Tag: ಶಾಲೆ

  • Kolar | ಶಾಲೆಗೆ ಹೋದ ವಿದ್ಯಾರ್ಥಿನಿಯರು ನಾಪತ್ತೆ

    Kolar | ಶಾಲೆಗೆ ಹೋದ ವಿದ್ಯಾರ್ಥಿನಿಯರು ನಾಪತ್ತೆ

    ಕೋಲಾರ: ಶಾಲೆಗೆಂದು (School) ಹೋದ ಇಬ್ಬರು ವಿದ್ಯಾರ್ಥಿನಿಯರು (Students) ನಾಪತ್ತೆಯಾಗಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.

    ನರಸಾಪುರ ಗ್ರಾಮದ ಶರಣ್ಯ ಹಾಗೂ ದೇವಿ ನಾಪತ್ತೆಯಾದ ವಿದ್ಯಾರ್ಥಿನಿತರು. ಶುಕ್ರವಾರ ಬೆಳಗ್ಗೆ ಶಾಲೆಗೆಂದು ಹೋದ ಇಬ್ಬರು ವಿದ್ಯಾರ್ಥಿಗಳು ಇದುವರೆಗೂ ಪತ್ತೆಯಾಗಿಲ್ಲ. ಇತ್ತ ಶಾಲೆಗೂ ಹೋಗದೆ ಮನೆಗೂ ಬಾರದೆ ಕಣ್ಮರೆಯಾಗಿರುವುದು ಪೋಷಕರಲ್ಲಿ ಆತಂಕ ಮೂಡಿಸಿದೆ. ಇನ್ನೂ ಬೆಳಗ್ಗೆ ಶಾಲೆಗೆ ಹೋದವರು ರಾತ್ರಿಯಾದರೂ ಮನೆಗೆ ಬಾರದ ಹಿನ್ನೆಲೆ ಆತಂಕಗೊಂಡ ಪೋಷಕರು ಶುಕ್ರವಾರ ಇಡೀ ದಿನ ಮಕ್ಕಳಿಗಾಗಿ ಹುಡಕಾಟ ನಡೆಸಿದ್ದಾರೆ. ಇದನ್ನೂ ಓದಿ: ಸ್ನೇಹಿತೆಯ ಖಾಸಗಿ ವೀಡಿಯೋ ಕದ್ದು ಹಂಚಿ ಬ್ಲ್ಯಾಕ್‌ಮೇಲ್‌ ಆರೋಪ; ಕಿರುತೆರೆ ನಟಿ ವಿರುದ್ಧ FIR

    ರಾತ್ರಿಯಾದರೂ ಮನೆಗೆ ಬಾರದ ಹಿನ್ನೆಲೆ ಮಕ್ಕಳನ್ನ ಹುಡುಕಿಕೊಡಿ ಎಂದು ಕೋಲಾರದ ಮಹಿಳಾ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಇನ್ನೂ ಇಬ್ಬರು ವಿದ್ಯಾರ್ಥಿನಿಯರು ಹತ್ತನೇ ತರಗತಿ ಓದುತ್ತಿದ್ದು, ಎಲ್ಲಿಗೆ ಹೋಗಿದ್ದಾರೆ ಅನ್ನೋ ಮಾಹಿತಿ 24 ಗಂಟೆಯಾದರೂ ಇನ್ನೂ ಲಭ್ಯವಾಗಿಲ್ಲ. ಹೀಗಾಗಿ ಪೋಷಕರು ಹಾಗೂ ಪೊಲೀಸರು ತೀವ್ರ ಹುಡುಕಾಟ ಆರಂಭಿಸಿದ್ದಾರೆ. ಇದನ್ನೂ ಓದಿ: Mysuru | ಬಾತ್‌ರೂಂನಲ್ಲಿ ಗ್ಯಾಸ್ ಗೀಸರ್ ಸೋರಿಕೆ; ಉಸಿರುಗಟ್ಟಿ ಅಕ್ಕ-ತಂಗಿ ಸಾವು

  • 7 ವರ್ಷದ ಬಾಲಕನ ಮೇಲೆ ಶಿಕ್ಷಕಿಯಿಂದ ಇದೆಂಥಾ ಕ್ರೌರ್ಯ – ಹೋಂ ವರ್ಕ್‌ ಮಾಡದಿದ್ದಕ್ಕೆ ತಲೆ ಕೆಳಗಾಗಿ ನೇತುಹಾಕಿ ಹಿಂಸೆ

    7 ವರ್ಷದ ಬಾಲಕನ ಮೇಲೆ ಶಿಕ್ಷಕಿಯಿಂದ ಇದೆಂಥಾ ಕ್ರೌರ್ಯ – ಹೋಂ ವರ್ಕ್‌ ಮಾಡದಿದ್ದಕ್ಕೆ ತಲೆ ಕೆಳಗಾಗಿ ನೇತುಹಾಕಿ ಹಿಂಸೆ

