Tag: ಶಾಲಾ ಶಿಕ್ಷಕಿ

  • ಮದುವೆ ಒಪ್ಪಂದಕ್ಕೆ ಒಪ್ಪದ ಶಿಕ್ಷಕಿಯ ಅಪಹರಣ

    ಮದುವೆ ಒಪ್ಪಂದಕ್ಕೆ ಒಪ್ಪದ ಶಿಕ್ಷಕಿಯ ಅಪಹರಣ

    ಹಾಸನ: ಮದುವೆ (Marriage) ಒಪ್ಪಂದಕ್ಕೆ ಒಪ್ಪದ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಕಿಯನ್ನು ಕಿಡ್ನಾಪ್ (Teacher Kidnap) ಮಾಡಿದ ಪ್ರಕರಣವೊಂದು ಹಾಸನದಲ್ಲಿ ಬೆಳಕಿಗೆ ಬಂದಿದೆ.

    ಹಾಸನ (Hassan) ಹೊರವಲಯದ ಬಿಟ್ಟಗೌಡನಹಳ್ಳಿಯ ಬಳಿ ಇಂದು ಬೆಳ್ಳಂಬೆಳಗ್ಗೆ ಸಿನಿಮೀಯ ರೀತಿಯಲ್ಲಿ ಈ ಘಟನೆ ನಡೆದಿದೆ. ಬೆಳಗ್ಗೆ ಶಾಲೆಗೆ ತೆರಳಲು ಹೊರಟಿದ್ದ ಶಿಕ್ಷಕಿಯನ್ನು ಈಕೆಯ ಸಂಬಂಧಿ ರಾಮು ಅಪಹರಿಸಿರುವ ಆರೋಪ ಕೇಳಿಬಂದಿದೆ. ಇದನ್ನೂ ಓದಿ: Breaking- ಹೆಂಡತಿ ಮತ್ತೆ ಬಂದರೆ ರಾಣಿ ಹಾಗೆ ನೋಡ್ಕೋತೀನಿ: ಮದುವೆ ಬಗ್ಗೆ ಬಾಯ್ಬಿಟ್ಟ ವರ್ತೂರ್

    15 ದಿನಗಳ ಹಿಂದೆ ರಾಮು ಮತ್ತು ಪೋಷಕರು ಮದುವೆ ಪ್ರಸ್ತಾಪದೊಂದಿಗೆ ಶಿಕ್ಷಕಿ ಮನೆಗೆ ಬಂದಿದ್ದರು. ಈ ವೇಳೆ ಮದುವೆ ಪ್ರಸ್ತಾಪಕ್ಕೆ ಯುವತಿ ಹಾಗೂ ಯುವತಿ ಕುಟುಂಬ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಶಿಕ್ಷಕಿ ಮದುವೆಗೆ ಒಪ್ಪಿಲ್ಲವೆಂದು ಆಕೆಯನ್ನು ಕಿಡ್ನಾಪ್ ಮಾಡಿದ್ದಾರೆ ಎಂದು ಶಿಕ್ಷಕಿಯ ಕುಟುಂಬಸ್ಥರು ಗಂಭೀರ ಆರೋಪಿಸಿದ್ದಾರೆ. ಇದನ್ನೂ ಓದಿ: ಮನೆಬಾಗಿಲಿಗೇ ಅಂಗನವಾಡಿ ಕಾರ್ಯಕರ್ತೆಯರು – ದುಡ್ಡು ಜಮೆಯಾಗದ `ಗೃಹಲಕ್ಷ್ಮಿ’ಯರ ದಾಖಲೆ ಸಂಗ್ರಹ

    ಹಾಸನ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • ವರದಕ್ಷಿಣೆ ಕಿರುಕುಳ – ಶಾಲಾ ಕೊಠಡಿಯಲ್ಲೇ ವಿಷ ಸೇವಿಸಿ ಶಿಕ್ಷಕಿ ಆತ್ಮಹತ್ಯೆ

    ವರದಕ್ಷಿಣೆ ಕಿರುಕುಳ – ಶಾಲಾ ಕೊಠಡಿಯಲ್ಲೇ ವಿಷ ಸೇವಿಸಿ ಶಿಕ್ಷಕಿ ಆತ್ಮಹತ್ಯೆ

    ವಿಜಯನಗರ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಖಾಸಗಿ ಶಾಲಾ ಶಿಕ್ಷಕಿಯೊಬ್ಬರು (School Teacher) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರದಲ್ಲಿ (Vijayanagara) ನಡೆದಿದೆ.

    ಬಸಮ್ಮ ಅಲಿಯಾಸ್‌ ರೂಪಾ (34) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ. ಇವರು ಹಡಗಲಿಯ ನ್ಯಾಷನಲ್‌ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ಶಾಲಾ ಕೊಠಡಿಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನೂ ಓದಿ: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಅಸ್ಪತ್ರೆಯಿಂದ ಡಿಸ್ಚಾರ್ಜ್

    ಪತಿ ಅರ್ಜುನ್‌ ಪರಶೆಟ್ಟಿ ಕೂಡ ಅದೇ ಶಾಲಾಯಲ್ಲಿ ಶಿಕ್ಷಕನಾಗಿದ್ದ. ರೂಪಾ ಮತ್ತು ಅರ್ಜುನ್‌ ಪರಸ್ಪರ ಪ್ರೀತಿಸಿ 10 ವರ್ಷಗಳ ಹಿಂದೆ ಮದುವೆಯಾಗಿದ್ದರು. ನಂತರ ಪತಿ ಹಾಗೂ ಆತನ ಕುಟುಂಬದವರಿಂದ ರೂಪಾಗೆ ವರದಕ್ಷಿಣೆ ಕಿರುಕುಳ ನೀಡಲಾಗಿದೆ. ಇದರಿಂದ ಮನನೊಂದು ರೂಪಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.

    ನ್ಯಾಷನಲ್‌ ಶಾಲೆ ಅರ್ಜುನ್‌ ಕುಟುಂಬದ ಒಡೆತನಕ್ಕೆ ಸೇರಿದ್ದಾಗಿದೆ. ಗಂಡ-ಹೆಂಡತಿ ಇಬ್ಬರೂ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಪತಿ ಮನೆಯವರು ವರದಕ್ಷಿಣೆ ಕಿರುಕುಳ ನೀಡುತ್ತಿದ್ದರಿಂದ ಬೇಸತ್ತಿದ್ದರು. ಭಾನುವಾರ ಪರೀಕ್ಷೆ ಕೆಲಸದ ನೆಪದಲ್ಲಿ ಶಾಲೆಗೆ ಬಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೆತ್‌ನೋಟ್‌ ಬರೆದಿಟ್ಟು ರೂಪಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಪಂಚರತ್ನ ಪ್ರಚಾರದ ವೇಳೆ ಜೆಡಿಎಸ್ ವಾಹನದ ಮೇಲೆ ಕಲ್ಲುತೂರಾಟ – ಚಾಲಕನಿಗೆ ಗಾಯ

    ಈ ಸಂಬಂಧ ಹಡಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪತಿ ಅರ್ಜುನ್‌, ಅತ್ತೆ ಅಂಬಿಕಾ, ನಾದಿನಿ ಸಂಗೀತಾ ಸೇರಿದಂತೆ ಆರು ಮಂದಿ ವಿರುದ್ಧ ಕೇಸ್‌ ದಾಖಲಾಗಿದೆ.

  • ನೇಣು ಬಿಗಿದುಕೊಂಡು ಶಿಕ್ಷಕಿ ಆತ್ಮಹತ್ಯೆ

    ನೇಣು ಬಿಗಿದುಕೊಂಡು ಶಿಕ್ಷಕಿ ಆತ್ಮಹತ್ಯೆ

    ಚಿತ್ರದುರ್ಗ: ಎಸ್‍ಡಿಎಂಸಿ ಸದಸ್ಯ ಹಾಗೂ ಸಹ-ಶಿಕ್ಷಕರ ಕಿರುಕುಳ ಆರೋಪದಿಂದ ಮನನೊಂದ ಶಿಕ್ಷಕಿ ಆತ್ಮಹತ್ಯೆಗೆ ಶರಣಾದ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರದ ಅಕ್ಕಮಹಾದೇವಿ ಬಡಾವಣೆಯಲ್ಲಿ ನಡೆದಿದೆ.

    ದೇವಸಮುದ್ರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಮುಖ್ಯಶಿಕ್ಷಕಿ ತಿಪ್ಪೀರಮ್ಮ(46) ನೇಣಿಗೆ ಶರಣಾದ ದುರ್ದೈವಿಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ವಿತರಿಸುವ ಶೂ ಖರೀದಿಯಲ್ಲಿ ತಿಪ್ಪೀರಮ್ಮ ಅವ್ಯವಹಾರ ಎಸಗಿದ್ದಾರೆ ಎಂದು ದೂರು ನೀಡಲಾಗಿತ್ತು. ಈ ಕುರಿತು ಇಲಾಖಾ ಅಧಿಕಾರಿಗಳು ತನಿಖೆಯನ್ನು ನಡೆಸಿದ್ದರು. ತನಿಖೆ ಬಳಿಕ ಮುಖ್ಯಶಿಕ್ಷಕಿ ತಿಪ್ಪಿರಮ್ಮರನ್ನು ಚನ್ನಮ್ಮನ ಹಳ್ಳಿ ಶಾಲೆಗೆ ವರ್ಗಾವಣೆ ಮಾಡಿದ್ದರು. ಇದರಿಂದ ಅವಮಾನ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

    ಎಸ್‍ಡಿಎಂಸಿ ಸದಸ್ಯ ಲಿಂಗಪ್ಪ, ಸಹಶಿಕ್ಷಕಿ ಸವಿತಾ, ಶಾಂತಮ್ಮ ಹಾಗೂ ಸಹಶಿಕ್ಷಕ ರಮೇಶ್ ಪ್ರತಿನಿತ್ಯ ವಿನಾಕಾರಣ ಕಿರುಕುಳ ನೀಡುತ್ತಿದ್ದರು ಎಂದು ಕುಟುಂಬದ ಸದಸ್ಯರೊಂದಿಗೆ ತಿಪ್ಪೀರಮ್ಮ ಅಳಲು ತೋಡಿಕೊಂಡಿದ್ದರು ಎಂದು ತಿಳಿದುಬಂದಿದೆ.

    ಈ ಸಂಬಂಧ ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.