Tag: ಶಾಲಿನಿ ರಜನೀಶ್

  • ವಿದ್ಯುತ್ ಸಂಪರ್ಕಕ್ಕೆ ಓಸಿ ವಿನಾಯ್ತಿ – ಇಂದೇ ನಿರ್ಧಾರ?

    ವಿದ್ಯುತ್ ಸಂಪರ್ಕಕ್ಕೆ ಓಸಿ ವಿನಾಯ್ತಿ – ಇಂದೇ ನಿರ್ಧಾರ?

    – ಸಿಎಂ, ಸಿಎಸ್‌ ನೇತೃತ್ವದಲ್ಲಿಂದು ಮಹತ್ವದ ಸಭೆ
    – 3 ಲಕ್ಷ ಮನೆಗಳಿಗೆ ಸಿಗಲಿದೆಯಾ ವಿದ್ಯುತ್‌ ಸಂಪರ್ಕ?

    ಬೆಂಗಳೂರು: ಸ್ವಾಧೀನಾನುಭವ ಪತ್ರ (Occupancy Certificates) ಇಲ್ಲದೇ ಲಕ್ಷಾಂತರ ಮನೆಗಳಿಗೆ ವಿದ್ಯುತ್ ಇಲ್ಲ. ಹೀಗಾಗಿ ಓಸಿ ಇಲ್ಲದೇ ವಿದ್ಯುತ್ ಸಂಪರ್ಕ ನೀಡಲು ಕ್ಯಾಬಿನೆಟ್‌ನಲ್ಲಿ ಚರ್ಚೆ ವಿಷಯ ಆಗಿತ್ತು. ಆದ್ರೆ ಈವರೆಗೆ ಯಾವುದೇ ಬೆಳವಣಿಗೆ ನಡೆದಿರಲಿಲ್ಲ. ಹೀಗಾಗಿ ವಿದ್ಯುತ್ ಸಂಪರ್ಕಕ್ಕಾಗಿ ಓಸಿ ವಿನಾಯಿತಿ ನೀಡಲು ಇಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಅಥವಾ ಸಿಎಂ ನೇತೃತ್ವದಲ್ಲಿ ಸಭೆ ನಡೆಯುವ ಸಾಧ್ಯತೆ ಇದೆ. ಸಭೆಯಲ್ಲಿ ಲಕ್ಷಾಂತರ ಮನೆಗಳಿಗೆ ವಿದ್ಯುತ್ ಸಂಪರ್ಕ (Electricity connection) ನೀಡುವ ಸಲುವಾಗಿ ಓಸಿ ವಿನಾಯಿತಿ ಬಗ್ಗೆ ಚರ್ಚೆ ನಡೆಯಲಿದೆ. ಸಾಧಕ ಭಾಧಕಗಳ ಬಗ್ಗೆ ಚರ್ಚೆ ಆಗಿ ವಿನಾಯಿತಿ ನೀಡುವ ಬಗ್ಗೆ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ.

    Occupancy Certificate

    ಇನ್ನೂ ಓಸಿಯಿಂದ ಒನ್ ಟೈಂ ರಿಲ್ಯಾಕ್ಸೇಷನ್ ಬೆಸ್ಕಾಂ ವ್ಯಾಪ್ತಿಯಲ್ಲಿ 3 ಲಕ್ಷಕ್ಕೂ ಅಧಿಕ ಮನೆಗಳಿಗೆ ವಿದ್ಯುತ್ ಸಂಪರ್ಕ ಸಿಗಲಿದೆ. ‌ಬೆಂಗಳೂರಿನಲ್ಲಿ ವಿದ್ಯುತ್ ಸಂಪರ್ಕಕ್ಕಾಗಿ 53 ಸಾವಿರ ಅರ್ಜಿ ಸಲ್ಲಿಕೆಯಾಗಿದೆ. 53 ಸಾವಿರ ಅರ್ಜಿಯಿಂದ 3 ಲಕ್ಷಕ್ಕೂ ಅಧಿಕ ಮನೆಗಳಿಗೆ ಸಂಪರ್ಕ ಸಿಗಲಿದೆ. ಇದನ್ನೂ ಓದಿ:  ʻಆಪರೇಷನ್‌ ಸಿಂಧೂರʼ ಒಪ್ಪಿಕೊಂಡ ಪಾಕ್‌ ನಾಯಕ; ದಾಳಿಯಿಂದ ಹಾನಿಗೊಳಗಾದವರಿಗೆ ಪಂದ್ಯದ ಹಣ ನಿಡೋದಾಗಿ ಘೋಷಣೆ

    ಒಂದೇ ಬಿಲ್ಡಿಂಗ್ ನಲ್ಲಿ 4 ರಿಂದ 5 ಮನೆಗಳಿಗೆ ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಕೆಯಾಗಿದ್ದು ಅಸ್ತಿತ್ವದಲ್ಲಿ ಇರುವ ಕಟ್ಟಡಗಳಿಂದ ವಿದ್ಯುತ್ ಸಂಪರ್ಕಕ್ಕಾಗಿ 53 ಸಾವಿರ ಅರ್ಜಿ ಸಲ್ಲಿಕೆ ಆಗಿದೆ. ಕಮರ್ಷಿಯಲ್ ಮತ್ತು ರೆನ್ಸಿಡೆನ್ಷಿಯಲ್ ಗಳಿಗೆ ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿಸಲ್ಲಿಕೆಯಾಗಿದ್ದು. 30×40 ಚದರ ಅಡಿ ನಿವೇಶನದ ವಿದ್ಯುತ್ ಸಂಪರ್ಕಕ್ಕೆ 33 ಸಾವಿ ಅರ್ಜಿ ಸಲ್ಲಿಕೆಯಾಗಿದೆ. 1,200 ಚದರ ಅಡಿ ನಿವೇಶನಗಳಿಂದ 25 ಸಾವಿರ ಅರ್ಜಿಗೆ ರಿಲ್ಯಾಕ್ಸೇಷನ್ ಸಿಗಲಿದೆ. ಇದನ್ನೂ ಓದಿ: ವಿಜಯ್‌ ಅವರದ್ದು ಏನೂ ತಪ್ಪಿಲ್ಲ, ಪೊಲೀಸ್‌ ಇಂಟೆಲಿಜೆನ್ಸ್‌ ವಿಫಲವಾಗಿದೆ: ಅಣ್ಣಾಮಲೈ ಆರೋಪ

    ಒಟ್ಟಾರೆ ಓಸಿ ವಿದ್ಯುತ್ ಸಂಪರ್ಕಕ್ಕಾಗಿ ಲಕ್ಷಾಂತರ ಅರ್ಜಿಗಳು ಸಲ್ಲಿಕೆ ಆಗಿವೆ. ಸರ್ಕಾರ ಸಭೆ ಮಾಡಿ ವಿದ್ಯುತ್ ಸಂಪರ್ಕಕ್ಕಾಗಿ ವಿನಾಯಿತಿ ಕೊಡುತ್ತಾ ಕಾದು ನೋಡಬೇಕಿದೆ. ಇದನ್ನೂ ಓದಿ: ಸ್ಟೇಜ್‌ನಲ್ಲೇ ನಕ್ಕು ನಗಿಸಿ ಬಿಗ್‌ಬಾಸ್ ಮನೆಗೆ ಎಂಟ್ರಿ ಕೊಟ್ಟ ಮಲ್ಲಮ್ಮ

