Tag: ಶಾಲಾ- ಕಾಲೇಜುಗಳಿಗೆ ರಜೆ

  • ಕೊಡಗಿನಲ್ಲಿ ಭಾರೀ ಮಳೆ – 2 ದಿನ ಆರೆಂಜ್ ಅಲರ್ಟ್, ಗುರುವಾರ ಶಾಲಾ ಕಾಲೇಜುಗಳಿಗೆ ರಜೆ

    ಕೊಡಗಿನಲ್ಲಿ ಭಾರೀ ಮಳೆ – 2 ದಿನ ಆರೆಂಜ್ ಅಲರ್ಟ್, ಗುರುವಾರ ಶಾಲಾ ಕಾಲೇಜುಗಳಿಗೆ ರಜೆ

    ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಉತ್ತಮ‌ ಮಳೆಯಾಗುತ್ತಿದ್ದು (Heavy Rain In Kodagu), ಮುಂಜಾಗ್ರತಾ ಕ್ರಮವಾಗಿ ಎರಡು ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

    ಮಡಿಕೇರಿ (Madikeri) ತಾಲ್ಲೂಕಿನಲ್ಲಿ ಗಾಳಿ ಸಹಿತ ಅಧಿಕ ಮಳೆಯಾಗುತ್ತಿದೆ. ಕಾವೇರಿಯ ಉಗಮ ಸ್ಥಾನ ತಲಕಾವೇರಿ ಹಾಗೂ ಭಾಗಮಂಡಲ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ನದಿ ನೀರಿನ ಮಟ್ಟ ಏರಿಕೆಯಾಗಿದೆ. ಮಡಿಕೇರಿಯಲ್ಲಿ ನಿರಂತರ ಗಾಳಿಮಳೆಯಾಗುತ್ತಿದ್ದು, ಮೈಕೊರೆಯುವ ಚಳಿ ಮತ್ತು ಮಂಜು ಮುಸುಕಿದ ವಾತಾವರಣದಿಂದ ಜನ ಹಾಗೂ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ಮತ್ತಷ್ಟು ಬಲ – ವಾಯುಪಡೆಗೆ 3 ಅಪಾಚೆ ಹೆಲಿಕಾಪ್ಟರ್‌, ಪಾಕ್ ಗಡಿಯಲ್ಲಿ ನಿಯೋಜನೆಗೆ ನಿರ್ಧಾರ

    ಜಿಲ್ಲೆಯ ವಿವಿಧೆಡೆ ಮಳೆ ಮುಂದುವರೆದಿದ್ದು, ಗ್ರಾಮೀಣ ಭಾಗದಲ್ಲಿ ನಷ್ಟ ಸಂಭವಿಸುತ್ತಿದ್ದಾರೆ ಜನ. ಕೆಲವು ಗ್ರಾಮಗಳಲ್ಲಿ ಮರ, ಸಣ್ಣ ಪ್ರಮಾಣದ ಗುಡ್ಡ, ವಿದ್ಯುತ್ ಕಂಬ ಬಿದ್ದಿದ್ದು, ವಿದ್ಯುತ್ ವ್ಯತ್ಯಯ ಉಂಟಾಗಿದೆ. ರಸ್ತೆಗಳು ಸಂಪೂರ್ಣ ಹದಗೆಟ್ಟು ವಾಹನ ಸಂಚಾರ ದುಸ್ತರವಾಗಿದೆ. ಮಡಿಕೇರಿ ತಾಲ್ಲೂಕಿನಲ್ಲಿ ಪ್ರಸ್ತುತ ವರ್ಷ ಜನವರಿಯಿಂದ ಇಲ್ಲಿಯವರೆಗೆ ನಿಗಧಿಗಿಂತ ಅಧಿಕ ಮಳೆಯಾಗಿದೆ. ಇದನ್ನೂ ಓದಿ: ಚಾ.ನಗರ| ರೈತರ ಜಮೀನಿಗೆ ನುಗ್ಗಿದ ಕಾಡಾನೆಗಳು- ಲಕ್ಷಾಂತರ ಮೌಲ್ಯದ ಬೆಳೆ ನಾಶ

    ಮುಂದಿನ ದಿನಗಳಲ್ಲಿ ಮಳೆ ಮತ್ತಷ್ಟು ಹೆಚ್ಚಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಜಿಲ್ಲಾಡಳಿತ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಅಲ್ಲದೇ ಡಿಸಿ ಜಿಲ್ಲಾಧಿಕಾರಿ ವೆಂಕಟರಾಜ, ಗುರುವಾರ (ಜು.17) ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: ಸಿರಿಯಾ ಮಿಲಿಟರಿ ಹೆಡ್‌ಕ್ವಾಟ್ರಸ್‌ ಮೇಲೆ ಇಸ್ರೇಲ್ ದಾಳಿ – ಲೈವ್‌ನಿಂದಲೇ ಎದ್ದು ಓಡಿದ ಟಿವಿ ಆಂಕರ್

  • ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ 2 ದಿನ ರಜೆ ಘೋಷಣೆ

    ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ 2 ದಿನ ರಜೆ ಘೋಷಣೆ

    – ಮೈಸೂರಿನಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ರಜೆ

    ಮಂಗಳೂರು: ಮುಂಗಾರು ಮಳೆ (Monsoon Rain) ಕರ್ನಾಟಕ ಪ್ರವೇಶಿಸಿದೆ. ಅವಧಿ ಪೂರ್ವ ನೈಋತ್ಯ ಮುಂಗಾರು ಮಳೆ ರಾಜ್ಯಾದ್ಯಂತ ಖುಷಿ ತಂದಿದೆ. ಆದ್ರೆ ಕರಾವಳಿ ಭಾಗದಲ್ಲಿ ಸತತ 2ನೇ ದಿನವೂ ಭಾರಿ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ 2 ದಿನ ರಜೆ ಘೋಷಿಸಲಾಗಿದೆ.

    ಮಳೆಯ ಆರ್ಭಟ ಮುಂದುವರಿದ ಹಿನ್ನೆಲೆಯಲ್ಲಿ ಜಿಲ್ಲೆಗೆ ರೆಡ್‌ ಅಲರ್ಟ್‌ ಘೋಷಣೆಯಾಗಿದ್ದು, ಮೇ 27 ಮತ್ತು ಮೇ 28ರಂದು ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: ಕೇರಳ | ಮುಳುಗಿದ ಕಾರ್ಗೋ ಶಿಪ್‌ – ಅಲೆಯ ಅಬ್ಬರಕ್ಕೆ ತೇಲಿಬಂದ ಕಂಟೇನರ್‌; ಮುಟ್ಟದಂತೆ ಜನರಿಗೆ ಸೂಚನೆ

    ಜಿಲ್ಲೆಯ ಎಲ್ಲಾ ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಶಾಲಾ ಕಾಲೇಜುಗಳು, ಅಂಗನವಾಡಿ ಕೇಂದ್ರಗಳು ಪ್ರಾಥಮಿಕ, ಫೌಡಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ರಜೆ ಘೋಷಿಸಿದೆ. ಇದನ್ನೂ ಓದಿ: ಮುಂಬೈನಲ್ಲಿ 107 ವರ್ಷದ ದಾಖಲೆ ಮುರಿದ ಮಳೆ – 75 ವರ್ಷದಲ್ಲಿ ಮೊದಲ ಬಾರಿಗೆ ಅವಧಿ ಪೂರ್ವ ಮುಂಗಾರು

    ಮೈಸೂರಲ್ಲಿ ಅಂಗನವಾಡಿ ಕೇಂದ್ರಗಳಿಗೆ ರಜೆ:
    ಇನ್ನೂ ಮೈಸೂರು ಜಿಲ್ಲೆಯಲ್ಲಿ ಗಾಳಿ-ಮಳೆ ಹಿನ್ನೆಲೆ ಮಂಗಳವಾರವೂ (ಮೇ 26) ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಕ್ಕಳ ಸುರಕ್ಷತೆ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಕಾಂತರೆಡ್ಡಿ ತಿಳಿಸಿದ್ದಾರೆ.

  • ಭಾರೀ ಮಳೆಗೆ ಹೆಬ್ಬಾಳೆ ಸೇತುವೆ ಮುಳುಗಡೆ- ಗುಡ್ಡ ಕುಸಿತ, ಧರೆಗುರುಳಿದ ಮರಗಳು

    ಭಾರೀ ಮಳೆಗೆ ಹೆಬ್ಬಾಳೆ ಸೇತುವೆ ಮುಳುಗಡೆ- ಗುಡ್ಡ ಕುಸಿತ, ಧರೆಗುರುಳಿದ ಮರಗಳು

    ಚಿಕ್ಕಮಗಳೂರು: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಕಳೆದ ಬಾರಿ 17 ಬಾರಿ ಮುಳುಗಿದ್ದ ಹೆಬ್ಬಾಳೆ ಸೇತುವೆ ಈ ವರ್ಷ ಮೊದಲ ಬಾರಿ ಮುಳುಗಡೆಯಾಗಿದ್ದು, ಮಹಾಮಳೆಗೆ ಜನ ಮನೆಯಿಂದ ಹೊರಬರದಂತ ಸ್ಥಿತಿ ನಿರ್ಮಾಣವಾಗಿದೆ.

    ಮೂರು ದಿನಗಳಿಂದ ಮೂಡಿಗೆರೆ ತಾಲೂಕಿನಾದ್ಯಂತ ಧಾರಾಕಾರ ಮಳೆಯಾಗುತ್ತಿತ್ತು. ಆದರೆ, ಸೋಮವಾರ ರಾತ್ರಿಯಿಂದ ಜಿಲ್ಲೆಯ ಮಲೆನಾಡು ಭಾಗಗಳಾದ ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರದಲ್ಲಿ ಎಡೆಬಿಡದೆ ಧಾರಾಕಾರ ಮಳೆಯಾಗುತ್ತಿದ್ದು, ಜನ ಆತಂಕಕ್ಕೀಡಾಗಿದ್ದಾರೆ. ಮುಂಜಾಗೃತ ಕ್ರಮವಾಗಿ ಜಿಲ್ಲೆಯ ಎನ್.ಆರ್.ಪುರ, ಮೂಡಿಗೆರೆ, ಕೊಪ್ಪ ಹಾಗೂ ಶೃಂಗೇರಿ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

    ನಿರಂತರವಾಗಿ ಸುರಿಯುತ್ತಿರೋ ಮಳೆಯಿಂದ ಜೀವ ನದಿಗಳಿಗೆ ಕಳೆ ಬಂದಿದ್ದು, ತುಂಗಾ-ಭದ್ರಾ ಹಾಗೂ ಹೇಮಾವತಿ ನದಿಗಳು ಮೈದುಂಬಿ ಹರಿಯುತ್ತಿವೆ. ಕೊಟ್ಟಿಗೆಹಾರ, ಚಾರ್ಮಾಡಿಯಲ್ಲಿ ಮಳೆಯ ಅಬ್ಬರಕ್ಕೆ ಜನ ಕಂಗಾಲಾಗಿದ್ದಾರೆ. ಚಾರ್ಮಾಡಿಯಲ್ಲಿ ರಸ್ತೆ ಬದಿಯ ಗುಡ್ಡ ಕುಸಿತ ಉಂಟಾಗುತ್ತಿದ್ದು, ಮಳೆ-ಗಾಳಿಗೆ ಮರಗಳು ಧರೆಗುರುಳುತ್ತಿವೆ.

    ಶಾಲಾ-ಕಾಲೇಜುಗಳಿಗೆ ರಜೆ:
    ಮಹಾ ಮಳೆ, ಪ್ರವಾಹ ಹಿನ್ನೆಲೆ ಹಲವೆಡೆ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ರಾಮದುರ್ಗ ತಾಲೂಕು ಹೊರತುಪಡಿಸಿ ಬೆಳಗಾವಿಯಾದ್ಯಂತ ಶಾಲಾ-ಕಾಲೇಜಿಗೆ ಎರಡು ದಿನ ರಜೆ ಘೋಷಣೆ ಮಾಡಲಾಗಿದೆ. ಕರಾವಳಿ, ಮಲೆನಾಡು, ಉತ್ತರ ಕನ್ನಡದಲ್ಲೂ ಧಾರಾಕಾರ ಮಳೆಯಾಗುತ್ತಿದ್ದು, ಉತ್ತರ ಕನ್ನಡದ ಹಳಿಯಾಳ, ದಾಂಡೇಲಿ ತಾಲೂಕು ಹೊರತುಪಡಿಸಿ ಉಳಿದ 9 ತಾಲೂಕುಗಳ ಶಾಲೆಗಳಿಗೆ ರಜೆ ನೀಡಲಾಗಿದೆ.

    ಇತ್ತ ದಕ್ಷಿಣ ಕನ್ನಡದ ಪುತ್ತೂರು, ಕಡಬ, ಬೆಳ್ತಂಗಡಿ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಫೋಷಿಸಲಾಗಿದೆ. ಮಲೆನಾಡಿನ ಮೂಡಿಗೆರೆ, ಎನ್.ಆರ್.ಪುರ, ಕೊಪ್ಪ, ಶೃಂಗೇರಿಯಲ್ಲೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ಶಿವಮೊಗ್ಗದ ತೀರ್ಥಹಳ್ಳಿ, ಸಾಗರ, ಹೊಸನಗರ ತಾಲೂಕುಗಳಲ್ಲೂ ಶಾಲೆಗಳಿಗೆ ರಜೆ ನೀಡಲಾಗಿದೆ. ಶಿರಸಿ, ಸಿದ್ದಾಪುರ ಭಾಗದಲ್ಲಿಯೂ ರಜೆ ನೀಡಲಾಗಿದೆ. ಹಾಸನದ ಬೇಲೂರು ತಾಲೂಕಿನ ಅರೆಹಳ್ಳಿ, ಚೀಕನಹಳ್ಳಿ ನಾರ್ವೆ ಹೋಬಳಿ, ಆಲೂರು ತಾಲ್ಲೂಕಿನ ಹೊಸಕೋಟೆ, ಕುಂದೂರು, ಪಾಳ್ಯ ಹೋಬಳಿಗಳ ಶಾಲೆ ಕಾಲೇಜುಗಳಿಗೆ ರಜೆ ಫೋಷಿಸಲಾಗಿದೆ.