Tag: ಶಾಲೆಗಳಿಗೆ ರಜೆ

  • ಕಲಬುರಗಿಯಲ್ಲಿ ನಿರಂತರ ಮಳೆ – ಶಾಲೆಗಳಿಗೆ ಇಂದು, ನಾಳೆ ರಜೆ ಘೋಷಣೆ

    ಕಲಬುರಗಿಯಲ್ಲಿ ನಿರಂತರ ಮಳೆ – ಶಾಲೆಗಳಿಗೆ ಇಂದು, ನಾಳೆ ರಜೆ ಘೋಷಣೆ

    ಕಲಬುರಗಿ: ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಇಲ್ಲಿನ ಶಾಲೆಗಳಿಗೆ 2 ದಿನಗಳ ಕಾಲ ರಜೆ (Schools Holiday) ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

    ಹವಾಮಾನ ಇಲಾಖೆಯು ಮುಂದಿನ 48 ಗಂಟೆಗಳ ಕಾಲ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಹಾಗಾಗಿ ಮಕ್ಕಳ ಹಿತದೃಷ್ಟಿಯಿಂದ ಮುಂಜಾಗ್ರತ ಕ್ರಮವಾಗಿ ಎರಡು ದಿನಗಳ ಕಾಲ (ಸೆ.27,28) ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು (Kalaburagi DC) ಆದೇಶಿಸಿದ್ದಾರೆ. ಅದರಂತೆ ಡಿಡಿಪಿಐ (DDPI) ಸೂರ್ಯಕಾಂತ ಮದಾನೆ ಸುತ್ತೋಲೆ ಹೊರಡಿಸಿದ್ದಾರೆ. ಇದನ್ನೂ ಓದಿ: ಹೊಸಪೇಟೆ | ಅಡುಗೆ ಸಿಲಿಂಡರ್ ಸ್ಫೋಟ, ಒಂದೇ ಕುಟುಂಬದ 8 ಮಂದಿಗೆ ಗಾಯ

    ಕಲಬುರಗಿ ಜಿಲ್ಲೆಯಾದ್ಯಂತ ಈಗಾಗಲೇ ಭಾರಿ ಮಳೆಯಾಗುತ್ತಿದ್ದು, ಆರೆಂಜ್‌ ಅಲರ್ಟ್ ಘೋಷಿಸಲಾಗಿದೆ. ಶಾಲೆಗಳಿಗೆ ಈಗಾಗಲೇ ದಸರಾ ರಜೆಯಿದ್ದು, ಜಿಲ್ಲೆಯ ಕೆಲವು ಶಾಲೆಗಳ ಆಡಳಿತ ಮಂಡಳಿ ದಸರಾ ರಜೆಯಿಂದ ವಿನಾಯಿತಿ ಪಡೆದುಕೊಂಡು ಶಾಲೆಗಳನ್ನು ನಡೆಸುತ್ತಿವೆ. ಅಂತಹ ಶಾಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ಸೆ.27 ಹಾಗೂ 28ರಂದು ಎರಡು ದಿನ ಕಾಲ ರಜೆ ಘೋಷಿಸಿ ಆದೇಶ ಹೊರಡಿಸಿದ್ದು, ಈ ರಜಾ ಅವಧಿಯ ಪಾಠ ಬೋಧನೆಯನ್ನು ಮುಂದಿನ ರಜಾ ದಿನಗಳಲ್ಲಿ ಸರಿದೂಗಿಸಲು ಸೂಚಿಸಲಾಗಿದೆ. ಇದನ್ನೂ ಓದಿ: ದಾವಣಗೆರೆ | `ಐ ಲವ್ ಮಹಮ್ಮದ್’ ಬ್ಯಾನರ್ ಗಲಾಟೆ – 8 ಮಂದಿ ಅರೆಸ್ಟ್

  • Rain Alert | ಇಂದು 5 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ – ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ

    Rain Alert | ಇಂದು 5 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ – ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ

    ಬೆಂಗಳೂರು: ರಾಜ್ಯದಲ್ಲಿ ಮಳೆಯ (Rain) ಆರ್ಭಟ ಮುಂದುವರಿದಿದ್ದು, ಇಂದು 5 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ (orange alert) ಘೋಷಣೆ ಮಾಡಲಾಗಿದೆ.

    ಹವಾಮಾನ ಇಲಾಖೆಯು ಕೊಡಗು (Kodagu), ಉಡುಪಿ, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದು, ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: Rain Alert | ಕೊಡಗಿನಲ್ಲಿ ಆರೆಂಜ್‌ ಅಲರ್ಟ್‌ – ಇಂದು ಶಾಲಾ, ಕಾಲೇಜುಗಳಿಗೆ ರಜೆ

    ಗಾಳಿಯ ವೇಗ ಗಂಟೆಗೆ 30-40 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದ್ದು, ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಸಿದೆ. ಇದನ್ನೂ ಓದಿ: ಉತ್ತರಕಾಶಿ ಮೇಘಸ್ಫೋಟ | ಕೊಚ್ಚಿ ಹೋದ ಗ್ರಾಮ – ಹಲವು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

    ಕೊಡಗಿನಲ್ಲಿಂದು ಶಾಲಾ, ಕಾಲೇಜುಗಳಿಗೆ ರಜೆ
    ಕೊಡಗಿನಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದೆ. ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ಜಿಲ್ಲಾದ್ಯಂತ ಆರೆಂಜ್‌ ಅಲರ್ಟ್‌ ಘೋಷಿಸಿದ್ದು, ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಭಾರೀ ಗಾಳಿ ಸಹಿತ ಮಳೆ ಸುರಿಯುತ್ತಿರುವ ಹಿನ್ನೆಲೆ ಇಂದು ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ವೆಂಕಟರಾಜ್ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಕಾಜಿರಂಗ ಹುಲ್ಲುಗಾವಲು ಪಕ್ಷಿ ಗಣತಿ –  ಮೋದಿ ಉಲ್ಲೇಖಿಸಿದ ಸಮೀಕ್ಷೆಯ ವಿಶೇಷತೆ ಏನು?

    ವಿಜಯಪುರದಲ್ಲೂ ಭಾರೀ ಮಳೆ:
    ಅತ್ತ ವಿಜಯಪುರ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದೆ. ಕಳೆದ ರಾತ್ರಿಯಿಂದ ಬಿಟ್ಟು ಬಿಡದೆ ನಿರಂತರವಾಗಿ ಮಳೆ ಸುರಿಯುತ್ತಿದೆ. ಗುಡುಗು, ಸಿಡಿಲು ಸಮೇತ ಭಾರಿ ಮಳೆ ಆಗುತ್ತಿದೆ. ಮಳೆಗೆ ನಗರ ಜೀವನ ಅಸ್ಥವ್ಯಸ್ಥವಾಗಿದೆ. ನಗರದ ಬಡಿ ಕಮಾನ ಬಳಿ ಮಳೆ ನೀರು ನದಿಯಂತೆ ಹರಿಯುತ್ತಿದೆ. ಮಳೆ ನೀರಿಗೆ ರಸ್ತೆಗಳು ಮುಚ್ಚಿ ಹೋಗಿವೆ. ಬೈಕ್ ಸವಾರರು, ಆಟೋ ಸೇರಿದಂತೆ ವಾಹನ ಸವಾರರು ಓಡಾಡಲು ಹರಸಾಹಸ ಪಡುತ್ತಿದ್ದಾರೆ.