  • ಎಂಎಲ್‌ಸಿ ರವಿಕುಮಾರ್‌ಗೆ ʻಹೈʼ ರಿಲೀಫ್‌ – ಜು.8ರ ವರೆಗೆ ಬಂಧಿಸದಂತೆ ಆದೇಶ

    ಎಂಎಲ್‌ಸಿ ರವಿಕುಮಾರ್‌ಗೆ ʻಹೈʼ ರಿಲೀಫ್‌ – ಜು.8ರ ವರೆಗೆ ಬಂಧಿಸದಂತೆ ಆದೇಶ

    ಬೆಂಗಳೂರು: ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ (Shalini Rajneesh) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪ ಪ್ರಕರಣದಲ್ಲಿ ಬಿಜೆಪಿ ಎಂಎಲ್‌ಸಿ ರವಿಕುಮಾರ್‌ (BJP MLC Ravikumar) ಅವರಿಗೆ ಹೈಕೋರ್ಟ್‌ನಿಂದ ಬಿಗ್‌ ರಿಲೀಫ್‌ ಸಿಕ್ಕಿದೆ.

    ಜೂನ್‌ 8ರ ವರೆಗೆ ಬಂಧಿಸಂದಂತೆ ಆದೇಶ ನೀಡಿರುವ ಕೋರ್ಟ್‌ ತನಿಖೆಗೆ ಸಹಕರಿಸುವಂತೆ ರವಿಕುಮಾರ್‌ಗೆ ಅವರಿಗೆ ಸೂಚನೆ ನೀಡಿದೆ. ಇದನ್ನೂ ಓದಿ: ಶಾಲಿನಿ ರಜನೀಶ್‌ ವಿರುದ್ಧ ರವಿಕುಮಾರ್ ಮಾತಾಡಿದ್ದು ಸರಿ ಅಲ್ಲ: ಬಿಜೆಪಿ ಶಾಸಕ ಸುರೇಶ್ ಗೌಡ

    ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಕ್ರೈಂ ನಂ.66/2025 ಸಂಖ್ಯೆಯ ಎಫ್‌ಐಆರ್‌ ರದ್ದು ಮಾಡುವಂತೆ ರವಿಕುಮಾರ್‌ ಸಲ್ಲಿಸಿದ್ದ ಅರ್ಜಿ ನ್ಯಾ.ಎಸ್.ಆರ್ ಕೃಷ್ಣಕುಮಾರ್ ಪೀಠದಲ್ಲಿ ವಿಚಾರಣೆ ನಡೆಯಿತು. ರವಿಕುಮಾರ್ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿ, ಎಂಎಲ್‌ಸಿ ರವಿಕುಮಾರ್ ಅವರು ವಿಧಾನಸೌಧ ಬಳಿ ಪ್ರತಿಭಟನೆ ವೇಳೆ ಮಾತನಾಡಿದ್ದಾರೆ ಎನ್ನಲಾಗಿದೆ. ಟಿವಿಯಲ್ಲಿ ಮಾತನಾಡಿದ್ದಾರೆ ಎಂದು ದೂರುದಾರರು ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ. ಮುಖ್ಯ ಕಾರ್ಯದರ್ಶಿ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ ಎಂದು ರವಿಕುಮಾರ್ ಮೆಚ್ಚುಗೆ ಸೂಚಿಸಿದ್ದಾರೆ. ಇದು ರಾಜಕೀಯ ದುರುದ್ದೇಶದ ಪ್ರಕರಣವಾಗಿದ್ದು, ಪೀಠಕ್ಕೆ ರವಿಕುಮಾರ್ ಏನು ಮಾತನಾಡಿದ್ದಾರೆ ಎಂಬುದರ ವಿಡಿಯೊವನ್ನು ಟ್ಯಾಬ್ ಮೂಲಕ ತೋರಿಸಿದ್ರು. ಇದನ್ನೂ ಓದಿ: ದೆಹಲಿ ಸರ್ಕಾರದಿಂದ ಯೂಟರ್ನ್ – ಅವಧಿ ಮೀರಿದ ವಾಹನಗಳಿಗೆ ಹೇರಿದ್ದ ಇಂಧನ ನಿಷೇಧ ಆದೇಶ ವಾಪಸ್

    ಎಸ್‌ಪಿಪಿ ಬೆಳ್ಳಿಯಪ್ಪ ಪ್ರತಿವಾದ ಮಂಡಿಸಿ ರವಿಕುಮರ್ 2ನೇ ಬಾರಿ ಹೀಗೆ ಮಾತನಾಡ್ತಿದ್ದಾರೆ. ಈ ಹಿಂದೆ ಮಹಿಳಾ ಜಿಲ್ಲಾಧಿಕಾರಿಯೊಬ್ಬರನ್ನ ಪಾಕಿಸ್ತಾನದ ಸಹೋದರಿ ಅಂದಿದ್ರು. ನಾವು ಇಲ್ಲಿ ಡಿಸೈಡ್ ಮಾಡೋದಕ್ಕೆ ಬರೋದಿಲ್ಲ, ತನಿಖೆ ಆಗಲಿ, ಎಫ್‌ಐಆರ್ ಆಗಿ 24 ಗಂಟೆ ಕಳೆದಿಲ್ಲ ಆಗಲೇ ಕೋರ್ಟ್‌ಗೆ ಬಂದಿದ್ದಾರೆ. ವಿಕ್ಟಿಮ್ ಮುಖ್ಯ ಕಾರ್ಯದರ್ಶಿ ಅವರ ಹೇಳಿಕೆ ದಾಖಲಿಸಬೇಕಿದೆ. ಮಾಧ್ಯಮಗಳ ಹೇಳಿಕೆಯನ್ನೂ ದಾಖಲಾಸಲಾಗುತ್ತೆ, ಇದೊಂದು ಏಳು ವರ್ಷಗಳವರೆಗಿನ ಸಜೆಯುಳ್ಳ ಕೇಸ್ ಆಗಿದ್ದು, ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿ ಇಲ್ಲಿ ರಕ್ಷಣೆ ಕೋರೋದು ಸರಿಯಿಲ್ಲ. ಐಎಎಸ್ ಅಧಿಕಾರಿಗಳು ಇವ್ರ ವಿರುದ್ಧ ಪ್ರತಿಭಟಿಸ್ತಿದ್ದಾರೆ ಅಂತ ವಾದ ಮಂಡಿಸಿದ್ರು.

