Tag: ಶಾರ್ಟ್ ಸರ್ಕ್ಯೂಟ್

  • ಶಾರ್ಟ್ ಸರ್ಕ್ಯೂಟ್‌ನಿಂದ  ಕಾರು ಗ್ಯಾರೇಜ್ ಧಗಧಗ – 3 ಬೈಕ್, 2 ಕಾರು ಸುಟ್ಟು ಕರಕಲು

    ಶಾರ್ಟ್ ಸರ್ಕ್ಯೂಟ್‌ನಿಂದ ಕಾರು ಗ್ಯಾರೇಜ್ ಧಗಧಗ – 3 ಬೈಕ್, 2 ಕಾರು ಸುಟ್ಟು ಕರಕಲು

    ಬೆಂಗಳೂರು: ಶಾರ್ಟ್ ಸರ್ಕ್ಯೂಟ್‌ನಿಂದ ಕಾರು ಗ್ಯಾರೇಜ್ ಧಗ,ಧಗ ಹೊತ್ತಿ ಉರಿದಿರುವ ಘಟನೆ ಬೆಂಗಳೂರಿನ ವಿವೇಕನಗರದ ವನ್ನರ್ ಪೇಟ್ ನೆಡೆದಿದೆ.

    ತಡರಾತ್ರಿ 2 ಗಂಟೆಯ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಗ್ಯಾರೇಜ್‌ನಲ್ಲಿರುವ 3 ಬೈಕ್, 5 ಕಾರು ಬೆಂಕಿಗಾಹುತಿಯಾಗಿದೆ. ನಾಸೀರ್ ಅವರ ಮಾಲೀಕತ್ವದ ಗ್ಯಾರೇಜ್ ಇದಾಗಿದೆ.

    ಶಾರ್ಟ್ ಸರ್ಕ್ಯೂಟ್‌ನಿಂದ ಗ್ಯಾರೇಜ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ನಂದಿಸು ವೇಳೆ ಗ್ಯಾರೇಜ್ ನಲ್ಲಿಟ್ಟಿದ್ದ 2 ಸಿಲಿಂಡರ್ ಸ್ಪೋಟವಾಗಿದೆ. ಸ್ಪೋಟದ ತೀವ್ರತೆಗೆ, ಬೆಂಕಿಯ ಕೆನ್ನಾಲಿಗೆಗೆ ಕಾರು ಗ್ಯಾರೇಜ್ ಸಂಪೂರ್ಣ ಭಸ್ಮವಾಗಿದೆ.

    3 ಅಗ್ನಿಶಾಮಕ ವಾಹನದಿಂದ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಸತತ ಒಂದುವರೆ ಗಂಟೆಗಳ ಕಾರ್ಯಾಚರಣೆ ಬಳಿಕ ಬೆಂಕಿ ನಂದಿಸಿದ ಸಿಬ್ಬಂದಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಯಾವುದೇ ಪ್ರಾಣ ಹಾನಿಯಾಗಿಲ್ಲ.

  • ಸಿಡಿಲು ಬಡಿದು ಶಾರ್ಟ್ ಸರ್ಕ್ಯೂಟ್ –  20 ಲಕ್ಷ ಮೌಲ್ಯದ ವಸ್ತುಗಳು ನಾಶ

    ಸಿಡಿಲು ಬಡಿದು ಶಾರ್ಟ್ ಸರ್ಕ್ಯೂಟ್ – 20 ಲಕ್ಷ ಮೌಲ್ಯದ ವಸ್ತುಗಳು ನಾಶ

    ಚಿಕ್ಕಮಗಳೂರು: ಭಾರೀ ಗಾಳಿ-ಮಳೆಯ ವೇಳೆ ಅಡಿಕೆ ಶೆಡ್‍ಗೆ ಸಿಡಿಲು ಬಡಿದು ಶಾರ್ಟ್ ಸರ್ಕ್ಯೂಟ್ ಆದ ಪರಿಣಾಮ ಸುಮಾರು 20 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ನಾಶವಾಗಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ವಿಟ್ಲಾಪುರ ಗ್ರಾಮದಲ್ಲಿ ನಡೆದಿದೆ.

