Tag: ಶಾಲಾ ವಾಹನ

  • ಬೆಂಗಳೂರು| ಅಗ್ನಿಶಾಮಕದಳ ಕಚೇರಿ ಬಳಿಯೇ ಹೊತ್ತಿ ಉರಿದ ಶಾಲಾ ವಾಹನ – ವ್ಯಕ್ತಿ ಸಜೀವ ದಹನ

    ಬೆಂಗಳೂರು| ಅಗ್ನಿಶಾಮಕದಳ ಕಚೇರಿ ಬಳಿಯೇ ಹೊತ್ತಿ ಉರಿದ ಶಾಲಾ ವಾಹನ – ವ್ಯಕ್ತಿ ಸಜೀವ ದಹನ

    ಬೆಂಗಳೂರು: ಬಾಣಸವಾಡಿ ಅಗ್ನಿಶಾಮಕದಳ ಕಚೇರಿ ಬಳಿಯೇ ಶಾಲಾ ವಾಹನವೊಂದು ಹೊತ್ತಿ ಉರಿದಿದ್ದು, ಅದರೊಳಗಿದ್ದ ವ್ಯಕ್ತಿ ಸಜೀವ ದಹನ ಆಗಿದ್ದಾರೆ.

    OMBR ಲೇಔಟ್‌ನಲ್ಲಿ ರಾತ್ರಿ 10:08 ಕ್ಕೆ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಅಗ್ನಿಶಾಮಕದಳ ವಾಹನ ದೌಡಾಯಿಸಿ ಬೆಂಕಿ‌ ನಂದಿಸಲಾಗಿದೆ. ಬಸ್ಸಿನ ಒಳಗೆ ಒಬ್ಬರು ಸಜೀವ ದಹನವಾಗಿದ್ದಾರೆ ಎಂದು ಬಾಣಸವಾಡಿ ಅಗ್ನಿಶಾಮಕದಳ ಕಚೇರಿ ಮಾಹಿತಿ ನೀಡಿದೆ.

    ಬಸ್‌ನ ಓಳಗೆ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ‌ಯಾಗಿದೆ. ಸುಮಾರು 30 ವರ್ಷದ ಆಸುಪಾಸಿನ ವ್ಯಕ್ತಿ ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ರಾಮಮೂರ್ತಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಅರುಣ್ ಎಂಬವರಿಗೆ ಸೇರಿದ ಖಾಸಗಿ ಶಾಲೆ ಬಸ್ ಇದಾಗಿದೆ. ಘಟನೆಯಲ್ಲಿ ಮೃತ ವ್ಯಕ್ತಿ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಗುರುತು ಇನ್ನೂ ಪತ್ತೆಯಾಗಿಲ್ಲ. ಘಟನೆ ಸಂಬಂಧ ಪೊಲೀಸರು ಯುಡಿಆರ್‌ ದಾಖಲಿಸಿಕೊಂಡಿದ್ದಾರೆ. ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

    ಖಾಸಗಿ ಬಸ್‌ನಲ್ಲಿ ಚಾಪೆ, ದಿಂಬು ತಂದು ವ್ಯಕ್ತಿ ಮಲಗಿದ್ದ ಎಂಬುದು ಪರಿಶೀಲನೆಯಿಂದ ಗೊತ್ತಾಗಿದೆ. ಸುಮಾರು ಮೂರು ತಿಂಗಳಿನಿಂದ ಶಾಲಾ ಬಸ್‌ ಕೆಟ್ಟು ನಿಂತಿತ್ತು. 14 ವರ್ಷದ ಹಳೆ ಬಸ್‌ಗೆ ಎಫ್‌ಸಿ, ಇನ್ಯೂರೆನ್ಸ್ ಮುಗಿದಿತ್ತು. ಹೀಗಾಗಿ, OMBR ಲೇಔಟ್ ರಸ್ತೆಯಲ್ಲಿ ಮಾಲೀಕ ಅರುಣ್ ಬಸ್ ನಿಲ್ಲಿಸಿದ್ದರು. ನಿನ್ನೆ ಸಂಜೆ ಕೂಡ ಬಸ್ ಬಳಿ ಬಂದು ನೋಡಿಕೊಂಡು ಹೋಗಿದ್ದರು.

    ಬಸ್‌ಗೆ ಸರಿಯಾಗಿ ಡೋರ್ ಲಾಕ್ ಆಗಿರಲಿಲ್ಲ. ಹೀಗಾಗಿ, ಬಸ್‌ನ ಒಳಗೆ ಹೋಗಿ ವ್ಯಕ್ತಿ ಧೂಮಪಾನ ಮಾಡಿ ಮಲಗಿದ್ದ. ಬಸ್‌ನಲ್ಲಿ ಕೆಲ ಬೀಡಿ ತುಂಡುಗಳು ಪತ್ತೆಯಾಗಿದೆ ಎನ್ನಲಾಗಿದೆ. ಬೀಡಿ ಸೇದಿದ ತುಂಡಿನಿಂದ ಬಸ್‌ನಲ್ಲಿ ಬೆಂಕಿ ಹೊತ್ತಿಕೊಂಡಿದ್ಯಾ ಅಥವಾ ಬೇರೆ ಯಾರಾದರೂ ಬಸ್‌ಗೆ ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರಾ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

  • ಶಾಲಾ ವಾಹನಗಳಲ್ಲಿ ನಿಮ್ಮ ಮಕ್ಕಳನ್ನು ಕಳಿಸೋ ಮುನ್ನ ಎಚ್ಚರ!

    ಶಾಲಾ ವಾಹನಗಳಲ್ಲಿ ನಿಮ್ಮ ಮಕ್ಕಳನ್ನು ಕಳಿಸೋ ಮುನ್ನ ಎಚ್ಚರ!

    ಬೆಂಗಳೂರು: ಶಾಲಾ ವಾಹನಗಳಲ್ಲಿ ನಿಮ್ಮ ಮಕ್ಕಳನ್ನು ಕಳಿಸುವ ಮುನ್ನ ಎಚ್ಚರವಿರಲಿ. ಯಾಕಂದ್ರೆ ಬೆಳ್ಳಂಬೆಳಿಗ್ಗೆ ಕಂಠಪೂರ್ತಿ ಕುಡಿದು ಸ್ಕೂಲ್ ವ್ಯಾನ್‌ಗಳನ್ನು ಓಡಿಸುತ್ತಿದ್ದಾರೆ. ಇಂತಹ ಘಟನೆಯೊಂದು ಆರ್‌ಆರ್ ನಗರ (RR Nagar) ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.ಇದನ್ನೂ ಓದಿ: ಲುಫ್ತಾನ್ಸಾ ಏರ್‌ಲೈನ್ಸ್‌ನ ಡ್ರೀಮ್‌ಲೈನರ್‌ ವಿಮಾನಕ್ಕೆ ಬಾಂಬ್‌ ಬೆದರಿಕೆ – ಅರ್ಧದಲ್ಲೇ ಫ್ರಾಂಕ್‌ಫರ್ಟ್‌ಗೆ ವಾಪಸ್‌

    ಹೌದು, ಶಾಲೆಗಳು ಶುರುವಾದ ಹಿನ್ನೆಲೆ ಸಂಚಾರಿ ಪೊಲೀಸರು ಶಾಲಾ ವಾಹನಗಳ ಮೇಲೆ ಕಣ್ಣಿಟ್ಟಿದ್ದು, ‌ಡ್ರೈವರ್‌ಗಳ ವಿರುದ್ಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಬೆಳ್ಳಂಬೆಳಿಗ್ಗೆ ಸಂಚಾರಿ ಪೊಲೀಸರು ಶಾಲಾ ವಾಹನ ಚಾಲಕನೊಬ್ಬನ ಡಿಡಿ ಚೆಕ್ ಮಾಡಿದ್ದು, ರೀಡಿಂಗ್ ಕಂಡು ಪೊಲೀಸರೇ ಶಾಕ್ ಆಗಿದ್ದಾರೆ.

    ಕಂಠಪೂರ್ತಿ ಕುಡಿದು ವಾಹನ ಚಲಾಯಿಸುತ್ತಿರುವುದು ತಿಳಿದುಬಂದಿದ್ದು, ಇದೇ ಅವಸ್ಥೆಯಲ್ಲಿಯೇ ಹಲವು ಕಡೆ ವಾಹನ ಚಾಲನೆ ಮಾಡಿಕೊಂಡು ಬಂದಿರುವುದಾಗಿ ಪತ್ತೆಯಾಗಿದೆ. ಒಟ್ಟು 4,559 ಶಾಲಾ ವಾಹನಗಳ ಪರಿಶೀಲನೆ ಮಾಡಲಾಗಿದ್ದು, 59 ಚಾಲಕರು ಕಂಠಪೂರ್ತಿ ಕುಡಿದು ವಾಹನ ಚಲಾಯಿಸಿರುವುದು ಬೆಳಕಿಗೆ ಬಂದಿದೆ. ಸದ್ಯ 59 ವಾಹನ ಚಾಲಕರ ಲೈಸೆನ್ಸ್ ಅಮಾನತು ಮಾಡಲಾಗಿದ್ದು, ಪೊಲೀಸರು ಬೇಜವಾಬ್ದಾರಿಯಿಂದಿದ್ದ ಶಾಲೆಗಳಿಗೂ ಎಚ್ಚರಿಕೆ ನೀಡಿದ್ದಾರೆ.ಇದನ್ನೂ ಓದಿ: ನಿಮ್ಮಪ್ಪನಿಗೆ ಸಿಎಂ ಕುರ್ಚಿ ಬಿಟ್ಟುಕೊಡಲು ಹೇಳಿ: ಯತೀಂದ್ರ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ

  • Nelamangala | 2 ಸ್ಕೂಲ್ ಬಸ್‌ಗಳ ನಡುವೆ ಅಪಘಾತ – ಮಕ್ಕಳಿಗೆ ಸಣ್ಣಪುಟ್ಟ ಗಾಯ

    Nelamangala | 2 ಸ್ಕೂಲ್ ಬಸ್‌ಗಳ ನಡುವೆ ಅಪಘಾತ – ಮಕ್ಕಳಿಗೆ ಸಣ್ಣಪುಟ್ಟ ಗಾಯ

    ನೆಲಮಂಗಲ: ವಿವಿಧ ಗ್ರಾಮಗಳಿಂದ ಪುಟಾಣಿ ಮಕ್ಕಳನ್ನ ಪಿಕ್ ಮಾಡಿ ಶಾಲೆಗೆ ಬರುವ ಸಂರ‍್ಭದಲ್ಲಿ ಶಾಲಾ ಬಸ್ (School Bus) ಚಾಲಕನ ನಿರ್ಲಕ್ಷ್ಯದಿಂದ ಒಂದು ಶಾಲಾ ವಾಹನ ಪಲ್ಟಿಯಾದ ಪರಿಣಾಮ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಬೆಂಗಳೂರು (Bengaluru) ಹೊರವಲಯ ನೆಲಮಂಗಲ (Nelamangala) ಉಪವಿಭಾಗದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಮಾದಾವರದ ನೈಸ್ ರಸ್ತೆಯ ಪಿಕಾಕ್ ಬಡಾವಣೆಯಲ್ಲಿ ಅಪಘಾತ ನಡೆದಿದೆ. ಘಟನೆಯಲ್ಲಿ ಬೆಂಗಳೂರು ಉತ್ತರ ತಾಲೂಕಿನ ಡೆಲ್ಲಿ ಪಬ್ಲಿಕ್ ಶಾಲೆಯ ವಾಹನ ಪಲ್ಟಿಯಾಗಿದೆ. 30ಕ್ಕೂ ಹೆಚ್ಚಿನ ಮಕ್ಕಳನ್ನ ಶಾಲೆಗೆ ಕರೆತರಲಾಗುತ್ತಿದ್ದು, ಚಾಲಕರ ನಡುವೆ ಪೈಪೋಟಿ ಉಂಟಾಗಿ ನಿರ್ಲಕ್ಷ್ಯದಿಂದ ಚಾಲನೆ ಮಾಡಿದ ಪರಿಣಾಮ ಬಸ್ ಪಲ್ಟಿಯಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮುಂದಿನ 4 ದಿನ ಮಳೆ ಸಾಧ್ಯತೆ – ಇಂದು ರಾಜ್ಯಾದ್ಯಂತ ಯೆಲ್ಲೋ ಅಲರ್ಟ್

    ಘಟನೆಯಲ್ಲಿ ಶಾಲಾ ಪುಟಾಣಿ ಮಕ್ಕಳು ಪ್ರಾಣಪಾಯದಿಂದ ಪಾರಾಗಿದ್ದು, ಬಸ್ ಪಲ್ಟಿಯಾದ ಹಿನ್ನೆಲೆ ಕೆಲ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಮಕ್ಕಳ ಪೋಷಕರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಆತಂಕ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: ಟ್ರಕ್ಕಿಂಗ್ ವೇಳೆ ಕಾಡಿನಲ್ಲಿ ನಾಪತ್ತೆಯಾದ ಚಿತ್ರದುರ್ಗದ 10 ಮೆಡಿಕಲ್ ವಿದ್ಯಾರ್ಥಿಗಳು – 6 ಗಂಟೆ ಬಳಿಕ ಪತ್ತೆ

  • ಪಬ್ಲಿಕ್ ಟಿವಿಯ `ಬೆಳಕು’ ಇಂಪ್ಯಾಕ್ಟ್: ಜಂಗ್ಲಿ ಗ್ರಾಮದ ವಿದ್ಯಾರ್ಥಿಗಳಿಗೆ ಸ್ವಂತ ಹಣದಲ್ಲಿ ಬಸ್ ಕೊಡಿಸಿದ ರೆಡ್ಡಿ

    ಪಬ್ಲಿಕ್ ಟಿವಿಯ `ಬೆಳಕು’ ಇಂಪ್ಯಾಕ್ಟ್: ಜಂಗ್ಲಿ ಗ್ರಾಮದ ವಿದ್ಯಾರ್ಥಿಗಳಿಗೆ ಸ್ವಂತ ಹಣದಲ್ಲಿ ಬಸ್ ಕೊಡಿಸಿದ ರೆಡ್ಡಿ

    ಕೊಪ್ಪಳ: ರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಅಂಜನಾದ್ರಿ ಬೆಟ್ಟದ (Anjanadri Betta) ನೆರಳಿನಲ್ಲೇ ಇದ್ದ ಗ್ರಾಮವದು. ಆದರೂ, ಸಾರಿಗೆ ಸೌಲಭ್ಯದ ಕೊರತೆಯಿಂದ ಗ್ರಾಮದ ನೂರಾರು ವಿದ್ಯಾರ್ಥಿಗಳು ಹೈಸ್ಕೂಲ್ ಶಿಕ್ಷಣಕ್ಕೂ 5 ಕಿ.ಮೀ ನಡೆಯಬೇಕಿತ್ತು. ಸಾರಿಗೆ ಸೌಲಭ್ಯದ ಕೊರತೆಯಿಂದ ಹತ್ತಾರು ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದರು. ಇದೀಗ ಈ ವಿದ್ಯಾರ್ಥಿಗಳಿಗೆ ಆಶಾಕಿರಣ ಮೂಡಿದ್ದು, ಶಾಸಕ ಜನಾರ್ದನ ರೆಡ್ಡಿ ಹೊಸ ಬಸ್ ಖರೀದಿಸಿ ಕೊಟ್ಟಿದ್ದಾರೆ. ಇದು `ಪಬ್ಲಿಕ್ ಟಿವಿ’ಯ ಬೆಳಕು (PUBLiC TV Belaku Impact) ಕಾರ್ಯಕ್ರಮದ ಬಿಗ್ ಇಂಪ್ಯಾಕ್ಟ್ ಆಗಿದೆ.

    ಹೌದು. ಜಿಲ್ಲೆಯ ಗಂಗಾವತಿ ತಾಲೂಕಿನ ಜಂಗ್ಲಿ ಗ್ರಾಮದ ಜನರಿಗೆ ಸಾರಿಗೆ ಸೌಲಭ್ಯದ ಕೊರತೆಯಿತ್ತು. ಈ ಕುರಿತು `ಪಬ್ಲಿಕ್ ಟಿವಿ’ಯ ಬೆಳಕು ಕಾರ್ಯಕ್ರಮದಲ್ಲಿ ಪ್ರಸಾರವಾಗಿತ್ತು. ಈ ವರದಿಗೆ ಓಗೊಟ್ಟ ಶಾಸಕ ಜನಾರ್ದನ ರೆಡ್ಡಿ, ಹೊಸ ಬಸ್ ಖರೀದಿಸಿ ಕೊಟ್ಟಿದ್ದಾರೆ. ಶಾಸಕ ಜನಾರ್ದನ ರೆಡ್ಡಿಯವರ (Janardhana Reddy) ಪತ್ನಿ ಅರುಣಾ ಲಕ್ಷ್ಮೀ ಶಾಲಾ ವಾಹನವನ್ನು ಗ್ರಾಮಸ್ಥರಿಗೆ ಹಸ್ತಾಂತರಿಸಿದ್ದು, ಹೊಸ ಶಾಲಾ ವಾಹನವನ್ನು ಖುಷಿಯಿಂದ ಪೂಜೆ ಮಾಡಿ ಗ್ರಾಮಸ್ಥರು ಬರಮಾಡಿಕೊಂಡಿದ್ದಾರೆ. ಜೊತೆಗೆ ಶಾಲಾ ವಾಹನವನ್ನು ಕಂಡು ಮಕ್ಕಳಲ್ಲಿ ಸಂತೋಷ ಮನೆಮಾಡಿದೆ.ಇದನ್ನೂ ಓದಿ:ದೇವೇಗೌಡರ ತುರ್ತು ಬುಲಾವ್‌ – ಚನ್ನಪಟ್ಟಣದಲ್ಲಿ ಅಖಾಡಕ್ಕಿಳಿಯುತ್ತಾರಾ ನಿಖಿಲ್‌ ಕುಮಾರಸ್ವಾಮಿ?

    ಜಂಗ್ಲಿ ಮತ್ತು ರಂಗಾಪುರ ಗ್ರಾಮದ ವಿದ್ಯಾರ್ಥಿಗಳು ಈ ಕಾಲದಲ್ಲೂ ಹೈಸ್ಕೂಲ್ ಶಿಕ್ಷಣ ಪಡೆಯಲು ಬರೋಬ್ಬರಿ 5 ಕಿ.ಮೀ. ನಡೆದುಕೊಂಡು ಹೋಗಬೇಕಿದೆ. ಪ್ರತಿದಿನ ನೂರಾರು ವಿದ್ಯಾರ್ಥಿಗಳು ಬರೋಬ್ಬರಿ 5 ಕಿ.ಮೀ. ನಡೆದು ನಂತರ ಬಸ್ ಏರಿ ಶಾಲೆ ತಲುಪಬೇಕಿತ್ತು. ಇದರಿಂದ ಈ ವಿದ್ಯಾರ್ಥಿಗಳು ನಿಗದಿತ ಸಮಯಕ್ಕೆ ಶಾಲೆ- ಕಾಲೇಜ್ ತಲುಪಲು ಸಾಧ್ಯವಾಗುತ್ತಿರಲಿಲ್ಲ. ನಿಗದಿತ ಸಮಯಕ್ಕೆ ಶಾಲೆಗೆ ತಲುಪದ ಕಾರಣಕ್ಕೆ ಶಿಕ್ಷಣದಿಂದ ವಂಚಿತರಾಗುತ್ತಿದ್ದರು.

    ಇಡೀ ರಾಜ್ಯ ಮತ್ತು ರಾಷ್ಟ್ರ ರಾಜಕಾರಣದ ಪ್ರಚಾರ ವಸ್ತುವಾಗಿರುವ ಅಂಜನಾದ್ರಿ ಸಮೀಪದಲ್ಲಿ ಇಂತಹ ಅವ್ಯವಸ್ಥೆಯಿರುವ ಕುರಿತು ಪಬ್ಲಿಕ್ ಟಿವಿ ಬೆಳಕು ಕಾರ್ಯಕ್ರಮದ ವೀಕ್ಷಕರ ಮುಂದೆ ಇಟ್ಟಿತ್ತು. ವರದಿ ನೋಡಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ತಮ್ಮ ಸ್ವಂತ ಹಣದಲ್ಲಿ ಈ ಗ್ರಾಮಕ್ಕೆ ಶಾಲಾ ವಾಹನ ನೀಡಿದ್ದು, ಶಾಲಾ ವಾಹನವನ್ನು ಅರುಣಾ ಲಕ್ಷ್ಮೀ ಜಂಗ್ಲಿ, ರಂಗಪುರ, ಅಂಜನಳ್ಳಿ ಗ್ರಾಮಸ್ಥರಿಗೆ ಹಸ್ತಾಂತರಿಸಿದ್ದಾರೆ.

    ಈ ಶಾಲಾ ವಾಹನದಿಂದ ಸುಮಾರು 60ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಗಂಗಾವತಿ ಮತ್ತು ಆನೆಗೊಂದಿ ಗ್ರಾಮದ ಶಾಲೆ-ಕಾಲೇಜಿಗೆ ತೆರಳುವ ಪ್ರಾಥಮಿಕ ಶಾಲೆಯಿಂದ ಪದವಿ ವಿದ್ಯಾರ್ಥಿಗಳಿಗೆ ವಾಹನ ಅನುಕೂಲವಾಗಲಿದೆ. ಸಾರಿಗೆ ಸೌಲಭ್ಯ ಇಲ್ಲದ್ದರಿಂದ ಸಾಕಷ್ಟು ಪಾಲಕರು ತಮ್ಮ ಹೆಣ್ಣು ಮಕ್ಕಳನ್ನು ಶಾಲೆಗೆ ಕಳುಹಿಸುವುದನ್ನು ಬಿಡಿಸಿದ್ದರು. ಇನ್ನು ಗರ್ಭಿಣಿಯರು, ಬಾಣಂತಿಯರು ಹಾಗೂ ಕಾಯಿಲೆಗೆ ತುತ್ತಾದ ರೋಗಿಗಳು ತಾಲೂಕು ಕೇಂದ್ರ ತಲುಪಲು ಸಂಕಷ್ಟ ಪಡಬೇಕಿತ್ತು. ಆದರೆ

    ಗ್ರಾಮಕ್ಕೆ ಸಾರಿಗೆ ಸೌಲಭ್ಯ ಪಡೆಯಲು ಈ ಗ್ರಾಮಸ್ಥರು ಎಲ್ಲ ರೀತಿಯಲ್ಲೂ ಪ್ರಯತ್ನ ಮಾಡಿದ್ದರು. ಮತದಾನ ಬಹಿಷ್ಕಾರ, ರಸ್ತೆ ತಡೆ, ತಾಲೂಕು ಕೇಂದ್ರದಲ್ಲಿ ಹಂತ-ಹಂತವಾಗಿ ಹೋರಾಟ ಮಾಡಿದ್ದರೂ, ಪ್ರಯೋಜನ ಆಗಿರಲಿಲ್ಲ. ಪಬ್ಲಿಕ್ ಟಿವಿ ಬೆಳಕು ಕಾರ್ಯಕ್ರಮದಲ್ಲಿ ಪ್ರಸಾರವಾದ ಬೆನ್ನಲ್ಲೇ ಇದೀಗ ಜಂಗ್ಲಿ ಗ್ರಾಮದ ಜನರಿಗೆ ಹಾಗೂ ಶಾಲಾ ಮಕ್ಕಳಿಗೆ ಸಾರಿಗೆ ಸೌಲಭ್ಯ ಒದಗಿದ್ದು, ಬಹು ವರ್ಷದ ಸಮಸ್ಯೆಗೆ ಪರಿಹಾರ ಸಿಕ್ಕಿದೆ.ಇದನ್ನೂ ಓದಿ:ಅಜ್ಜಿಯ ನೆನೆದು ಭಾವನಾತ್ಮಕ ಪತ್ರ ಬರೆದ ಸುದೀಪ್ ಪುತ್ರಿ

  • ಶಾಲಾ ವಾಹನ, ಬಸ್ ನಡುವೆ ಭೀಕರ ಅಪಘಾತ- ಆರು ವಿದ್ಯಾರ್ಥಿಗಳ ದುರ್ಮರಣ

    ಶಾಲಾ ವಾಹನ, ಬಸ್ ನಡುವೆ ಭೀಕರ ಅಪಘಾತ- ಆರು ವಿದ್ಯಾರ್ಥಿಗಳ ದುರ್ಮರಣ

    ಲಕ್ನೋ: ಶಾಲಾ ವ್ಯಾನ್ (School Van) ಹಾಗೂ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ (Accident) ಆರು ವಿದ್ಯಾರ್ಥಿಗಳು (students) ಹಾಗೂ ವ್ಯಾನ್ ಚಾಲಕ ಮೃತಪಟ್ಟ ಘಟನೆ ಉತ್ತರ ಪ್ರದೇಶದ (Uttar Pradesh) ಬುಡೌನ್‍ನಲ್ಲಿ ನಡೆದಿದೆ.

    ಖಾಸಗಿ ಶಾಲೆಯ ವಾಹನ ವಿದ್ಯಾರ್ಥಿಗಳನ್ನು ಇಂದು ಬೆಳಗ್ಗೆ ಶಾಲೆಗೆ ಕರೆದೊಯ್ಯುವ ವೇಳೆ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸುಮಾರು 16 ವಿದ್ಯಾರ್ಥಿಗಳು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಚಾಲಕ ಹಾಗೂ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ನಾಲ್ಕು ಜನ ವಿದ್ಯಾರ್ಥಿಗಳು ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ ಎಂದು ಪೊಲಿಸರು ತಿಳಿಸಿದ್ದಾರೆ. ಇದನ್ನೂ ಓದಿ: ರಾಜಕೀಯ ಪಕ್ಷಗಳ ಹಣದ ಬಗ್ಗೆ ತಿಳಿದುಕೊಳ್ಳುವ ಹಕ್ಕು ಮತದಾರರಿಗೆ ಇಲ್ಲ- ಸುಪ್ರೀಂಗೆ ಕೇಂದ್ರ ಸರ್ಕಾರದ ಹೇಳಿಕೆ

    ಆಸ್ಪತ್ರೆಯ ಆವರಣದಲ್ಲಿ ಮೃತ ವಿದ್ಯಾರ್ಥಿಗಳ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಗಾಯಗೊಂಡವರ ಪಾಲಕರು ತಮ್ಮ ಮಕ್ಕಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಅಲ್ಲದೇ ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

    ಸ್ಥಳಕ್ಕೆ ಜಿಲ್ಲಾಧಿಕಾರಿ ಮನೋಜ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅವರು ಆಸ್ಪತ್ರೆಯ ವೈದ್ಯರಿಗೆ ಸೂಚಿಸಿದ್ದಾರೆ. ಘಟನೆ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ. ಇದನ್ನೂ ಓದಿ: Kerala Bomb Blast: ಅತ್ತೆ ಕುಳಿತಿದ್ದ ಜಾಗ ತಪ್ಪಿಸಿ ಬಾಂಬ್ ಇಟ್ಟಿದ್ದೆ: ಆರೋಪಿ ಬಾಯ್ಬಿಟ್ಟ ಸತ್ಯವೇನು?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶಾಲಾ ವಾಹನ ನಿಲ್ಲಿಸಿ, ಗನ್ ಝಳಪಿಸಿ ರೀಲ್ಸ್ ಮಾಡಿದ ಪುಂಡರು!

    ಶಾಲಾ ವಾಹನ ನಿಲ್ಲಿಸಿ, ಗನ್ ಝಳಪಿಸಿ ರೀಲ್ಸ್ ಮಾಡಿದ ಪುಂಡರು!

    ಪಾಟ್ನಾ: ಪುಟ್ಟ ಮಕ್ಕಳಿದ್ದ ಶಾಲಾ ವಾಹನವನ್ನು ಕಿಡಿಗೇಡಿಗಳ ಗುಂಪೊಂದು ಏಕಾಏಕಿ ನಿಲ್ಲಿಸಿ, ಗನ್ ಝಳಪಿಸಿ ವೀಡಿಯೋ ಮಾಡಿದ ಪ್ರಸಂಗವೊಂದು ಬಿಹಾರದಲ್ಲಿ (Bihar) ನಡೆದಿದೆ.

    ಸದ್ಯ ಇದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಹರಿದಾಡುತ್ತಿದೆ. ಬಿಹಾರದ ಮುಜಾಫರ್ ಪುರ್ ಜಿಲ್ಲೆಯಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಶಾಲಾ ವಾಹನವನ್ನು ಬೈಕ್ ಸವಾರರ ಗುಂಪು ತಡೆದಿದೆ. ಬಳಿಕ ಆ ವಾಹನದ ಮುಂದೆ ಗನ್ ಝಳಪಿಸಿ ವೀಡಿಯೋ ಮಾಡಿಕೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಘಟನೆಯ ವೀಡಿಯೋಗಳನ್ನು ಗುರುವಾರ ಸಾಮಾಜಿಕ ಮಾಧ್ಯಮದಲ್ಲಿ ಅಪ್‍ಲೋಡ್ ಮಾಡಲಾಗಿದ್ದು, ಬಳಿಕ ಘಟನೆ ಬೆಳಕಿಗೆ ಬಂದಿದೆ. ವಿಷಯ ತಿಳಿದು ಮುಜಾಫರ್ ಪುರ್ ಪೊಲೀಸರು ತನಿಖೆ ಆರಂಭಿಸಿದ್ದಾರೆ. ವೀಡಿಯೋಗಳು ನಿಜವೆಂದು ಕಂಡುಬಂದರೆ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಡಿಎಸ್ಪಿ ಅಭಿಷೇಕ್ ಆನಂದ್ ತಿಳಿಸಿದ್ದಾರೆ. ಇದನ್ನೂ ಓದಿ: ಆತ್ಮಹತ್ಯೆಗೆ ಶರಣಾದ ಮಗಳ ಬಗ್ಗೆ ಭಾವುಕ ಪತ್ರ ಬರೆದ ನಟ ವಿಜಯ್

    ಜಿಲ್ಲೆಯ ಮನಿಯಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೊದಲ ವೀಡಿಯೊದಲ್ಲಿ, ಬೈಕ್ ಸವಾರರು ಅಪ್ರಾಪ್ತ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಶಾಲಾ ವಾಹನವನ್ನು ನಿಲ್ಲಿಸಿ ಅವರ ಮುಂದೆ ಬಂದೂಕುಗಳನ್ನು ಬೀಸುತ್ತಿರುವುದು ಕಂಡುಬಂದಿದೆ. ಇನ್ನೊಂದು ವೀಡಿಯೋದಲ್ಲಿ ಬೈಕ್ ಸವಾರರು ನಿರ್ಜನ ಸ್ಥಳದಲ್ಲಿ ಪಾರ್ಟಿ ಮಾಡುತ್ತಿದ್ದು, ಅಲ್ಲಿಯೂ ಆಯುಧಗಳನ್ನು ಝಳಪಿಸುತ್ತಿರುವುದು ಕಂಡುಬಂದಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಪ್ರತ್ಯೇಕ ಶಾಲಾ ವಾಹನ ಅಪಘಾತ – ಓರ್ವ ಮಹಿಳೆ ಸಾವು

    ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಪ್ರತ್ಯೇಕ ಶಾಲಾ ವಾಹನ ಅಪಘಾತ – ಓರ್ವ ಮಹಿಳೆ ಸಾವು

    ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಬನವಾಸಿ (Banavasi) ಮತ್ತು ಯಲ್ಲಾಪುರ (Yallapura) ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ಅಜಾಗರೂಕತೆಯಿಂದ ಶಾಲಾ ವಾಹನ ಅಪಘಾತಕ್ಕೀಡಾಗಿದ್ದು, ವೃದ್ಧೆಯೊಬ್ಬರು ಸಾವಪ್ಪಿದ್ದಾರೆ.

    ಬನವಾಸಿ ಹೆದ್ದಾರಿಯಲ್ಲಿ ಶಾಲಾ ಬಸ್ ಪಲ್ಟಿ – ಮಹಿಳೆ ಸಾವು
    ಪ್ರವಾಸಕ್ಕೆ ತೆರಳಿದ್ದ ಶಾಲಾ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ವೃದ್ಧೆಯೊಬ್ಬರು ಮೃತಪಟ್ಟಿದ್ದು, 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಮತ್ತು 7 ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಅಪಘಾತ ಶಿರಸಿ ತಾಲೂಕಿನ ಬನವಾಸಿ ವ್ಯಾಪ್ತಿಯ ಬುಗುಡಿಕೊಪ್ಪದ ಶಿರಸಿ-ಹಾವೇರಿ ರಾಷ್ಟ್ರೀಯ ಹೆದ್ದಾರಿ 766E ರಲ್ಲಿ ಈ ಘಟನೆ ನಡೆದಿದೆ.

    ದುರಂತದಲ್ಲಿ ಕಸ್ತೂರಮ್ಮ (60) ಅವರು ಸಾವನ್ನಪ್ಪಿದ್ದು, ಗಾಯಾಳುಗಳನ್ನು ಬನವಾಸಿಯ ಪ್ರಾಥಮಿಕ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಶಿರಸಿಗೆ ರವಾನೆ ಮಾಡಲಾಗಿದೆ. ರಾಣಿ ಬೆನ್ನೂರಿನ ಪರಿಣಿತಿ ವಿದ್ಯಾ ಮಂದಿರದ ಶಾಲೆಯವರು, ರಾಣಿ ಬೆನ್ನೂರಿನ ಸಿದ್ಧಾರೂಢ ನಗರದಿಂದ ಶಿರಸಿಯತ್ತ ಮಕ್ಕಳನ್ನು ಪ್ರವಾಸಕ್ಕೆ ಕರೆತರುತ್ತಿದ್ದರು. ಈ ವೇಳೆ ಚಾಲಕನ ಅತಿವೇಗದ ಚಾಲನೆಯಿಂದಲೇ ಘಟನೆ ಸಂಭವಿಸಿದ್ದು, ಇದೀಗ ಈ ಸಂಬಂಧ ಬನವಾಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಲೋಕಾರ್ಪಣೆ

    ಮತ್ತೊಂದೆಡೆ ಯಲ್ಲಾಪುರದ ರಾಷ್ಟ್ರೀಯ ಹೆದ್ದಾರಿ 63ರ ಅರೆಬೈಲು ಘಟ್ಟದಲ್ಲಿ ಕೆಟ್ಟು ನಿಂತಿದ್ದ ಟ್ಯಾಂಕರ್‍ಗೆ ಶಾಲಾ ವಾಹ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸೇರಿದಂತೆ ಸುಮಾರು 15 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಗುಜರಾತ್ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ- ಟಿಕೆಟ್ ನಿರಾಕರಿಸಿದ್ದಕ್ಕೆ ಆಪ್ ಸೇರಿದ ಶಾಸಕ

    ಹುಬ್ಬಳ್ಳಿಯ ಸೈಂಟ್ ಅಂಥೋನಿ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಹುಬ್ಬಳಿಯಿಂದ ಅಂಕೋಲಾ ಮಾರ್ಗವಾಗಿ ಸುಂಕಸಾಳದತ್ತ ಪ್ರವಾಸಕ್ಕೆ ತೆರಳುತ್ತಿದ್ದರು. ಈ ವೇಳೆ ಘಟ್ಟದಲ್ಲಿ ಓವರ್ ಟೇಕ್ ಮಾಡಲು ಹೋಗಿ ಕೆಟ್ಟು ನಿಂತಿದ್ದ ಟ್ಯಾಂಕರ್‌ಗೆ ಡಿಕ್ಕಿಹೊಡೆದಿದೆ. ಇದರ ಪರಿಣಾಮ ಬಸ್ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆ ಸಂಬಂಧ ಯಲ್ಲಾಪುರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಸಂಚಾರಿ ನಿಯಮ ಉಲ್ಲಂಘನೆ – ಖಾಸಗಿ ಶಾಲಾ ವಾಹನಗಳಿಗೆ 45 ಸಾವಿರ ರೂ. ದಂಡ

    ಸಂಚಾರಿ ನಿಯಮ ಉಲ್ಲಂಘನೆ – ಖಾಸಗಿ ಶಾಲಾ ವಾಹನಗಳಿಗೆ 45 ಸಾವಿರ ರೂ. ದಂಡ

    ಬೆಳಗಾವಿ: ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಂಚಾರ ನಿಯಮ ಉಲ್ಲಂಘಿಸಿ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಖಾಸಗಿ ಶಿಕ್ಷಣ ಸಂಸ್ಥೆಗಳ 85 ವಾಹನಗಳ ವಿರುದ್ಧ ಜಿಲ್ಲಾ ಪೊಲೀಸರು 129 ಕೇಸ್ ದಾಖಲಿಸಿದ್ದಾರೆ.

    ಬೆಳಗಾವಿ ಜಿಲ್ಲೆಯ ನಿಪ್ಪಾಣಿ, ಮೂಡಲಗಿ ತಾಲೂಕು ಸೇರಿದ್ದಂತೆ ಇತರ ಕಡೆ ಕಾರ್ಯಾಚರಣೆ ನಡೆಸಿದ ಜಿಲ್ಲಾ ಪೊಲೀಸರು ಖಾಸಗಿ ವಾಹನಗಳಲ್ಲಿ ಹೆಚ್ಚುವರಿ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ 85 ವಾಹನಗಳ ವಿರುದ್ಧ 129 ಕೇಸ್ ದಾಖಲಿಸಿ 45,800 ರೂ.ದಂಡ ವಿಧಿಸಿದ್ದಾರೆ. ಇದನ್ನೂ ಓದಿ: ದಲಿತ ಬಾಲಕಿಯರು ಬಡಿಸಿದ ಊಟವನ್ನು ಬಿಸಾಡಿ ಎಂದ ಅಡುಗೆಯವ – ಬಂಧನ

    ಶಾಲಾ ವಾಹನಗಳ ಚಾಲಕರು ಸಂಚಾರಿ ನಿಯಮ ಉಲ್ಲಂಘಿಸಿ ಮಕ್ಕಳನ್ನು ಸೀಟ್‍ಗಿಂತ ಹೆಚ್ಚಾಗಿ ಕರೆದುಕೊಂಡು ಹೋದರೆ ಅಂತಹ ವಾಹನಗಳನ್ನು ಮುಂದಿನ ದಿನಗಳಲ್ಲಿ ಜಪ್ತಿ ಮಾಡಲಾಗುವುದು ಎಂದು ಎಸ್‍ಪಿ ಡಾ.ಸಂಜೀವ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಮಂಗಳೂರಿನ ಜನರ ಪ್ರೀತಿ, ಅಕ್ಕರೆಗೆ ವಿನಮ್ರನಾಗಿರುವೆ – ಕನ್ನಡದಲ್ಲೇ ಟ್ವೀಟ್ ಮಾಡಿದ ಮೋದಿ

    Live Tv
    [brid partner=56869869 player=32851 video=960834 autoplay=true]

  • ಶಾಲಾ ವಾಹನ, ಬೈಕ್ ನಡುವೆ ಅಪಘಾತ – ಸವಾರ ಸಾವು

    ಶಾಲಾ ವಾಹನ, ಬೈಕ್ ನಡುವೆ ಅಪಘಾತ – ಸವಾರ ಸಾವು

    ಮಡಿಕೇರಿ: ಶಾಲಾ ವಾಹನ ಮತ್ತು ಬೈಕ್ ನಡುವಿನ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಚೆಟ್ಟಳ್ಳಿ ಸಮೀಪ ಕತ್ತಲೆಕಾಡು ತಿರುವಿನಲ್ಲಿ ನಡೆದಿದೆ.

    ಇಂದು ಬೆಳಗ್ಗೆ ಕೂಲಿ ಕೆಲಸಕ್ಕೆಂದು ಸಿದ್ದಾಪುರಕ್ಕೆ ತೆರಳುತ್ತಿದ್ದ ವೇಳೆ ಬೈಕ್ ಮತ್ತು ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಚೆಟ್ಟಳ್ಳಿ ಕಾಫಿ ಸಂಶೋಧನಾ ಕೇಂದ್ರದ ವ್ಯಾನ್ ನಡುವೆ ಡಿಕ್ಕಿ ಸಂಭವಿಸಿತ್ತು. ಘಟನೆಯಲ್ಲಿ ಮಕ್ಕಂದೂರು ನಿವಾಸಿ ಕೂಲಿ ಕಾರ್ಮಿಕ ಲಿತೀಶ್ ಪೂಜಾರಿ (22) ಮತ್ತು ಮೂರನೇ ಮೈಲ್ ನಿವಾಸಿ ಬಿ.ಎನ್.ಕೋಟಿ (60) ತೀವ್ರ ಗಾಯಗೊಂಡಿದ್ದರು. ಇದನ್ನೂ ಓದಿ: 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್‌ ಬೂಸ್ಟರ್‌ ಡೋಸ್‌ ಉಚಿತ: ಕೇಂದ್ರ

    ಇಬ್ಬರನ್ನು ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾ ಅಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದೀಗ ಲತೀಶ್ ಪೂಜಾರಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಗಾಯಗೊಂಡಿದ್ದ ಬಿ.ಎನ್ ಕೋಟಿ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಘಟನಾ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಸಾಕಿದ ನಾಯಿಯಿಂದಲ್ಲೆ ಮೃತಪಟ್ಟ 82 ವರ್ಷದ ವೃದ್ಧೆ

    Live Tv
    [brid partner=56869869 player=32851 video=960834 autoplay=true]

  • ಶಾಲಾ ವಾಹನಗಳಲ್ಲಿ ಸಂಚರಿಸುವ ನಿಮ್ಮ ಮಕ್ಕಳು ಎಷ್ಟು ಸೇಫ್ – ಪೋಷಕರಿಗೆ ಭಾಸ್ಕರ್ ರಾವ್ ಪ್ರಶ್ನೆ

    ಶಾಲಾ ವಾಹನಗಳಲ್ಲಿ ಸಂಚರಿಸುವ ನಿಮ್ಮ ಮಕ್ಕಳು ಎಷ್ಟು ಸೇಫ್ – ಪೋಷಕರಿಗೆ ಭಾಸ್ಕರ್ ರಾವ್ ಪ್ರಶ್ನೆ

    ಬೆಂಗಳೂರು: ಪೊಲೀಸ್ ಕಮೀಷನರ್ ಬಾಸ್ಕರ್ ರಾವ್, ಶಾಲಾ ವಾಹನವೊಂದರ ಫೋಟೋ ಹಾಕಿ ಶಾಲೆ ಆಡಳಿತ ಮಂಡಳಿ ಮತ್ತು ಪೋಷಕರನ್ನು ಪ್ರಶ್ನಿಸಿದ್ದಾರೆ.

    4+1 ಜನರ ಸಾಮಥ್ರ್ಯವುಳ್ಳ ಓಮಿನಿ ವಾಹನದಲ್ಲಿ 15 ಮಕ್ಕಳು ಪ್ರಯಾಣಿಸುತ್ತಿದ್ದಾರೆ. ಈ ರೀತಿಯ ವಾಹನಗಳನ್ನು ತಡೆದ್ರೆ ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿ ಪೊಲೀಸರ ಮೇಲೆ ಆಕ್ರೋಶ ವ್ಯಕ್ತಪಡಿಸುತ್ತಾರೆ. ವಾಹನದ ಸಿಲಿಂಡರ್ ಮೇಲೆ ಮಕ್ಕಳು ಕುಳಿತಿದ್ದಾರೆ. ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರು ಸಾಗಿಸುವ ವಾಹನಗಳು ಅಪಘಾತಕ್ಕೊಳಗಾಗುವ ಸಾಧ್ಯತೆಗಳಿರುತ್ತವೆ. ಒಂದ ವೇಳೆ ಅಪಘಾತ ಸಂಭವಿಸಿದರೆ ಇದಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿ ಶಾಲಾ ಆಡಳಿತ ಮಂಡಳಿಗೆ ಎಚ್ಚರಿಕೆಯನ್ನು ರವಾನಿಸಿದ್ದಾರೆ.

    ಭಾಸ್ಕರ್ ರಾವ್ ಟ್ವೀಟಿಗೆ ಪ್ರತಿಕ್ರಿಯಿಸಿರುವ ನೆಟ್ಟಿಗರು, ನಿಮ್ಮ ಕರ್ತವ್ಯವನ್ನು ನೀವು ಮಾಡಿ. ಯಾರ ಮುಲಾಜಿಗೆ ಒಳಗಾಗೋದು ಒಳಿತಲ್ಲ. ನಾವು ನಿಮ್ಮೊಂದಿಗೆ ಇದ್ದೇವೆ. ಮಕ್ಕಳ ಸುರಕ್ಷತೆಯನ್ನು ಶಾಲೆಗಳು ಯೋಚನೆ ಮಾಡಿ, ಉತ್ತಮವಾದ ವಾಹನ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಬರೆದುಕೊಂಡು ಅದೇ ರೀತಿ ಬೇರೆ ಶಾಲಾ ವಾಹನಗಳ ಫೋಟೋ ಹಂಚಿಕೊಂಡಿದ್ದಾರೆ.