    ಚಂಡೀಗಢ: ಯಾವುದೇ ಒಬ್ಬ ವಿದ್ಯಾರ್ಥಿ ತನ್ನ ಗುರಿ ತಲುಪಬೇಕಾದ್ರೆ ಹಿಂದೆ ಶಿಕ್ಷಕರೊಬ್ಬರು ಇರಲೇಬೇಕು. ವಿದ್ಯಾರ್ಥಿಗಳ ತಪ್ಪುಗಳನ್ನು ತಿದ್ದುತ್ತಾ, ಜೀವನಕ್ಕೆ ದಾರಿ ದೀಪವಾಗಬೇಕಿರುವುದು ಶಿಕ್ಷಕರು (Teachers). ಆದ್ರೆ ಇಲ್ಲೊಬ್ಬಳು ಶಿಕ್ಷಕಿ ಅದಕ್ಕೆ ವ್ಯತಿರಿಕ್ತವಾಗಿದ್ದಾಳೆ. ವಿದ್ಯಾರ್ಥಿ ಹೋಂ ವರ್ಕ್‌ ಮಾಡಿಲ್ಲ ಅನ್ನೋ ಕಾರಣಕ್ಕೆ ಆತನ ಕೈಕಾಲು ಕಟ್ಟಿ, ತಲೆಕೆಳಗಾಗಿ ನೇತು ಹಾಕಿ ಹಿಂಸೆ ನೀಡಿ ಕ್ರೌರ್ಯ ಮೆರೆದಿದ್ದಾಳೆ.

    ಹೌದು. ಹರಿಯಾಣದ (Haryana) ಪಾಣಿಪತ್‌ನ ಶ್ರೀಜನ್ ಪಬ್ಲಿಕ್ ಶಾಲೆಯಲ್ಲಿ (Srijan Public School) ಈ ಘಟನೆ ನಡೆದಿದೆ. ವಿದ್ಯಾರ್ಥಿ ಹೋಂ ವರ್ಕ್‌ ಮಾಡಿಲ್ಲ ಅಂತ ಶಿಕ್ಷಕಿಯೊಬ್ಬಳು ಆತನ ಕೈಕಾಲು ಕಟ್ಟಿ, ತಲೆಕೆಳಗಾಗಿಸಿ ನೇತುಹಾಕಿದ್ದಾಳೆ, ವಿದ್ಯಾರ್ಥಿಯನ್ನ ಚೆನ್ನಾಗಿ ಥಳಿಸಿದ್ದಾಳೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಹಿಟ್ ಅಂಡ್‌ ರನ್‌ಗೆ ಬಿ.ಕಾಂ ಪದವೀಧರೆ ಬಲಿ

    ಆಗಸ್ಟ್‌ 13ರಂದು ನಡೆದಿದ್ದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಶಾಲಾ ಆಡಳಿಯ ಮಂಡಳಿಗೆ ಈ ವಿಷಯ ತಿಳಿದಿದ್ದೂ ಮುಚ್ಚಿಟ್ಟಿದ್ದರು. ಆದ್ರೆ ಹಲ್ಲೆ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆದಮೇಲೆ ವಿಷಯ ಗೊತ್ತಾಗಿದೆ.

    ವಿಡಿಯೋ ಆಧರಿಸಿ ಮಾಡೆಲ್‌ ಪೊಲೀಸ್‌ ಠಾಣೆಗೆ ಪೋಷಕರು ದೂರು ನೀಡಿದ್ದಾರೆ. ದೂರು ನೀಡುತ್ತಿದ್ದಂತೆ ಶಿಕ್ಷಕಿ ಕಡೆಯವರು ಎನ್ನಲಾದ ಕೆಲವರು ಪೋಷಕರಿಗೆ ದೂರು ಹಿಂಪಡೆಯುವಂತೆ ಬೆದರಿಕೆ ಹಾಕಿದ್ದಾರೆಂದು ತಿಳಿದುಬಂದಿದೆ. ಇದನ್ನೂ ಓದಿ: TVK Vijay Rally Stampede | ಮದ್ರಾಸ್‌ ಹೈಕೋರ್ಟ್‌ನಲ್ಲಿಂದು ವಿಚಾರಣೆ – ಸಾವಿನ ಸಂಖ್ಯೆ 41ಕ್ಕೆ ಏರಿಕೆ

    ಮತ್ತೊಂದು ವಿಡಿಯೋ ವೈರಲ್‌
    ಇನ್ನೂ ಅದೇ ಶಾಲೆಯಲ್ಲಿ ಇತರ ಮಕ್ಕಳನ್ನು ಥಳಿಸುತ್ತಿರುವ ಇನ್ನೊಂದು ವಿಡಿಯೋ ಸಹ ವೈರಲ್ ಆಗಿದೆ. ಆ ವಿಡಿಯೋದಲ್ಲಿ ಒಬ್ಬ ಶಿಕ್ಷಕಿ ಮಗುವನ್ನ ಹೊಡೆಯುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಸತತ ಒಂಬತ್ತು ಬಾರಿ ಮಗುವಿಗೆ ಕಪಾಳಮೋಕ್ಷ ಮಾಡುತ್ತಿದ್ದಾಳೆ. ವಿಡಿಯೋಗಳನ್ನ ವಶಕ್ಕೆ ಪಡೆದು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಲ್ಲದೇ ಚಾಲಕನ ಕೈಯಿಂದಲೂ ಥಳಿಸಿದ್ದಳು ಎನ್ನಲಾಗಿ ಕಾಲೇಜು ಪ್ರಾಂಶುಪಾಲರು ಹಾಗೂ ಬಸ್‌ ಚಾಲಕನನ್ನ ಬಂಧಿಸಲಾಗಿದೆ.