    ರಾಜಕಾರಣಿಗಳು ಬಳಸುವ ಭಾಷೆ ಕೆಳಮಟ್ಟಕ್ಕಿಳಿದಿದೆ ಅಂತ ಅಭಿಪ್ರಾಯ ಪಟ್ಟ ನ್ಯಾಯಾಧೀಶರು, ಜುಲೈ 8ರ ವರೆಗೆ ಬಂಧಿಸದಂತೆ, ತನಿಖೆಗೆ ಸಹಕಾರ ನೀಡುವಂತೆ ಆದೇಶ ನೀಡಿದ್ರು. ಇನ್ನು ಸಂಜೆ ವೇಳೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ್ ಭಟ್, ಎಂಎಲ್‌ಸಿ ರವಿಕುಮಾರ್‌ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದಾರೆ. ಬಂಧನ ಭೀತಿಯಲ್ಲಿದ್ದ ರವಿಕುಮಾರ್‌ಗೆ ಎರಡೂ ಕೋರ್ಟ್ ಗಳ ಆದೇಶ ನಿರಾಳತೆ ತಂದಿದೆ. ಇದನ್ನೂ ಓದಿ: Custodial Death Case | ದೇಹದ ಮೇಲೆ 44 ಗಾಯದ ಗುರುತು, ಮೆದುಳಿನಲ್ಲಿ ರಕ್ತಸ್ರಾವ – ಮರಣೋತ್ತರ ಪರೀಕ್ಷಾ ವರದಿ ಔಟ್‌
  • ಶಾಲಿನಿ ರಜನೀಶ್‌ ವಿರುದ್ಧ ರವಿಕುಮಾರ್ ಮಾತಾಡಿದ್ದು ಸರಿ ಅಲ್ಲ: ಬಿಜೆಪಿ ಶಾಸಕ ಸುರೇಶ್ ಗೌಡ

    ಶಾಲಿನಿ ರಜನೀಶ್‌ ವಿರುದ್ಧ ರವಿಕುಮಾರ್ ಮಾತಾಡಿದ್ದು ಸರಿ ಅಲ್ಲ: ಬಿಜೆಪಿ ಶಾಸಕ ಸುರೇಶ್ ಗೌಡ

    ಬೆಂಗಳೂರು: ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ (Shalini Rajneesh) ವಿರುದ್ಧ ಬಿಜೆಪಿ (BJP) ಎಂಎಲ್‌ಸಿ ರವಿಕುಮಾರ್‌ (N.Ravikumar) ನೀಡಿದ್ದ ಅವಹೇಳನಕಾರಿ ಹೇಳಿಕೆಯನ್ನು ಸ್ವಪಕ್ಷದ ಶಾಸಕ ಬಿ.ಸುರೇಶ್‌ ಗೌಡ (B.Sureshgowda) ಖಂಡಿಸಿದ್ದಾರೆ.

    ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಆವು ಮಾತನಾಡಿದರು. ಈ ವೇಳೆ, ರವಿಕುಮಾರ್ ಮಾತನಾಡಿದ್ದು ಸರಿಯಲ್ಲ. ಚಿಕ್ಕ ಗುಮಾಸ್ತನಾಗಲಿ ಗೌರವದಿಂದ ಕಾಣಬೇಕು. ಕೋಪದಲ್ಲಿ ಮಾತನಾಡಿ ಗೊಂದಲ ಮಾಡಿಕೊಳ್ಳಬಾರದು. ರವಿಕುಮಾರ್ ಮಾತನಾಡಿದರೆ ಅವರೇ ಸ್ಪಷ್ಟನೆ ಕೊಡಬೇಕು. ಅದನ್ನ ಬಿಜೆಪಿ ಹೇಳಿಕೊಟ್ಟು ಮಾತನಾಡಿಸಿದ್ದಲ್ಲ. ರವಿಕುಮಾರ್ ಹೇಳಿಕೆಯನ್ನ ಖಂಡಿಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಶಾಲಿನಿ ರಜನೀಶ್‌ ವಿರುದ್ಧ ಅಸಭ್ಯ ಹೇಳಿಕೆ – ರವಿಕುಮಾರ್‌ ವಿರುದ್ಧ ಕೇಸ್‌ ದಾಖಲು

    ಕಾಂಗ್ರೆಸ್ (Congress) ಸರ್ಕಾರ ಬಂದ ಮೇಲೆ ಸಿದ್ದರಾಮಯ್ಯ ಡಿವೈಎಸ್‍ಪಿ ಮೇಲೆ ಕಪಾಳ ಮೋಕ್ಷ ಮಾಡಲು ಹೋಗಿದ್ದರು. ವೇದಿಕೆಯಲ್ಲಿ ಸ್ವಾಮೀಜಿ ಪಕ್ಕ ಕುಳಿತಿದ್ದ ಐಎಎಸ್ ಅಧಿಕಾರಿಯನ್ನ ಹೊರಗೆ ಕಳುಹಿಸಿದ್ರು ಎಂದು ಸಿಎಂ ವಿರುದ್ಧವು ಅಸಮಾಧಾನ ಹೊರಹಾಕಿದ್ದಾರೆ.

    ರವಿಕುಮಾರ್ ವಿರುದ್ಧ ನಂದಾದೀಪಾ ಮಹಿಳಾ ಸಂಘದ ಅಧ್ಯಕ್ಷಿ ದೂರು ದಾಖಲಿಸಿದ್ದಾರೆ. ಜುಲೈ 1 ರಂದು ಬಿಜೆಪಿ ನಾಯಕರು ಮಹಾತ್ಮ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ರವಿಕುಮಾರ್‌ ಅವರು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜಿನೀಶ್ ಅವರನ್ನು ಅಸಭ್ಯ ರೀತಿಯಲ್ಲಿ “ಅವರು ರಾತ್ರಿ ಸರ್ಕಾರಕ್ಕೆ ಹಗಲು ಸಿಎಂಗೆ ಕೆಲಸ ಮಾಡುತ್ತಾರೆಂದು” ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದು ಟಿವಿಯಲ್ಲಿ ಪ್ರಸಾರವಾಗಿತ್ತು.

    ಟಿವಿಯಲ್ಲಿ ಬಂದ ಸುದ್ದಿ ನೋಡಿ ನನಗೆ ನೋವುಂಟಾಗಿದ್ದು, ಅವರ ಹೇಳಿಕೆಯು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಆಗೌರವ ತೋರಿದಂತಾಗಿದೆ. ಶಾಲಿನಿ ರಜನೀಶ್ ಅವರ ಗೌರವಕ್ಕೆ ಕುಂದುಂಟು ಮಾಡಿ ಇಡಿ ಮಹಿಳಾ ಕುಲಕ್ಕೆ ಆಗೌರವ ತೋರಿರುತ್ತಾರೆ. ಇವರ ಮಾತು ಲೈಂಗಿಕ ಅರ್ಥ ಬರುವಂತಹ ಹೇಳಿಕೆಯಾಗಿದ್ದು ಮುಖ್ಯ ಕಾರ್ಯದರ್ಶಿರವರ ಖ್ಯಾತಿಗೆ ಹಾನಿ ಉಂಟು ಮಾಡಿದೆ. ರವಿಕುಮಾರ್ ಹೇಳಿಕೆಯಿಂದ ಮಹಿಳೆ ಹಾಗೂ ಮಹಿಳಾ ಸಮಾಜಕ್ಕೂ ಆಗೌರವ ಉಂಟಾಗಿದ್ದು, ಅವರ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಬೇಕೆಂದು ಮನವಿ ಮಾಡಿದ್ದರು. ಇದನ್ನೂ ಓದಿ: ಸಿಎಸ್‌ ವಿರುದ್ಧ ರವಿಕುಮಾರ್ ಅವಹೇಳನಕಾರಿ ಹೇಳಿಕೆ – ನಾಳೆ ಜೋಷಿಗೆ ಸ್ಪಷ್ಟನೆ

  • ಶಾಲಿನಿ ರಜನೀಶ್‌ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ರೆ ನೇಣು ಹಾಕಿಕೊಳ್ಳುತ್ತೇನೆ: ರವಿಕುಮಾರ್‌

    ಶಾಲಿನಿ ರಜನೀಶ್‌ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ರೆ ನೇಣು ಹಾಕಿಕೊಳ್ಳುತ್ತೇನೆ: ರವಿಕುಮಾರ್‌

    ಬೆಂಗಳೂರು: ತನ್ನ ವಿರುದ್ಧ ಎಫ್‌ಐಆರ್‌ (FIR) ದಾಖಲಾದ ಬೆನ್ನಲ್ಲೇ ಎನ್ ರವಿಕುಮಾರ್ (Ravikumar) ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ (Shalini Rajneesh) ವಿರುದ್ಧ ನಾನು ಯಾವುದೇ ಅವಹೇಳನಕಾರಿಯಾಗಿ ಹೇಳಿಕೆ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

    ಈ ಸಂಬಂಧ ಪಬ್ಲಿಕ್‌ ಟಿವಿಗೆ ಪ್ರತಿಕ್ರಿಯೆ ನೀಡಿದ ಅವರು, ಶಾಲಿನಿ ರಜನೀಶ್ ಅವರ ಬಗ್ಗೆ ಬಹಳ ಗೌರವ ಇದೆ. ಅವರ ಬಗ್ಗೆ ಯಾವುದೇ ಆಕ್ಷೇಪಾರ್ಹ ಹೇಳಿಕೆ ಕೊಟ್ಟಿಲ್ಲ. ಆಕ್ಷೇಪಾರ್ಹ ಹೇಳಿಕೆ ನೀಡಿದರೆ ನಾನು ನೇಣು ಹಾಕಿಕೊಳ್ಳುತ್ತೇನೆ ಎಂದು ರವಿಕುಮಾರ್ ಹೇಳಿದ್ದಾರೆ. ಇದನ್ನೂ ಓದಿ: ಶಾಲಿನಿ ರಜನೀಶ್‌ ವಿರುದ್ಧ ಅಸಭ್ಯ ಹೇಳಿಕೆ ರವಿಕುಮಾರ್ವಿರುದ್ಧ ಕೇಸ್ದಾಖಲು

     

    ಮುಖ್ಯ ಕಾರ್ಯದರ್ಶಿಯವರು ಅವರು 24 ಗಂಟೆ ಬ್ಯುಸಿ ಇದ್ದಾರೆ. ಹಾಗಾಗಿ ಅವರು ಹಗಲು ರಾತ್ರಿ ಕೆಲಸ ಮಾಡುತ್ತಿದ್ದಾರೆ ಎಂದೆ. ಹಗಲಲ್ಲಿ ಸಿಎಂ ಕಾರ್ಯಕ್ರಮಗಳಲ್ಲಿ ಭಾಗವಹಿಸ್ತಾರೆ, ರಾತ್ರಿಯೆಲ್ಲ ಸರ್ಕಾರದ ಕೆಲಸ ಮಾಡ್ತಾರೆ ಅಂದೆ. ಇದರೊಳಗೆ ಏನು ತಪ್ಪಿದೆ? ನಾನು ಅವಾಚ್ಯ ಶಬ್ಧ ಬಳಸಿಲ್ಲ ಎಂದು ತಿಳಿಸಿದರು.

    ಅವಾಚ್ಯ ಶಬ್ಧ ಬಳಸಿದರೆ ಕಾಂಗ್ರೆಸ್‌ನವರು ಬಹಿರಂಗಪಡಿಸಲಿ. ನನಗೂ ನನ್ನ ಮನೆಯಲ್ಲಿ ಸಹೋದರಿಯರು ಇದ್ದಾರೆ. ಯಾರ ಜತೆ ಹೇಗೆ ಮಾತನಾಡಬೇಕೆಂಬ ಪರಿಜ್ಞಾನ ಇದೆ. ಮುಖ್ಯ ಕಾರ್ಯದರ್ಶಿಗೆ ಆ ರೀತಿ ಮಾತನಾಡಲು

    ಆತರಹ ಮಾತಾಡಲು ಸಾಧ್ಯಾನಾ? ಯಾರಿಗೇ ಆಗಲೀ ಆಥರ ಮಾತಾಡೋದು ಸಾಧ್ಯನಾ? ಅವಾಚ್ಯ ಶಬ್ಧ ಇದ್ದರೆ ನೇಣು ಹಾಕಿಕೊಳ್ತೇನೆ. ನನ್ನ ವಿರುದ್ಧ ದ್ವೇಷದಿಂದ ಕಾಂಗ್ರೆಸ್‌ನವರು ದೂರು ಕೊಟ್ಟಿದ್ದಾರೆ ಎಂದು ರವಿಕುಮಾರ್ ಸ್ಪಷ್ಟ ಪಡಿಸಿದರು. ಇದನ್ನೂ ಓದಿ: Public TV Explainer | ಕಾಲ್ತುಳಿತ ದುರಂತದ ಬಳಿಕ ಎಚ್ಚೆತ್ತ ಪೊಲೀಸ್ಇಲಾಖೆ ಇನ್ಮುಂದೆ ಸಭೆ, ಸಮಾರಂಭಗಳಿಗೆ ಹೊಸ `SOP’

  • ಶಾಲಿನಿ ರಜನೀಶ್‌ ವಿರುದ್ಧ ಅಸಭ್ಯ ಹೇಳಿಕೆ – ರವಿಕುಮಾರ್‌ ವಿರುದ್ಧ ಕೇಸ್‌ ದಾಖಲು

    ಶಾಲಿನಿ ರಜನೀಶ್‌ ವಿರುದ್ಧ ಅಸಭ್ಯ ಹೇಳಿಕೆ – ರವಿಕುಮಾರ್‌ ವಿರುದ್ಧ ಕೇಸ್‌ ದಾಖಲು

    ಬೆಂಗಳೂರು: ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ (Shalini Rajneesh) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಬಿಜೆಪಿ ಪರಿಷತ್‌ ಸದಸ್ಯ ರವಿಕುಮಾರ್‌ (BJP MLC Ravikumar) ವಿರುದ್ಧ ವಿಧಾನಸೌದ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

    ಜೆಪಿನಗರದ ನಿವಾಸಿಯಾಗಿರುವ ನಂದಾದೀಪಾ ಮಹಿಳಾ ಸಂಘದ ಅಧ್ಯಕ್ಷೆ ನಾಗರತ್ನ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಬಿಎನ್‌ಎಸ್‌ ಸೆಕ್ಷನ್‌ 351(3)(ಅನೈತಿಕತೆಯ ಆರೋಪ), 75(3) (ಅಶ್ಲೀಲ ಹೇಳಿಕೆ), 79(ಮಹಿಳೆಯ ಮಾನಕ್ಕೆ ಕುಂದು ತರುವ ಉದ್ದೇಶದಿಂದ ಪ್ರಯೋಗಿಸಲಾದ ಪದ) ಅಡಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಹಾಸನ| ಪತ್ನಿಯನ್ನು ಕೊಂದು ಹೃದಯಾಘಾತವಾಗಿದೆ ಎಂದು ಬಿಂಬಿಸಿದ್ನಾ ಪತಿ?


    ದೂರಿನಲ್ಲಿ ಏನಿದೆ?
    ನಾನು ನಂದಾದೀಪಾ ಮಹಿಳಾ ಸಂಘದ ಅಧ್ಯಕ್ಷಿಯಾಗಿರುತ್ತೇನೆ. ಜುಲೈ 1 ರಂದು ಬಿಜೆಪಿ ನಾಯಕರು ಮಹಾತ್ಮ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ ಮಾತನಾಡುತ್ತಿದ್ದರು.

    ಈ ಸಂದರ್ಭದಲ್ಲಿ ರವಿಕುಮಾರ್‌ ಅವರು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶ್ರೀಮತಿ, ಶಾಲಿನಿ ರಜಿನೀಶ್ ಅವರನ್ನು ಅಸಭ್ಯ ರೀತಿಯಲ್ಲಿ “ಅವರು ರಾತ್ರಿ ಸರ್ಕಾರಕ್ಕೆ ಹಗಲು ಸಿಎಂಗೆ ಕೆಲಸ ಮಾಡುತ್ತಾರೆಂದು” ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದು ಟಿವಿಯಲ್ಲಿ ಪ್ರಸಾರವಾಗಿತ್ತು. ಇದನ್ನೂ ಓದಿ: ಎಂಎಲ್‌ಸಿ ರವಿಕುಮಾರ್ ಮೇಲೆ ನಿಯಮಾವಳಿಗಳ ಪ್ರಕಾರ ಕ್ರಮ ಹೊರಟ್ಟಿ

    ಟಿವಿಯಲ್ಲಿ ಬಂದ ಸುದ್ದಿ ನೋಡಿ ನನಗೆ ನೋವುಂಟಾಗಿದ್ದು, ಅವರ ಹೇಳಿಕೆಯು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಆಗೌರವ ತೋರಿದಂತಾಗಿದೆ. ಶಾಲಿನಿ ರಜನೀಶ್ ಅವರ ಗೌರವಕ್ಕೆ ಕುಂದುಂಟು ಮಾಡಿ ಇಡಿ ಮಹಿಳಾ ಕುಲಕ್ಕೆ ಆಗೌರವ ತೋರಿರುತ್ತಾರೆ. ಇವರ ಮಾತು ಲೈಂಗಿಕ ಅರ್ಥ ಬರುವಂತಹ ಹೇಳಿಕೆಯಾಗಿದ್ದು ಮುಖ್ಯ ಕಾರ್ಯದರ್ಶಿರವರ ಖ್ಯಾತಿಗೆ ಹಾನಿ ಉಂಟು ಮಾಡಿದೆ. ರವಿಕುಮಾರ್ ಹೇಳಿಕೆಯಿಂದ ಮಹಿಳೆ ಹಾಗೂ ಮಹಿಳಾ ಸಮಾಜಕ್ಕೂ ಆಗೌರವ ಉಂಟಾಗಿದ್ದು, ಅವರ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಬೇಕೆಂದು ಮನವಿ ಮಾಡುತ್ತಿದ್ದೇನೆ.

  • ಎಂಎಲ್‌ಸಿ ರವಿಕುಮಾರ್ ಮೇಲೆ ನಿಯಮಾವಳಿಗಳ ಪ್ರಕಾರ ಕ್ರಮ – ಹೊರಟ್ಟಿ

    ಎಂಎಲ್‌ಸಿ ರವಿಕುಮಾರ್ ಮೇಲೆ ನಿಯಮಾವಳಿಗಳ ಪ್ರಕಾರ ಕ್ರಮ – ಹೊರಟ್ಟಿ

    ಬೆಂಗಳೂರು: ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ (Shalini Rajneesh) ಬಗ್ಗೆ ಅವಹೇಳನಕಾರಿ ಮಾತಾಡಿರೋ ಬಿಜೆಪಿ MLC ರವಿಕುಮಾರ್ ವಿರುದ್ಧ ಕ್ರಮಕ್ಕೆ ಪ್ರದೇಶ ಕಾಂಗ್ರೆಸ್ ಕಮಿಟಿಯಿಂದ ದೂರು ಬಂದಿದೆ ಅಂತ ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ತಿಳಿಸಿದ್ದಾರೆ.

    ವಿಧಾನಸೌಧದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನಿಂದ (Congress) ನನಗೆ ದೂರು ಕೊಟ್ಟಿದ್ದಾರೆ. ರವಿಕುಮಾರ್ (N Ravikumar) ಅವರು ಸಿಎಸ್‌ಗೆ ಅಸಂಬದ್ಧ ಪದ ಬಳಕೆ ಮಾಡಿದ್ದಾರೆ. ಅವರ ಮೇಲೆ ಕ್ರಮಕ್ಕೆ ಮನವಿ ಮಾಡಿದ್ದಾರೆ. MLC ಸ್ಥಾನದಿಂದ ಅಮಾನತು ಮಾಡಬೇಕು ಅಂತ ಕೇಳಿದ್ದಾರೆ. ರವಿಕುಮಾರ್‌ಗೆ ನಾನು ಪತ್ರ ಬರೆದಿದ್ದೇನೆ. ಹೀಗೆ ದೂರು ಬಂದಿದೆ. ನಿಮ್ಮ ಅಭಿಪ್ರಾಯ ‌ಕೊಡಿ ಅಂತ ಕೇಳಿದ್ದೀನಿ. ಅವರು ಅಭಿಪ್ರಾಯ ಕೊಟ್ಟ ಮೇಲೆ ಮುಂದಿನ ತೀರ್ಮಾನ ಮಾಡ್ತೀನಿ ಎಂದಿದ್ದಾರೆ. ಇದನ್ನೂ ಓದಿ: ಸಿಎಸ್‌ ವಿರುದ್ಧ ರವಿಕುಮಾರ್ ಅವಹೇಳನಕಾರಿ ಹೇಳಿಕೆ – ನಾಳೆ ಜೋಷಿಗೆ ಸ್ಪಷ್ಟನೆ

    ರವಿಕುಮಾರ್ ಅವರ ಸದಸ್ಯತ್ವ ರದ್ದು ಮಾಡೋ ಅಧಿಕಾರ ನನಗೆ ಇಲ್ಲ. ಕಾನೂನು ತಜ್ಞರ ಅಭಿಪ್ರಾಯ ಪಡೆದು ಮುಂದಿನ ತೀರ್ಮಾನ ಮಾಡ್ತೀವಿ. ವಿಧಾನ ಪರಿಷತ್ ನಿಯಮದ ಪ್ರಕಾರ ಮುಂದಿನ ಕ್ರಮ ತೆಗೆದುಕೊಳ್ತೀವಿ. ರವಿಕುಮಾರ್ ಅಭಿಪ್ರಾಯ ಪಡೆಯದೇ ನಾನೇನು ಕ್ರಮ ತೆಗೆದುಕೊಳ್ಳಲು ಆಗಲ್ಲ ಅಂತ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿ ಆಗಲಿ: ಸಂಸದ ಯದುವೀರ್

    ಇದು ವಿಧಾನಸೌಧದ ಪರಿಮಿತಿಯಲ್ಲಿ ನಡೆದಿದೆ. ಅದಕ್ಕೆ ನಾನು ರವಿಕುಮಾರ್‌ಗೆ ಪತ್ರ ಬರೆದಿದ್ದೇನೆ. ಪತ್ರಕ್ಕೆ ಅವರ ಅಭಿಪ್ರಾಯ ಬರಲಿ, ರಾಜ್ಯಸಭೆ ಸೆಕ್ರೆಟರಿ ಜನರಲ್ ಅವರ ಅಭಿಪ್ರಾಯ ಪಡೆಯುತ್ತೇನೆ. ಪೊಲೀಸ್ ಕೇಸ್ ಬಗ್ಗೆ ನನಗೆ ಗೊತ್ತಿಲ್ಲ. ಶಾಸಕರನ್ನ ಅರೆಸ್ಟ್ ಮಾಡಿದ್ರೆ ನಮಗೆ ಮಾಹಿತಿ ಕೊಡಬೇಕು ಅಷ್ಟೆ. ನಾವು ರವಿಕುಮಾರ್ ಅಭಿಪ್ರಾಯ ಪಡೆದು ನಿಯಮದ ಪ್ರಕಾರ ಕ್ರಮ ತೆಗೆದುಕೊಳ್ತೀನಿ ಅಂತ ತಿಳಿಸಿದ್ದಾರೆ. ಇದನ್ನೂ ಓದಿ:  SKSSF ಅಬುಧಾಬಿ ಕರ್ನಾಟಕ & ಬ್ಲಡ್ ಹೆಲ್ಪ್‌ಲೈನ್ ಕರ್ನಾಟಕ ಆಶ್ರಯದಲ್ಲಿ 4ನೇ ಯಶಸ್ವಿ ರಕ್ತದಾನ ಶಿಬಿರ

  • ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಲಕ್ಷ್ಮೀ ಹೆಬ್ಬಾಳ್ಕರ್ ವಾಗ್ದಾಳಿ

    ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಲಕ್ಷ್ಮೀ ಹೆಬ್ಬಾಳ್ಕರ್ ವಾಗ್ದಾಳಿ

    ಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ (Shalini Rajanish) ಕುರಿತು ಅವಹೇಳನಕಾರಿ ಹೇಳಿಕೆ ಆರೋಪ ಹೊತ್ತಿರುವ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ವಿರುದ್ಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebalkar) ಕಿಡಿಕಾರಿದ್ದಾರೆ.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಬಿಜೆಪಿ (BJP) ನಾಯಕರಿಂದ ಮಹಿಳೆಯರ ನಿಂದನೆ ನಿರಂತರವಾಗಿ ನಡೆಯುತ್ತಿದೆ. ಓರ್ವ ಹಿರಿಯ ಮಹಿಳಾ ಐಎಎಸ್ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರೀತಿ ಬಿಜೆಪಿ ಎಂಎಲ್‌ಸಿ ಅವರ ಮನಸ್ಥಿತಿ ಎಂಥಹದ್ದು ಎಂದು ತೋರಿಸುತ್ತದೆ. ರವಿಕುಮಾರ್ (Ravi Kumar) ಅವರು ಸಮಸ್ತ ಮಹಿಳಾ ಕುಲಕ್ಕೆ ಮಾಡಿರುವ ಅವಮಾನ ಇದಾಗಿದೆ. ರವಿಕುಮಾರ್ ಅವರ ಹೇಳಿಕೆಯನ್ನು ಕೇಂದ್ರ ಬಿಜೆಪಿ ನಾಯಕರು ಸಮರ್ಥಿಸಿಕೊಳ್ಳುವರೇ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಬಾಬಾನಗರದ ಬಳಿ ಹೊಸ ಕೆರೆ ನಿರ್ಮಿಸಲು 550 ಕೋಟಿ ರೂ. ಅನುದಾನಕ್ಕೆ ಎಂ.ಬಿ ಪಾಟೀಲ್ ಮನವಿ

    ಕಳೆದ ಬೆಳಗಾವಿ ಅಧಿವೇಶನದ ವೇಳೆಯಲ್ಲಿ ಸಿಟಿ ರವಿ ಅವರು ನನ್ನ ಬಗ್ಗೆ ಕೆಟ್ಟದಾಗಿ ಮಾತನಾಡಿದಾಗ ಆ ಪಕ್ಷದ ನಾಯಕರು ಒಂದೂ ಮಾತನಾಡಲಿಲ್ಲ. ಇಂತಹ ನಾಯಕರ ಹೇಳಿಕೆಗಳಿಗೆ ಕೇಂದ್ರದ ನಾಯಕರು ಪರೋಕ್ಷ ಬೆಂಬಲ ನೀಡಿದಂತಿದೆ. ಇದು ಬಿಜೆಪಿ ನಾಯಕರು ಮಹಿಳೆಯರಿಗೆ ಕೊಡುವ ಗೌರವ ಎಂತಹದ್ದು ಎಂಬುದನ್ನು ತೋರಿಸುತ್ತದೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಇಂತಹ ಅವಹೇಳನಕಾರಿ ಪದಗಳನ್ನು ಬಳಸುವ ಬಿಜೆಪಿ ನಾಯಕರಿಗೆ ಬುದ್ಧಿ ಭ್ರಮಣೆಯಾಗಿದೆ ಅನಿಸುತ್ತದೆ. ಇನ್ನು ಮುಂದಾದರೂ ಇಂತಹ ಹೇಳಿಕೆಗಳನ್ನು ನೀಡದೇ ಜವಾಬ್ದಾರಿಯಿಂದ ವರ್ತಿಸಲಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಮೀಕ್ಷೆ ಮಾಡದೇ ಜಾತಿಗಣತಿ ಸ್ಟಿಕ್ಕರ್ ಅಂಟಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ ಕೇಸ್ – ಮೂವರು BBMP ನೌಕರರು ಅಮಾನತು

    ಕ್ಷಮೆಯಾಚನೆಗೆ ಪಟ್ಟು
    ಸಾರ್ವಜನಿಕವಾಗಿ ಮಹಿಳಾ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರವಿಕುಮಾರ್ ಅವರು ಕೂಡಲೇ ಕ್ಷಮೆಯಾಚಿಸಬೇಕು. ತಮ್ಮ ತಪ್ಪನ್ನು ಅರಿವು ಮಾಡಿಕೊಂಡು ಕ್ಷಮೆ ಕೇಳಲಿ, ಇಲ್ಲವಾದರೆ ರವಿಕುಮಾರ್ ಅವರು ಸಾರ್ವಜನಿಕರ ಪ್ರತಿಭಟನೆಯನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

  • ವರ್ತಿಕಾ ಕಟಿಯಾರ್ ದೂರು ನೀಡಿದ ಬೆನ್ನಲ್ಲೇ ಐಎಸ್‌ಡಿಯಿಂದ ಡಿ.ರೂಪಾ ವರ್ಗಾವಣೆ

    ವರ್ತಿಕಾ ಕಟಿಯಾರ್ ದೂರು ನೀಡಿದ ಬೆನ್ನಲ್ಲೇ ಐಎಸ್‌ಡಿಯಿಂದ ಡಿ.ರೂಪಾ ವರ್ಗಾವಣೆ

    ಬೆಂಗಳೂರು: ಇತ್ತೀಚಿಗಷ್ಟೇ ಡಿ.ರೂಪಾ ವಿರುದ್ಧ ವರ್ತಿಕಾ ಕಟಿಯಾರ್ ಸಿಎಸ್‌ಗೆ ದೂರು ನೀಡಿದ್ದರು. ದೂರು ನೀಡಿದ ಬೆನ್ನಲ್ಲೇ ಇದೀಗ ಐಜಿಪಿ ಡಿ.ರೂಪಾರನ್ನು ಐಎಸ್‌ಡಿಯಿಂದ ವರ್ಗಾವಣೆ ಮಾಡಿದೆ.

    ರಾಜ್ಯದಲ್ಲಿ ಇಬ್ಬರು ಐಪಿಎಸ್ ಅಧಿಕಾರಿಗಳ ಸಂಘರ್ಷ ಸರ್ಕಾರಕ್ಕೆ ಮುಜುಗರ ಉಂಟು ಮಾಡಿತ್ತು. ಫ್ರೆ.೨೦ ರಂದು ವರ್ತಿಕಾ ಕಟಿಯಾರ್ ೨೦೦೦ನೇ ಬ್ಯಾಚ್‌ನ ಅಧಿಕಾರಿಯಾಗಿರುವ ಡಿ.ರೂಪಾ ವಿರುದ್ಧ ಸಿಎಸ್‌ಗೆ ದೂರು ನೀಡಿದ್ದರು. ಕಳೆದ ವರ್ಷದ ಸೆ.೬ರಂದು ತಮ್ಮ ಅನುಮತಿಯಿಲ್ಲದೇ ಚೇಂಬರ್‌ನಿಂದ ಮಹತ್ವದ ಕಡತಗಳನ್ನು ಪೊಲೀಸ್ ಸಿಬ್ಬಂದಿಯಿಂದ ಡಿ. ರೂಪಾ ತರಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು. ಎರಡು ದಿನಗಳ ಹಿಂದೆಯಷ್ಟೇ ವರ್ತಿಕಾ ಕಟಿಯಾರ್‌ನ್ನು ಗೃಹರಕ್ಷಕ ಮತ್ತು ಪೌರ ರಕ್ಷಣಾ ದಳದ ಡಿಐಜಿ ಹುದ್ದೆಗೆ ಸರ್ಕಾರ ವರ್ಗಾವಣೆ ಮಾಡಿತ್ತು. ಅದರ ಬೆನ್ನಲ್ಲೇ ಇದೀಗ ಡಿ.ರೂಪಾರನ್ನು ಐಎಸ್‌ಡಿಯಿಂದ ಕರ್ನಾಟಕ ಸಿಲ್ಕ್‌ ಬೋರ್ಡ್‌ ಎಂಡಿ ಹುದ್ದೆಗೆ ವರ್ಗ ಮಾಡಿದೆ.ಇದನ್ನೂ ಓದಿ: ಐಜಿಪಿ ರೂಪಾ ವಿರುದ್ಧ ಸಿಎಸ್‌ಗೆ ಡಿಐಜಿ ವರ್ತಿಕಾ ಕಟಿಯಾರ್ ದೂರು

    ಈ ಹಿಂದೆ ಹಿರಿಯ ಅಧಿಕಾರಿಗಳ ಮುಂದೆಯೇ ಸಭೆ ಕೊಠಡಿಯಲ್ಲಿ ಗಲಾಟೆ ಮಾಡಿಕೊಂಡಿದ್ದ ಐಎಸ್‌ಡಿ ಐಜಿಪಿ ರೂಪಾ ಮೌದ್ಗಿಲ್ ಮತ್ತು ಡಿಐಜಿ ವರ್ತಿಕಾ ಕಟಿಯಾರ್ ಸುದ್ದಿ ಆಗಿದ್ರು. ಇತ್ತೀಚಿಗಷ್ಟೇ ಒಂದು ಹಂತ ಮುಂದೆ ಹೋಗಿ ಐಜಿಪಿ ರೂಪಾ ವಿರುದ್ಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ವರ್ತಿಕಾ ಕಟಿಯಾರ್ ದೂರು ನೀಡಿದ್ದರು.

    ರೂಪಾ ಅವರು ನನ್ನ ಕೊಠಡಿಯಲ್ಲಿ ಕೆಳಹಂತದ ಸಿಬ್ಬಂದಿ ಬಳಸಿಕೊಂಡು ದಾಖಲೆಗಳನ್ನು ಇರಿಸಿದ್ದಾರೆ. ಅಲ್ಲದೇ ಆ ದಾಖಲೆಗಳನ್ನು ಬಳಸಿ ನನ್ನ ವಿರುದ್ಧ ಷಡ್ಯಂತ್ರ ಹೇರುವ ಸಾಧ್ಯತೆ ಇದೆ ಎಂದು ವರ್ತಿಕಾ ಕಟಿಯಾರ್ ದೂರಿದ್ದರು.ಇದನ್ನೂ ಓದಿ: ಭಾರತಕ್ಕೂ ತೆರಿಗೆ ಶಾಕ್‌ – ಪ್ರತಿ ಸುಂಕದ ಘೋಷಣೆ ಮಾಡಿದ ಟ್ರಂಪ್

  • ಐಜಿಪಿ ರೂಪಾ ವಿರುದ್ಧ ಸಿಎಸ್‌ಗೆ ಡಿಐಜಿ ವರ್ತಿಕಾ ಕಟಿಯಾರ್ ದೂರು

    ಐಜಿಪಿ ರೂಪಾ ವಿರುದ್ಧ ಸಿಎಸ್‌ಗೆ ಡಿಐಜಿ ವರ್ತಿಕಾ ಕಟಿಯಾರ್ ದೂರು

    ಬೆಂಗಳೂರು: ಪೊಲೀಸ್ ಇಲಾಖೆ ಶಿಸ್ತಿನ ಇಲಾಖೆ. ಈ ಶಿಸ್ತಿನ ಇಲಾಖೆಯಲ್ಲಿ ಮಹಿಳಾ ಅಧಿಕಾರಿಗಳ ಜಟಾಪಟಿ ಮುಗಿಯೋ ಲಕ್ಷಣಗಳೇ ಕಾಣುತ್ತಿಲ್ಲದಂತಾಗಿದೆ. ಐಪಿಎಸ್‌ ಅಧಿಕಾರಿ‌ ರೂಪಾ (Roopa Moudgil) ವಿರುದ್ಧ ಮತ್ತೋರ್ವ ಮಹಿಳಾ ಅಧಿಕಾರಿ ದೂರು ನೀಡಿರುವುದು ಇದಕ್ಕೆ ಸಾಕ್ಷಿಯಾಗಿದೆ.

    ಈ ಹಿಂದೆ ಹಿರಿಯ ಅಧಿಕಾರಿಗಳ ಮುಂದೆಯೇ ಸಭೆ ಕೊಠಡಿಯಲ್ಲಿ ಗಲಾಟೆ ಮಾಡಿಕೊಂಡಿದ್ದ ಐಎಸ್‌ಡಿ ಐಜಿಪಿ ರೂಪಾ ಮೌದ್ಗಿಲ್‌ ಮತ್ತು ಡಿಐಜಿ ವರ್ತಿಕಾ ಕಟಿಯಾರ್ (Vartika Katiyar) ಸುದ್ದಿ ಆಗಿದ್ರು. ಈಗ ಒಂದು ಹಂತ ಮುಂದೆ ಹೋಗಿದ್ದು ಐಜಿಪಿ ರೂಪಾ ವಿರುದ್ಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ವರ್ತಿಕಾ ಕಟಿಯಾರ್ ದೂರು ನೀಡಿದ್ದಾರೆ. ಇದನ್ನೂ ಓದಿ: ಆಸ್ತಿ ತೆರಿಗೆ ಬಾಕಿ – ವಿಧಾನಸೌಧ, ರಾಜಭವನ ಸೇರಿ 258 ಸರ್ಕಾರಿ ಕಟ್ಟಡಗಳಿಗೆ ಬಿಬಿಎಂಪಿ ನೋಟೀಸ್

    ರೂಪಾ ಅವರು ನನ್ನ ಕೊಠಡಿಯಲ್ಲಿ ಕೆಳಹಂತದ ಸಿಬ್ಬಂದಿ ಬಳಸಿಕೊಂಡು ದಾಖಲೆಗಳನ್ನು ಇರಿಸಿದ್ದಾರೆ. ಅಲ್ಲದೇ  ಆ ದಾಖಲೆಗಳನ್ನು ಬಳಸಿ  ನನ್ನ ವಿರುದ್ಧ ಷಡ್ಯಂತ್ರ ಹೇರುವ ಸಾಧ್ಯತೆ ಇದೆ ಎಂದು ವರ್ತಿಕಾ ಕಟಿಯಾರ್ ದೂರಿದ್ದಾರೆ. ಇದನ್ನೂ ಓದಿ: ಹೃದಯಾಘಾತದಿಂದ ಕಾರಿನಲ್ಲೇ ವ್ಯಕ್ತಿ ಸಾವು – ಕೈ ಮೇಲೆ ಗಾಯ ನೋಡಿ ಅನುಮಾನ ವ್ಯಕ್ತಪಡಿಸಿದ ಕುಟುಂಬಸ್ಥರು

    ವರ್ತಿಕಾ ಕಟಿಯಾರ್ ದೂರಿನಲ್ಲಿ ಏನಿದೆ?
    ಸದ್ಯ ರೂಪಾ ವಿರುದ್ಧ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ವರ್ತಿಕಾ ಕಟಿಯಾರ್ ದೂರು ನೀಡಿದ್ದಾರೆ. ಕೆಳಹಂತದ ಮೂವರು ಅಧಿಕಾರಿಗಳನ್ನ (ಮಲ್ಲಿಕಾರ್ಜುನ್, ಮಂಜುನಾಥ್ ಮತ್ತು ಕಿರಣ್) ಬಳಸಿ ದಾಖಲೆಗಳನ್ನು ನನ್ನ ಕೊಠಡಿಯಲ್ಲಿ ಇರಿಸಿದ್ದಾರೆ.  ವಾಟ್ಸಪ್‌ ಮೂಲಕ ಫೋಟೋ ತೆಗೆಸಿದ್ದಾರೆ. ಕಂಟ್ರೋಲ್‌ ರೂಮ್‌ನಿಂದ ಕೀ ತಂದು ಕೊಠಡಿ ತೆರೆಯಲಾಗಿದೆ. ದುರುದ್ದೇಶದಿಂದ ಫೋಟೋ ತೆಗೆಸಲಾಗಿದ್ದು, ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ ಎಂದು ವರ್ತಿಕಾ ಕಟಿಯಾರ್‌ ಆರೋಪಿಸಿದ್ದಾರೆ. ಇದನ್ನೂ ಓದಿ: ವರ್ಷದ ಪ್ರಯತ್ನದ ಫಲ, `ಕಾಜೂರು ಕರ್ಣ’ ಸೆರೆ – ರೈತರ ಗುಂಡಿನ ದಾಳಿಯಿಂದ ಆನೆ ನರಳಾಟ

  • ರಾಷ್ಟ್ರೀಯ ಮತದಾರರ ದಿನದ ಪ್ರತಿಜ್ಞಾ ವಿಧಿ ಬೋಧಿಸಿದ ಡಾ.ಶಾಲಿನಿ ರಜನೀಶ್

    ರಾಷ್ಟ್ರೀಯ ಮತದಾರರ ದಿನದ ಪ್ರತಿಜ್ಞಾ ವಿಧಿ ಬೋಧಿಸಿದ ಡಾ.ಶಾಲಿನಿ ರಜನೀಶ್

    ಬೆಂಗಳೂರು: ರಾಷ್ಟ್ರೀಯ ಮತದಾರರ ದಿನದ ಅಂಗವಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.ಇದನ್ನೂ ಓದಿ: ಮರಕ್ಕೆ ಕಾರು ಡಿಕ್ಕಿ – ಸ್ಥಳದಲ್ಲೇ ಮೂವರು ಸಾವು

    ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವಾಲಯದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರಿಗೆ ರಾಷ್ಟ್ರೀಯ ಮತದಾರರ ದಿನದ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

    ಈ ಸಂದರ್ಭದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸತ್ಯವತಿ ಸೇರಿದಂತೆ ಇತರೆ ಇಲಾಖೆಗಳ ಉನ್ನತ ಅಧಿಕಾರಿಗಳು, ಸಚಿವಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.ಇದನ್ನೂ ಓದಿ: ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಕಠಿಣ ಕಾನೂನು ಜಾರಿ: ಪರಮೇಶ್ವರ್