    ಭಾನುವಾರ ಮಧ್ಯಾಹ್ನದಿಂದ ಸಂಜೆವರೆಗೂ ಭಾರೀ ಮಳೆ ಸುರಿದಿದ್ದು, ರಾತ್ರಿ 9 ಗಂಟೆ ವೇಳೆಗೆ ಧಾರಾಕಾರ ಮಳೆ ವೇಳೆ ಬಡಿದ ಸಿಡಿಲು ಅಡಿಕೆ ಗೋಡೌನ್‍ಗೆ ಬಡಿದಿದೆ. ಈ ವೇಳೆ ಗೋಡಾನ್‍ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಟ್ರ್ಯಾಕ್ಟರ್-ಟ್ರಿಲ್ಲರ್, 15 ಕ್ವಿಂಟಾಲ್ ಒಣ ಅಡಿಕೆ, ಒಂದು ಅಡಿಕೆ ಸುಲಿಯುವ ಮೆಷಿನ್, ಒಂದು ಗೊರಗಲು ಮೆಷಿನ್ ಸೇರಿದಂತೆ ವಿವಿಧ ವಸ್ತುಗಳು ಸಂಪೂರ್ಣ ಬೆಂಕಿಗಾವುತಿಯಾಗಿದೆ.  ಇದನ್ನೂ ಓದಿ: ಮಗಳ ಹುಟ್ಟುಹಬ್ಬವನ್ನು ವಿಲ್ಲಾದಲ್ಲಿ ಆಚರಿಸುತ್ತಿರೋ ಅಭಿ, ಐಶ್ – ದಿನಕ್ಕೆ ಇದರ ಬೆಲೆ ಎಷ್ಟು ಗೊತ್ತಾ?

    ಗೋಡೌನ್ ಮುಂಭಾಗದಲ್ಲಿದ್ದ ಗೊಬ್ಬರಿಗಳನ್ನು ಸ್ಥಳಿಯರು ಬೇರೆ ಕಡೆ ಶಿಫ್ಟ್ ಮಾಡಿದ್ದಾರೆ. ಅಡಿಕೆ ಗೋಡೌ ನ್‍ನಲ್ಲಿದ್ದವರು ಮಳೆ ಕಡಿಮೆಯಾಗಿದೆ ಎಂದು ಮನೆಗೆ ಊಟಕ್ಕೆ ಹೋಗಿದ್ದರು. ಈ ವೇಳೆ ಈ ದುರ್ಘಟನೆ ಸಂಭವಿಸಿದೆ. ಅವರು ಗೋಡೌನ್‍ನಲ್ಲಿಯೇ ಇದ್ದಿದ್ದರೆ ಬಹುಶಃ ದೊಡ್ಡ ಮಟ್ಟದ ಸಾವು-ನೋವುಗಳು ಸಂಭವಿಸುವ ಸಾಧ್ಯತೆ ಇತ್ತು. ಭಾರೀ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

    ಗೋಡೌನ್‍ಗೆ ಬೆಂಕಿ ಬಿದ್ದ ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ಆದರೆ, ಅವರು ಬೇರೆ ಕಡೆ ಹೋಗಿದ್ದರಿಂದ ಬರುವುದು ತಡವಾಗಿದೆ. ಅಗ್ನಿಶಾಮಕ ಸಿಬ್ಬಂದಿ ಬರುವಷ್ಟರಲ್ಲಿ ಸ್ಥಳೀಯರೇ ಬೆಂಕಿಯನ್ನು ನಾಂದಿಸಿದ್ದರು. ಆದರೆ, ಇಡೀ ರಾತ್ರಿ ಹೊತ್ತಿ ಉರಿದ ಟ್ರ್ಯಾಕ್ಟರ್ ಬೆಳಗ್ಗೆ 10 ಗಂಟೆಯಾದರೂ ಉರಿಯುತ್ತಲೇ ಇದೆ. ಸುಮಾರು 20 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳನ್ನು ಕಳೆದುಕೊಂಡು ಕುಟುಂಬ ಆರ್ಥಿಕ ಸಂಕಷ್ಟದಿಂದ ಕಂಗಾಲಾಗಿದೆ. ಸರ್ಕಾರ ನಮಗೆ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ. ತರೀಕೆರೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ದಲಿತರು ಕೋಳಿ ಕೊಟ್ಟರೆ ತಿನ್ನುತ್ತಾರಾ? : ಕ್ಷಮೆ ಕೇಳಿದ ಹಂಸಲೇಖ

  • ಧಗಧಗನೆ ಹೊತ್ತಿ ಉರಿದ ಆಯಿಲ್ ಮಳಿಗೆ- 60 ಲಕ್ಷ ರೂ. ಸಾಮಾಗ್ರಿಗಳು ಬೆಂಕಿಗಾಹುತಿ

    ಧಗಧಗನೆ ಹೊತ್ತಿ ಉರಿದ ಆಯಿಲ್ ಮಳಿಗೆ- 60 ಲಕ್ಷ ರೂ. ಸಾಮಾಗ್ರಿಗಳು ಬೆಂಕಿಗಾಹುತಿ

    ರಾಮನಗರ: ಆಯಿಲ್ ಮಳಿಗೆಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್‍ನಿಂದ ಉಂಟಾದ ಬೆಂಕಿಗೆ ಸಂಪೂರ್ಣವಾಗಿ ಮಳಿಗೆಯೇ ಹೊತ್ತಿ ಉರಿದ ಘಟನೆ ರಾಮನಗರದ ಕೆಂಪೇಗೌಡ ಸರ್ಕಲ್‍ನಲ್ಲಿ ತಡರಾತ್ರಿ ನಡೆದಿದೆ.

    ರಾಮನಗರದ ನಿವಾಸಿಯಾಗಿರುವ ಮೂರ್ತಿ ಅವರಿಗೆ ಸೇರಿದ ಸರ್ವೋ ಆಯಿಲ್ ಕಂಪನಿಯ ಮಳಿಗೆ ಬೆಂಕಿಗಾಹುತಿಯಾಗಿದೆ. ರಾತ್ರಿ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್‍ ಉಂಟಾಗಿದ್ದು ಬಾಗಿಲು ಬಂದ್ ಮಾಡಿದ್ದ ಕಾರಣ ಒಳಗಿದ್ದ ಆಯಿಲ್ ಸಹಿತ ಸಂಪೂರ್ಣವಾಗಿ ಬೆಂಕಿ ಆವರಿಸಿದೆ. ನಂತರ ಬೆಂಕಿ ಹೊರಭಾಗದಲ್ಲಿ ಕಾಣಿಸಿಕೊಂಡಿದ್ದು, ಹೊಗೆಯನ್ನು ಕಂಡು ಸಾರ್ವಜನಿಕರು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: 30ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಬಸ್ ಬೆಂಕಿಗಾಹುತಿ

    ತಕ್ಷಣ ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಸುಮಾರು ಒಂದೂವರೆ ಗಂಟೆಗೂ ಹೆಚ್ಚು ಕಾಲ ಹರಸಾಹಸ ಪಟ್ಟು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿಯಲ್ಲಿ ಅಂದಾಜು 60 ಲಕ್ಷ ರೂ. ಮೌಲ್ಯದ ಆಯಿಲ್ ಸಾಮಾಗ್ರಿಗಳು ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಭಸ್ಮವಾಗಿದೆ.

    ಸದ್ಯ ರಾಮನಗರ ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • 30ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಬಸ್ ಬೆಂಕಿಗಾಹುತಿ

    30ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಬಸ್ ಬೆಂಕಿಗಾಹುತಿ

    ರಾಮನಗರ: ಪ್ರವಾಸಿಗರನ್ನು ಕರೆತಂದಿದ್ದ ಬಸ್ಸೊಂದರಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕ್ಷಣಾರ್ಧದಲ್ಲೇ ಬೆಂಕಿಗೆ ಆಹುತಿಯಾಗಿರುವ ಘಟನೆ ರಾಮನಗರ ತಾಲೂಕಿನ ಪಾದರಹಳ್ಳಿ ಸಮೀಪದಲ್ಲಿ ನಡೆದಿದೆ.

    ಬೆಂಗಳೂರಿನಿಂದ ಪ್ರವಾಸಿಗರನ್ನು ಕರೆದುಕೊಂಡು ರಾಮನಗರ ತಾಲೂಕಿನ ಪಾದರಹಳ್ಳಿ ಸಮೀಪದಲ್ಲಿನ ಶಿಲ್ಹಾಂದರ ರೆಸಾರ್ಟ್ ಬಳಿ ಖಾಸಗಿ ಒಡೆತನದ ಎಸ್.ಆರ್.ಎಸ್ ಮಾಲೀಕತ್ವದ ಬಸ್ಸಿನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿದೆ.

    ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಎಚ್ಚೆತ್ತ ಚಾಲಕ ಬಸ್ ನಿಲ್ಲಿಸಿ, ಪ್ರಯಾಣಿಕರನ್ನು ಕೆಳಗಿಳಿಸಿದ್ದಾನೆ. ಬಳಿಕ ಬಸ್ಸಿಗೆ ಸಂಪೂರ್ಣವಾಗಿ ಬೆಂಕಿ ಆವರಿಸಿದ್ದು ಕ್ಷಣಾರ್ಧಲ್ಲಿಯೆ ಬಸ್ ಸುಟ್ಟು ಕರಕಲಾಗಿದೆ.

    ಘಟನೆ ನಡೆದ ಸ್ಥಳದ ಸಮೀಪದಲ್ಲಿನ ಶಿಲ್ಹಾಂದರ ರೆಸಾರ್ಟಿಗೆ ಪ್ರವಾಸಿಗರು ಬಂದಿದ್ದರು ಎನ್ನಲಾಗಿದೆ. ಬಸ್ಸಿನಲ್ಲಿ ಸುಮಾರು 30 ಕ್ಕೂ ಹೆಚ್ಚು ಜನರಿದ್ದರು ಎನ್ನಲಾಗಿದೆ. ಚಾಲಕನ ಸಮಯಪ್ರಜ್ಞೆಯಿಂದ ಎಲ್ಲರೂ ಕೂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ಸಿಗೆ ಬೆಂಕಿ ಆವರಿಸಿ ಹೊತ್ತಿ ಉರಿಯುತ್ತಿರುವ ಸುದ್ದಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ.

    ಘಟನೆ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ಅಗ್ನಿ ಅವಘಡ – ಮಕ್ಕಳಿಬ್ಬರ ದುರ್ಮರಣ, ಪೋಷಕರು ಗಂಭೀರ

    ಅಗ್ನಿ ಅವಘಡ – ಮಕ್ಕಳಿಬ್ಬರ ದುರ್ಮರಣ, ಪೋಷಕರು ಗಂಭೀರ

    ಬೆಂಗಳೂರು: ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಮನೆಯಲ್ಲಿ ಇದ್ದ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ತಂದೆ-ತಾಯಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಿಲಿಕಾನ್ ಸಿಟಿಯ ಭಕ್ಷಿಗಾರ್ಡನ್‍ನಲ್ಲಿ ನಡೆದಿದೆ.

    ಮೃತ ದುರ್ದೈವಿ ಮಕ್ಕಳನ್ನು ಕಾವೇರಿ (21) ಶ್ರೀಕಾಂತ್ (13) ಎಂದು ಗುರುತಿಸಲಾಗಿದೆ. ಇವರ ಪೋಷಕರಾದ ಮುರಳಿ ಮತ್ತು ಗೀತಾರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

    ಈ ಸಂಬಂಧ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸ್ಥಳಕ್ಕೆ ಬಂದು ಪರೀಶಿಲನೆ ನಡೆಸಿರುವ ಪೊಲೀಸರು, ತಂದೆಯೇ ಮನೆಗೆ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಆದರೆ ಈಗ ದಂಪತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ವಿಚಾರಣೆ ನಂತರ ಸತ್ಯ ಹೊರಬರಬೇಕಿದೆ.