  • Andhra Pradesh | ಕುದಿಯುತ್ತಿದ್ದ ಹಾಲಿನ ಪಾತ್ರೆಗೆ ಬಿದ್ದು ಒಂದೂವರೆ ವರ್ಷದ ಮಗು ಸಾವು

    Andhra Pradesh | ಕುದಿಯುತ್ತಿದ್ದ ಹಾಲಿನ ಪಾತ್ರೆಗೆ ಬಿದ್ದು ಒಂದೂವರೆ ವರ್ಷದ ಮಗು ಸಾವು

    ಅಮರಾವತಿ: ಶಾಲೆಯ (School) ಅಡುಗೆಮನೆಯಲ್ಲಿ ಇಟ್ಟಿದ್ದ ಕುದಿಯುತ್ತಿದ್ದ ಹಾಲಿನ ಪಾತ್ರೆಗೆ ಬಿದ್ದು ಒಂದೂವರೆ ವರ್ಷದ ಹೆಣ್ಣು ಮಗು ತೀವ್ರ ಗಾಯಗೊಂಡು ಮೃತಪಟ್ಟಿರುವ ಘಟನೆ ಅನಂತಪುರ (Anantpur) ಜಿಲ್ಲೆಯ ಬುಕ್ಕರಾಯಸಮುದ್ರಂ (Bukkarayasamudram) ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಅಂಬೇಡ್ಕರ್ ಗುರುಕುಲ ಶಾಲೆಯಲ್ಲಿ ಘಟನೆ ಸಂಭವಿಸಿದ್ದು, ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ. ಅಕ್ಷಿತಾ ಮೃತ ಮಗು. ಮಗುವಿನ ತಾಯಿ ಕೃಷ್ಣವೇಣಿ ಶಾಲೆಯೊಂದರಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ವಿದ್ಯಾರ್ಥಿಗಳಿಗೆ ವಿತರಿಸಲು ಸಿದ್ಧಪಡಿಸಿದ್ಧ ಬಿಸಿ ಹಾಲನ್ನು ತಣ್ಣಗಾಗಿಸಲು ಸೀಲಿಂಗ್ ಫ್ಯಾನ್ ಅಡಿಯಲ್ಲಿ ಇಡಲಾಗಿತ್ತು. ತಾಯಿ ಅಡುಗೆಮನೆಯಲ್ಲಿ ಇಲ್ಲದ ವೇಳೆ ಬೆಕ್ಕನ್ನು ಹಿಂಬಾಲಿಸಿಕೊಡು ಹೋದ ಮಗು ಕುದಿಯುತ್ತಿದ್ದ ಹಾಲಿನ ಪಾತ್ರೆಯೊಳಗೆ ಬಿದ್ದಿದೆ. ಇದನ್ನೂ ಓದಿ: ಮಿಗ್ -21 ತ್ರಿವರ್ಣ ಧ್ವಜದ ಗೌರವ ಹೆಚ್ಚಿಸಿದೆ: ರಾಜನಾಥ್ ಸಿಂಗ್

    ಬಿಸಿ ಹಾಲಿನ ಪಾತ್ರೆಗೆ ಬಿದ್ದ ಪರಿಣಾಮ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು. ಮಗುವಿನ ಕಿರುಚಾಟ ಕೇಳಿದ ತಾಯಿ ಕೃಷ್ಣವೇಣಿ, ಕೂಡಲೇ ಮಗುವನ್ನು ಪಾತ್ರೆಯಿಂದ ಹೊರತೆಗೆದು ಅನಂತಪುರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ವೈದ್ಯರ ಶಿಫಾರಸಿನ ಮೇರೆಗೆ, ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಕರ್ನೂಲ್ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಗು ಸಾವನ್ನಪ್ಪಿದೆ. ಇದನ್ನೂ ಓದಿ: ಲಡಾಖ್‌ ಹಿಂಸಾಚಾರಕ್ಕೆ ಪ್ರಚೋದನೆ – ಪರಿಸರ ಕಾರ್ಯಕರ್ತ ಸೋನಮ್‌ ವಾಂಗ್‌ಚುಕ್‌ ಅರೆಸ್ಟ್‌

  • ದೆಹಲಿಯ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ – ಬಾಂಬ್ ಸ್ಕ್ವಾಡ್‌ನಿಂದ ಪರಿಶೀಲನೆ

    ದೆಹಲಿಯ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ – ಬಾಂಬ್ ಸ್ಕ್ವಾಡ್‌ನಿಂದ ಪರಿಶೀಲನೆ

    ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ (Delhi) ಹಲವು ಶಾಲೆಗಳಿಗೆ ಶನಿವಾರ ಮುಂಜಾನೆ ಬಾಂಬ್ ಬೆದರಿಕೆ (Bomb Threat) ಕರೆಗಳು ಬಂದಿದ್ದು, ಪೊಲೀಸ್ ತಂಡ ಮತ್ತು ಬಾಂಬ್ ನಿಷ್ಕ್ರಿಯ ದಳ (Bomb Disposal Squads) ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯ ನಡೆಸುತ್ತಿವೆ.

    ದ್ವಾರಕಾದ ದೆಹಲಿ ಪಬ್ಲಿಕ್ ಸ್ಕೂಲ್, ಕೃಷ್ಣ ಮಾಡೆಲ್ ಪಬ್ಲಿಕ್ ಸ್ಕೂಲ್, ಸರ್ವೋದಯ ವಿದ್ಯಾಲಯ ಸೇರಿದಂತೆ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಪೊಲೀಸ್ ತಂಡ ಹಾಗೂ ಬಾಂಬ್ ನಿಷ್ಕ್ರಿಯ ದಳ ಮುನ್ನೆಚ್ಚರಿಕಾ ಕ್ರಮವಾಗಿ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯನ್ನು ಸ್ಥಳಾಂತರಿಸಿತು. ಇದನ್ನೂ ಓದಿ: ಜಾತಿ ಕಾಲಂನಲ್ಲಿ ಕುರುಬ ಕ್ರಿಶ್ಚಿಯನ್, ಲಿಂಗಾಯತ ಕ್ರಿಶ್ಚಿಯನ್ ಬಗ್ಗೆ ಸಿಎಂ ಬಳಿ ಕೇಳಿದ್ದೇವೆ – ಎಂ.ಬಿ ಪಾಟೀಲ್

    ಬಾಂಬ್ ಬೆದರಿಕೆ ಬಂದಿದ್ದ ಶಾಲೆಗಳ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ನಾವು ಶಾಲೆಗಳ ಆವರಣವನ್ನು ಸಂಪೂರ್ಣವಾಗಿ ಪರಿಶೀಲಿಸಿದ್ದು, ಯಾವುದೇ ಅನುಮಾನಾಸ್ಪದ ರೀತಿಯ ವಸ್ತುಗಳು ಕಂಡುಬಂದಿಲ್ಲ. ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಲೈಂಗಿಕ ಕಿರುಕುಳ, ಕೊಲೆ ಬೆದರಿಕೆ ಸೇರಿ ಸಾಲು ಸಾಲು ಆರೋಪ – ಬೇಲೂರು ಶಿಕ್ಷಣಾಧಿಕಾರಿ ಅಮಾನತು

  • ಶಾಲಾ ಕಟ್ಟಡದಲ್ಲಿ ಬಿರುಕು, ಉದುರುತ್ತಿರುವ ಮೇಲ್ಛಾವಣಿ; ಅವ್ಯವಸ್ಥೆ ಸರಿಪಡಿಸುವಂತೆ ಸಿಎಂಗೆ ಮಕ್ಕಳ ಮನವಿ

    ಶಾಲಾ ಕಟ್ಟಡದಲ್ಲಿ ಬಿರುಕು, ಉದುರುತ್ತಿರುವ ಮೇಲ್ಛಾವಣಿ; ಅವ್ಯವಸ್ಥೆ ಸರಿಪಡಿಸುವಂತೆ ಸಿಎಂಗೆ ಮಕ್ಕಳ ಮನವಿ

    ಚಾಮರಾಜನಗರ: ಸರ್ಕಾರಿ ಶಾಲಾ ಕಟ್ಟಡ ಬಿರುಕು ಬಿಟ್ಟಿದ್ದು, ಮೇಲ್ಛಾವಣಿ ಸೀಲಿಂಗ್ ಉದುರುತ್ತಿದೆ. ಇದು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಅಂಚಿಪಾಳ್ಯ ಕಿರಿಯ ಪ್ರಾಥಮಿಕ ಶಾಲೆಯ ದುಸ್ಥಿತಿಯಾಗಿದೆ.

    ಮಳೆ ಬಂದರೆ ಕೊಠಡಿಗಳು ಸೋರುತ್ತಿವೆ. ಶೌಚಾಲಯ ವ್ಯವಸ್ಥೆ ಇಲ್ಲ, ಪೀಠೋಪಕರಣಗಳಿಲ್ಲ, ಆಟವಾಡಲು ಮೈದಾನ ಇಲ್ಲ. ಅವ್ಯವಸ್ಥೆಯಿಂದ ಶಾಲಾ ಮಕ್ಕಳು ಕೂಡ ಬೇಸತ್ತು ಹೋಗಿದ್ದಾರೆ. ಶಾಲಾ ಕಟ್ಟಡ ದುರಸ್ತಿಪಡಿಸಿಕೊಡುವಂತೆ ಸಿಎಂ ಸಿದ್ದರಾಮಯ್ಯಗೆ ವಿದ್ಯಾರ್ಥಿಗಳು ಮೊರೆ ಇಟ್ಟಿದ್ದಾರೆ.

    ಹಲವು ಬಾರಿ ದೂರು ನೀಡಿದರು ಕೂಡ ಶಿಕ್ಷಣಾಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ. ಶಿಕ್ಷಣ ಇಲಾಖೆ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಶಾಲೆಯಲ್ಲೇ ಹಿರಿಯ ವಿದ್ಯಾರ್ಥಿಗೆ ಚಾಕು ಇರಿತ – ಚಿಕಿತ್ಸೆ ಫಲಿಸದೇ ಬಾಲಕ ಸಾವು

    ಶಾಲೆಯಲ್ಲೇ ಹಿರಿಯ ವಿದ್ಯಾರ್ಥಿಗೆ ಚಾಕು ಇರಿತ – ಚಿಕಿತ್ಸೆ ಫಲಿಸದೇ ಬಾಲಕ ಸಾವು

    ಅಹಮದಾಬಾದ್‌: ಶಾಲೆಯಲ್ಲಿ (School) ಜಗಳ ನಡೆಯುವ ವೇಳೆ ಸಹಪಾಠಿಯಿಂದ ಚೂರಿ ಇರಿತಕ್ಕೆ ಒಳಗಾದ ವಿದ್ಯಾರ್ಥಿ (Student) ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.

    ಅಹಮದಾಬಾದ್‌ನ ಸೆವೆಂತ್-ಡೇ ಅಡ್ವೆಂಟಿಸ್ಟ್ ಶಾಲೆಯಲ್ಲಿ (Ahmedabad School Stabbing) ಮಂಗಳವಾರ 8ನೇ ತರಗತಿಯ ವಿದ್ಯಾರ್ಥಿ ಜೊತೆ 10ನೇ ತರಗತಿಯ ವಿದ್ಯಾರ್ಥಿಗೆ ಜಗಳ ನಡೆದಿತ್ತು. ಈ ವೇಳೆ 8ನೇ ತರಗತಿ ವಿದ್ಯಾರ್ಥಿ ಹಿರಿಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದಿದ್ದ.

    ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಈ ವಿಚಾರ ತಿಳಿದು ಮಕ್ಕಳ ಪೋಷಕರು ಶಾಲೆಗೆ ನುಗ್ಗಿ ಭಾರೀ ಪ್ರತಿಭಟನೆ ನಡೆಸಿದ್ದಾರೆ.  ಇದನ್ನೂ ಓದಿ: 12 ದಿನಗಳ ಹಿಂದೆ ರೈಲಿನಲ್ಲಿ ನಾಪತ್ತೆಯಾಗಿದ್ದ ಹೈಕೋರ್ಟ್‌ ತರಬೇತಿ ವಕೀಲೆ ನೇಪಾಳ ಗಡಿಯಲ್ಲಿ ಪತ್ತೆ!

    ಬಾಲಕ ಕುಟುಂಬಸ್ಥರು, ಸಿಂಧಿ ಸಮುದಾಯದ ಸದಸ್ಯರು ಮತ್ತು ಇತರ ಪೋಷಕರು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಕೊಲೆ ಮಾಡಿದ ಬಾಲಕ ಮುಸ್ಲಿಮ್‌ ಧರ್ಮಕ್ಕೆ ಸೇರಿದ್ದರೆ ಕೊಲೆಯಾದ ವಿದ್ಯಾರ್ಥಿ ಹಿಂದೂ ಧರ್ಮಕ್ಕೆ ಸೇರಿದ್ದರಿಂದ ಪ್ರತಿಭಟನೆ ಜೋರಾಗಿದೆ. ಪ್ರತಿಭಟನಾಕಾರರು ಶಾಲೆಗೆ ನುಗ್ಗಿ ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದಾರೆ. ಈಗ ಪೋಷಕರ ಜೊತೆ ಹಿಂದೂ ಸಂಘಟನೆಗಳು ಶಾಲೆಯ ಪ್ರಿನ್ಸಿಪಾಲ್‌ ಮತ್ತು ಆಡಳಿತ ಮಂಡಳಿಯ ವಿರುದ್ಧ ದೂರು ನೀಡಿವೆ.

    ಜಂಟಿ ಪೊಲೀಸ್ ಆಯುಕ್ತ ಜೈಪಾಲ್ ಸಿಂಗ್ ರಾಥೋಡ್ ಪ್ರತಿಕ್ರಿಯಿಸಿ, ಪೊಲೀಸರು ನಿನ್ನೆಯೇ ಎಫ್‌ಐಆರ್ ದಾಖಲಿಸಿದ್ದು ಆರೋಪಿಯನ್ನು ಬಂಧಿಸಲಾಗಿದೆ. ಚಿಕಿತ್ಸೆಯ ಸಮಯದಲ್ಲಿ, ಗಾಯಗೊಂಡಿದ್ದ ಬಾಲಕ ಮೃತಪಟ್ಟಿದ್ದಾನೆ. ನಂತರ ಮೃತನ ಕುಟುಂಬ, ಇತರ ವಿದ್ಯಾಳ ಪೋಷಕರು ಮತ್ತು ಸಿಂಧಿ ಸಮುದಾಯದ ಸದಸ್ಯರು ಒಟ್ಟುಗೂಡಿದ್ದಾರೆ. ಸಾಕಷ್ಟು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು.

  • ಕಾಫಿನಾಡಲ್ಲಿ ಮಳೆ ಅಬ್ಬರ – 5 ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

    ಕಾಫಿನಾಡಲ್ಲಿ ಮಳೆ ಅಬ್ಬರ – 5 ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

    ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ (Chikkamagaluru) ಮಳೆಯ ಆರ್ಭಟ ಮುಂದುವರೆದಿದೆ. ಕಳೆದ 2-3 ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ (Rain) ಜನಜೀವನ ಅಸ್ತವ್ಯಸ್ತಗೊಂಡಿದೆ. ಮಲೆನಾಡು ಭಾಗದಲ್ಲಿ ಮಳೆ ಹೆಚ್ಚಾಗಿರುವ ಪರಿಣಾಮ ಮುಂಜಾಗ್ರತಾ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲೆಯ ಐದು ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಇಂದು (ಶನಿವಾರ) ರಜೆ (Holiday) ಘೋಷಿಸಲಾಗಿದೆ.

    ಕೊಪ್ಪ, ಶೃಂಗೇರಿ, ಮೂಡಿಗೆರೆ, ಕಳಸ, ನರಸಿಂಹರಾಜಪುರ ತಾಲೂಕು ಸೇರಿದಂತೆ ಚಿಕ್ಕಮಗಳೂರು ತಾಲೂಕಿನ ಮಲೆನಾಡು ಭಾಗದ ಐದು ಹೋಬಳಿಗಳಾದ ಆವುತಿ, ಜಾಗರ, ವಸ್ತಾರೆ, ಖಾಂಡ್ಯದ ಅಂಗನವಾಡಿ, ಶಿಶುಪಾಲನಾ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಶವಗಳ ಹೂತಿಟ್ಟ ಪ್ರಕರಣ – ಇಂದಿನಿಂದ ಎಸ್‌ಐಟಿ ತನಿಖೆ ಆರಂಭ

    ಇನ್ನು ಚಿಕ್ಕಮಗಳೂರು ತಾಲೂಕಿನ ಮೂಗ್ತಿಹಳ್ಳಿ ಬಳಿ ಶುಕ್ರವಾರ ಬೃಹತ್ ಮರವೊಂದು ರಾಷ್ಟ್ರೀಯ ಹೆದ್ದಾರಿ 173ರಲ್ಲಿ ರಸ್ತೆಗುರುಳಿದ ಪರಿಣಾಮ ಎರಡು ಕಿ.ಮೀ. ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಹಾಗೂ ಪ್ರಯಾಣಿಕರು ಪರದಾಡಿದ್ದಾರೆ. ಮಳೆ ಮಧ್ಯೆ ಮರ ತೆರವು ಕಾರ್ಯಾಚರಣೆಗೆ ಗ್ರಾಮಾಂತರ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಪರದಾಡಿದ್ದಾರೆ. ಬಳಿಕ ಪೊಲೀಸರು ಕಾರು-ಬೈಕ್ ಹೋಗಲು ಅನುವು ಮಾಡಿಕೊಟ್ಟು ಮರ ತೆರವು ಮಾಡಿದ ಬಳಿಕ ಲಾರಿ ಹಾಗೂ ಬಸ್ಸುಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಇದನ್ನೂ ಓದಿ: ಥೈಲ್ಯಾಂಡ್‌ನಲ್ಲಿ ಶೂಟಿಂಗ್‌ ಮುಗಿಸಿ ಬೆಂಗಳೂರಿಗೆ ನಟ ದರ್ಶನ್ ವಾಪಸ್

  • ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್, ಭಾರೀ ಮಳೆ ಸಾಧ್ಯತೆ – ಶುಕ್ರವಾರ ಶಾಲಾ ಕಾಲೇಜುಗಳಿಗೆ ರಜೆ

    ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್, ಭಾರೀ ಮಳೆ ಸಾಧ್ಯತೆ – ಶುಕ್ರವಾರ ಶಾಲಾ ಕಾಲೇಜುಗಳಿಗೆ ರಜೆ

    – ಕೊಡಗಿನಲ್ಲೂ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಿದ್ದು, ಭಾರೀ ಮಳೆಯಾಗುವ (Rain) ಸಾಧ್ಯತೆ ಹಿನ್ನೆಲೆ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಶುಕ್ರವಾರ (ಜು.25) ರಜೆ (Holiday) ಘೋಷಿಸಲಾಗಿದೆ.

    ಅಂಗನವಾಡಿಯಿಂದ ದ್ವಿತೀಯ ಪಿಯುಸಿವರೆಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ, ಅನುದಾನಿತ, ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಏಷ್ಯಾಕಪ್ ಆಯೋಜನೆಗೆ ಬಿಸಿಸಿಐ ಒಪ್ಪಿಗೆ – ಸೆಪ್ಟೆಂಬರ್‌ನಲ್ಲಿ ಭಾರತ, ಪಾಕ್ ಮುಖಾಮುಖಿ?

    AI Generated Image

    ಕೊಡಗು (Kodagu) ಜಿಲ್ಲೆಯಲ್ಲಿ ನಾಳೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ. ಮುನ್ನಚ್ಚೆರಿಕಾ ಕ್ರಮವಾಗಿ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ನಾಳೆ (ಶುಕ್ರವಾರ) ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ಜ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಇದನ್ನೂ ಓದಿ: NFSA ಲಾಭಾರ್ಥಿಗಳ ಮಿತಿ ಹೆಚ್ಚಿಸುವಂತೆ ಕರ್ನಾಟಕ ಸರ್ಕಾರ ಮನವಿ

    ಈ ನಡುವೆ ಜಿಲ್ಲೆಯಲ್ಲಿ ಮಳೆ ಅರ್ಭಟ ಹೆಚ್ಚಾಗುತ್ತಿದ್ದು, ಬೆಟ್ಟಗುಡ್ಡ ಹಾಗೂ ನದಿ ಪಾತ್ರದ ಜನರಲ್ಲಿ ಮತ್ತೆ ಅತಂಕಕ್ಕೆ ಒಳಗಾಗುತ್ತಿದ್ದಾರೆ. ಈ ನಡುವೆ ನಾಳೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ನಂತರ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಇದನ್ನೂ ಓದಿ: ಶಿವನ ದೇವಸ್ಥಾನಕ್ಕಾಗಿ ಥಾಯ್ಲೆಂಡ್, ಕಾಂಬೋಡಿಯಾ ಮಧ್ಯೆ ಗಡಿಯಲ್ಲಿ ಘರ್ಷಣೆ!

  • ಚಾ.ನಗರ ಜಿಲ್ಲೆಯಲ್ಲಿ ಇದೆಂಥಾ ಘಟನೆ?- ಮುಖ್ಯ ಅಡುಗೆ ಸಿಬ್ಬಂದಿಯಾಗಿ ದಲಿತ ಮಹಿಳೆ ನೇಮಕಕ್ಕೆ ಅಸಮಾಧಾನ

    ಚಾ.ನಗರ ಜಿಲ್ಲೆಯಲ್ಲಿ ಇದೆಂಥಾ ಘಟನೆ?- ಮುಖ್ಯ ಅಡುಗೆ ಸಿಬ್ಬಂದಿಯಾಗಿ ದಲಿತ ಮಹಿಳೆ ನೇಮಕಕ್ಕೆ ಅಸಮಾಧಾನ

    – ಮಕ್ಕಳಿಗೆ ಟಿಸಿ ಕೊಡಿಸಿ ಬೇರೆಡೆ ಸೇರಿಸುತ್ತಿರುವ ಪೋಷಕರು
    – ಆ ಶಾಲೆಯಲ್ಲೀಗ ಒಬ್ಬನೇ ವಿದ್ಯಾರ್ಥಿ

    ಚಾಮರಾಜನಗರ: ಜಿಲ್ಲೆಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಮುಖ್ಯ ಅಡುಗೆ ಸಿಬ್ಬಂದಿಯಾಗಿ ದಲಿತ ಮಹಿಳೆ (Dalit Women) ನೇಮಕಕ್ಕೆ ಅಸಮಾಧಾನ ವ್ಯಕ್ತವಾಗಿದೆ.

    ಹೊಮ್ಮ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಪೋಷಕರು ತಮ್ಮ ಮಕ್ಕಳ ಟಿಸಿ ಪಡೆದು ಬೇರೆ ಬೇರೆ ಶಾಲೆಗಳಿಗೆ ಸೇರಿಸುತ್ತಿದ್ದಾರೆ. ಪರಿಣಾಮವಾಗಿ ಶಾಲೆ ಮುಚ್ಚುವ ಹಂತಕ್ಕೆ ತಲುಪಿದೆ. ಇದನ್ನೂ ಓದಿ: `ಕೈ’ ಕಂಪನ ಸಂಕಟ: 2 ವರ್ಷ ಗ್ಯಾರಂಟಿ ಪಿರಿಯೆಡ್, ವೇಯ್ಟಿಂಗ್ ಪಿರಿಯೆಡ್ ಮುಗಿತು, ಇನ್ನೇನಿದ್ರೂ ಫೈಟಿಂಗ್ ಪಿರಿಯೆಡ್!

    ಅಡುಗೆ ಸಿಬ್ಬಂದಿ ದಲಿತ ಮಹಿಳೆ ಎಂಬ ಕಾರಣಕ್ಕೆ ಮಕ್ಕಳ ಟಿಸಿ ಪಡೆದು ಬೇರೆಡೆ ಸೇರಿಸುತ್ತಿದ್ದಾರೆಂದು ಸ್ಥಳೀಯರು ಆರೋಪಿಸಿದ್ದಾರೆ. ಆದರೆ, ಈ ಬಗ್ಗೆ ಪ್ರತಿಕ್ರಿಯಿಸಲು ಪೋಷಕರ ನಿರಾಕರಿಸಿದ್ದಾರೆ. ಸದ್ಯ ಶಾಲೆಗೆ ಒಬ್ಬ ವಿದ್ಯಾರ್ಥಿ ಮಾತ್ರ ದಾಖಲಾಗಿದ್ದಾನೆ.

    2024-25 ನೇ ಸಾಲಿನಲ್ಲಿ ಶಾಲೆಯಲ್ಲಿ 22 ವಿದ್ಯಾರ್ಥಿಗಳಿದ್ದರು. ಈಗಾಗಲೇ 12 ಮಕ್ಕಳು ಟಿಸಿ ಪಡೆದಿದ್ದಾರೆ. ಉಳಿದವರಿಂದಲೂ ಟಿಸಿ ಪಡೆಯಲು ಅರ್ಜಿ ಸಲ್ಲಿಕೆಯಾಗಿದೆ. ವಿದ್ಯಾರ್ಥಿಗಳಿಲ್ಲದೆ ಶಾಲೆ ಬಿಕೋ ಎನ್ನುತ್ತಿದೆ. ಇದನ್ನೂ ಓದಿ: ಮುಂಗಾರು ಚುರುಕು – ಕರಾವಳಿಗೆ ಮೂರು ದಿನ ರೆಡ್ ಅಲರ್ಟ್

    ಈ ಶಾಲೆಯಲ್ಲೀಗ ಕೇವಲ ಒಬ್ಬ ವಿದ್ಯಾರ್ಥಿ, ಇಬ್ಬರು ಶಿಕ್ಷಕರು ಇದ್ದಾರೆ. ಆ ಒಬ್ಬ ವಿದ್ಯಾರ್ಥಿಯನ್ನೂ ಬೇರೆಡೆ ಸೇರಿಸಲು ಪೋಷಕರು ಟಿಸಿ ಕೇಳಿದ್ದಾರೆ. ಹಿಂದೆ ಶಿಕ್ಷಕರು ಸರಿಯಾಗಿ ಪಾಠಪ್ರವಚನ ಮಾಡುತ್ತಿಲ್ಲ ಎಂದು ಪೋಷಕರು ಪ್ರತಿಭಟಿಸಿದ್ದರು. ಆ ವೇಳೆ ಶಿಕ್ಷಣ ಇಲಾಖೆಯು ಶಿಕ್ಷಕರನ್ನು ಬೇರೆಡೆಗೆ ಸ್ಥಳಾಂತರಿಸಿತ್ತು. ಇದೀಗ ಶಾಲೆಯಲ್ಲಿ ಮತ್ತೊಂದು ಸಮಸ್ಯೆ ಉದ್ಭವವಾಗಿದೆ.

  • Gadag | ಶಾಲಾ ಮೇಲ್ಛಾವಣಿ ಪದರ ಕುಸಿತ – ಓರ್ವ ಶಿಕ್ಷಕ, ಐವರು ವಿದ್ಯಾರ್ಥಿಗಳಿಗೆ ಗಾಯ

    Gadag | ಶಾಲಾ ಮೇಲ್ಛಾವಣಿ ಪದರ ಕುಸಿತ – ಓರ್ವ ಶಿಕ್ಷಕ, ಐವರು ವಿದ್ಯಾರ್ಥಿಗಳಿಗೆ ಗಾಯ

    ಗದಗ: ಶಾಲೆಯ ಮೇಲ್ಛಾವಣಿ (Roof) ಪದರ ಕುಸಿದು ಐವರು ವಿದ್ಯಾರ್ಥಿಗಳು ಹಾಗೂ ಓರ್ವ ಶಿಕ್ಷಕರು ಗಾಯಗೊಂಡ ಘಟನೆ ಗದಗ (Gadag) ಜಿಲ್ಲೆ ಗಜೇಂದ್ರಗಡ ತಾಲೂಕಿನ ಚಿಲಝೆರಿ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ದುರಂತ ನಡೆದಿದೆ. 6ನೇ ತರಗತಿ ಕೊಠಡಿ ಮೇಲ್ಛಾವಣಿ ಕಾಂಕ್ರೀಟ್ ಪದರ ಏಕಾಏಕಿ ಕುಸಿದು ಬಿದ್ದಿದೆ. ಘಟನೆಯಲ್ಲಿ ಎಮ್.ಡಿ ಒಂಟಿ ಎಂಬ ಶಿಕ್ಷಕರ ತಲೆಗೆ ಗಂಭೀರ ಗಾಯಗಳಾಗಿವೆ. ಮಕ್ಕಳ ತಲೆ, ಕೈ, ಕಾಲು, ಮುಖಕ್ಕೆ ಗಾಯಗಳಾಗಿವೆ. ಗಾಯಾಳು ಮಕ್ಕಳು ಹಾಗೂ ಶಿಕ್ಷಕರನ್ನು ಕೂಡಲೇ ಗಜೇಂದ್ರಗಡ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸ್ಥಳಕ್ಕೆ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದನ್ನೂ ಓದಿ: ಕಾಂಗ್ರೆಸ್‌ಗೆ ಕಮಿಷನ್ ಬಿಸಿ, ಹೈಕಮಾಂಡ್‌ಗೆ ತಲೆನೋವು – ಸಿಎಂ ಮಧ್ಯಪ್ರವೇಶ?

    ಶಿಥಿಲಗೊಂಡ ಹಳೆಯ ಕೊಠಡಿಯಲ್ಲಿ ಮಕ್ಕಳು ಶಿಕ್ಷಣ ಪಡೆಯುವ ಅನಿವಾರ್ಯತೆ ಎದುರಾಗಿತ್ತು. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು, ಜನ ಪ್ರತಿನಿಧಿಗಳ ಗಮನಕ್ಕೆ ತರಲಾಗಿದೆ. ಆದರೂ ಪ್ರಯೋಜನವಾಗಿಲ್ಲ ಎಂದು ಶಿಕ್ಷಣ ಇಲಾಖೆ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಘಟನೆ ಸಂಬಂಧ ಗದಗ ಜಿಲ್ಲೆಯ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್ ಲೂಟಿಕೋರರ ಸರ್ಕಾರ, ಮಾನ ಮರ್ಯಾದೆ ಇದ್ದರೆ ಸಿಎಂ, ಡಿಕೆಶಿ ರಾಜೀನಾಮೆ ಕೊಡಲಿ: ಛಲವಾದಿ ನಾರಾಯಣಸ್ವಾಮಿ