Tag: ಶಾಲಾ ಕಾಲೇಜು ರಜೆ

  • Rain Alert: ಮಳೆಗೆ ಮುಳುಗಿದ ಕರುನಾಡು; ಮಂಗಳವಾರ ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ!

    Rain Alert: ಮಳೆಗೆ ಮುಳುಗಿದ ಕರುನಾಡು; ಮಂಗಳವಾರ ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ!

    ಬೆಂಗಳೂರು: ರಾಜ್ಯದಂದು ಎಲ್ಲೆಡೆ ಭರ್ಜರಿ ಮಳೆಯಾಗಿದ್ದು (Heavy Rain), ಅಷ್ಟೇ ಅವಾಂತರವನ್ನೂ ಸೃಷ್ಟಿಸಿದೆ. ಉತ್ತರ ಕನ್ನಡದಲ್ಲಂತೂ ಪ್ರವಾಹ ಪರಿಸ್ಥಿತಿ ಮುಂದುವರೆದಿದೆ. ಅರಗಾ ಭಾಗದಲ್ಲಿ 10ಕ್ಕೂ ಹೆಚ್ಚು ಮನೆ, ಜಮೀನು ಜಲಾವೃತವಾಗಿವೆ. ಹೊನ್ನಾವರ-ಬೆಂಗಳೂರು ಹೆದ್ದಾರಿಯಲ್ಲಿ ಗುಡ್ಡ ಕುಸಿದಿದೆ. ಮಳೆಯ ಆರ್ಭಟದಿಂದಾಗಿ ವಿವಿಧ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ (Holidays For Schools And Colleges) ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: ಕೋವಿಡ್ ನಿರ್ವಹಣೆಯಲ್ಲಿ 30 ಕೋಟಿ ಅಕ್ರಮ – ಬಿಜೆಪಿ ವಿರುದ್ಧ ಯು.ಬಿ ವೆಂಕಟೇಶ್ ಬಾಂಬ್!

    ರಾಜ್ಯಾದ್ಯಂತ ಯಾವ್ಯಾವ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ?

    ಮೈಸೂರು:
    ಮೈಸೂರು ಜಿಲ್ಲೆ ಹುಣಸೂರು ತಾಲೂಕಿನಾದ್ಯಂತ ಸೋಮವಾರ ಭಾರೀ ಮಳೆಯಾಗಿದ್ದು, ಜಿಲ್ಲಾಡಳಿತ ಸೂಚನೆ ಮೇರೆಗೆ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೇ ಮಾಡಲಾಗಿದೆ.

    ದಕ್ಷಿಣ ಕನ್ನಡ:
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಜುಲೈ 16ರಂದು ಜಿಲ್ಲಾ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಅಂಗನವಾಡಿಯಿಂದ ದ್ವಿತೀಯ ಪಿಯುಸಿವರೆಗಿನ ಸರ್ಕಾರಿ, ಅನುದಾನಿತ, ಖಾಸಗಿ ಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: ಜೈಲಿನಲ್ಲಿರೋ ಇಮ್ರಾನ್‌ ಖಾನ್‌ಗೆ ಮತ್ತೆ ಶಾಕ್ – ದೇಶ ವಿರೋಧಿ ಚಟುವಟಿಕೆ ಆರೋಪದಡಿ ಪಿಟಿಐ ನಿಷೇಧ!

    ಉಡುಪಿ:
    ಉಡುಪಿ ಜಿಲ್ಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲ್ಟ್ ಘೋಷಿಸಿದ್ದು, ಜು.16ರಂದು ಎಲ್ಲಾ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪದವಿ, ಸ್ನಾತಕೋತ್ತರ, ಎಂಜಿನಿಯರಿಂಗ್, ಐಟಿಐ, ಡಿಪ್ಲೋಮೋ ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶದಲ್ಲಿ ತಿಳಿಸಿದ್ದಾರೆ.

    ಕೊಡಗು:
    ಕೊಡಗು ಜಿಲ್ಲೆಯಾದ್ಯಂತ ಗಾಳಿ ಸಹಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ (ಜು.16) ಜಿಲ್ಲೆಯಾದ್ಯಂತ ಅಂಗನವಾಡಿಯಿಂದ ಶಾಲೆ, ಪಿಯು ಕಾಲೇಜುವರೆಗೆ ರಜೆ ಘೋಷಿಸಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸುತ್ತೋಲೆ ಹೊರಡಿಸಿದ್ದಾರೆ. ಇದನ್ನೂ ಓದಿ: ಕಟಾಕಟ್‌ ಅಂತ ದಲಿತರ ಹಣ ಲೂಟಿಯಾಗಿದೆ, ಇದು ಕರ್ನಾಟಕ ಇತಿಹಾಸಕ್ಕೆ ಕಪ್ಪು ಚುಕ್ಕೆ: ಗುಡುಗಿದ ಅಶೋಕ್‌

    ಉತ್ತರ ಕನ್ನಡ:
    ಉತ್ತರ ಕನ್ನಡ ಜಿಲ್ಲೆಯ 10 ತಾಲೂಕಿನ ಶಾಲಾ ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ. ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಆದೇಶಿಸಿದ್ದಾರೆ. ಹಳಿಯಾಳ ಮತ್ತು ಮುಂಡಗೊಂಡ ತಾಲೂಕಿನಲ್ಲಿ ಶಾಲಾ-ಕಾಲೇಜುಗಳು ಎಂದಿನಂತೆ ಮುಂದುವರಿಯಲಿವೆ. ಕಾರವಾರ, ಕುಮಟಾ, ಅಂಕೋಲಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ, ದಾಂಡೇಲಿ ತಾಲೂಕಿನ ಶಾಲಾ-ಕಾಲೇಜುಗಳಿಗೆ ಮಾತ್ರ ರಜೆ ಘೋಷಿಸಿರುವುದಾಗಿ ಆದೇಶದಲ್ಲಿ ತಿಳಿಸಿದ್ದಾರೆ.

    ಹಾಸನ:
    ಇನ್ನೂ ಮಳೆ ಹಿನ್ನೆಲೆ ಹಾಸನ ಜಿಲ್ಲೆಯ ಸಕಲೇಶಪುರ, ಆಲೂರು, ಅರಕಲಗೂಡು ಹಾಗೂ ಬೇಲೂರು ತಾಲ್ಲೂಕಿನ ಎಲ್ಲಾ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಡಿಡಿಪಿಯು ಮಹಾಲಿಂಗಯ್ಯ ಆದೇಶಿಸಿದ್ದಾರೆ. ಉಳಿದ ಕಡೆ ಎಂದಿನಂತೆ ಶಾಲಾ ಕಾಲೇಜುಗಳು ಮುಂದುವರಿಯಲಿದೆ.

  • ಭಾರೀ ಮಳೆ- ಬೆಂಗಳೂರು ಸೇರಿ 6 ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ, ಅಲರ್ಟ್‌ ಆಗಿರಲು 13 ಜಿಲ್ಲೆಗಳಿಗೆ ಸೂಚನೆ

    ಭಾರೀ ಮಳೆ- ಬೆಂಗಳೂರು ಸೇರಿ 6 ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ, ಅಲರ್ಟ್‌ ಆಗಿರಲು 13 ಜಿಲ್ಲೆಗಳಿಗೆ ಸೂಚನೆ

    ಬೆಂಗಳೂರು: ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿರುವ ಬೆಂಗಳೂರು ನಗರ ಸೇರಿದಂತೆ ಆರು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಲ್ಲದೇ ಮುಂಜಾಗ್ರತೆ ಕ್ರಮಗಳೊಂದಿಗೆ ಅಲರ್ಟ್‌ ಆಗಿರುವಂತೆ ರಾಜ್ಯದ 13 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಎಚ್ಚರಿಕೆ ನೀಡಲಾಗಿದೆ.

    ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮಂಜುನಾಥ್‌ ಆದೇಶ ಹೊರಡಿಸಿದ್ದಾರೆ. ಉಳಿದಂತೆ ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ರಜೆ ಘೋಷಿಸಲಾಗಿದೆ. ಇದನ್ನೂ ಓದಿ: ಖಾಕಿಯಿಂದಲೇ ನ್ಯಾಯಾಧೀಶರ ಮೇಲೆ ಹಲ್ಲೆ- ಇಬ್ಬರು ಪೊಲೀಸರು ಅರೆಸ್ಟ್‌!

    ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣ ತುಂತುರು ಮಳೆಯಾಗುತ್ತಿದೆ. ತುಂತುರು ಮಳೆ ಹಿನ್ನೆಲೆ ಶಾಲಾ-ಕಾಲೇಜುಗಳು, ನಿತ್ಯ ಕೆಲಸಕ್ಕೆ ಹೋಗುವವರಿಗೆ ಸಮಸ್ಯೆ ಆಗಲಿದೆ. ಮುಂದಿನ ನಾಲ್ಕು ದಿನದವರೆಗೂ ಮಳೆ ಇರಲಿದೆ. ಚೆನ್ನೈನಲ್ಲಿ ರೆಡ್‌ ಅಲರ್ಟ್‌ ಇರುವ ಕಾರಣ ಬೆಂಗಳೂರಿನಲ್ಲೂ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ವೀರ್ ದಾಸ್‍ಗೆ ಪ್ರದರ್ಶನ ನೀಡಲು ಬಿಡುವುದಿಲ್ಲ: ನರೋತ್ತಮ್ ಮಿಶ್ರಾ

    ರಾಜ್ಯದ 13 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ ನೀಡಿದೆ. ವ್ಯಾಪಕ ಮಳೆ ಜೊತೆಗೆ ವಿಪರೀತ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ 13 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಅಲರ್ಟ್ ಆಗಿರುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ಜೊತೆಗೆ ಕರಾವಳಿ ಕರ್ನಾಟಕದಲ್ಲಿ ಮೀನುಗಾರಿಕೆಗೆ ನಿರ್ಬಂಧ ವಿಧಿಸಲಾಗಿದೆ.

    chikkaballapura rain

    ಯಾವ್ಯಾವ ಜಿಲ್ಲೆಗಳಿಗೆ ಸೂಚನೆ?
    ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಅಲರ್ಟ್‌ ಆಗಿರುವಂತೆ ತಿಳಿಸಲಾಗಿದೆ.

  • ಮಲೆನಾಡಲ್ಲಿ ಭಾರೀ ಮಳೆ – ಮೂಡಿಗೆರೆ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ

    ಮಲೆನಾಡಲ್ಲಿ ಭಾರೀ ಮಳೆ – ಮೂಡಿಗೆರೆ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ

    ಚಿಕ್ಕಮಗಳೂರು: ಮಲೆನಾಡಿನಲ್ಲಿ ಕಳೆದ 24 ಗಂಟೆ ಸಮಯದಿಂದ ಧಾರಾಕಾರ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಮೂಡಿಗೆರೆ ತಾಲೂಕಿನ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ ಘೋಷಣೆ ಮಾಡಲಾಗಿದೆ.

    ಮೂಡಿಗೆರೆಯಲ್ಲಿ ಗುರುವಾರ ಹಾಗೂ ಶುಕ್ರವಾರ ಭಾರೀ ಮಳೆಯಾಗಿತ್ತು. ಪರಿಣಾಮ ಹೇಮಾವತಿ ಮೈದುಂಬಿ ಹರಿಯುತ್ತಿದೆ. ಇತ್ತ ತಾಲೂಕಿನಾದ್ಯಂತ ಗದ್ದೆ-ತೋಟಗಳು ಜಲಾವೃತವಾಗಿದ್ದು, ಮುಂಜಾಗ್ರತ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ. ಮೂಡಿಗೆರೆ ತಾಲೂಕು ಅಧಿಕಾರಿ ರಜೆ ಘೋಷಣೆ ಮಾಡಿದ್ದಾರೆ. ಮಳೆಯಿಂದ ಮುನ್ನೆಚ್ಛರಿಕೆಯ ಕ್ರಮವಾಗಿ ರಜೆ ನೀಡಲಾಗಿದೆ.

    ಇತ್ತ ಕಾವೇರಿ ಜಲಾನಯನ ಪ್ರದೇಶ ಮಡಿಕೇರಿಯ ಭಾಗಮಂಡಲದಲ್ಲಿ ಭಾರೀ ವರ್ಷಧಾರೆಯಾಗುತ್ತಿದೆ. ಕಳೆದ ವರ್ಷದ ಜಲಪ್ರವಾಹದಿಂದ ಆತಂಕ ಈಗಲೂ ಜನರ ಮನದಲ್ಲಿ ಮನೆ ಮಾಡಿದೆ. ಅದರಲ್ಲೂ ಮಡಿಕೇರಿ – ಮಂಗಳೂರು ಹೆದ್ದಾರಿಯ ಮದೆನಾಡು ಬಳಿ ದುರಸ್ತಿ ಮಾಡಿದ್ದರೂ ಬಿರುಕು ಬಿಟ್ಟಿದೆ. ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಸಂಚರಿಸಲು ವಾಹನ ಸವಾರರು ಹಿಂದೇಟು ಹಾಕುತ್ತಿದ್ದಾರೆ. ಚಿಕ್ಕಮಗಳೂರು ಭಾಗದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಮೂಡಿಗೆರೆ ತಾಲೂಕಿನ ಮುಗ್ರಹಳ್ಳಿ, ಹೊರಟ್ಟಿ, ಕೊಟ್ಟಿಗೆಹಾರ, ಜಾಣಿಗೆ, ಗೋಣಿಬೀಡುವಿನಲ್ಲಿ ಹೊಲ-ಗದ್ದೆ, ಕಾಫಿ ತೋಟಗಳು ಜಲಾವೃತಗೊಂಡಿವೆ.

    ಭಾರೀ ಮಳೆಯಿಂದ ತುಂಗಾ, ಭದ್ರಾ, ಹೇಮಾವತಿ ನದಿಗಳ ರಭಸವೂ ಹೆಚ್ಚಿದೆ. ನಿನ್ನೆ ರಾತ್ರಿಯಿಡೀ ಸುರಿದ ಧಾರಾಕಾರ ಮಳೆಯಿಂದ ಕಾರವಾರ ನಗರದ ಅರಗಾದಲ್ಲಿರುವ ಕದಂಬ ನೌಕಾನೆಲೆ ಭಾಗದ ಹತ್ತು ಎಕರೆಗೂ ಹೆಚ್ಚು ಪ್ರದೇಶಗಳ ಜಲಾವೃತವಾಗಿದೆ. ಇತ್ತ ಬೆಂಗಳೂರಿನಲ್ಲೂ ಇಂದು ಸಂಜೆ ವೇಳೆಗೆ ವರುಣನ ಸಿಂಚನವಾಯ್ತು. ಮುಂದಿನ 4 ದಿನಗಳ ಕಾಲ ಮಳೆ ಆಗುವ ಮುನ್ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ.