Tag: ಶಾರೂಕ್ ಖಾನ್

  • ಬುರ್ಜ್‌ ಖಲೀಫಾ ಮೇಲೆ ಶಾರೂಖ್‌ ಖಾನ್‌ಗೆ ವರ್ಣರಂಜಿತ ಬರ್ತ್‌ ಡೇ ವಿಶ್‌

    ಬುರ್ಜ್‌ ಖಲೀಫಾ ಮೇಲೆ ಶಾರೂಖ್‌ ಖಾನ್‌ಗೆ ವರ್ಣರಂಜಿತ ಬರ್ತ್‌ ಡೇ ವಿಶ್‌

    ದುಬೈ: ಜೀವನದಲ್ಲಿ 56ನೇ ವಸಂತಕ್ಕೆ ಕಾಲಿಟ್ಟ ಬಾಲಿವುಡ್‌ ಖ್ಯಾತ ನಟ ಶಾರೂಖ್‌ ಖಾನ್‌ ಅವರಿಗೆ ವಿಶ್ವದ ಅತ್ಯಂತ ಎತ್ತರದ ಕಟ್ಟಡ ದುಬೈನ ಬುರ್ಜ್‌ ಖಲೀಫಾ ಮೇಲೆ ಮಂಗಳವಾರ ರಾತ್ರಿ ವರ್ಣರಂಜಿತ ದೀಪಾಲಂಕಾರದೊಂದಿಗೆ ಶುಭಾಶಯ ತಿಳಿಸಲಾಯಿತು.

    ಶಾರೂಖ್ ಖಾನ್‌ ಅಭಿನಯದ ಸಿನಿಮಾದ ಹಾಡು, ಅವರ ಫೋಟೊ ಹಾಗೂ “ಜನ್ಮದಿನದ ಶುಭಾಶಯಗಳು ಶಾರೂಖ್ ಖಾನ್‌.. ವಿ ಲವ್‌ ಯು” ಎಂಬ ಸಾಲುಗಳು ಬುರ್ಜ್‌ ಖಲೀಫಾ ಕಟ್ಟಡ ಮೇಲೆ ವರ್ಣ ರಂಜಿತವಾಗಿ ರಾರಾಜಿಸಿದವು. ಈ ವಿಡಿಯೊವನ್ನು ಎಮರ್‌ ಪ್ರಾಪರ್ಟೀಸ್‌ ಸ್ಥಾಪಕ ಮೊಹಮದ್‌ ಅಲ್ಬರ್‌ ಅವರು ಟ್ವಿಟರ್‌ನಲ್ಲಿ ಶೇರ್‌ ಮಾಡಿದ್ದು, ಜನ್ಮದಿನದ ಶುಭಾಶಯ ತಿಳಿಸಿದ್ದಾರೆ. ಇದನ್ನೂ ಓದಿ: ತಾರೆಯರು ಒಗ್ಗಟ್ಟಾಗಿರೋಣ: ಎಲ್ಲ ನಟರಿರುವ ಫೋಟೊ ಹಂಚಿಕೊಂಡು ಜಗ್ಗೇಶ್‌ ಕರೆ

    ಕಳೆದ ವರ್ಷವೂ ಬುರ್ಜ್‌ ಖಲೀಫಾ ಶಾರೂಖ್ ಖಾನ್‌ ಅವರ ಹುಟ್ಟುಹಬ್ಬದಂದು ವರ್ಣ ರಂಜಿತವಾಗಿ ಶುಭಾಶಯ ತಿಳಿಸಿತ್ತು. ಆಗ ವಿಡಿಯೊ ಹಂಚಿಕೊಂಡು ಶಾರೂಖ್, “ವಿಶ್ವದ ಅತ್ಯಂತ ಎತ್ತರದ ಕಟ್ಟಡದ ಪರದೆಯ ಮೇಲೆ ನನ್ನನ್ನು ನೋಡಲು ಸಂತೋಷವಾಗಿದೆ. ಸ್ನೇಹಿತ ಮೊಹಮದ್‌ ಅಲಬ್ಬರ್‌ ನನ್ನ ಮುಂದಿನ ಚಿತ್ರಕ್ಕೂ ಮುಂಚೆಯೇ ನನ್ನನ್ನು ದೊಡ್ಡ ಪರದೆಯ ಮೇಲೆ ಬಿಂಬಿಸಿದ್ದಾರೆ. ನಿಮ್ಮೆಲ್ಲರಿಗೂ ಪ್ರೀತಿಪೂರ್ವಕ ಧನ್ಯವಾದಗಳು. ನನ್ನ ಮಕ್ಕಳು ಇದರಿಂದ ಪುಳಕಿತರಾಗಿದ್ದಾರೆ. ನಾನು ಇದನ್ನು ಪ್ರೀತಿಸುತ್ತೇನೆ” ಎಂದು ಖುಷಿ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ʼಪುನೀತ ನೆನಪು’ ದುಬೈ ಕನ್ನಡಿಗಾಸ್ ಫೆಡರೇಷನ್ ವತಿಯಿಂದ ಅಪ್ಪುಗೆ ನುಡಿನಮನ

    ನಟ ಶಾರೂಖ್‌ ಖಾನ್‌ ಅವರು ನ.2ರಂದು ತಮ್ಮ 56ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಅಭಿಮಾನಿಗಳು ಸಹ ವಿಶಿಷ್ಟವಾಗಿ ತಮ್ಮ ನೆಚ್ಚಿನ ನಟನ ಜನ್ಮದಿನ ಆಚರಿಸಿದ್ದಾರೆ.

  • ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್‍ಗೆ ಜಾಮೀನು ಮಂಜೂರು

    ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್‍ಗೆ ಜಾಮೀನು ಮಂಜೂರು

    ಮುಂಬೈ: ಐಷಾರಾಮಿ ಡ್ರಗ್ಸ್ ಕೇಸ್ ಸಂಬಂಧಿಸಿದಂತೆ ಎನ್‍ಸಿಬಿಯಿಂದ ಬಂಧನಕ್ಕೆ ಒಳಗಾಗಿದ್ದ ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್‍ಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

    ಮುಂಬೈನ ಸೆಷನ್ಸ್ ಕೋರ್ಟ್ ಆರ್ಯನ್ ಖಾನ್‍ಗೆ ಜಾಮೀನು ನಿರಾಕರಿಸಿತ್ತು. ಆರ್ಯನ್ ಖಾನ್ ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ ನಲ್ಲಿ ಹಿರಿಯ ವಕೀಲ ಮುಕುಲ್ ರೊಹ್ಟಗಿ ಆರ್ಯನ್ ಪರ ವಾದ ಮಂಡಿಸಿದ್ದರು. ಇದನ್ನೂ ಓದಿ: ರಾಗಿಣಿ ಕೇಸ್ ಉಲ್ಲೇಖ, ಆರ್ಯನ್‍ಗೆ ಜಾಮೀನು ನೀಡಿ – ಮುಕುಲ್ ರೊಹ್ಟಗಿ ವಾದ

    ಅರ್ಜಿ ವಿಚಾರಣೆ ವೇಳೆ ಮುಕುಲ್ ರೊಹ್ಟಗಿ ಜಾಮೀನು ನೀಡುವಂತೆ ಮನವಿ ಮಾಡಿದ್ದರು. ಈ ಮನವಿಯನ್ನು ಪುರಸ್ಕರಿಸಿರುವ ಹೈಕೋರ್ಟ್ ಇಂದು ಜಾಮೀನು ನೀಡಿದೆ. ಇದರೊಂದಿಗೆ ಆರ್ಯನ್ ಖಾನ್ 22 ದಿನಗಳ ಜೈಲು ವಾಸದ ಬಳಿಕ ಬಿಡುಗಡೆಗೊಂಡಿದ್ದಾರೆ. ಆರ್ಯನ್ ಖಾನ್ ಜೊತೆಗೆ  ಅರ್ಬಾಜ್ ಮರ್ಚೆಂಟ್ ಮತ್ತು  ಮುನ್ಮುಮ್ ಧಮೇಚಾಗೂ ಜಾಮೀನು ಮಂಜೂರಾಗಿದೆ.

    ಆರ್ಯನ್ ಖಾನ್ ಪರ ವಕೀಲರ ವಾದ ಏನಿತ್ತು?
    ಎನ್‍ಸಿಬಿ ವಿಚಾರಣೆ ವೇಳೆ ಆರ್ಯನ್ ಖಾನ್ ನಿಂದ ವಶಪಡಿಸಿಕೊಂಡಿರುವ ವಾಟ್ಸಪ್ ಚಾಟ್‍ಗೂ ಇಡೀ ಇಡೀ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ ಮತ್ತು ಎನ್‍ಸಿಬಿ ತನಿಖಾಧಿಕಾರಿ ಸಮೀರ್ ವಾಂಖೆಡೆ, ಎನ್‍ಸಿಪಿಯ ನವಾಬ್ ಮಲಿಕ್ ಮತ್ತು ಪ್ರಕರಣದ ಸಾಕ್ಷಿ ಪ್ರಭಾಕರ್ ಸೈಲ್ ಅವರ ವಿರುದ್ಧದ ಆರೋಪಕ್ಕೂ ಆರ್ಯನ್ ಖಾನ್‍ಗೂ ಯಾವುದೇ ಸಂಬಂಧವಿಲ್ಲ ಎಂದು ರೊಹ್ಟಗಿ ಹೇಳಿದ್ದರು.

    ಆದರೆ ಆರ್ಯನ್ ಖಾನ್ ಪ್ರಭಾವಿ ವ್ಯಕ್ತಿಯಾಗಿದ್ದು, ವಿಚಾರಣೆ ಹಂತದಲ್ಲಿ ಜಾಮೀನು ನೀಡುವುದು ಸೂಕ್ತವಲ್ಲ, ಅವರಿಗೆ ಜಾಮೀನು ನೀಡಿದರೆ ಸಾಕ್ಷಿಗಳ ಪ್ರಭಾವ ಬೀರಬಹುದು ಈ ಹಿನ್ನಲೆ ಜಾಮೀನು ನೀಡದಂತೆ ಎನ್‍ಸಿಬಿ ಪರ ವಕೀಲರು ವಾದ ಮಂಡಿಸಿದ್ದರು. ಇದನ್ನೂ ಓದಿ: ಸಿಗದ ಜಾಮೀನು – ಜೈಲಿನಲ್ಲಿ ರಾಮನ ಮೊರೆ ಹೋದ ಆರ್ಯನ್ ಖಾನ್

    ಇದಕ್ಕೆ ಆಕ್ಷೇಪಿಸಿದ ಮುಕುಲ್ ರೊಹ್ಟಗಿ, ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಸಚಿವಾಲಯ ತರಲು ಹೊರಟಿರುವ ತಿದ್ದುಪಡಿಯ ಬಗ್ಗೆ ಮಾಹಿತಿ ನೀಡಿದರು. ಕೇಂದ್ರ ಸರ್ಕಾರವೇ ಮಾದಕ ವಸ್ತುಗಳ ಸೇವನೆಯನ್ನು ಅಧರಿಸಿ ಜೈಲು ಶಿಕ್ಷೆ ನೀಡುವುದು ವ್ಯವಸ್ಥೆ ಬದಲಿಸಲು ಹೊರಟಿದ್ದು ಆರ್ಯನ್ ಖಾನ್ ಜಾಮೀನು ನಿರಾಕರಿಸುವಂತಿಲ್ಲ ಎಂದಿದ್ದರು.

    ನಿನ್ನೆ ಎನ್.ಡಬ್ಲ್ಯೂ ಸಾಂಬ್ರೆ, ಆರ್ಯನ್ ಖಾನ್ ಸ್ನೇಹಿತ ಅರ್ಬಾಜ್ ಮರ್ಚೆಂಟ್ ಪರ ವಕೀಲರ ವಾದವನ್ನು ಆಲಿಸಿದರು. ಅರ್ಬಾಜ್ ಮರ್ಚೆಂಟ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಮಿತ್ ದೇಸಾಯಿ ಎನ್‍ಸಿಬಿ ಅಧಿಕಾರಿಗಳ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದರು. ಇದನ್ನೂ ಓದಿ: ಮೊದಲ ಬಾರಿಗೆ ಮಗನನ್ನು ಭೇಟಿಯಾದ ಶಾರೂಖ್

    ವಿಚಾರಣೆ ವೇಳೆ ಎನ್‍ಸಿಬಿ ಅಧಿಕಾರಿಗಳು ವಾಟ್ಸಪ್ ಚಾಟ್‍ಗಳನ್ನು ಉದ್ದೇಶಪೂರ್ವಕವಾಗಿ ಮಾಧ್ಯಮಗಳಿಗೆ ನೀಡಲಾಗಿದೆ ಎಂದು ಅವರು ಆರೋಪಿಸಿದ್ದರು. ವಾಟ್ಸಪ್ ಚಾಟ್‍ಗಳು ನ್ಯಾಯಲಯಕ್ಕೆ ದಾಖಲಿಸುವ ಮುನ್ನ ಮಾಧ್ಯಮಗಳಿಗೆ ಹಂಚಿಕೆಯಾಗಿದೆ. ಇದು ಪ್ರಕರಣದಲ್ಲಿ ಸಿಕ್ಕಿಹಾಕಿಸುವ ಪ್ರಯತ್ನ ಎಂದು ಅಮಿತ್ ದೇಸಾಯಿ ಹೇಳಿದ್ದರು.

    ಅರ್ಬಾಜ್ ಮರ್ಚೆಂಟ್ ವಿರುದ್ಧ ಆರಂಭದಲ್ಲಿ ಡ್ರಗ್ ಸೇವನೆ ಪ್ರಕರಣ ಮಾತ್ರ ದಾಖಲಿಸಲಾಗಿತ್ತು ಬಳಿಕ ಡ್ರಗ್ ಜಾಲದ ಪಿತೂರಿಯನ್ನು ಸೇರಿಸಲಾಗಿದೆ, ಆದರೆ ಪಿತೂರಿ ನಡೆಸಿರುವುದಕ್ಕೆ ಯಾವುದೇ ವಾಟ್ಸಪ್ ಚಾಟ್ ಸಾಕ್ಷ್ಯಗಳು ಬೆಂಬಲಿಸುತ್ತಿಲ್ಲ ಹೀಗಾಗಿ ಜಾಮೀನು ನೀಡಬಹುದಾದ ಪ್ರಕರಣ ಇದಾಗಿದೆ ಎಂದಿದ್ದರು.

  • ಸಮೀರ್ ವಾಂಖೆಡೆ ವಿರುದ್ಧ ಲಂಚದ ಆರೋಪ – ತನಿಖೆಗೆ ಸೂಚನೆ

    ಸಮೀರ್ ವಾಂಖೆಡೆ ವಿರುದ್ಧ ಲಂಚದ ಆರೋಪ – ತನಿಖೆಗೆ ಸೂಚನೆ

    ಮುಂಬೈ: ಮುಂಬೈನಲ್ಲಿ ಐಷಾರಾಮಿ ಹಡಗಿನಲ್ಲಿ ನಡೆದ ಡ್ರಗ್ ಪಾರ್ಟಿ ವಿಚಾರಕ್ಕೆ ಸಂಬಂಧಿಸಿದಂತೆ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿದಂತೆ ಹಲವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿರುವ ತನಿಖಾಧಿಕಾರಿ ಸಮೀರ್ ವಾಂಖೆಡೆ ವಿರುದ್ಧವೇ ಈಗ ತನಿಖೆಗೆ ಸೂಚಿಸಲಾಗಿದೆ.

    ಪ್ರಕರಣದ ಪ್ರಮುಖ ಸಾಕ್ಷಿ ಪ್ರಭಾಕರ್ ಸೈಲ್ 25 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟಿರುವ ಆರೋಪದ ಹಿನ್ನಲೆಯಲ್ಲಿ ಮುಂಬೈ ವಲಯ ನಿರ್ದೇಶಕ ಸಮೀರ್ ವಾಂಖೆಡೆ ವಿರುದ್ಧ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‍ಸಿಬಿ) ವಿಜಿಲೆನ್ಸ್ (ವಿಚಕ್ಷಣ ದಳ) ತನಿಖೆಗೆ ಆದೇಶಿಸಿದೆ. ಇದನ್ನೂ ಓದಿ: ಆರ್ಯನ್ ಖಾನ್ ಡ್ರಗ್ಸ್ ಕೇಸ್‍ಗೆ ಟ್ವಿಸ್ಟ್ – NCB ಮುಖ್ಯಸ್ಥರ ವಿರುದ್ಧ ಗಂಭೀರ ಆರೋಪ

    ಎನ್‍ಸಿಬಿ ಪ್ರಧಾನ ಕಛೇರಿಯಲ್ಲಿ ಈ ವಿಚಾರಣೆ ನಡೆಯಲಿದ್ದು ಉತ್ತರ ಪ್ರದೇಶದ ಎನ್‍ಸಿಬಿ ಉಪ ಮಹಾನಿರ್ದೇಶಕ (ಡಿಡಿಜಿ) ಜ್ಞಾನೇಶ್ವರ್ ಸಿಂಗ್ ಸಮೀರ್ ವಾಖೆಂಡೆ ವಿಚಾರಣೆ ನಡೆಸಲಿದ್ದಾರೆ. ಜ್ಞಾನೇಶ್ವರ್ ಸಿಂಗ್ ಮಾದಕದ್ರವ್ಯ ವಿರೋಧಿ ಏಜೆನ್ಸಿಯ ಮುಖ್ಯ ಜಾಗೃತ ಅಧಿಕಾರಿ (ಸಿವಿಒ) ಕೂಡ ಆಗಿದ್ದಾರೆ ಎಂದು ವರದಿಯಾಗಿದೆ.

    ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜ್ಞಾನೇಶ್ವರ್ ಸಿಂಗ್, ನಮ್ಮದು ವೃತ್ತಿಪರ ಸಂಸ್ಥೆ, ನಮ್ಮ ಸಿಬ್ಬಂದಿ ವಿರುದ್ಧ ಯಾವುದೇ ಆರೋಪಗಳು ಕೇಳಿ ಬಂದರು ನಾವು ವಿಚಾರಣೆಗೆ ಮುಕ್ತರಾಗಿದ್ದೇವೆ. ವಿಚಾರಣೆ ಪಾರದರ್ಶಕ ಮತ್ತು ನ್ಯಾಯಸಮ್ಮತವಾಗಿರುತ್ತದೆ ಎಂದಿದ್ದಾರೆ. ಸಮೀರ್ ವಾಂಖೆಡೆ ಪ್ರಕರಣ ತನಿಖೆ ಮುಂದುವರಿಸಿವ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಇದು ಅಕಾಲಿಕ ಪ್ರಶ್ನೆ ಎಂದಷ್ಟೇ ಹೇಳಿದ್ದಾರೆ. ಇದನ್ನೂ ಓದಿ: ಸಿಗದ ಜಾಮೀನು – ಜೈಲಿನಲ್ಲಿ ರಾಮನ ಮೊರೆ ಹೋದ ಆರ್ಯನ್ ಖಾನ್

    ಡ್ರಗ್ ಪಾರ್ಟಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಪ್ರಮುಖ ಸಾಕ್ಷಿ ಪ್ರಭಾಕರ್ ಸೈಲ್, ಆರ್ಯನ್ ಖಾನ್ ಬಿಡುಗಡೆಗೆ 25 ಕೋಟಿ ರೂ ಬಿಡುಗಡೆ ಡಿಮ್ಯಾಂಡ್ ಮಾಡಲಾಗಿದೆ. ಕನಿಷ್ಠ 18 ಕೋಟಿ ನೀಡಿದರೆ ಆರ್ಯನ್ ಖಾನ್ ಬಿಡುಗಡೆ ಮಾಡಲಾಗುವುದು, ಇದರಲ್ಲಿ 8 ಕೋಟಿ ಹಣ ತನಿಖಾಧಿಕಾರಿ ಸಮೀರ್ ವಾಂಖೆಡೆ ನೀಡಬೇಕಿದೆ ಎಂದು ಆರೋಪಿಸಿದ್ದರು. ಹಣಕ್ಕಾಗಿ ಸಮೀರ್ ವಾಂಖೆಡೆ ಕೆಪಿ ಗೋಸಾವಿ ಮೂಲಕ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಲಾಗಿತ್ತು.

    ಇಂದು ಮುಂಬೈ ಪೊಲೀಸ್ ಕಮಿಷನರ್ ಕಚೇರಿಗೆ ಭೇಟಿ ನೀಡಿದ್ದ ಪ್ರಭಾಕರ್ ಸೈಲ್, ಜೀವ ಭಯವಿದ್ದು ರಕ್ಷಣೆ ನೀಡುವಂತೆ ದೂರು ನೀಡಿದ್ದರು. ಇದಾದ ಬೆನ್ನಲೆ ಸಮೀರ್ ವಾಂಖೆಡೆ ವಿರುದ್ಧ ತನಿಖೆಗೆ ಆದೇಶಿಸಲಾಗಿದೆ. ಇದನ್ನೂ ಓದಿ: ಮೊದಲ ಬಾರಿಗೆ ಮಗನನ್ನು ಭೇಟಿಯಾದ ಶಾರೂಖ್

  • ಆರ್ಯನ್ ಖಾನ್ ಡ್ರಗ್ಸ್ ಕೇಸ್‍ಗೆ ಟ್ವಿಸ್ಟ್ – NCB ಮುಖ್ಯಸ್ಥರ ವಿರುದ್ಧ ಗಂಭೀರ ಆರೋಪ

    ಆರ್ಯನ್ ಖಾನ್ ಡ್ರಗ್ಸ್ ಕೇಸ್‍ಗೆ ಟ್ವಿಸ್ಟ್ – NCB ಮುಖ್ಯಸ್ಥರ ವಿರುದ್ಧ ಗಂಭೀರ ಆರೋಪ

    ಮುಂಬೈ: ಬಾಲಿವುಡ್ ನಟ ಶಾರೂಕ್ ಖಾನ್ ಮಗ ಶಾರೂಖ್ ಖಾನ್ ಡ್ರಗ್ಸ್ ಕೇಸ್‍ಗೆ ಟ್ವಿಸ್ಟ್ ಸಿಕ್ಕಿದೆ. ಎನ್‍ಸಿಬಿ ಮುಖ್ಯಸ್ಥ ಸಮೀರ್ ವಾಂಖೆಡೆ ವಿರುದ್ಧ ಬಿಜೆಪಿಯ ಕೆಪಿ ಗೋಸಾವಿ ಆಪ್ತ ಪ್ರಭಾಕರ್ ಸೈಲ್ ಗಂಭೀರ ಆರೋಪವೊಂದನ್ನು ಮಾಡಿದ್ದಾರೆ.

    ಆರ್ಯನ್ ಬಿಡುಗಡೆ ಮಾಡೋಕೆ 25 ಕೋಟಿಗೆ ಬೇಡಿಕೆ ಇಟ್ಟಿದ್ದಾರೆ. 18 ಕೋಟಿಗೆ ಡೀಲ್ ಆಗುವಂತೆ ಕಾಣುತ್ತಿದೆ. ಇದರಲ್ಲಿ ಸಮೀರ್ ವಾಂಖೆಡೆಗೆ 8 ಕೋಟಿ ಹೋಗ್ಬೇಕು ಅಂತಾ ಎನ್‍ಸಿಬಿ ಕಚೇರಿಯಲ್ಲಿಯೇ ಕೆಪಿ ಗೋಸಾವಿ ಹೇಳಿಕೆ ನೀಡಿದ್ದಾರೆ. ಅಷ್ಟೇ ಅಲ್ಲದೆ ಕ್ರೂಸ್ ರೇಡ್‍ಗೆ ಸಂಬಂಧಿಸಿದಂತೆ ಖಾಲಿ ಪುಟುಗಳ ಪಂಚನಾಮೆ ಪತ್ರಕ್ಕೆ ಸಮೀರ್ ವಾಂಖೆಡೆ ತಮ್ಮಿಂದ ಸಹಿ ಹಾಕಿಸಿಕೊಂಡಿದ್ದಾರೆ ಎಂದು ಪ್ರಭಾಕರ್ ಸೈಲ್ ಕೂಡ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಶಾರೂಖ್ ಖಾನ್ ಬಿಜೆಪಿ ಸೇರಿದ್ರೆ ಡ್ರಗ್ಸ್ ಸಕ್ಕರೆ ಪುಡಿಯಾಗುತ್ತೆ: ಛಗನ್ ಭುಜ್‍ಬಲ್

    ಇದಕ್ಕೆ ಸಂಬಂಧಿಸಿ ವೀಡಿಯೋ ರಿಲೀಸ್ ಮಾಡಿರುವ ಸಂಜಯ್ ರೌತ್, ಇದೆಲ್ಲ ಸುಳ್ಳು ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಂಡು ಸೈಲ್‍ನ್ನು ಬಂಧಿಸಬೇಕು ಎಂದು ಸಮೀರ್ ಒತ್ತಾಯಿಸಿದ್ದಾರೆ. ಜೊತೆಗೆ ಈ ಆರೋಪಗಳೆಲ್ಲ ಸುಳ್ಳು. ಶೀಘ್ರ ಸ್ಪಷ್ಟನೆ ಕೊಡುತ್ತೇನೆ ಎಂದು ಪ್ರತಿಕ್ರಿಯಿಸಿದ್ದಾರೆ. ಎನ್‍ಸಿಬಿ ಕೂಡ ಸಮೀರ್ ಬೆಂಬಲಕ್ಕೆ ಧಾವಿಸಿದೆ. ಸದ್ಯ ಕೆಪಿ ಗೋಸಾವಿ ನಾಪತ್ತೆಯಾಗಿದ್ದಾರೆ. ತಮ್ಮ ಜೀವಕ್ಕೆ ಸಮೀರ್‍ರಿಂದ ಅಪಾಯವಿದೆ ಎಂಬ ಆತಂಕವನ್ನು ಸೈಲ್ ಹೊರಹಾಕಿದ್ದಾರೆ. ಇದನ್ನೂ ಓದಿ: ಶಾರೂಖ್ ಖಾನ್ ಪುತ್ರನಾಗಿದ್ದರಿಂದ ಆರ್ಯನ್ ಖಾನ್ ಬಲಿಪಶು: ದಿಗ್ವಿಜಯ್ ಸಿಂಗ್

  • ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್‍ಗೆ ಜೈಲೇ ಗತಿ

    ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್‍ಗೆ ಜೈಲೇ ಗತಿ

    ಮುಂಬೈ: ಶಾರೂಕ್ ಖಾನ್ ಪುತ್ರ ಆರ್ಯನ್ ಜಾಮೀನು ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ.

    ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಮಾಡಿ ಎನ್‍ಸಿಬಿ ಬಲೆಗೆ ಬಿದ್ದಿದ್ದ ಬಾಲಿವುಡ್ ನಟ ಶಾರೂಕ್ ಖಾನ್ ಮತ್ತಷ್ಟು ದಿನ ಜೈಲಿನಲ್ಲೇ ಕಳೆಯಬೇಕಿದೆ. ಮುಂಬೈನ ಸೆಷನ್ಸ್ ಕೋರ್ಟ್ ಆರ್ಯನ್ ಖಾನ್‍ಗೆ ಜಾಮೀನು ನೀಡಲು ನಿರಾಕರಿಸಿದೆ. ಇದನ್ನೂ ಓದಿ: ಇಂದು ನಟ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಭವಿಷ್ಯ ನಿರ್ಧಾರ

    ಅಕ್ಟೋಬರ್ 13 ಮತ್ತು 14 ರಂದು ಎರಡು ದಿನ ಆರ್ಯನ್ ಖಾನ್ ಸೇರಿದಂತೆ ಇತರೆ ಆರೋಪಿಗಳ ಜಾಮೀನು ಅರ್ಜಿಗಳ ವಾದ ಆಲಿಸಿದ್ದ ಮುಂಬೈನ ಸೆಷನ್ಸ್ ಕೋರ್ಟ್‍ನ ನ್ಯಾ.ವಿ.ವಿ ಪಾಟೀಲ್‍ರವರ ಪೀಠ ಬಳಿಕ ಇಂದು ತೀರ್ಪು ಕಾಯ್ದಿರಿಸಿತ್ತು. ಇಂದು ತೀರ್ಪು ಪ್ರಕಟಿಸಿದ ಕೋರ್ಟ್ ಬೇಲ್ ನೀಡಲು ತಿರಸ್ಕರಿಸಿದೆ. ಈ ಮೂಲಕ ಆರ್ಯನ್ ಖಾನ್‍ಗೆ ಮತ್ತೆ ಜೈಲು ವಾಸ ಗತಿ ಎಂಬಂತಾಗಿದೆ. ಇದನ್ನೂ ಓದಿ: ಆರ್ಯನ್‍ಗೆ ಜಾಮೀನು ಸಿಗುವವರೆಗೂ ಸಿಹಿ ಅಡುಗೆ ಮಾಡ್ಬೇಡಿ – ಸಿಬ್ಬಂದಿಗೆ ಗೌರಿ ಸೂಚನೆ

    ವಿಚಾರಣೆಯ ವೇಳೆ ಆರ್ಯನ್ ಖಾನ್ ಪರ ವಾದ ಏನಿತ್ತು?
    ಎನ್‍ಸಿಬಿ ದಾಳಿ ವೇಳೆ ಆರ್ಯನ್ ಖಾನ್ ಬಳಿ ಮಾದಕ ವಸ್ತುಗಳು ಪತ್ತೆಯಾಗಿಲ್ಲ. ದಾಳಿ ವೇಳೆ ಆರ್ಯನ್ ಖಾನ್ ಡ್ರಗ್ಸ್ ಸೇವನೆ ಮಾಡಿರಲಿಲ್ಲ ಮತ್ತು ಅವರ ಬಳಿಕ ಹಣವೂ ಇರಲಿಲ್ಲ, ಹೀಗಾಗಿ ಡ್ರಗ್ ಸೇವನೆ, ಮಾರಾಟ, ಖರೀದಿ ಆರೋಪಗಳೇಲ್ಲ ಸುಳ್ಳು. ಆರ್ಯನ್ ಖಾನ್ ಅತಿಥಿಯಾಗಿ ಮಾತ್ರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ಹಿಂದೆ ಮ್ಯಾಜಿಸ್ಟ್ರೇಟ್ ಕೋರ್ಟ್ ಹೆಚ್ಚಿನ ವಿಚಾರಣೆ ಅವಶ್ಯಕತೆ ಇಲ್ಲ ಎಂದು ಹೇಳಿದೆ. ತನ್ನ ವ್ಯಾಪ್ತಿಯಲ್ಲಿ ಪ್ರಕರಣ ಇಲ್ಲದ ಕಾರಣ ಜಾಮೀನು ನೀಡಲು ನಿರಾಕರಿಸಿದೆ. ಅಂತರಾಷ್ಟ್ರೀಯ ಡ್ರಗ್ಸ್ ಪೆಡ್ಲರ್ ಜೊತೆಗೆ ನಂಟು ಆರೋಪಿಸಿದರು ಅದನ್ನು ಪ್ರಕರಣದಲ್ಲಿ ಉಲ್ಲೇಖಿಸಿಲ್ಲ. ಆರ್ಯನ್ ಖಾನ್ ನಿಂದ ಯಾವುದೇ ಸಾಕ್ಷ್ಯ ಸಿಗದ ಹಿನ್ನಲೆ ಇಡೀ ತನಿಖೆ ವಾಟ್ಸಪ್ ಮೇಲೆ ಅವಲಂಬಿಸಿದೆ. ಜಾಮೀನು ತನಿಖೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ವಾದ ಮಂಡಿಸಬಹುದು.

    ಎನ್‍ಸಿಬಿ ಪರ ವಕೀಲರ ವಾದ ಏನಿತ್ತು?
    ಅನೀಲ್ ಸಿಂಗ್, ಆರ್ಯನ್ ಖಾನ್ ನಿಯಮಿತವಾಗಿ ಡ್ರಗ್ ಸೇವನೆ ಮಾಡುತ್ತಿದ್ದಾರೆ. ಮಾಹಿತಿಗಳ ಪ್ರಕರಣ ಮೂರು ವರ್ಷದಿಂದ ಮಾದಕ ವಸ್ತುಗಳ ಬಳಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಇದಕ್ಕೆ ಪೂರಕ ಎನ್ನುವಂತೆ ಸ್ನೇಹಿತ ಅರ್ಬಾಜ್ ಮಚೆರ್ಂಟ್ ಬಳಿಕ ಮಾದಕ ವಸ್ತು ಪತ್ತೆಯಾಗಿದ್ದು, ಆರ್ಯನ್ ಖಾನ್ ಕೂಡಾ ಮಾದಕ ವ್ಯಸನಿ ಎನ್ನುವುದು ಸೂಚಿಸುತ್ತಿದೆ ಆರ್ಯನ್ ಖಾನ್ ತಮ್ಮ ಬಳಿ ಮಾದಕ ವಸ್ತು ಪತ್ತೆಯಾಗಿಲ್ಲ ಎಂದು ವಾದಿಸಬಹುದು, ಆದರೆ ಆತನ ಸ್ನೇಹಿತ ತನ್ನ ಬಳಿ ಡ್ರಗ್ ಇರುವುದು ಒಪ್ಪಿಕೊಂಡಿದ್ದಾನೆ. ಪಂಚೆನಾಮೆಗೂ ಆರೋಪಿಗಳು ಸಹಿ ಮಾಡಿದ್ದಾರೆ. ಎನ್‍ಡಿಪಿಎಸ್ ಕಾಯ್ದೆಯಡಿ ಆರೋಪಿಗಳಿಂದ ಎಷ್ಟು ಪ್ರಮಾಣದ ಮಾದಕ ವಸ್ತುವನ್ನು ವಶಕ್ಕೆ ಪಡೆದೆವು ಎನ್ನುವುದು ಮುಖ್ಯವಲ್ಲ. ಆರೋಪಿಗೆ ಪ್ರಕರಣಕ್ಕಿರುವ ನಂಟನ್ನು ಭೇದಿಸಬೇಕಿದೆ. ಹೀಗಾಗಿ ಇದು ಒಂದು ವರ್ಷದ ಶಿಕ್ಷೆಯ ಪ್ರಕರಣವೂ ಎನ್ನುವಂತಿಲ್ಲ. ಪ್ರಕರಣವನ್ನು ಹೇಗೆ ತನಿಖೆ ಮಾಡಬೇಕು, ಯಾರನ್ನು ತನಿಖೆ ಒಳಪಡಿಸಬೇಕು ಅದು ತನಿಖಾಧಿಕಾರಿಯ ಹಕ್ಕು. ಈ ಹಂತದಲ್ಲಿ ಜಾಮೀನು ನೀಡಬಾರದು ಎಂದು ಅನಿಲ್ ಸಿಂಗ್ ಕೋರ್ಟ್ ಗೆ ಮನವಿ ಮಾಡಿದ್ದರು. ಇದನ್ನೂ ಓದಿ: ಇನ್ಮುಂದೆ ತಪ್ಪು ಮಾಡಲ್ಲ, ಬಡವರಿಗೆ ನೆರವಾಗುತ್ತೇನೆ: ಆರ್ಯನ್ ಖಾನ್

    ಮಾದಕ ವಸ್ತುಗಳು ಪತ್ತೆಯಾಗಿಲ್ಲ ಎಂದ ಮಾತ್ರಕ್ಕೆ ಪ್ರಕರಣಕ್ಕೂ ಆರೋಪಿಗೂ ಸಂಬಂಧವೇ ಇಲ್ಲ ಎನ್ನುವಂತಿಲ್ಲ. ವಾಟ್ಸಪ್ ಚಾಟ್ ಗಳಲ್ಲಿ ವಾಣಿಜ್ಯ ಉದ್ದೇಶಕ್ಕೆ ಖರೀದಿಸುವ ಬಗ್ಗೆ ಚರ್ಚೆ ನಡೆದಿದೆ. ಇದು ಅಂತರಾಷ್ಟ್ರೀಯ ನಂಟು ಹೊಂದಿರುವ ಸಾಧ್ಯತೆ ಇದೆ. ಅಂತರಾಷ್ಟ್ರೀಯ ಪೆಡ್ಲರ್ ಪತ್ತೆ ಹಚ್ಚಬೇಕು ಅದಕ್ಕೆ ಆರ್ಯನ್ ಖಾನ್ ಅವಶ್ಯಕತೆ ಇದೆ. ಆರ್ಯನ್ ಖಾನ್ ಮೂರು ವರ್ಷಗಳಿಂದ ಡ್ರಗ್ ಬಳಕೆ ಮಾಡುತ್ತಿರುವುದಕ್ಕೆ ಸಾಕ್ಷ್ಯಗಳಿದೆ. ದಾಳಿ ವೇಳೆ ಅವರು ಡ್ರಗ್ ಸೇವನೆಗೆ ಪ್ಲ್ಯಾನ್ ಮಾಡಿದ್ದರು ಎಂದು ಪಂಚೆನಾಮೆಯಿಂದ ತಿಳಿದು ಬಂದಿದೆ. ಸ್ನೇಹಿತರ ಬಳಿ ಮಾದಕ ವಸ್ತುಗಳು ಪತ್ತೆಯಾಗಿದ್ದು ಆರ್ಯನ್ ಇದರ ಭಾಗವಾಗಿದ್ದಾರೆ. ತನಿಖೆಯ ಹಂತದಲ್ಲಿ ಜಾಮೀನು ನೀಡಬಾರದು ಎಂದು ವಾದಿಸಬಹುದು.

  • ಇಂದು ನಟ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಭವಿಷ್ಯ ನಿರ್ಧಾರ

    ಇಂದು ನಟ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಭವಿಷ್ಯ ನಿರ್ಧಾರ

    ಮುಂಬೈ: ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಮಾಡಿ ಎನ್‍ಸಿಬಿ ಬಲೆಗೆ ಬಿದ್ದಿದ್ದ ಬಾಲಿವುಡ್ ನಟ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿ ತೀರ್ಪು ಹೊರಬಿಳಲಿದೆ. ಇಂದು ಆರ್ಯನ್ ಖಾನ್‍ಗೆ ಜಾಮೀನು ಸಿಗಬಹುದೇ ಅಥವಾ ಇನ್ನಷ್ಟು ದಿನ ಜೈಲುವಾಸ ಮುಂದುವರಿಯುವುದೇ ಎಂಬ ಕುತೂಹಲ ಮನೆಮಾಡಿದೆ.

    ಅಕ್ಟೋಬರ್ 13 ಮತ್ತು 14 ರಂದು ಎರಡು ದಿನ ಆರ್ಯನ್ ಖಾನ್ ಸೇರಿದಂತೆ ಇತರೆ ಆರೋಪಿಗಳ ಜಾಮೀನು ಅರ್ಜಿಗಳ ವಾದ ಆಲಿಸಿದ್ದ ಮುಂಬೈನ ಸೆಷನ್ಸ್ ಕೋರ್ಟ್‍ನ ನ್ಯಾ.ವಿ.ವಿ ಪಾಟೀಲ್‍ರವರ ಪೀಠ ಬಳಿಕ ಅಕ್ಟೋಬರ್ 20ಕ್ಕೆ ತೀರ್ಪು ಕಾಯ್ದಿರಿಸಿತ್ತು. ಅಂತಿಮವಾಗಿ ಇಂದು ಜಾಮೀನು ನೀಡುವ ಸಾಧ್ಯತೆ ಹೆಚ್ಚಿದೆ. ಇದನ್ನೂ ಓದಿ: ಇನ್ನೊಂದು ವಾರ ಶಾರೂಖ್ ಮಗನಿಗೆ ಜೈಲೇ ಗತಿ

    ವಿಚಾರಣೆಯ ವೇಳೆ ಆರ್ಯನ್ ಖಾನ್ ಪರ ವಾದ ಏನು?
    ಎನ್‍ಸಿಬಿ ದಾಳಿ ವೇಳೆ ಆರ್ಯನ್ ಖಾನ್ ಬಳಿ ಮಾಧಕ ವಸ್ತುಗಳು ಪತ್ತೆಯಾಗಿಲ್ಲ. ದಾಳಿ ವೇಳೆ ಆರ್ಯನ್ ಖಾನ್ ಡ್ರಗ್ಸ್ ಸೇವನೆ ಮಾಡಿರಲಿಲ್ಲ ಮತ್ತು ಅವರ ಬಳಿಕ ಹಣವೂ ಇರಲಿಲ್ಲ, ಹೀಗಾಗಿ ಡ್ರಗ್ ಸೇವನೆ, ಮಾರಾಟ, ಖರೀದಿ ಆರೋಪಗಳೇಲ್ಲ ಸುಳ್ಳು. ಆರ್ಯನ್ ಖಾನ್ ಅತಿಥಿಯಾಗಿ ಮಾತ್ರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ಹಿಂದೆ ಮ್ಯಾಜಿಸ್ಟ್ರೇಟ್ ಕೋರ್ಟ್ ಹೆಚ್ಚಿನ ವಿಚಾರಣೆ ಅವಶ್ಯಕತೆ ಇಲ್ಲ ಎಂದು ಹೇಳಿದೆ. ತನ್ನ ವ್ಯಾಪ್ತಿಯಲ್ಲಿ ಪ್ರಕರಣ ಇಲ್ಲದ ಕಾರಣ ಜಾಮೀನು ನೀಡಲು ನಿರಾಕರಿಸಿದೆ. ಅಂತರಾಷ್ಟ್ರೀಯ ಡ್ರಗ್ಸ್ ಪೆಡ್ಲರ್ ಜೊತೆಗೆ ನಂಟು ಆರೋಪಿಸಿದರು ಅದನ್ನು ಪ್ರಕರಣದಲ್ಲಿ ಉಲ್ಲೇಖಿಸಿಲ್ಲ. ಆರ್ಯನ್ ಖಾನ್ ನಿಂದ ಯಾವುದೇ ಸಾಕ್ಷ್ಯ ಸಿಗದ ಹಿನ್ನಲೆ ಇಡೀ ತನಿಖೆ ವಾಟ್ಸಪ್ ಮೇಲೆ ಅವಲಂಬಿಸಿದೆ. ಜಾಮೀನು ತನಿಖೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ವಾದ ಮಂಡಿಸಬಹುದು. ಇದನ್ನೂ ಓದಿ: ಆರ್ಯನ್‍ಗೆ ಜಾಮೀನು ಸಿಗುವವರೆಗೂ ಸಿಹಿ ಅಡುಗೆ ಮಾಡ್ಬೇಡಿ – ಸಿಬ್ಬಂದಿಗೆ ಗೌರಿ ಸೂಚನೆ

    ಎನ್‍ಸಿಬಿ ಪರ ವಕೀಲರ ವಾದ ಏನು?
    ಅನೀಲ್ ಸಿಂಗ್, ಆರ್ಯನ್ ಖಾನ್ ನಿಯಮಿತವಾಗಿ ಡ್ರಗ್ ಸೇವನೆ ಮಾಡುತ್ತಿದ್ದಾರೆ. ಮಾಹಿತಿಗಳ ಪ್ರಕರಣ ಮೂರು ವರ್ಷದಿಂದ ಮಾದಕ ವಸ್ತುಗಳ ಬಳಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಇದಕ್ಕೆ ಪೂರಕ ಎನ್ನುವಂತೆ ಸ್ನೇಹಿತ ಅರ್ಬಾಜ್ ಮಚೆರ್ಂಟ್ ಬಳಿಕ ಮಾದಕ ವಸ್ತು ಪತ್ತೆಯಾಗಿದ್ದು, ಆರ್ಯನ್ ಖಾನ್ ಕೂಡಾ ಮಾದಕ ವ್ಯಸನಿ ಎನ್ನುವುದು ಸೂಚಿಸುತ್ತಿದೆ ಆರ್ಯನ್ ಖಾನ್ ತಮ್ಮ ಬಳಿ ಮಾದಕ ವಸ್ತು ಪತ್ತೆಯಾಗಿಲ್ಲ ಎಂದು ವಾದಿಸಬಹುದು, ಆದರೆ ಆತನ ಸ್ನೇಹಿತ ತನ್ನ ಬಳಿ ಡ್ರಗ್ ಇರುವುದು ಒಪ್ಪಿಕೊಂಡಿದ್ದಾನೆ. ಪಂಚೆನಾಮೆಗೂ ಆರೋಪಿಗಳು ಸಹಿ ಮಾಡಿದ್ದಾರೆ. ಎನ್‍ಡಿಪಿಎಸ್ ಕಾಯ್ದೆಯಡಿ ಆರೋಪಿಗಳಿಂದ ಎಷ್ಟು ಪ್ರಮಾಣದ ಮಾದಕ ವಸ್ತುವನ್ನು ವಶಕ್ಕೆ ಪಡೆದೆವು ಎನ್ನುವುದು ಮುಖ್ಯವಲ್ಲ. ಆರೋಪಿಗೆ ಪ್ರಕರಣಕ್ಕಿರುವ ನಂಟನ್ನು ಭೇದಿಸಬೇಕಿದೆ. ಹೀಗಾಗಿ ಇದು ಒಂದು ವರ್ಷದ ಶಿಕ್ಷೆಯ ಪ್ರಕರಣವೂ ಎನ್ನುವಂತಿಲ್ಲ. ಪ್ರಕರಣವನ್ನು ಹೇಗೆ ತನಿಖೆ ಮಾಡಬೇಕು, ಯಾರನ್ನು ತನಿಖೆ ಒಳಪಡಿಸಬೇಕು ಅದು ತನಿಖಾಧಿಕಾರಿಯ ಹಕ್ಕು. ಈ ಹಂತದಲ್ಲಿ ಜಾಮೀನು ನೀಡಬಾರದು ಎಂದು ಅನಿಲ್ ಸಿಂಗ್ ಕೋರ್ಟ್ ಗೆ ಮನವಿ ಮಾಡಿದ್ದರು.

    ಮಾದಕ ವಸ್ತುಗಳು ಪತ್ತೆಯಾಗಿಲ್ಲ ಎಂದ ಮಾತ್ರಕ್ಕೆ ಪ್ರಕರಣಕ್ಕೂ ಆರೋಪಿಗೂ ಸಂಬಂಧವೇ ಇಲ್ಲ ಎನ್ನುವಂತಿಲ್ಲ. ವಾಟ್ಸಪ್ ಚಾಟ್ ಗಳಲ್ಲಿ ವಾಣಿಜ್ಯ ಉದ್ದೇಶಕ್ಕೆ ಖರೀದಿಸುವ ಬಗ್ಗೆ ಚರ್ಚೆ ನಡೆದಿದೆ. ಇದು ಅಂತರಾಷ್ಟ್ರೀಯ ನಂಟು ಹೊಂದಿರುವ ಸಾಧ್ಯತೆ ಇದೆ. ಅಂತರಾಷ್ಟ್ರೀಯ ಪೆಡ್ಲರ್ ಪತ್ತೆ ಹಚ್ಚಬೇಕು ಅದಕ್ಕೆ ಆರ್ಯನ್ ಖಾನ್ ಅವಶ್ಯಕತೆ ಇದೆ. ಆರ್ಯನ್ ಖಾನ್ ಮೂರು ವರ್ಷಗಳಿಂದ ಡ್ರಗ್ ಬಳಕೆ ಮಾಡುತ್ತಿರುವುದಕ್ಕೆ ಸಾಕ್ಷ್ಯಗಳಿದೆ. ದಾಳಿ ವೇಳೆ ಅವರು ಡ್ರಗ್ ಸೇವನೆಗೆ ಪ್ಲ್ಯಾನ್ ಮಾಡಿದ್ದರು ಎಂದು ಪಂಚೆನಾಮೆಯಿಂದ ತಿಳಿದು ಬಂದಿದೆ. ಸ್ನೇಹಿತರ ಬಳಿ ಮಾದಕ ವಸ್ತುಗಳು ಪತ್ತೆಯಾಗಿದ್ದು ಆರ್ಯನ್ ಇದರ ಭಾಗವಾಗಿದ್ದಾರೆ. ತನಿಖೆಯ ಹಂತದಲ್ಲಿ ಜಾಮೀನು ನೀಡಬಾರದು ಎಂದು ವಾದಿಸಬಹುದು. ಇದನ್ನೂ ಓದಿ: ಇನ್ಮುಂದೆ ತಪ್ಪು ಮಾಡಲ್ಲ, ಬಡವರಿಗೆ ನೆರವಾಗುತ್ತೇನೆ: ಆರ್ಯನ್ ಖಾನ್

  • ಇನ್ನೊಂದು ವಾರ ಶಾರೂಖ್ ಮಗನಿಗೆ ಜೈಲೇ ಗತಿ

    ಇನ್ನೊಂದು ವಾರ ಶಾರೂಖ್ ಮಗನಿಗೆ ಜೈಲೇ ಗತಿ

    ಮುಂಬೈ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‍ಸಿಬಿಯಿಂದ ಬಂಧನಕ್ಕೆ ಒಳಗಾಗಿರುವ ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿ ತೀರ್ಪನ್ನು ಮುಂಬೈನ ಎನ್‍ಡಿಪಿಎಸ್ ಕೋರ್ಟ್ ಕಾಯ್ದಿರಿಸಿದೆ.

    ಜಾಮೀನು ಅರ್ಜಿ ವಿಚಾರಣೆ ನಡೆಸಿದ ಮುಂಬೈ ಸೆಷನ್ಸ್ ಕೋರ್ಟ್ ಆರ್ಯನ್ ಜಾಮೀನು ಅರ್ಜಿಯ ತೀರ್ಪನ್ನು ಅ.20 ರಂದು ಪ್ರಕಟಿಸಲಿದೆ. ಈ ಮೂಲಕ ಇನ್ನೊಂದು ವಾರ ಶಾರೂಖ್ ಮಗನಿಗೆ ಜೈಲೇ ಗತಿ ಎನ್ನುವಂತಾಗಿದೆ. ಇದನ್ನೂ ಓದಿ: ಆರ್ಯನ್ ಖಾನ್ ಮೂರು ವರ್ಷದಿಂದ ಡ್ರಗ್ ಸೇವಿಸುತ್ತಿದ್ದಾರೆ – ಎನ್‍ಸಿಬಿ

    ಮುಂಬೈ ಸಮುದ್ರದಲ್ಲಿ ಐಷಾರಾಮಿ ಹಡಗಿನಲ್ಲಿ ರೇವ್ ಪಾರ್ಟಿ ನಡೆಸಿದ ಆರೋಪದಲ್ಲಿ ಎನ್‍ಸಿಬಿಯಿಂದ ಬಂಧನಕ್ಕೆ ಒಳಗಾಗಿರುವ ಆರ್ಯನ್ ಖಾನ್ ಮತ್ತು ಇತರೆ ಆರೋಪಿಗಳು ಜಾಮೀನು ಕೋರಿ ಮುಂಬೈ ಸೆಷನ್ಸ್ ಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ನಿನ್ನೆಯಿಂದ ಈ ಅರ್ಜಿ ವಿಚಾರಣೆ ನಡೆಯುತ್ತಿದ್ದು ನ್ಯಾ.ವಿವಿ ಪಾಟೀಲ್ ಸುದೀರ್ಘ ವಾದ ಆಲಿಸಿದ್ದಾರೆ.

    ಇಂದು ವಾದ ಆಲಿಸಿದ ಎನ್‍ಸಿಬಿ ಪರ ವಕೀಲ ಅನೀಲ್ ಸಿಂಗ್, ಆರ್ಯನ್ ಖಾನ್ ನಿಯಮಿತವಾಗಿ ಡ್ರಗ್ ಸೇವನೆ ಮಾಡುತ್ತಿದ್ದಾರೆ. ಮಾಹಿತಿಗಳ ಪ್ರಕರಣ ಮೂರು ವರ್ಷದಿಂದ ಮಾಧಕ ವಸ್ತುಗಳ ಬಳಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಇದಕ್ಕೆ ಪೂರಕ ಎನ್ನುವಂತೆ ಸ್ನೇಹಿತ ಅರ್ಬಾಜ್ ಮರ್ಚೆಂಟ್ ಬಳಿಕ ಮಾದಕ ವಸ್ತು ಪತ್ತೆಯಾಗಿದ್ದು, ಆರ್ಯನ್ ಖಾನ್ ಕೂಡಾ ಮಾದಕ ವ್ಯಸನಿ ಎನ್ನುವುದು ಸೂಚಿಸುತ್ತಿದೆ ಎಂದು ವಾದಿಸಿದ್ದಾರೆ. ಇದನ್ನೂ ಓದಿ: ಮಗ ಇಲ್ಲದೇ ಹುಟ್ಟುಹಬ್ಬ ಆಚರಿಸಲ್ಲ: ಶಾರೂಖ್ ಪತ್ನಿ ಗೌರಿ ಖಾನ್

    ಆರ್ಯನ್ ಖಾನ್ ತಮ್ಮ ಬಳಿ ಮಾದಕ ವಸ್ತು ಪತ್ತೆಯಾಗಿಲ್ಲ ಎಂದು ವಾದಿಸಬಹುದು, ಆದರೆ ಆತನ ಸ್ನೇಹಿತ ತನ್ನ ಬಳಿ ಡ್ರಗ್ ಇರುವುದು ಒಪ್ಪಿಕೊಂಡಿದ್ದಾನೆ. ಪಂಚೆನಾಮೆಗೂ ಆರೋಪಿಗಳು ಸಹಿ ಮಾಡಿದ್ದಾರೆ. ಎನ್‍ಡಿಪಿಎಸ್ ಕಾಯ್ದೆಯಡಿ ಆರೋಪಿಗಳಿಂದ ಎಷ್ಟು ಪ್ರಮಾಣದ ಮಾದಕ ವಸ್ತುವನ್ನು ವಶಕ್ಕೆ ಪಡೆದೆವು ಎನ್ನುವುದು ಮುಖ್ಯವಲ್ಲ. ಆರೋಪಿಗೆ ಪ್ರಕರಣಕ್ಕಿರುವ ನಂಟನ್ನು ಭೇದಿಸಬೇಕಿದೆ. ಹೀಗಾಗಿ ಇದು ಒಂದು ವರ್ಷದ ಶಿಕ್ಷೆಯ ಪ್ರಕರಣವೂ ಎನ್ನುವಂತಿಲ್ಲ. ಪ್ರಕರಣವನ್ನು ಹೇಗೆ ತನಿಖೆ ಮಾಡಬೇಕು, ಯಾರನ್ನು ತನಿಖೆ ಒಳಪಡಿಸಬೇಕು ಅದು ತನಿಖಾಧಿಕಾರಿಯ ಹಕ್ಕು. ಈ ಹಂತದಲ್ಲಿ ಜಾಮೀನು ನೀಡಬಾರದು ಎಂದು ಅನಿಲ್ ಸಿಂಗ್ ಕೋರ್ಟ್ ಗೆ ಮನವಿ ಮಾಡಿಕೊಂಡರು. ಇದನ್ನೂ ಓದಿ: ಮಗನ ಆರೋಗ್ಯ ವಿಚಾರಿಸುತ್ತಾ ರಾತ್ರಿಯಿಡೀ ನಿದ್ದೆಗೆಟ್ಟ ಶಾರೂಖ್ ದಂಪತಿ!

  • ಅಕ್ಟೋಬರ್ 7 ರವರೆಗೆ ಆರ್ಯನ್ ಖಾನ್ ಎನ್‍ಸಿಬಿ ವಶಕ್ಕೆ- ಕೋರ್ಟ್‍ನಲ್ಲಿ ವಾದ- ಪ್ರತಿವಾದ ಹೇಗಿತ್ತು?

    ಅಕ್ಟೋಬರ್ 7 ರವರೆಗೆ ಆರ್ಯನ್ ಖಾನ್ ಎನ್‍ಸಿಬಿ ವಶಕ್ಕೆ- ಕೋರ್ಟ್‍ನಲ್ಲಿ ವಾದ- ಪ್ರತಿವಾದ ಹೇಗಿತ್ತು?

    ಮುಂಬೈ: ಸಮುದ್ರದಲ್ಲಿ ಐಷಾರಾಮಿ ಕ್ರ್ಯೂಸ್‍ನಲ್ಲಿ ನಡೆದ ರೇವ್ ಪಾರ್ಟಿ ವೇಳೆ ಸಿಕ್ಕಿಬಿದ್ದ ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್‍ಗೆ ಜಾಮೀನು ನಿರಾಕರಿಸಲಾಗಿದೆ. ಇಂದು ಜಾಮೀನು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಎನ್‍ಸಿಬಿ ವಾದಕ್ಕೆ ಮಣೆ ಹಾಕಿದೆ. ಆರ್ಯನ್‍ನನ್ನು ಹೆಚ್ಚಿನ ವಿಚಾರಣೆಗಾಗಿ ಅಕ್ಟೋಬರ್ 7ರವರೆಗೂ ಎನ್‍ಸಿಬಿ ವಶಕ್ಕೆ ನೀಡಿದೆ.

    ಶಾರೂಖ್ ಪುತ್ರನ ಪರವಾಗಿ ಖ್ಯಾತ ಕ್ರಿಮಿನಲ್ ವಕೀಲ ಸತೀಶ್ ಮಾನ್ ಶಿಂಧೆ ಸುದೀರ್ಘವಾದ ಮಂಡಿಸಿದ್ರೂ ಪ್ರಯೋಜನ ಆಗಲಿಲ್ಲ. ಪುತ್ರನಿಗೆ ಬಂದೊದಗಿದ ಸ್ಥಿತಿ ಕಂಡು ಶಾರೂಖ್, ಗೌರಿ ಖಾನ್ ಕಣ್ಣೀರು ಇಟ್ಟಿದ್ದಾರೆ. ವಿಚಾರಣೆ ವೇಳೆ ಕಾನೂನು ಪ್ರಕಾರವೇ, ಶಾರೂಖ್ ಜೊತೆ ಫೋನ್‍ನಲ್ಲಿ ಮಾತನಾಡಲು ಆರ್ಯನ್‍ಗೆ ಎನ್‍ಸಿಬಿ ಎರಡು ನಿಮಿಷ ಅವಕಾಶ ನೀಡಿತ್ತು. ಈ ವೇಳೆ ಇಬ್ಬರು ಕಣ್ಣೀರಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಬಂಧನದ ಬಳಿಕ ಪುತ್ರನ ಜೊತೆ 2 ನಿಮಿಷ ಮಾತಾಡಿದ ನಟ ಶಾರೂಖ್!

    ಶಾರೂಖ್ ಪುತ್ರನ ಜೊತೆಗೆ ಇನ್ನಿಬ್ಬರನ್ನು ಕೂಡ ಎನ್‍ಸಿಬಿ ಕಸ್ಟಡಿಗೆ ಪಡೆದುಕೊಂಡಿದೆ. ಇದಕ್ಕೂ ಮುನ್ನ, ಆರ್ಯನ್ ಸೇರಿ ಇತರೆ ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯ್ತು. ಈ ಮಧ್ಯೆ ವೀ ಸ್ಟ್ಯಾಂಡ್ ವಿತ್ ಶಾರೂಖ್ ಹ್ಯಾಷ್ ಟ್ಯಾಗ್ ಟ್ವಿಟ್ಟರ್‍ ನಲ್ಲಿ ಟ್ರೆಂಡ್ ಆಗಿದೆ. ಇದನ್ನೂ ಓದಿ: ಡ್ರಗ್ಸ್, ಸಿಗರೇಟ್, ಸೆಕ್ಸ್‌ಗೆ ಮಗನಿಗೆ ಓಕೆ ಅಂದಿದ್ದೇನೆ: ಶಾರೂಖ್ ವೀಡಿಯೋ ವೈರಲ್

    ಮುಂಬೈನ ಕಿಲಾ ಕೋರ್ಟ್‍ನಲ್ಲಿ ನಡೆದ ಎನ್‍ಸಿಬಿ ಮತ್ತು ಆರ್ಯನ್ ಪರ ವಕೀಲರ ವಾದ ಅಂತ್ಯಕ್ಕೆ ಕೋರ್ಟ್ ಆರ್ಯನ್‍ಗೆ ಜಾಮೀನು ನಿರಾಕರಿಸಿ, ಹೆಚ್ಚಿನ ವಿಚಾರಣೆಗಾಗಿ ಅಕ್ಟೋಬರ್ 7ವರೆಗೂ ಎನ್‍ಸಿಬಿ ವಶಕ್ಕೆ ನೀಡಿದೆ. ಇದನ್ನೂ ಓದಿ: ಶಾರೂಖ್‌ ಪುತ್ರನ ಲೆನ್ಸ್‌ ಬಾಕ್ಸ್, ಇನ್ನೊಬ್ಬಳು ಯುವತಿಯ ಬ್ಯಾಗಲ್ಲಿದ್ದ ಸ್ಯಾನಿಟರಿ ಪ್ಯಾಡಲ್ಲಿತ್ತು ಮಾದಕ ವಸ್ತು!

    ಎನ್‍ಸಿಬಿ ವಾದ ಏನು..?
    ಹೈಪ್ರೊಫೈಲ್ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ಅಗತ್ಯ ಇದೆ. ಅದಲ್ಲದೆ 4 ವರ್ಷದಿಂದ ಡ್ರಗ್ಸ್ ಸೇವನೆ ಮಾಡ್ತಿರುವ ಬಗ್ಗೆ ಆರ್ಯನ್ ತಪ್ಪೊಪ್ಪಿಕೊಂಡಿದ್ದಾರೆ. ಕೊಕೇನ್ ಸೇರಿದಂತೆ ಹಲವು ಮಾದಕ ವಸ್ತುಗಳ ಸೇವನೆ ಮಾಡಿದ್ದಾರೆ. ಆರ್ಯನ್‍ಗೆ ಡ್ರಗ್ ಪೆಡ್ಲರ್‍ ಗಳ ಜೊತೆಗೆ ನಂಟಿರುವ ಮೊಬೈಲ್ ಸಾಕ್ಷ್ಯ ಸಿಕ್ಕಿದೆ. ಮೊಬೈಲ್ ವಾಟ್ಸಪ್‍ನಲ್ಲಿ ಕೋಡ್ ವರ್ಡ್ ಬಳಸಿ ಡ್ರಗ್ ಖರೀದಿಸಿದ್ದಾರೆ. ಅಂತಾರಾಷ್ಟ್ರೀಯ ಡ್ರಗ್ ಪೆಡ್ಲರ್‍ ಗಳ ಜೊತೆಗೂ ನಂಟಿರಬಹುದು. ವಾಣಿಜ್ಯ ಉದ್ದೇಶಕ್ಕಾಗಿಯೂ ಡ್ರಗ್ಸ್ ಖರೀದಿ ಮಾಡಿರುವ ಸಾಕ್ಷ್ಯ ಸಿಕ್ಕಿದೆ. ಎನ್‍ಡಿಪಿಎಸ್ ಕಾಯ್ದೆಯಡಿ ತಕ್ಷಣಕ್ಕೆ ಜಾಮೀನು ಕೊಡಲು ಬರಲ್ಲ (ರಿಯಾ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ತೀರ್ಪು ಉಲ್ಲೇಖ) ಖ್ಯಾತನಾಮರ ಡ್ರಗ್ಸ್ ಸೇವನೆಯಿಂದ ವಿದ್ಯಾರ್ಥಿಗಳು ಪ್ರಭಾವಿತರಾಗಬಹುದು. ಆರ್ಯನ್‍ಗೆ ಜಾಮೀನು ನೀಡಬಾರದು, ಸಾಕ್ಷ್ಯ ನಾಶದ ಸಂಭವ ಇದೆ ಹಾಗಾಗಿ ಅಕ್ಟೋಬರ್ 11ರವರೆಗೂ ಆರೋಪಿಗಳನ್ನು ಎನ್‍ಸಿಬಿ ವಶಕ್ಕೆ ನೀಡಬೇಕು ಎಂದು ಪ್ರಬಲ ವಾದ ಮಂಡಿಸಿತು.

    ಆರ್ಯನ್ ಪರ ವಕೀಲರ ವಾದ ಏನು?
    ನನ್ನ ಕಕ್ಷಿದಾರನ ಹಕ್ಕಿನ ವಿಚಾರವಾಗಿ ಜಾಮೀನು ಬಯಸುತ್ತಿಲ್ಲ. ಪಾರ್ಟಿಗೆ ಆರ್ಯನ್ ಖಾನ್ ವಿಶೇಷ ಆಹ್ವಾನಿತರಾಗಿದ್ದರು ಹಾಗಾಗಿ ಅಲ್ಲಿಗೆ ತೆರಳಿದ್ದರು. ಆರ್ಯನ್ ಡ್ರಗ್ ಸೇವಿಸಿರುವ ಬಗ್ಗೆ ಸಾಕ್ಷ್ಯ ಇಲ್ಲ. ಆರ್ಯನ್ ಬಳಿಯಿಂದ ಯಾವುದೇ ಡ್ರಗ್ಸ್ ವಶಕ್ಕೆ ಪಡೆದಿಲ್ಲ. ಆತನ ಬ್ಯಾಗ್ ಪರಿಶೀಲನೆ ವೇಳೆ ಏನೂ ಸಿಕ್ಕಿಲ್ಲ. ಆರ್ಯನ್ ಖಾನ್ ವಿರುದ್ಧ ಪ್ರಬಲ ಸಾಕ್ಷ್ಯಗಳಿಲ್ಲ. ಸ್ನೇಹಿತನ ಬಳಿ ಚರಸ್ ಪತ್ತೆಯಾಗಿದ್ರೆ, ನಮ್ಮ ಕಕ್ಷಿದಾರನ ಬಂಧನ ಏಕೆ..? ಅಂತಾರಾಷ್ಟ್ರೀಯ ಡ್ರಗ್ ಪೆಡ್ಲರ್‍ ಗಳ ಜೊತೆ ನಂಟು ಆರೋಪ ಸುಳ್ಳು. ರಿಯಾ ಚಕ್ರವರ್ತಿ ಕೇಸ್‍ಗೂ ಇದಕ್ಕೂ ತಾಳೆ ಆಗಲ್ಲ. ಇದಲ್ಲದೆ 300 ಗ್ರಾಂ ಡ್ರಗ್ಸ್ ಸಿಕ್ಕಿದ ಪ್ರಕರಣದಲ್ಲಿಯೂ ಜಾಮೀನು ನೀಡಲಾಗಿದೆ. ಹೀಗಾಗಿ ಪ್ರಕರಣದಲ್ಲಿ ಆರ್ಯನ್‍ಗೆ ಜಾಮೀನು ನೀಡಬೇಕೆಂದು ವಾದ ಮಂಡಿಸಿದರು.

    ಈ ನಡುವೆ 1997ರಲ್ಲಿ ಬಾಲಿವುಡ್ ನಟ ಶಾರೂಖ್ ಖಾನ್, ಸಂದರ್ಶನವೊಂದರ ವೇಳೆ ಹಾಸ್ಯಮಯವಾಗಿ ನನ್ನ ಮಗ ಮದ್ಯ, ಮದಿರೆ, ಮಾನಿನಿ ಸೇರಿ ಎಲ್ಲಾ ರೀತಿಯ ಶೋಕಿ ಮಾಡಬಹುದು ಎಂದಿದ್ರು. ಇದು ಮಗನ ಬದುಕಲ್ಲಿ ನಿಜ ಆಗಿದ್ದು, ಇದೀಗ ಕಂಬಿ ಎಣಿಸುವಂತೆ ಆಗಿರುವುದು ವಿಪರ್ಯಾಸ. ಇದನ್ನೂ ಓದಿ: ಡ್ರಗ್ಸ್ ಕೇಸ್- ಪ್ರಯಾಣಿಕರ ಸೋಗಿನಲ್ಲಿ ಟಿಕೆಟ್ ಬುಕ್, ಎನ್‍ಸಿಬಿ ರೋಚಕ ಕಾರ್ಯಾಚರಣೆ

  • ಡ್ರಗ್ಸ್, ಸಿಗರೇಟ್, ಸೆಕ್ಸ್‌ಗೆ ಮಗನಿಗೆ ಓಕೆ ಅಂದಿದ್ದೇನೆ: ಶಾರೂಖ್ ವೀಡಿಯೋ ವೈರಲ್

    ಡ್ರಗ್ಸ್, ಸಿಗರೇಟ್, ಸೆಕ್ಸ್‌ಗೆ ಮಗನಿಗೆ ಓಕೆ ಅಂದಿದ್ದೇನೆ: ಶಾರೂಖ್ ವೀಡಿಯೋ ವೈರಲ್

    ಮುಂಬೈ: ಐಷಾರಾಮಿ ಕಾರ್ಡಿಲಿಯಾ ಕ್ರೂಸ್ ಎಂಪ್ರೆಸ್ ಹಡಗಿನ ಒಳಗೆ ರೇವ್ ಪಾರ್ಟಿ ನಡೆಯುತ್ತಿದ್ದ ವೇಳೆ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್‍ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಬೆನ್ನಲ್ಲೆ ಶಾರೂಖ್ ಖಾನ್ ಅವರ ಹಳೆಯ ವೀಡಿಯೋವೊಂದು ವೈರಲ್ ಆಗಿದೆ.

    1977ರಲ್ಲಿ ಸಂದರ್ಶವೊಂದರಲ್ಲಿ ಹೇಳಿದ್ದ ಮಾತುಗಳು ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ನಟಿ ಸಿಮಿ ಅಗರ್‍ವಾಲ್ ಅವರು ಖಾಸಗಿ ಟಿವಿಯೊಂದರಲ್ಲಿ ನಡೆಸುವ ಕಾರ್ಯಕ್ರಮದಲ್ಲಿ ಶಾರೂಕ್ ದಂಪತಿ ಅವರು ಸಿಮಿ ಅವರು ಕೇಳಿರುವ ಪ್ರಶ್ನೆಗೆ ಉತ್ತರಿಸಿರುವ ವೀಡಿಯೋ ಇದಾಗಿದೆ. ಇದನ್ನೂ ಓದಿ: ಹತ್ಯಾಕಾಂಡದ ನಂತರವೂ ಮೌನವಾಗಿರುವವರು ಈಗಾಗಲೇ ಸತ್ತಿದ್ದಾರೆ: ರಾಹುಲ್ ಗಾಂಧಿ

    ವೀಡಿಯೋದಲ್ಲಿ ಏನಿದೆ?
    ಆರ್ಯನ್‍ಗೆ ನಾನು ಹೇಳಿಬಿಟ್ಟಿದ್ದೇನೆ. ಅವನು ಹುಡುಗಿಯರ ಹಿಂದೆ ಹೋಗಬಹುದು. ಎಷ್ಟು ಬೇಕಾದರೂ ಸಿಗರೇಟ್ ಸೇದಬಹುದು. ಡ್ರಗ್ಸ್ ಸೇವಿಸಬಹುದು ಮತ್ತು ಹುಡುಗಿಯರ ಜೊತೆಗೆ ಸೆಕ್ಸ್ ಮಾಡಬಹುದು. ಚಿಕ್ಕವಯಸ್ಸಿನಲ್ಲಿಯೇ ಲೈಫ್ ಎಂಜಾಯ್ ಮಾಡು ಎಂದಿದ್ದೇನೆ ಎಂದು ಶಾರೂಕ್ ಹೇಳಿದ್ದಾರೆ. ಜೊತೆಯಲ್ಲಿಯೇ ಇದ್ದ ಶಾರೂಕ್ ಅವರ ಪತ್ನಿ ಗೌರಿ ಕೂಡಾ ಪತಿಯ ಮಾತಿ ಸಮ್ಮತಿ ಕೊಟ್ಟು ನಕ್ಕಿದ್ದಾರೆ. ಇದೀಗ ಈ ವೀಡಿಯೋ ವೈರಲ್ ಆಗಿದ್ದು, ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ. ಇದನ್ನೂ ಓದಿ: ನೀವು ಹತ್ಯೆ ಮಾಡಿದ ಜನರಿಗಿಂತ ನಾನು ಮುಖ್ಯ ಅಲ್ಲ: ಪ್ರಿಯಾಂಕಾ ಗಾಂಧಿ

    ಈ ಸಂದರ್ಶನದ ವೇಳೆ ಆರ್ಯನ್ ಖಾನ್ ಇನ್ನು ಬಾಲಕನಾಗಿದ್ದ. ಆ ಸಮಯದಲ್ಲಿ ಶಾರೂಕ್ ಈ ವಿಷಯವನ್ನು ತಮಾಷೆಯಾಗಿ ಹೇಳಿದ್ದು ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ ಯಾವ ಹೆತ್ತವರು ಈ ವಿಚಾರವಾಗಿ ತಮಾಷೆ ಮಾತುಗಳನ್ನು ಮಕ್ಕಳಿಗೆ ಹೇಳುವುದಿಲ್ಲ ಎಂದು ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ.

  • ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಅರೆಸ್ಟ್

    ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಅರೆಸ್ಟ್

    ಮುಂಬೈ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್‍ನನ್ನು ಎನ್‍ಸಿಬಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.

    ಐಷಾರಾಮಿ ಹಡಗಿನಲ್ಲಿ ಡ್ರಕ್ಸ್ ಪಾರ್ಟಿ ಮಾಡುತ್ತಿದ್ದಾಗ ಆರ್ಯನ್ ಖಾನ್ ಸಹಿತ 8 ಜನ ಎನ್‍ಸಿಬಿ ಬಲೆಗೆ ಬಿದ್ದಿದ್ದರು. ಇದೀಗ ಆರ್ಯನ್ ಖಾನ್ ಸಹಿತ 8 ಮಂದಿ ಆರೋಪಿಗಳನ್ನು ಎನ್‍ಸಿಬಿ ಅರೆಸ್ಟ್ ಮಾಡಿದೆ. ಆರ್ಯನ್ ಮಾದಕ ವಸ್ತು ಸೇವೆ ಮಾಡಿರೋದು ದೃಢಪಟ್ಟಿದ್ದು, ಎನ್‍ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಜನರನ್ನು ವಶಕ್ಕೆ ಪಡೆದಿದ್ದೇವೆ: ಎನ್‍ಸಿಬಿ ಮುಖ್ಯಸ್ಥ ಪ್ರಧಾನ್

    ಈ ಕುರಿತು ಮಾಹಿತಿ ನೀಡಿರುವ ಎನ್‍ಸಿಬಿ ಮುಖ್ಯಸ್ಥ ಎಸ್.ಎನ್.ಪ್ರಧಾನ್, ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಡ್ರಗ್ಸ್ ಕೇಸ್- ಪ್ರಯಾಣಿಕರ ಸೋಗಿನಲ್ಲಿ ಟಿಕೆಟ್ ಬುಕ್, ಎನ್‍ಸಿಬಿ ರೋಚಕ ಕಾರ್ಯಾಚರಣೆ

    ಸಮುದ್ರದಲ್ಲಿ ಹಡಗಿನಲ್ಲಿ ತೇಲುತ್ತ ಬಾಲಿವುಡ್ ನಟರು, ಉದ್ಯಮಿಗಳ ಮಕ್ಕಳು ಡ್ರಗ್ಸ್ ಪಾರ್ಟಿ ಮಾಡಿದ್ದರು. ಐಷಾರಾಮಿ ಹಡಗಿನಲ್ಲಿ ಎನ್‍ಸಿಬಿ ಕಾರ್ಯಾಚರಣೆಯೇ ರೋಚಕವಾಗಿತ್ತು. ಎನ್‍ಸಿಬಿ ಸಮೀರ್ ವಾಂಖೆಡೆ ಟೀಮ್ ಮಾರುವೇಷದಲ್ಲಿ ಹಡಗಿನಲ್ಲಿ ಪ್ರಯಾಣಿಸಿ ಆಪರೇಷನ್ ನಡೆಸಿತ್ತು. ಕಾರ್ಯಾಚರಣೆಯಲ್ಲಿ ಯಶಸ್ವಿ ಸಹ ಆಗಿದ್ದು, ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಸೇರಿದಂತೆ ಹಲವು ಪ್ರತಿಷ್ಟಿತರ ಮಕ್ಕಳನ್ನು ವಶಕ್ಕೆ ಪಡೆಯಲಾಗಿತ್ತು.

    ಮುಂಬೈನಿಂದ ಗೋವಾಕ್ಕೆ ತೆರಳುತ್ತಿದ್ದ ಐಷಾರಾಮಿ ಹಡಗಿನಲ್ಲಿ ಸಮುದ್ರದ ಮಧ್ಯದಲ್ಲಿ ಡ್ರಗ್ಸ್ ಪಾರ್ಟಿ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಎನ್‍ಸಿಬಿ ಅಧಿಕಾರಿಗಳು ಐಷಾರಾಮಿ ಹಡಗಿನ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಕೊಕೇನ್, ಎನ್‍ಡಿಎಂ, ಹಾಶಿಶ್ ಮಾದಕ ದ್ರವ್ಯಗಳನ್ನು ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ: ಹೈ ಪ್ರೊಫೈಲ್ ಡ್ರಗ್ಸ್ ಕೇಸ್- ಶಾರುಖ್ ಖಾನ್ ಪುತ್ರನಿಗೆ ಬಂಧನ ಭೀತಿ