  • Rain Alert | ಕೊಡಗಿನಲ್ಲಿ ಆರೆಂಜ್‌ ಅಲರ್ಟ್‌ – ಇಂದು ಶಾಲಾ, ಕಾಲೇಜುಗಳಿಗೆ ರಜೆ

    Rain Alert | ಕೊಡಗಿನಲ್ಲಿ ಆರೆಂಜ್‌ ಅಲರ್ಟ್‌ – ಇಂದು ಶಾಲಾ, ಕಾಲೇಜುಗಳಿಗೆ ರಜೆ

    ಕೊಡಗು: ಕೊಡಗಿನಲ್ಲಿ (Kodagu) ಮುಂಗಾರು ಮಳೆಯ ಆರ್ಭಟ ಜೋರಾಗಿದೆ. ನಿರಂತರ ಮಳೆ (Heavy Rain) ಸುರಿಯುತ್ತಿರುವ ಹಿನ್ನೆಲೆ ಜಿಲ್ಲಾದ್ಯಂತ ಆರೆಂಜ್‌ ಅಲರ್ಟ್‌ ಘೋಷಿಸಿದ್ದು, ಶಾಲಾ – ಕಾಲೇಜುಗಳಿಗೆ ರಜೆ ನೀಡಲಾಗಿದೆ.

    ಭಾರೀ ಗಾಳಿ ಸಹಿತ ಮಳೆ ಸುರಿಯುತ್ತಿರುವ ಹಿನ್ನೆಲೆ ಇಂದು ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ವೆಂಕಟರಾಜ್ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಉತ್ತರಕಾಶಿ ಮೇಘಸ್ಫೋಟ | ಕೊಚ್ಚಿ ಹೋದ ಗ್ರಾಮ – ಹಲವು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

    ವಿಜಯಪುರದಲ್ಲೂ ಭಾರೀ ಮಳೆ:
    ಅತ್ತ ವಿಜಯಪುರ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದೆ. ಕಳೆದ ರಾತ್ರಿಯಿಂದ ಬಿಟ್ಟು ಬಿಡದೆ ನಿರಂತರವಾಗಿ ಮಳೆ ಸುರಿಯುತ್ತಿದೆ. ಗುಡುಗು, ಸಿಡಿಲು ಸಮೇತ ಭಾರಿ ಮಳೆ ಆಗುತ್ತಿದೆ. ಮಳೆಗೆ ನಗರ ಜೀವನ ಅಸ್ಥವ್ಯಸ್ಥವಾಗಿದೆ. ನಗರದ ಬಡಿ ಕಮಾನ ಬಳಿ ಮಳೆ ನೀರು ನದಿಯಂತೆ ಹರಿಯುತ್ತಿದೆ. ಮಳೆ ನೀರಿಗೆ ರಸ್ತೆಗಳು ಮುಚ್ಚಿ ಹೋಗಿವೆ. ಬೈಕ್ ಸವಾರರು, ಆಟೋ ಸೇರಿದಂತೆ ವಾಹನ ಸವಾರರು ಓಡಾಡಲು ಹರಸಾಹಸ ಪಡುತ್ತಿದ್ದಾರೆ. ಇದನ್ನೂ ಓದಿ: 24 ಗಂಟೆಗಳಲ್ಲಿ ಭಾರತದ ಎಲ್ಲ ಆಮದುಗಳ ಮೇಲೆ ಸುಂಕ ಗಣನೀಯ ಏರಿಕೆ – ಟ್ರಂಪ್‌ ಮತ್ತೆ ಬೆದರಿಕೆ

  • Rain Alert | ಕೊಡಗು ಜಿಲ್ಲೆಯಾದ್ಯಂತ ಶಾಲಾ, ಕಾಲೇಜುಗಳಿಗೆ ಶುಕ್ರವಾರ ರಜೆ

    Rain Alert | ಕೊಡಗು ಜಿಲ್ಲೆಯಾದ್ಯಂತ ಶಾಲಾ, ಕಾಲೇಜುಗಳಿಗೆ ಶುಕ್ರವಾರ ರಜೆ

    – ಚಿಕ್ಕಮಗಳೂರಿನ 5 ತಾಲೂಕುಗಳಲ್ಲಿ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

    ಕೊಡಗು/ಚಿಕ್ಕಮಗಳೂರು: ರಾಜ್ಯದಲ್ಲಿ ಆರಿದ್ರಾ ಮಳೆ (Rain) ಅಬ್ಬರ ಜೋರಾಗಿದ್ದು, ಕೆಲ ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳಿಗೆ ಶುಕ್ರವಾರವೂ (ಜೂ.27) ರಜೆ ಘೋಷಣೆ ಮಾಡಲಾಗಿದೆ.

    ಕೊಡಗು:
    ಕೊಡಗು (Kodagu) ಜಿಲ್ಲೆಯಲ್ಲಿ ಧಾರಕಾರ ಮಳೆ ಮುಂದುವರೆದಿರುವ ಹಿನ್ನೆಲೆ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ಶುಕ್ರವಾರ (ಜೂನ್ 27 ರಂದು) ರಜೆ ಘೋಷಣೆ ಮಾಡಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ವೆಂಕಟ ರಾಜ ಅದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: 1 ಲಕ್ಷ ಕ್ಯೂಸೆಕ್ ದಾಟಿದ ಕೃಷ್ಣೆಯ ಒಳಹರಿವು – ನದಿ ತೀರದಲ್ಲಿ ಪ್ರವಾಹದ ಆತಂಕ

    ಚಿಕ್ಕಮಗಳೂರು:
    ಮಲೆನಾಡಲ್ಲಿ ಭಾರೀ ಗಾಳಿ-ಮಳೆ ಹಿನ್ನೆಲೆ ಚಿಕ್ಕಮಗಳೂರಿನ 5 ತಾಲೂಕುಗಳಲ್ಲಿ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ಹಾಗೂ ಕಳಸ ತಾಲೂಕಿನಲ್ಲಿ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಹಿಮಾಚಲ ಪ್ರದೇಶ | 24 ಗಂಟೆಯಲ್ಲಿ 5 ಕಡೆ ಮೇಘಸ್ಫೋಟ – ಸಾವಿನ ಸಂಖ್ಯೆ ಐದಕ್ಕೆ ಏರಿಕೆ

    ಕಾವೇರಿ ಜಲಾನಯನ ಪ್ರದೇಶದಲ್ಲಿ ಪ್ರವಾಹ ಭೀತಿ
    ಕಾವೇರಿ ಜಲಾನಯನ ಪ್ರದೇಶದಲ್ಲಿ ಭರ್ಜರಿ ಮಳೆಯಿಂದಾಗಿ ಕೆಆರ್‌ಎಸ್ ಜಲಾಶಯಕ್ಕೆ 45 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಹರಿದು ಬರ್ತಿದೆ. ಕೆಆರ್‌ಎಸ್ ಭರ್ತಿಗೆ ಕೇವಲ ನಾಲ್ಕೇ ಅಡಿ ಬಾಕಿ ಇದೆ. ಜಲಾಶಯದಿಂದ ಕಾವೇರಿ ನದಿಗೆ ನೀರನ್ನು ಬಿಡಲಾಗ್ತಿದೆ. ಮೈಸೂರಿನ ಕಬಿನಿ ಜಲಾಶಯದ ಒಳಹರಿವಿನ ಪ್ರಮಾಣದಲ್ಲೂ ಏರಿಕೆಯಾಗಿದೆ. ಮಡಿಕೇರಿ ತಾಲೂಕಿನ ನಾಪೋಕ್ಲು ಭಾಗದಲ್ಲಿ ರಸ್ತೆಗಳು ಜಲಾವೃತಗೊಂಡಿದೆ. ಇದನ್ನೂ ಓದಿ: ಜಮ್ಮು ಕಾಶ್ಮೀರದ ಉಧಂಪುರದಲ್ಲಿ ಎನ್‌ಕೌಂಟರ್ – ಓರ್ವ ಉಗ್ರನ ಹೊಡೆದುರುಳಿಸಿದ ಭದ್ರತಾ ಪಡೆ

    ನಾಪೋಕ್ಲು-ಮೂರ್ನಾಡು ಸಂಪರ್ಕ ರಸ್ತೆ ಸಂಪರ್ಕ ಕಡಿತವಾಗಿದೆ. ಹಾಸನದ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಬಳಿ ಗುಡ್ಡ ಕುಸಿದು ಶಿರಾಡಿಘಾಟ್ ರಸ್ತೆಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಇತ್ತ ಹೇಮಾವತಿ ನದಿಗೂ ಅಪಾರ ನೀರು ಹರಿದುಬಂದಿದೆ. ಇನ್ನು ಮಹಾರಾಷ್ಟ್ರದ ಪಶ್ಚಿಮ ಘಟ್ಟ ಭಾಗದಲ್ಲಿ ಭಾರೀ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಭೀತಿ ಶುರುವಾಗಿದೆ.. ಹತ್ತಾರು ಸೇತುವೆಗಳು ಮುಳುಗಡೆಯಾಗಿವೆ.

    ದೂದ್‌ಗಂಗಾ, ವೇದಗಂಗಾ, ಹಿರಣ್ಯಕೇಶಿ ನದಿಗಳ ನೀರಿನ ಮಟ್ಟದಲ್ಲೂ ಗಣನೀಯ ಏರಿಕೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹುತ್ತಿನಗದ್ದೆ ಗ್ರಾಮದಲ್ಲಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿತವಾಗಿದೆ. ಮನೆ ಪಕ್ಕದಲ್ಲೇ ಭೂ ಕುಸಿತವಾಗುತ್ತಿದ್ದು ಜನ ಆತಂಕಕ್ಕೀಡಾಗಿದ್ದಾರೆ. ಮೂಡಿಗೆರೆ ತಾಲೂಕಿನ ಹೆಸಗೋಡುವಿನಲ್ಲಿ ಕಾಫಿತೋಟ ಜಲಾವೃತವಾಗಿದೆ. ಹಾವೇರಿ ಜಿಲ್ಲೆಯಲ್ಲಿ ವರದಾ ನದಿ ತುಂಬಿ ಹರಿಯುತ್ತಿದ್ದು ನದಿ ದಾಟಲು ಹೋಗಿ ಸಿಲುಕಿದ್ದ ಇಬ್ಬರು ಯುವಕರನ್ನು ರಕ್ಷಿಸಲಾಗಿದೆ.

  • Rain Alert | ಹಾಸನ ಜಿಲ್ಲೆಯ 3, ಉತ್ತರ ಕನ್ನಡ ಜಿಲ್ಲೆಯ 2 ತಾಲೂಕಿನ ಶಾಲೆಗಳಿಗೆ ಗುರುವಾರ ರಜೆ

    Rain Alert | ಹಾಸನ ಜಿಲ್ಲೆಯ 3, ಉತ್ತರ ಕನ್ನಡ ಜಿಲ್ಲೆಯ 2 ತಾಲೂಕಿನ ಶಾಲೆಗಳಿಗೆ ಗುರುವಾರ ರಜೆ

    ಹಾಸನ: ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿದ್ದು (Hassan Rain) ಗುರುವಾರ (ಜೂ.26) ಮೂರು ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ (Schools Holiday) ಮಾಡಲಾಗಿದೆ.

    ಸಕಲೇಶಪುರ, ಆಲೂರು, ಅರಕಲಗೂಡು ತಾಲ್ಲೂಕುಗಳ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಡ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಡಿಸಿ ಕೆ.ಎಸ್ ಲತಾಕುಮಾರಿ ಆದೇಶ ಹೊರಡಿಸಿದ್ದಾರೆ. ಇದರಲ್ಲಿ ಸಕಲೇಶಪುರ ತಾಲ್ಲೂಕಿನ, ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇದನ್ನೂ ಓದಿ: ಪ್ರವಾಹ ಭೀತಿ – ಕಾವೇರಿ ನದಿ ಪಾತ್ರದ ಪ್ರವಾಸಿ ತಾಣಗಳಿಗೆ ನಿರ್ಬಂಧ

    ಮಲೆನಾಡು ಹಾಗೂ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಭಾಗದಲ್ಲಿ ಉತ್ತಮ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಜೀವನದಿ ಹೇಮಾವತಿ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ ಕ್ಷಣ ಕ್ಷಣಕ್ಕೂ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಲಾಶಯದ ಆರು ಕ್ರಸ್ಟ್ ಗೇಟ್‌ಗಳ ಮೂಲಕ ನೀರನ್ನು ಹೊರ ಬಿಡಲಾಗುತ್ತಿದೆ. ಒಳಹರಿವು ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಮತ್ತಷ್ಟು ನೀರನ್ನು ಹೊರಬಿಡುವು ಸಾಧ್ಯತೆಯಿದೆ. ಇದನ್ನೂ ಓದಿ: ಬಾತ್‌ರೂಮಲ್ಲೇ ವ್ಯಕ್ತಿಯ ಬರ್ಬರ ಹತ್ಯೆ – ಕೊಲೆ ಫೋಟೋ ಇನ್ಸ್ಟಾದಲ್ಲಿ ಹಾಕಿ ‘ಜಾಲಿ ಜಾಲಿ’ ಎಂದು ಬರೆದ ಆರೋಪಿ

    weather

    ಉತ್ತರ ಕನ್ನಡದಲ್ಲೂ ಶಾಲೆಗಳಿಗೆ ರಜೆ:
    ಮಳೆಯ ಆರ್ಭಟ ಜೋರಾದ ಹಿನ್ನೆಲೆ ಉತ್ತರ ಕನ್ನಡ ಜಿಲ್ಲೆಯ ಎರಡು ತಾಲೂಕುಗಳ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜೋಯಿಡಾ, ದಾಂಡೇಲಿ ತಾಲೂಕಿನ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ಜೂ. 26 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: Tumakuru | ಸ್ಟೇಟಸ್‌ಗೆ ರೀಲ್ಸ್ ಅಪ್ಲೋಡ್ ಮಾಡಿದ್ದಕ್ಕೆ ಪ್ರಿಯಕರ ಕಿರಿಕ್ – ಯುವತಿ ನೇಣಿಗೆ ಶರಣು

  • ಬೆಂಗಳೂರಲ್ಲಿ ಮಳೆ ಆರ್ಭಟ;  ಬುಧವಾರ ಅಂಗನವಾಡಿ, ಪ್ರಾಥಮಿಕ-ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಬೆಂಗಳೂರಲ್ಲಿ ಮಳೆ ಆರ್ಭಟ; ಬುಧವಾರ ಅಂಗನವಾಡಿ, ಪ್ರಾಥಮಿಕ-ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ (Bengaluru Rains) ಸತತ ನಾಲ್ಕು ದಿನಗಳಿಂದ ಮಳೆಯಾರ್ಭಟ ಮುಂದುವರಿದಿದ್ದು, ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಹೀಗಾಗಿ, ಬುಧವಾರ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

    ನಾಳೆ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಭಾರೀ ಮಳೆಗೆ ನಿರ್ಮಾಣ ಹಂತದ ಕಟ್ಟಡ ಕುಸಿತ; ಮೂವರು ಕಾರ್ಮಿಕರ ಸಾವು

    ಪದವಿಪೂರ್ವ, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಐಟಿಐ, ಇಂಜಿನಿಯರ್‌ಗಳಿಗೆ ರಜೆ ಇರುವುದಿಲ್ಲ ಎಂದು ಡಿಸಿ ಸ್ಪಷ್ಟಪಡಿಸಿದ್ದಾರೆ.

    ಪ್ರಕಟಣೆಯಲ್ಲಿ ಏನಿದೆ?
    ಮಳೆ ಹಿನ್ನೆಲೆಯಲ್ಲಿ ಬುಧವಾರ ಮುಂಜಾಗ್ರತಾ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ/ ಅನುದಾನಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಿಸಿ ಡಿಸಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಬಾಗಲಕೋಟೆ| ರಸ್ತೆಗಳಲ್ಲಿ ಶೌಚಗುಂಡಿ, ಒಳಚರಂಡಿ ತುಂಬಿ ಮನೆಗೆ ನುಗ್ಗುತ್ತಿವೆ ಕೊಳಚೆ ನೀರು

    ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಇಂಜಿನಿಯರಿಂಗ್, ಐಟಿಐಗಳಿಗೆ ರಜೆ ಘೋಷಿಸಿರುವುದಿಲ್ಲ. ತುರ್ತು ನಿರ್ಧಾರವಾದ ಕಾರಣ ಮೌಖಿಕವಾಗಿ ಆದೇಶಿಸಿದ್ದು, ಅಧಿಕೃತ ಆದೇಶವನ್ನು ಇನ್ನೇನು ಹೊರಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

    ಸಾಂದರ್ಭಿಕ ಚಿತ್ರ

    ಕಾಲೇಜುಗಳಲ್ಲಿ ಪಾಠ ಮಾಡುವಾಗ ಕೆಲವೊಂದು ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದ್ದು, ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂದರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸುವುದು. ದುರ್ಬಲ/ ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸಬೇಕು ಎಂದು ಸೂಚಿಸಲಾಗಿದೆ.

    ಮುಂಜಾಗ್ರತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವಂತೆ ತಿಳಿಸಿದೆ. ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶಗಳಿಗೆ ಹೋಗದಂತೆ ಜಾಗ್ರತಿ ವಹಿಸಬೇಕು. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳಬೇಕು. ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ, ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಬೇಕೆಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

  • ಮಳೆಗೆ ಮುಳುಗಿದ ಕರುನಾಡು – ಹಾವೇರಿ, ಕೊಡಗು ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ

    ಮಳೆಗೆ ಮುಳುಗಿದ ಕರುನಾಡು – ಹಾವೇರಿ, ಕೊಡಗು ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ

    ಬೆಂಗಳೂರು: ಕಳೆದ ಕೆಲ ದಿನಗಳಿಂದ ನಿರಂತರವಾಗಿ ಮಳೆ (Heavy Rain) ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಹಲವೆಡೆ ರಸ್ತೆಗಳು ಮುಳುಗಡೆಯಾಗಿವೆ. ಜೊತೆಗೆ ತಂಪು ವಾತಾವರಣ ಹಾಗೂ ಶೀತಗಾಳಿಯು ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು ಎಂಬ ಕಾರಣಕ್ಕೆ ರಾಜ್ಯದ ವಿವಿಧೆಡೆ ಶಾಲಾ – ಕಾಲೇಜುಗಳಿಗೆ ರಜೆ (School Holiday) ಘೋಷಣೆ ಮಾಡಲಾಗಿದೆ.

    ಹಾವೇರಿ

    ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 2 ದಿನಗಳ ಕಾಲ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಹವಾಮಾನ ಇಲಾಖೆ ಮುಂದಿನ ಎರಡು ದಿನಗಳ ಕಾಲ ಹೆಚ್ಚಿನ ತಂಪು ವಾತಾವರಣ ಹಾಗೂ ಶೀತಗಾಳಿ ಬೀಸುವ ಮುನ್ಸೂಚನೆ ನೀಡಿದೆ. ಮಕ್ಕಳ ಆರೋಗ್ಯದ ಹಿತದೃಷ್ಠಿ ಮತ್ತು ರಕ್ಷಣೆಯ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜು.26 ಮತ್ತು 27ರಂದು ಎರಡು ದಿನ ಶಾಲಾ, ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಡಿಸಿ ವಿಜಯ ಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ. ಇದನ್ನೂ ಓದಿ: ಮುಖ್ಯಮಂತ್ರಿ 1 ಲಕ್ಷ ಮನೆ ಯೋಜನೆ – ಫಲಾನುಭವಿಗಳಿಗೆ 1 ಲಕ್ಷ ರೂ. ಹೊರೆ ಕಡಿಮೆ ಮಾಡಲು ನಿರ್ಧಾರ

    ಚಿಕ್ಕಮಗಳೂರು

    ಕಾಫಿನಾಡು ಭಾಗದಲ್ಲಿ ಮಳೆಯ ಪ್ರಮಾಣ ಕೊಂಚ ತಗ್ಗಿದ್ದರೂ ಶೀತಗಾಳಿ ಹೆಚ್ಚಾಗಿರುವ ಕಾರಣ ಮಲೆನಾಡು ಭಾಗದ 6 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಶುಕ್ರವಾರ (ಜು.26) ರಜೆ ಘೋಷಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ. ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್ ಪುರ ತಾಲೂಕಿನ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ. ಇದನ್ನೂ ಓದಿ: ಕೆಆರ್‌ಎಸ್‌ನಿಂದ 1.50 ಲಕ್ಷ ಕ್ಯುಸೆಕ್‌ ನೀರು ಹೊರಕ್ಕೆ

    weather

    ಕೊಡಗು

    ಕೊಡಗು ಜಿಲ್ಲೆಯಲ್ಲಿ ಗಾಳಿ-ಮಳೆಯ ಆರ್ಭಟ ಜೋರಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಪದವಿ ಹಾಗೂ ಸ್ನಾತಕೋತ್ತರ ಕಾಲೇಜುಗಳನ್ನ ಹೊರತು ಪಡಿಸಿ, ಅಂಗನವಾಡಿ ಸೇರಿದಂತೆ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಕೊಡಗು ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಟಿಬಿ ಡ್ಯಾಂ ಭರ್ತಿ, 28 ಕ್ರಸ್ಟ್‌ ಗೇಟ್‌ ಓಪನ್‌ – 83 ಸಾವಿರ ಕ್ಯುಸೆಕ್‌ ನೀರು ಹೊರಕ್ಕೆ

    weather

    ಹಾಸನ

    ಹಾಸನ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಹಲವೆಡೆ ರಸ್ತೆಗಳು ಮುಳುಗಡೆಯಾಗಿವೆ. ಈ ಹಿನ್ನೆಲೆಯಲ್ಲಿ ಜುಲೈ 26ರ ಶುಕ್ರವಾರದಂದು ಹಾಸನ ಜಿಲ್ಲೆಯ ಆರು ತಾಲ್ಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸಕಲೇಶಪುರ, ಆಲೂರು, ಬೇಲೂರು, ಹಾಸನ, ಹೊಳೆನರಸೀಪುರ ಮತ್ತು ಅರಕಲಗೂಡು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. 6 ತಾಲ್ಲೂಕಿನ ಅಂಗನವಾಡಿ, ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದು, ಕಾಲೇಜುಗಳು ಎಂದಿನಂತೆ ನಡೆಯಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಹೆಚ್.ಕೆ ಪಾಂಡು ಸುತ್ತೋಲೆ ಹೊರಡಿಸಿದ್ದಾರೆ. ಇದನ್ನೂ ಓದಿ: ವಿಧಾನಸಭೆಯಲ್ಲಿ ಮುಂದುವರಿದ ಬಿಜೆಪಿ, ಜೆಡಿಎಸ್ ಧರಣಿ – ತುಳು ಸಂಭಾಷಣೆ ಸೊಗಡು, ವಿಧೇಯಕಗಳ ಅಂಗೀಕಾರ