  • ಶಾರ್ಟ್ ಸರ್ಕ್ಯೂಟ್- ಆರು ಎಕ್ರೆ ಕಬ್ಬು ಬೆಂಕಿಗಾಹುತಿ

    ಶಾರ್ಟ್ ಸರ್ಕ್ಯೂಟ್- ಆರು ಎಕ್ರೆ ಕಬ್ಬು ಬೆಂಕಿಗಾಹುತಿ

    ಚಾಮರಾಜನಗರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಬ್ಬಿಗೆ ಬೆಂಕಿ ಬಿದ್ದಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಗುಂಡೇಗಾಲ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ರೈತ ಪಾಪಣ್ಣ ಆರು ಎಕರೆ ಜಮೀನಿನಲ್ಲಿ ಕಬ್ಬನ್ನು ಬೆಳೆದಿದ್ದರು. ಆದರೆ ಕೆಇಬಿ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಲಕ್ಷಾಂತರ ರೂಪಾಯಿ ಬೆಳೆ ಬೆಂಕಿಗೆ ಆಹುತಿಯಾಗಿದೆ. ಕೆಇಬಿ ಅಧಿಕಾರಿಗಳು ಎಳೆದಿರುವ ವಿದ್ಯುತ್ ಕಂಬದ ಲೈನ್ ಜೋತು ಬಿದ್ದಿರುವ ಹಿನ್ನೆಲೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಬ್ಬು ಹೊತ್ತಿ ಉರಿದಿದೆ.

    ಈಗಾಗಲೇ ಕಬ್ಬನ್ನು ಬೆಳೆಯುವ ಸಲುವಾಗಿ ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದು, ಕಬ್ಬಿಗೆ ಬೆಂಕಿ ಬಿದ್ದಿರುವ ಕಾರಣ ರೈತ ಕಂಗಲಾಗಿದ್ದಾರೆ. ಬೆಳೆ ನಂಬಿ ಬ್ಯಾಂಕ್ ಹಾಗೂ ಖಾಸಗಿಯಾಗಿ 30 ಲಕ್ಷ ಸಾಲ ಮಾಡಿಕೊಂಡಿದ್ದು ಇದೀಗ ಕಬ್ಬಿಗೆ ಬೆಂಕಿ ಬಿದ್ದಿರುವ ಹಿನ್ನೆಲೆಯಲ್ಲಿ ಸೂಕ್ತ ಪರಿಹಾರಕ್ಕಾಗಿ ಆಗ್ರಹಿಸಿದ್ದಾರೆ. ಒಂದು ವೇಳೆ ಕೆಇಬಿ ಅಧಿಕಾರಿಗಳು ಸೂಕ್ತ ಪರಿಹಾರ ನೀಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ.

  • ಶ್ರೀಶಾಂತ್ ಮನೆಯಲ್ಲಿ ಅಗ್ನಿ ಅವಘಡ

    ಶ್ರೀಶಾಂತ್ ಮನೆಯಲ್ಲಿ ಅಗ್ನಿ ಅವಘಡ

    ತಿರುವನಂತಪುರಂ: ಭಾರತದ ತಂಡದ ಕ್ರಿಕೆಟಿಗ ಮತ್ತು ನಟ ಶ್ರೀಶಾಂತ್ ಮನೆಯಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ.

    ಶ್ರೀಶಾಂತ್ ಅವರ ಕೇರಳದ ಕೊಚ್ಚಿಯ ಎಡಪಲ್ಲಿ ಪ್ರದೇಶದಲ್ಲಿರುವ ಮನೆಗೆ ಇಂದು ಮುಂಜಾನೆ 2 ಗಂಟೆಯ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ಘಟನೆಯಲ್ಲಿ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಅಗ್ನಿಶಾಮಕದಳದ ಅಧಿಕಾರಿಗಳು ಹೇಳಿದ್ದಾರೆ.

    ಮನೆಯಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಎಚ್ಚರಗೊಂಡ ಅಕ್ಕಪಕ್ಕದ ಮನೆಯವರು ಅಗ್ನಿಶಾಮಕದಳಕ್ಕೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ನಂತರ ತಕ್ಷಣ ಸ್ಥಳಕ್ಕೆ ಬಂದ ಅಧಿಕಾರಿಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು ಮತ್ತು ಮನೆಯ ಗಾಜಿನ ವೆಂಟಿಲೇಟರ್ ಒಡೆದು ಮನೆಯಲ್ಲಿ ಇದ್ದವರನ್ನು ಸ್ಥಳಾಂತರ ಮಾಡಿದ್ದಾರೆ.

    ಈ ಘಟನೆಯ ಬಗ್ಗೆ ಮಾತನಾಡಿರುವ ಶ್ರೀಶಾಂತ್, ನನ್ನ ಪತ್ನಿ ಮತ್ತು ಮಕ್ಕಳು ಮೊದಲನೇ ಮಹಡಿಯಲ್ಲಿ ಇದ್ದರು. ಅ ಸಮಯದಲ್ಲಿ ನೆಲಮಹಡಿಯಲ್ಲಿ ಇರುವ ಡ್ರಾಯಿಂಗ್ ರೂಮ್‍ನಲ್ಲಿ ಸೀಲಿಂಗ್ ಫ್ಯಾನ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿದೆ. ನಾನು ಅ ಸಮಯದಲ್ಲಿ ಮನೆಯಲ್ಲಿ ಇರಲಿಲ್ಲ. ಶೂಟಿಂಗ್ ಇದ್ದ ಕಾರಣ ಮುಂಬೈಗೆ ಹೋಗಿದ್ದೆ ಎಂದು ತಿಳಿಸಿದ್ದಾರೆ.

    ಭಾರತದ ಪರ ಶ್ರೀಶಾಂತ್ 27 ಟೆಸ್ಟ್ ಮತ್ತು 53 ಏಕದಿನ ಪಂದ್ಯಗಳನ್ನು ಆಡಿ ಟೆಸ್ಟ್ ನಲ್ಲಿ 87 ಹಾಗೂ ಏಕದಿನದಲ್ಲಿ 75 ವಿಕೆಟ್ ಪಡೆದಿದ್ದಾರೆ. ಎರಡು ವಿಶ್ವಕಪ್ ವಿಜೇತ ಭಾರತ ತಂಡಗಳ ಭಾಗವಾಗಿರುವ ಶ್ರೀಶಾಂತ್ ಅವರನ್ನು 2013 ರ ಇಂಡಿಯನ್ ಪ್ರೀಮಿಯರ್ ಲೀಗ್‍ನಲ್ಲಿ ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಭಾಗಿಯಾದ ಆರೋಪದ ಮೇಲೆ ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಜೀವಾವಧಿ ನಿಷೇಧ ಮಾಡಿತ್ತು.

    ಈ ವಾರದ ಆರಂಭದಲ್ಲಿ, ಬಿಸಿಸಿಐ ನ್ಯಾಯಮೂರ್ತಿ (ನಿವೃತ್ತ) ಡಿಕೆ ಜೈನ್ ಅವರು ಶ್ರೀಶಾಂತ್ ಅವರ ಜೀವಾವಧಿ ನಿಷೇಧವನ್ನು ಕಡಿಮೆ ಮಾಡಿ 7 ವರ್ಷಕ್ಕೆ ಇಳಿಸಿದರು. ಈ ಮೂಲಕ ಸೆಪ್ಟೆಂಬರ್ 12, 2020 ರಂದು ಶ್ರೀಶಾಂತ್ ಅವರ ಅಮಾನತು ಕೊನೆಗೊಳ್ಳಲಿದೆ.

  • ಚಲಿಸ್ತಿದ್ದ ರೈಲಿನ ಬೋಗಿ ಧಗಧಗ – ಸಾವಿರಾರು ಜನರ ಪ್ರಾಣ ಉಳಿಸಿದ ಮಹಿಳೆ

    ಚಲಿಸ್ತಿದ್ದ ರೈಲಿನ ಬೋಗಿ ಧಗಧಗ – ಸಾವಿರಾರು ಜನರ ಪ್ರಾಣ ಉಳಿಸಿದ ಮಹಿಳೆ

    ಉಡುಪಿ: ಚಲಿಸುತ್ತಿದ್ದ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮಹಿಳಾ ಪ್ರಯಾಣಿಕರೊಬ್ಬರ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

    ಜಿಲ್ಲೆಯ ಬೈಂದೂರು ರೈಲ್ವೆ ನಿಲ್ದಾಣದಿಂದ ಸ್ವಲ್ಪವೇ ದೂರದಲ್ಲಿರುವ ಕಂಬದ ಕೋಣೆಯಲ್ಲಿ ಹಾದು ಹೋಗುವಾಗ ಈ ಅವಘಡ ಸಂಭವಿಸಿದೆ. ರೈಲಿನ ಎಸಿ ಕೋಚ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮೊದಲು ಬೆಂಕಿ ಹೊತ್ತಿಕೊಂಡಿರುವುದು ಯಾರ ಗಮನಕ್ಕೂ ಬಂದಿರಲಿಲ್ಲ. ಮಹಿಳೆಯೊಬ್ಬರ ಸಮಯ ಪ್ರಜ್ಞೆಯಿಂದ ಅಪಾಯ ತಪ್ಪಿದೆ.

    ಮುಂಬೈನಿಂದ ಎರ್ನಾಕುಲಂಗೆ ನಿಜಾಮುದ್ದೀನ್ ಎಕ್ಸ್ ಪ್ರೆಸ್ (12618) ರೈಲು ಹೋಗುತ್ತಿತ್ತು. ಬೆಳಗ್ಗಿನ ಜಾವ ಸುಮಾರು 1.20ಕ್ಕೆ ಬೆಂಕಿ ಕಾಣಿಸಿಕೊಂಡಿದೆ. ರಾತ್ರಿ ವೇಳೆ ಪ್ರಯಾಣಿಕರು ಮಲಗಿದ್ದರಿಂದ ಯಾರಿಗೂ ಆರಂಭದಲ್ಲಿ ಗೊತ್ತಾಗಲಿಲ್ಲ. ಕುಂದಾಪುರ ನಿಲ್ದಾಣದಲ್ಲಿ ಇಳಿಯಬೇಕಾಗಿರುವ ಮಹಿಳೆಯೊಬ್ಬಳು ಇದನ್ನು ಗಮನಿಸಿ ತಕ್ಷಣ ಆಲರ್ಟ್ ಆಗಿದ್ದಾರೆ.

    ಮಹಿಳೆ ನಂತರ ಸಿಬ್ಬಂದಿ ಗಮನಕ್ಕೆ ತಂದಿದ್ದು, ತಕ್ಷಣವೇ ರೈಲನ್ನು ಬೈಂದೂರು ತಾಲೂಕಿನ ಸೇನಾಪುರ ಮತ್ತು ಬಿಜೂರು ಗ್ರಾಮದ ಮಧ್ಯೆ ನಿಲ್ಲಿಸಿ ಬೆಂಕಿ ನಂದಿಸಲಾಗಿದೆ. ಎಸಿ ಬೋಗಿಯ ಗ್ಲಾಸ್ ಒಡೆಯುವಾಗ ಸಂಭವಿಸಿದ ಸಣ್ಣಪುಟ್ಟ ಗಾಯ ಹೊರತು ಪಡಿಸಿ ಯಾವುದೇ ಅಪಾಯ ಸಂಭವಿಸಿಲ್ಲ.

    ಬೆಂಕಿ ಹತ್ತಿದ ಬೋಗಿಯನ್ನು ಪ್ರತ್ಯೇಕಿಸಿ, ಪ್ರಯಾಣಿಕರಿಗೆ ಬದಲಿ ವ್ಯವಸ್ಥೆ ಮಾಡಿ ಕೇರಳದ ಎರ್ನಾಕುಲಂಗೆ ರೈಲನ್ನು ಕಳುಹಿಸಲಾಗಿದ್ದು, ಸುರಕ್ಷಿತವಾಗಿ ಪ್ರಯಾಣಿಕರು ಎರ್ನಾಕುಲಂ ತಲುಪಿದ್ದಾರೆ. ಎಸಿ ಬೋಗಿಯಲ್ಲಿ ಶಾರ್ಟ್ ಸರ್ಕ್ಯೂಟ್‍ನಿಂದ ಈ ಬೆಂಕಿ ಅವಘಢ ಸಂಭವಿಸಿದೆ ಎನ್ನಲಾಗಿದೆ.

  • ಬೆಂಗ್ಳೂರಿನ ಕೆಮಿಕಲ್ಸ್ ಗೋಡೌನ್‍ನಲ್ಲಿ ಭಾರೀ ಅಗ್ನಿ ಅವಘಡ

    ಬೆಂಗ್ಳೂರಿನ ಕೆಮಿಕಲ್ಸ್ ಗೋಡೌನ್‍ನಲ್ಲಿ ಭಾರೀ ಅಗ್ನಿ ಅವಘಡ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕೆಮಿಕಲ್ಸ್ ಗೋಡೌನ್‍ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ.

    ಲಗ್ಗೆರೆಯ ಎಂಇಐ ಲೇಔಟ್‍ನ ಶ್ರೀ ಗಣೇಶ್ ಕೆಮಿಕಲ್ಸ್ ನ ಲ್ಯಾಬ್ ಕೆಮಿಕಲ್ ಗೋಡೌನ್‍ನಲ್ಲಿ ರಾತ್ರಿ 10 ಗಂಟೆ ಸುಮಾರಿಗೆ ಈ ಬೆಂಕಿ ಕಾಣಿಸಿಕೊಂಡು, ಅಪಾರ ಪ್ರಮಾಣದ ಕೆಮಿಕಲ್‍ಗಳು ಬೆಂಕಿಗಾಹುತಿಯಾಗಿವೆ. ಗೋಡೌನ್‍ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಟ್ಟಡದಲ್ಲಿದ್ದ 4 ಮಂದಿ ಕಾರ್ಮಿಕರು ಹೊರಗೆ ಓಡಿ ಬಂದು ಪಾರಾಗಿದ್ದಾರೆ.

    ವೆಂಕಟರಾಮ್ ಎಂಬವರಿಗೆ ಸೇರಿದ ಕೆಮಿಕಲ್ ಗೋಡೌನ್ ಇದಾಗಿದ್ದು, 2 ದಿನಗಳ ಹಿಂದೆಯಷ್ಟೇ ಸುಮಾರು 15 ಲಕ್ಷ ಮೌಲ್ಯದ ಕೆಮಿಕಲ್‍ನ್ನು ಇಲ್ಲಿ ಸಂಗ್ರಹಿಸಿಡಲಾಗಿತ್ತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

  • ಮಂಗಳೂರು ಸಿಟಿ ಸೆಂಟರ್ ಮಾಲ್‍ನಲ್ಲಿ ಅಗ್ನಿ ಅವಘಡ!

    ಮಂಗಳೂರು ಸಿಟಿ ಸೆಂಟರ್ ಮಾಲ್‍ನಲ್ಲಿ ಅಗ್ನಿ ಅವಘಡ!

    ಮಂಗಳೂರು: ಶಾರ್ಟ್ ಸರ್ಕ್ಯೂಟ್‌ನಿಂದ ಮಂಗಳೂರಿನ ಪ್ರಸಿದ್ಧ ಸಿಟಿ ಸೆಂಟರ್ ಮಾಲ್‍ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಸ್ಥಳದಲ್ಲಿ ಉಸಿರು ಗಟ್ಟಿಸುವ ವಾತಾವರಣ ನಿರ್ಮಾಣವಾಗಿತ್ತು.

    ಕೆ.ಎಸ್ ರಾವ್ ರಸ್ತೆಯಲ್ಲಿರುವ ಸಿಟಿ ಸೆಂಟರ್ ಮಾಲ್‍ನ ನಾಲ್ಕನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಾಲ್‍ನ ನಾಲ್ಕನೇ ಮಹಡಿಯಲ್ಲಿವ ಫುಡ್ ಕೋರ್ಟಿನಲ್ಲಿ ಶಾರ್ಟ್ ಸರ್ಕ್ಯೂಟ್‌ ಆಗಿ ಈ ಅಗ್ನಿ ಅನಾಹುತವಾಗಿದ್ದು, ಮಾಲ್ ತುಂಬೆಲ್ಲ ಹೊಗೆ ಆವರಿಸಿಕೊಂಡ ಪರಿಣಾಮ ಉಸಿರುಗಟ್ಟುವ ವಾತಾವರಣ ನಿರ್ಮಾಣವಾಗಿತ್ತು.

    ಅಗ್ನಿ ಅವಘಡ ಸಂಭವಿಸಿದ ಕೂಡಲೇ ಮಾಲ್‍ನಲ್ಲಿ ಕರ್ತವ್ಯ ಸಲ್ಲಿಸುತ್ತಿದ್ದ ಸಾವಿರಾರು ಸಿಬ್ಬಂದಿಯನ್ನು ಹಾಗೂ ಜನರನ್ನು ಪೊಲೀಸರು ಹೊರಕ್ಕೆ ಕಳುಹಿಸಿದರು. ಸ್ಥಳಕ್ಕೆ 3 ಅಗ್ನಿಶಾಮಕ ದಳದ ವಾಹನ ಆಗಮಿಸಿ ಬೆಂಕಿ ನಂದಿಸಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv