜಾಗಿದ್ದಾರೆ. ಇದನ್ನೂ ಓದಿ:ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ: ಉಗ್ರರ ದಾಳಿ ಖಂಡಿಸಿದ ಶ್ರೀನಿಧಿ ಶೆಟ್ಟಿ

    ಕಳೆದ ಸೆಪ್ಟೆಂಬರ್‌ನಲ್ಲಿ ಹೆಣ್ಣು ಮಗುವಿಗೆ ನಟಿ ಜನ್ಮ ನೀಡಿದ್ದರು. ಈ ಹಿನ್ನೆಲೆ ನಟನೆಯಿಂದ ದೀಪಿಕಾ ಬ್ರೇಕ್ ಪಡೆದುಕೊಂಡಿದ್ದರು. ಇದೀಗ ಮತ್ತೆ ಶಾರುಖ್ ಖಾನ್ ಸಿನಿಮಾದಲ್ಲಿ ಅವರು ನಟಿಸಲಿದ್ದಾರೆ ಎನ್ನಲಾಗಿದೆ. ಹೀಗೊಂದು ಸುದ್ದಿ ಇದೀಗ ಹರಿದಾಡುತ್ತಿದೆ. ಇದನ್ನೂ ಓದಿ:ಪ್ರಶಾಂತ್ ನೀಲ್, ಜ್ಯೂ.ಎನ್‌ಟಿಆರ್ ಸಿನಿಮಾದ ರಿಲೀಸ್ ಡೇಟ್ ಅನೌನ್ಸ್

    ಶಾರುಖ್ ನಟನೆಯ ‘ಕಿಂಗ್’ (King) ಸಿನಿಮಾದಲ್ಲಿ ಪ್ರಮುಖ ಪಾತ್ರವೊಂದಕ್ಕೆ ನಟಿಸಲು ನಟಿಯ ಜೊತೆ ಚಿತ್ರತಂಡ ಚರ್ಚಿಸಲಾಗಿದೆಯಂತೆ. ಈ ಚಿತ್ರದಲ್ಲಿ ನಟಿಸಲು ಅವರು ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ. ಮೇ 18ರಿಂದ ‘ಕಿಂಗ್’ ಚಿತ್ರದ ಶೂಟಿಂಗ್‌ಗೆ ಪ್ಲ್ಯಾನ್ ಮಾಡಲಾಗಿದೆ. ಅಕ್ಟೋಬರ್‌ನಲ್ಲಿ ದೀಪಿಕಾ ಪಾತ್ರದ ಚಿತ್ರೀಕರಣ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಚಿತ್ರತಂಡದ ಕಡೆಯಿಂದ ಅಧಿಕೃತ ಮಾಹಿತಿ ಹೊರಬೀಳಬೇಕಿದೆ.

    ಕಳೆದ ವರ್ಷ ಕಲ್ಕಿ 2898 ಎಡಿ, ಸಿಂಗಂ ಅಗೈನ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಕಡೆಯದಾಗಿ ನಟಿಸಿದ್ದರು.

  • ಪಹಲ್ಗಾಮ್ ಉಗ್ರರ ದಾಳಿ ಖಂಡಿಸಿದ ಬಾಲಿವುಡ್ ಸ್ಟಾರ್ಸ್‌

    ಪಹಲ್ಗಾಮ್ ಉಗ್ರರ ದಾಳಿ ಖಂಡಿಸಿದ ಬಾಲಿವುಡ್ ಸ್ಟಾರ್ಸ್‌

    ಹಲ್ಗಾಮ್‌ನಲ್ಲಿ (Pahalgam Terrorist Attack) ನಡೆದಿರುವ ವಿಶ್ವಾಸಘಾತುಕ ಕೃತ್ಯ ಮತ್ತು ಅಮಾನವೀಯ ಹಿಂಸಾಚಾರದ ಬಗ್ಗೆ ದುಃಖ ಮತ್ತು ಕೋಪವನ್ನು ವ್ಯಕ್ತಪಡಿಸಲು ಪದಗಳು ಸಾಲದು ಎಂದು ಶಾರುಖ್ ಖಾನ್ ಖಂಡಿಸಿದ್ದಾರೆ. ಉಗ್ರರ ಅಟ್ಟಹಾಸದ ಕುರಿತು ಶಾರುಖ್, ಸಲ್ಮಾನ್ ಖಾನ್ ಸೇರಿದಂತೆ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಪಹಲ್ಗಾಮ್‌ನಲ್ಲಿ ನಡೆದ ಹಿಂಸಾಚಾರದ ಬಗ್ಗೆ ದುಃಖ ಮತ್ತು ಕೋಪವನ್ನು ವ್ಯಕ್ತಪಡಿಸಲು ಪದಗಳಿಲ್ಲ. ದುಃಖದಲ್ಲಿರುವ ಕುಟುಂಬಗಳಿಗೆ ದೇವರಲ್ಲಿ ಪ್ರಾರ್ಥಿಸೋಣ. ಈ ಹೇಯ ಕೃತ್ಯದ ವಿರುದ್ಧ ನಾವು ಒಗ್ಗಟ್ಟಾಗಿ, ಬಲವಾಗಿ ನಿಂತು ಈ ಕೃತ್ಯ ಮಾಡಿದವರಿಗೆ ತಕ್ಕ ಶಾಸ್ತಿಯಾಗಲಿ ಎಂದು ಹಾರೈಸೋಣ ಎಂದು ಶಾರುಖ್ ಖಾನ್ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

    ಭೂಮಿಯ ಮೇಲಿನ ಸ್ವರ್ಗವಾದ ಕಾಶ್ಮೀರ ನರಕವಾಗಿ ಬದಲಾಗುತ್ತಿದೆ. ಅಮಾಯಕ ಜನರನ್ನು ಗುರಿಯಾಗಿಸಿಕೊಂಡಿದ್ದಾರೆ. ನನ್ನ ಹೃದಯ ಅವರ ಕುಟುಂಬಗಳಿಗಾಗಿ ಮಿಡಿಯುತ್ತದೆ. ಒಬ್ಬ ಅಮಾಯಕ ವ್ಯಕ್ತಿಯನ್ನು ಕೊಲ್ಲುವುದು ಇಡೀ ರಾಷ್ಟ್ರವನ್ನೇ ಕೊಂದಂತೆ ಎಂದು ಸಲ್ಮಾನ್‌ ಖಾನ್‌ (Salman Khan) ಬರೆದಿದ್ದಾರೆ.

    ಕಂಗನಾ ರಣಾವತ್ (Kangana Ranaut) ಹಂಚಿಕೊಂಡಿರುವ ಸ್ಟೋರಿಯಲ್ಲಿ, ಆ ದುರುಳರು ಅಮಾಯಕರ ಮೇಲೆ ದಾಳಿ ಮಾಡಿದ್ದಾರೆ. ಅಮಾಯಕರ ಮೇಲೆ ದಾಳಿ ಮಾಡಿ ನಪುಂಸಕತನ ಮೆರೆದಿದ್ದಾರೆ. ಇತಿಹಾಸದಲ್ಲಿ ಪ್ರತಿ ಯುದ್ಧವೂ ಸಹ ಯುದ್ಧಭೂಮಿಯಲ್ಲೇ ನಡೆದಿದೆ. ಆದರೆ ಈ ನಪುಂಸಕರು ಅಮಾಯಕರ ಮೇಲೆ ನಿರಸ್ತ್ರರಾಗಿರುವವರ ಮೇಲೆ ದಾಳಿ ಮಾಡಿದ್ದಾರೆ. ಯುದ್ಧಭೂಮಿಯ ಹೊರಗೆ ಕಾದಾಟ ಮಾಡುತ್ತಿರುವ ಈ ನಪುಂಸಕರ ಮೇಲೆ ಯುದ್ಧವಾದರೂ ಮಾಡುವುದು ಹೇಗೆ ಎಂದು ಪ್ರಶ್ನೆ ಮಾಡಿದ್ದಾರೆ. ಭಯೋತ್ಪಾದಕರಿಗೆ ಧರ್ಮ ಇದೆ, ಸಂತ್ರಸ್ತರಿಗೂ ಧರ್ಮ ಇದೆ ಎಂದಿದ್ದಾರೆ. ಭಯೋತ್ಪಾದಕರ ಧರ್ಮದ ಬಗ್ಗೆ ಬಹಿರಂಗವಾಗಿ ಹೇಳದೆ, ಮುಸ್ಲಿಂ ಭಯೋತ್ಪಾದಕರಿಂದ ಹಿಂದುಗಳು ದಶಕಗಳಿಂದಲೂ ಜೀವ ಕಳೆದುಕೊಳ್ಳುತ್ತಿದ್ದಾರೆ ಎಂದಿದ್ದಾರೆ.

     

    View this post on Instagram

     

    A post shared by Priyanka (@priyankachopra)

    ಪ್ರಿಯಾಂಕಾ ಚೋಪ್ರಾ (Priyanka Chopra) ಹಂಚಿಕೊಂಡಿರುವ ಪೋಸ್ಟ್‌ನಲ್ಲಿ ಪಹಲ್ಗಾಮ್ ದಾಳಿಯ ಸುದ್ದಿ ಕೇಳಿ ತೀವ್ರ ದುಃಖವಾಗಿದೆ. ಇದೊಂದು ಅತ್ಯಂತ ಹೇಯ ಕೃತ್ಯ ಎಂದು ಬರೆದುಕೊಂಡಿದ್ದಾರೆ. ಭಯೋತ್ಪಾದನೆಯ ಈ ಅಮಾನವೀಯ ಕೃತ್ಯವನ್ನು ಅವರು ಖಂಡಿಸಿದ್ದಾರೆ. ಈ ದುಃಖದ ಸಮಯದಲ್ಲಿ ನನ್ನ ಆಲೋಚನೆಗಳು ಮತ್ತು ಪ್ರಾರ್ಥನೆಗಳು ಸಂತ್ರಸ್ತರ ಕುಟುಂಬದೊಂದಿಗೆ ಇವೆ. ಗಾಯಗೊಂಡಿರುವ ದಂಪತಿಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.

     

    View this post on Instagram

     

    A post shared by Anupam Kher (@anupampkher)

    ಈ ಬಗ್ಗೆ ಅನುಪಮ್ ಖೇರ್‌ (Anupam Kher) ಮಾತನಾಡಿ, ಇಂದು ಪಹಲ್ಗಾಮ್‌ನಲ್ಲಿ ಹಿಂದೂಗಳ ನರಮೇಧ ಆಗಿದೆ. 27 ಹಿಂದೂಗಳನ್ನು ಹುಡುಕಿ ಹುಡುಕಿ ಕೊಲ್ಲಲಾಗಿದೆ. ದುಃಖದ ಜೊತೆ ಕ್ರೋಧ, ಸಿಟ್ಟು ಬರುತ್ತದೆ. ನಾನು ಇದನ್ನು ಜೀವನದಲ್ಲಿ ಬಹಳಷ್ಟು ನೋಡಿದ್ದೇನೆ. ಕಾಶ್ಮೀರದಲ್ಲಿ ಹಿಂದೂಗಳ ಜನರೊಂದಿಗೆ ಜೊತೆ ಹೀಗೆ ಆಗ್ತಾನೇ ಇದೆ. ‘ಕಾಶ್ಮೀರ್ ಫೈಲ್ಸ್’ ಅವರ ಕಥೆಯಾಗಿದ್ದು, ಇದನ್ನು ಸಿನಿಮಾ ಮಾಡಿದಾಗ ಪ್ರೊಪಗಾಂಡ ಎಂದು ಕರೆದ್ರಿ. ದೇಶದ ವಿವಿಧ ಭಾಗಗಳಿಂದ ಜನರು ತಮ್ಮ ರಜಾದಿನಗಳನ್ನು ಕಳೆಯಲು ಕುಟುಂಬದ ಜೊತೆ ಕಾಶ್ಮೀರಕ್ಕೆ ಬಂದರು. ಈ ವೇಳೆ, ಅವರ ಧರ್ಮವನ್ನು ತಿಳಿದು ಕೊಲ್ಲಲಾಗಿದೆ ಎಂದು ಕೃತ್ಯವನ್ನು ಖಂಡಿಸಿದ್ದಾರೆ.

    ಇದರ ಬಗ್ಗೆ ಮಾತನಾಡೋಕೆ ಶಬ್ದವೇ ಸಿಗೋದಿಲ್ಲ. ಪತಿಯ ಮೃತ ದೇಹದ ಜೊತೆಗಿದ್ದ ಮಹಿಳೆಯನ್ನು ನಾನು ಮರೆಯಲು ಸಾಧ್ಯವಿಲ್ಲ. ನಾನು ಪಲ್ಲವಿ ಜಿ ಅವರ ಸಂದರ್ಶನ ನೋಡಿದೆ. ಪತಿಯನ್ನ ಕಣ್ಣೆದುರೇ ಸಾಯಿಸಿದಾಗ ನನ್ನನ್ನು ನನ್ನ ಮಗನನ್ನು ಸಾಯಿಸಿ ಅಂದಾಗ, ನಿಮ್ಮನ್ನು ಸಾಯಿಸಲ್ಲ ಮೋದಿಗೆ ಹೋಗಿ ಹೇಳಿ ಅಂದ್ರಲ್ಲ. ಬಹುಶಃ ಅವನು ಒಂದು ಸಂದೇಶವನ್ನು ನೀಡಲು ಬಯಸಿದ್ದಿರಬಹುದು ಎಂದಿದ್ದಾರೆ. ಮೋದಿಯವರು ಹಾಗೂ ಅಮಿತ್ ಶಾ ಅವರ ಬಳಿ ನಾನು ಕೇಳಿಕೊಳ್ಳುವುದೇನಂದರೆ ಉಗ್ರರಿಗೆ ನಾವು ಎಂಥಹ ಪಾಠ ಕಲಿಸಬೇಕು ಅಂದರೆ ಇನ್ನೂ ಏಳು ಜನ್ಮ ಎತ್ತಿ ಬಂದ್ರೂ ಇಂಥಹ ದುಷ್ಟ ಕೆಲಸ ಮಾಡುವ ಯೋಚನೆನೇ ಅವರಿಗೆ ಬರಬಾರದು ಎಂದಿದ್ದಾರೆ.

  • ಟಿಬಿ ಜಾಗೃತಿ ಕ್ರಿಕೆಟ್ ಆಡಲಿದ್ದಾರೆ ಬಿಗ್ ಬಿ, ಎಸ್‌ಆರ್‌ಕೆ, ಸಲ್ಮಾನ್ ಖಾನ್

    ಟಿಬಿ ಜಾಗೃತಿ ಕ್ರಿಕೆಟ್ ಆಡಲಿದ್ದಾರೆ ಬಿಗ್ ಬಿ, ಎಸ್‌ಆರ್‌ಕೆ, ಸಲ್ಮಾನ್ ಖಾನ್

    50ಕ್ಕೂ ಹೆಚ್ಚು ಸೆಲೆಬ್ರಿಟಿಗಳು ಭಾಗಿ ನಿರೀಕ್ಷೆ

    ಕ್ಷಯರೋಗದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಟಿಬಿ ಮುಕ್ತ ಜಾಗೃತಿ ಕ್ರಿಕೆಟ್ (TB Awareness Cricet Match) ಪಂದ್ಯವು ಮಾ.22ರಂದು ಮುಂಬೈನ ಎಂಸಿಎ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಈ ವಿಶೇಷ ಕಾರ್ಯಕ್ರಮಕ್ಕೆ ಬಿಗ್‌ಬಿ, ಶಾರುಖ್ ಖಾನ್ (Shah Rukh Khan), ಸಲ್ಮಾನ್ ಖಾನ್ (Salman Khan), ರಣಬೀರ್ ಕಪೂರ್, ವಿಕ್ಕಿ ಕೌಶಲ್ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.

    ಮಾ.22ರಂದು ಬಿಜೆಪಿ ಸಂಸದ ಅನುರಾಗ್ ಠಾಕೂರ್ ಮತ್ತು ಬಾಲಿವುಡ್ ನಟ ಸುನೀಲ್ ಶೆಟ್ಟಿ (Suniel Shetty) ತಂಡಗಳ ನಡುವೆ ಮ್ಯಾಚ್ ನಡೆಯಲಿದೆ. ಈ ಎರಡು ತಂಡಗಳ ಜುಗಲ್‌ಬಂದಿ ವೀಕ್ಷಿಸಲು 50ಕ್ಕೂ ಹೆಚ್ಚು ಸೆಲೆಬ್ರಿಟಿಗಳು ಭಾಗವಹಿಸಲಿದ್ದಾರೆ. ಕ್ಷಯರೋಗದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ಕ್ರಿಕೆಟ್ ಪಂದ್ಯಾವಳಿ ಕಾರ್ಯಕ್ರಮ ನಡೆಯಲಿದೆ. 

    ಅಮೀರ್ ಖಾನ್, ಅಜಯ್ ದೇವಗನ್, ಸಂಜಯ್ ದತ್, ಅನಿಲ್ ಕಪೂರ್, ಸನ್ನಿ ಡಿಯೋಲ್, ಹೃತಿಕ್ ರೋಷನ್, ಜಾಕಿ ಶ್ರಾಫ್, ಸೈಫ್ ಅಲಿ ಖಾನ್, ಕಾರ್ತಿಕ್ ಆರ್ಯನ್, ಸಿದ್ಧಾರ್ಥ್ ಮಲ್ಹೋತ್ರಾ, ಅಭಿಷೇಕ್ ಬಚ್ಚನ್, ಶಾಹಿದ್ ಕಪೂರ್, ರೋಹಿತ್ ಶೆಟ್ಟಿ ಸೇರಿದಂತೆ ಅನೇಕರು ಈ ಕಾರ್ಯಕ್ರಮಕ್ಕೆ ಸಾಥ್ ನೀಡಲಿದ್ದಾರೆ.

  • ‘ಪುಷ್ಪ 2’ ನಿರ್ದೇಶಕನ ಜೊತೆ ಶಾರುಖ್ ಖಾನ್ ಸಿನಿಮಾ

    ‘ಪುಷ್ಪ 2’ ನಿರ್ದೇಶಕನ ಜೊತೆ ಶಾರುಖ್ ಖಾನ್ ಸಿನಿಮಾ

    ‘ಪುಷ್ಪ’, ‘ಪುಷ್ಪ 2’ (Pushpa 2) ಸಿನಿಮಾಗಳ ಸಕ್ಸಸ್ ಬಳಿಕ ಬಾಲಿವುಡ್‌ನ ಸ್ಟಾರ್ ನಟನಿಗೆ ನಿರ್ದೇಶನ ಮಾಡಲು ಸುಕುಮಾರ್ (Sukumar) ಸಜ್ಜಾಗಿದ್ದಾರೆ. ಬಾಲಿವುಡ್‌ನ ಟಾಪ್ ನಟರಲ್ಲಿ ಒಬ್ಬರಾಗಿರುವ ಶಾರುಖ್ ಖಾನ್‌ಗೆ (Sharukh Khan) ಸುಕುಮಾರ್ ಡೈರೆಕ್ಷನ್ ಮಾಡಲಿದ್ದಾರೆ ಎನ್ನಲಾದ ಸುದ್ದಿಯೊಂದು ಚರ್ಚೆಗೆ ಗ್ರಾಸವಾಗಿದೆ.

    ಗ್ರಾಮೀಣ ಭಾಗದ ರಾಜಕೀಯ ಕುರಿತಾದ ಕಥೆಯನ್ನು ಶಾರುಖ್ ಮೂಲಕ ತೋರಿಸಲು ಸುಕುಮಾರ್ ತಯಾರಿ ಮಾಡಿಕೊಳ್ತಿದ್ದಾರೆ ಎನ್ನಲಾಗಿದೆ. ಕಿಂಗ್ ಖಾನ್ ಶಾರುಖ್ ಕೂಡ ಕಥೆ ಇಷ್ಟವಾಗಿ ನಿರ್ದೇಶಕನಿಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಇಬ್ಬರ ಕಡೆಯಿಂದ ಅಧಿಕೃತ ಅಪ್‌ಡೇಟ್ ಸಿಗುವವರೆಗೂ ಕಾದುನೋಡಬೇಕಿದೆ. ಇದನ್ನೂ ಓದಿ:ಪುಸ್ತಕ ರೂಪದಲ್ಲಿ ಪುನೀತ್‌ ರಾಜ್‌ಕುಮಾರ್ ಜೀವನಗಾಥೆ- ‘ಅಪ್ಪು’ ಜೀವನ ಚರಿತ್ರೆ ಬರೆದ ಅಶ್ವಿನಿ

    ಇನ್ನೂ ಮಗಳು ಸುಹಾನಾರನ್ನು ಅದ್ಧೂರಿಯಾಗಿ ಲಾಂಚ್ ಮಾಡಬೇಕೆಂದಿದ್ದಾರೆ. ಅದಕ್ಕಾಗಿ ‘ಕಿಂಗ್’ ಸಿನಿಮಾದಲ್ಲಿ ಮಗಳೊಂದಿಗೆ ಶಾರುಖ್ ಕೂಡ ಜೊತೆಯಾಗಿ ಕಾಣಿಸಿಕೊಳ್ತಿದ್ದಾರೆ. ಆ ನಂತರ ‘ಪಠಾಣ್ 2’ ಮತ್ತು ಸುಕುಮಾರ್ ಜೊತೆಗಿನ ಸಿನಿಮಾದತ್ತ ಗಮನ ಕೊಡಲಿದ್ದಾರೆ.

    ಸುಕುಮಾರ್ ಅವರು ರಾಮ್ ಚರಣ್ ಜೊತೆಗಿನ ಸಿನಿಮಾ ಹಾಗೂ ‘ಪುಷ್ಪ ಪಾರ್ಟ್ 3’ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಆ ನಂತರ ಶಾರುಖ್ ಜೊತೆ ಕೈಜೋಡಿಸಲಿದ್ದಾರೆ ಎನ್ನಲಾಗಿದೆ. ತೆಲುಗಿನಲ್ಲಿ ಗೆದ್ದು ಬೀಗಿದ ಹಾಗೇ ಬಾಲಿವುಡ್‌ನಲ್ಲೂ ಸದ್ದು ಮಾಡ್ತಾರಾ? ಸುಕುಮಾರ್‌ ಎಂದು ಕಾದುನೋಡಬೇಕಿದೆ.

  • ಕಣ ಕಣದಲ್ಲಿ ಕೇಸರಿ ಎಂದ ಮೂವರು ಬಾಲಿವುಡ್ ಸ್ಟಾರ್ ನಟರಿಗೆ ನೋಟಿಸ್

    ಕಣ ಕಣದಲ್ಲಿ ಕೇಸರಿ ಎಂದ ಮೂವರು ಬಾಲಿವುಡ್ ಸ್ಟಾರ್ ನಟರಿಗೆ ನೋಟಿಸ್

    ಜೈಪುರ: ಕಣ ಕಣದಲ್ಲಿ ಕೇಸರಿ ಎಂದು ಗುಟ್ಕಾ ಜಾಹೀರಾತು ನೀಡುತ್ತಿದ್ದ ಬಾಲಿವುಡ್ ನಟರಾದ ಶಾರುಖ್ ಖಾನ್ (Shah Rukh Khan), ಅಜಯ್ ದೇವಗನ್ (Ajay Devgn) ಮತ್ತು ಟೈಗರ್ ಶ್ರಾಫ್‌ಗೆ (Tiger Shroff) ಸಂಕಷ್ಟ ಎದುರಾಗಿದೆ. ಗಂಭೀರ ಕಾನೂನು ಪ್ರಕರಣವೊಂದರಲ್ಲಿ ಜೈಪುರ ಜಿಲ್ಲಾ ಗ್ರಾಹಕ ಆಯೋಗ ಸಂಖ್ಯೆ-2 ಮೂವರು ನಟರಿಗೆ ನೋಟಿಸ್ ಜಾರಿ ಮಾಡಿದೆ.

    ಮೂವರು ನಟರ ಜೊತೆಗೆ ಗುಟ್ಕಾ ತಯಾರಿಕಾ ಕಂಪನಿ ಜೆಬಿ ಇಂಡಸ್ಟ್ರೀಸ್‌ಗೆ ಸಹ ಸಮನ್ಸ್ ಕಳುಹಿಸಲಾಗಿದೆ. ಆಯೋಗವು ಎಲ್ಲರೂ ಇದೇ ಮಾರ್ಚ್ 19ರಂದು ಹಾಜರಾಗುವಂತೆ ಸೂಚನೆ ನೀಡಿದೆ.ಇದನ್ನೂ ಓದಿ: ನಾರಿ ಶಕ್ತಿಗೆ ನನ್ನ ನಮನ – ಮಹಿಳೆಯರಿಗೆ ಪ್ರಧಾನಿ ಸೇರಿ ಗಣ್ಯರಿಂದ ಶುಭಾಶಯ

