Tag: ಶಾರುಖ್ ಖಾನ್

  • ಶಾರುಖ್ ನಟನೆಯ ‘ಡಂಕಿ’ ಸಿನಿಮಾದ ಫಸ್ಟ್ ಸಾಂಗ್ ರಿಲೀಸ್

    ಶಾರುಖ್ ನಟನೆಯ ‘ಡಂಕಿ’ ಸಿನಿಮಾದ ಫಸ್ಟ್ ಸಾಂಗ್ ರಿಲೀಸ್

    ಡಂಕಿ ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ಶಾರುಖ್ ಖಾನ್ (Shah Rukh Khan) ಹಾಗೂ ರಾಜ್ ಕುಮಾರ್ ಹಿರಾನಿ ಜೋಡಿಯ ಈ ಚಿತ್ರದ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆ ಮಾಡಲಾಗಿತ್ತು. ಟೀಸರ್‌ಗೆ ಭರ್ಜರಿ ಪ್ರತಿಕ್ರಿಯೆ ಬಂದಿದೆ. ಇನ್ನೇನೂ ಡಂಕಿ ರಿಲೀಸ್ ಗೆ ದಿನಗಣೆಯಷ್ಟೇ ಬಾಕಿ ಉಳಿದಿದ್ದು, ಚಿತ್ರತಂಡ ಪ್ರಮೋಷನ್ ಅಖಾಡಕ್ಕೆ ಧುಮುಕಿದೆ.

    ಡಂಕಿ ಸಿನಿಮಾದ ಮೊದಲ ಹಾಡು ಇಂದು ಬಿಡುಗಡೆಯಾಗಿದೆ. ಟೀ ಸೀರಿಸ್ ಯೂಟ್ಯೂಬ್ ನಲ್ಲಿ ಹಾರ್ಡಿ ಹಾಗೂ ಮನುವಿನ ಪ್ರೇಮಗೀತೆ ಅನಾವರಣಗೊಂಡಿದೆ. ಲುಪ್ ಪುಟ್ ಗಯಾ ಎಂಬ ಸಾಹಿತ್ಯದ ಹಾಡಿಗೆ ಶಾರುಖ್ ಖಾನ್ ತಾಪ್ಸಿ ಹೆಜ್ಜೆ ಹಾಕಿದ್ದಾರೆ. ಮೆಲೋಡಿ ಮ್ಯೂಸಿಕ್ ಮಾಂತ್ರಿಕ ಪ್ರೀತಮ್ ಸಂಗೀತ, ಸ್ವಾನಂದ್ ಕಿರ್ಕಿರೆ ಮತ್ತು ಐಪಿ ಸಿಂಗ್ ಬರೆದ ಸಾಹಿತ್ಯದ ರೋಮ್ಯಾಂಟಿಕ್ ಸಿಂಗಿಂಗ್ ಅರಿಜಿತ್ ಸಿಂಗ್ ಅವರ ಭಾವಪೂರ್ಣ ಗಾಯನ ಕೇಳುಗರನ್ನು ಮೋಡಿ ಮಾಡ್ತಿದೆ. ಗಣೇಶ್ ಆಚಾರ್ಯ ಲುಪ್ ಪುಟ್ ಗಯಾ ಹಾಡಿಗೆ ನೃತ್ಯ ಸಂಯೋಜನೆ ಮಾಡಿದ್ದಾರೆ.

    ರಾಜ್ ಕುಮಾರ್ ಹಿರಾನಿ, ಅಭಿಜಿತ್ ಜೋಶಿ ಮತ್ತು ಕನಿಕಾ ಧಿಲ್ಲೋನ್ ಡಂಕಿಗೆ ಕಥೆ ಬರೆದರೆ, ರಾಜ್ ಕುಮಾರ್ ಹಿರಾನಿ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಹಾರ್ಡಿ ಪಾತ್ರದಲ್ಲಿ ಶಾರುಖ್, ಮನು ಪಾತ್ರದಲ್ಲಿ ತಾಪ್ಸಿ, ರಾಜಕುಮಾರ್ ಹಿರಾನಿ ಫೇವರಿಟ್ ಆ್ಯಕ್ಟರ್ ಬೊಮನ್ ಇರಾನಿ ಇಲ್ಲಿ ಗುಲಾಟಿ ಅನ್ನುವ ಪಾತ್ರ ಮಾಡಿದ್ದಾರೆ. ಹೀಗೆ ಹೆಸರಾಂತ ಕಲಾವಿದರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

    ರಾಜಕುಮಾರ್ ಹಿರಾನಿ ಕಾನೂನು ಬಾಹಿರವಾಗಿ ಕೆನಡಾ ಮತ್ತು ಅಮೆರಿಕಕ್ಕೆ ಹೋಗುವ ಜನರ ಕಥೆಯನ್ನೆ ಡಂಕಿ ಸಿನಿಮಾದಲ್ಲಿ ಕಟ್ಟಿಕೊಟ್ಟಿದ್ದಾರೆ. ಡಂಕಿ ಚಿತ್ರವನ್ನು ಜಿಯೋ ಸ್ಟುಡಿಯೋಸ್, ರೆಡ್ ಚಿಲ್ಲೀಸ್ ಎಂಟರ್‌ಟೇನ್‌ಮೆಂಟ್ ಮತ್ತು ರಾಜ್‌ಕುಮಾರ್ ಹಿರಾನಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಗೌರಿ ಖಾನ್ ಹಾಗೂ ರಾಜ್‌ಕುಮಾರ್ ಹಿರಾನಿ ನಿರ್ಮಿಸಿದ್ದಾರೆ. ಈ ಕ್ರಿಸ್‌ಮಸ್‌ ಹಬ್ಬದ ಸಮಯದಲ್ಲಿ ಡಂಕಿ ಸಿನಿಮಾ ಹಲವು ಭಾಷೆಗಳಲ್ಲಿ ಬಿಡುಗಡೆ ಆಗಲಿದೆ.

  • ತಾಪ್ಸಿ ಜೊತೆ ಶಾರುಖ್ ಖಾನ್ ರೋಮ್ಯಾನ್ಸ್

    ತಾಪ್ಸಿ ಜೊತೆ ಶಾರುಖ್ ಖಾನ್ ರೋಮ್ಯಾನ್ಸ್

    ಡಂಕಿ (Dunki) ಸಿನಿಮಾ ಮೂಲಕ ಶಾರುಖ್ ಖಾನ್ ಮತ್ತೊಮ್ಮೆ ಪ್ರೇಕ್ಷಕರನ್ನು ರಂಜಿಸುವುದಕ್ಕೆ ಸಜ್ಜಾಗಿ ನಿಂತಿದ್ದಾರೆ. ಈಗಾಗಲೇ ರಿಲೀಸ್ ಆಗಿರೋ ‘ಡಂಕಿ’ ಡ್ರಾಪ್ 1 ಝಲಕ್ ಕಿಕ್ ಕೊಟ್ಟಿದೆ. ಮೊದಲ ಹಾಡನ್ನು (Song)  ಡ್ರಾಪ್ 2 ಎಂದು ಚಿತ್ರತಂಡ ರಿಲೀಸ್ ಮಾಡಲು ಹೊರಟಿದೆ.

    ‘ಡಂಕಿ’ ಸಿನಿಮಾದ ಮೊದಲ ಹಾಡು ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಇದೊಂದು ರೊಮ್ಯಾಂಟಿಕ್ ಸಾಂಗ್ ಆಗಿದ್ದು, ಶಾರುಖ್ ಖಾನ್ ಅಭಿಮಾನಿಗಳ ಕಣ್ಣು ಅರಳಿದೆ. ಕಳೆದ ಎರಡು ಸಿನಿಮಾಗಳಲ್ಲಿ ಶಾರುಖ್ ಖಾನ್ (Shah Rukh Khan) ಅನ್ನು ಹೆಚ್ಚಾಗಿ ಆಕ್ಷನ್ ಅವತಾರದಲ್ಲಿಯೇ ನೋಡಿದ್ದರು. ಹೀಗಾಗಿ ರೊಮ್ಯಾಂಟಿಕ್ ಲುಕ್‌ನಲ್ಲಿ ನೋಡುವುದಕ್ಕೆ ಕಾತುರರಾಗಿದ್ದಾರೆ.

    ‘ಡಂಕಿ’ ಸಿನಿಮಾದ ಈ ರೊಮ್ಯಾಂಟಿಕ್ ಸಾಂಗ್ ಇಂದು ರಿಲೀಸ್ ಆಗಲಿದೆ. ‘ಲುಪ್ ಪುಟ್ ಗಯಾ..’ ಅನ್ನೋ ಈ ಮೇಲೋಡಿ ಹಾಡನ್ನು ಕೇಳುವುದಕ್ಕೆ ಸಂಗೀತ ಆಸಕ್ತರು ಕಾದು ಕೂತಿದ್ದಾರೆ. ಬಾಲಿವುಡ್‌ನ ಜನಪ್ರಿಯರ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ ಈ ಸಿನಿಮಾಗೆ ಟ್ಯೂನ್ ಹಾಕಿದ್ದಾರೆ. ಶಾರುಖ್ ಖಾನ್ ಹಾಗೂ ತಾಪ್ಸಿ ಪನ್ನು (Taapsee) ರೊಮ್ಯಾಂಟಿಕ್ ಸಾಂಗ್ ಗೆ ಫ್ಯಾನ್ಸ್ ಎದುರು ನೋಡುತ್ತಿದ್ದಾರೆ.

    ರಾಜ್ ಕುಮಾರ್ ಹಿರಾನಿ, ಅಭಿಜಿತ್ ಜೋಶಿ ಮತ್ತು ಕನಿಕಾ ಧಿಲ್ಲೋನ್ ಡಂಕಿಗೆ ಕಥೆ ಬರೆದರೆ, ರಾಜ್ ಕುಮಾರ್ ಹಿರಾನಿ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಹಾರ್ಡಿ ಪಾತ್ರದಲ್ಲಿ ಶಾರುಖ್, ಮನು ಪಾತ್ರದಲ್ಲಿ ತಾಪ್ಸಿ, ರಾಜಕುಮಾರ್ ಹಿರಾನಿ ಫೇವರಿಟ್ ಆ್ಯಕ್ಟರ್ ಬೊಮನ್ ಇರಾನಿ ಇಲ್ಲಿ ಗುಲಾಟಿ ಅನ್ನುವ ಪಾತ್ರ ಮಾಡಿದ್ದಾರೆ. ಹೀಗೆ ಹೆಸರಾಂತ ಕಲಾವಿದರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

    ರಾಜಕುಮಾರ್ ಹಿರಾನಿ (Rajkumar Hirani) ಕಾನೂನು ಬಾಹಿರವಾಗಿ ಕೆನಡಾ ಮತ್ತು ಅಮೆರಿಕಕ್ಕೆ ಹೋಗುವ ಜನರ ಕಥೆಯನ್ನೆ ಡಂಕಿ ಸಿನಿಮಾದಲ್ಲಿ ಕಟ್ಟಿಕೊಟ್ಟಿದ್ದಾರೆ. ಡಂಕಿ ಚಿತ್ರವನ್ನು ಜಿಯೋ ಸ್ಟುಡಿಯೋಸ್, ರೆಡ್ ಚಿಲ್ಲೀಸ್ ಎಂಟರ್‌ಟೇನ್‌ಮೆಂಟ್ ಮತ್ತು ರಾಜ್‌ಕುಮಾರ್ ಹಿರಾನಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಗೌರಿ ಖಾನ್ ಹಾಗೂ ರಾಜ್‌ಕುಮಾರ್ ಹಿರಾನಿ ನಿರ್ಮಿಸಿದ್ದಾರೆ. ಈ ಕ್ರಿಸ್‌ಮಸ್‌ ಹಬ್ಬದ ಸಮಯದಲ್ಲಿ ಡಂಕಿ ಸಿನಿಮಾ ಹಲವು ಭಾಷೆಗಳಲ್ಲಿ ಬಿಡುಗಡೆ ಆಗಲಿದೆ.

    ನಾಲ್ಕು ರಾಷ್ಟ್ರಪ್ರಶಸ್ತಿ ಗೆದ್ದಿರುವ ಸ್ಟಾರ್ ಡೈರೆಕ್ಟರ್ ರಾಜ್ ಕುಮಾರ್ ಹಿರಾನಿ, ಡಂಕಿ ಸಿನಿಮಾದ ಸೂತ್ರಧಾರ. ಮುನ್ನಾ ಬಾಯ್ ಎಂಬಿಬಿಎಸ್, 3 ಈಡಿಯಟ್ಸ್, ಪಿಕೆ, ಸಂಜುನಂತಹ ಸೂಪರ್ ಡೂಪರ್ ಹಿಟ್ ಚಿತ್ರ ಕೊಟ್ಟಿರುವ ಹಿರಾನಿ, ಈ ಬಾರಿ ಐದು ಜನ ಸ್ನೇಹಿತರ ಕಥೆ ಹೇಳೋದಿಕ್ಕೆ ಬರ್ತಿದ್ದಾರೆ. ಇನ್ನೇನು ಡಿಸೆಂಬರ್‌ ಕೊನೇ ವಾರದಲ್ಲಿ ಸಿನಿಮಾ ರಿಲೀಸ್‌ ಆಗಲಿದೆ.

  • ಶಾರುಖ್‌ ಖಾನ್‌ ಅಭಿಮಾನಿಗಳಿಗೆ ಇಲ್ಲಿದೆ ಗುಡ್‌ ನ್ಯೂಸ್‌

    ಶಾರುಖ್‌ ಖಾನ್‌ ಅಭಿಮಾನಿಗಳಿಗೆ ಇಲ್ಲಿದೆ ಗುಡ್‌ ನ್ಯೂಸ್‌

    ಬಾಲಿವುಡ್ ಸ್ಟಾರ್ ಶಾರುಖ್ ಖಾನ್ (Sharukh Khan) ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಒಂದೇ ಸಿನಿಮಾದಲ್ಲಿ ಅಪ್ಪ-ಮಗಳನ್ನ ಕಣ್ತುಂಬಿಕೊಳ್ಳುವ ಭಾಗ್ಯ ಫ್ಯಾನ್ಸ್‌ಗೆ ಸಿಗಲಿದೆ. ಶಾರುಖ್ ಮತ್ತು ಸುಹಾನಾ ಖಾನ್ (Suhana Khan) ಜೊತೆಯಾಗಿ ನಟಿಸುತ್ತಿದ್ದಾರೆ.

    ಪಠಾಣ್, ಜವಾನ್ ಚಿತ್ರದ ಸಕ್ಸಸ್ ನಂತರ ಡಂಕಿ ಸಿನಿಮಾ ರಿಲೀಸ್‌ಗೆ ತಯಾರಾಗಿದೆ. ಈ ಸಿನಿಮಾಗಳಲ್ಲಿ ಶಾರುಖ್ ಬ್ಯುಸಿಯಿದ್ರೆ, ಇತ್ತ ಸುಹಾನಾ ನಟಿಸಿದ ಮೊದಲ ಸಿನಿಮಾ ‘ಆರ್ಚೀಸ್’ ರಿಲೀಸ್ ಆಗುವ ಮುನ್ನವೇ ಮತ್ತೊಂದು ಬಿಗ್ ಆಫರ್ ಸುಹಾನಾ ಬಾಚಿಕೊಂಡಿದ್ದಾರೆ.

    ಹೊಸ ಚಿತ್ರದಲ್ಲಿ ಶಾರುಖ್- ಸುಹಾನಾ ಜೊತೆಯಾಗಿ ನಟಿಸುತ್ತಿದ್ದಾರೆ. ರೀಲ್‌ನಲ್ಲಿಯೂ ಕೂಡ ತಂದೆ- ಮಗಳಾಗಿಯೇ ಬಣ್ಣ ಹಚ್ಚಲಿದ್ದಾರೆ ಎಂಬುದು ಲೇಟೆಸ್ಟ್ ಸುದ್ದಿ. ಇಬ್ಬರ ಕಾಂಬೋ ಚಿತ್ರಕ್ಕೆ ‘ಕಿಂಗ್’ ಎಂದು ಕ್ರೇಜಿ ಟೈಟಲ್ ಇಟ್ಟಿದ್ದಾರೆ. ಇದನ್ನೂ ಓದಿ:ಓಟಿಟಿಯಲ್ಲಿ ಖ್ಯಾತ ಕ್ರಿಕೆಟರ್ ಮುತ್ತಯ್ಯ ಮುರಳೀಧರನ್ ಜೀವನಗಾಥೆ

    ಈ ಚಿತ್ರ ಮುಂದಿನ ವರ್ಷ ಜನವರಿಯಲ್ಲಿ ಶೂಟಿಂಗ್ ಶುರುವಾಗಲಿದೆ. ಈ ಚಿತ್ರವೂ ಆ್ಯಕ್ಷನ್ ಜೊತೆ ಥ್ರಿಲಿಂಗ್ ಆಗಿ ಮೂಡಿ ಬರಲಿದೆ. ಒಟ್ನಲ್ಲಿ ಈ ಸುದ್ದಿ ಕೇಳಿ ಕಿಂಗ್ ಖಾನ್ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಸಿನಿಮಾಗಾಗಿ ಎದುರು ನೋಡ್ತಿದ್ದಾರೆ.

  • ಶಾರುಖ್ ನಟನೆಯ ‘ಡಂಕಿ’ ಚಿತ್ರದ ಫಸ್ಟ್ ಸಾಂಗ್ ಎಂಟ್ರಿಗೆ ಡೇಟ್ ಫಿಕ್ಸ್

    ಶಾರುಖ್ ನಟನೆಯ ‘ಡಂಕಿ’ ಚಿತ್ರದ ಫಸ್ಟ್ ಸಾಂಗ್ ಎಂಟ್ರಿಗೆ ಡೇಟ್ ಫಿಕ್ಸ್

    ಶಾರುಖ್‌ ಖಾನ್‌ (Shah Rukh Khan)  ನಟನೆಯ ಡಂಕಿ ಸಿನಿಮಾದ ಟೀಸರ್ ಈಗಾಗಲೇ ಭಾರೀ ಸದ್ದು ಮಾಡುತ್ತಿದೆ. ಶಾರುಖ್ ಖಾನ್ ಜನ್ಮದಿನಕ್ಕೆ ಡಂಕಿ ಡ್ರಾಪ್ 1 ಎಂಬ ಟೈಟಲ್‌ನಡಿ ಬಂದ ಝಲಕ್ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಇದೀಗ ಡಂಕಿ ಸಿನಿಮಾದ ಮೊದಲ ಹಾಡು (Song) ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ.

    ಡಂಕಿ (Dunki) ಸಿನಿಮಾದ ರೋಮ್ಯಾಂಟಿಕ್ ನಂಬರ್ ಇದೇ ತಿಂಗಳ‌ 22ರಂದು ರಿಲೀಸ್ ಆಗಲಿದೆ. ಲಪ್ ಪಟ್ ಗಯಾ ಎಂಬ ಸಾಹಿತ್ಯವುಳ್ಳ ಸುಮಧುರ ಹಾಡಿಗೆ ಪ್ರೀತಂ ಚಕ್ರವರ್ತಿ ಟ್ಯೂನ್ ಹಾಕಿದ್ದಾರೆ. ಹೇಗಿರಲಿ ಡಂಕಿ ಮೊದಲ ಗಾನಬಜಾನ ಎಂಬ ನಿರೀಕ್ಷೆ ಹೆಚ್ಚಿಸಿದೆ.

    ರಾಜ್ ಕುಮಾರ್ ಹಿರಾನಿ, ಅಭಿಜಿತ್ ಜೋಶಿ ಮತ್ತು ಕನಿಕಾ ಧಿಲ್ಲೋನ್ ಡಂಕಿಗೆ ಕಥೆ ಬರೆದರೆ, ರಾಜ್ ಕುಮಾರ್ ಹಿರಾನಿ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಹಾರ್ಡಿ ಪಾತ್ರದಲ್ಲಿ ಶಾರುಖ್, ಮನು ಪಾತ್ರದಲ್ಲಿ ತಾಪ್ಸಿ, ರಾಜಕುಮಾರ್ ಹಿರಾನಿ ಫೇವರಿಟ್ ಆ್ಯಕ್ಟರ್ ಬೊಮನ್ ಇರಾನಿ ಇಲ್ಲಿ ಗುಲಾಟಿ ಅನ್ನುವ ಪಾತ್ರ ಮಾಡಿದ್ದಾರೆ. ಹೀಗೆ ಹೆಸರಾಂತ ಕಲಾವಿದರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

    ರಾಜಕುಮಾರ್ ಹಿರಾನಿ (Raj Kumar Hirani) ಕಾನೂನು ಬಾಹಿರವಾಗಿ ಕೆನಡಾ ಮತ್ತು ಅಮೆರಿಕಕ್ಕೆ ಹೋಗುವ ಜನರ ಕಥೆಯನ್ನೆ ಡಂಕಿ ಸಿನಿಮಾದಲ್ಲಿ ಕಟ್ಟಿಕೊಟ್ಟಿದ್ದಾರೆ. ಡಂಕಿ ಚಿತ್ರವನ್ನು ಜಿಯೋ ಸ್ಟುಡಿಯೋಸ್, ರೆಡ್ ಚಿಲ್ಲೀಸ್ ಎಂಟರ್‌ಟೇನ್‌ಮೆಂಟ್ ಮತ್ತು ರಾಜ್‌ಕುಮಾರ್ ಹಿರಾನಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಗೌರಿ ಖಾನ್ ಹಾಗೂ ರಾಜ್‌ಕುಮಾರ್ ಹಿರಾನಿ ನಿರ್ಮಿಸಿದ್ದಾರೆ. ಈ ಕ್ರಿಸ್‌ಮಸ್‌ ಹಬ್ಬದ ಸಮಯದಲ್ಲಿ ಡಂಕಿ ಸಿನಿಮಾ ಹಲವು ಭಾಷೆಗಳಲ್ಲಿ ಬಿಡುಗಡೆ ಆಗಲಿದೆ.

    ನಾಲ್ಕು ರಾಷ್ಟ್ರಪ್ರಶಸ್ತಿ ಗೆದ್ದಿರುವ ಸ್ಟಾರ್ ಡೈರೆಕ್ಟರ್ ರಾಜ್ ಕುಮಾರ್ ಹಿರಾನಿ, ಡಂಕಿ ಸಿನಿಮಾದ ಸೂತ್ರಧಾರ. ಮುನ್ನಾ ಬಾಯ್ ಎಂಬಿಬಿಎಸ್, 3 ಈಡಿಯಟ್ಸ್, ಪಿಕೆ, ಸಂಜುನಂತಹ ಸೂಪರ್ ಡೂಪರ್ ಹಿಟ್ ಚಿತ್ರ ಕೊಟ್ಟಿರುವ ಹಿರಾನಿ, ಈ ಬಾರಿ ಐದು ಜನ ಸ್ನೇಹಿತರ ಕಥೆ ಹೇಳೋದಿಕ್ಕೆ ಬರ್ತಿದ್ದಾರೆ. ಇನ್ನೇನು ಡಿಸೆಂಬರ್‌ ಕೊನೇ ವಾರದಲ್ಲಿ ಸಿನಿಮಾ ರಿಲೀಸ್‌ ಆಗಲಿದೆ.

  • ‘ಡಂಕಿ’ ಡೈರೆಕ್ಟರ್ ರಾಜ್ ಕುಮಾರ್ ಹಿರಾನಿ ಹುಟ್ಟು ಹಬ್ಬದ ಸ್ಪೆಷಲ್ ಏನು?

    ‘ಡಂಕಿ’ ಡೈರೆಕ್ಟರ್ ರಾಜ್ ಕುಮಾರ್ ಹಿರಾನಿ ಹುಟ್ಟು ಹಬ್ಬದ ಸ್ಪೆಷಲ್ ಏನು?

    ಬಾಲಿವುಡ್ ಕಂಡ ಅಪರೂಪದ ಸಿನಿಮಾ ಮೇಕರ್ಸ್..ನಾಲ್ಕು ರಾಷ್ಟ್ರಪ್ರಶಸ್ತಿ ಗೆದ್ದಿರುವ ಸ್ಟಾರ್ ಡೈರೆಕ್ಟರ್ ರಾಜ್ ಕುಮಾರ್ ಹಿರಾನಿಗಿಂದು (Rajkumar Hirani) ಜನ್ಮದಿನದ ಶುಭಾಶಯ. ಮುನ್ನಾ ಬಾಯ್ ಎಂಬಿಬಿಎಸ್, ತ್ರಿ ಇಡಿಯಟ್ಸ್, ಪಿಕೆ, ಸಂಜುನಂತಹ ಸೂಪರ್ ಡೂಪರ್ ಹಿಟ್ ಚಿತ್ರ ಕೊಟ್ಟಿರುವು ಹಿರಾನಿ ಡಂಕಿ (Dunki) ಸಿನಿಮಾ ಮೂಲಕ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದ್ದಾರೆ.

    ಸಾಮಾನ್ಯವಾಗಿ ರಾಜ್ ಕುಮಾರ್ ಹಿರಾನಿ ಚಿತ್ರಗಳು ಮನರಂಜನೆ ಜೊತೆಗೆ ಒಂದೊಳ್ಳೆ ಸಂದೇಶಗಳನ್ನು ಒಳಗೊಂಡಿರುತ್ತದೆ. ಫ್ಯಾಮಿಲಿ ಕುಳಿತು ನೋಡುವ ಸಿನಿಮಾಗಳಾಗಿರುತ್ತವೆ. ಇಂತಹ ಸ್ಟಾರ್ ಡೈರೆಕ್ಟರ್ ಶಾರುಖ್ ಖಾನ್ ಗೆ ಡಂಕಿ ಎಂಬ ಸಿನಿಮಾ ಅನೌನ್ಸ್ ಮಾಡಿರುವುದು ಗೊತ್ತೇ ಇದೆ. ಶಾರುಖ್ ಖಾನ್ ಜನ್ಮದಿನಕ್ಕೆ ಡಂಕಿ ಡ್ರಾಪ್ 1 ಎಂಬ ಟೈಟಲ್ ನಡಿ ಬಂದ ಝಲಕ್ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ.

    ರಾಜ್ ಕುಮಾರ್ ಹಿರಾನಿ, ಅಭಿಜತ್ ಜೋಶಿ ಮತ್ತು ಕನಿಕಾ ಧಿಲ್ಲೋನ್ ಡಂಕಿಗೆ ಕಥೆ ಬರೆದರೆ, ರಾಜ್ ಕುಮಾರ್ ಹಿರಾನಿ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಹಾರ್ಡಿ ಪಾತ್ರದಲ್ಲಿ ಶಾರುಖ್ (Shahrukh Khan), ಮನು ಪಾತ್ರದಲ್ಲಿ ತಾಪ್ಸಿ ರಾಜಕುಮಾರ್ ಹಿರಾನಿ ಫೇವರಿಟ್ ಆ್ಯಕ್ಟರ್ ಬೊಮನ್ ಇರಾನಿ ಇಲ್ಲಿ ಗುಲಾಟಿ ಅನ್ನುವ ಪಾತ್ರ ಮಾಡಿದ್ದಾರೆ. ಹೀಗೆ ಹೆಸರಾಂತ ಕಲಾವಿದರು ಈ ಚಿತ್ರದಲ್ಲಿ ಆ್ಯಕ್ಟ್ ಮಾಡಿದ್ದಾರೆ.

    ರಾಜಕುಮಾರ್ ಹಿರಾನಿ ಕಾನೂನು ಬಾಹಿರವಾಗಿ ಕೆನಡಾ ಮತ್ತು ಅಮೆರಿಕಕ್ಕೆ ಹೋಗುವ ಜನರ ಕಥೆಯನ್ನೆ ಡಂಕಿ ಸಿನಿಮಾದಲ್ಲಿ ಕಟ್ಟಿಕೊಟ್ಟಿದ್ದಾರೆ. ಡಂಕಿ ಚಿತ್ರವನ್ನು ಜಿಯೋ ಸ್ಟುಡಿಯೋಸ್, ರೆಡ್ ಚಿಲ್ಲೀಸ್ ಎಂಟರ್‌ಟೇನ್‌ಮೆಂಟ್ ಮತ್ತು ರಾಜ್‌ಕುಮಾರ್ ಹಿರಾನಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಗೌರಿ ಖಾನ್ ಹಾಗೂ ರಾಜ್‌ಕುಮಾರ್ ಹಿರಾನಿ ನಿರ್ಮಿಸಿದ್ದಾರೆ.  ನಾಯಕನಾಗಿ ಶಾರುಖ್ ಖಾನ್ ನಟಿಸಿದ್ದು, ತಾಪ್ಸೀ ಪನ್ನು, ಬೋಮನ್ ಇರಾನಿ, ವಿಕ್ಕಿ ಕೌಶಲ್, ಅನಿಲ್ ಗ್ರೋವರ್, ವಿಕ್ರಮ್ ಕೊಚ್ಚರ್ ನಟಿಸಿದ್ದಾರೆ. ಅತೀ ದೊಡ್ಡ ತಾರಾಬಳಗದ `ಡಂಕಿ’ ಸಿನಿಮಾ ವಿಶ್ವದಾದ್ಯಂತ ಕಣಕ್ಕಿಳಿಯಲು ಸಜ್ಜಾಗಿದ್ದು, `ಸಲಾರ್’ ಎದುರು ಸ್ಪರ್ಧಿಸಲು ಸಿದ್ದವಾಗಿದೆ. ಇದೇ ಡಿಸೆಂಬರ್ 22ರಂದು ಮೋಸ್ಟ್ ಅವೈಟೆಡ್ ಡಂಕಿ ತೆರೆಗಪ್ಪಳಿಸಲಿದೆ.

  • ಟೈಗರ್ 3 ಪ್ರದರ್ಶನ ವೇಳೆ ಥಿಯೇಟರ್ ಒಳಗೆ ಪಟಾಕಿ ಸಿಡಿಸಿದ ಫ್ಯಾನ್ಸ್: ತಪ್ಪಿದ ಅನಾಹುತ

    ಟೈಗರ್ 3 ಪ್ರದರ್ಶನ ವೇಳೆ ಥಿಯೇಟರ್ ಒಳಗೆ ಪಟಾಕಿ ಸಿಡಿಸಿದ ಫ್ಯಾನ್ಸ್: ತಪ್ಪಿದ ಅನಾಹುತ

    ಲ್ಮಾನ್ ಖಾನ್ (Salman Khan) ನಟನೆಯ ಟೈಗರ್ 3 ಸಿನಿಮಾ ವೇಳೆ ಥಿಯೇಟರ್ ಒಳಗೆ ಪಟಾಕಿ ಸಿಟಿಸಿ ಘಟನೆ ನಡೆದಿದೆ. ಈ ಸಿನಿಮಾದಲ್ಲಿ ಶಾರುಖ್ ಖಾನ್ (Shah Rukh Khan) ಅತಿಥಿ ಪಾತ್ರವೊಂದನ್ನು ಮಾಡಿದ್ದಾರೆ. ಅವರ ಎಂಟ್ರಿಗೆ ಅಭಿಮಾನಿಗಳು ಭಾರೀ ಪ್ರಮಾಣದಲ್ಲಿ ಪಟಾಕಿ ಸಿಡಿಸಿದ್ದಾರೆ. ಹಾಗಾಗಿ ಥಿಯೇಟರ್ ತುಂಬಾ ಪಟಾಕಿಯ ಕಿಡಿಗಳು ಹಾರಾಡಿವೆ. ಹೊಗೆ ತುಂಬಿಕೊಂಡು ಆತಂಕದ ವಾತಾವರಣ ಸೃಷ್ಟಿಯಾಗಿದೆ.

    ಮಹಾರಾಷ್ಟ್ರದ ಮಲೇಗಾಂವ್ (Malegaon) ನಲ್ಲಿ ಮೊನ್ನೆಯಿಂದ ಟೈಗರ್ 3 (Tiger 3) ಸಿನಿಮಾ ಪ್ರದರ್ಶನ ನಡೆಯುತ್ತಿದೆ. ನಿನ್ನೆ ದೀಪಾವಳಿ ಆಗಿದ್ದರಿಂದ ಸಾಕಷ್ಟು ಅಭಿಮಾನಿಗಳು ಥಿಯೇಟರ್ ಗೆ ಆಗಮಿಸಿ ನೆಚ್ಚಿನ ನಟನ ಚಿತ್ರವನ್ನು ಕಣ್ತುಂಬಿಕೊಳ್ಳುತ್ತಿದ್ದರು. ಈ ಸಮಯದಲ್ಲಿ ಕೆಲ ಕಿಡಿಗೇಡಿ ಅಭಿಮಾನಿಗಳು ಶಾರುಖ್ ಖಾನ್ ಎಂಟ್ರಿಗೆ ಭಾರೀ ಪ್ರಮಾಣದಲ್ಲಿ ಪಟಾಕಿ ಸಿಡಿಸಿದ್ದಾರೆ. ಹೀಗಾಗಿ ಥಿಯೇಟರ್ ತುಂಬೆಲ್ಲ ಪಟಾಕಿಯ ಕಿಡಿಗಳು ತುಂಬಿಕೊಂಡಿದ್ದವು.

    ಈ ಕುರಿತು ಥಿಯೇಟರ್ ಮಾಲೀಕರು ಮಾಧ್ಯಮಗಳ ಜೊತೆ ಮಾತನಾಡಿ, ಅಭಿಮಾನಿಗಳಿಂದಾಗಿ ಥಿಯೇಟರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸಾಕಷ್ಟು ಹಾನಿ ಕೂಡ ಆಗಿದೆ. ಈ ರೀತಿಯಲ್ಲಿ ಮಾಡುವುದು ಸರಿಯಲ್ಲ. ಅಭಿಮಾನಿಗಳು ಅಭಿಮಾನವನ್ನು ಥಿಯೇಟರ್ ಹೊರಗೆ ತೋರಿಸಬೇಕು. ಕೆಲವರಿಂದಾಗಿ ಹೆಚ್ಚಿನ ಜನರಿಗೆ ತೊಂದರೆ ಆಗಿದೆ ಎಂದಿದ್ದಾರೆ.

  • ಶಾರುಖ್ ಅಭಿಮಾನಿಗಳಿಗೆ ಗಿಫ್ಟ್ : ದೀಪಾವಳಿಗೆ ‘ಡಂಕಿ’ ಹೊಸ ಪೋಸ್ಟರ್

    ಶಾರುಖ್ ಅಭಿಮಾನಿಗಳಿಗೆ ಗಿಫ್ಟ್ : ದೀಪಾವಳಿಗೆ ‘ಡಂಕಿ’ ಹೊಸ ಪೋಸ್ಟರ್

    ಬಾಲಿವುಡ್ ಕಿಂಗ್ ಖಾನ್ ನಟನೆಯ ಡಂಕಿ (Dunki) ಸಿನಿಮಾದ ಟೀಸರ್ ಈಗಾಗಲೇ ಭಾರೀ ಸದ್ದು ಮಾಡುತ್ತಿದೆ. ಶಾರುಖ್ ಖಾನ್ (Shahrukh Khan) ಜನ್ಮದಿನಕ್ಕೆ ಡಂಕಿ ಡ್ರಾಪ್ 1 ಎಂಬ ಟೈಟಲ್ ನಡಿ ಬಂದ ಝಲಕ್ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಇದೀಗ ದೀಪಾವಳಿ ಹಬ್ಬದ ಸ್ಪೆಷಲ್ ಡಂಕಿ ಸಿನಿಮಾದ ಎರಡು ಹೊಸ ಪೋಸ್ಟರ್ (Poster) ರಿಲೀಸ್ ಮಾಡಲಾಗಿದೆ.

    ಪ್ರೀತಿ, ನಗು ಹಾಗೂ ಸ್ನೇಹ ತುಂಬಿರುವ ಎರಡು ಹೊಸ ಪೋಸ್ಟರ್ ನಲ್ಲಿ ಶಾರುಖ್ ಸ್ನೇಹ ಬಳಗವನ್ನು ಪರಿಚಯ ಮಾಡಿಕೊಡಲಾಗಿದೆ. ಕಿಂಗ್ ಖಾನ್ ಜೊತೆ ತಾಪ್ಸಿ ಪನ್ನು, ವಿಕ್ಕಿ ಕೌಶಲ್, ವಿಕ್ರಮ್ ಕೊಚ್ಚರ್ ಹಾಗೂ ಅನಿಲ್ ಗ್ರೋವರ್ ಒಟ್ಟಿಗೆ ನಿಂತು ನಗು ಬೀರಿದ್ದಾರೆ. ಎರಡು ಪೋಸ್ಟರ್ಸ್ ಆಕರ್ಷಕವಾಗಿವೆ.

    ರಾಜ್ ಕುಮಾರ್ ಹಿರಾನಿ, ಅಭಿಜತ್ ಜೋಶಿ ಮತ್ತು ಕನಿಕಾ ಧಿಲ್ಲೋನ್ ಡಂಕಿಗೆ ಕಥೆ ಬರೆದರೆ, ರಾಜ್ ಕುಮಾರ್ ಹಿರಾನಿ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಹಾರ್ಡಿ ಪಾತ್ರದಲ್ಲಿ ಶಾರುಖ್ , ಮನು ಪಾತ್ರದಲ್ಲಿ ತಾಪ್ಸಿ ರಾಜಕುಮಾರ್ ಹಿರಾನಿ ಫೇವರಿಟ್ ಆ್ಯಕ್ಟರ್ ಬೊಮನ್ ಇರಾನಿ ಇಲ್ಲಿ ಗುಲಾಟಿ ಅನ್ನುವ ಪಾತ್ರ ಮಾಡಿದ್ದಾರೆ. ಹೀಗೆ ಹೆಸರಾಂತ ಕಲಾವಿದರು ಈ ಚಿತ್ರದಲ್ಲಿ ಆ್ಯಕ್ಟ್ ಮಾಡಿದ್ದಾರೆ.

    ರಾಜಕುಮಾರ್ ಹಿರಾನಿ ಕಾನೂನು ಬಾಹಿರವಾಗಿ ಕೆನಡಾ ಮತ್ತು ಅಮೆರಿಕಕ್ಕೆ ಹೋಗುವ ಜನರ ಕಥೆಯನ್ನೆ ಡಂಕಿ ಸಿನಿಮಾದಲ್ಲಿ ಕಟ್ಟಿಕೊಟ್ಟಿದ್ದಾರೆ. ಡಂಕಿ ಚಿತ್ರವನ್ನು ಜಿಯೋ ಸ್ಟುಡಿಯೋಸ್, ರೆಡ್ ಚಿಲ್ಲೀಸ್ ಎಂಟರ್‌ಟೇನ್‌ಮೆಂಟ್ ಮತ್ತು ರಾಜ್‌ಕುಮಾರ್ ಹಿರಾನಿ (Rajkumar Hirani) ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಗೌರಿ ಖಾನ್ ಹಾಗೂ ರಾಜ್‌ಕುಮಾರ್ ಹಿರಾನಿ ನಿರ್ಮಿಸಿದ್ದಾರೆ.  ಈ ಕ್ರಿಸ್‌ಮಸ್‌  ಹಬ್ಬದ ಸಮಯದಲ್ಲಿ ಡಂಕಿ ಸಿನಿಮಾ ಹಲವು ಭಾಷೆಗಳಲ್ಲಿ ಬಿಡುಗಡೆ ಆಗಲಿದೆ

    ನಾಲ್ಕು ರಾಷ್ಟ್ರಪ್ರಶಸ್ತಿ ಗೆದ್ದಿರುವ ಸ್ಟಾರ್ ಡೈರೆಕ್ಟರ್ ರಾಜ್ ಕುಮಾರ್ ಹಿರಾನಿ ಡಂಕಿ ಸಿನಿಮಾದ ಸೂತ್ರಧಾರ. ಮುನ್ನಾ ಬಾಯ್ ಎಂಬಿಬಿಎಸ್, 3 ಈಡಿಯಟ್ಸ್, ಪಿಕೆ, ಸಂಜುನಂತಹ ಸೂಪರ್ ಡೂಪರ್ ಹಿಟ್ ಚಿತ್ರ ಕೊಟ್ಟಿರುವ ಹಿರಾನಿ, ಈ ಬಾರಿ ಐದು ಜನ ಸ್ನೇಹಿತರ ಕಥೆ ಹೇಳೋದಿಕ್ಕೆ ಬರ್ತಿದ್ದಾರೆ.

  • ‘ಡಂಕಿ’  ಅತಿ ಹೆಚ್ಚು ವೀವ್ಸ್ ಕಂಡ ಟೀಸರ್: ಶಾರುಖ್ ನಟನೆಯ ಸಿನಿಮಾ

    ‘ಡಂಕಿ’ ಅತಿ ಹೆಚ್ಚು ವೀವ್ಸ್ ಕಂಡ ಟೀಸರ್: ಶಾರುಖ್ ನಟನೆಯ ಸಿನಿಮಾ

    ಬಾಲಿವುಡ್ ಸ್ಟಾರ್ ಶಾರುಖ್ ಖಾನ್ (Shahrukh Khan) ಬ್ಯಾಕ್ ಟು ಬ್ಯಾಕ್ ಎರಡು ಗೆಲುವು ಕಂಡಿದ್ದಾರೆ. ಈ ವರ್ಷದಲ್ಲಿ ಪಠಾಣ್ ಮತ್ತು ಜವಾನ್‌ ಎರಡು ಬ್ಲಾಕ್‌ಬಸ್ಟರ್ ಹಿಟ್‌ಗಳನ್ನು ನೀಡಿದ್ದಾರೆ. ಮೇಲಾಗಿ ಆ ಸಿನಿಮಾಗಳು ಬಾಕ್ಸ್‌ ಆಫೀಸ್‌ನಲ್ಲೂ ಸಾವಿರಾರು ಕೋಟಿ ಕಮಾಯಿ ಮಾಡಿವೆ. ಈ ಎರಡು ಸಿನಿಮಾಗಳ ಬಳಿಕ ಮತ್ತೊಂದು ವಿಭಿನ್ನ ಅವತಾರದಲ್ಲಿ ಎದುರಾಗಿ ಮನರಂಜನೆ ನೀಡಲು ಶಾರುಖ್‌ ಖಾನ್‌ ಸಿದ್ಧರಾಗಿದ್ದಾರೆ. ರಾಜ್ ಕುಮಾರ್ ಹಿರಾನಿ ಸಾರಥ್ಯದ ಡಂಕಿ ಸಿನಿಮಾದ ಟೀಸರ್ ನಿನ್ನೆ ಕಿಂಗ್ ಖಾನ್ ಹುಟ್ಟುಹಬ್ಬಕ್ಕೆ ಬಿಡುಗಡೆಯಾಗಿತ್ತು. ಮಾಸ್ ಅವತಾರದಲ್ಲಿ ಅಬ್ಬರಿಸ್ತಿದ್ದ ಶಾರುಖ್ ಡಂಕಿ (Dunki) ಮೂಲಕ ಕ್ಲಾಸ್ ಅವತಾರದಲ್ಲಿ ದರ್ಶನ‌ ಕೊಟ್ಟಿದ್ದು, ಟೀಸರ್ (Teaser)  4 ಕೋಟಿ‌ ಮಿಲಿಯನ್ ಅಧಿಕ ವೀವ್ಸ್ ಕಂಡಿದೆ.   ಈ ವರ್ಷದಲ್ಲಿ ಅತಿ ಹೆಚ್ಚು ವೀವ್ಸ್ ಕಂಡ ಟೀಸರ್ ಇದಾಗಿದೆ.

    ನಿನ್ನೆ ಮುಂಬೈನಲ್ಲಿ ನಡೆದ ಡಂಕಿ ಸುದ್ದಿ ಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡಿರುವ ಶಾರುಖ್ ಖಾನ್,  ಪಠಾಣ್ ಹಾಗೂ ಜವಾನ್ ಸಿನಿಮಾಗಿಂತ ಡಂಕಿ ಸಿನಿಮಾ ಅತಿ ಹೆಚ್ಚು ಮನರಂಜನೆ ನೀಡಲಿದೆ. ರಾಜ್ ಕುಮಾರ್ ಹಿರಾನಿ (Rajkumar Hirani) ಅವರೊಂದಿಗೆ ಕೆಲಸ ಮಾಡುವುದು ಅದ್ಭುತ ಅನುಭವಾಗಿದೆ.  ಹಿರಾನಿ ಚಿತ್ರಗಳಲ್ಲಿ ಯಾವುದೇ ‌ನಿರ್ದಿಷ್ಟ ನಟನಿಗಿಂತ ಕಥೆಯೇ ನಾಯಕತ್ವ ವಹಿಸುತ್ತದೆ. ಶೀಘ್ರದಲ್ಲೇ ಡ್ರಾಪ್ 2 ಮತ್ತು ಡ್ರಾಪ್ 3 ವಿಡಿಯೋ ರಿಲೀಸ್ ಮಾಡುವುದಾಗಿ ತಿಳಿಸಿದರು.

    ರಾಜ್ಕುಮಾರ್ ಹಿರಾನಿ ಅವರು ‘ಡಂಕಿ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಅವರ ಸಿನಿಮಾಗಳಲ್ಲಿ ಭಾವನೆಗಳಿಗೆ, ಹಾಸ್ಯಕ್ಕೆ ಹೆಚ್ಚು ಪ್ರಾಧಾನ್ಯತೆ ಇರುತ್ತದೆ. ಎಂತಹುದೇ ಮಾಸ್ ಹೀರೋ ಆದರೂ ಅವರಿಗೆ ಬೇರೆಯದೇ ಗೆಟಪ್ ನೀಡುತ್ತಾರೆ. ‘ಡಂಕಿ’ ಚಿತ್ರದಲ್ಲೂ ಅದು ಮುಂದುವರಿದಿದೆ. ಶಾರುಖ್ ಖಾನ್ ಅವರು ಕ್ಲಾಸ್ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ.

    ಶಾರುಖ್ ಖಾನ್ ಜೊತೆ ಈ ಚಿತ್ರದಲ್ಲಿ ತಾಪ್ಸೀ ಪನ್ನು, ಬೋಮನ್ ಇರಾನಿ, ವಿಕ್ಕಿ ಕೌಶಲ್, ಅನಿಲ್ ಗ್ರೋವರ್, ವಿಕ್ರಮ್ ಕೊಚ್ಚರ್ ನಟಿಸಿದ್ದಾರೆ. ಪ್ರೀತಿ ಮತ್ತು ಸ್ನೇಹದ ಕಥೆಯಾಗಿರುವ ಡಂಕಿ ಸಿನಿಮಾವನ್ನು ಜಿಯೋ ಸ್ಟುಡಿಯೋಸ್, ರೆಡ್ ಚಿಲ್ಲೀಸ್ ಎಂಟರ್‌ಟೇನ್‌ಮೆಂಟ್ ಮತ್ತು ರಾಜ್‌ಕುಮಾರ್ ಹಿರಾನಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಗೌರಿ ಖಾನ್ ಹಾಗೂ ರಾಜ್‌ಕುಮಾರ್ ಹಿರಾನಿ ನಿರ್ಮಿಸಿದ್ದಾರೆ. ಅಭಿಜಾತ್ ಜೋಷಿ, ರಾಜ್‌ಕುಮಾರ್ ಹಿರಾನಿ ಮತ್ತು ಕನಿಕಾ ಧಿಲ್ಲೋನ್ ಕಥೆ ಬರೆದಿದ್ದಾರೆ. ಡಂಕಿ ಸಿನಿಮಾ ಕ್ರಿಸ್ಮಸ್ ಗೆ ವಿಶ್ವಾದ್ಯಂತ ರಿಲೀಸ್ ಆಗಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಡಂಕಿ’ ಟೀಸರ್ ಗೆ ‘ಬೆಂಕಿ’ ರೆಸ್ಪಾನ್ಸ್: ಶಾರುಖ್ ಮತ್ತೆ ಗೆಲ್ಲುತ್ತಾರೆ ಎಂದ ಫ್ಯಾನ್ಸ್

    ‘ಡಂಕಿ’ ಟೀಸರ್ ಗೆ ‘ಬೆಂಕಿ’ ರೆಸ್ಪಾನ್ಸ್: ಶಾರುಖ್ ಮತ್ತೆ ಗೆಲ್ಲುತ್ತಾರೆ ಎಂದ ಫ್ಯಾನ್ಸ್

    ಬಾಲಿವುಡ್ ಖ್ಯಾತ ನಟ ಶಾರುಖ್ ಖಾನ್ (Shahrukh Khan) ನಟನೆಯ ‘ಡಂಕಿ’ (Dunki) ಚಿತ್ರದ ಟೀಸರ್ (Teaser) ನಿನ್ನೆಯಷ್ಟೇ ಬಿಡುಗಡೆ ಆಗಿತ್ತು. ಟೀಸರ್ ಗೆ ಭಾರೀ ರೆಸ್ಪಾನ್ಸ್ ವ್ಯಕ್ತವಾಗಿದೆ. ಶಾರುಖ್ ಅಭಿಮಾನಿಗಳು ಟೀಸರ್ ನೋಡಿ ಕುಣಿದಿದ್ದಾರೆ. ಶಾರುಖ್ ಹೊಡೆದ ಡೈಲಾಗ್ ಗೆ ಸಿಳ್ಳೆ ಹಾಕಿದ್ದಾರೆ. ಸಂಗೀತ ಕೇಳಿ ಕುಣಿದಿದ್ದಾರೆ. ಒಟ್ಟಾರೆ ‘ಡಂಕಿ ಟೀಸರ್ ಗೆ ಬೆಂಕಿ’ ರೆಸ್ಪಾನ್ಸ್ ಸಿಕ್ಕಿದೆ. ಮತ್ತೆ ಶಾರುಖ್ ಗೆಲ್ಲೋದು ಗ್ಯಾರಂಟಿ ಅಂದಿದ್ದಾರೆ ಫ್ಯಾನ್ಸ್.

    ಶಾರುಖ್ ಖಾನ್ ಜನ್ಮದಿನದ ಸಂಭ್ರಮದಂದು ಕಿಂಗ್ ಖಾನ್ ಹುಟ್ಟುಹಬ್ಬದ ಸ್ಪೆಷಲ್ ಆಗಿ ಡಂಕಿ ಸಿನಿಮಾದ ಟೀಸರ್ ಉಡುಗೊರೆಯಾಗಿ ಸಿಕ್ಕಿದೆ. ನಾಲ್ಕು ರಾಷ್ಟ್ರಪ್ರಶಸ್ತಿ ಗೆದ್ದಿರುವ ಸ್ಟಾರ್ ಡೈರೆಕ್ಟರ್ ರಾಜ್ ಕುಮಾರ್  (Rajkumar Hirani) ಹಿರಾನಿ ಡಂಕಿ ಸಿನಿಮಾದ ಸೂತ್ರಧಾರ. ಮುನ್ನಾ ಬಾಯ್ ಎಂಬಿಬಿಎಸ್, 3 ಈಡಿಯಟ್ಸ್, ಪಿಕೆ, ಸಂಜುನಂತಹ ಸೂಪರ್ ಡೂಪರ್ ಹಿಟ್ ಚಿತ್ರ ಕೊಟ್ಟಿರುವ ಹಿರಾನಿ, ಈ ಬಾರಿ ಐದು ಜನ ಸ್ನೇಹಿತರ ಕಥೆ ಹೇಳೋದಿಕ್ಕೆ ಬರ್ತಿದೆ. ಒಂದೊಳ್ಳೆ ಸಂದೇಶದ ಜೊತೆಗೆ ಮನರಂಜನಾತ್ಮಕ ಅಂಶಗಳನ್ನು ಬೆರೆಸಿ ಹೆಣೆದಿರುವ ಡಂಕಿ ಟೀಸರ್ ಗೆ ಅದ್ಭುತ ರೆಸ್ಪಾನ್ಸ್ ಸಿಕ್ತಿದೆ.

    ಶಾರುಖ್ ಖಾನ್ ನಾಯಕನಾಗಿ ನಟಿಸಿದ್ದು, ಬೊಮನ್ ಇರಾನಿ, ತಾಪ್ಸೀ ಪನ್ನು, ವಿಕ್ಕಿ ಕೌಶಲ್, ಅನಿಲ್ ಗ್ರೋವರ್, ವಿಕ್ರಮ್ ಕೊಚ್ಚರ್ ತಾರಾಬಳಗದಲ್ಲಿದ್ದಾರೆ. ಪ್ರೀತಿ ಮತ್ತು ಸ್ನೇಹದ ಕಥೆಯಾಗಿರುವ ಡಂಕಿ ಸಿನಿಮಾವನ್ನು JIO ಸ್ಟುಡಿಯೋಸ್, ರೆಡ್ ಚಿಲ್ಲೀಸ್ ಎಂಟರ್‌ಟೈನ್‌ಮೆಂಟ್ ಮತ್ತು ರಾಜ್‌ಕುಮಾರ್ ಹಿರಾನಿ ಫಿಲ್ಮ್ಸ್ ನಡಿ ರಾಜ್‌ಕುಮಾರ್ ಹಿರಾನಿ ಮತ್ತು ಗೌರಿ ಖಾನ್ ನಿರ್ಮಿಸಿದ್ದಾರೆ. ಅಭಿಜಾತ್ ಜೋಷಿ, ರಾಜ್‌ಕುಮಾರ್ ಹಿರಾನಿ ಮತ್ತು ಕನಿಕಾ ಧಿಲ್ಲೋನ್ ಕಥೆ ಬರೆದಿದ್ದಾರೆ. ಡಂಕಿ ಸಿನಿಮಾ ಕ್ರಿಸ್ಮಸ್ ಗೆ ವಿಶ್ವಾದ್ಯಂತ ರಿಲೀಸ್ ಆಗಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಲಾರ್, ಡಂಕಿ ಜೊತೆ ಮೋಹನ್ ಲಾಲ್ ಫೈಟ್: ಮೆಗಾ ಫೈಟ್

    ಸಲಾರ್, ಡಂಕಿ ಜೊತೆ ಮೋಹನ್ ಲಾಲ್ ಫೈಟ್: ಮೆಗಾ ಫೈಟ್

    ಭಾರತೀಯ ಸಿನಿಮಾ ರಂಗ ಡಿಸೆಂಬರ್ ನಲ್ಲಿ ಮೆಗಾ ಕಾಳಗಕ್ಕೆ ಸಾಕ್ಷಿಯಾಗಲಿದೆ. ಚಿತ್ರೋದ್ಯಮದ ಮೂವರು ಭಾರೀ ಬಜೆಟ್ ಚಿತ್ರಗಳು ಬಿಡುಗಡೆ ಆಗುತ್ತಿವೆ. ತೆಲುಗಿನ ಪ್ರಭಾಸ್, ಬಾಲಿವುಡ್ ಶಾರುಖ್ ಖಾನ್ ಮತ್ತು ಮಲಯಾಳಂ ಸಿನಿಮಾ ರಂಗದ ದಿಗ್ಗಜ ಮೋಹನ್ ಲಾಲ್ (Mohanlal) ನಟನೆಯ ಚಿತ್ರಗಳು ಒಂದೇ ದಿನದಲ್ಲಿ ರಿಲೀಸ್ ಆಗುವ ಮೂಲಕ ಭರ್ಜರಿ ಪೈಪೋಟಿ ನೀಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಮೋಹನ್ ಲಾಲ್ ನಟನೆಯ ನೆರು ಸಿನಿಮಾ ಡಿಸೆಂಬರ್ 21ಕ್ಕೆ ಬಿಡುಗಡೆ ಆಗುತ್ತಿದೆ.

    ಡಂಕಿ ವರ್ಸಸ್ ಸಲಾರ್

    ಅಂದುಕೊಂಡಂತೆ ಆಗಿದ್ದರೆ ನಿನ್ನೆಯೇ ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ ರಿಲೀಸ್ ಆಗಬೇಕಿತ್ತು. ನಾನಾ ಕಾರಣಗಳಿಂದಾಗಿ ಅದು ಸಾಧ್ಯವಾಗಲಿಲ್ಲ. ಆದರೆ, ಸಲಾರ್ ಯಾವಾಗ ರಿಲೀಸ್ ಎನ್ನುವುದಕ್ಕೆ ಉತ್ತರ ಸಿಕ್ಕಿದೆ. ಸ್ವತಃ ನಿರ್ಮಾಣ ಸಂಸ್ಥೆಯೇ (Hombale Films)  ಹೊಸ ದಿನಾಂಕವನ್ನು ಘೋಷಣೆ ಮಾಡಿದ್ದು, ಡಿಸೆಂಬರ್ 22 ರಂದು ವಿಶ್ವದಾದ್ಯಂತ ಸಲಾರ್ ಚಿತ್ರವನ್ನು ಬಿಡುಗಡೆ ಮಾಡುವುದಾಗಿ ಹೇಳಿದೆ.

    ಭಾರತೀಯ ಸಿನಿಮಾ ರಂಗದಲ್ಲಿ ಅಚ್ಚರಿಯ ಬೆಳವಣಿಗೆಯೊಂದು ನಡೆದಿದೆ. ಇದೇ ಮೊದಲ ಬಾರಿಗೆ ಶಾರುಖ್ (Shah Rukh Khan) ಚಿತ್ರದ ಎದುರು ವಿಶ್ವಮಟ್ಟದಲ್ಲಿ ಪ್ರಭಾಸ್ ಸಿನಿಮಾ ಎದುರಾಗಿದೆ. ಇಂಥದ್ದೊಂದು ಮಾಹಿತಿಯನ್ನು ಅಧಿಕೃತವಾಗಿ ಚಿತ್ರತಂಡಗಳೇ ಹೇಳಿಕೊಂಡಿವೆ.

    ಈಗಾಗಲೇ ಶಾರುಖ್ ಖಾನ್ ನಟನೆಯ ಡಂಕಿ (Dunki) ಸಿನಿಮಾವನ್ನು  ಕ್ರಿಸ್ ಮಸ್ ಹಬ್ಬಕ್ಕಾಗಿ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧ ಮಾಡಿಕೊಂಡಿದೆ. 22 ಡಿಸೆಂಬರ್ 2023ರಂದು ಡಂಕಿ ಸಿನಿಮಾವನ್ನು ರಿಲೀಸ್ ಮಾಡುವುದಾಗಿ ಚಿತ್ರತಂಡವೇ ಅಧಿಕೃತವಾಗಿ ಘೋಷಣೆ ಮಾಡಿದೆ. ಅಂದೇ ಪ್ರಭಾಸ್ (Prabhas) ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್ ನ ‘ಸಲಾರ್’ ಚಿತ್ರವನ್ನೂ ಬಿಡುಗಡೆ ಮಾಡಲು ಹೊಂಬಾಳೆ ಫಿಲ್ಮ್ಸ್ ರೆಡಿಯಾಗಿದೆ.

     

    ಈಗಾಗಲೇ ಒಂದರ ಹಿಂದೆ ಒಂದು ಸಿನಿಮಾವನ್ನು ಗೆಲ್ಲಿಸಿಕೊಂಡಿದ್ದಾರೆ ಶಾರುಖ್ ಖಾನ್, ಪಠಾಣ್ ಮತ್ತು ಜವಾನ್ ಸಾವಿರಾರು ಕೋಟಿ ಕಲೆಕ್ಷನ್ ಮಾಡಿ ದಾಖಲೆ ಬರೆದಿವೆ. ಈ ಗೆಲುವಿನ ನಂತರ ಡಂಕಿ ಕೂಡ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈ ಹೊತ್ತಲ್ಲಿ ಸಲಾರ್ ಸಿನಿಮಾ ಕೂಡ ರಿಲೀಸ್ ( Release) ಆಗುತ್ತಿದೆ. ಎರಡೂ ಚಿತ್ರಗಳು ಬಾಕ್ಸ್ ಆಫೀಸಿನಲ್ಲಿ ಹೇಗೆ ಕಮಾಯಿ ಮಾಡಲಿವೆ ಎಂದು ಕಾದು ನೋಡಬೇಕು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]