Tag: ಶಾರ್ಟ್‌ಸರ್ಕ್ಯೂಟ್‌

  • ಮಧ್ಯಪ್ರದೇಶ | ಸರ್ಕಾರಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ – 190 ರೋಗಿಗಳ ರಕ್ಷಣೆ

    ಮಧ್ಯಪ್ರದೇಶ | ಸರ್ಕಾರಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ – 190 ರೋಗಿಗಳ ರಕ್ಷಣೆ

    ಭೋಪಾಲ್: ಮಧ್ಯಪ್ರದೇಶದ (Madhya Pradesh) ಗ್ವಾಲಿಯರ್ (Gwalior) ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಭಾನುವಾರ ಮುಂಜಾನೆ ಅಗ್ನಿ ಅವಘಡ ಸಂಭವಿಸಿದೆ. 190ಕ್ಕೂ ಹೆಚ್ಚು ರೋಗಿಗಳನ್ನು ರಕ್ಷಿಸಲಾಗಿದ್ದು, ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಗಜ್ರಾ ರಾಜ ವೈದ್ಯಕೀಯ ಕಾಲೇಜಿನ ಭಾಗವಾಗಿರುವ ಕಮಲ ರಾಜ ಆಸ್ಪತ್ರೆಯ ಸ್ತ್ರೀರೋಗ ವಿಭಾಗದ ತೀವ್ರ ನಿಗಾ ಘಟಕದಲ್ಲಿ ಇಂದು ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತ್ತು ಎಂದು ಗ್ವಾಲಿಯರ್‌ನ ಜಿಲ್ಲಾಧಿಕಾರಿ ರುಚಿಕಾ ಚೌಹಾಣ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕಾರು ಬಿಟ್ಟು ಬಸ್‍ನಲ್ಲಿ ಸಂಚರಿಸಿ ಮಲೆನಾಡ ಸೌಂದರ್ಯ ಸವಿದ ತೇಜಸ್ವಿ ಸೂರ್ಯ ದಂಪತಿ

    ಆಸ್ಪತ್ರೆಯ ಸಿಬ್ಬಂದಿ ತಕ್ಷಣ ಕಿಟಕಿಗಳನ್ನು ಒಡೆದು ಐಸಿಯುನಲ್ಲಿದ್ದ 13 ರೋಗಿಗಳೂ ಸೇರಿದಂತೆ ಆಸ್ಪತ್ರೆಯಲ್ಲಿದ್ದ 190ಕ್ಕೂ ಹೆಚ್ಚು ರೋಗಿಗಳನ್ನು ಸುರಕ್ಷಿತವಾಗಿ ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಿದರು. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಹೌತಿ ಉಗ್ರರ ಮೇಲೆ ಅಮೆರಿಕ ಏರ್‌ಸ್ಟ್ರೈಕ್‌, 31 ಬಲಿ – ನರಕ ತೋರಿಸ್ತೀವಿ ಎಂದು ಗುಡುಗಿದ ಟ್ರಂಪ್‌

    ಶಾರ್ಟ್ ಸರ್ಕ್ಯೂಟ್‌ನಿಂದ ಕಮಲ ರಾಜ ಆಸ್ಪತ್ರೆಯ ಸ್ತ್ರೀರೋಗ ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆಸ್ಪತ್ರೆಯಲ್ಲಿದ್ದ 190 ರೋಗಿಗಳನ್ನು ಸುರಕ್ಷಿತವಾಗಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ರಾಜ್ಯ ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಕಟಣೆ ತಿಳಿಸಿದೆ.

  • ನವಜಾತ ಶಿಶುಗಳ ಐಸಿಯು ವಾರ್ಡ್‌ನಲ್ಲಿ ಶಾರ್ಟ್‌ಸರ್ಕ್ಯೂಟ್ – ತಪ್ಪಿದ ಭಾರೀ ಅನಾಹುತ

    ನವಜಾತ ಶಿಶುಗಳ ಐಸಿಯು ವಾರ್ಡ್‌ನಲ್ಲಿ ಶಾರ್ಟ್‌ಸರ್ಕ್ಯೂಟ್ – ತಪ್ಪಿದ ಭಾರೀ ಅನಾಹುತ

    ಹಾಸನ: ಜಿಲ್ಲಾಸ್ಪತ್ರೆಯ (District Hospital) ನವಜಾತ ಶಿಶುಗಳ (Infant) ಐಸಿಯು (ICU) ವಾರ್ಡ್‌ನಲ್ಲಿ ಶಾರ್ಟ್‌ಸರ್ಕ್ಯೂಟ್‌ (Short Circuit) ಉಂಟಾಗಿದ್ದು, ಭಾರೀ ಅನಾಹುತವೊಂದು ತಪ್ಪಿದ ಘಟನೆ ಹಾಸನದಲ್ಲಿ (Hassan) ನಡೆದಿದೆ.

    ಘಟನೆಯಿಂದ ಜನರಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕೂಡಲೇ ಐಸಿಯುನಲ್ಲಿದ್ದ 24 ನವಜಾತ ಶಿಶುಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಕೋಣೆಯೊಳಗೆ ಹೊಗೆ ತುಂಬಿಕೊಂಡಿದ್ದು, ಆಸ್ಪತ್ರೆ ಸಿಬ್ಬಂದಿ ಕಿಟಕಿ ಗಾಜುಗಳನ್ನು ಒಡೆದು ಮಕ್ಕಳನ್ನು ರಕ್ಷಿಸಿದ್ದಾರೆ. ಐಸಿಯುನಿಂದ ಮಕ್ಕಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಿದ ಬಳಿಕ ನವಜಾತ ಶಿಶುಗಳ ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ. ಇದನ್ನೂ ಓದಿ: ಭೀಮಾ ನದಿಯಲ್ಲಿ ನೀರು ಕುಡಿಯಲು ಹೋದ ಇಬ್ಬರು ಬಾಲಕರ ಸಾವು

    ಐಸಿಯುನಲ್ಲಿದ್ದ ಎಲ್ಲಾ 24 ನವಜಾತ ಶಿಶುಗಳು ಸುರಕ್ಷಿತವಾಗಿದ್ದು, ಸ್ಥಳಕ್ಕೆ ಹಿಮ್ಸ್‌ನ ನಿರ್ದೇಶಕ ರವಿಕುಮಾರ್ ಹಾಗೂ ಜಿಲ್ಲಾ ಶಸ್ತ್ರಚಿಕಿತ್ಸಕ ಕೃಷ್ಣಮೂರ್ತಿ ಭೇಟಿ ನೀಡಿದ್ದಾರೆ. ಅಲ್ಲದೇ ಯಾವುದೇ ವದಂತಿಗಳಿಗೆ ಕಿವಿಗೊಡದಂತೆ ಜನರಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಫ್ಲೈಓವರ್‌ನಿಂದ ರೈಲ್ವೇ ಹಳಿಗೆ ಬಿದ್ದ ಕಾರು – ಐವರಿಗೆ ಗಂಭೀರ ಗಾಯ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]