    ಗುಟ್ಕಾ ಉತ್ಪನ್ನವು ಆರೋಗ್ಯಕ್ಕೆ ಹಾನಿಕಾರಕವಾಗಿದ್ದರೂ ಅದರಲ್ಲಿ ಕೇಸರಿ ಇದೆ ಎಂದು ದಾರಿತಪ್ಪಿಸುವ ಹೇಳಿಕೆಗಳನ್ನು ನೀಡುವ ಜಾಹೀರಾತು ಪ್ರಕಟಿಸಲಾಗುತ್ತಿದೆ ಎಂದು ಆರೋಪಿಸಿ ಜೈಪುರ ನಿವಾಸಿ ಯೋಗೇಂದ್ರ ಸಿಂಗ್ ಬಡಿಯಾಲ್ ಜಿಲ್ಲಾ ಗ್ರಾಹಕ ಆಯೋಗಕ್ಕೆ ದೂರು ನೀಡಿದ್ದು, ದೂರಿನ ಅನ್ವಯ ನೋಟಿಸ್ ನೀಡಲಾಗಿದೆ.

    ಮೂವರು ಬಾಲಿವುಡ್ ನಟರು ಈ ಗುಟ್ಕಾ ಬ್ರ‍್ಯಾಂಡ್ ಅನ್ನು ಪ್ರಚಾರ ಮಾಡುತ್ತಿದ್ದು, ಗ್ರಾಹಕರನ್ನು ಖರೀದಿಸುವಂತೆ ಆಕರ್ಷಿಸುತ್ತಿದ್ದಾರೆ. ಗುಟ್ಕಾ ಉತ್ಪನ್ನವು ಆರೋಗ್ಯಕ್ಕೆ ಹಾನಿಕಾರಕವಾಗಿದ್ದರೂ ಅದರಲ್ಲಿ ಕೇಸರಿ ಇದೆ ಎಂದು ದಾರಿತಪ್ಪಿಸುತ್ತಿದ್ದಾರೆ. ಈ ದಾರಿತಪ್ಪಿಸುವ ಜಾಹೀರಾತು ಗ್ರಾಹಕ ಸಂರಕ್ಷಣಾ ಕಾಯ್ದೆ 2019 ಅನ್ನು ಉಲ್ಲಂಘಿಸುತ್ತದೆ ಮತ್ತು ಸಾರ್ವಜನಿಕರನ್ನು ದಾರಿತಪ್ಪಿಸುತ್ತದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದೆ.

    ಈ ಮೂವರು ನಟರು ಬಹಳ ಸಮಯದಿಂದ ಪಾನ್ ಮಸಾಲಾ ಮತ್ತು ಗುಟ್ಕಾ ಕಂಪನಿಯ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಾರೆ. “ಟೇಸ್ಟ್ ಆಫ್ ಬಿಗ್ ಬ್ರಾಂಡ್ಸ್” ಎಂಬ ಟ್ಯಾಗ್‌ಲೈನ್ ಅಡಿಯಲ್ಲಿ ಈ ಜಾಹೀರಾತುಗಳು ಇದನ್ನು “ಕೇಸರ್” ಉತ್ಪನ್ನವೆಂದು ಪ್ರಚಾರ ಮಾಡುತ್ತವೆ. ಆದರೆ ವಾಸ್ತವದಲ್ಲಿ ಇದು ಗುಟ್ಕಾ ಉತ್ಪನ್ನಗಳ ಪ್ರಚಾರವಾಗಿದೆ ಎಂದು ಯೋಗೇಂದ್ರ ಸಿಂಗ್ ಹೇಳಿದ್ದಾರೆ.

    ಕಾನೂನು ಪರಿಣಾಮ ಏನಾಗಬಹುದು?
    ಆಯೋಗದಲ್ಲಿ ಆರೋಪ ಸಾಬೀತಾದರೆ, ಈ ಜಾಹೀರಾತುಗಳನ್ನು ನಿಷೇಧಿಸಬಹುದು. ಇದರೊಂದಿಗೆ, ಸೆಲೆಬ್ರಿಟಿಗಳ ಮೇಲೆ ಆರ್ಥಿಕ ದಂಡವನ್ನು ವಿಧಿಸಬಹುದು. ಅದೇ ಸಮಯದಲ್ಲಿ, ಗ್ರಾಹಕ ಸಂರಕ್ಷಣಾ ಕಾಯ್ದೆ 2019ರ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲು ಸಹ ಸಾಧ್ಯವಿದೆ.ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ಎರಡು ಬಣಗಳಿವೆ – ಪಕ್ಷದ ವೇದಿಕೆಯಲ್ಲೇ ರಾಹುಲ್ ಗಾಂಧಿ ಅಸಮಾಧಾನ

     

  • ಯಶ್ ನನ್ನ ಗೆಳೆಯ – ದುಬೈ ಅಭಿಮಾನಿಗಳ ಮುಂದೆ ಶಾರುಖ್ ಖಾನ್ ಮಾತು

    ಯಶ್ ನನ್ನ ಗೆಳೆಯ – ದುಬೈ ಅಭಿಮಾನಿಗಳ ಮುಂದೆ ಶಾರುಖ್ ಖಾನ್ ಮಾತು

    ‘ಕೆಜಿಎಫ್ 2′ (KGF 2) ಸಕ್ಸಸ್ ಬಳಿಕ ವಿಶ್ವಮಟ್ಟದಲ್ಲಿ ಯಶ್ (Yash) ಬೆಳೆದಿದ್ದಾರೆ. ಸದ್ಯ ಅವರು `ಟಾಕ್ಸಿಕ್’ ಸಿನಿಮಾದಲ್ಲಿ ತೊಡಗಿಸಿಕೊಂಡಿದ್ದಾರೆ. ಹೀಗಿರುವಾಗ ಯಶ್ ಕುರಿತು ಶಾರುಖ್ ಖಾನ್ ಆಡಿರುವ ಮಾತು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಯಶ್ ನನ್ನ ಗೆಳೆಯ ಎಂದು ದುಬೈ ಫ್ಯಾನ್ಸ್ ಮುಂದೆ ಶಾರುಖ್ ಮಾತನಾಡಿದ್ದಾರೆ.

    ದಕ್ಷಿಣ ಭಾರತದ ನನ್ನ ಫ್ಯಾನ್ಸ್‌ಗೆ.. ನನಗೆ ಕರ್ನಾಟಕ, ಕೇರಳ, ತೆಲಂಗಾಣ, ಆಂಧ್ರ, ತಮಿಳುನಾಡಿನಲ್ಲಿ ಸ್ನೇಹಿತರು ಇದ್ದಾರೆ. ಅಲ್ಲು ಅರ್ಜುನ್, ಪ್ರಭಾಸ್, ರಾಮ್ ಚರಣ್, ಯಶ್, ಮಹೇಶ್ ಬಾಬು, ದಳಪತಿ ವಿಜಯ್, ರಜನಿಕಾಂತ್, ಕಮಲ್ ಹಾಸನ್ ನನ್ನ ಸ್ನೇಹಿತರು. ಅವರಿಗೆಲ್ಲ ನಾನು ಒಂದು ಮನವಿ ಮಾಡಲು ಇಷ್ಟಪಡುತ್ತೇನೆ. ಅವರೆಲ್ಲ ತುಂಬಾ ವೇಗವಾಗಿ ನೃತ್ಯ ಮಾಡುವುದು ನಿಲ್ಲಿಸಬೇಕು. ಅವರಿಗೆ ಸಮನಾಗಿ ಡ್ಯಾನ್ಸ್ ಮಾಡಲು ನನಗೆ ಕಷ್ಟ ಆಗುತ್ತದೆ ಎಂದು ಶಾರುಖ್ ಖಾನ್ ನಗುತ್ತಾ ದುಬೈ ಈವೆಂಟ್‌ವೊಂದರಲ್ಲಿ ಮಾತನಾಡಿದ್ದಾರೆ. ಕಿಂಗ್ ಖಾನ್ ಆಡಿರುವ ಮಾತು ಸಖತ್ ವೈರಲ್ ಆಗಿದೆ.

    ಇನ್ನೂ ಯಶ್ ಅವರು ‘ಟಾಕ್ಸಿಕ್’ ಸಿನಿಮಾ ಜೊತೆ ಬಾಲಿವುಡ್ ‘ರಾಮಾಯಣ’ (Ramayana) ಚಿತ್ರದ ಕೆಲಸದಲ್ಲೂ ಬ್ಯುಸಿಯಾಗಿದ್ದಾರೆ. ಇತ್ತ ಶಾರುಖ್ ಅವರು ಮಗಳನ್ನು ಬಿಗ್ ಬಜೆಟ್ ಸಿನಿಮಾ ಮೂಲಕ ಲಾಂಚ್ ಮಾಡಲು ಎದುರು ನೋಡುತ್ತಿದ್ದಾರೆ.

  • ಸೈಫ್ ಅಲಿ ಖಾನ್‌ಗೂ ಮುನ್ನ ಶಾರುಖ್ ಮೇಲೆ ದಾಳಿಗೂ ಸ್ಕೆಚ್?

    ಸೈಫ್ ಅಲಿ ಖಾನ್‌ಗೂ ಮುನ್ನ ಶಾರುಖ್ ಮೇಲೆ ದಾಳಿಗೂ ಸ್ಕೆಚ್?

    ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ (Saif Ali Khan) ಹಲ್ಲೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಓರ್ವನನ್ನು ವಶಕ್ಕೆ ಪಡೆಯಲಾಗಿದೆ. ಈ ಬೆನ್ನಲ್ಲೇ ಸೈಫ್ ಒಬ್ಬರೇ ಅಲ್ಲ ಶಾರುಖ್ ಖಾನ್ (Shah Rukh Khan) ಮೇಲೆಯೂ ದಾಳಿ ನಡೆಸಲು ಸ್ಕೆಚ್ ಹಾಕಲಾಗಿತ್ತು ಎಂಬ ಸುಳಿವು ಪೊಲೀಸರಿಗೆ ಸಿಕ್ಕಿದೆ.

    ಸೈಫ್ ಅಲಿ ಖಾನ್‌ಗೆ ಹಲ್ಲೆ ಮಾಡುವ ಮೊದಲು ಶಾರುಖ್ ಮನೆಯ ಮುಂದೆ ಕೂಡ ಹಲವು ಬಾರಿ ವ್ಯಕ್ತಿಯೊಬ್ಬ ಕಾಣಿಸಿಕೊಂಡಿದ್ದಾನೆ. ಸೈಫ್‌ಗೂ ಮುನ್ನ ಶಾರುಖ್‌ಗೂ ಈ ಆರೋಪಿ ಏನಾದ್ರೂ ಟಾರ್ಗೆಟ್ ಮಾಡಿದ್ನಾ? ಎಂಬ ಅನುಮಾನ ಪೊಲೀಸರಲ್ಲಿ ಮೂಡಿದೆ. ಇದನ್ನೂ ಓದಿ:ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಅರೆಸ್ಟ್

    ಸೈಫ್‌ಗೂ ಮುನ್ನ ಜ.14ರಂದು ಶಾರುಖ್ ದಾಳಿಗೂ ಆರೋಪಿ ಸ್ಕೆಚ್ ಹಾಕಿದ್ದ ಎಂಬ ವಿಚಾರ ಬೆಳಕಿಗೆ ಬಂದಿದ್ದು, ನಟನ ನಿವಾಸದ ಬಳಿ 6-8 ಅಡಿಯ ಕಬ್ಬಿಣದ ಏಣಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈಗಾಗಲೇ ಶಾರುಖ್ ಅವರ ಮನ್ನತ್ ನಿವಾಸಕ್ಕೆ ಭೇಟಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

    ನಿನ್ನೆ ಶಂಕಿತ ಆರೋಪಿಯ ಫೋಟೋ ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಮುಂಬೈ ಪೊಲೀಸರೇ ಬಹಿರಂಗಪಡಿಸಿದ್ದರು. ಟೀ-ಶರ್ಟ್, ಜೀನ್ಸ್ ಪ್ಯಾಂಟ್ ಧರಿಸಿರುವ ಶಂಕಿತ, ಬ್ಯಾಗ್‌ವೊಂದನ್ನ ಹಾಕಿಕೊಂಡಿದ್ದು, ಕಿತ್ತಳೆ ಬಣ್ಣದ ಸ್ಕಾಫ್ ಧರಿಸಿದ್ದಾನೆ. ಮೆಟ್ಟಿಲುಗಳಿಂದ ಇಳಿದು ಹೋಗುತ್ತಿರುವಾಗ ಸಿಟಿಟಿವಿ ಕ್ಯಾಮೆರಾ ನೋಡಿದ್ದು, ವಿಡಿಯೋದಲ್ಲಿ ಸೆರೆಯಾಗಿದೆ.

    ಸೈಫ್ ಅಲಿಖಾನ್ ಮನೆಯಲ್ಲಿ ಅಡುಗೆ ಮಾಡುವವರಲ್ಲಿ ಒಬ್ಬರಾದ ಎಲಿಯಾಮಾ ಫಿಲಿಪ್ಸ್ ಅಲಿಯಾಸ್ ಲಿಮಾ, ಶಂಕಿತನನ್ನ ಮೊದಲು ನೋಡಿದ್ದರಂತೆ. ದುಷ್ಕರ್ಮಿಯನ್ನ ನೋಡಿದ ಕೂಡಲೇ ಭಯದಲ್ಲಿ ಜೋರಾಗಿ ಕಿರುಚಿದ್ದಾರೆ. ಇದರಿಂದ ಎಚ್ಚರಗೊಂಡ ಸೈಫ್, ಹಂತಕನನ್ನ ಒಳ ನುಗ್ಗದಂತೆ ತಡೆಯಲು ಹೋರಾಡಿದ್ದಾರೆ. ಈ ವೇಳೆ ಹಂತಕ 6 ಬಾರಿ ಇರಿದು, ಎಡಗೈ ಮತ್ತು ಗುತ್ತಿಗೆ ಭಾಗವನ್ನ ಗಾಯಗೊಳಿಸಿದ್ದಾನೆ. ಹಂತಕ ಒಳ ನುಗ್ಗಲು ಪ್ರಯತ್ನಿಸಿದಾಗ ನಿನಗೇನು ಬೇಕು ಎಂದು ಕೇಳಲಾಗಿತ್ತಂತೆ. ಆಗ 1 ಕೋಟಿ ರೂ.ಗೆ ಬೇಡಿಕೆಯಿಟ್ಟಿದ್ದಾನೆ ಎಂದು ಆರೋಪಿಸಲಾಗಿದೆ. ದಾಳಿಯಲ್ಲಿ ಇಬ್ಬರು ಮನೆಯ ಸಹಾಯಕರೂ ಗಾಯಗೊಂಡಿದ್ದಾರೆ.

    ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟನ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಲಾಗಿದೆ.