Tag: ಶಾಲಾ ಪ್ರವಾಸ

  • ಶಾಲಾ ಪ್ರವಾಸಕ್ಕೆ ಹೋಗುತ್ತಿದ್ದ ಬಸ್‌ಗಳ ಭೀಕರ ಅಪಘಾತ – 15 ವಿದ್ಯಾರ್ಥಿಗಳು ಸಾವು

    ಶಾಲಾ ಪ್ರವಾಸಕ್ಕೆ ಹೋಗುತ್ತಿದ್ದ ಬಸ್‌ಗಳ ಭೀಕರ ಅಪಘಾತ – 15 ವಿದ್ಯಾರ್ಥಿಗಳು ಸಾವು

    ಇಂಫಾಲ: ಶಾಲಾ ಪ್ರವಾಸಕ್ಕೆಂದು (School Trip) ವಿದ್ಯಾರ್ಥಿಗಳನ್ನು (Students) ಕರೆದೊಯ್ಯುತ್ತಿದ್ದ 2 ಬಸ್‌ಗಳು (Bus) ಭೀಕರ ಅಪಘಾತಕ್ಕೀಡಾಗಿರುವ (Accident) ಘಟನೆ ಮಣಿಪುರದ (Manipur) ನೋನಿ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಅನೇಕರಿಗೆ ಗಾಯಗಳಾಗಿವೆ.

    ವಿದ್ಯಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ 2 ಬಸ್‌ಗಳು ಬುಧವಾರ ಬೆಳಗ್ಗೆ ನೋನಿ ಜಿಲ್ಲೆಯ ಬಿಸ್ನುಪುರ್-ಖೌಪುಮ್ ರಸ್ತೆಯಲ್ಲಿ ಅಪಘಾತಕ್ಕೀಡಾಗಿದೆ. ಬಸ್‌ಗಳ ನಿಯಂತ್ರಣ ತಪ್ಪಿ ಭೀಕರ ಅಪಘಾತ ಉಂಟಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಶಬರಿಮಲೆ ಹಾದಿಯಲ್ಲಿ ಈ ಬಾರಿ 23 ಮಂದಿ ಹೃದಯಾಘಾತದಿಂದ ಸಾವು

    ವರದಿಗಳ ಪ್ರಕಾರ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್‌ಗಳು ಯಾರಿಪೋಕ್‌ನ ತಂಬಲ್ನು ಹೈಯರ್ ಸೆಕೆಂಡರಿ ಶಾಲೆಗೆ ಸೇರಿದ್ದಾಗಿವೆ. ಬಸ್‌ಗಳು ಅಧ್ಯಯನ ಪ್ರವಾಸಕ್ಕಾಗಿ ಖೌಪುಮ್ ಕಡೆಗೆ ಸಾಗುತ್ತಿತ್ತು. ಆದರೆ ದಾರಿ ಮಧ್ಯೆ ಅನಿರೀಕ್ಷಿತ ಘಟನೆ ನಡೆದಿದೆ. ಇದನ್ನೂ ಓದಿ: ಕೃಷಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಬೊಲೆರೊ ಪಲ್ಟಿ – 16 ಜನರಿಗೆ ಗಾಯ

    ಗಾಯಗೊಂಡ ವಿದ್ಯಾರ್ಥಿಗಳನ್ನು ಬಿಷ್ಣುಪುರ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದ್ದು, ಪ್ರಥಮ ಚಿಕಿತ್ಸೆ ನೀಡಿ ಬಳಿಕ ಇಂಫಾಲದ ರಾಜ್ ಮೆಡಿಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಮೇಲುಕೋಟೆ ಬೆಟ್ಟದಲ್ಲಿ ಬಿದ್ದ ಮರ – ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿ, ಶಿಕ್ಷಕರಿಗೆ ಗಂಭೀರ ಗಾಯ

    ಮೇಲುಕೋಟೆ ಬೆಟ್ಟದಲ್ಲಿ ಬಿದ್ದ ಮರ – ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿ, ಶಿಕ್ಷಕರಿಗೆ ಗಂಭೀರ ಗಾಯ

    ಮಂಡ್ಯ: ಪ್ರವಾಸಕ್ಕೆಂದು (School Trip) ಬಂದಿದ್ದ ಶಾಲಾ ವಿದ್ಯಾರ್ಥಿಗಳು (Students) ಹಾಗೂ ಶಿಕ್ಷಕರ (Teacher) ಮೇಲೆ ಮರ (Tree) ಬಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಪಾಂಡಪುರ ತಾಲೂಕಿನ ಮೇಲುಕೋಟೆ (Melukote) ಯೋಗನರಸಿಂಹ ಸ್ವಾಮಿ ಬೆಟ್ಟದಲ್ಲಿ ನಡೆದಿದೆ.

    ಧಾರ್ಮಿಕ ಪ್ರವಾಸ ಕೈಗೊಂಡಿದ್ದ ಮೈಸೂರು ಜಿಲ್ಲೆಯ ನಂಜನಗೂಡು ಲಯನ್ಸ್ ಶಾಲೆಯ ವಿದ್ಯಾರ್ಥಿಗಳು ಮೇಲುಕೋಟೆಯ ನರಸಿಂಹಸ್ವಾಮಿ ಬೆಟ್ಟ ಹತ್ತು ವೇಳೆ ಒಣಗಿದ್ದ ಮರವೊಂದು ಇದ್ದಕ್ಕಿದ್ದಂತೆ ಮುರಿದು ಬಿದ್ದಿದೆ. ಈ ವೇಳೆ ಮರದ ಕೊಂಬೆಗಳು ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಮೇಲೆ ಬಿದ್ದಿದೆ. ಇದರಿಂದ ಹಲವರಿಗೆ ಗಂಭೀರ ಗಾಯಗಳಾಗಿವೆ. ಇದನ್ನೂ ಓದಿ: ಬ್ಲಾಕ್ ಮನಿಯನ್ನು ವೈಟ್ ಮಾಡಿತಾ ಚಿಲುಮೆ..?- ಡಿಕೆಶಿ ಹೊಸ ಬಾಂಬ್

    ವಿದ್ಯಾರ್ಥಿಗಳಾದ ನಿಶಾಂತ್, ವರುಣ್, ಯೋಗೇಶ್ ಹಾಗೂ ಶಿಕ್ಷಕ ಕೇಶವರಾವ್‌ಗೆ ಘಟನೆಯಲ್ಲಿ ಗಂಭೀರ ಗಾಯಗಳಾಗಿವೆ. ಮೇಲುಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ಅಂಬುಲೆನ್ಸ್ ಇದ್ದರೂ ಕೂಡಾ ಸಿಬ್ಬಂದಿಯಿಲ್ಲದ ಕಾರಣ ಗಾಯಗೊಂಡ ವಿದ್ಯಾರ್ಥಿಗಳನ್ನು ಹಾಗೂ ಶಿಕ್ಷಕರನ್ನು ಕರೆದೊಯ್ಯಲು ಪರದಾಡುವ ಸ್ಥಿತಿ ನಿರ್ಮಾಣವಾಯಿತು. 1 ಗಂಟೆಯ ಬಳಿಕ ಪಾಂಡವಪುರದಿಂದ ಬಂದ ಅಂಬುಲೆನ್ಸ್ನಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಇದನ್ನೂ ಓದಿ: ವೈಯಕ್ತಿಕ ಟೀಕೆ ಮಾಡುತ್ತಿದ್ರೆ ಚಪ್ಪಲಿಯಲ್ಲಿ ಹೊಡಿತೀನಿ – ಬಿಜೆಪಿ ಸಂಸದರಿಗೆ ಕವಿತಾ ವಾರ್ನ್

    Live Tv
    [brid partner=56869869 player=32851 video=960834 autoplay=true]

  • ಶಾಲಾ ಪ್ರವಾಸಕ್ಕೆಂದು ಟಾಟಾ ಏಸ್‍ನಲ್ಲಿ ಮಕ್ಕಳನ್ನು ಕುರಿಗಳಂತೆ ತುಂಬಿದ ಶಿಕ್ಷಕರು

    ಶಾಲಾ ಪ್ರವಾಸಕ್ಕೆಂದು ಟಾಟಾ ಏಸ್‍ನಲ್ಲಿ ಮಕ್ಕಳನ್ನು ಕುರಿಗಳಂತೆ ತುಂಬಿದ ಶಿಕ್ಷಕರು

    ದಾವಣಗೆರೆ: ಶಾಲಾ ಪ್ರವಾಸಕ್ಕೆಂದು 2 ಟಾಟಾ ಏಸ್‍ನಲ್ಲಿ ಶಿಕ್ಷಕರು ಶಾಲಾ ಮಕ್ಕಳನ್ನು ಕುರಿಗಳಂತೆ ತುಂಬಿದ ಅಮಾನವೀಯ ಘಟನೆ ದಾವಣಗೆರೆಯ ಶ್ರೀ ಸತ್ಯ ಸಾಯಿ ಶಾಲೆಯಲ್ಲಿ ನಡೆದಿದೆ.

    ಶಾಲಾ ಆಡಳಿತ ಮಂಡಳಿ ಶಾಲಾ ಪ್ರವಾಸಕ್ಕೆ 2 ಟಾಟಾಏಸ್ ತರಿಸಿಕೊಂಡಿದ್ದರು. ಶಾಲಾ ಶಿಕ್ಷಕರು ಟಾಟಾ ಏಸ್‍ನಲ್ಲಿ 30 ರಿಂದ 40 ಮಕ್ಕಳನ್ನು ತುಂಬಿದ್ದಾರೆ. ಟಾಟಾ ಏಸ್‍ನಲ್ಲಿ ಮಕ್ಕಳು ಒಬ್ಬರ ಮೇಲೆ ಒಬ್ಬರು ಕುಳಿತು ಪ್ರಯಾಣ ಮಾಡುತ್ತಿದ್ದಾರೆ.

    ದಾವಣಗೆರೆಯ ಅನಗೋಡು ಪಾರ್ಕ್‍ಗೆ ಶಿಕ್ಷಕರು ಪ್ರವಾಸ ಕರೆ ತಂದಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೋಗುತ್ತಿರುವಾಗ ಸಾರ್ವಜನಿಕರು ತಡೆದು ನಿಲ್ಲಿಸಿದ್ದಾರೆ. ಅಪಘಾತ ವಾದರೆ ಯಾರು ಹೊಣೆ ಎಂದು ಸಾರ್ವಜನರಿಕರು ಶಿಕ್ಷಕರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಕಾನೂನು ಉಲ್ಲಂಘನೆ ಮಾಡಿದ ಶಾಲೆಯ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv